Tag: ಲಾಹೋರ್

  • Pakistan | ಹಳಿತಪ್ಪಿದ ಇಸ್ಲಾಮಾಬಾದ್ ಎಕ್ಸ್‌ಪ್ರೆಸ್‌ – 30 ಪ್ರಯಾಣಿಕರಿಗೆ ಗಾಯ, ಮೂವರು ಗಂಭೀರ

    Pakistan | ಹಳಿತಪ್ಪಿದ ಇಸ್ಲಾಮಾಬಾದ್ ಎಕ್ಸ್‌ಪ್ರೆಸ್‌ – 30 ಪ್ರಯಾಣಿಕರಿಗೆ ಗಾಯ, ಮೂವರು ಗಂಭೀರ

    ಇಸ್ಲಾಮಾಬಾದ್: ಲಾಹೋರ್‌ನಿಂದ (Lahore) ರಾವಲ್ಪಿಂಡಿಗೆ (Rawalpindi) ಹೊರಟಿದ್ದ ಇಸ್ಲಾಮಾಬಾದ್ ಎಕ್ಸ್‌ಪ್ರೆಸ್‌ನ 10 ಭೋಗಿಗಳು ಹಳಿತಪ್ಪಿರುವ ಘಟನೆ ಶೇಖುಪುರ ಜಿಲ್ಲೆಯ ಕಲಾ ಶಾ ಕಾಕು ಎಂಬಲ್ಲಿ ನಡೆದಿದೆ.

    ಶುಕ್ರವಾರ ಸಂಜೆ ಲಾಹೋರ್ ರೈಲು ನಿಲ್ದಾಣದಿಂದ ಹೊರಟ ಇಸ್ಲಾಮಾಬಾದ್ ಎಕ್ಸ್‌ಪ್ರೆಸ್‌ ಸುಮಾರು ಅರ್ಧ ಗಂಟೆಯ ಬಳಿಕ ಹಳಿತಪ್ಪಿದೆ. ಪರಿಣಾಮ ರೈಲಿನಲ್ಲಿದ್ದ 30 ಪ್ರಯಾಣಿಕರು ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.ಇದನ್ನೂ ಓದಿ: ಭಾರತ ಇನ್ಮುಂದೆ ರಷ್ಯಾದಿಂದ ಕಚ್ಚಾ ತೈಲ ಖರೀದಿಸಲ್ಲ, ಇದು ಒಳ್ಳೆಯ ಹೆಜ್ಜೆ – ಡೊನಾಲ್ಡ್‌ ಟ್ರಂಪ್‌

    ಈ ಕುರಿತು ಪಾಕಿಸ್ತಾನ ರೈಲ್ವೆ ಮಾಹಿತಿ ಹಂಚಿಕೊಂಡಿದ್ದು, ಅವಘಡ ಸಂಭವಿಸಿದ ಕೆಲವೇ ಕ್ಷಣಗಳಲ್ಲಿ ಸ್ಥಳಕ್ಕೆ ರಕ್ಷಣಾ ತಂಡಗಳು ಧಾವಿಸಿದ್ದು, ಕಾರ್ಯಾಚರಣೆ ನಡೆಸಿವೆ. ಇನ್ನೂ ಭೋಗಿಗಳ ಒಳಗೆ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಲು ಸಿಬ್ಬಂದಿ ರಾತ್ರಿಯಿಡಿ ಕಾರ್ಯನಿರ್ವಹಿಸಿದ್ದಾರೆ ಎಂದು ತಿಳಿಸಿದೆ.

    ಅವಘಡದಲ್ಲಿ 1,000ಕ್ಕೂ ಅಧಿಕ ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಸಣ್ಣ ಪುಟ್ಟ ಗಾಯಗಳಾದವರಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈವರೆಗೆ ಯಾವುದೇ ಸಾವು ಸಂಭವಿಸಿಲ್ಲ ಎಂದು ವರದಿ ಮಾಡಿದೆ.

    ಈ ಕುರಿತು ರೈಲ್ವೆ ಸಚಿವ ಮುಹಮ್ಮದ್ ಹನೀಫ್ ಅಬ್ಬಾಸಿ (Muhammad Hanif Abbasi) ಮಾತನಾಡಿ, ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಭವಿಷ್ಯದಲ್ಲಿ ಈ ರೀತಿಯ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ರೈಲ್ವೆ ಸೌಕರ್ಯವನ್ನು ಸುಧಾರಿಸುತ್ತೇವೆ. ಯಾವುದೇ ನಿರ್ಲಕ್ಷ್ಯ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರ್ವಜನಿಕರಿಗೆ ಭರವಸೆ ನೀಡಿದ್ದಾರೆ. ಜೊತೆಗೆ ಇಸ್ಲಾಮಾಬಾದ್ ಎಕ್ಸ್‌ಪ್ರೆಸ್‌ ಹಳಿತಪ್ಪಿದ ಘಟನೆ ಸಂಬಂಧ ತನಿಖೆ ನಡೆಸಿ 7 ದಿನಗಳ ಒಳಗೆ ಸಮಗ್ರ ವರದಿ ಸಲ್ಲಿಸಲು ಸೂಚಿಸಿದ್ದಾರೆ.ಇದನ್ನೂ ಓದಿ: ಕಿಡ್ನ್ಯಾಪ್‌ & ಮರ್ಡರ್ ಕೇಸ್‌ – ಬಾಲಕನ ಮನೆಯಲ್ಲಿ ಚಾಲಕನಾಗಿದ್ದವನಿಂದಲೇ ಕೃತ್ಯ

  • ಪಾಕಿಸ್ತಾನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ – 20 ಜನ ಸಾವು, 150ಕ್ಕೂ ಹೆಚ್ಚು ಮಂದಿಗೆ ಗಾಯ!

    ಪಾಕಿಸ್ತಾನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ – 20 ಜನ ಸಾವು, 150ಕ್ಕೂ ಹೆಚ್ಚು ಮಂದಿಗೆ ಗಾಯ!

    – ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತ

    ಇಸ್ಲಾಮಾಬಾದ್‌: ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಿಂದಾಗಿ 20 ಮಂದಿ ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ವರದಿಯಾಗಿದೆ. ಮೃತಪಟ್ಟವರಲ್ಲಿ ಮಕ್ಕಳೂ ಸೇರಿದ್ದಾರೆ ಎನ್ನಲಾಗಿದೆ.

    ಬಿರುಗಾಳಿಯಿಂದಾಗಿ ವಿದ್ಯುತ್‌ ಕಂಬಗಳು ಹಾನಿಯಾಗಿದ್ದು, ಹಲವು ಪ್ರದೇಶಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ಮರಗಳು ಧರೆಗುರುಳಿವೆ. ಅಲ್ಲದೇ ಹಲವೆಡೆ ಕಟ್ಟಡಗಳು ಕುಸಿದುಬಿದ್ದಿದ್ದು, ಶವಗಳು ಅವಶೇಷಗಳ ಅಡಿ ಸಿಲುಕಿಕೊಂಡಿವೆ. ಜೊತೆಗೆ ಮಳೆಯಿಂದಾಗಿ ರಸ್ತೆಗಳು ಹಾಳಾಗಿದ್ದು, ಹಲವೆಡೆ ಸಂಚಾರ ಅಸ್ತವ್ಯಸ್ಥಗೊಂಡಿದೆ.

