Tag: ಲಿಡ್ಕರ್

  • ‘ಡಾಲಿ’ ಹಾಡಿ ಹೊಗಳಿದ ಸಿಎಂ ಸಿದ್ದರಾಮಯ್ಯ

    ‘ಡಾಲಿ’ ಹಾಡಿ ಹೊಗಳಿದ ಸಿಎಂ ಸಿದ್ದರಾಮಯ್ಯ

    ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್)ದ (Lidkar) ರಾಯಭಾರಿಯಾಗಿ ನಟ ಡಾಲಿ ಧನಂಜಯ್ (Dolly Dhananjay) ಅವರನ್ನು ಇಂದು ಅಧಿಕೃತವಾಗಿ ಘೋಷಣೆ ಮಾಡಲಾಯಿತು. ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ(Siddaramaiah),  ನಟ ಧನಂಜಯ ಅವರನ್ನು ಲಿಡ್ಕರ್ ರಾಯಭಾರಿ ಘೋಷಿಸಿದರು.  ಇದೇ ಮೊದಲ ಬಾರಿಗೆ ಲಿಡ್ಕರ್ ಗೆ ರಾಯಭಾರಿಯನ್ನು ಆಯ್ಕೆ ಮಾಡಿದ್ದು ವಿಶೇಷ.

    ಸ್ಯಾಂಡಲ್‌ವುಡ್ ನಲ್ಲಿ ನಟನಾಗಿ ನಿರ್ಮಾಪಕನಾಗಿ ಡಾಲಿ ಸಿಕ್ಕಾಪಟ್ಟೆ ಬ್ಯುಸಿ ಇರುವ ಸ್ಟಾರ್. ನಟನೆ, ನಿರ್ಮಾಣದ ಜೊತೆಗೀಗ ಧನಂಜಯ ಜಾಹೀರಾತು ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ಮೊದಲ ಬಾರಿಗೆ ಡಾಲಿ ಸರ್ಕಾರದ ಜಾಹೀರಾತಿನಲ್ಲಿ ಮಿಂಚುವ ಮೂಲಕ ಚರ್ಮ ಕುಶಲಕರ್ಮಿಗಳ ಕುಟುಂಬದ ನೆರವಿಗೆನಿಂತಿದ್ದಾರೆ.

    ವಿಶೇಷ ಎಂದರೆ ಲಿಡ್ಕರ್ ರಾಯಭಾರಿಯಾಗಲು ಧನಂಜಯ ಅವರು ಒಂದು ರೂಪಾಯಿ ಸಂಭಾವನೆಯನ್ನು ಕೂಡ ಪಡೆದಿಲ್ಲ. ಉಚಿತವಾಗಿ ಲಿಡ್ಕರ್ ಬ್ರಾಂಡ್ ಪ್ರಮೋಟ್ ಮಾಡುವ ಮೂಲಕ  ಧನಂಜಯ್ ಮಾದರಿಯಾಗಿದ್ದಾರೆ. ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ 67ನೇ ಪುಣ್ಯ ಸ್ಮರಣೆ ದಿನವೇ ಈ ಕಾರ್ಯಕ್ರಮ ಹಮ್ಮಿಕೊಂಡಿರುವುದು ವಿಶೇಷವಾಗಿತ್ತು. ಸಿಎಂ ಸಿದ್ದರಾಮಯ್ಯ ಮತ್ತು ಧನಂಜಯ ಅವರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮ ಪ್ರಾರಂಭಿಸಿದರು.

    ಲಿಡ್ಕರ್ ನಲ್ಲಿ 50 ಸಾವಿರಕ್ಕೂ ಹೆಚ್ಚು ಚರ್ಮ ಕುಶಲಕರ್ಮಿಗಳ ಕುಟುಂಬವಿದೆ. ಚರ್ಮ ಕೈಗಾರಿಕೆಯನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದಾರೆ. ಇದೀಗ ರಾಯಭಾರಿಯನ್ನ ಆಯ್ಕೆ ಮಾಡಿ ಈ ನಿಗಮವನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸರ್ಕಾರಕ್ಕೆ ಡಾಲಿ ರಾಯಾಭಾರಿಯಾಗುವ ಮೂಲಕ ಬಡವರ ಮಕ್ಕಳು ಬೆಳಿಬೇಕು ಎನ್ನುವುದನ್ನು ಮತ್ತೆ ಸಾರಿ ಹೇಳಿದ್ದಾರೆ.

