Tag: ಲಿಯಾಮ್‌ ಲಿವಿಂಗ್‌ಸ್ಟೋನ್‌

  • ಬಟ್ಲರ್‌ ಬೊಂಬಾಟ್‌ ಫಿಫ್ಟಿ; ಆರ್‌ಸಿಬಿ ಹ್ಯಾಟ್ರಿಕ್‌ ಗೆಲುವಿನ ಕನಸು ಭಗ್ನ – ಗುಜರಾತ್‌ಗೆ 8 ವಿಕೆಟ್‌ಗಳ ಭರ್ಜರಿ ಜಯ

    ಬಟ್ಲರ್‌ ಬೊಂಬಾಟ್‌ ಫಿಫ್ಟಿ; ಆರ್‌ಸಿಬಿ ಹ್ಯಾಟ್ರಿಕ್‌ ಗೆಲುವಿನ ಕನಸು ಭಗ್ನ – ಗುಜರಾತ್‌ಗೆ 8 ವಿಕೆಟ್‌ಗಳ ಭರ್ಜರಿ ಜಯ

    ಬೆಂಗಳೂರು: ಜೋಸ್‌ ಬಟ್ಲರ್‌ (Jos Buttler) ಬೊಂಬಾಟ್‌ ಅರ್ಧಶತಕ, ಮೊಹಮ್ಮದ್‌ ಸಿರಾಜ್‌ (Mohammed Siraj) ಬೆಂಕಿ ಬೌಲಿಂಗ್‌ ದಾಳಿ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿರುದ್ಧ ಗುಜರಾತ್‌ ಟೈಟಾನ್ಸ್‌ (Gujarat Titans) 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಆರಂಭಿಕ ಎರಡೂ ಪಂದ್ಯಗಳನ್ನು ಗೆದ್ದು ಹ್ಯಾಟ್ರಿಕ್‌ ಗೆಲುವಿನ ಕನಸು ಕಂಡಿದ್ದ ಆರ್‌ಸಿಬಿ ಆಸೆಗೆ ತಣ್ಣೀರು ಎರಚಿದೆ.

    ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಕ್ರೀಸ್‌ಗಿಳಿದಿದ್ದ ಆರ್‌ಸಿಬಿ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ಗಳನ್ನು ಕಳೆದುಕೊಂಡು 169 ರನ್‌ ಗಳಿಸಿತ್ತು. 170 ರನ್‌ಗಳ ಗುರಿ ಬೆನ್ನಟ್ಟಿದ ಗುಜರಾತ್‌ ಟೈಟಾನ್ಸ್‌ 17.5 ಓವರ್‌ಗಳಲ್ಲೇ 2 ವಿಕೆಟ್‌ ನಷ್ಟಕ್ಕೆ 170 ರನ್‌ ಗಳಿಸಿ ಗೆಲುವು ಸಾಧಿಸಿತು.

    ನಿಧಾನಗತಿಯ ಬ್ಯಾಟಿಂಗ್‌ ಆರಂಭಿಸಿದ ಗುಜರಾತ್‌ ಟೈಟಾನ್ಸ್‌ 4.4 ಓವರ್‌ಗಳಲ್ಲಿ 32 ರನ್‌ ಗಳಿಸಿದ್ದಾಲೇ ತನ್ನ ಮೊದಲ ವಿಕೆಟ್‌ ಕಳೆದುಕೊಂಡಿತು. ಈ ವೇಳೆ 2ನೇ ವಿಕೆಟ್‌ಗೆ ಜೊತೆಗೂಡಿದ ಸಾಯಿ ಸುದರ್ಶನ್‌ (Sai Sudharsan) ಹಾಗೂ ಜೋಸ್‌ ಬಟ್ಲರ್‌ ಉತ್ತಮ ಇನ್ನಿಂಗ್ಸ್‌ ಕಟ್ಟುವಲ್ಲಿ ಯಶಸ್ವಿಯಾದರು. 2ನೇ ವಿಕೆಟಿಗೆ ಈ ಜೋಡಿ 47 ಎಸೆತಗಳಲ್ಲಿ 75 ರನ್‌ಗಳ ಜೊತೆಯಾಟ ನೀಡಿತು. ಇದಾದ ಬಳಿಕ ಮುರಿಯದ 3ನೇ ವಿಕೆಟಿಗೆ ಬಟ್ಲರ್‌ – ರುದರ್ಫೋರ್ಡ್ 36 ರನ್‌ (32 ಎಸೆತ) ಜೊತೆಯಾಟದಿಂದ ಟೈಟಾನ್ಸ್‌ ಪಡೆ ಸುಲಭ ಜಯ ಸಾಧಿಸುವಲ್ಲಿ ಯಶಸ್ವಿಯಾಯಿತು.

