Tag: ಲುಧಿಯಾನ

  • ರಾಜ್ಯಸಭಾ ಸಂಸದನಿಗೆ ವಿಧಾನಸಭೆ ಉಪ ಚುನಾವಣೆಗೆ ಟಿಕೆಟ್ – ಪಂಜಾಬ್‌ನಿಂದ ಸಂಸತ್‌ಗೆ ಕೇಜ್ರಿವಾಲ್?

    ರಾಜ್ಯಸಭಾ ಸಂಸದನಿಗೆ ವಿಧಾನಸಭೆ ಉಪ ಚುನಾವಣೆಗೆ ಟಿಕೆಟ್ – ಪಂಜಾಬ್‌ನಿಂದ ಸಂಸತ್‌ಗೆ ಕೇಜ್ರಿವಾಲ್?

    ಲುಧಿಯಾನ: ಆಮ್ ಆದ್ಮಿ ಪಕ್ಷ ಪಂಜಾಬ್‌ನ ಲುಧಿಯಾನ ಪಶ್ಚಿಮ ವಿಧಾನಸಭಾ ಉಪಚುನಾವಣೆಗೆ ತನ್ನ ರಾಜ್ಯಸಭಾ ಸಂಸದ ಸಂಜೀವ್ ಅರೋರಾ (Sanjeev Arora) ಅವರನ್ನು ಕಣಕ್ಕಿಳಿಸಿದೆ. ಈ ಬೆಳವಣಿಗೆ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ರಾಜ್ಯಸಭೆ ಪ್ರವೇಶದ ವದಂತಿಗೆ ಇನ್ನಷ್ಟು ಪುಷ್ಠಿ ನೀಡಿದೆ.

    ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಅರವಿಂದ್ ಕೇಜ್ರಿವಾಲ್ ರಾಜ್ಯಸಭೆ ಪ್ರವೇಶ ಮಾಡಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಈ ವದಂತಿಯನ್ನು ಪಕ್ಷ ತಳ್ಳಿ ಹಾಕಿತ್ತು. ಆದರೀಗ ರಾಜ್ಯಸಭಾ ಸಂಸದ ಸಂಜೀವ್ ಅರೋರಾ ಅವರನ್ನು ಉಪ ಚುನಾವಣೆಗೆ ಕಣಕ್ಕಿಳಿಸಿರುವುದು ಹೊಸ ಚರ್ಚೆಗೆ ಕಾರಣವಾಗಿದೆ. ಇದನ್ನೂ ಓದಿ: ಪಾಕಿಸ್ತಾನದ ನುಸುಳುಕೋರನನ್ನು ಹೊಡೆದುರುಳಿಸಿದ ಬಿಎಸ್‌ಎಫ್

    ಚುನಾವಣಾ ಆಯೋಗವು ಲುಧಿಯಾನ ಪಶ್ಚಿಮ (Ludhiana West) ಉಪಚುನಾವಣೆಯ ದಿನಾಂಕಗಳನ್ನು ಇನ್ನೂ ಘೋಷಿಸಿಲ್ಲ. ನವೆಂಬರ್‌ನಲ್ಲಿ ನಡೆಯುವ ಬಿಹಾರ ವಿಧಾನಸಭಾ ಚುನಾವಣೆಯ ಜೊತೆಗೆ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗುವ ನಿರೀಕ್ಷೆಯಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ – ಸಚಿವ ಜಮೀರ್ ಬ್ಯಾಟಿಂಗ್‌

    ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಎಪಿ ನಾಯಕ ನೀಲ್ ಗರ್ಗ್, ಸಂಜೀವ್ ಅರೋರಾ ಅವರ ಉತ್ತಮ ಕೆಲಸಗಳನ್ನು ಪರಿಗಣಿಸಿ ಲುಧಿಯಾನ ಪಶ್ಚಿಮ ಉಪಚುನಾವಣೆಗೆ ಟಿಕೆಟ್ ನೀಡಲಾಗಿದೆ. ಕೇಜ್ರಿವಾಲ್ ರಾಜ್ಯಸಭೆಗೆ ಹೋಗುತ್ತಾರೆ ಎಂಬ ಊಹಾಪೋಹಗಳು ಸುಳ್ಳು ಮತ್ತು ಬಿಜೆಪಿ ಕಾರ್ಖಾನೆಯಿಂದ ಬಂದಿವೆ.

