Tag: ಲಿಂಗಸುಗೂರು

  • ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿ ಅಮಾನತುಗೊಂಡಿರುವ ಪಿಡಿಒಗೆ ಮತ್ತೊಂದು ಸಂಕಷ್ಟ

    ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿ ಅಮಾನತುಗೊಂಡಿರುವ ಪಿಡಿಒಗೆ ಮತ್ತೊಂದು ಸಂಕಷ್ಟ

    ರಾಯಚೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚಲನದಲ್ಲಿ ಗಣವೇಷಧಾರಿಯಾಗಿ ಭಾಗವಹಿಸಿ ಅಮಾನತುಗೊಂಡಿರುವ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ(PDO) ಪ್ರವೀಣ್‌ ಕುಮಾರ್‌ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

    ಲಿಂಗಸುಗೂರು ತಾಲ್ಲೂಕಿನ ರೋಡಲಬಂಡಾ ಗ್ರಾಮದಲ್ಲಿ ಪಿಡಿಒ ಆಗಿ ಕೆಲಸ ಮಾಡುತ್ತಿರುವ ಪ್ರವೀಣ್‌ ಮೇಲೆ ಕರ್ತವ್ಯ ಲೋಪ, ಹಣ ದುರ್ಬಳಕೆಯ ಆರೋಪ ಕೇಳಿಬಂದಿದೆ.

    ಲಿಂಗಸುಗೂರು ಶಾಸಕ ಮಾನಪ್ಪ ವಜ್ಜಲ್ ಆಪ್ತ ಸಹಾಯಕನಾದ ನಂತರ ಪ್ರವೀಣ್‌ ಅವರನ್ನು 2023ರ ಜೂನ್ 15 ರಂದು ಪಿಡಿಓ ಕರ್ತವ್ಯದಿಂದ ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದ್ದರು.

    ಈ ಆದೇಶದ ಅನ್ವಯ ಜೂನ್ 30 ರಂದು ಗ್ರಾಪಂಗಳ ಕಾರ್ಯಭಾರ ಹಸ್ತಾಂತರವಾಗಿತ್ತು. ಈ ಮಧ್ಯೆ ಜೂನ್ 25 ರಿಂದ 30 ರ ವರೆಗೆ ಎರಡು ಪಂಚಾಯತಿಯಿಂದ 14. 38 ಲಕ್ಷ ರೂ. ಅನುದಾನ ಖರ್ಚು ಮಾಡಿದ್ದಾರೆ. ಗಣದಿನ್ನಿ ಪಂಚಾಯತಿಯಲ್ಲಿ 5.18 ಲಕ್ಷ ರೂ., ಹಿರೇಹಣಗಿ ಪಂಚಾಯತ್‌ನಲ್ಲಿ 9.20 ಲಕ್ಷ ರೂ. ಖರ್ಚು ಮಾಡಿದ್ದಾರೆ.  ಇದನ್ನೂ ಓದಿ:  RSS ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕೆ PDO ಅಮಾನತು – ಸರ್ಕಾರದ ಕ್ರಮ ಖಂಡಿಸಿ ಆದೇಶ ಹಿಂಪಡೆಯುವಂತೆ ಬಿಜೆಪಿ ಶಾಸಕ ಒತ್ತಾಯ

     
    15 ನೇ ಹಣಕಾಸು ಯೋಜನೆಯ ಅನುದಾನದ ಅಡಿ ಬೀದಿ ದೀಪ, ಸ್ಯಾನಿಟರಿ ಸಾಮಗ್ರಿ, ಪಂಪ್ ಸೇರಿ ಹಲವು ಸಾಮಗ್ರಿಗಳ ಖರೀದಿ ಮಾಡಿದ್ದಾರೆ. ಬೇರೆ ಕಡೆ ನಿಯೋಜನೆಯಾಗಿದ್ದರೂ ಪಿಡಿಓ ಸ್ಥಾನದಲ್ಲಿ ಉಳಿದು ಅನುದಾನದ ಹಣವನ್ನು ದುರ್ಬಳಕೆ ಮಾಡಿದ್ದಾರೆ ಎಂಬ ಆರೋಪ ಪ್ರವೀಣ್‌ ಮೇಲೆ ಬಂದಿದೆ. ಈ ಸಂಬಂಧ ಸಿರವಾರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಯಿಂದ ಜಿಲ್ಲಾ ಪಂಚಾಯತ್‌ ಸಿಇಓಗೆ ವರದಿ ಸಲ್ಲಿಕೆಯಾಗಿದ್ದು ಪರಿಶೀಲನೆ ಹಂತದಲ್ಲಿದೆ.

