Tag: ಲಿಖಿತ್ ಶೆಟ್ಟಿ

  • ನಾಯಕಿ ತೇಜಸ್ವಿನಿ ಹುಟ್ಟು ಹಬ್ಬಕ್ಕೆ ‘ಫುಲ್ ಮೀಲ್ಸ್’ ಪೋಸ್ಟರ್

    ನಾಯಕಿ ತೇಜಸ್ವಿನಿ ಹುಟ್ಟು ಹಬ್ಬಕ್ಕೆ ‘ಫುಲ್ ಮೀಲ್ಸ್’ ಪೋಸ್ಟರ್

    ಸಂಕಷ್ಟಕರ ಗಣಪತಿ,  ಫ್ಯಾಮಿಲಿ ಪ್ಯಾಕ್, ಅಬ್ಬಬ್ಬ ಚಿತ್ರಗಳ ಖ್ಯಾತಿಯ ನಾಯಕ ನಟ ಲಿಖಿತ್ ಶೆಟ್ಟಿ (Likhit Shetty) ನಟಿಸಿ ನಿರ್ಮಿಸುತ್ತಿರುವ ‘ಫುಲ್ ಮೀಲ್ಸ್’ (Full Meals) ಚಿತ್ರದ ನಾಯಕಿ ತೇಜಸ್ವಿನಿ ಶರ್ಮ (Tejaswini) ಹುಟ್ಟು ಹಬ್ಬದ ಅಂಗವಾಗಿ ಚಿತ್ರತಂಡ  ಬರ್ತ್ ಡೇ ಫೋಸ್ಟರ್ ಅನ್ನು ಬಿಡುಗಡೆ ಮಾಡಿದೆ. ತ್ರಿಕೋನ ಪ್ರೆಮಕಥೆ ಹೊಂದಿರುವ ಸಿನೆಮಾದಲ್ಲಿ ನಾಯಕ ಲಿಖಿತ್ ಶೆಟ್ಟಿ ನಾಯಕಿಯರಾದ ತೇಜಸ್ವಿನಿ ಶರ್ಮ ಮತ್ತು ಖುಷಿ ರವಿಯೊಟ್ಟಿಗಿರುವ ವಿಭಿನ್ನ ಭಂಗಿಯ, ಭಾವದ ಪೋಸ್ಟರ್ ನೋಡುಗರ ಗಮನ ಸೆಳೆದಿದ್ದು, ಸಿನೆಮಾದ ಬಗ್ಗೆ ಕುತೂಹಲ ಹೆಚ್ಚಿಸಿದೆ.

    ತೇಜಸ್ವಿನಿ ಶರ್ಮ ಚಿತ್ರದಲ್ಲಿ  ಮೇಕಪ್ ಆರ್ಟಿಸ್ಟ್  ಪಾತ್ರವನ್ನು ಮಾಡಿದ್ದು, ಅವರ ಪಾತ್ರವನ್ನು ತೆರೆಯ ಮೇಲೆ ನೋಡಲು ಸಾಕಷ್ಟು ಕಾತುರರಾಗಿದ್ದಾರೆ..  ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಬಹುತೇಕ ಮುಗಿದಿದ್ದು, ಸಧ್ಯಕ್ಕೆ ಹಿನ್ನೆಲೆ ಸಂಗೀತದ ಕೆಲಸ ನಡೆಯುತ್ತಿದ್ದು, ವರ್ಷಾಂತ್ಯದೊಳಗೆ ಚಿತ್ರವನ್ನು ತೆರೆಗೆ ತರುವ ಯೋಚನೆಯಲ್ಲಿ ಚಿತ್ರತಂಡವಿದೆ.       ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ಸುತ್ತುವ ಕಥಾ ಹಂದರವನ್ನು ಹೊಂದಿರುವ ಸಿನೆಮಾ, ಮನೋರಂಜನೆಯ ಜೊತೆಗೆ ಸಾಕಷ್ಟು ಹೊಸ ವಿಷಯಗಳನ್ನು ಒಳಗೊಂಡಿದ್ದು, ಪ್ರೇಕ್ಷಕರು ಸಿನೆಮಾವನ್ನು ಇಷ್ಟಪಡುತ್ತಾರೆಂಬ ವಿಶ್ವಾಸ ಚಿತ್ರತಂಡಕ್ಕಿದೆ.  . ಲಿಖಿತ್ ಶೆಟ್ಟಿಗೆ ನಾಯಕಿಯರಾಗಿ ಖುಷೀ ರವಿ ಮತ್ತು ತೇಜಸ್ವಿನಿ ಶರ್ಮ ಅಭಿನಯಿಸಿದ್ದು, ಚಿತ್ರದುರ್ಗದ ಪ್ರತಿಭೆ   ಎನ್. ವಿನಾಯಕ ಚಿತ್ರದ ಮೂಲಕ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಸಿನೆಮಾಗೆ  ಹರೀಶ್ ಗೌಡ ಸಂಭಾಷಣೆ ಬರೆದಿದ್ದು, ಮನೋಹರ್ ಜೋಷಿ ಛಾಯಾಗ್ರಹಣ,  ಗುರು ಕಿರಣ್ ಸಂಗೀತ, ದೀಪು ಎಸ್ ಕುಮಾರ್ ಸಂಕಲನ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ, ಅರ್ಜುನ್ ರಾಜ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.

     

    ಉಳಿದಂತೆ ತಾರಾಗಣದಲ್ಲಿ ರಂಗಾಯಣ ರಘು, ಸೂರಜ್ ಲೋಕ್ರೆ,  ವಿಜಯ್ ಚಂಡೂರ್, ರವಿ ಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಚಂದ್ರಕಲಾ ಮೋಹನ್, ಹೂನ್ನವಳ್ಳಿ ಕೃಷ್ಣ, ರಮೇಶ್ ಪಂಡಿತ್, ಚೇತನ್ ದುರ್ಗಾ, ನಾಗೇಂದ್ರ ಅರಸ್, ಮೂಗು ಸುರೇಶ್ ಸೇರಿದಂತೆ ಬಹು ದೊಡ್ಡ ತಾರಾ ಬಳಗವೇ ಇದೆ.