    ಮೂಲಗಳ ಪ್ರಕಾರ, ಲಾಹೋರ್ ಮತ್ತು ಝೀಲಂನಲ್ಲಿ ತಲಾ 3 ಜನರು ಸಾವನ್ನಪ್ಪಿದ್ದಾರೆ. ಸಿಯಾಲ್‌ಕೋಟ್ ಮತ್ತು ಮುಜಫರ್‌ಗಢದಲ್ಲಿ ತಲಾ 2 ಸಾವುಗಳು ಸಂಭವಿಸಿವೆ. ಶೇಖಪುರ, ನಂಕಾನಾ ಸಾಹಿಬ್, ಅಟಾಕ್, ಮುಲ್ತಾನ್, ರಾಜನ್‌ಪುರ, ಹಫೀಜಾಬಾದ್, ಮಿಯಾನ್‌ವಾಲಿ, ಜಾಂಗ್, ಗುಜ್ರಾನ್‌ವಾಲಾ ಮತ್ತು ಲಯ್ಯದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ.

    ಇನ್ನೂ ಚಂಡಮಾರುತದ ಪರಿಣಾಮ ವಿಮಾನ ಪ್ರಯಾಣದ ಮೇಲೂ ಪರಿಣಾಮ ಬೀರಿದೆ. ಕರಾಚಿಯಿಂದ ಲಾಹೋರ್‌ಗೆ ಬರುತ್ತಿದ್ದ ಖಾಸಗಿ ವಿಮಾನ FL-842 ಲಾಹೋರ್ ವಿಮಾನ ನಿಲ್ದಾಣದಲ್ಲಿ ತೀವ್ರ ಪ್ರಕ್ಷುಬ್ಧತೆ ಎದುರಿಸಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

  • ಲಾಹೋರ್‌ನಲ್ಲಿ ಅಲ್ಲೋಲ ಕಲ್ಲೋಲ – ಮಿಲಿಟರಿ ವಿಮಾನ ನಿಲ್ದಾಣದ ಬಳಿ ಮೂರು ಸ್ಫೋಟ

    ಲಾಹೋರ್‌ನಲ್ಲಿ ಅಲ್ಲೋಲ ಕಲ್ಲೋಲ – ಮಿಲಿಟರಿ ವಿಮಾನ ನಿಲ್ದಾಣದ ಬಳಿ ಮೂರು ಸ್ಫೋಟ

    ಇಸ್ಲಾಮಾಬಾದ್‌: ಪಾಕಿಸ್ತಾನದ (Pakistan) ಲಾಹೋರ್ (Lahore) ನಗರದಲ್ಲಿ ಗುರುವಾರ ಬೆಳಿಗ್ಗೆ ಮೂರು ಸ್ಫೋಟಗಳು (Blast) ಸಂಭವಿಸಿವೆ ಎಂದು ಪಾಕ್‌ ಮಾಧ್ಯಮಗಳು ವರದಿ ಮಾಡಿವೆ.

    ವಾಲ್ಟನ್ ರಸ್ತೆಯಲ್ಲಿರುವ ಮಿಲಿಟರಿ ವಿಮಾನ ನಿಲ್ದಾಣದ ಹೊರಗೆ ಸ್ಫೋಟಗಳು ಸಂಭವಿಸಿವೆ. ಸ್ಫೋಟದ ನಂತರ ಸೈರನ್‌ಗಳು ಮೊಳಗಿವೆ. ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಇದನ್ನೂ ಓದಿ: Operation Sindoor | ಭಾರತದ ದಾಳಿಯಲ್ಲಿ 31 ಮಂದಿ ಹತ್ಯೆ, 46 ಮಂದಿಗೆ ಗಾಯ – ಹೊಣೆ ಹೊತ್ತ ಪಾಕ್‌ ಸೇನೆ


    ಸ್ಥಳೀಯ ಭದ್ರತಾ ಅಧಿಕಾರಿಗಳು ಕಟ್ಟೆಚ್ಚರ ವಹಿಸಿ ಪ್ರದೇಶವನ್ನು ಸೀಲ್ ಮಾಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಪಾಕಿಸ್ತಾನ ವಾಯುಪಡೆಯ (ಪಿಎಎಫ್) ತರಬೇತಿ ಸಮಯದಲ್ಲಿ ಸ್ಫೋಟ ಸಂಭವಿಸಿದೆ.

    ಜನರು ಭಯಭೀತರಾಗಿ ತಮ್ಮ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಆವರಣದಲ್ಲಿ ನೆಲೆಗೊಂಡಿರುವ ಕಟ್ಟಡದಿಂದ ಕಪ್ಪು ಹೊಗೆ ಬರುತ್ತಿರುವ ದೃಶ್ಯದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: 9 ಉಗ್ರ ಅಡಗು ತಾಣಗಳ ಮಟಾಶ್ – ಯಾವ್ಯಾವ ಪ್ರದೇಶದಲ್ಲಿ ಯಾವ ಉಗ್ರ ಸಂಘಟನೆ ಇತ್ತು? ಅವುಗಳ ಪಾತ್ರ ಏನು?

    ಮುನ್ನೆಚ್ಚರಿಕೆ ಕ್ರಮವಾಗಿ, ವಾಲ್ಟನ್ ರಸ್ತೆಯಿಂದ ಸುಮಾರು 25 ಕಿಲೋಮೀಟರ್ ದೂರದಲ್ಲಿರುವ ಲಾಹೋರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ. ಈ ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

  • ಪಾಕಿಸ್ತಾನದ ಲಾಹೋರ್ ವಿಶ್ವದ ಅತ್ಯಂತ ಕಲುಷಿತ ನಗರ – 1,600ಕ್ಕೆ ತಲುಪಿದ AQI

    ಪಾಕಿಸ್ತಾನದ ಲಾಹೋರ್ ವಿಶ್ವದ ಅತ್ಯಂತ ಕಲುಷಿತ ನಗರ – 1,600ಕ್ಕೆ ತಲುಪಿದ AQI

    – ಸರ್ಕಾರದ ಯಾವ್ದೇ ಕ್ರಮಗಳೂ ಮಾಲಿನ್ಯ ಕಡಿಮೆ ಮಾಡಲಾಗುತ್ತಿಲ್ಲ
    – ಇನ್ನೂ ಮೂರು ತಿಂಗಳು ಮದುವೆ ಆಗುವಂತಿಲ್ಲ