    ಅಕ್ಟೋಬರ್12 ರಂದು ಲಿಂಗಸುಗೂರು ಪಟ್ಟಣದಲ್ಲಿ ಆರ್‌ಎಸ್‌ಎಸ್‌ ಶತಮಾನೋತ್ಸವದ ಹಿನ್ನೆಲೆಯಲ್ಲಿ ಪಂಥಸಂಚಲನ ಕಾರ್ಯಕ್ರಮ ನಡೆದಿತ್ತು. ಈ ಪಥಸಂಚಲನದಲ್ಲಿ ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಗಣವೇಷ ಧರಿಸಿ ಪ್ರವೀಣ್ ಭಾಗವಹಿಸಿದ್ದರು.

    ಕರ್ನಾಟಕ ಸಿವಿಲ್ ಸೇವಾ ನಿಯಮಗಳ ಉಲ್ಲಂಘನೆ ಹಾಗೂ ಸರ್ಕಾರಿ ನೌಕರನ ತರವಲ್ಲದ ರೀತಿ ನಡೆದುಕೊಂಡಿದ್ದಾರೆ ಎಂದು ಹೇಳಿ ಪ್ರವೀಣ್ ಕುಮಾರ್ ಅವರನ್ನು ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಅವರು ಇಲಾಖಾ ತನಿಖೆ ಕಾಯ್ದಿರಿಸಿ ಅಮಾನತು ಮಾಡಿದ್ದಾರೆ.

  • ದೇವದುರ್ಗ ಶಾಸಕಿ ಕರೆಮ್ಮ ನಾಯಕ್ ಕಾರು ಅಪಘಾತ

    ದೇವದುರ್ಗ ಶಾಸಕಿ ಕರೆಮ್ಮ ನಾಯಕ್ ಕಾರು ಅಪಘಾತ

    ರಾಯಚೂರು: ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ್ (Karemma Nayak) ಕಾರು ಅಪಘಾತವಾಗಿರುವ ಘಟನೆ ಲಿಂಗಸುಗೂರು ತಾಲೂಕಿನ ಗುರಗುಂಟಾ ಪಟ್ಟಣದಲ್ಲಿ ನಡೆದಿದೆ.

    ದೇವದುರ್ಗದಿಂದ ಹುಬ್ಬಳ್ಳಿಗೆ ಹೊರಟಿದ್ದ ವೇಳೆ ಅಪಘಾತವಾಗಿದೆ. ಶಾಸಕಿಗೆ ಸಣ್ಣಪುಟ್ಟ ಒಳಪೆಟ್ಟು ಬಿದ್ದಿದ್ದು, ಲಿಂಗಸುಗೂರು ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಇದನ್ನೂ ಓದಿ: ಶಾಸಕರಿಗೆ ತಾಳ್ಮೆ ಇಲ್ಲ, ಕಾರ್ಯಕ್ರಮ ಹಾಳು ಮಾಡಲು ಬಂದಿದ್ದಾರೆ: ಮುನಿರತ್ನ ವಿರುದ್ಧ ಡಿಕೆಶಿ ಕಿಡಿ

    ತಮ್ಮದೇ ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಹುಬ್ಬಳ್ಳಿಗೆ ಮೂರು ಕಾರುಗಳು ಹೊರಟಿದ್ದವು. ಮೂರು ಕಾರುಗಳ ಪೈಕಿ ನಡುವಿನ ಕಾರಿನಲ್ಲಿ ಶಾಸಕಿ ಇದ್ದರು. ತಮ್ಮದೇ ಕಾರ್ಯಕರ್ತರೊಂದಿಗೆ ಹುಬ್ಬಳ್ಳಿಗೆ ತೆರಳುತ್ತಿದ್ದ ವೇಳೆ ಅವಘಡ ನಡೆದಿದೆ.