  • ಲಿಖಿತ್ ಶೆಟ್ಟಿ ಹುಟ್ಟುಹಬ್ಬದಂದು ‘ಫುಲ್ ಮೀಲ್ಸ್’ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್

    ಲಿಖಿತ್ ಶೆಟ್ಟಿ ಹುಟ್ಟುಹಬ್ಬದಂದು ‘ಫುಲ್ ಮೀಲ್ಸ್’ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್

    ಸಂಕಷ್ಟಕರ ಗಣಪತಿ, ಫ್ಯಾಮಿಲಿ ಪ್ಯಾಕ್, ಅಬ್ಬಬ್ಬ ಚಿತ್ರಗಳ ಖ್ಯಾತಿಯ ನಟ ಲಿಖಿತ್ ಶೆಟ್ಟಿ (Likith Shetty) ಪ್ರಸ್ತುತ ‘ಫುಲ್ ಮೀಲ್ಸ್’ ಚಿತ್ರವನ್ನು ನಿರ್ಮಿಸುವುದರ ಜೊತೆಗೆ ನಾಯಕ ನಟನಾಗೂ ನಟಿಸುತ್ತಿದ್ದಾರೆ. ಈಗ ‘ಫುಲ್ ಮೀಲ್ಸ್’ (Full Meals) ಚಿತ್ರದ ನಾಯಕ ಲಿಖಿತ್ ಶೆಟ್ಟಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ‘ಫುಲ್ ಮೀಲ್ಸ್’ ಚಿತ್ರತಂಡ ಲಿಖಿತ್ ಶೆಟ್ಟಿ ಬರ್ತ್‌ಡೇಗೆ (Birthday) ಶುಭಾಶಯ ಕೋರಿದೆ.

    ಲಿಖಿತ್ ಶೆಟ್ಟಿ ಇಬ್ಬರು ನಾಯಕಿಯರ ಸಾಂಗತ್ಯದಲ್ಲಿರುವ ರೊಮ್ಯಾಂಟಿಕ್ ಥೀಮ್ ಹೊಂದಿರುವ ಈ ಸುಂದರವಾದ ಮೋಷನ್ ಪೋಸ್ಟರ್ ನೋಡುಗರ ಗಮನ ಸೆಳೆದಿದ್ದು, ಸಿನಿಮಾದ ಬಗ್ಗೆ ಕುತೂಹಲ ಮೂಡಿಸಿದೆ. ಈ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಬಹುತೇಕ ಸಂಪೂರ್ಣವಾಗಿದ್ದು, ಸದ್ಯ ರೀ ರೆಕಾರ್ಡಿಂಗ್ ನಡೆಯುತ್ತಿದೆ. ವರ್ಷಾಂತ್ಯದೊಳಗೆ ಚಿತ್ರವನ್ನು ತೆರೆಗೆ ತರುವ ಯೋಚನೆಯಲ್ಲಿರುವುದಾಗಿ ಲಿಖಿತ್ ಶೆಟ್ಟಿ ತಿಳಿಸಿದ್ದಾರೆ.

    ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ಸುತ್ತುವ ಕಥಾ ಹಂದರವನ್ನು ಹೊಂದಿರುವ ಸಿನಿಮಾ, ಮನೋರಂಜನೆಯ ಜೊತೆಗೆ ಸಾಕಷ್ಟು ಹೊಸ ವಿಷಯಗಳನ್ನು ಒಳಗೊಂಡಿದ್ದು, ಪ್ರೇಕ್ಷಕರು ಸಿನೆಮಾವನ್ನು ಇಷ್ಟಪಡುತ್ತಾರೆಂಬ ವಿಶ್ವಾಸ ಲಿಖಿತ್ ಶೆಟ್ಟಿ ಅವರಿಗಿದೆ. ಇದನ್ನೂ ಓದಿ:ಸಂಜಯ್ ದತ್ ಜೊತೆಗಿನ ಫೋಟೋ ಹಂಚಿಕೊಂಡ ಉಪ್ಪಿಯ ಟ್ರೋಲ್ ಹುಡುಗಿ ರೀಷ್ಮಾ

    ಚಿತ್ರದುರ್ಗದ ಪ್ರತಿಭೆ ಎನ್. ವಿನಾಯಕ ಚಿತ್ರದ ಮೂಲಕ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಸಿನೆಮಾಗೆ ಹರೀಶ್ ಗೌಡ ಸಂಭಾಷಣೆ ಬರೆದಿದ್ದು, ಮನೋಹರ್ ಜೋಷಿ ಛಾಯಾಗ್ರಹಣ, ಗುರು ಕಿರಣ್ ಸಂಗೀತ, ದೀಪು ಎಸ್ ಕುಮಾರ್ ಸಂಕಲನ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ ಚಿತ್ರಕ್ಕಿದೆ.

    ಲಿಖಿತ್ ಶೆಟ್ಟಿಗೆ ನಾಯಕಿಯರಾಗಿ ಖುಷಿ ರವಿ (Kushee Ravi)  ಮತ್ತು ತೇಜಸ್ವಿನಿ ಶರ್ಮ ಅಭಿನಯಿಸಿದ್ದು, ಉಳಿದಂತೆ ತಾರಾಗಣದಲ್ಲಿ ರಂಗಾಯಣ ರಘು, ಸೂರಜ್ ಲೋಕ್ರೆ, ವಿಜಯ್ ಚಂಡೂರ್, ರವಿ ಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಚಂದ್ರಕಲಾ ಮೋಹನ್, ಹೂನ್ನವಳ್ಳಿ ಕೃಷ್ಣ, ರಮೇಶ್ ಪಂಡಿತ್, ಚೇತನ್ ದುರ್ಗಾ, ನಾಗೇಂದ್ರ ಅರಸ್, ಮೂಗು ಸುರೇಶ್ ಸೇರಿದಂತೆ ಬಹು ದೊಡ್ಡ ತಾರಾ ಬಳಗವೇ ಇದೆ.

