Tag: ಲೆಟ್ಸ್ ಗೆಟ್ ಮ್ಯಾರೀಡ್

  • ʼಲೆಟ್ಸ್ ಗೆಟ್ ಮ್ಯಾರೀಡ್’ ಸಿನಿಮಾದ ಟ್ರೈಲರ್ ಔಟ್

    ʼಲೆಟ್ಸ್ ಗೆಟ್ ಮ್ಯಾರೀಡ್’ ಸಿನಿಮಾದ ಟ್ರೈಲರ್ ಔಟ್

    ಕ್ಯಾಪ್ಟನ್ ಕೂಲ್ ಎಂ.ಎಸ್.ಧೋನಿ (M.s Dhoni) ಸಿನಿಮಾ ಜಗತ್ತಿಗೂ ಎಂಟ್ರಿ ಕೊಟ್ಟಿರುವುದು ಗೊತ್ತೇ ಇದೆ. ತಮ್ಮದೇ ಧೋನಿ ಎಂಟರ್‌ಟೈನ್ಮೆಂಟ್ ನಿರ್ಮಾಣ ಸಂಸ್ಥೆ (Production) ಆರಂಭಿಸಿದ್ದು, ಈ ಸಂಸ್ಥೆಯಡಿ ಧೋನಿ ಪತ್ನಿ ಸಾಕ್ಷಿ ಧೋನಿ ‘ಲೆಟ್ಸ್ ಗೆಟ್ ಮ್ಯಾರೀಡ್’ (Lets Get Married) ಎಂಬ ತಮಿಳು ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಟ್ರೈಲರ್, ಆಡಿಯೋ ಬಿಡುಗಡೆ ಕಾರ್ಯಕ್ರಮ ಚೆನ್ನೈನಲ್ಲಿ ನೆರವೇರಿದೆ. ಕ್ಯಾಪ್ಟನ್ ಕೂಲ್ ತಮ್ಮದೇ ನಿರ್ಮಾಣ ಸಂಸ್ಥೆಯ ಚೊಚ್ಚಲ ಸಿನಿಮಾದ ಟ್ರೈಲರ್ ಅನಾವರಣ ಮಾಡಿ ಹಲವು ವಿಷಯಗಳನ್ನು ಹಂಚಿಕೊಂಡರು. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ನಟಿ, ಡೆಲಿವರಿ ಆಗ್ತಿದ್ದಂತೆ ಶೂಟಿಂಗ್ ಹಾಜರಾದ ಮಮತಾ

    ಎಂ.ಎಸ್.ಧೋನಿ ಮಾತನಾಡಿ, ನಾನು ಈ ಸಿನಿಮಾವನ್ನು ನೋಡಿದ್ದೇನೆ. ಸಿನಿಮಾದಲ್ಲಿ ತುಂಬಾ ಮನರಂಜನೆಯಿದೆ. ನಾನು ನನ್ನ ಮಗಳ ಜೊತೆ ಈ ಸಿನಿಮಾ ನೋಡಬಹುದು. ಅವಳು ತುಂಬಾ ಪ್ರಶ್ನೆಗಳನ್ನು ಕೇಳುತ್ತಾಳೆ. ಇಡೀ ಚಿತ್ರತಂಡ ಅದ್ಭುತ ಕೆಲಸ ಮಾಡಿದೆ. ಈ ಪ್ರಾಜೆಕ್ಟ್ ಅನ್ನು ಅವರು ನಿಭಾಯಿಸಿದ ರೀತಿ ಬಗ್ಗೆ ನನಗೆ ಹೆಮ್ಮೆ ಇದೆ. ನನ್ನ ಹೆಂಡತಿಗೆ ಸಿನಿಮಾ ಮಾಡಬೇಕು ಎಂದಾಗ ನಾನು ಹೇಳಿದ್ದು ಒಂದೇ, ಸಿನಿಮಾ ಮಾಡುವುದೆಂದರೆ ಮನೆ ವಿನ್ಯಾಸ ಮಾಡಿದಂತೆ ಅಲ್ಲ. ನೀವು ಗೋಡೆಗೆ ಬಣ್ಣ ಹಾಕುತ್ತೀರ. ನಿಮಗೆ ಇಷ್ಟವಿಲ್ಲ, ನೀವು ಬಣ್ಣವನ್ನು ಬದಲಾಯಿಸುತ್ತೀರಿ. ನಂತರ, ಮೊದಲ ಬಣ್ಣವು ಉತ್ತಮವಾಗಿದೆ ಎಂದು ನೀವು ಅರಿತುಕೊಳ್ಳುತ್ತೀರಿ. ನಂತರ ನೀವು ಅದನ್ನು ಮತ್ತೆ ಬಣ್ಣಿಸುತ್ತೀರಿ. ಸಿನಿಮಾಗಳಲ್ಲಿ ಹಾಗೆ ಮಾಡಲು ಸಾಧ್ಯವಿಲ್ಲ. ಸಿನಿಮಾಗಳಲ್ಲಿ ಹಾಗೆ ಮಾಡಲು ಸಾಧ್ಯವಿಲ್ಲ. ‘ಲೆಟ್ಸ್ ಗೆಟ್ ಮ್ಯಾರೀಡ್’ ಸಿನಿಮಾ ಸ್ವಲ್ಪ ದಿನಗಳಲ್ಲಿ ಥಿಯೇಟರ್‌ಗೆ ಬರಲಿದೆ. ಅತ್ತೆ ಸೊಸೆ- ಮಗನ ನಡುವೆ ನಡೆಯುವ ಕಥೆ ಎಂದರು.