  • ರಾಯಚೂರು | ಜಾತಿಗಣತಿ ಸಮೀಕ್ಷೆಗೆ ನಿರ್ಲಕ್ಷ್ಯ – ಆರು ಅಂಗನವಾಡಿ ಕಾರ್ಯಕರ್ತೆಯರು ವಜಾ, 57 ಸಿಬ್ಬಂದಿಗೆ ನೋಟಿಸ್

    ರಾಯಚೂರು | ಜಾತಿಗಣತಿ ಸಮೀಕ್ಷೆಗೆ ನಿರ್ಲಕ್ಷ್ಯ – ಆರು ಅಂಗನವಾಡಿ ಕಾರ್ಯಕರ್ತೆಯರು ವಜಾ, 57 ಸಿಬ್ಬಂದಿಗೆ ನೋಟಿಸ್

    ರಾಯಚೂರು: ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ (Caste Census Survey) ಕಾರ್ಯಕ್ಕೆ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯ ಆರೋಪ ಹಿನ್ನೆಲೆ ರಾಯಚೂರು ಜಿಲ್ಲೆಯಲ್ಲಿ ಆರು ಅಂಗನವಾಡಿ ಕಾರ್ಯಕರ್ತೆಯರನ್ನು ವಜಾಗೊಳಿಸಲಾಗಿದ್ದು, 57 ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ.

    ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರು ಈ ಕುರಿತು ಆದೇಶ ಹೊರಡಿಸಿದ್ದಾರೆ. ಸಮೀಕ್ಷಾ ಕಿಟ್ ಪಡೆದು ಸೇವೆ ಆರಂಭಿಸಿಲ್ಲ ಎಂದು ದೇವದುರ್ಗದ (Devadurga) ತಹಶೀಲ್ದಾರ್ ಅವರು ನೀಡಿದ್ದ ವರದಿಯನ್ವಯ ಆರು ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರಾದ ಗುಂಡಮ್ಮ, ರಂಗಮ್ಮ, ಮುತ್ತಮ್ಮ, ಚಾಂದಬಿ, ವಿಜಯಲಕ್ಷ್ಮಿ ಹಾಗೂ ರೇಣುಕಾ ಎಂಬುವವರನ್ನು ವಜಾಗೊಳಿಸಲಾಗಿದೆ.ಇದನ್ನೂ ಓದಿ: ಬೆಂಗಳೂರು | 7.80 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್ – ಇಬ್ಬರು ನೈಜೀರಿಯಾ ಪ್ರಜೆಗಳು ಅರೆಸ್ಟ್

    ಇನ್ನೂ ಲಿಂಗಸುಗೂರು (Lingasuguru) ತಾಲೂಕಿನಲ್ಲಿ ಸಮೀಕ್ಷೆಗೆ ನಿರಂತರವಾಗಿ ಗೈರಾದ 57 ಜನ ಸಮೀಕ್ಷಾ ಸಿಬ್ಬಂದಿಗೆ ಲಿಂಗಸುಗೂರು ಉಪವಿಭಾಗಾಧಿಕಾರಿ ಬಸವಣಪ್ಪ ಕಲಶೆಟ್ಟಿ ಅವರು ನೋಟಿಸ್ ಜಾರಿ ಮಾಡಿದ್ದು, ಗೈರಾದಕ್ಕೆ ಕಾರಣ ನೀಡುವಂತೆ ಸೂಚನೆ ನೀಡಿದ್ದಾರೆ.

     

  • ರಾಯಚೂರು | ಜಾತಿಗಣತಿ ಸಮೀಕ್ಷಾ ಕಾರ್ಯಕ್ಕೆ ನಿರ್ಲಕ್ಷ್ಯ ತೋರಿದ ಅಧಿಕಾರಿ ಅಮಾನತು

    ರಾಯಚೂರು | ಜಾತಿಗಣತಿ ಸಮೀಕ್ಷಾ ಕಾರ್ಯಕ್ಕೆ ನಿರ್ಲಕ್ಷ್ಯ ತೋರಿದ ಅಧಿಕಾರಿ ಅಮಾನತು

    ರಾಯಚೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ್ದಕ್ಕೆ ರಾಯಚೂರಿನ (Raichuru) ಲಿಂಗಸುಗೂರು (Lingasuguru) ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯನ್ನ ಅಮಾನತು ಮಾಡಲಾಗಿದೆ.