    ಇಸ್ಲಾಮಾಬಾದ್‌: ಆರ್ಥಿಕ ಸಂಕಷ್ಟದಿಂದ ನಲುಗಿರುವ ಪಾಕ್‌ ಈಗ ವಾಯು ಮಾಲಿನ್ಯ (Pakistan Air Pollution) ಕಂಟಕಕ್ಕೆ ತುತ್ತಾಗಿದೆ. ಪಾಕಿಸ್ತಾನದ ಲಾಹೋರ್ ವಿಶ್ವದ ಅತ್ಯಂತ ಕಲುಷಿತ ನಗರವಾಗಿ ಮಾರ್ಪಟ್ಟಿದೆ. ಇಂದಿನ ವಾಯು ಗುಣಮಟ್ಟ ಸೂಚ್ಯಂಕ 1,600ಕ್ಕೆ ತಲುಪಿದೆ. ಎಲ್ಲೆಂದರಲ್ಲಿ ವಿಷಪೂರಿತ ಹೊಗೆಯಿಂದ ಜನರು ಉಸಿರಾಡುವುದಕ್ಕೂ ಕಷ್ಟಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಸ್ವಿಸ್ ಮಾನಿಟರ್ IQAir ಪ್ರಕಾರ, ಶುಕ್ರವಾರ ಬೆಳಿಗ್ಗೆ ಲಾಹೋರ್‌ (Lahore) ವಾಯು ಗುಣಮಟ್ಟ ಸೂಚ್ಯಂಕ 1,587 ನಷ್ಟಿತ್ತು.

    ಅಪಾಯಮಟ್ಟ ಮೀರಿದ ವಾಯು ಮಾಲಿನ್ಯದಿಂದ ಉಸಿರಾಟದ ತೊಂದರೆ, ಅಸ್ತಮಾ ರೋಗಗಳಿಗೆ ಜನ ತುತ್ತಾಗುತ್ತಿದ್ದು, ಈವರೆಗೆ 15,000ಕ್ಕೂ ಹೆಚ್ಚು ರೋಗಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಂದು ಕಾಲದಲ್ಲಿ ಹಸಿರು ಉದ್ಯಾನಗಳಿಗೆ ಹೆಸರುವಾಸಿಯಾಗಿದ್ದ ಲಾಹೋರ್‌ ಈಗ ವಿಶ್ವದ ಕಲುಷಿತ ನಗರ (Worldʼs Most Polluted City) ಎಂಬ ಹಣೆಪಟ್ಟಿ ಕಟ್ಟಿಕೊಂಡಿದೆ. ವಾಹನಗಳ ಹೊರಸೂಸುವಿಕೆ, ಕಟ್ಟಡ ನಿರ್ಮಾಣಗಳಿಂದ ಬರುವ ಧೂಳು ಹಾಗೂ ಕೈಗಾರಿಕಾ ಮಾಲಿನ್ಯ ಇದಕ್ಕೆ ಕಾರಣ ಎಂದು ವರದಿಗಳು ಉಲ್ಲೇಖಿಸಿವೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ವಾಯುಮಾಲಿನ್ಯ ಕಂಟಕ – ಜನರ ಓಡಾಟಕ್ಕೆ ನಿಷೇಧ, ಅಂಗಡಿ-ಮಾರ್ಕೆಟ್‌ ತೆರೆಯಲು ಮಿತಿ

    ಆರೋಗ್ಯ ತಜ್ಞರ ಎಚ್ಚರಿಕೆ ಏನು?
    ವಾಯು ಗುಣಮಟ್ಟ ಅಪಾಯಮಟ್ಟ ಮೀರಿದ ಹಿನ್ನೆಲೆ ಪಾಕ್‌ ಸರ್ಕಾರವು ಈ ವಾರದ ಅಂತ್ಯದವರೆಗೆ ಶಾಲೆಗಳು, ಉದ್ಯಾನವನ ಮತ್ತು ವಸ್ತುಸಂಗ್ರಹಾಲಯಗಳನ್ನು ಮುಚ್ಚಲು ಸ್ಥಳೀಯ ಸರ್ಕಾರಗಳಿಗೆ ಸೂಚನೆ ಕೊಟ್ಟಿದೆ. ಜೊತೆಗೆ ಮಾಸ್ಕ್‌ ಕಡ್ಡಾಯಗೊಳಿಸಿದ್ದು, ಕಚೇರಿ ಕೆಲಸದ ಸಮಯವನ್ನು ಕಡಿತಗೊಳಿಸಿದೆ. ಮೂರು ತಿಂಗಳು ಮದುವೆ ಕಾರ್ಯಕ್ರಮಗಳಿಗೆ ನಿಷೇಧ ಹೇರಿದೆ. ಆದಾಗ್ಯೂ ಸರ್ಕಾರದ ಯಾವುದೇ ಕ್ರಮಗಳೂ ಮಾಲಿನ್ಯ ಕಡಿಮೆ ಮಾಡಲು ಸಹಾಯಕವಾಗುತ್ತಿಲ್ಲ. ಹಾಗಾಗಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. ಇದನ್ನೂ ಓದಿ: ನ್ಯೂಜಿಲೆಂಡ್‌ ಸಂಸತ್‌ನಲ್ಲಿ ಹೈಡ್ರಾಮಾ – ಸಾಂಪ್ರದಾಯಿಕ ನೃತ್ಯ ಮಾಡಿ ವಿವಾದಿತ ಬಿಲ್‌ ಪ್ರತಿ ಹರಿದು ಹಾಕಿದ ಸಂಸದೆ

    ಸರ್ಕಾರ ಮಾಲಿನ್ಯದ ಮೂಲಗಳನ್ನು ಗುರುತಿಸಿ ನಿಯಂತ್ರಿಸುವ ಕೆಲಸವನ್ನು ತ್ವರಿತವಾಗಿ ಮಾಡಬೇಕು. ಜೊತೆಗೆ ಖಾಸಗಿ ವಾಹನಗಳ ಬಳಕೆಯನ್ನು ಕಡಿಮೆ ಮಾಡಬೇಕು. ಏರ್ ಪ್ಯೂರಿಫೈಯರ್‌ಗಳನ್ನು ಬಳಸುವಂತೆ ಸರ್ಕಾರ ಕಟ್ಟುನಿಟ್ಟಿನ ನಿಯಮಗಳನ್ನು ವಿಧಿಸಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ.