    ಸಾಕ್ಷಿ ಧೋನಿ (Sakshi Dhoni) ಮಾತನಾಡಿ, ನನ್ನ ಬಹಳಷ್ಟು ಸ್ನೇಹಿತರು ಮತ್ತು ನಮ್ಮ ಸುತ್ತಮುತ್ತಲಿನ ಪ್ರತಿಯೊಬ್ಬರೂ ಸಾಮಾನ್ಯವಾಗಿ ಜೀವನದಲ್ಲಿ ಇಂತಹ ಸನ್ನಿವೇಶಗಳನ್ನು ಎದುರಿಸಿದ್ದಾರೆ. ಹೀಗಾಗಿ ಇದನ್ನು ಚಲನಚಿತ್ರವಾಗಿ ಏಕೆ ಮಾಡಬಾರದು ಎಂದು ನಾವು ಯೋಚಿಸಿದ್ದೇವೆ. ಆದ್ದರಿಂದ ನಾವು ಮಾತನಾಡಿದ್ದೇವೆ. ಇದು ನಮ್ಮ ಮೊದಲ ಸಿನಿಮಾ ಆಗಿದ್ದರಿಂದ ತಮಿಳಿನಲ್ಲಿ ಮಾಡಲು ಬಯಸಿದ್ದೆವು. ಈ ಸಿನಿಮಾ ಮಾತ್ರವಲ್ಲದೆ ನಮ್ಮಲ್ಲಿರುವ ಉಳಿದ ಚೆನ್ನೈನಿಂದಲೇ ಶುರು ಮಾಡುತ್ತೇವೆ ಎಂದರು.

    ರಮೇಶ್ ತಮಿಳಮಣಿ ನಿರ್ದೇಶನದ ಈ ಚಿತ್ರದಲ್ಲಿ ಹರೀಶ್ ಕಲ್ಯಾಣ್ ಮತ್ತು ಇವಾನಾ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಪಕ್ಕಾ ಫ್ಯಾಮಿಲಿ ಮನರಂಜನೆಯ ಚಿತ್ರವಾಗಿರುವ ‘ಲೆಟ್ಸ್ ಗೆಟ್ ಮ್ಯಾರೀಡ್’ ಆದಷ್ಟು ಬೇಗ ತೆರೆಗೆ ಬರಲಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕ್ರಿಕೆಟಿಗ ಧೋನಿ ನಿರ್ಮಾಣದ ಚೊಚ್ಚಲ ಸಿನಿಮಾ ರೆಡಿ