    ಬಟ್ಲರ್‌ ಬೊಂಬಾಟ್‌ ಬ್ಯಾಟಿಂಗ್‌:
    ಕಳೆದ ಎರಡೂ ಪಂದ್ಯಗಳಲ್ಲಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ ಜೋಸ್‌ ಬಟ್ಲರ್‌ 3ನೇ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಅಬ್ಬರಿಸಿ ಬೊಬ್ಬರಿದರು. 31 ಎಸೆತಗಳಲ್ಲಿ 4 ಬೌಂಡರಿ, 4 ಸಿಕ್ಸರ್‌ ಸಹಿತ ಅರ್ಧಶತಕ ಸಿಡಿಸಿದ್ದ ಬಟ್ಲರ್‌ ಒಟ್ಟು 39 ಎಸೆತಗಳಲ್ಲಿ 73 ರನ್‌ (6 ಸಿಕ್ಸ್‌, 5 ಬೌಂಡರಿ) ಚಚ್ಚಿ ಅಜೇಯರಾಗುಳಿದರು. ಇದರೊಂದಿಗೆ ಆರಂಭಿಕ ಆಟಗಾರ ಸಾಯಿ ಸುದರ್ಶನ್‌ 49 ರನ್‌ (36 ಎಸೆತ, 7 ಬೌಂಡರಿ, 1 ಸಿಕ್ಸರ್‌), ಸ್ಫೋಟಕ ಪ್ರದರ್ಶನ ನೀಡಿದ ಶೆರ್ಫೇನ್ ರುದರ್ಫೋರ್ಡ್ 18 ಎಸೆತಗಳಲ್ಲಿ 30 ರನ್‌ (3 ಸಿಕ್ಸರ್, 1 ಬೌಂಡರಿ), ನಾಯಕ ಶುಭಮನ್‌ ಗಿಲ್‌ 14 ರನ್‌ ಕೊಡುಗೆ ನೀಡಿದರು.

    ಇದಕ್ಕೂ ಮುನ್ನ ಟಾಸ್‌ ಸೋತು ಮೊದಲು ಕ್ರೀಸ್‌ಗಿಳಿದಿದ್ದ ಆರ್‌ಸಿಬಿ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ಗಳನ್ನು ಕಳೆದುಕೊಂಡು 169 ರನ್‌ಗಳನ್ನು ಬಾರಿಸುವ ಮೂಲಕ ಗುಜರಾತ್‌ಗೆ 170 ಸಾಧಾರಣ ರನ್‌ಗಳ ಗುರಿ ನೀಡಿತು. ಆರಂಭಿಕರಾಗಿ ಕಣಕ್ಕಿಳಿಸಿದ್ದ ವಿರಾಟ್‌ ಕೊಹ್ಲಿ, ಫಿಲ್‌ ಸಾಲ್ಟ್‌ ಸ್ಫೋಟಕ ಪ್ರದರ್ಶನ ನೀಡಲು ಮುಂದಾಗಿದ್ದರು. ಆದ್ರೆ ಒಂದೆಡೆ ರನ್‌ ಕಲೆ ಹಾಕುತ್ತಿದ್ದಂತೆ ಮತ್ತೊಂದೆ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಾ ಸಾಗಿತು. ಪವರ್‌ ಪ್ಲೇನಲ್ಲೇ ವೇಗಿ ಮೊಹಮ್ಮದ್‌ ಸಿರಾಜ್‌ ಫಿಲ್‌ ಸಾಲ್ಟ್‌ ಹಾಗೂ ದೇವದತ್‌ ಪಡಿಕಲ್‌ ವಿಕೆಟ್‌ ಕಿತ್ತಿದ್ದು, ಆರ್‌ಸಿಬಿಗೆ ಬಹುದೊಡ್ಡ ಹೊಡೆತ ನೀಡಿತು.