    ಘೋಷಣೆ ಬಳಿಕ ಮಾತನಾಡಿದ ಧನಂಜಯ, ‘ಇದರ ಅಡಿ ಐವತ್ತು ಸಾವಿರ ಕುಟುಂಬವಿದೆ. ನಮ್ಮದೇ ಆದ ಬ್ರಾಂಡಿಗೆ ನಾವು ಸಹಾಯ ಮಾಡಬೇಕು ಎನ್ನುವ ಕಾರಣಕ್ಕೆ ಇದನ್ನು ಒಪ್ಪಿಕೊಂಡೆ. ಮೇಕ್ ಇನ್ ಇಂಡಿಯಾ ಹೇಗಿದೆಯೋ ಹಾಗೆ ಮೇಕ್ ಇನ್ ಕರ್ನಾಟಕ ಆಗಬೇಕು. ಲಿಟ್ಕರ್ ಗೆ ಸಪೋರ್ಟ್ ಮಾಡುವುದರಿಂದ ಅದನ್ನೆ ನಂಬಿಕೊಂಡ ಕುಟುಂಬಗಳಿಗೆ ಸಹಾಯವಾಗಲಿದೆ. ಮೈಸೂರ್ ಸಿಲ್ಕ್ ಹೇಗಿದಿಯೋ ಹಾಗೆ ನಮ್ಮದೆ ಬ್ರ್ಯಾಂಡ್ ಇರಬೇಕು’ ಎಂದರು.

    ಸಿಎಂ ಸಿದ್ಧರಾಮಯ್ಯ ಅವರು ಮಾತನಾಡಿ, ‘ಖ್ಯಾತ ನಟ ಡಾಳಿ ಧನಂಜಯ ಅವರನ್ನು ರಾಯಭಾರಿಯಾಗಿ ಆಯ್ಕೆ ಮಾಡಿದ್ದೀವಿ. ಅವರು ಉಚಿತವಾಗಿ ರಾಯಭಾರಿ ಕೆಲಸ ಮಾಡುತ್ತಿದ್ದಾರೆ. ಸಾಮಾಜಿಕ ಕಳಕಳಿ ಇರುವ ನಟ, ಅವರನ್ನು ರಾಯಭಾರಿಯನ್ನಾಗಿ ಮಾಡಿದ್ದು ಅರ್ಥಪೂರ್ಣವಾಗಿದೆ. ಇದರಿಂದ ಚರ್ಮ ಉದ್ಯಮಕ್ಕೆ ಉತ್ತೇಜನ ಆಗುತ್ತೆ’ ಎಂದು ಹೇಳಿದರು. ಬಳಿಕ ಲಿಟ್ಕರ್ ಕೇಂದ್ರಕ್ಕೆ ಭೇಟಿ ನೀಡಿದ ನಟ ಧನಂಜಯ ಅವರಿಗೆ ವಿಶೇಷವಾಗಿ ತಯಾರಿಸಿದ್ದ ಲಿಡ್ಕರ್ ಚಪ್ಪಲಿಯನ್ನು ಉಡುಗೊರೆಯಾಗಿ ನೀಡಿದರು. ಧನಂಜಯವರಿಗಾಗಿಯೇ ವಿಶೇಷವಾಗಿ ಚಪ್ಪಲಿಯನ್ನು ತಯಾರಿಸಲಾಗಿತ್ತು. ಡಾಲಿ ಹೊಸ ಚಪ್ಪಲಿಯನ್ನು ಧರಿಸಿ ಅಲ್ಲಿನ ಕುಶಲಕರ್ಮಿಗಳ ಜೊತೆ ಮಾತನಾಡಿ ಖುಷಿಪಟ್ಟರು.