    ಹೆಚ್ಚಿದ ರೋಗಿಗಳ ಸಂಖ್ಯೆ:
    ವರದಿಗಳ ಪ್ರಕಾರ, ಲಾಹೋರ್‌ನ ಆಸ್ಪತ್ರೆಗಳು ಕೆಮ್ಮು, ಉಸಿರಾಟದ ತೊಂದರೆ, ನ್ಯುಮೋನಿಯಾ ಮತ್ತು ಎದೆಯ ಸೋಂಕಿನಿಂದ ಬಳಲುತ್ತಿರುವ ರೋಗಿಗಳಿಂದ ತುಂಬಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಮೇಯೊ ಆಸ್ಪತ್ರೆಯಲ್ಲಿ 4,000ಕ್ಕೂ ಹೆಚ್ಚು ರೋಗಿಗಳು, ಜಿನ್ನಾ ಆಸ್ಪತ್ರೆಯಲ್ಲಿ 3,500 ರೋಗಿಗಳು, ಗಂಗಾರಾಮ್ ಆಸ್ಪತ್ರೆಯಲ್ಲಿ 3,000 ರೋಗಿಗಳು ಮತ್ತು ಮಕ್ಕಳ ಆಸ್ಪತ್ರೆಯಲ್ಲಿ 2,000ಕ್ಕೂ ಹೆಚ್ಚು ರೋಗಿಗಳು ದಾಖಲಾಗಿದ್ದಾರೆ. ಅಸ್ತಮಾ ಮತ್ತು ಹೃದ್ರೋಗದಿಂದ ಬಳಲುತ್ತಿರುವ ಮಕ್ಕಳು ಮತ್ತು ರೋಗಿಗಳು ಮಾಲಿನ್ಯ ಪ್ರದೇಶದಿಂದ ದೂರ ಉಳಿಯುವಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ, ಪ್ರಾಣಾಪಾಯಕ್ಕೆ ತುತ್ತಾಗುವ ಸಾಧ್ಯತೆಯಿದೆ ಎಂದು ಪಾಕಿಸ್ತಾನದ ವೈದ್ಯಕೀಯ ತಜ್ಞ ಅಶ್ರಫ್ ಜಿಯಾ ಎಚ್ಚರಿಸಿದ್ದಾರೆ.

    ನವೆಂಬರ್ 10 ರಂದು ಪಾಕಿಸ್ತಾನದ ಪಂಜಾಬ್ ಪ್ರದೇಶದ ಕೆಲವು ಭಾಗಗಳಲ್ಲಿ ವಾಯು ಗುಣಮಟ್ಟದ ಸೂಚ್ಯಂಕವು 1,900 ಕ್ಕಿಂತ ಹೆಚ್ಚು ದಾಖಲಾಗಿತ್ತು. ಬಳಿಕ ಕೊಂಚ ಇಳಿಕೆಯಾಗಿದೆ ಎಂದು ವರದಿಗಳು ಉಲ್ಲೇಖಿಸಿವೆ. ಇದನ್ನೂ ಓದಿ: ಉಸಿರುಗಟ್ಟಿಸುತ್ತಿದೆ ದೆಹಲಿ – ಮಾಲಿನ್ಯ ನಿಯಂತ್ರಣಕ್ಕೆ ಶುಕ್ರವಾರದಿಂದ GRAP-III ನಿರ್ಬಂಧ ಜಾರಿ

  • ಕುರಾನ್‌ ಅಪವಿತ್ರದ ಆರೋಪ- ಪಾಕ್‌ನಲ್ಲಿ ಕ್ರಿಶ್ಚಿಯನ್‌ ವೃದ್ಧನ ಮೇಲೆ ಮಾರಣಾಂತಿಕ ಹಲ್ಲೆ, ಸಾವು

    ಕುರಾನ್‌ ಅಪವಿತ್ರದ ಆರೋಪ- ಪಾಕ್‌ನಲ್ಲಿ ಕ್ರಿಶ್ಚಿಯನ್‌ ವೃದ್ಧನ ಮೇಲೆ ಮಾರಣಾಂತಿಕ ಹಲ್ಲೆ, ಸಾವು

    ಲಾಹೋರ್: ಪಾಕಿಸ್ತಾನದ (Pakistan) ಪಂಜಾಬ್ ಪ್ರಾಂತ್ಯದಲ್ಲಿ ಕುರಾನ್  ಅಪವಿತ್ರಗೊಳಿಸಿದ್ದಾರೆ ಎನ್ನುವ ಆರೋಪದಡಿ ಇಸ್ಲಾಮಿಸ್ಟ್ ತೆಹ್ರೀಕ್-ಎ-ಲಬ್ಬೈಕ್ ಪಾಕಿಸ್ತಾನ್ (TLP) ಗುಂಪೊಂದು ಕ್ರಿಶ್ಚಿಯನ್ ವೃದ್ಧರೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆಗೈದ ಘಟನೆ ನಡೆದಿದೆ.

    ಘಟನೆಯಿಂದ ಗಂಭೀರ ಗಾಯಗೊಂಡ ವೃದ್ಧ ಸಾವನ್ನಪ್ಪಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಧರ್ಮನಿಂದೆಯ ಕೃತ್ಯಗಳ ಆರೋಪ ಹೊತ್ತಿರುವ ಜನರನ್ನು ಮುಲಾಜಿಲ್ಲದೇ ಹತ್ಯೆ ಮಾಡುವ ಮೂಲಕ ಪಾಕ್‌ನಲ್ಲಿ ಇಸ್ಲಾಮಿಸ್ಟ್‌ಗಳು ಆಗಾಗ್ಗೆ ಕಾನೂನು ಕೈಗೆತ್ತಿಕೊಳ್ಳುತ್ತಾರೆ.

    ಈ ಘಟನೆ ಲಾಹೋರ್‌ನಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಪಂಜಾಬ್‌ನ ಸರ್ಗೋಧಾ ಜಿಲ್ಲೆಯ ಮುಜಾಹಿದ್ ಕಾಲೋನಿಯಲ್ಲಿ ನಡೆದಿದೆ. TLP ನೇತೃತ್ವದ ಗುಂಪು ಕೆಲವು ಕ್ರಿಶ್ಚಿಯನ್ ಸಮುದಾಯದ ಸದಸ್ಯರ ಮೇಲೆ ದಾಳಿ ಮಾಡಿದೆ. ಇದರಿಂದ ಇಬ್ಬರು ಕ್ರಿಶ್ಚಿಯನ್ನರು ಹಾಗೂ 10 ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಅಲ್ಲದೇ ಈ ಗುಂಪು ಕ್ರಿಶ್ಚಿಯನ್ನರಿಗೆ ಸೇರಿದ ಆಸ್ತಿಯನ್ನು ಸಹ ದೋಚಿದೆ ಎಂಬುದಾಗಿ ವರದಿಯಾಗಿದೆ.

    ನಡೆದಿದ್ದೇನು..?: ಶನಿವಾರ ಬೆಳಗ್ಗೆ ಕೆಲವು ಯುವಕರು ಮುಜಾಹಿದ್ ಕಾಲೋನಿಯಲ್ಲಿ ಕ್ರಿಶ್ಚಿಯನ್ ಸಮುದಾಯದ ಹಿರಿಯ ವ್ಯಕ್ತಿ ನಜೀರ್ ಗಿಲ್ ಮಸಿಹ್ ಅಲಿಯಾಸ್ ಲಾಜರ್ ಮಸಿಹ್, ಕುರಾನ್ ಅನ್ನು ಅಪವಿತ್ರಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬೆನ್ನಲ್ಲೇ TLP ನೇತೃತ್ವದ ಗುಂಪೊಂದು ನಜೀರ್ ಅವರ ನಿವಾಸ ಮತ್ತು ನಜೀರ್‌ ನೇತೃತ್ವದ ಇಂಡಸ್ಟ್ರಿ ಕಡೆಗೆ ಧಾವಿಸಿತ್ತು. ಅಲ್ಲದೇ ಏಕಾಏಕಿ ಶೂ ಫ್ಯಾಕ್ಟರಿ ಮತ್ತು ಅವರ ಮನೆಗೆ ಬೆಂಕಿ ಹಚ್ಚಿದೆ.