    ಲಿವಿಂಗ್‌ಸ್ಟೋನ್‌ ಅಮೋಘ ಅರ್ಧಶತಕ:
    ಬಳಿಕ ಕಣಕ್ಕಿಳಿದು ತಾಳ್ಮೆಯ ಆಟ ಆಡಿದ ಲಿಯಾಮ್ ಲಿವಿಂಗ್‌ಸ್ಟೋನ್ ಆಕರ್ಷಕ ಅರ್ಧಶತಕ ಸಿಡಿಸಿದರು. 40 ಎಸೆತಗಳಲ್ಲಿ 54 ರನ್‌ (5 ಸಿಕ್ಸರ್‌, 1 ಬೌಂಡರಿ) ಚಚ್ಚಿದ್ದರು. ಇವರಿಗೆ ಉತ್ತಮ ಸಾಥ್‌ ನೀಡಿದ ಜಿತೇಶ್‌ ಶರ್ಮಾ 33 ರನ್‌ (21 ಎಸೆತ, 1 ಸಿಕ್ಸರ್‌, 5 ಬೌಂಡರಿ) ಗಳಿಸಿ ಔಟಾಗಿ ಪೆವಿಲಿಯನ್‌ನತ್ತ ತೆರಳಿದರು. ಇನ್ನು ಕೊನೆಯಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ ಟಿಂ ಡೇವಿಡ್‌ 16 ರನ್‌ ಚಚ್ಚಿ 170 ರನ್‌ಗಳ ಗುರಿ ನೀಡುವಲ್ಲಿ ಯಶಸ್ವಿಯಾದರು.

    ಮತ್ತೊಂದೆಡೆ ಗುಜರಾತ್‌ ಪರ ಬೌಲಿಂಗ್‌ನಲ್ಲಿ ಮೊಹಮ್ಮದ್‌ ಸಿರಾಜ್‌ 3 ವಿಕೆಟ್‌ ಪಡೆದರೆ, ಸಾಯಿ ಕಿಶೋರ್‌ 2 ವಿಕೆಟ್‌, ಪ್ರಸಿದ್‌ ಕೃಷ್ಣ, ಅರ್ಷದ್‌ ಖಾನ್‌ ಮತ್ತು ಇಶಾಂತ್‌ ಶರ್ಮಾ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

  • 2ನೇ ಪಂದ್ಯದಲ್ಲಿ ಎಡವಿದ ಭಾರತ – ಇಂಗ್ಲೆಂಡ್‌ಗೆ 100 ರನ್‌ಗಳ ಭರ್ಜರಿ ಜಯ

    2ನೇ ಪಂದ್ಯದಲ್ಲಿ ಎಡವಿದ ಭಾರತ – ಇಂಗ್ಲೆಂಡ್‌ಗೆ 100 ರನ್‌ಗಳ ಭರ್ಜರಿ ಜಯ

    ಲಂಡನ್: ಆರಂಭಿಕ ಪಂದ್ಯದಲ್ಲಿ ಮಾರಕ ವೇಗದ ಬೌಲಿಂಗ್ ಹಾಗೂ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದ ಟೀಂ ಇಂಡಿಯಾ, ಇಂಗ್ಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಮುಗ್ಗರಿಸಿತು. ರೀಸ್ ಟೋಪ್ಲಿ ಮಾರಕ ಬೌಲಿಂಗ್‌ಗೆ ತತ್ತರಿಸಿದ ಭಾರತ 100 ರನ್‌ಗಳ ಅಂತರದಿಂದ ಸೋಲು ಕಂಡಿತು.