  • ಡಾಲಿ ‘ಲಿಡ್ಕರ್’ಗೆ ರಾಯಭಾರಿ: ಸಿಎಂ ಅಧಿಕೃತ ಘೋಷಣೆ

    ಡಾಲಿ ‘ಲಿಡ್ಕರ್’ಗೆ ರಾಯಭಾರಿ: ಸಿಎಂ ಅಧಿಕೃತ ಘೋಷಣೆ

    ಡಾ.ಬಿ ಆರ್ ಅಂಬೇಡ್ಕರ್ ಅವರ ಪುಣ್ಯ ಸ್ಮರಣೆಯಂದು ಲಿಡ್ಕರ್ ಉತ್ಪನ್ನಗಳಿಗೆ ನಟ ಡಾಲಿ ಧನಂಜಯ್ ರಾಯಭಾರಿ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಇಂದು ಘೋಷಣೆ ಮಾಡಿದರು. ಬೆಂಗಳೂರಿನ ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಲಿಡ್ಕರ್ ಉತ್ಪನ್ನಕ್ಕೆ ಡಾಲಿ ರಾಯಭಾರಿಯಾಗಿದ್ಧಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಸಚಿವರಾದ ಹೆಚ್ ಸಿ ಮಹದೇವಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

    ರಾಯಭಾರಿಯಾಗಿ ಡಾಲಿ

    ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್)ಕ್ಕೆ (Lidkar) ಇದೇ ಮೊದಲ ಬಾರಿಗೆ ರಾಯಭಾರಿಯನ್ನ (Ambassador) ಆಯ್ಕೆ ಮಾಡಿದೆ. ನಟ‌ರಾಕ್ಷಸ   ಡಾಲಿ ಧನಂಜಯ್ (Dolly Dhananjay) ಲಿಡ್ಕರ್ ಗೆ  ರಾಯಭಾರಿ ಆಗಿದ್ದಾರೆ. ಸ್ಯಾಂಡಲ್‌ವುಡ್ ನಟ, ನಿರ್ಮಾಪಕನಾಗಿ ಡಾಲಿ ಸಿಕ್ಕಾಪಟ್ಟೆ ಬ್ಯುಸಿ ಇರುವ ಸ್ಟಾರ್. ನಟನೆ, ನಿರ್ಮಾಣದ ಜೊತೆಗೀಗ ಧನಂಜಯ ಜಾಹೀರಾತು ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ಮೊದಲ ಬಾರಿಗೆ ಡಾಲಿ ಸರ್ಕಾರದ ಜಾಹೀರಾತಿನಲ್ಲಿ ಮಿಂಚುವ ಮೂಲಕ ಲಿಡ್ಕರ್ ಬ್ರಾಂಡ್ ಪ್ರಮೋಟ್ ಮಾಡಲಿದ್ದಾರೆ.

    ಲಿಡ್ಕರ್ ನಲ್ಲಿ 50 ಸಾವಿರಕ್ಕೂ ಹೆಚ್ಚು ಚರ್ಮ ಕುಶಲಕರ್ಮಿಗಳ ಕುಟುಂಬವಿದೆ. ಚರ್ಮ ಕೈಗಾರಿಕೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸರ್ಕಾರ ಸ್ಯಾಂಡಲ್‌ವುಡ್ ಸ್ಟಾರ್ ಧನಂಜಯ್ ಅವರನ್ನು ರಾಯಾಭಾರಿಯಾಗಿ ನೇಮಕಮಾಡಿದೆ. ಈಗಾಗಲೇ ಡಾಲಿ ಜೊತೆ ಮಾತುಕತೆಯಾಗಿದ್ದು ಧನಂಜಯ ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಅಧಿಕೃತ ಪ್ರಕಟಣೆಯೊಂದೆ ಬಾಕಿ ಇತ್ತು.  ಅದು ಈಡೇರಲಿದೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಲಿಡ್ಕರ್ ವ್ಯವಸ್ಥಾಪಕ ನಿರ್ದೇಶಕಿ ಕೆ.ಎಂ.ಎಸ್ ವಸುಂಧರಾ, ಧನಂಜಯ್ ಅವರು ರಾಯಭಾರಿಯಾಗಿದ್ದು ತುಂಬಾ ಖುಷಿ ಇದೆ. ಅವರು ಸ್ಯಾಂಡಲ್‌ವುಡ್‌ನ ಲೀಡಿಂಗ್ ನಟ ಎಲ್ಲಾ ವರ್ಗದ ಜನರಿಗೆ ತಲುಪುವ ಕಲಾವಿದ ಹಾಗಾಗಿ ಅವರನ್ನ ಆಯ್ಕೆ ಮಾಡಿದ್ದೇವೆ ಸಚಿವರು ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದ್ದು ಆದಷ್ಟು ಬೇಗ ಜಾಹೀರಾತಿನ ಚಿತ್ರೀಕರಣ ನಡೆಯಲಿದೆ ಎಂದಿದ್ದಾರೆ

