Tag: ಲಿಂಗಸೂರು

  • 2ನೇ ಮದುವೆಗೆ ಅಡ್ಡಿಯಾಗುತ್ತೆ ಎಂದು 14 ತಿಂಗಳ ಮಗುವನ್ನೇ ಕೊಂದ ಪಾಪಿ ತಂದೆ

    2ನೇ ಮದುವೆಗೆ ಅಡ್ಡಿಯಾಗುತ್ತೆ ಎಂದು 14 ತಿಂಗಳ ಮಗುವನ್ನೇ ಕೊಂದ ಪಾಪಿ ತಂದೆ

    ರಾಯಚೂರು: 2ನೇ ಮದುವೆಗೆ ಮಗು ಅಡ್ಡಿಯಾಗುತ್ತದೆ ಎಂದು ಪಾಪಿ ತಂದೆಯೊಬ್ಬ 14 ತಿಂಗಳ ತನ್ನ ಹಸುಗೂಸನ್ನು ಕೊಂದಿರುವ ಘಟನೆ ರಾಯಚೂರು (Raicur) ಜಿಲ್ಲೆಯ ಲಿಂಗಸುಗೂರು (Lingasur) ತಾಲೂಕಿನ ಕನಸಾವಿ ಗ್ರಾಮದಲ್ಲಿ ನಡೆದಿದೆ.

    14 ತಿಂಗಳ ಅಭಿನವ್ ಪಾಪಿ ತಂದೆಯ ಕೈಯಲ್ಲೇ ಪ್ರಾಣ ಬಿಟ್ಟ ನತದೃಷ್ಟ ಮಗು. ತನ್ನ ಮಗುವನ್ನೇ ಕೊಂದು 3 ದಿನ ಕಲ್ಲಿನ ಅಡಿಯಲ್ಲಿ ಮುಚ್ಚಿಟ್ಟ ಪಾಪಿ ತಂದೆ ಮಹಾಂತೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಂದು ಮದುವೆಯಾಗುವ ಆಸೆಯಿಂದ ಮಗುವನ್ನು ಕೊಂದು ಕಲ್ಲಿನ ಅಡಿಯಲ್ಲಿ 3 ದಿನ ಮುಚ್ಚಿಟ್ಟಿದ್ದ ಆರೋಪಿ ಕೊನೆಗೂ ಸಿಕ್ಕಿಬಿದ್ದಿದ್ದಾನೆ.

    ಪರ ಪುರುಷನೊಂದಿಗೆ ಪತ್ನಿ ಅನೈತಿಕ ಸಂಬಂಧ ಹೊಂದಿರುವ ಬಗ್ಗೆ ಅನುಮಾನ ಹೊಂದಿದ್ದ ಮಹಾಂತೇಶ್ ಮತ್ತೊಂದು ಮದುವೆಗೆ ತಯಾರಿ ನಡೆಸಿದ್ದ. ಮರು ಮದುವೆಗೆ ಮಗು ಅಡ್ಡಿಯಾಗುತ್ತದೆ ಎಂದು ಕೊಲೆ ಮಾಡಿದ್ದಾನೆ. ಇದನ್ನೂ ಓದಿ: 2.5 ಕೋಟಿ ರೂ.ಗೆ ಬೇಡಿಕೆ, ಕೊಡದಿದ್ದರೆ ಎನ್‍ಕೌಂಟರ್ ಬೆದರಿಕೆ – 9 ಪೊಲೀಸರು ಅರೆಸ್ಟ್