    ನಾವು ಮೊದಲು ಉಪಚುನಾವಣೆ ಗಮನ ಹರಿಸುತ್ತೇವೆ. ಬಳಿಕ ಮತ್ತು ನಂತರ ರಾಜ್ಯಸಭೆಯತ್ತ ಕೇಂದ್ರೀಕರಿಸುತ್ತೇವೆ ಎಂದಿದ್ದಾರೆ. ಅಲ್ಲದೇ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳು ಇಂತಹ ವದಂತಿಗಳನ್ನು ಹರಡುತ್ತಿವೆ. ಇಂತಹ ವದಂತಿಗಳಾಗಿ ನಾನು ತಿರಸ್ಕರಿಸುತ್ತೇನೆ ಎಂದು ನೀಲ್ ಗರ್ಗ್ ಹೇಳಿದರು. ಇದನ್ನೂ ಓದಿ: ಪತ್ನಿ ಕೊಲೆ ಮಾಡಿ ಅಂತ್ಯಕ್ರಿಯೆ – ಕೊನೆ ಕ್ಷಣದಲ್ಲಿ ಎಂಟ್ರಿ ಕೊಟ್ಟ ಪೊಲೀಸರು, ಅರೆಸ್ಟ್ ಆದ ಗಂಡ

  • ಆಕಸ್ಮಿಕವಾಗಿ ಗುಂಡು ತಗುಲಿ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾವು

    ಆಕಸ್ಮಿಕವಾಗಿ ಗುಂಡು ತಗುಲಿ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾವು

    ಚಂಡೀಗಢ: ಪಂಜಾಬ್‌ನ (Punjab) ಲುಧಿಯಾನ (Ludhiana) ಕ್ಷೇತ್ರದ ಆಪ್ ಶಾಸಕ ಗುರುಪ್ರೀತ್ ಗೋಗಿ (Gurpreet Gogi) ಆಕಸ್ಮಿಕವಾಗಿ ಗುಂಡು ತಗುಲಿ ಶುಕ್ರವಾರ ತಡರಾತ್ರಿ ಸಾವನ್ನಪ್ಪಿದ್ದಾರೆ.

    ಗುರುಪ್ರೀತ್ ಗೋಗಿ (58) ಅವರ ತಲೆಗೆ ಗುಂಡು ತಗುಲಿದ ನಂತರ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟು ಹೊತ್ತಿಗಾಗಲೇ ಶಾಸಕರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಜಸ್ಕರ್ ಸಿಂಗ್ ತೇಜ ತಿಳಿಸಿದ್ದಾರೆ. ಇದನ್ನೂ ಓದಿ: ಕೆನಡಾ ಪ್ರಧಾನಿ ಸ್ಥಾನಕ್ಕೆ ಟ್ರುಡೊ ರಾಜೀನಾಮೆ – ಭಾರತದ ಇಂಪ್ಯಾಕ್ಟ್ ಏನು?

    ಗೋಗಿ ಅವರ ಮೃತದೇಹವನ್ನು ಡಿಎಂಸಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ತಲೆಗೆ ಆಕಸ್ಮಿಕವಾಗಿ ಗುಂಡು ತಗುಲಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಅಸಲಿ ಸತ್ಯ ಗೊತ್ತಾಗಲಿದೆ ಎಂದು ತೇಜ ಹೇಳಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯ ಶ್ರೀರಾಮನ ಮೂರ್ತಿಗೆ `ರಾಮಲಲ್ಲಾʼ ಅಂತ ಕರೆಯುವುದೇಕೆ?

  • ಶಾಲೆಯ ಬಳಿ ಗ್ಯಾಸ್ ಲೀಕ್ – ಹಲವು ಮಕ್ಕಳು ಅಸ್ವಸ್ಥ

    ಶಾಲೆಯ ಬಳಿ ಗ್ಯಾಸ್ ಲೀಕ್ – ಹಲವು ಮಕ್ಕಳು ಅಸ್ವಸ್ಥ

    ಚಂಡೀಗಢ: ಶಾಲೆಯೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ (Gas leak) ಹಲವಾರು ವಿದ್ಯಾರ್ಥಿಗಳು (Students) ಮತ್ತು ಶಿಕ್ಷಕರು (Teachers) ಪ್ರಜ್ಞಾಹೀನರಾದ (Unconscious) ಘಟನೆ ಪಂಜಾಬ್‍ನಲ್ಲಿ (Punjab) ಗುರುವಾರ ನಡೆದಿದೆ.

    ಅಸ್ವಸ್ಥಗೊಂಡ ಮಕ್ಕಳು ಹಾಗೂ ಶಿಕ್ಷಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಶಾಲೆಯನ್ನು ಮುಚ್ಚಲಾಗಿದ್ದು, ಉಳಿದ ಮಕ್ಕಳು ಹಾಗೂ ಸಿಬ್ಬಂದಿಯನ್ನು ಪೊಲೀಸರು ಬೇರೆಡೆಗೆ ಸ್ಥಳಾಂತರಿಸಿದ್ದಾರೆ. ಘಟನೆಗೆ ಕಾರಣವೇನೆಂದು ಪರಿಶೀಲನೆ ನಡೆಸಲಾಗುತ್ತಿದೆ. ಶಾಲೆಯ ಸಮೀಪದಲ್ಲಿರುವ ಎರಡು ದೊಡ್ಡ ಕೈಗಾರಿಕಾ ಘಟಕಗಳು ಅನಿಲ ಸೋರಿಕೆಯ ಮೂಲಗಳೆಂದು ಶಂಕಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಪಂಜಾಬ್ ಸ್ಫೋಟ ಪ್ರಕರಣ – ಐವರು ಆರೋಪಿಗಳ ಬಂಧನ