  • ಯುಗಾದಿ ಹಬ್ಬಕ್ಕೆ ‘ಫುಲ್ ಮಿಲ್ಸ್’ ಚಿತ್ರದ ಸ್ಪೆಷಲ್ ಪೋಸ್ಟರ್

    ಯುಗಾದಿ ಹಬ್ಬಕ್ಕೆ ‘ಫುಲ್ ಮಿಲ್ಸ್’ ಚಿತ್ರದ ಸ್ಪೆಷಲ್ ಪೋಸ್ಟರ್

    ಸಂಕಷ್ಟಕರ ಗಣಪತಿ, ಫುಲ್ ಮಿಲ್ಸ್ , ಅಬ್ಬಬ್ಬ ಚಿತ್ರಗಳ ಖ್ಯಾತಿಯ ನಾಯಕ ನಟ ಲಿಖಿತ್ ಶೆಟ್ಟಿ ನಟಿಸಿ, ನಿರ್ಮಿಸುತ್ತಿರುವ ‘ಫುಲ್ ಮೀಲ್ಸ್’ ಚಿತ್ರತಂಡ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದೆ. ಚಿತ್ರದ ಇಬ್ಬರು ನಾಯಕಿಯರಾದ ಖುಷಿ ರವಿ ಮತ್ತು ತೇಜಸ್ವಿನಿ ಶರ್ಮ ಒಂದೇ ಬಾಳೆ ಎಲೆಯಲ್ಲಿ ಊಟ ಮಾಡುತ್ತಿರುವ ಪೋಸ್ಟರ್ ಇದಾಗಿದ್ದು,  ಎಲ್ಲರೂ ಒಟ್ಟಿಗೆ ಸೇರಿ ಮಾಡುವ ಸಂಭ್ರಮವೇ ಹಬ್ಬ ಎಂಬ ಥೀಮ್ ಮೇಲೆ ತಯಾರಾಗಿರುವ ಈ ಪೋಸ್ಟರ್ ಸುಂದರವಾಗಿ ಕಾಣುತ್ತಿದೆ.  ನೋಡುಗರ ಗಮನವನ್ನು ಸೆಳೆದಿದೆ.   ಸಿನೆಮಾಗೆ ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲವು ಕೆಲಸಗಳು ಬಾಕಿಯಿದ್ದು, ಆದಷ್ಟು ಶೀಘ್ರದಲ್ಲಿ ಸಿನೆಮಾವನ್ನು ತೆರೆಗೆ ತರುವ ಪ್ರಯತ್ನದಲ್ಲಿ ಚಿತ್ರತಂಡವಿದೆ.

    ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ಸುತ್ತುವ ಕಥಾ ಹಂದರವನ್ನು ಹೊಂದಿರುವ ಈ ಸಿನೆಮಾ, ಮನೋರಂಜನೆಯ ಜೊತೆಗೆ ಸಾಕಷ್ಟು ಹೊಸ ವಿಷಯಗಳನ್ನು ಒಳಗೊಂಡಿದ್ದು, ಪ್ರೇಕ್ಷಕರು ಸಿನೆಮಾವನ್ನು ಇಷ್ಟಪಡುತ್ತಾರೆಂಬ ವಿಶ್ವಾಸ ಚಿತ್ರತಂಡಕ್ಕಿದೆ.

    ಚಿತ್ರದುರ್ಗದ ಪ್ರತಿಭೆ ಎನ್. ವಿನಾಯಕ ಈ ಚಿತ್ರದ ಮೂಲಕ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ.   ಹರೀಶ್ ಗೌಡ ಸಂಭಾಷಣೆ ಬರೆದಿದ್ದು, ಮನೋಹರ್ ಜೋಷಿ ಛಾಯಾಗ್ರಹಣ,  ಗುರು ಕಿರಣ್ ಸಂಗೀತ, ದೀಪು ಎಸ್ ಕುಮಾರ್ ಸಂಕಲನವಿದೆ. ಉಳಿದಂತೆ ತಾರಾಗಣದಲ್ಲಿ ರಂಗಾಯಣ ರಘು, ವಿಜಯ್ ಚಂಡೂರ್, ರವಿ ಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಚಂದ್ರಕಲಾ ಮೋಹನ್, ಸೂರಜ್ ಲೋಕ್ರೆ, ಹೂನ್ನವಳ್ಳಿ ಕೃಷ್ಣ, ರಮೇಶ್ ಪಂಡಿತ್, ನಾಗೇಂದ್ರ ಅರಸ್, ಮೂಗು ಸುರೇಶ್ ಮುಂತಾದವರಿದ್ದಾರೆ.