    ಲಾರ್ಡ್ಸ್ ಅಂಗಳದಲ್ಲಿ ನಡೆದ 2ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 49 ಓವರಲ್ಲಿ 246 ಗಳ ಸಾಧಾರಣ ಮೊತ್ತ ಗಳಿಸಿ ಆಲೌಟಾಯಿತು. ಈ ರನ್‌ಗಳ ಗುರಿ ಬೆನ್ನತ್ತಿದ ಟೀಂ ಇಂಡಿಯಾ 38.5 ಓವರ್‌ಗಳಲ್ಲೇ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 146 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಅತಿಥೇಯ ಇಂಗ್ಲೆಂಡ್ 3 ಪಂದ್ಯಗಳ ಸರಣಿ 1-1 ಅಂತರದಿಂದ ಸಮಬಲಗೊಂಡಿತು. ಇದನ್ನೂ ಓದಿ: ಇಂದು ಭಾರತ-ಇಂಗ್ಲೆಂಡ್ 2ನೇ ಏಕದಿನ – ಸರಣಿ ಗೆಲ್ಲುವ ತವಕದಲ್ಲಿ ಟೀಂ ಇಂಡಿಯಾ

    ಆರಂಭಿಕ ಆಘಾತ, ಬ್ಯಾಟಿಂಗ್ ವೈಫಲ್ಯ:
    ಟಾಸ್ ಗೆದ್ದು ನಂತರ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಆರಂಭಿಕದಲ್ಲೇ ಆಘಾತ ಎದುರಿಸಿತು. ನಾಯಕ ರೋಹಿತ್ ಶರ್ಮಾ ಮತ್ತು ರಿಷಭ್ ಪಂತ್ ಶೂನ್ಯ ಸುತ್ತಿದರು. ವಿರಾಟ್ ಕೊಹ್ಲಿ 25 ಎಸೆತಗಳಲ್ಲಿ 16 ರನ್ ಗಳಿಸಿ ಮತ್ತೆ ಬ್ಯಾಟಿಂಗ್ ವೈಫಲ್ಯ ಎದುರಿಸಿದರು. ಸೂರ್ಯಕುಮಾರ್ ಯಾದವ್ 29 ಎಸೆತಗಳಲ್ಲಿ 27, ಹಾರ್ದಿಕ್ ಪಾಂಡ್ಯ 44 ಎಸೆತಗಳಲ್ಲಿ 29 ಹಾಗೂ ರವೀಂದ್ರ ಜಡೇಜಾ 44 ಎಸೆತಗಳಲ್ಲಿ 29 ರನ್‌ಗಳಿಸಿ ತಂಡಕ್ಕೆ ನೆರವಾದರು. ಆದರೆ ಅದನ್ನು ದೊಡ್ಡ ಮೊತ್ತವಾಗಿ ಪರಿವರ್ತಿಸಿ ಗೆಲುವು ದಾಖಲಿಸುವಲ್ಲಿ ವಿಫಲರಾದರು. ಇದನ್ನೂ ಓದಿ: ಸ್ಫೋಟಕ ಶತಕ- ಐಸಿಸಿ ಟಿ20 ರ್‍ಯಾಂಕಿಂಗ್‌ನಲ್ಲಿ ಸೂರ್ಯ ಭಾರೀ ಹೈಜಂಪ್‌

    ವಿಲಿ, ಮೊಯಿನ್ ಅಲಿ ಆಸರೆ:
    ಭಾರತದ ಬೌಲಿಂಗ್ ಪಡೆಯ ಪರಿಣಾಮಕಾರಿ ದಾಳಿಯಿಂದಾಗಿ ಇಂಗ್ಲೆಂಡ್ ತಂಡವು 102 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಲಿಯಾಮ್ ಲಿವಿಂಗ್‌ಸ್ಟೋನ್ 33ರನ್ (2 ಸಿಕ್ಸರ್, 2 ಬೌಂಡರಿ), ಮೊಯಿನ್ ಅಲಿ 47 (2 ಬೌಂಡರಿ, 2 ಸಿಕ್ಸರ್) ಜೊತೆಯಾಟದಲ್ಲಿ 6ನೇ ವಿಕೆಟ್‌ಗೆ 62 ರನ್‌ಗಳನ್ನು ಸಿಡಿಸಿದರು. ನಂತರದಲ್ಲಿ ಕ್ರೀಸ್‌ಗಿಳಿದು ಅಬ್ಬರಿಸಿದ ಡೇವಿಡ್ ವಿಲಿ 41 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರು. ಇನ್ನೂ ಜೇಸನ್ ರಾಯ್ 23ರನ್ ಗಳಿಸಿದರೆ ಜಾನಿ ಬೈರ್‌ಸ್ಟೋವ್ 6 ಬೌಂಡರಿಗಳೊಂದಿಗೆ 38 ರನ್ ಸಿಡಿಸಿದರು.