    ಧನಂಜಯ ಸದ್ಯ ಸಾಲು ಸಾಲು ಸಿನಿಮಾಗಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಧನಂಜಯ್ ತಮ್ಮದೇ ಡಾಲಿ ಸಂಸ್ಥೆ ನಿರ್ಮಾಣದ ‘ಟಗರು ಪಲ್ಯ’ ಸಿನಿಮಾ ರಿಲೀಸ್ ಮಾಡಿದ್ದರು. ಟಗರು ಪಲ್ಯ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಿರ್ಮಾಣದ ಜೊತೆಗೆ ಡಾಲಿ ಅನೇಕ ಸಿನಿಮಾಗಳಲ್ಲಿ  ನಟಿಸುತ್ತಿದ್ದಾರೆ. ಕನ್ನಡದ ಜೊತೆಗೆ ತೆಲುಗಿನ ಪುಷ್ಪ-2 ಸಿನಿಮಾದಲ್ಲೂ ಕಾಣಿಸಿಕೊಂಡಿದ್ದಾರೆ ಈ ನಡುವೆ ಜಾಹೀರಾತು ಲೋಕಕ್ಕೆ ಡಾಲಿ ಲಗ್ಗೆ ಇಟ್ಟಿರುವುದು ಅವರ ಅಭಿಮಾನಿ ಬಳಗಕ್ಕೆ ಸಂತಸ ತಂದಿದೆ.

  • ಡಿ.6ರಂದು ಡಾಲಿ ಹೆಸರು ಘೋಷಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

    ಡಿ.6ರಂದು ಡಾಲಿ ಹೆಸರು ಘೋಷಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

    ಟ ಡಾಲಿ ಧನಂಜಯ ಅವರು ಲಿಡ್ಕರ್ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ. ನಾಳೆ  ವಿಧಾನ ಸೌಧದ ಮುಂಭಾಗದಲ್ಲಿ ಸರ್ಕಾರದ ವತಿಯಿಂದ ಸಿಎಂ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಮ್ ಡಿಕೆ. ಶಿವಕುಮಾರ್ ಹಾಗೂ ಸಚಿವರಾದ ಹೆಚ್ ಸಿ ಮಹದೇವಪ್ಪ ಸೇರಿದಂತೆ ಅನೇಕರು ಉಪಸ್ಥಿತರಿರಲಿದ್ದಾರೆ.

    ರಾಯಭಾರಿಯಾಗಿ ಡಾಲಿ

    ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್)ಕ್ಕೆ (Lidkar) ಇದೇ ಮೊದಲ ಬಾರಿಗೆ ರಾಯಭಾರಿಯನ್ನ (Ambassador) ಆಯ್ಕೆ ಮಾಡಿದೆ. ನಟ‌ರಾಕ್ಷಸ   ಡಾಲಿ ಧನಂಜಯ್ (Dolly Dhananjay) ಲಿಡ್ಕರ್ ಗೆ  ರಾಯಭಾರಿ ಆಗಿದ್ದಾರೆ. ಸ್ಯಾಂಡಲ್‌ವುಡ್ ನಟ, ನಿರ್ಮಾಪಕನಾಗಿ ಡಾಲಿ ಸಿಕ್ಕಾಪಟ್ಟೆ ಬ್ಯುಸಿ ಇರುವ ಸ್ಟಾರ್. ನಟನೆ, ನಿರ್ಮಾಣದ ಜೊತೆಗೀಗ ಧನಂಜಯ ಜಾಹೀರಾತು ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ಮೊದಲ ಬಾರಿಗೆ ಡಾಲಿ ಸರ್ಕಾರದ ಜಾಹೀರಾತಿನಲ್ಲಿ ಮಿಂಚುವ ಮೂಲಕ ಲಿಡ್ಕರ್ ಬ್ರಾಂಡ್ ಪ್ರಮೋಟ್ ಮಾಡಲಿದ್ದಾರೆ.