  • ಖುಷಿ ಹುಟ್ಟು ಹಬ್ಬಕ್ಕೆ ‘ಫುಲ್ ಮೀಲ್ಸ್’ ಪೋಸ್ಟರ್

    ಖುಷಿ ಹುಟ್ಟು ಹಬ್ಬಕ್ಕೆ ‘ಫುಲ್ ಮೀಲ್ಸ್’ ಪೋಸ್ಟರ್

    ಸಂಕಷ್ಟಕರ ಗಣಪತಿ, ಪಿ ಆರ್ ಕೆ ಪ್ರೊಡಕ್ಷನ್ಸ್ ನ ಫ್ಯಾಮಿಲಿ ಪ್ಯಾಕ್ ಚಿತ್ರಗಳ ನಾಯಕ ನಟ ಲಿಖಿತ್ ಶೆಟ್ಟಿ ನಟಿಸಿ ನಿರ್ಮಿಸುತ್ತಿರುವ ಫುಲ್ ಮೀಲ್ಸ್  (Full Meals) ಚಿತ್ರದ ನಾಯಕಿ ಖುಷಿ ರವಿ (Khushi Ravi) ಹುಟ್ಟು ಹಬ್ಬದ ಅಂಗವಾಗಿ ಚಿತ್ರತಂಡ ಬರ್ತ್ ಡೇ (Likhit Shetty) ಫೋಸ್ಟರ್ ಅನ್ನು ಬಿಡುಗಡೆ ಮಾಡಿದೆ. ಇತ್ತೀಚೆಗಷ್ಟೇ ಚಿತ್ರೀಕರಣ ಮುಗಿಸಿ, ಕುಂಬಳಕಾಯಿ ಶಾಸ್ತ್ರ ಮುಗಿಸಿದ ಚಿತ್ರತಂಡ, ಚಿತ್ರೀಕರಣ ಕೊನೆಯ ದಿನ, ಖುಷಿ ರವಿ ಅವರನ್ನು ನೆನಪಿಸಿಕೊಂಡ ತಕ್ಷಣ ಯಾವ ತಿನ್ನುವ ಪದಾರ್ಥ ನೆನಪಾಗುತ್ತದೆ ಎಂಬ ವಿಭಿನ್ನ ಪ್ರಶ್ನೆಗೆ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿ, ಆ ವೀಡಿಯೋವನ್ನು ಖುಷಿ ರವಿ ಅವರಿಗೆ ಉಡುಗೊರೆಯಾಗಿ ನೀಡಿದ್ದಾರೆ.

    ಚಿತ್ರದ ಮತ್ತೋರ್ವ ನಾಯಕಿ ತೇಜಸ್ವಿನಿ ಶರ್ಮ ಈ ವೀಡಿಯೋದ ರೂವಾರಿಯಾಗಿದ್ದು, ತನ್ನ ಸಹನಟಿ ಮತ್ತು ಸ್ನೇಹಿತೆಗೆ ಹುಟ್ಟು ಹಬ್ಬಕ್ಕೆ ವಿಶೇಷ ಉಡುಗೊರೆ ನೀಡಿದ್ದಾರೆ. ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ಸುತ್ತುವ ಕಥಾ ಹಂದರವನ್ನು ಹೊಂದಿರುವ ‘ಫುಲ್ ಮೀಲ್ಸ್’ ನಲ್ಲಿ  ಖುಷಿ ರವಿ ‘ಪೂಜಾ’ ಹೆಸರಿನ ಪಾತ್ರ ನಿರ್ವಹಿಸುತ್ತಿದ್ದು, ಇದುವರೆಗಿನ ಅವರ ಎಲ್ಲಾ ಪಾತ್ರಗಳಿಗಿಂತ ವಿಭಿನ್ನ ರೀತಿಯ ಪಾತ್ರ ಇದಾಗಿದ್ದು, ಜನರು ಪಾತ್ರವನ್ನು ಖಂಡಿತ ಇಷ್ಟಪಡುತ್ತಾರೆಂಬ ವಿಶ್ವಾಸವನ್ನು ಹೊಂದಿದ್ದಾರೆ.

    ಯುವ ಪ್ರತಿಭೆ  ಎನ್. ವಿನಾಯಕ ಚಿತ್ರದ ಮೂಲಕ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹರೀಶ್ ಗೌಡ ಸಂಭಾಷಣೆ ಬರೆದಿದ್ದು, ಮನೋಹರ್ ಜೋಷಿ ಛಾಯಾಗ್ರಹಣ,  ಗುರು ಕಿರಣ್ ಸಂಗೀತ, ದೀಪು ಎಸ್ ಕುಮಾರ್ ಸಂಕಲನ ಚಿತ್ರಕ್ಕಿದೆ.

    ಉಳಿದಂತೆ ತಾರಾಗಣದಲ್ಲಿ ರಂಗಾಯಣ ರಘು, ವಿಜಯ್ ಚಂಡೂರ್, ರವಿ ಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಚಂದ್ರಕಲಾ ಮೋಹನ್, ಸೂರಜ್ ಲೋಕ್ರೆ, ಹೊನ್ನವಳ್ಳಿ ಕೃಷ್ಣ, ರಮೇಶ್ ಪಂಡಿತ್, ನಾಗೇಂದ್ರ ಅರಸ್, ಮೂಗು ಸುರೇಶ್ ಸೇರಿದಂತೆ ದೊಡ್ಡ ತಾರಾ ಬಳಗವೇ ಇದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಆದಷ್ಟು ಬೇಗ ಮುಗಿಸಿ, ಶೀಘ್ರದಲ್ಲೇ ಚಿತ್ರವನ್ನು ತೆರೆಗೆ ತರುವ ಉತ್ಸಾಹದಲ್ಲಿ ಚಿತ್ರತಂಡವಿದೆ.