    ಸಮೀಕ್ಷೆಗೆ ಸಹಕರಿಸದೇ ನಿರ್ಲಕ್ಷ್ಯ ತೋರಿದ್ದರಿಂದ ಸಮೀಕ್ಷಾ ಪ್ರಗತಿ ಕುಂಠಿತ ಹಿನ್ನೆಲೆ ಲಿಂಗಸುಗೂರು ತಹಶೀಲ್ದಾರ್ ಅವರು ವರದಿ ಸಲ್ಲಿಸಿದ್ದರು. ವರದಿ ಅನ್ವಯ ಸರ್ಕಾರಿ ಕೆಲಸದಲ್ಲಿ ನಿರ್ಲಕ್ಷತನ, ಬೇಜವಾಬ್ದಾರಿತನ, ಕರ್ತವ್ಯ ಲೋಪ ಆರೋಪ ಹಿನ್ನೆಲೆ ಜಿಲ್ಲಾಧಿಕಾರಿ ನಿತೀಶ್.ಕೆ (Nitish.K) ಅವರು ರಮೇಶ್ ಜಿ.ರಾಠೋಡ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

  • ರಾಯಚೂರು | ಧಾರಾಕಾರ ಮಳೆಗೆ ಉಕ್ಕಿಹರಿದ ಹಳ್ಳಗಳು – ಆನೆಹೊಸೂರು ಸೇತುವೆ ಮುಳುಗಡೆ

    ರಾಯಚೂರು | ಧಾರಾಕಾರ ಮಳೆಗೆ ಉಕ್ಕಿಹರಿದ ಹಳ್ಳಗಳು – ಆನೆಹೊಸೂರು ಸೇತುವೆ ಮುಳುಗಡೆ

    ರಾಯಚೂರು: ಜಿಲ್ಲೆಯ ಹಲವೆಡೆ ರಾತ್ರಿ ಸುರಿದ ಜೋರು ಮಳೆಗೆ ಹಳ್ಳ,ಕೊಳ್ಳಗಳು ತುಂಬಿ ಹರಿಯುತ್ತಿವೆ. ಜೊತೆಗೆ ಲಿಂಗಸುಗೂರು (Lingasuguru) ತಾಲೂಕಿನ ಆನೆಹೊಸೂರು (Anehosur) ಸೇತುವೆ ಮುಳುಗಡೆಯಾಗಿದೆ.

    ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಆನೆಹೊಸೂರು ಹಾಗೂ ಜಾಗೀರನಂದಿಹಾಳ ಗ್ರಾಮಗಳ ಮಧ್ಯದ ಸೇತುವೆ ಮುಳುಗಡೆಯಾಗಿದೆ. ಪರಿಣಾಮ ಗ್ರಾಮಸ್ಥರು ಪರದಾಡುವಂತಾಗಿದೆ. ಶಾಲೆಗೆ ಹೋಗುವ ಮಕ್ಕಳನ್ನು ಪೋಷಕರು ಹೆಗಲ ಮೇಲೆ ಹೊತ್ತು ಹಳ್ಳ ದಾಟಿಸುತ್ತಿದ್ದಾರೆ. ಇನ್ನೂ ಮಧ್ಯಂತರ ಪರೀಕ್ಷೆಗಳು ನಡೆಯುತ್ತಿದ್ದು, ಶಾಲಾ-ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ.ಇದನ್ನೂ ಓದಿ: ಬಾಗಲಕೋಟೆ ನಗರದಲ್ಲಿ ಹೆಚ್ಚಾಯ್ತು ಬೀದಿ ನಾಯಿಗಳ ಹಾವಳಿ – ಒಂದೇ ದಿನ 15 ಮಂದಿ ಮೇಲೆ ದಾಳಿ

    ಇಲ್ಲಿನ ನೀರಲಕೆರೆ, ಆನೆಹೊಸೂರು, ಜಾಗೀರನಂದಿಹಾಳ ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಅಲ್ಲದೇ ಲಿಂಗಸುಗೂರು, ಮುದ್ದೇಬಿಹಾಳಗೆ ತೆರಳುವ ಮಾರ್ಗಗಳು ಬಂದ್ ಆಗಿವೆ. ಜೋರು ಮಳೆ ಬಂದಾಗಲೆಲ್ಲಾ ಹಳ್ಳದ ಸೇತುವೆ ಮುಳುಗಡೆಯಾಗುತ್ತಿದ್ದು, ಸೇತುವೆಯ ಎತ್ತರವನ್ನು ಹೆಚ್ಚಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