    ಭಾರತ ತಂಡಕ್ಕೆ ಈ ಪಂದ್ಯದಲ್ಲಿ ಆರಂಭದಲ್ಲಿ ಯಶಸ್ಸು ಸಿಗಲಿಲ್ಲ. ಆದರೆ 9ನೇ ಓವರ್‌ನಲ್ಲಿ ಜೇಸನ್ ರಾಯ್ ವಿಕೆಟ್ ಕಬಳಿಸಿದ ಹಾರ್ದಿಕ್ ಪಾಂಡ್ಯ ಮೊದಲ ಯಶಸ್ಸು ಪಡೆದರು. ಚಾಹಲ್ ಜಾನಿ ಬೈರ್‌ಸ್ಟೋವ್ ವಿಕೆಟ್ ಅನ್ನು 15ನೇ ಓವರ್‌ನಲ್ಲಿ ಉರುಳಿಸಿದ ಚಾಹಲ್ ತಮ್ಮ ಖಾತೆ ತೆರೆದರು. ಜೋ ರೂಟ್ ಅವರನ್ನು LBW ಮಾಡಿ ಪೆವಿಲಿಯನ್‌ಗೆ ಕಳುಹಿಸಿದರು. ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ನಲ್ಲಿ ಅಬ್ಬರಿಸುತ್ತಿದ್ದ ಡೇವಿಡ್ ವಿಲಿಗೆ ಅರ್ಧಶತಕ ಗಳಿಸಲು ಬುಮ್ರಾ ಬ್ರೇಕ್ ಹಾಕಿದರು. ಮೊದಲ ಪಂದ್ಯದಲ್ಲಿ 6 ವಿಕೆಟ್ ಗಳಿಸಿದ್ದ ಬುಮ್ರಾ ಇಲ್ಲಿ ಡೇವಿಡ್ ಸೇರಿದಂತೆ ಎರಡು ವಿಕೆಟ್ ಗಳಿಸಿದರು.

    ಒಟ್ಟಿನಲ್ಲಿ ಮೊದಲ ಪಂದ್ಯದಲ್ಲಿ ಬೌಲಿಂಗ್, ಬ್ಯಾಟಿಂಗ್ ವಿಭಾಗದಲ್ಲಿ ಅಬ್ಬರಿಸಿದ ಟೀಂ ಇಂಡಿಯಾ 2ನೇ ಪಂದ್ಯದಲ್ಲಿ ಎರಡೂ ವಿಭಾಗಗಳ ವೈಫಲ್ಯದಿಂದಾಗಿ ಸೋಲನ್ನು ಅನುಭವಿಸಿತು.

    Live Tv
    [brid partner=56869869 player=32851 video=960834 autoplay=true]

  • ಬುಮ್ರಾ ಬೌಲಿಂಗ್‌ ದಾಳಿಗೆ ತತ್ತರಿಸಿದ ಆಂಗ್ಲರು – ಭಾರತಕ್ಕೆ 10 ವಿಕೆಟ್‌ಗಳ ಭರ್ಜರಿ ಜಯ

    ಬುಮ್ರಾ ಬೌಲಿಂಗ್‌ ದಾಳಿಗೆ ತತ್ತರಿಸಿದ ಆಂಗ್ಲರು – ಭಾರತಕ್ಕೆ 10 ವಿಕೆಟ್‌ಗಳ ಭರ್ಜರಿ ಜಯ

    ಲಂಡನ್‌: ಜಸ್ಪಿತ್‌ ಬುಮ್ರಾ, ಮೊಹಮದ್‌ ಶಮಿ ಮಾರಕ ಬೌಲಿಂಗ್‌ ದಾಳಿ ಹಾಗೂ ರೋಹಿತ್‌ ಶರ್ಮಾ ಆಕರ್ಷಕ ಅರ್ಧಶತಕದ ನೆರವಿನಿಂದ ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.