  • ‘ಫುಲ್ ಮೀಲ್ಸ್’ ಶೂಟಿಂಗ್ ಮುಗಿಸಿದ ಲಿಖಿತ್ ಶೆಟ್ಟಿ

    ‘ಫುಲ್ ಮೀಲ್ಸ್’ ಶೂಟಿಂಗ್ ಮುಗಿಸಿದ ಲಿಖಿತ್ ಶೆಟ್ಟಿ

    ಲಿಖಿತ್ ಶೆಟ್ಟಿ (Likhit Shetty) ನಾಯನಾಗಿ ನಟಿಸಿರುವ ‘ಫುಲ್ ಮೀಲ್ಸ್’ (Full Meals) ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.  ಬೆಂಗಳೂರಿನ ಅರಮನೆ ಆವರಣದಲ್ಲಿ ಅದ್ದೂರಿಯಾಗಿ ಚಿತ್ರೀಕರಣ (Shooting) ಆರಂಭಿಸಿದ್ದ ಚಿತ್ರತಂಡ, ಕನಕಪುರ ರಸ್ತೆಯ ರೆಸಾರ್ಟ್ ಒಂದರ, ರಮಣೀಯ ಸ್ಥಳದಲ್ಲಿ ಕುಂಬಳಕಾಯಿ ಒಡೆದು ಚಿತ್ರೀಕರಣ ಮುಗಿಸಿದೆ.  ಚಿತ್ರದ ಉಳಿದ ಪೋಸ್ಟ್ ಪ್ರೊಡಕ್ಷನ್ ಕೆಲಸವನ್ನು ಆದಷ್ಟು ಬೇಗ ಮುಗಿಸಿ, ಶೀಘ್ರದಲ್ಲೇ ತೆರೆಗೆ ತರುವ ಉತ್ಸಾಹದಲ್ಲಿ ಚಿತ್ರತಂಡವಿದೆ.

    ಈ ಹಿಂದೆ ‘ಸಂಕಷ್ಟ ಕರ ಗಣಪತಿ’ ‘ಫ್ಯಾಮಿಲಿ ಪ್ಯಾಕ್’ ಸಿನಿಮಾಗಳ ಮೂಲಕ ಕನ್ನಡ ಪ್ರೇಕ್ಷಕರಿಗೆ ಹತ್ತಿರವಾಗಿದ್ದ ನಾಯಕ ಲಿಖಿತ್ ಶೆಟ್ಟಿ, ಫುಲ್ ಮೀಲ್ಸ್ ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಮತ್ತೊಂದು ಹಂತ ಮೇಲೇರುವ ವಿಶ್ವಾಸವನ್ನು ಹೊಂದಿದ್ದಾರೆ.

    ಆಲ್ಬಮ್ ಸಾಂಗ್ಸ್  ಮತ್ತು ಕಿರುಚಿತ್ರದ ಮೂಲಕ ಗುರುತಿಸಿಕೊಂಡಿದ್ದ ಎನ್ ವಿನಾಯಕ ಈ ಚಿತ್ರದ ಮೂಲಕ ನಿರ್ದೇಶಕರಾಗಿ ಪಾದಾರ್ಪಣೆ ಮಾಡಿದ್ದು, ಅಂದುಕೊಂಡ ರೀತಿಯಲ್ಲೇ ಚಿತ್ರೀಕರಣ ಮುಗಿದಿದ್ದು ಸಿನಿಮಾ ಜನರಿಗೆ ಇಷ್ಟವಾಗುವ ಭರವರಸೆಯನ್ನು ಹೊಂದಿದ್ದಾರೆ. ಖುಷಿ ರವಿ ಮತ್ತು ತೇಜಸ್ವಿನಿ ಶರ್ಮ ಲಿಖಿತ್ ಶೆಟ್ಟಿಗೆ ನಾಯಕಿಯರಾಗಿ ಜೊತೆಯಾಗಿದ್ದಾರೆ. ಉಳಿದಂತೆ ತಾರಾಗಣದಲ್ಲಿ ರಂಗಾಯಣ ರಘು, ವಿಜಯ್ ಚಂಡೂರ್, ರವಿ ಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಚಂದ್ರಕಲಾ ಮೋಹನ್, ಸೂರಜ್ ಲೋಕ್ರೆ, ಹೂನ್ನವಳ್ಳಿ ಕೃಷ್ಣ, ರಮೇಶ್ ಪಂಡಿತ್, ನಾಗೇಂದ್ರ ಅರಸ್, ಮೂಗು ಸುರೇಶ್ ಸೇರಿದಂತೆ ದೊಡ್ಡ ತಾರಾ ಬಳಗವೇ ಇದೆ.  ಹರೀಶ್ ಗೌಡ ಸಂಭಾಷಣೆ ಬರೆದಿದ್ದು, ಮನೋಹರ್ ಜೋಷಿ ಛಾಯಾಗ್ರಹಣ,  ಗುರು ಕಿರಣ್ ಸಂಗೀತ, ದೀಪು ಎಸ್ ಕುಮಾರ್ ಸಂಕಲನ ಚಿತ್ರಕ್ಕಿದೆ.

    ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ಸುತ್ತುವ ಕಥಾ ಹಂದರವನ್ನು ಹೊಂದಿರುವ ಸಿನಿಮಾ, ಮನೋರಂಜನೆಯ ಜೊತೆಗೆ ಸಾಕಷ್ಟು ಹೊಸ ವಿಷಯಗಳನ್ನು ಒಳಗೊಂಡಿದ್ದು, ಪ್ರೇಕ್ಷಕರು ಸಿನಿಮಾವನ್ನು ಇಷ್ಟಪಡುತ್ತಾರೆಂಬ ವಿಶ್ವಾಸ ಚಿತ್ರತಂಡಕ್ಕಿದೆ.  ‘ಸಂಕಷ್ಟ ಕರ ಗಣಪತಿ’ ಮತ್ತು “ಫ್ಯಾಮಿಲಿ ಪ್ಯಾಕ್’ ಎರಡೂಚಿತ್ರಗಳಲ್ಲಿ ಯಶಸ್ಸನ್ನು ಕಂಡಿದ್ದ ನಾಯಕ ಲಿಖಿತ್ ಶೆಟ್ಟಿ, ‘ಫುಲ್ ಮೀಲ್ಸ್’ ನಲ್ಲೂ ತಮ್ಮ ಯಶಸ್ಸಿನ ಪಯಣವನ್ನು ಮುಂದುವರೆಸುವ ನಿರೀಕ್ಷೆಯಲ್ಲಿದ್ದಾರೆ.