    ಸ್ಥಳದಲ್ಲಿ ಯಾವುದೇ ಅನಾಹುತಗಳು ನಡೆಯದಂತೆ ಸೂಕ್ತ ಕ್ರಮಕೈಗೊಳ್ಳಲಾಗಿದೆ. ಜಿಲ್ಲೆಯ ಎಲ್ಲಾ ಅಂಬುಲೆನ್ಸ್‌ಗಳನ್ನು ಘಟನಾ ಸ್ಥಳದಲ್ಲಿ ಇರಿಸಲಾಗಿದೆ ಎಂದು ಪಂಜಾಬ್ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

    ಇತ್ತೀಚೆಗೆ ಪಂಜಾಬ್‍ನ ಲುಧಿಯಾನಾದ (Ludhiana) ಗಿಯಾಸ್‍ಪುರ ಪ್ರದೇಶದಲ್ಲಿ ಅನಿಲ ಸೋರಿಕೆ ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ 11 ಜನ ಸಾವನ್ನಪ್ಪಿದ್ದರು. ಇದನ್ನೂ ಓದಿ: ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು

  • ರಾಹುಲ್ ಗಾಂಧಿ ಮುಖಕ್ಕೆ ಧ್ವಜವನ್ನು ಎಸೆದ ವ್ಯಕ್ತಿ

    ರಾಹುಲ್ ಗಾಂಧಿ ಮುಖಕ್ಕೆ ಧ್ವಜವನ್ನು ಎಸೆದ ವ್ಯಕ್ತಿ

    ಚಂಡೀಗಢ: ವ್ಯಕ್ತಿಯೊಬ್ಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮುಖಕ್ಕೆ ಕಾಂಗ್ರೆಸ್ ಪಕ್ಷದ ಧ್ವಜವನ್ನು ಎಸೆದ ಘಟನೆ ಇಂದು ಪಂಜಾಬ್‍ನ ಲುಧಿಯಾನದಲ್ಲಿ ನಡೆದಿದೆ.

    ಭದ್ರತಾ ಲೋಪದಲ್ಲಿ ಅವರ ಮುಖಕ್ಕೆ ಧ್ವಜ ಹಾಕಲಾಗಿದೆ. ರಾಹುಲ್ ಗಾಂಧಿ ಕುಳಿತಿದ್ದ ಕಾರನ್ನು ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಸುನಿಲ್ ಜಾಖರ್ ಓಡಿಸುತ್ತಿದ್ದರು. ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಮತ್ತು ಪಕ್ಷದ ರಾಜ್ಯ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಕಾರಿನ ಹಿಂದಿನ ಸೀಟುಗಳಲ್ಲಿ ಕುಳಿತಿದ್ದರು. ಇದನ್ನೂ ಓದಿ: ಚುನಾವಣೆಗೆ ತಯಾರಿ – ಮಂಗಳಮುಖಿಯರ ಮೊರೆ ಹೋದ ನಾರಾ ಭರತ್ ರೆಡ್ಡಿ

    ರಾಹುಲ್ ಗಾಂಧಿ ಕಾರಿನ ಮುಂದಿನ ಸೀಟಿನಲ್ಲಿ ಕುಳಿತಿದ್ದು ತಮ್ಮ ಪಕ್ಷದ ಬೆಂಬಲಿಗರನ್ನು ಸ್ವಾಗತಿಸಲು ಅವರ ಕಿಟಕಿ ತೆರೆದಿತ್ತು. ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬನು ರಾಹುಲ್ ಅವರ ಕಿಟಕಿಯ ಮೇಲೆ ಬಹಳ ದೂರದಿಂದ ಧ್ವಜವನ್ನು ಎಸೆದಿದ್ದಾನೆ. ಇದನ್ನೂ ಓದಿ: ಸಿಎಂ ತವರು ಜಿಲ್ಲೆಗೂ ಕಾಲಿಟ್ಟ ಹಿಜಬ್, ಕೇಸರಿ ಶಾಲು ಫೈಟ್ – ವಿದ್ಯಾರ್ಥಿಗಳನ್ನ ಹೊರಹಾಕಿದ ಕಾಲೇಜು ಸಿಬ್ಬಂದಿ

    ಪಂಜಾಬ್‍ನಲ್ಲಿ ಇದು ಎರಡನೇ ಭದ್ರತಾ ಲೋಪವಾಗಿದೆ. ಕೆಲವು ದಿನಗಳ ಹಿಂದೆ, ಪ್ರಧಾನಿ ನರೇಂದ್ರ ಮೋದಿ ಅವರ ಕಾರು 20 ನಿಮಿಷಗಳ ಕಾಲ ಫ್ಲೈಓವರ್‍ನಲ್ಲಿ ಸಿಲುಕಿಕೊಂಡಿತ್ತು.