  • ಬಸವಸಾಗರ ಡ್ಯಾಂಗೆ ಹೆಚ್ಚಿದ ಒಳಹರಿವು – ಉಕ್ಕಿ ಹರಿದ ಕೃಷ್ಣೆ, ಶೀಲಹಳ್ಳಿ ಬ್ರಿಡ್ಜ್ ಮುಳುಗಡೆ

    ಬಸವಸಾಗರ ಡ್ಯಾಂಗೆ ಹೆಚ್ಚಿದ ಒಳಹರಿವು – ಉಕ್ಕಿ ಹರಿದ ಕೃಷ್ಣೆ, ಶೀಲಹಳ್ಳಿ ಬ್ರಿಡ್ಜ್ ಮುಳುಗಡೆ

    ರಾಯಚೂರು: ಮಳೆ ಪ್ರಮಾಣ ಜಾಸ್ತಿಯಾದ ಹಿನ್ನೆಲೆ ಬಸವಸಾಗರ ಜಲಾಶಯಕ್ಕೆ (Basavasagar Dam) ಒಳಹರಿವು ಹೆಚ್ಚಾಗಿದ್ದು, ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ. ಪರಿಣಾಮ ರಾಯಚೂರಿನ (Raichuru) ಲಿಂಗಸುಗೂರು (Lingasuguru) ತಾಲೂಕಿನ ಶೀಲಹಳ್ಳಿ ಸೇತುವೆ ಪುನಃ ಮುಳುಗಡೆಯಾಗಿದೆ.ಇದನ್ನೂ ಓದಿ: ಗಣೇಶ ಚತುರ್ಥಿ – ಕುರುಡುಮಲೆ ವಿನಾಯಕನಿಗೆ ವಿಶೇಷ ಪೂಜೆ, ಅಲಂಕಾರ

    ಎರಡು ದಿನಗಳ ಹಿಂದೆಯಷ್ಟೇ ನದಿಯ ನೀರಿನ ಪ್ರಮಾಣ ಕಡಿಮೆಯಾಗಿ ಸೇತುವೆ ಸಂಚಾರಕ್ಕೆ ಮುಕ್ತವಾಗಿತ್ತು. ಇದೀಗ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಡ್ಯಾಂನಿಂದ 1.55 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ರಿಲೀಸ್ ಮಾಡಲಾಗಿದೆ. ಹೀಗಾಗಿ ಶೀಲಹಳ್ಳಿ ಸೇತುವೆ ಮತ್ತೆ ಮುಳುಗಡೆಯಾಗಿದೆ. ಇದರಿಂದ ಲಿಂಗಸುಗೂರು ತಾಲೂಕಿನ ಐದಾರು ಗ್ರಾಮಗಳ ರಸ್ತೆ ಸಂಪರ್ಕ ಕಡಿತವಾಗಿದ್ದು, ಶೀಲಹಳ್ಳಿ, ಹಂಚಿನಾಳ, ಯರಗೋಡಿ ಸಂಪರ್ಕ ಮಾರ್ಗ ಸಂಪೂರ್ಣ ಬಂದ್ ಆಗಿದೆ. ಹೀಗಾಗಿ ಗ್ರಾಮಸ್ಥರು ಲಿಂಗಸುಗೂರಿಗೆ ತೆರಳಲು ಸುಮಾರು 45 ಕಿ.ಮೀ ಸುತ್ತುವರೆದು ಪ್ರಯಾಣಿಸಬೇಕಿದೆ.

    ಹೆಚ್ಚು ಪ್ರಮಾಣದ ನೀರು ನದಿಗೆ ಹರಿದು ಬಂದಿದ್ದರಿಂದ ರೈತರ ಪಂಪ್ ಸೆಟ್‌ಗಳು ನೀರಲ್ಲಿ ಮುಳುಗಡೆಯಾಗಿವೆ. ಜಲಾಶಯಕ್ಕೆ ಸದ್ಯ 1.55 ಲಕ್ಷ ಕ್ಯೂಸೆಕ್ ಒಳಹರಿವು ಇದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಭಾರೀ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ನೀರಿನ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ನದಿ ಪಾತ್ರಕ್ಕೆ ತೆರಳದಂತೆ ಗ್ರಾಮಸ್ಥರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.ಇದನ್ನೂ ಓದಿ: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಉಗ್ರನಿಗೆ ಜೈಲಲ್ಲಿ ಇಡಿ ಡ್ರಿಲ್