  • ‘ಫುಲ್ ಮೀಲ್ಸ್’ ಚಿತ್ರತಂಡದಿಂದ ನಾಯಕಿಗೆ ವಿಶೇಷ ಉಡುಗೊರೆ

    ‘ಫುಲ್ ಮೀಲ್ಸ್’ ಚಿತ್ರತಂಡದಿಂದ ನಾಯಕಿಗೆ ವಿಶೇಷ ಉಡುಗೊರೆ

    ಸಂಕಷ್ಟಕರ ಗಣಪತಿ, ಫ್ಯಾಮಿಲಿ ಪ್ಯಾಕ್ ಚಿತ್ರಗಳ ನಾಯಕ ನಟ ಲಿಖಿತ್ ಶೆಟ್ಟಿ (Likhit Shetty) ನಟಿಸಿ, ನಿರ್ಮಿಸುತ್ತಿರುವ ‘ಫುಲ್ ಮೀಲ್ಸ್’ (Full Meals) ಚಿತ್ರದ ನಾಯಕಿ ತೇಜಸ್ವಿನಿ ಶರ್ಮ ಅವರಿಗೆ ಹುಟ್ಟುಹಬ್ಬದ ಸಂಭ್ರಮ.   ತೇಜಸ್ವಿನಿ ಶರ್ಮ ಅವರ ಹುಟ್ಟುಹಬ್ಬದ ಸಲುವಾಗಿ ಚಿತ್ರತಂಡ ಪ್ರೊಮೋಶನಲ್ ವೀಡಿಯೋ ಮತ್ತು ಬರ್ತ್ ಡೇ ಫೋಸ್ಟರ್ ಬಿಡುಗಡೆ ಮಾಡಿದೆ.

    ತೇಜಸ್ವಿನಿ ಶರ್ಮ (Tejaswini Sharma) ಚಿತ್ರದಲ್ಲಿ ಮೇಕಪ್ ಆರ್ಟಿಸ್ಟ್ ಪಾತ್ರವನ್ನು ಮಾಡಿದ್ದು, ಮೇಕಪ್ ಆರ್ಟಿಸ್ಟ್ ಗಳ ಬವಣೆಯನ್ನು ತೋರಿಸುವ ವಿಡಂಬನೆ ಮತ್ತು ಮನೋರಂಜನೆ ಯಿಂದ ಕೂಡಿದ ವೀಡಿಯೋ ಒಂದನ್ನು ಬಿಡುಗಡೆ ಮಾಡಿದ್ದು,  ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.   ಮೆಚ್ಚುಗೆ ಕೂಡ ವ್ಯಕ್ತವಾಗುತ್ತಿದೆ.

    ಎನ್ ವಿನಾಯಕ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ “ಫುಲ್ ಮೀಲ್ಸ್” ಚಿತ್ರವು, ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ನಡೆಯುವ ಕಥಾ ಹಂದರವನ್ನು ಹೊಂದಿದೆ. ಚಿತ್ರದ ಕೊನೆಯ ಹಂತದ ಚಿತ್ರೀಕರಣ ಬಾಕಿಯಿದ್ದು ಆದಷ್ಟು ಬೇಗ ಚಿತ್ರೀಕರಣ ಮುಗಿಸಿ, ತೆರೆಗೆ ತರುವ ತಯಾರಿಯಲ್ಲಿ ಚಿತ್ರತಂಡವಿದೆ.

    ಖುಶಿ ರವಿ ಮತ್ತು ತೇಜಸ್ವಿನಿ ಶರ್ಮ ಚಿತ್ರದ ನಾಯಕಿಯರಾಗಿದ್ದು, ಪ್ರಮುಖ ತಾರಾಗಣದಲ್ಲಿ ರಂಗಾಯಣ ರಘು, ಸೂರಜ್ ಲೋಕ್ರೆ, ವಿಜಯ್ ಚಂಡೂರ್, ಚಂದ್ರಕಲಾ ಮೋಹನ್, ರಾಜೇಶ್ ನಟರಂಗ, ರವಿ ಶಂಕರ್ ಗೌಡ, ಸುಜಯ್ ಶಾಸ್ತ್ರಿ ಕಾಣಿಸಿಕೊಳ್ಳಲಿದ್ದಾರೆ.

     

    ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ನಿರ್ದೇಶಕರಾಗಿದ್ದು, ಮನೋಹರ್ ಜೋಷಿ ಛಾಯಾಗ್ರಹಣ, ದೀಪು ಎಸ್ ಕುಮಾರ್ ಸಂಕಲನವಿದೆ. ಹರೀಶ್ ರಾಜಣ್ಣ ಸಂಭಾಷಣೆ ಬರೆದಿದ್ದಾರೆ. ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟ ಲಿಖಿತ್ ಶೆಟ್ಟಿ ಹುಟ್ಟು ಹಬ್ಬಕ್ಕೆ ‘ಫುಲ್ ಮೀಲ್ಸ್’ ಪೋಸ್ಟರ್

    ನಟ ಲಿಖಿತ್ ಶೆಟ್ಟಿ ಹುಟ್ಟು ಹಬ್ಬಕ್ಕೆ ‘ಫುಲ್ ಮೀಲ್ಸ್’ ಪೋಸ್ಟರ್

    ನಾಯಕ ಲಿಖಿತ್ ಶೆಟ್ಟಿ (Likhit Shetty) ಹುಟ್ಟು ಹಬ್ಬದ (Birthday) ಪ್ರಯುಕ್ತ ‘ಫುಲ್ ಮೀಲ್ಸ್’ (Full Meals) ಚಿತ್ರತಂಡ ಎರಡನೇ ಪೋಸ್ಟರ್ ಬಿಡುಗಡೆ ಮಾಡಿದೆ. ಈ ಹಿಂದೆ ಕೂಡ ಬಿಡುಗಡೆಯಾಗಿದ್ದ ಪೋಸ್ಟರ್ ಕೂಡ ಎಲ್ಲರ ಗಮನ ಸೆಳೆದಿತ್ತು.