    ಇಂಗ್ಲೆಂಡ್‌ನ ಕೆನ್ನಿಂಗ್ಟನ್‌ನ ಓವಲ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವ ಅವಕಾಶ ಪಡೆದ ಇಂಗ್ಲೆಂಡ್‌ ತಂಡ 25.2 ಓವರ್‌ಗಳಲ್ಲಿ 110 ರನ್‌ಗಳಿಗೆ ಸರ್ವಪತನ ಕಂಡಿತು. ಅಲ್ಪಮೊತ್ತದ ಗುರಿ ಬೆನ್ನತ್ತಿದ ಭಾರತ 18.4 ಓವರ್‌ಗಳಲ್ಲೇ ಯಾವುದೇ ವಿಕೆಟ್‌ ನಷ್ಟವಿಲ್ಲದೇ 114 ರನ್‌ಗಳಿಸಿ ಆಂಗ್ಲರನ್ನು ಮೊದಲ ಪಂದ್ಯದಲ್ಲೇ ಮಣ್ಣು ಮುಕ್ಕಿಸಿತು.

    ಆರಂಭಿಕರಾಗಿ ಕಣಕ್ಕಿಳಿದ ರೋಹಿತ್‌ ಶರ್ಮಾ ಹಾಗೂ ಶಿಖರ್‌ ಧವನ್‌ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. ಕೊನೆಯವರೆಗೂ ವಿಕೆಟ್‌ ಬಿಟ್ಟುಕೊಡದೇ ಆಂಗ್ಲ ಬೌಲರ್‌ಗಳ ಬೆವರಿಳಿಸಿದರು. ಇದನ್ನೂ ಓದಿ: 9 ವರ್ಷದ ಬಾಲಕನಾಗಿದ್ದಾಗ ನನ್ನನ್ನು ಕಳ್ಳಸಾಗಣೆ ಮಾಡಲಾಗಿತ್ತು: ಒಲಿಂಪಿಕ್, ವಿಶ್ವ ಚಾಂಪಿಯನ್‌ನ ಸ್ಫೋಟಕ ಹೇಳಿಕೆ

    ರೋಹಿತ್‌ ಆಕರ್ಷಕ ಅರ್ಧ ಶತಕ:
    ಐಪಿಎಲ್‌ನಲ್ಲಿ ತೀವ್ರ ಮುಖಭಂಗಕ್ಕೀಡಾಗಿದ್ದ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಉತ್ತಮ ಫಾರ್ಮ್‌ನಲ್ಲಿದ್ದು, ಅದ್ಭುತ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. ರೋಹಿತ್‌ ಶರ್ಮಾ 58 ಎಸೆತಗಳಲ್ಲಿ 76 ರನ್‌ (7 ಬೌಂಡರಿ, 5 ಸಿಕ್ಸರ್‌) ಗಳಿಸಿದರು. ಇದಕ್ಕೆ ಜೊತೆಯಾಗಿ ಸಾಥ್‌ ನೀಡಿದ ಶಿಖರ್‌ ಧವನ್‌ 54 ಎಸೆತಗಳಲ್ಲಿ 31 ರನ್‌ ( 4 ಬೌಂಡರಿ) ಸಿಡಿಸುವ ಮೂಲಕ ಟೀಂ ಇಂಡಿಯಾ ಗೆಲುವಿಗೆ ನೆರವಾದರು.