    ಕ್ರಿಶ್ಚಿಯನ್ನರ ಒಡೆತನದ ಕೆಲವು ಅಂಗಡಿಗಳನ್ನು ಧ್ವಂಸಗೊಳಿಸಿತು. ಇತ್ತ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸುತ್ತಿದ್ದಂತೆಯೇ ಗುಂಪು ವೃದ್ಧನ ಮೇಲೆ ಮನಬಂದಂತೆ ಥಳಿಸಿದೆ. ಘಟನೆಯಿಂದ ಚಿಂತಾಜನಕ ಸ್ಥಿತಿಯಲ್ಲಿದ್ದ ನಜೀರ್‌ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಭಾನುವಾರ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸಿಕ್ಸರ್‌ ಬಾರಿಸಿದ 7 ಸೆಕೆಂಡುಗಳಲ್ಲಿ ಹೃದಯಾಘಾತ – ಮೈದಾನದಲ್ಲೇ ಜೀವಬಿಟ್ಟ ಕ್ರಿಕೆಟಿಗ

    ನಜೀರ್‌ ಸಾವನ್ನು ಅವರ ಸಂಬಂಧಿ ಇರ್ಫಾನ್ ಗಿಲ್ ಮಸಿಹ್ ಖಚಿತಪಡಿಸಿದ್ದಾರೆ. ತನ್ನ ಮಾವ 4 ವರ್ಷಗಳ ನಂತರ ದುಬೈನಿಂದ ಹಿಂದಿರುಗಿದ್ದಾರೆ. ಅವರ ಮೇಲೆ ಈಗ ಕುರಾನ್ ಅಪವಿತ್ರಗೊಳಿಸಿದ್ದಾರೆಂಬ ಸುಳ್ಳು ಆರೋಪ ಹೊರಿಸಲಾಯಿತು ಎಂದು ಗಿಲ್ ಹೇಳಿದರು. ಟಿಎಲ್‌ಪಿ ಗುಂಪು ಬರುವ ವಿಚಾರ ತಿಳಿಯುತ್ತಿದ್ದಂತೆಯೇ ಕ್ರಿಶ್ಚಿಯನ್ ಕುಟುಂಬಗಳು ತಮ್ಮ ತಮ್ಮ ಮನೆಗಳಿಗೆ ಬೀಗ ಹಾಕಿಕೊಳ್ಳುವ ಮೂಲಕ ಜೀವ ಉಳಿಸಿಕೊಂಡಿದ್ದಾರೆ ಎಂದು ಅವರು ಹೇಳಿದರು.

    ಒಟ್ಟಿನಲ್ಲಿ ಕುರಾನ್‌ನ ಅಪವಿತ್ರೀಕರಣದ ಆರೋಪದ ಮೇಲೆ ಗುಂಪು ಕೆಲವು ಕ್ರೈಸ್ತರ ಮನೆಗಳನ್ನುಸುತ್ತುವರಿದಿದ್ದರಿಂದ ಪರಿಸ್ಥಿತಿಯನ್ನು ಹತೋಟಿಗೆ ತರಲು ಹಲವು ಪೊಲೀಸರ ತಂಡಗಳನ್ನು ನಿಯೋಜಿಸಬೇಕಾಯಿತು.

  • ಪಾಕ್‌ ಜೈಲಿನಲ್ಲಿ ಕೊಲೆಯಾಗಿದ್ದ ಸರಬ್ಜಿತ್ ಸಿಂಗ್ ಹಂತಕನ ಗುಂಡಿಕ್ಕಿ ಕೊಲೆ

    ಪಾಕ್‌ ಜೈಲಿನಲ್ಲಿ ಕೊಲೆಯಾಗಿದ್ದ ಸರಬ್ಜಿತ್ ಸಿಂಗ್ ಹಂತಕನ ಗುಂಡಿಕ್ಕಿ ಕೊಲೆ

    ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಜೈಲು ಸೇರಿದ್ದ ಭಾರತೀಯ ಪ್ರಜೆ ಸರಬ್ಜಿತ್ ಸಿಂಗ್ (Sarabjit Singh) ಹಂತಕ ಅಮೀರ್ ಸರ್ಫರಾಜ್ (Amir Sarfaraz) ಅಲಿಯಾಸ್ ತಾಂಬಾನನ್ನು ಲಾಹೋರ್‌ನಲ್ಲಿ (Lahore) ಅಪರಿಚಿತರು ಗುಂಡಿಕ್ಕಿ ಕೊಂದಿದ್ದಾರೆ.

    ಪಾಕಿಸ್ತಾನದ (Pakistan) ಲಾಹೋರ್‌ನ ಇಸ್ಲಾಂಪುರ ಪ್ರದೇಶದಲ್ಲಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ತಾಂಬಾ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಇತ್ತ ಘಟನೆಯಿಂದ ಗಂಭೀರ ಗಾಯಗೊಂಡ ತಾಂಬಾನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಆತ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಸೌಂದರ್ಯ ಜಗದೀಶ್ ಆತ್ಮಹತ್ಯೆ ಬಗ್ಗೆ ಡಿಸಿಪಿ ಪ್ರತಿಕ್ರಿಯೆ

    ಆಪಾದಿತ ಭಯೋತ್ಪಾದನೆ ಮತ್ತು ಬೇಹುಗಾರಿಕೆಯ ಆರೋಪದಲ್ಲಿ ಸರಬ್ಜಿತ್ ಸಿಂಗ್ (49) ಅವರನ್ನು ಪಾಕ್‌ ಕೋರ್ಟ್ 1991 ರಲ್ಲಿ ಮರಣದಂಡನೆಗೆ ಗುರಿಪಡಿಸಿತ್ತು. ಆದಾಗ್ಯೂ ಸರ್ಕಾರವು 2008 ರಲ್ಲಿ ಅನಿರ್ದಿಷ್ಟ ಅವಧಿಗೆ ಸಿಂಗ್‌ ಮರಣದಂಡನೆಯನ್ನು ತಡೆಹಿಡಿಯಿತು. ಬಳಿಕ ಏಪ್ರಿಲ್ 2013 ರಲ್ಲಿ ಲಾಹೋರ್ ಜೈಲಿನಲ್ಲಿ ಸಾವನ್ನಪ್ಪಿದ್ದರು. ಮರಣದ ನಂತರ ಸರಬ್ಜಿತ್ ಅವರ ಮೃತದೇಹವನ್ನು ಲಾಹೋರ್‌ನಿಂದ ಅಮೃತಸರಕ್ಕೆ ತರಲಾಯಿತು. ಅಲ್ಲಿ ಅವರ ಅಂತಿಮ ವಿಧಿಗಳನ್ನು ನಡೆಸಲಾಗಿತ್ತು.