    ಈಗಾಗಲೇ ಚಿತ್ರದ 60 ರಷ್ಟು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಹಿಂದೆ ಸಂಕಷ್ಟಕರ ಗಣಪತಿ ಹಾಗೂ ಪಿ.ಆರ್.ಕೆ ಪ್ರೊಡಕ್ಷನ್ಸ್ ನಿರ್ಮಾಣದ ಫ್ಯಾಮಿಲಿ ಪ್ಯಾಕ್ ಚಿತ್ರಗಳ ಮೂಲಕ ಜನರಿಗೆ ಹತ್ತಿರವಾಗಿದ್ದ ನಾಯಕನಟ ಲಿಖಿತ್ ಶೆಟ್ಟಿ ‘ಫುಲ್ ಮೀಲ್ಸ್’ ಮೂಲಕ ನಟನೆಯೊಂದಿಗೆ ಪರಿಪೂರ್ಣ ನಿರ್ಮಾಪಕರೂ ಆಗಿದ್ದಾರೆ. ಇದನ್ನೂ ಓದಿ:ಚಿರಂಜೀವಿಯನ್ನು ಹಾಡಿ ಹೊಗಳಿದ ‘ಕಾವಾಲಾ’ ಬ್ಯೂಟಿ ತಮನ್ನಾ

    ಖುಷಿ ರವಿ (Khushi Ravi), ತೇಜಸ್ವಿನಿ ಶರ್ಮ (Tejaswini Sharma) ನಾಯಯಕಿರರಾಗಿದ್ದು, ಪ್ರಮುಖ ತಾರಾಗಣದಲ್ಲಿ ರಂಗಾಯಣ ರಘು, ವಿಜಯ್ ಚಂಡೂರ್,. ಚಂದ್ರ ಕಲಾ ಮೋಹನ್, ರಾಜೇಶ್ ನಟರಂಗ, ರವಿ ಶಂಕರ ಗೌಡ, ಸುಜಯ್ ಶಾಸ್ತ್ರಿ, ರಮೇಶ್ ಪಂಡಿತ್, ಹೊನ್ನವಳ್ಳಿ ಕೃಷ್ಣ ಇದ್ದಾರೆ.

     

    ಎನ್.ವಿನಾಯಕ (N. Vinayak) ನಿರ್ದೇಶನದ ಈ ಚಿತ್ರಕ್ಕೆ, ಮನೋಹರ್ ಜೋಷಿ ಛಾಯಾಗ್ರಹಣವಿದೆ. ಹರೀಶ ರಾಜಣ್ಣ ಸಂಭಾಷಣೆ ಬರೆದಿದ್ದಾರೆ. ದೀಪು ಎಸ್ ಕುಮಾರ್ ಸಂಕಲನ, ವಿಶ್ವಾಸ್ ಕಶ್ಯಪ್ ಕಲೆ,  ಗುರು ಕಿರಣ್ ಸಂಗೀತ ಫುಲ್ ಮೀಲ್ಸ್ ಚಿತ್ರಕ್ಕಿದೆ.
    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಫುಲ್ ಮೀಲ್ಸ್’ ಸಿನಿಮಾದ ಪೋಸ್ಟರ್ ರಿಲೀಸ್

    ‘ಫುಲ್ ಮೀಲ್ಸ್’ ಸಿನಿಮಾದ ಪೋಸ್ಟರ್ ರಿಲೀಸ್

    ‘ಸಂಕಷ್ಟಕರ ಗಣಪತಿ’ ಹಾಗೂ ‘ಫ್ಯಾಮಿಲಿ ಪ್ಯಾಕ್’ ಚಿತ್ರಗಳ ಮೂಲಕ ಜನಮನ ಗೆದ್ದಿರುವ  ಲಿಖಿತ್ ಶೆಟ್ಟಿ (Likhit Shetty) ನಿರ್ಮಿಸಿ ಜೊತೆಗೆ ನಾಯಕರಾಗೂ ನಟಿಸುತ್ತಿರುವ ಚಿತ್ರ ‘ಫುಲ್ ಮೀಲ್ಸ್ (Full Meals). ಈ ಸಿನಿಮಾ ಟೈಟಲ್ ಕಾರಣದಿಂದಾಗಿಯೇ ಗಮನ ಸೆಳೆದಿತ್ತು. ಅಲ್ಲದೇ, ಈ ಸಿನಿಮಾದ ಶೀರ್ಷಿಕೆಯ ವಿಶೇಷತೆಯನ್ನು ಸಿನಿಮಾ ಟೀಮ್ ಹಂಚಿಕೊಂಡಿತ್ತು. ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿದೆ.

    ಸದ್ಯ ‘ಫುಲ್ ಮೀಲ್ಸ್’ ಚಿತ್ರದ ನೂತನ ಪೋಸ್ಟರ್ (Poster) ಬಿಡುಗಡೆಯಾಗಿದೆ. ಪೋಸ್ಟರ್ ಗೆ ಎಲ್ಲಾ ಕಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈಗಾಗಲೇ ಈ ಚಿತ್ರದ ಅರ್ಧದಷ್ಟು ಭಾಗದ ಚಿತ್ರೀಕರಣ ಮುಗಿದಿದೆ. ಎನ್ ವಿನಾಯಕ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಗುರುಕಿರಣ್ (Gurukiran) ಸಂಗೀತ ನಿರ್ದೇಶನ ಹಾಗೂ ಮನೋಹರ್ ಜೋಶಿ ಅವರ ಛಾಯಾಗ್ರಹಣವಿದೆ. ಇದನ್ನೂ ಓದಿ:ಯಾರನ್ನಾದರೂ ಡೇಟ್ ಮಾಡಿ ಎಂದ ಅಭಿಮಾನಿಗೆ ಸಮಂತಾ ಹೇಳಿದ್ದೇನು?