  • ಬಸವಸಾಗರ ಡ್ಯಾಂನಿಂದ ಕೃಷ್ಣ ನದಿಗೆ 1.60 ಲಕ್ಷ ಕ್ಯೂಸೆಕ್ ನೀರು ರಿಲೀಸ್ – ಲಿಂಗಸೂಗುರು ಸೇತುವೆ ಮುಳುಗಡೆ

    ಬಸವಸಾಗರ ಡ್ಯಾಂನಿಂದ ಕೃಷ್ಣ ನದಿಗೆ 1.60 ಲಕ್ಷ ಕ್ಯೂಸೆಕ್ ನೀರು ರಿಲೀಸ್ – ಲಿಂಗಸೂಗುರು ಸೇತುವೆ ಮುಳುಗಡೆ

    ರಾಯಚೂರು/ಯಾದರಿಗಿ: ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾದ ಹಿನ್ನೆಲೆ ಬಸವಸಾಗರ ಜಲಾಶಯದಿಂದ  (Basavasagar Dam) ನದಿಗೆ ನೀರು ಬಿಡಲಾಗುತ್ತಿದ್ದು, ಪರಿಣಾಮ ಲಿಂಗಸುಗೂರು (Lingasuguru) ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ.ಇದನ್ನೂ ಓದಿ: ಉಪರಾಷ್ಟ್ರಪತಿ ಚುನಾವಣೆ – ನಿವೃತ್ತ ನ್ಯಾ. ಬಿ.ಸುದರ್ಶನ್ ರೆಡ್ಡಿ ಇಂಡಿಯಾ ಒಕ್ಕೂಟದ ಅಭ್ಯರ್ಥಿ

    ಭಾರೀ ಮಳೆಯ ಪರಿಣಾಮ ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ ಸದ್ಯ 1.55 ಲಕ್ಷ ಕ್ಯೂಸೆಕ್ ಒಳಹರಿವು ಇದ್ದು, ಜಲಾಶಯದ ಸುರಕ್ಷತಾ ದೃಷ್ಟಿಯಿಂದ 1.60 ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ರಿಲೀಸ್ ಮಾಡಲಾಗಿದೆ. ಪರಿಣಾಮ ರಾಯಚೂರಿನ ಲಿಂಗಸುಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿ, ಐದಾರು ಗ್ರಾಮಗಳ ರಸ್ತೆ ಸಂಪರ್ಕ ಕಡಿತವಾಗಿದೆ.

    ಶೀಲಹಳ್ಳಿ, ಹಂಚಿನಾಳ, ಯರಗೋಡಿ ಮಾರ್ಗ ಸಂಪೂರ್ಣ ಬಂದ್ ಆಗಿದೆ. ಹೀಗಾಗಿ ಗ್ರಾಮಸ್ಥರು ಲಿಂಗಸುಗೂರಿಗೆ ತೆರಳಲು ಸುಮಾರು 45 ಕಿ.ಮೀ ಸುತ್ತುವರೆದು ಪ್ರಯಾಣಿಸಬೇಕಿದೆ. ಇನ್ನೂ ಹೆಚ್ಚು ಪ್ರಮಾಣದ ನೀರು ನದಿಗೆ ಹರಿದು ಬಂದಿದ್ದರಿAದ ರೈತರ ಪಂಪ್ ಸೆಟ್‌ಗಳು ನೀರಲ್ಲಿ ಮುಳುಗಿ ಹೋಗಿವೆ. ನೀರಿನ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಗ್ರಾಮಸ್ಥರಿಗೆ ನದಿ ಪಾತ್ರಕ್ಕೆ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.ಇದನ್ನೂ ಓದಿ: ಹೊಂಬಾಳೆ ಫಿಲಮ್ಸ್‌ನ ‘ಕಾಂತಾರ ಚಾಪ್ಟರ್ 1’ ನಲ್ಲಿ ಕುಲಶೇಖರನ ಪಾತ್ರದಲ್ಲಿ ಗುಲ್ಶನ್ ದೇವಯ್ಯ

  • ಬೈಕ್ ಮೇಲೆ ಉರುಳಿ ಬಿದ್ದ ಬೃಹತ್ ಮರ – ದಂಪತಿ ಸಾವು, ಬದುಕುಳಿದ 3ರ ಮಗು

    ಬೈಕ್ ಮೇಲೆ ಉರುಳಿ ಬಿದ್ದ ಬೃಹತ್ ಮರ – ದಂಪತಿ ಸಾವು, ಬದುಕುಳಿದ 3ರ ಮಗು

    ರಾಯಚೂರು: ಬೈಕ್‌ನಲ್ಲಿ ಹೊರಟಿದ್ದಾಗ ಬೃಹತ್ ಮರವೊಂದು ಉರುಳಿ ಬಿದ್ದು ದಂಪತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಹೊರವಲಯದಲ್ಲಿ ನಡೆದಿದೆ.