  • ಮದುವೆ ಮೆರವಣಿಗೆಯಲ್ಲಿ ಭೂಗತ ಪಾತಕಿಯ ಗುಂಡಿಕ್ಕಿ ಹತ್ಯೆ

    ಮದುವೆ ಮೆರವಣಿಗೆಯಲ್ಲಿ ಭೂಗತ ಪಾತಕಿಯ ಗುಂಡಿಕ್ಕಿ ಹತ್ಯೆ

    ಇಸ್ಲಾಮಾಬಾದ್: ಲಾಹೋರ್‌ನ ಭೂಗತ ಪಾತಕಿಯನ್ನ (Underworld Don) ಮದುವೆ ಮೆರವಣಿಗೆ ಸಂದರ್ಭದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂಬುದಾಗಿ ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ.

    ಅಮೀರ್ ಬಾಲಾಜ್ ಟಿಪ್ಪು (Ameer Balaj Tipu) ಮೃತ ಭೂಗತ ಪಾತಕಿ. ಈತನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಘಟನೆಯಿಂದಾಗಿ ಮದುವೆಗೆ ಬಂದಿರುವ ಅತಿಥಿಗಳಲ್ಲಿ ಮೂವರಿಗೆ ಗಾಯಗಳಾಗಿವೆ. ದುಷ್ಕರ್ಮಿಗಳ ದಾಳಿಯಿಂದ ಗಾಯಗೊಂಡ ನಾಲ್ವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಮೀರ್‌ ಅದಾಗಲೇ ಮೃತಪಟ್ಟಿದ್ದಾನೆ.

    ಮೃತ ಅಮೀರ್ ಎದೆಗೆ ನಾಲ್ಕು ಗುಂಡುಗಳು ತಗುಲಿರುವುದು ಕಂಡುಬಂದಿದೆ. ಗುಂಡಿನ ದಾಳಿಯಿಂದಾಗಿ ತೀವ್ರ ರಕ್ತಸ್ರಾವವಾಗಿ ಅಮೀರ್‌ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಅಮೀರ್‌ ಸಾವಿನ ಸುದ್ದಿ ಬೆಂಬಲಿಗರನ್ನು ಕೆರಳಿಸಿದೆ. ಕೂಡಲೇ ಆಸ್ಪತ್ರೆಯ ಹೊರಗೆ ಅಮೀರ್‌ ಬೆಂಬಲಿಗರು ಜಮಾಯಿಸಿದರು. ಮಹಿಳೆಯರಂತೂ ತಮ್ಮ ಎದೆಗೆ ಹೊಡೆದುಕೊಂಡು ದುಷ್ಕರ್ಮಿಗಳ ಕೃತ್ಯ ಖಂಡಿಸಿದರು. ಜೊತೆಗೆ ಆಕ್ರೋಶ ಕೂಡ ಹೊರಹಾಕಿದರು. ಇದನ್ನೂ ಓದಿ: ಮೃತ ನವಲ್ನಿಗೆ ಗೌರವ ಸಲ್ಲಿಸಲು ಬೀದಿಗಿಳಿದ 400 ಮಂದಿಯ ಬಂಧನ

    ಒಟ್ಟಿನಲ್ಲಿ ಘಟನೆಯ ಬಗ್ಗೆ ಸಂಪೂರ್ಣ ತನಿಖೆಯನ್ನು ಅಧಿಕಾರಿಗಳು ಪ್ರಾರಂಭಿಸಿದ್ದಾರೆ. ಈ ದಾಳಿಗೆ ಕಾರಣವೇನು..? ಹಾಗೂ ದಾಳಿಯ ಹಿಂದಿನ ಉದ್ದೇಶವೇನು..?, ಯಾರು ಈ ದಾಳಿಯನ್ನು ಮಾಡಿದ್ದಾರೆ ಎಂಬುದರ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಯುತ್ತಿದೆ. ಸ್ಥಳೀಯ ವರದಿಗಳ ಪ್ರಕಾರ, ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ.

    ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (PTI) ತೊರೆದಿರುವ ಅಮೀರ್ ಬಾಲಾಜ್, ಇತ್ತೀಚೆಗೆ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (PML-N) ಸೇರಿದ್ದನು ಎಂದು ಹೇಳಲಾಗಿದೆ.

  • Pakistan Polls: ಲಾಹೋರ್‌ನಲ್ಲಿ 55 ಸಾವಿರ ಮತಗಳಿಂದ ನವಾಜ್ ಷರೀಫ್‌ಗೆ ಗೆಲುವು

    Pakistan Polls: ಲಾಹೋರ್‌ನಲ್ಲಿ 55 ಸಾವಿರ ಮತಗಳಿಂದ ನವಾಜ್ ಷರೀಫ್‌ಗೆ ಗೆಲುವು

    ಇಸ್ಲಾಮಾಬಾದ್:‌ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ (Nawaz Sharif) ಅವರು ಲಾಹೋರ್ ಕ್ಷೇತ್ರದಲ್ಲಿ ಯಾಸ್ಮಿನ್ ರಶೀದ್ ವಿರುದ್ಧ 55,000 ಮತಗಳಿಂದ ಗೆದ್ದಿದ್ದಾರೆ.

    ಹಿಂಸಾಚಾರದ ನಡುವೆಯೂ ಪಾಕಿಸ್ತಾನದಲ್ಲಿ (Pakistan) ಮತದಾನ ನಡೆದಿದೆ. ಈ ಮೂಲಕ ಪಾಕಿಸ್ತಾನ ಗುರುವಾರ ತನ್ನ ಹೊಸ ಸರ್ಕಾರವನ್ನು ಆಯ್ಕೆ ಮಾಡಲು ಮತ ಚಲಾಯಿಸಿದೆ. ಸದ್ಯ ಮತ ಎಣಿಕೆ ನಡೆಯುತ್ತಿದ್ದು, ಇಲ್ಲಿಯವರೆಗೆ 265 ಸ್ಪರ್ಧಿಗಳ ಪೈಕಿ 13 ಸ್ಥಾನಗಳ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ.

    ಸ್ವತಂತ್ರವಾಗಿ ಸ್ಪರ್ಧಿಸಿದ್ದ ಇಮ್ರಾನ್ ಖಾನ್ (Imran Khan) ಬೆಂಬಲಿತ ಅಭ್ಯರ್ಥಿಗಳು ಐದು ಸ್ಥಾನಗಳನ್ನು ಪಡೆದುಕೊಂಡಿದ್ದರೆ, ನಾಲ್ಕು ಸ್ಥಾನಗಳನ್ನು ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪಕ್ಷವಾದ ಪಾಕಿಸ್ತಾನ್ ಮುಸ್ಲಿಂ ಲೀಗ್ (Pakistan Muslim League) ಗೆದ್ದಿದೆ. ಇದನ್ನೂ ಓದಿ: ಸುಳ್ಳು ಮಾಹಿತಿ ಹರಡಿ ದೊಡ್ಡ ತಪ್ಪು ಮಾಡಿದೆ- ಕ್ಷಮೆಯಾಚಿಸಿದ ಎಬಿಡಿ

    ಹತ್ಯೆಗೀಡಾದ ಪ್ರಧಾನಿ ಬೆನಜೀರ್ ಭುಟ್ಟೊ (Benazir Bhutto) ಅವರ ಪುತ್ರ, ಜರ್ದಾರಿಯ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿಯ ಬಿಲಾವಲ್ ಭುಟ್ಟೋ ಮೂರು ಸ್ಥಾನಗಳನ್ನು ಪಡೆದುಕೊಂಡಿದ್ದಾರೆ. ಇತ್ತ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್  ಪುತ್ರ ತಲ್ಹಾ ಹಫೀಜ್ ಸಯೀದ್ ಲಾಹೋರ್ ಕ್ಷೇತ್ರದಿಂದ ಸೋತಿದ್ದಾರೆ.