    ಲಿಡ್ಕರ್ ನಲ್ಲಿ 50 ಸಾವಿರಕ್ಕೂ ಹೆಚ್ಚು ಚರ್ಮ ಕುಶಲಕರ್ಮಿಗಳ ಕುಟುಂಬವಿದೆ. ಚರ್ಮ ಕೈಗಾರಿಕೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸರ್ಕಾರ ಸ್ಯಾಂಡಲ್‌ವುಡ್ ಸ್ಟಾರ್ ಧನಂಜಯ್ ಅವರನ್ನು ರಾಯಾಭಾರಿಯಾಗಿ ನೇಮಕಮಾಡಿದೆ. ಈಗಾಗಲೇ ಡಾಲಿ ಜೊತೆ ಮಾತುಕತೆಯಾಗಿದ್ದು ಧನಂಜಯ ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಅಧಿಕೃತ ಪ್ರಕಟಣೆಯೊಂದೆ ಬಾಕಿ ಇತ್ತು. ನಾಳೆ ಅದು ಈಡೇರಲಿದೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಲಿಡ್ಕರ್ ವ್ಯವಸ್ಥಾಪಕ ನಿರ್ದೇಶಕಿ ಕೆ.ಎಂ.ಎಸ್ ವಸುಂಧರಾ, ಧನಂಜಯ್ ಅವರು ರಾಯಭಾರಿಯಾಗಿದ್ದು ತುಂಬಾ ಖುಷಿ ಇದೆ. ಅವರು ಸ್ಯಾಂಡಲ್‌ವುಡ್‌ನ ಲೀಡಿಂಗ್ ನಟ ಎಲ್ಲಾ ವರ್ಗದ ಜನರಿಗೆ ತಲುಪುವ ಕಲಾವಿದ ಹಾಗಾಗಿ ಅವರನ್ನ ಆಯ್ಕೆ ಮಾಡಿದ್ದೇವೆ ಸಚಿವರು ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದ್ದು ಆದಷ್ಟು ಬೇಗ ಜಾಹೀರಾತಿನ ಚಿತ್ರೀಕರಣ ನಡೆಯಲಿದೆ ಎಂದಿದ್ದಾರೆ

    ಧನಂಜಯ ಸದ್ಯ ಸಾಲು ಸಾಲು ಸಿನಿಮಾಗಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಧನಂಜಯ್ ತಮ್ಮದೇ ಡಾಲಿ ಸಂಸ್ಥೆ ನಿರ್ಮಾಣದ ‘ಟಗರು ಪಲ್ಯ’ ಸಿನಿಮಾ ರಿಲೀಸ್ ಮಾಡಿದ್ದರು. ಟಗರು ಪಲ್ಯ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಿರ್ಮಾಣದ ಜೊತೆಗೆ ಡಾಲಿ ಅನೇಕ ಸಿನಿಮಾಗಳಲ್ಲಿ  ನಟಿಸುತ್ತಿದ್ದಾರೆ. ಕನ್ನಡದ ಜೊತೆಗೆ ತೆಲುಗಿನ ಪುಷ್ಪ-2 ಸಿನಿಮಾದಲ್ಲೂ ಕಾಣಿಸಿಕೊಂಡಿದ್ದಾರೆ ಈ ನಡುವೆ ಜಾಹೀರಾತು ಲೋಕಕ್ಕೆ ಡಾಲಿ ಲಗ್ಗೆ ಇಟ್ಟಿರುವುದು ಅವರ ಅಭಿಮಾನಿ ಬಳಗಕ್ಕೆ ಸಂತಸ ತಂದಿದೆ.

  • ‘ಲಿಡ್ಕರ್’ ಉತ್ಪನ್ನಗಳಿಗೆ ಡಾಲಿ ಧನಂಜಯ್ ರಾಯಭಾರಿ

    ‘ಲಿಡ್ಕರ್’ ಉತ್ಪನ್ನಗಳಿಗೆ ಡಾಲಿ ಧನಂಜಯ್ ರಾಯಭಾರಿ

    ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್)ಕ್ಕೆ (Lidkar) ಇದೇ ಮೊದಲ ಬಾರಿಗೆ ರಾಯಭಾರಿಯನ್ನ (Ambassador) ಆಯ್ಕೆ ಮಾಡಿದೆ. ನಟ‌ರಾಕ್ಷಸ   ಡಾಲಿ ಧನಂಜಯ್ (Dolly Dhananjay) ಲಿಡ್ಕರ್ ಗೆ  ರಾಯಭಾರಿ ಆಗಿದ್ದಾರೆ. ಸ್ಯಾಂಡಲ್‌ವುಡ್ ನಟ, ನಿರ್ಮಾಪಕನಾಗಿ ಡಾಲಿ ಸಿಕ್ಕಾಪಟ್ಟೆ ಬ್ಯುಸಿ ಇರುವ ಸ್ಟಾರ್. ನಟನೆ, ನಿರ್ಮಾಣದ ಜೊತೆಗೀಗ ಧನಂಜಯ ಜಾಹೀರಾತು ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ಮೊದಲ ಬಾರಿಗೆ ಡಾಲಿ ಸರ್ಕಾರದ ಜಾಹೀರಾತಿನಲ್ಲಿ ಮಿಂಚುವ ಮೂಲಕ ಲಿಡ್ಕರ್ ಬ್ರಾಂಡ್ ಪ್ರಮೋಟ್ ಮಾಡುತ್ತಿದ್ದಾರೆ.