    ರಮೇಶ್(25), ಅನಸೂಯ(22) ಮೃತ ದಂಪತಿ. ಪುತ್ರಿಯನ್ನು ಸೌಜನ್ಯ (3) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಉಪ ರಾಷ್ಟ್ರಪತಿ ಚುನಾವಣೆ| ಸಂಸತ್ತಿನಲ್ಲಿ ಎನ್‌ಡಿಎ, ವಿಪಕ್ಷಗಳ ಬಲ ಎಷ್ಟಿದೆ?

    ದಂಪತಿ ತಮ್ಮ ಮಗುವಿನ ಜೊತೆಗೆ ಬೈಕ್‌ನಲ್ಲಿ ಮುದಗಲ್ ಪಟ್ಟಣದಿಂದ ನಾಗಲಾಪೂರ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಬೃಹತ್ ಬಸರಿ ಮರವೊಂದು ಗಾಳಿಗೆ ಬುಡ ಸಮೇತ ಬೈಕ್ ಮೇಲೆ ಉರುಳಿ ಬಿದ್ದಿದೆ. ಪರಿಣಾಮ ಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದರು ಹಾಗೂ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿವೆ.

    ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೇ ಪತ್ನಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮುದಗಲ್ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

    ಸದ್ಯ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.ಇದನ್ನೂ ಓದಿ: 2024ರ ಲೋಕಸಭೆ ಚುನಾವಣೆ ವೇಳೆ ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ ಕಳ್ಳಾಟ: ರಾಹುಲ್ ಗಾಂಧಿ ಆರೋಪ

  • CRPF ಯೋಧನ ಮೇಲೆ ಮಾರಣಾಂತಿಕ ಹಲ್ಲೆ: ಆರೋಪಿಗಳು ಅರೆಸ್ಟ್

    CRPF ಯೋಧನ ಮೇಲೆ ಮಾರಣಾಂತಿಕ ಹಲ್ಲೆ: ಆರೋಪಿಗಳು ಅರೆಸ್ಟ್

    ರಾಯಚೂರು: ಸಿಆರ್‌ಪಿಎಫ್ ಯೋಧನ (CRPF Army) ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ರಾಯಚೂರಿನ (Raichuru) ಲಿಂಗಸುಗೂರಿನ ಕಸಬಾದಲ್ಲಿ ನಡೆದಿದೆ.

    ಹಲ್ಲೆಗೊಳಗಾಗ ಯೋಧನನ್ನು ಕಸಬಾ ಲಿಂಗಸುಗೂರು (Lingasuguru) ಗ್ರಾಮದ ಸಿಆರ್‌ಪಿಎಫ್ ಎಎಸ್‌ಐ ಚನ್ನಬಸಪ್ಪ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: 3 ದಿನಗಳಲ್ಲಿ 11 ಪಾಕ್ ಸ್ಪೈಗಳ ಬಂಧನ – ವ್ಲಾಗರ್, ವಿದ್ಯಾರ್ಥಿ, ಉದ್ಯಮಿ, ಗಾರ್ಡ್‌ಗಳಾಗಿದ್ದವರು ಬೇಹುಗಾರರಾಗಿ ಕೆಲಸ

    ದೆಹಲಿಯಿಂದ (Delhi) ಆಸ್ಸಾಂಗೆ (Assam) ವರ್ಗಾವಣೆಯಾದ ಹಿನ್ನೆಲೆ ರಜೆ ಮೇಲೆ ಊರಿಗೆ ಬಂದಿದ್ದ ಯೋಧನ ಮೇಲೆ ಹಲ್ಲೆ ನಡೆದಿದೆ. ಅಕ್ಕನ ಜಮೀನಿನ ಬದುವಿನ ವಿಚಾರದಲ್ಲಿ ಅಕ್ಕನ ಪರ ನ್ಯಾಯ ಕೇಳಿದ್ದರಿಂದ ಜಗಳವಾಗಿದ್ದು, ಪಕ್ಕದ ಜಮೀನಿನ ಅಮರೇಶ್, ಮಂಜುನಾಥ ಎಂಬುವವರು ಹಲ್ಲೆ ನಡೆಸಿದ್ದಾರೆ.