    ಕ್ರಿಕೆಟಿಗ ಧೋನಿ ನಿರ್ಮಾಣದ ಚೊಚ್ಚಲ ಸಿನಿಮಾ ರೆಡಿ

    ಕ್ಯಾಪ್ಟನ್ ಕೂಲ್ ಎಂ.ಎಸ್ ಧೋನಿ (M.S. Dhoni) ಪತ್ನಿ‌ ಸಾಕ್ಷಿ (Sakshi) ಜೊತೆಗೂಡಿ ತಮ್ಮದೇ ಧೋನಿ ಎಂಟರ್ ಟೇನ್ಮೆಂಟ್ ಮೂಲಕ ನಿರ್ಮಿಸುತ್ತಿರುವ ಚೊಚ್ಚಲ ಸಿನಿಮಾ ಲೆಟ್ಸ್ ಗೆಟ್ ಮ್ಯಾರೀಡ್ (Let’s Get Married). ಟೀಸರ್ ಮೂಲಕ ನಗುವಿನ ಕಿಕ್ ಕೊಟ್ಟಿರುವ ಈ ಚಿತ್ರವನ್ನು ರಾಜ್ಯದಲ್ಲಿಯೂ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.

    ಇತ್ತೀಚಿಗೆ ಪರಭಾಷೆ ಸಿನಿಮಾಗಳಿಗೆ ಕರುನಾಡಿನಲ್ಲಿ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹೀಗಾಗಿ ಲೆಟ್ಸ್ ಗೆಟ್ ಮ್ಯಾರೀಡ್ ಸಿನಿಮಾ ಕೂಡ ಕರ್ನಾಟಕದಲ್ಲಿ ತೆರೆಕಾಣಲಿದೆ ಎಂದು ಚಿತ್ರತಂಡ ತಿಳಿಸಿದೆ.  ಫ್ಯಾಮಿಲಿ ಎಂಟರ್​ಟೇನರ್ ಕಥಾಹಂದರ ಹೊಂದಿರುವ ಸಿನಿಮಾವನ್ನು ರಮೇಶ್ ತಮಿಳ್​ಮಣಿ  (Ramesh Tamilmani) ನಿರ್ದೇಶನ ಮಾಡಿದ್ದಾರೆ. ನಾಯಕ ಹರೀಶ್ ಕಲ್ಯಾಣ್, (Harish Kalyan)  ನಾಯಕಿ ಇವಾನಾ ನಟಿಸಿದ್ದು, ಹಿರಿಯ ನಟಿ ನದಿಯಾ, ಯೋಗಿ ಬಾಬು ಮತ್ತು ಆರ್‌ಜೆ ವಿಜಯ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

    ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಲೆಟ್ಸ್ ಗೆಟ್ ಮ್ಯಾರೀಡ್ ಸಿನಿಮಾವನ್ನು ಆದಷ್ಟು ಬೇಗ ತೆರೆಗೆ ತರಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ. ರಮೇಶ್ ತಮಿಳ್ಮಣಿ ಸಿನಿಮಾಗೆ ಆಕ್ಷನ್ ಕಟ್ ಹೇಳುವುದರ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿ ಕೂಡ ನಿಭಾಯಿಸಿದ್ದಾರೆ. ಟೀಸರ್ ಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದ್ದು, ಶೀಘ್ರದಲ್ಲೇ ಆಡಿಯೋ ಹಾಗೂ ಟ್ರೇಲರ್‌ ಅನ್ನು ಚಿತ್ರತಂಡ ಬಿಡುಗಡೆ ಮಾಡಲಿದೆ.