    ಲಿಡ್ಕರ್ ನಲ್ಲಿ 50 ಸಾವಿರಕ್ಕೂ ಹೆಚ್ಚು ಚರ್ಮ ಕುಶಲಕರ್ಮಿಗಳ ಕುಟುಂಬವಿದೆ. ಚರ್ಮ ಕೈಗಾರಿಕೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸರ್ಕಾರ ಸ್ಯಾಂಡಲ್‌ವುಡ್ ಸ್ಟಾರ್ ಧನಂಜಯ್ ಅವರನ್ನು ರಾಯಾಭಾರಿಯಾಗಿ ನೇಮಕಮಾಡಿದೆ. ಈಗಾಗಲೇ ಡಾಲಿ ಜೊತೆ ಮಾತುಕತೆಯಾಗಿದ್ದು ಧನಂಜಯ ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಅಧಿಕೃತ ಪ್ರಕಟಣೆಯೊಂದೆ ಬಾಕಿ ಇದೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಲಿಡ್ಕರ್ ವ್ಯವಸ್ಥಾಪಕ ನಿರ್ದೇಶಕಿ ಕೆ.ಎಂ.ಎಸ್ ವಸುಂಧರಾ, ಧನಂಜಯ್ ಅವರು ರಾಯಭಾರಿಯಾಗಿದ್ದು ತುಂಬಾ ಖುಷಿ ಇದೆ. ಅವರು ಸ್ಯಾಂಡಲ್‌ವುಡ್‌ನ ಲೀಡಿಂಗ್ ನಟ ಎಲ್ಲಾ ವರ್ಗದ ಜನರಿಗೆ ತಲುಪುವ ಕಲಾವಿದ ಹಾಗಾಗಿ ಅವರನ್ನ ಆಯ್ಕೆ ಮಾಡಿದ್ದೇವೆ ಸಚಿವರು ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದ್ದು ಆದಷ್ಟು ಬೇಗ ಜಾಹೀರಾತಿನ ಚಿತ್ರೀಕರಣ ನಡೆಯಲಿದೆ ಎಂದಿದ್ದಾರೆ

    ಧನಂಜಯ ಸದ್ಯ ಸಾಲು ಸಾಲು ಸಿನಿಮಾಗಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಧನಂಜಯ್ ತಮ್ಮದೇ ಡಾಲಿ ಸಂಸ್ಥೆ ನಿರ್ಮಾಣದ ‘ಟಗರು ಪಲ್ಯ’ ಸಿನಿಮಾ ರಿಲೀಸ್ ಮಾಡಿದ್ದರು. ಟಗರು ಪಲ್ಯ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಿರ್ಮಾಣದ ಜೊತೆಗೆ ಡಾಲಿ ಅನೇಕ ಸಿನಿಮಾಗಳಲ್ಲಿ  ನಟಿಸುತ್ತಿದ್ದಾರೆ. ಕನ್ನಡದ ಜೊತೆಗೆ ತೆಲುಗಿನ ಪುಷ್ಪ-2 ಸಿನಿಮಾದಲ್ಲೂ ಕಾಣಿಸಿಕೊಂಡಿದ್ದಾರೆ ಈ ನಡುವೆ ಜಾಹೀರಾತು ಲೋಕಕ್ಕೆ ಡಾಲಿ ಲಗ್ಗೆ ಇಟ್ಟಿರುವುದು ಅವರ ಅಭಿಮಾನಿ ಬಳಗಕ್ಕೆ ಸಂತಸ ತಂದಿದೆ.