    ಬೂಮ್ರಾ ಬೌಲಿಂಗ್‌, ಶಮಿ ಶೈನ್‌:
    ಟೀಂ ಇಂಡಿಯಾದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ತನ್ನ ಮೊದಲ ಓವರ್‌ನಿಂದಲೇ ಆರ್ಭಟಿಸಲು ಆರಂಭಿಸಿದ್ದರು. ತನ್ನ ಪ್ರಥಮ ಓವರ್‌ನಲ್ಲಿ ಜೇಸನ್ ರಾಯ್ ಹಾಗೂ ಜೋ ರೂಟ್ ಇಬ್ಬರನ್ನು ಪೆವಿಲಿಯನ್‌ಗೆ ಕಳುಹಿಸಿದರು. ಬಳಿಕ 7 ರನ್‌ಗಳಿಸಿದ್ದ ಬೈರ್‌ಸ್ಟೋವ್ ಕೂಡ ಬೂಮ್ರಾ ದಾಳಿಗೆ ಬಲಿಯಾದರು. ನಂತರದಲ್ಲಿ ಕ್ರೀಸ್‌ಗಿಳಿದ ಲಿಯಾಮ್ ಲಿವಿಂಗ್‌ಸ್ಟೋನ್‌, ಡೇವಿಡ್‌ ವಿಲ್ಲಿ ಹಾಗೂ ಬ್ರಿಡನ್ ಕೇರ್ಸ್ ಶೂನ್ಯ ಸುತ್ತಿ ಬುಮ್ರಾಗೆ ವಿಕೆಟ್‌ ಒಪ್ಪಿಸಿದರು. ಇದರೊಂದಿಗೆ ಮೊಹಮದ್‌ ಶಮಿ 3 ವಿಕೆಟ್‌ ಪಡೆದರೆ, ಪ್ರಸಿದ್ಧ್‌ ಕೃಷ್ಣ ಒಂದು ವಿಕೆಟ್‌ ಪಡೆದು ಮಿಂಚಿದರು.

    ಇಂಗ್ಲೆಂಡ್‌ಗೆ ಆರಂಭಿಕ ಆಘಾತ:
    ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಇಂಗ್ಲೆಂಡ್‌ ತಂಡವು ಜೇಸನ್‌ ರಾಯ್‌ ಶೂನ್ಯಕ್ಕೆ ಔಟಾಗುವ ಮೂಲಕ ಆರಂಭಿಕ ಆಘಾತ ಅನುಭವಿಸಿತು. ನಂತರ ಬಂದ ಜೋ ರೂಟ್‌, ಬೆನ್‌ಸ್ಟೋಕ್ಸ್‌ ಸಹ ಶೂನ್ಯ ಸಾಧನೆ ಮಾಡಿದರು. ಈ ಮೂಲಕ ಇಂಗ್ಲೆಂಡ್‌ ಸಂಕಷ್ಟಕ್ಕೆ ತುತ್ತಾಯಿತು. ಇದನ್ನೂ ಓದಿ: ವೈರಲ್ ಆಗುತ್ತಿದೆ SKY ಸಿಡಿಸಿದ ಬ್ಯಾಕ್‍ವರ್ಡ್ ಪಾಯಿಂಟ್ ಸಾಲಿಡ್ ಸಿಕ್ಸ್

    ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಜೋಸ್‌ ಬಟ್ಲರ್‌ ತಂಡಕ್ಕೆ ಆಸರೆಯಾಗಲು ಮುಂದಾದರು ಆದರೆ ಸಿಕ್ಸರ್‌ ಸಿಡಿಸುವ ಭರದಲ್ಲಿ ಬೌಂಡರಿ ಲೈನ್‌ನಲ್ಲಿ ಕ್ಯಾಚ್‌ ನೀಡಿ ನಿರ್ಗಮಿಸಿದರು. ಆದರೂ ತಂಡಕ್ಕೆ 30 ರನ್‌ಗಳನ್ನು ತಂದುಕೊಟ್ಟರು. ನಂತರಲ್ಲಿ ಬಂದ ಆಟಗಾರರು ಸ್ಥಿರವಾಗಿ ನಿಲ್ಲದ ಕಾರಣ ಇಂಗ್ಲೆಂಡ್‌ ತಂಡವು ಹೀನಾಯವಾಗಿ ಸೋಲನ್ನು ಅನುಭವಿಸಿತು. ಡೇವಿಡ್‌ ವಿಲ್ಲಿ 21 ರನ್‌ ಗಳಿಸಿದರೂ ಭಾರತದ ಬೌಲರ್‌ಗಳ ಪರಾಕ್ರಮದ ಮುಂದೆ ಇಂಗ್ಲೆಂಡ್‌ ಮಂಕಾಯಿತು. ಅಂತಿಮವಾಗಿ 25.2 ಓವರ್‌ಗಳಲ್ಲಿ 110ಕ್ಕೆ ಇಂಗ್ಲೆಂಡ್‌ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು.

    Live Tv
    [brid partner=56869869 player=32851 video=960834 autoplay=true]