    ಅನುಮಾನದ ಮೇಲೆ ಪೊಲೀಸರು ಹಂತಕ ತಂದೆಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಮೊದಲು ಮಗುವನ್ನು ಸುಟ್ಟು ಹಾಕಿರುವುದಾಗಿ ಮಾಹಿತಿ ನೀಡಿದ್ದ. ಬಳಿಕ ಕಲ್ಲಿನ ಅಡಿ ಮುಚ್ಚಿಟ್ಟ ಮಗುವನ್ನು ತೋರಿಸಿದ್ದಾನೆ. ಘಟನೆ ಹಿನ್ನೆಲೆ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೈದಿಗಳಿಗೆ ಸೇಬು, ಮೂಸಂಬಿ ಹಣ್ಣಿನಲ್ಲಿ ಗಾಂಜಾ ಸಪ್ಲೈ – ಮೂವರು ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೇಲಾಧಿಕಾರಿಗಳ ಕಿರುಕುಳ ತಾಳಲಾರದೇ ನಿರ್ವಾಹಕ ಆತ್ಮಹತ್ಯೆ!

    ಮೇಲಾಧಿಕಾರಿಗಳ ಕಿರುಕುಳ ತಾಳಲಾರದೇ ನಿರ್ವಾಹಕ ಆತ್ಮಹತ್ಯೆ!

    ರಾಯಚೂರು: ಮೇಲಾಧಿಕಾರಿಗಳ ಕಿರುಕುಳ ತಾಳಲಾರದೇ ವಿಷ ಸೇವಿಸಿ, ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಎನ್‍ಇ ಕೆಎಸ್‌ಆರ್‌ಟಿಸಿ ಲಿಂಗಸೂರು ಡಿಪೋ ಬಸ್ ನಿರ್ವಾಹಕರೊಬ್ಬರು ಶನಿವಾರ ತಡರಾತ್ರಿ ಮೃತಪಟ್ಟಿದ್ದಾರೆ.

    ಲಿಂಗಸೂರು ಜಂಗಿರಾಂಪುರ ತಾಂಡಾ ಟೋಪಣ್ಣ ಆತ್ಮಹತ್ಯೆ ಮಾಡಿಕೊಂಡ ನಿರ್ವಾಹಕ. ಟೋಪಣ್ಣನ ಸಾವಿಗೆ ಮೇಲಾಧಿಕಾರಿಗಳಾದ ನಾಗರಾಜ್, ರಾಘವೇಂದ್ರ ಕಾರಣ ಅಂತ ಮೃತನ ಕುಟುಂಬದವರು ಡಿಪೋ ಮುಂದೆ ಶವವಿಟ್ಟು, ಬಸ್ಸುಗಳು ಹೊರಗೆ ಹೋಗದಂತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಕಿರುಕುಳ ಕೊಟ್ಟ ಮೇಲಾಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

    ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರೂ ಕೆಲವರು ಕಲ್ಲು ತೂರಾಟ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.

    ಏನಿದು ಪ್ರಕರಣ?
    ಸೆಪ್ಟಂಬರ್ 3 ರಂದು ಟೋಪಣ್ಣ ವಿಷ ಸೇವಿಸಿದ್ದರು. ತಕ್ಷಣವೇ ಅವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯವಾಗಿದ್ದರಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ತಡರಾತ್ರಿ ಟೋಪಣ್ಣ ಮೃತಪಟ್ಟಿದ್ದರು. ಇದರಿಂದ ಆಕ್ರೋಶ ವ್ಯಕ್ತಪಡಿಸಿದ ಮೃತರ ಸಂಬಂಧಿಕರು ಡಿಪೋ ಮುಂದೆ ಟೆಂಟ್ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

    ಮೃತ ಟೋಪಣ್ಣ ಅವರನ್ನು ಮೇಲಾಧಿಕಾರಿಗಳು ಲಿಂಗಸುಗೂರಿನಿಂದ ಸಿಂಧನೂರಿಗೆ ವರ್ಗಾವಣೆ ಮಾಡಿದ್ದರು. ಆದರೆ ಕೆಲಸ ನೀಡದೇ ಲಂಚಕೊಡುವಂತೆ ಪೀಡಿಸುತ್ತಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