  • ಲಿಡ್ಕರ್ ಮೂಲಕ ಸ್ವಯಂ ಉದ್ಯೋಗ ಒದಗಿಸಲು ಆದ್ಯತೆ: ಬೊಮ್ಮಾಯಿ

    ಲಿಡ್ಕರ್ ಮೂಲಕ ಸ್ವಯಂ ಉದ್ಯೋಗ ಒದಗಿಸಲು ಆದ್ಯತೆ: ಬೊಮ್ಮಾಯಿ

    ಬೆಂಗಳೂರು: ರಾಜ್ಯದ ಪ್ರತಿ ತಾಲೂಕಿನಲ್ಲಿ 100 ಹೆಚ್ಚುವರಿ ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ ನೀಡಲು ತೀರ್ಮಾನಿಸಲಾಗಿದ್ದು, ಲಿಡ್ಕರ್ ಯುವಕರಿಗೆ ಉದ್ಯೋಗವನ್ನು ಕಲ್ಪಿಸಲು ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ರಾಜ್ಯ ಮಟ್ಟದ ಚರ್ಮ ಕುಶಲಕರ್ಮಿಗಳ ಸಮಾವೇಶ ಹಾಗೂ ಚರ್ಮ ಕರಕುಶಲ ವಸ್ತುಪ್ರದರ್ಶನ ಉದ್ಘಾಟಿಸಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಚಮ್ಮಾರರ ಅಭಿವೃದ್ಧಿ ಸರ್ಕಾರ ಬದ್ದ ಎಂದರು. ಇದನ್ನೂ ಓದಿ: ಟಾಪ್ 100 ಜಾಗತಿಕ ತಂತ್ರಜ್ಞಾನ ನಾಯಕರ ಪಟ್ಟಿಯಲ್ಲಿ ‘ಕೂ’ ಸಹ-ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣಗೆ ಸ್ಥಾನ

    ಲಿಡ್ಕರ್ ನಿಗಮಕ್ಕೆ ಈ ಬಾರಿ 25 ಕೋಟಿ ರೂ.ಗಳ ಅನುದಾನವನ್ನು ಮೀಸಲಿಡಲಾಗಿದೆ. ನಿಗಮವು ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸಿದ್ದಲ್ಲಿ ಪೂರಕ ಬಜೆಟ್‍ನಲ್ಲಿ ಹೆಚ್ಚಿನ ಅನುದಾನವನ್ನು ನೀಡಲಾಗುವುದು. ಯುವಕರಿಗೆ ಉದ್ಯೋಗ ನೀಡುವ ಮೂಲಕ ಸ್ವಾಭಿಮಾನದ ಸ್ವಾವಲಂಬಿ ಬದುಕು ನಡೆಸಲು ಅನುವು ಮಾಡಿಕೊಡಬೇಕು. ಚರ್ಮೋದ್ಯಮದ ಆಧುನೀಕರಣದಲ್ಲಿ ದೊಡ್ಡ ಬದಲಾವಣೆ ಆಗಿದೆ. ಅಂತರರಾಷ್ಟ್ರೀಯ ಮಟ್ಟದ ವಿನ್ಯಾಸವಿರುವ ಪೀಠೋಪಕರಣಗಳು ಪ್ರದರ್ಶನದಲ್ಲಿ ಲಭ್ಯವಿದೆ. ಪೀಠೋಪಕರಣ ಉದ್ಯಮ ವಿಸ್ತಾರವಾದದ್ದು, ಅವುಗಳಿಗೆ ಬ್ರ್ಯಾಡಿಂಗ್ ಮಾಡುವ ಉತ್ತಮ ಬೆಲೆ ಹಾಗೂ ಮಾರುಕಟ್ಟೆ ಸಿಗುತ್ತದೆ. ಈ ಬಗ್ಗೆ ಹೆಚ್ಚಿನ ಗಮನ ನೀಡುವಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಸಲಹೆ ನೀಡಿದರು.