    12 ಕೋಟಿಗೂ ಹೆಚ್ಚು ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ದೇಶಾದ್ಯಂತ ನಿನ್ನೆ ರಜೆ ಘೋಷಿಸಲಾಗಿತ್ತು. ಮತದಾನದ ನಂತರ ಮತಗಳ ಎಣಿಕೆ ಪ್ರಾರಂಭವಾಯಿತು.

  • 21 ಚರ್ಚ್‌ಗಳನ್ನು ಧ್ವಂಸಗೊಳಿಸಿದ 600 ಜನರ ಮೇಲೆ ಕೇಸ್ – 135 ಆರೋಪಿಗಳನ್ನು ಬಂಧಿಸಿದ ಪಾಕ್ ಪೊಲೀಸರು

    21 ಚರ್ಚ್‌ಗಳನ್ನು ಧ್ವಂಸಗೊಳಿಸಿದ 600 ಜನರ ಮೇಲೆ ಕೇಸ್ – 135 ಆರೋಪಿಗಳನ್ನು ಬಂಧಿಸಿದ ಪಾಕ್ ಪೊಲೀಸರು

    ಇಸ್ಲಾಮಾಬಾದ್: ಕ್ರಿಶ್ಚಿಯನ್ (Christian) ಕುಟುಂಬವೊಂದು ಧರ್ಮನಿಂದನೆ ಮಾಡಿದ ಆರೋಪದ ಮೇಲೆ ಉದ್ರಿಕ್ತ ಗುಂಪು ಪಾಕಿಸ್ತಾನದ (Pakistan) ಪಂಜಾಬ್ (Punjab) ಪ್ರಾಂತ್ಯದಲ್ಲಿ 21 ಚರ್ಚ್‌ಗಳನ್ನು (Church) ಧ್ವಂಸಗೊಳಿಸಿತ್ತು. ದಾಳಿಗೆ ಸಂಬಂಧಿಸಿಂತೆ 600 ಜನರ ಮೇಲೆ ಕೇಸ್ ದಾಖಲಾಗಿದ್ದು, ಪಾಕಿಸ್ತಾನದ ಅಧಿಕಾರಿಗಳು ಇಲ್ಲಿಯವರೆಗೆ 135 ಆರೋಪಿಗಳನ್ನು ಬಂಧಿಸಿದ್ದಾರೆ.

    ಪಂಜಾಬ್‌ನ ರಾಜಧಾನಿ ಲಾಹೋರ್‌ನಿಂದ (Lahore) ಸುಮಾರು 130 ಕಿ.ಮೀ ದೂರದಲ್ಲಿರುವ ಫೈಸಲಾಬಾದ್ ಜಿಲ್ಲೆಯ ಜರನ್‌ವಾಲಾ ಪಟ್ಟಣದಲ್ಲಿ ಧರ್ಮನಿಂದನೆಯ ಆರೋಪದ ಮೇಲೆ ಕೆರಳಿದ ಗುಂಪೊಂದು ಬುಧವಾರ 21 ಚರ್ಚ್ಗಳು ಹಾಗೂ ಹಲವಾರು ಕ್ರಿಶ್ಚಿಯನ್ನರ ಮನೆಗಳನ್ನು ಸುಟ್ಟುಹಾಕಿದೆ. ಕ್ರಿಶ್ಚಿಯನ್ ಸ್ಮಶಾನ ಮತ್ತು ಸ್ಥಳೀಯ ಸಹಾಯಕ ಆಯುಕ್ತರ ಕಚೇರಿಯನ್ನೂ ಧ್ವಂಸಗೊಳಿಸಿದೆ.

    ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಗುರುವಾರ ಗಲಭೆಯ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಿದೆ. ಹಾಗೂ ಹಾನಿಗೊಳಗಾದ ಎಲ್ಲಾ ಚರ್ಚ್‌ಗಳು ಹಾಗೂ ಅಲ್ಪಸಂಖ್ಯಾತರ ಮನೆಗಳನ್ನು ಮರು ನಿರ್ಮಾಣ ಮಾಡುವ ಭರವಸೆ ನೀಡಿದೆ. ಇದನ್ನೂ ಓದಿ: ಶಾಲಾ ಮಕ್ಕಳಿಗೆ ಗುಡ್‌ನ್ಯೂಸ್ – ಇಂದಿನಿಂದ ವಾರದಲ್ಲಿ 2 ದಿನ ಮೊಟ್ಟೆ ವಿತರಣೆ

    ಭಯೋತ್ಪಾದನೆ ಹಾಗೂ ಧರ್ಮನಿಂದನೆ ಆರೋಪದಡಿಯಲ್ಲಿ 600 ಶಂಕಿತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪಂಜಾಬ್ ಉಸ್ತುವಾರಿ ಮಾಹಿತಿ ಸಚಿವ ಅಮೀರ್ ಮಿರ್ ತಿಳಿಸಿದ್ದಾರೆ. ಜರನ್‌ವಾಲಾದಲ್ಲಿ ಅಲ್ಪಸಂಖ್ಯಾತ ಸಮುದಾಯದ ಚರ್ಚ್‌ಗಳು ಹಾಗೂ ಮನೆಗಳ ಮೇಲೆ ದಾಳಿ ನಡೆಸಿದ 135 ದುಷ್ಕರ್ಮಿಗಳನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ತೆಹ್ರೀಕ್-ಇ-ಲಬ್ಬೈಕ್ ಪಾಕಿಸ್ತಾನ್ ಎಂಬ ಉಗ್ರಗಾಮಿ ಗುಂಪಿನ ಸದಸ್ಯರು ಕೂಡಾ ಸೇರಿದ್ದಾರೆ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ.