    ಮೃತನ ಕುಟುಂಬದ ಜೊತೆ ಮಾತುಕತೆ ನಡೆಸಿದ ಅಧಿಕಾರಿಗಳು, ಆಸ್ಪತ್ರೆಯ ಖರ್ಚು, ಕುಟುಂಬದ ಒಬ್ಬರಿಗೆ ಉದ್ಯೋಗ ಹಾಗೂ ಸ್ವಲ್ಪ ಮಟ್ಟದ ಪರಿಹಾರ ಧನವನ್ನು ನೀಡುವುದಾಗಿ ಒಪ್ಪಂದ ಮಾಡಿಕೊಂಡಿದ್ದಾರೆ ಎನ್ನುವ ವಿಚಾರ ತಿಳಿದುಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://youtu.be/JKTPSKrbGdk

  • ಮೇಕೆ ಮರಿಗಳಿಗೆ ಹಾಲುಣಿಸುವ ಆಕಳು!

    ಮೇಕೆ ಮರಿಗಳಿಗೆ ಹಾಲುಣಿಸುವ ಆಕಳು!

    ರಾಯಚೂರು: ಲಿಂಗಸಗೂರು ತಾಲೂಕಿನ ಕನ್ನಾಪುರಹಟ್ಟಿ ಗ್ರಾಮದಲ್ಲಿ ಹಸುವೊಂದು ನಿತ್ಯವೂ ಮೇಕೆ ಮರಿಗಳಿಗೆ ಹಾಲುಣಿಸುವ ಮೂಲಕ ಅಚ್ಚರಿಯನ್ನುಂಟು ಮಾಡಿದೆ.

    ಕನ್ನಾಪುರಹಟ್ಟಿ ಗ್ರಾಮದ ಯಮನೂರು ಮೇಗೂರು ಅವರ ಮನೆಯಲ್ಲಿ ಈ ಅಚ್ಚರಿ ನಡೆದಿದ್ದು, ಯಮನೂರು ಅವರಿಗೆ ಮಾತ್ರ ಹಾಲು ಕರಿಯಲು ಅವಕಾಶ ನೀಡುತ್ತದೆ. ಬೇರೆಯವರು ಕೆಚ್ಚಲಿಗೆ ಕೈ ಹಾಕುವಂತಿಲ್ಲ. ಒಂದು ವೇಳೆ ಹಾಗೇ ಗೊತ್ತಿಲ್ಲದೇ ಹಾಲು ಕರಿಯಲು ಹೋದರೆ ಆಕಳು ಒದೆಯುತ್ತದೆ.

    ಯಮನೂರು ಅವರು ಆಕಳು ಜೊತೆಗೆ ಮೇಕೆಯನ್ನೂ ಸಾಕಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಮೇಕೆಯೂ ನಾಲ್ಕು ಮರಿಗಳಿಗೆ ಜನ್ಮ ನೀಡಿದೆ. ಆದರೆ ಅದರ ಮೊಲೆಯಲ್ಲಿ ಹಾಲು ಬರುತ್ತಿಲ್ಲ. ಹೀಗಾಗಿ ಮೇಕೆ ಮರಿಗಳು ಕೊಟ್ಟಿಗೆಯಲ್ಲಿದ್ದ ಆಕಳು ಮೊಲೆಗೆ ಬಾಯಿ ಇಟ್ಟು ಹಾಲು ಕುಡಿಯುತ್ತಿವೆ. ಇದನ್ನೇ ಅಭ್ಯಾಸ ಮಾಡಿಕೊಂಡಿರುವ ಮರಿಗಳು ನಿತ್ಯವೂ ಆಕಳಿನ ಮೊಲೆ ಹಾಲನ್ನು ಕುಡಿದು ಬೆಳೆಯುತ್ತಿರುವುದು ಗ್ರಾಮಸ್ಥರ ಅಚ್ಚರಿಗೆ ಕಾರಣವಾಗಿದೆ.