    ಚರ್ಮೋದ್ಯಮ ಅನಾದಿಕಾಲದಿಂದಲೂ ಇದೆ. ಚರ್ಮ ಕುಶಲಕರ್ಮಿಗಳು ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಮುಂದುವರಿಯಬೇಕು. ಇದಕ್ಕಾಗಿ ಚರ್ಮೋದ್ಯಮದಲ್ಲಿ ನೂತನ ತಂತ್ರಜ್ಞಾನ, ಯಂತ್ರೋಪಕರಣಗಳನ್ನು ಬಳಸುವ ಮೂಲಕ ಚರ್ಮದ ಉತ್ಪನ್ನ ಹಾಗೂ ಉತ್ಪಾದನೆಯನ್ನು ಹೆಚ್ಚಿಸಿಕೊಳ್ಳಬೇಕು. ಶಿಕ್ಷಣವನ್ನು ಪಡೆದು ಸಮಾಜದಲ್ಲಿ ಇತತರಿಗೆ ಪ್ರೇರಣೆಯನ್ನು ನೀಡುವಂತೆ ಬಾಳಬೇಕು. ಈ ದಿಸೆಯಲ್ಲಿ ಲಿಡ್ಕರ್ ಪಾತ್ರ ದೊಡ್ಡದಿದೆ. ಚರ್ಮೋದ್ಯಮದಲ್ಲಿ ಉದ್ಯೋಗ, ಉತ್ಪಾದನೆಗಳನ್ನು ಹೆಚ್ಚಿಸಲು ಎಲ್ಲ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳಲಿದೆ. ಲಿಡ್ಕರ್ ನಿಗಮದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಲಿಡ್ಕರ್ ಸಂಸ್ಥೆಯನ್ನು ಸಮಾಜ ಕಲ್ಯಾಣ ಇಲಾಖೆಗೆ ಸೇರಿಸಿ ಕಳೆದ ಐದು ವರ್ಷಗಳಿಂದ 237 ಕೋಟಿ ರೂ. ಅನುದಾನ ಒದಗಿಸುವ ಮೂಲಕ 33,000 ಉದ್ಯಮಗಳಿಗೆ ಸಹಾಯವನ್ನು ಮಾಡಲಾಗಿದೆ ಎಂದರು. ಇದನ್ನೂ ಓದಿ: ಕನ್ನಡದ ‘ಲಾಕ್ ಡೌನ್’ ಸಿನಿಮಾ ನಟಿ ಶಹಾನಾ ಅನುಮಾನಾಸ್ಪದ ಸಾವು – ಪತಿ ವಶಕ್ಕೆ

    ಎಸ್‍ಸಿ, ಎಸ್‍ಟಿ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಪರಿಶಿಷ್ಟ ಜಾತಿಯವರು ಜಮೀನು ಖರೀದಿಗೆ ಇದ್ದ 15 ಲಕ್ಷ ಅನುದಾನವನ್ನು 20 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಪರಿಶಿಷ್ಟ ಜಾತಿಯ 30 ಲಕ್ಷಕ್ಕಿಂತ ಹೆಚ್ಚಿನ ಮನೆಗಳಿಗೆ 75 ಲಕ್ಷ ಯೂನಿಟ್‍ವರೆಗೆ ಉಚಿತ ವಿದ್ಯುತ್ ನೀಡುವ ವಿನೂತನ ಕಾರ್ಯಕ್ರಮ ಪ್ರಾರಂಭಿಸಲಾಗಿದೆ. ಶಿಕ್ಷಣ, ಉದ್ಯೋಗ, ಸಬಲೀಕರಣ ನೀತಿಯ ಆಧಾರದ ಮೇಲೆ ಕೆಲಸ ಮಾಡಲಾಗುತ್ತಿದೆ. ಎಸ್‍ಸಿ, ಎಸ್‍ಟಿ, ಓಬಿಸಿ ಜನಾಂಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ರಾಜ್ಯದ ಪ್ರಮುಖ ಶೈಕ್ಷಣಿಕ ಕೇಂದ್ರಗಳಲ್ಲಿ 1,000 ಕೊಠಡಿಗಳ ಹಾಸ್ಟೆಲ್‍ಗಳನ್ನು ನಿರ್ಮಿಸಲಾಗುವುದು. ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ, ಯುವಕರಿಗೆ ಉದ್ಯೋಗ ಸೃಷ್ಟಿ ಆದ್ಯತೆ ನೀಡಲಾಗಿದೆ. ಸರ್ಕಾರದ ಸಾಲ ಸೌಲಭ್ಯದ ಯೋಜನೆಗಳು ಜನರಿಗೆ ಒದಗಿಸಲು ಜಿಲ್ಲೆಗೊಂದಂತೆ ಆಂಕರ್ ಬ್ಯಾಂಕ್ ಮಾಡಲು ಆದೇಶ ನೀಡಲಾಗಿದೆ ಎಂದು ಹೇಳಿದರು.