  • ಸೆಟ್ಟೇರಿತು ಕೂಲ್ ಕ್ಯಾಪ್ಟನ್ ಧೋನಿ ನಿರ್ಮಾಣದ ಚೊಚ್ಚಲ ಚಿತ್ರ

    ಸೆಟ್ಟೇರಿತು ಕೂಲ್ ಕ್ಯಾಪ್ಟನ್ ಧೋನಿ ನಿರ್ಮಾಣದ ಚೊಚ್ಚಲ ಚಿತ್ರ

    ಹೇಂದ್ರ ಸಿಂಗ್ ಧೋನಿ (Mahendra Singh Dhoni) ಹಾಗೂ ಸಾಕ್ಷಿ (Sakshi) ‘ಧೋನಿ ಎಂಟರ್ಟೈನ್ಮೆಂಟ್ಸ್’ ಮೂಲಕ ಸಿನಿಮಾ ನಿರ್ಮಾಣಕ್ಕೆ ಮುಂದಾಗಿರೋದು ಗೊತ್ತೇ ಇದೆ. ಇಂದು ‘ಧೋನಿ ಎಂಟರ್ಟೈನ್ಮೆಂಟ್ಸ್’ ಮೊದಲ ತಮಿಳು ಸಿನಿಮಾ ‘ಲೆಟ್ಸ್ ಗೆಟ್ ಮ್ಯಾರೀಡ್’ (Let’s Get Married)  ಮುಹೂರ್ತ ನೆರವೇರಿದೆ. ಮುಹೂರ್ತ ಕಾರ್ಯಕ್ರಮಕ್ಕೆ ಸಾಕ್ಷಿ ಹಾಗೂ ಹಲವು ಸೆಲೆಬ್ರಿಟಿಗಳು ಭಾಗಿಯಾಗಿ ಚಿತ್ರ ತಂಡಕ್ಕೆ ಶುಭ ಹಾರೈಸಿದ್ರು.

    ‘ಲೆಟ್ಸ್ ಗೆಟ್ ಮ್ಯಾರೀಡ್’ ಚಿತ್ರಕ್ಕೆ  ರಮೇಶ್ ತಮಿಲ್ಮನಿ (Ramesh Tamilmani) ಆಕ್ಷನ್ ಕಟ್ ಹೇಳುತ್ತಿದ್ದು, ಇದು ಇವರ ನಿರ್ದೇಶನದ ಮೊದಲ ಸಿನಿಮಾವಾಗಿದೆ. ನಿರ್ದೇಶನದ ಜೊತೆಗೆ ಚಿತ್ರಕ್ಕೆ ಸಂಗೀತ ನಿರ್ದೇಶನವನ್ನು ತಾವೇ ಮಾಡುತ್ತಿದ್ದಾರೆ. ಚಿತ್ರದಲ್ಲಿ ಹರೀಶ್ ಕಲ್ಯಾಣ್, ನಾದಿಯಾ ಹಾಗೂ ಇವಾನ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದು, ಖ್ಯಾತ ಕಾಮಿಡಿಯನ್ ಯೋಗಿ ಬಾಬು ಒಳಗೊಂಡ ತಾರಾಗಣವಿದೆ. ಇದನ್ನೂ ಓದಿ: ಮುನಿಸು ಮರೆತು ಮತ್ತೆ ಒಂದಾದ್ರಾ ಮೋಹಕತಾರೆ ರಮ್ಯಾ- ಜಗ್ಗೇಶ್?

    ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಬ್ಜೆಕ್ಟ್ ಒಳಗೊಂಡ ಸಿನಿಮಾವಾಗಿದ್ದು, ಸಾಕ್ಷಿ ಧೋನಿ ಚಿತ್ರದ ಕಥೆ ಹಾಗೂ ಕಾನ್ಸೆಪ್ಟ್ ಹಿಂದಿನ ಶಕ್ತಿಯಾಗಿದ್ದಾರೆ. ಮುಂದಿನ‌ ದಿನಗಳಲ್ಲಿ ಉತ್ತಮ ಕಂಟೆಂಟ್ ವುಳ್ಳ ಇನ್ನೂ ಹೆಚ್ಚಿನ ಸಿನಿಮಾಗಳನ್ನು ನಿರ್ಮಾಣ ಮಾಡಲು ನಾವು ಯೋಜನೆ ಹಾಕಿಕೊಂಡಿದ್ದೇವೆ ಎಂದು ಸಾಕ್ಷಿ ತಿಳಿಸಿದ್ದಾರೆ. ನಿರ್ದೇಶಕ ರಮೇಶ್ ತಮಿಲ್ಮನಿ ಮಾತನಾಡಿ ನಾವು ಇಂದು ಈ ಜರ್ನಿ ಆರಂಭಿಸಲು ತುಂಬಾ ಉತ್ಸುಕರಾಗಿದ್ದೇವೆ. ಮನರಂಜನಾತ್ಮಕ ಸಬ್ಜೆಕ್ಟ್ ಒಳಗೊಂಡ ಈ ಚಿತ್ರ ಇಡೀ ಫ್ಯಾಮಿಲಿ ಕುಳಿತು ಎಂಜಾಯ್ ಮಾಡಬಹುದು ಎಂಬ ಭರವಸೆ ನಾನು ನೀಡುತ್ತೇನೆ ಎಂದು ತಿಳಿಸಿದ್ರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k