    ಲಿಖಿತ್ ಶೆಟ್ಟಿ, ಖುಷಿ ರವಿ, ತೇಜಸ್ವಿನಿ ಶರ್ಮ, ರಂಗಾಯಣ ರಘು, ಸಾಧುಕೋಕಿಲ, ವಿಜಯ್ ಚೆಂಡೂರ್, ರಾಜೇಶ್ ನಟರಂಗ, ರಮೇಶ್ ಪಂಡಿತ್, ಹೊನ್ನವಳ್ಳಿ ಕೃಷ್ಣ, ಚಂದ್ರಕಲಾ ಮೋಹನ್, ಸುಜಯ್ ಶಾಸ್ತ್ರಿ, ಗಣೇಶ್ ರಾವ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

  • ಲಿಖಿತ್ ಶೆಟ್ಟಿ ಜೊತೆ ‘ಫುಲ್ ಮೀಲ್ಸ್’ ಗೆ ಜೊತೆಯಾದ ಇಬ್ಬರು ನಾಯಕಿಯರು

    ಲಿಖಿತ್ ಶೆಟ್ಟಿ ಜೊತೆ ‘ಫುಲ್ ಮೀಲ್ಸ್’ ಗೆ ಜೊತೆಯಾದ ಇಬ್ಬರು ನಾಯಕಿಯರು

    ವರ್ ಸ್ಟಾರ್ ಪುನೀತ್ ರಾಜಕುಮಾರ್ ನಿರ್ಮಾಣದ “ಫ್ಯಾಮಿಲಿ ಪ್ಯಾಕ್” ಚಿತ್ರದಲ್ಲಿ ನಟಿಸಿ ಜನಪ್ರಿಯರಾಗಿರುವ ಲಿಖಿತ್ ಶೆಟ್ಟಿ ನಾಯಕರಾಗಿ ಅಭಿನಯಿಸುತ್ತಿರುವ “ಫುಲ್ ಮೀಲ್ಸ್” ಚಿತ್ರದ ಚಿತ್ರೀಕರಣ ಬೆಂಗಳೂರಿನ ಅರಮನೆಯಲ್ಲಿ ನಡೆಯುತ್ತಿದೆ. ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.

    ಇದೊಂದು ಸಂಪೂರ್ಣ ಮನೋರಂಜನಾತ್ಮಕ ಚಿತ್ರ. ನನ್ನ ಮೊದಲ ನಿರ್ದೇಶನದ ಚಿತ್ರ ಕೂಡ. ಲಿಖಿತ್ ಶೆಟ್ಟಿ ನಾಯಕರಾಗಿ, ಖುಷಿ ರವಿ, ತೇಜಸ್ವಿನಿ ಶರ್ಮ ನಾಯಕಿಯರಾಗಿ ನಟಿಸುತ್ತಿದ್ದಾರೆ. ರಂಗಾಯಣ ರಘು, ಸಾಧುಕೋಕಿಲ ಸೇರಿದಂತೆ ಅನೇಕ ಅನುಭವಿ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಮನೋಹರ್ ಜೋಷಿ ಛಾಯಾಗ್ರಹಣ ಹಾಗೂ ಗುರುಕಿರಣ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಬೆಂಗಳೂರು, ರಾಮನಗರ ಹಾಗೂ ಮಂಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ನಿರ್ದೇಶಕ ಎನ್.ವಿನಾಯಕ ಚಿತ್ರದ ಕುರಿತು ಮಾಹಿತಿ ನೀಡಿದರು.

    ನಾನು ಈ ಚಿತ್ರದಲ್ಲಿ ಫೋಟೋಗ್ರಾಫರ್. ಮದುವೆ ಮನೆಗೆ ಫೋಟೋ ತೆಗೆಯಲು ಹೋದಾಗ ಮದುಮಗಳ ಮೇಲೆ ಪ್ರೀತಿಯಾಗುತ್ತದೆ. ಆನಂತರ ಏನಾಗುತ್ತದೆ? ಎಂಬುದನ್ನು ಚಿತ್ತದಲ್ಲೇ ನೋಡಬೇಕು. ಒಟ್ಟಿನಲ್ಲಿ ನಾವು ಇಡೀ ತಂಡ ಸೇರಿ ಪ್ರೇಕ್ಷಕರಿಗೆ ಮನೋರಂಜನೆಯ “ಫುಲ್ ಮೀಲ್ಸ್” ನೀಡಲಿದ್ದೇವೆ ಎಂದರು ನಾಯಕ ಲಿಖಿತ್ ಶೆಟ್ಟಿ. ಇದನ್ನೂ ಓದಿ: ಬೆಡ್‌ರೂಮ್ ಫೋಟೋ ಹಂಚಿಕೊಂಡ ನಟಿ ರಾಗಿಣಿ ದ್ವಿವೇದಿ

    ನಾಯಕಿಯರಾದ ಖುಷಿ ರವಿ, ತೇಜಸ್ವಿನಿ ಶರ್ಮ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ಕಲಾವಿದರಾದ ರಂಗಾಯಣ ರಘು, ಚಂದ್ರಕಲಾ ಮೋಹನ್, ರಮೇಶ್ ಪಂಡಿತ್, ಗಣೇಶ್ ರಾವ್, ವಿಜಯ್ ಚೆಂಡೂರ್,  ಛಾಯಾಗ್ರಾಹಕ ಮನೋಹರ್ ಜೋಶಿ ಹಾಗೂ ಸಂಭಾಷಣೆ ಬರೆಯುತ್ತಿರುವ ಹರೀಶ್ ರಾಜಣ್ಣ “ಫುಲ್ ಮೀಲ್ಸ್” ಬಗ್ಗೆ ಮಾತನಾಡಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k