    ವಾಕಿಂಗ್ ಮಾಡುತ್ತಿದ್ದಾಗ ಏಕಾಏಕಿ ಬಂದ ಅಮರೇಶ್ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ಚನ್ನಬಸಪ್ಪ ತಪ್ಪಿಸಿಕೊಂಡು ಓಡಿದ್ದು, ಆದರೂ ಬಿಡದೇ ಬೆನ್ನಟ್ಟಿ ಹಲ್ಲೆಗೆ ಮುಂದಾಗಿದ್ದಾರೆ. ಆಗ ಸ್ಥಳೀಯರು ಸಹಾಯಕ್ಕೆ ಮುಂದಾಗಿದ್ದಾರೆ. ಸದ್ಯ ಗಾಯಾಳು ಯೋಧನನ್ನ ಲಿಂಗಸುಗೂರಿನ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ.

    ಸದ್ಯ ಈ ಘಟನೆ ಸಂಬಂಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.ಇದನ್ನೂ ಓದಿ: ಕೈ, ಕಾಲು ಕಟ್ಟಿ ಪೂಜಾರಿಯ ಕೊಲೆ – 3 ವಾರಗಳ ಹಿಂದೆಯೇ ಅರಣ್ಯದಲ್ಲಿ ಬೀಸಾಡಿರುವ ಶಂಕೆ

  • ಕೆಕೆಆರ್‌ಟಿಸಿ ಬಸ್‌ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

    ಕೆಕೆಆರ್‌ಟಿಸಿ ಬಸ್‌ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

    ರಾಯಚೂರು: ಜಿಲ್ಲೆಯ ಲಿಂಗಸುಗೂರು (Lingasuguru) ತಾಲೂಕಿನ ಮುದಗಲ್ ಬಳಿ ಕೆಕೆಆರ್‌ಟಿಸಿ ಬಸ್‌ನಲ್ಲೇ ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

    ಯಾದಗಿರಿಯ (Yadagiri) ಸುರಪುರ ತಾಲೂಕಿನ ಹೊಂಬಳಕಲ್ ಗ್ರಾಮದ ಶಾಂಭವಿ ಬಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ. ಇದನ್ನೂ ಓದಿ: ನಾನು ಚಿಕ್ಕಂದಿನಿಂದ ಶಿವನ ಭಕ್ತ: ಉಜ್ಜಯಿನಿಯ ಮಹಾಕಾಳೇಶ್ವರ ದೇಗುಲದಲ್ಲಿ ಯಶ್

    ಕಾರವಾರಕ್ಕೆ ಕೂಲಿ ಕೆಲಸಕ್ಕಾಗಿ ಗುಳೆ ಹೋಗಿದ್ದ ದಂಪತಿ ವಾಪಾಸ್ ಗ್ರಾಮಕ್ಕೆ ಮರಳುತ್ತಿದ್ದಾಗ ಬಸ್‌ನಲ್ಲೇ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಅದೇ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಆಶಾ ಕಾರ್ಯಕರ್ತೆ ಮೇರಿ ಎಂಬುವವರು ಹೆರಿಗೆ ಮಾಡಿಸಿದ್ದಾರೆ. ಇದನ್ನೂ ಓದಿ: ಬಿಸಿಸಿಐ ವಾರ್ಷಿಕ ಗುತ್ತಿಗೆ ಪ್ರಕಟ – ಯಾರಿಗೆ ಎಷ್ಟು ಕೋಟಿ? ಇಲ್ಲಿದೆ ಕಂಪ್ಲೀಟ್‌ ಲಿಸ್ಟ್‌

    ಹೆರಿಗೆ ಬಳಿಕ ಅಂಬ್ಯುಲೆನ್ಸ್ ಮೂಲಕ ಬಾಣಂತಿಯನ್ನು ಮುದಗಲ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು. ಸದ್ಯ ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಕೆಕೆಆರ್‌ಟಿಸಿ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯನ್ನು ಪ್ರಯಾಣಿಕರು ಶ್ಲಾಘಿಸಿದ್ದಾರೆ.