    ಸದ್ಯ ಪ್ರದೇಶದಲ್ಲಿ ಪರಿಸ್ಥಿತಿಯನ್ನು ತಿಳಿಗೊಳಿಸಲಾಗಿದೆ. ಅಲ್ಪಸಂಖ್ಯಾತ ಕ್ರಿಶ್ಚಿಯನ್ ಸಮುದಾಯದ ಚರ್ಚ್‌ಗಳು ಮತ್ತು ಮನೆಗಳ ಹೊರಗೆ ಪೊಲೀಸ್ ಮತ್ತು ರೇಂಜರ್‌ಗಳ ಭಾರೀ ತುಕಡಿಯನ್ನು ನಿಯೋಜಿಸಲಾಗಿದೆ ಎಂದು ಮಿರ್ ಹೇಳಿದ್ದಾರೆ. ಹಲವು ಕಟ್ಟಡಗಳನ್ನು ಧ್ವಂಸಗೊಳಿಸುವ ದುಷ್ಕರ್ಮಿಗಳ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾನ್‌ವೆಜ್ ಪ್ರಿಯರಿಗೆ ಬ್ಯಾಡ್ ನ್ಯೂಸ್- ಚಿಕನ್ ಬೆಲೆಯಲ್ಲಿಯೂ ಏರಿಕೆ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೋರ್ಟ್‌ನತ್ತ ತೆರಳಿದ ಪಾಕ್ ಮಾಜಿ ಪ್ರಧಾನಿ – ಇಮ್ರಾನ್ ಮನೆಗೆ ನುಗ್ಗಿದ ಪೊಲೀಸರು

    ಕೋರ್ಟ್‌ನತ್ತ ತೆರಳಿದ ಪಾಕ್ ಮಾಜಿ ಪ್ರಧಾನಿ – ಇಮ್ರಾನ್ ಮನೆಗೆ ನುಗ್ಗಿದ ಪೊಲೀಸರು

    ಇಸ್ಲಾಮಾಬಾದ್: ತೋಶಾಖಾನ (Toshakhana) ಪ್ರಕರಣದ ಆರೋಪ ಎದುರಿಸುತ್ತಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಕೋರ್ಟ್‌ನತ್ತ ತೆರಳುತ್ತಿದ್ದಂತೆ ಇತ್ತ ಅವರ ಮನೆಗೆ ಪೊಲೀಸರು ನುಗ್ಗಿದ್ದಾರೆ.

    ಮನೆಯಲ್ಲಿ ಇಮ್ರಾನ್ ಖಾನ್ ಪತ್ನಿ ಬುಶ್ರಾ ಬೇಗಂ (Bushra Begum) ಇದ್ದರು. ಮನೆ ಹೊರಗೆ ಇರಿಸಿದ್ದ ಬ್ಯಾರಿಕೇಡ್‌ಗಳನ್ನು ತೆಗೆದು ಪೊಲೀಸರು ಖಾನ್ ಮನೆಗೆ ನುಗ್ಗಿದ್ದಾರೆ. ಈ ವೇಳೆ ತಡೆಯಲು ಮುಂದಾದ ಇಮ್ರಾನ್ ಖಾನ್ ಬೆಂಬಲಿಗರ ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ. ಈ ಸಂಬಂಧದ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಗಿಫ್ಟ್‌ ಆಗಿ ಬಂದ ನೆಕ್ಲೆಸ್‌ನ್ನು 18 ಕೋಟಿಗೆ ಮಾರಿದ್ದಕ್ಕೆ ಇಮ್ರಾನ್‌ ಖಾನ್‌ ವಿರುದ್ಧ ತನಿಖೆ 

    ಪೊಲೀಸರ ವರ್ತನೆಗೆ ಕಿಡಿಕಾರಿ ಇಮ್ರಾನ್ ಖಾನ್ ಟ್ವೀಟ್ (Tweet) ಮಾಡಿದ್ದಾರೆ. ನನ್ನ ಪತ್ನಿ ಒಬ್ಬಳೇ ಇರುವ ಸಂದರ್ಭದಲ್ಲಿ ಪೊಲೀಸರು ನನ್ನ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಯಾವ ಕಾನೂನಿನ ಅಡಿಯಲ್ಲಿ ಅವರು ಈ ರೀತಿ ಮಾಡುತ್ತಿದ್ದಾರೆ? ಎಂದು ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.

    ಚುನಾವಣಾ ಆಯೋಗವು (Election Commission) ಸಲ್ಲಿಸಿದ್ದ ದೂರಿನ ವಿಚಾರಣೆಗೆ ಹಾಜರಾಗಲು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಜಾಫರ್ ಇಕ್ಬಾಲ್ ಅವರು ನ್ಯಾಯಾಲಯಕ್ಕೆ ಹಾಜರಾಗುವಂತೆ ಪಾಕಿಸ್ತಾನದ ತೇಹ್ರಿಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥರಾಗಿರುವ ಇಮ್ರಾನ್ ಖಾನ್ ಅವರಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ವಿರುದ್ಧ ಅರೆಸ್ಟ್‌ ವಾರೆಂಟ್‌ 

    ಬೆಂಗಾವಲು ಪಡೆಯೊಂದಿಗೆ ಇಮ್ರಾನ್ ಖಾನ್ ಲಾಹೋರ್‌ನ (Lahore) ಜಮಾನ್ ಪಾರ್ಕ್‌ನಲ್ಲಿರುವ ತಮ್ಮ ನಿವಾಸದಿಂದ ಇಸ್ಲಾಮಾಬಾದ್ (Islamabad) ತೆರಳಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಇಸ್ಲಾಮಾಬಾದ್ ಜಿ-11ನಲ್ಲಿರುವ ನ್ಯಾಯಾಲಯ ಸಂಕೀರ್ಣದ ಹೊರಗೆ ಕಟ್ಟುನಿಟ್ಟಾದ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದು, ಮಧ್ಯಾಹ್ನದ ವೇಳೆಗೆ ಇಮ್ರಾನ್ ಖಾನ್ ಆಗಮಿಸುವ ನಿರೀಕ್ಷೆಯಿದೆ. ಇವರಿಗೆ ಭದ್ರತೆಯನ್ನು ಒದಗಿಸಲು ದೊಡ್ಡ ಪ್ರಮಾಣದ ಪೊಲೀಸರನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಬಂಧನಕ್ಕೆ ಮನೆಗೆ ಪೊಲೀಸರ ದಂಡು 

    ಇಸ್ಲಾಮಾಬಾದ್ ಆಡಳಿತವು ಶುಕ್ರವಾರ ರಾತ್ರಿ ರಾಜಧಾನಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಿತ್ತು. ಅಲ್ಲದೇ ಖಾಸಗಿ ಕಂಪನಿಗಳು, ಭದ್ರತಾ ಸಿಬ್ಬಂದಿಗಳು ಶಸ್ತ್ರಾಸ್ತ್ರ ಸಾಗಿಸುವುದನ್ನು ನಿಷೇಧಿಸಿತ್ತು. ಅದರೊಂದಿಗೆ ಚಾಲಕರು ತಮ್ಮ ನೋಂದಣಿ ದಾಖಲೆಗಳನ್ನು ತೆಗೆದುಕೊಂಡು ಹೋಗುವಂತೆ ಸೂಚಿಸಿತ್ತು. ಇದನ್ನೂ ಓದಿ: ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ವಿರುದ್ಧ ಅರೆಸ್ಟ್‌ ವಾರೆಂಟ್‌