Tag: ಲೆಫ್ಟಿನೆಂಟ್ ಗವರ್ನರ್

  • ದೆಹಲಿಯಂತೆ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚಿನ ಅಧಿಕಾರ

    ದೆಹಲಿಯಂತೆ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚಿನ ಅಧಿಕಾರ

    – ವರ್ಗಾವಣೆ, ನೇಮಕಾತಿ, ಯೋಜನೆಗಳ ಜಾರಿಗೆ ಸರ್ಕಾರಕ್ಕೆ ಬೇಕು ಅನುಮತಿ

    ನವದೆಹಲಿ: ಲೆಫ್ಟಿನೆಂಟ್ ಗವರ್ನರ್‌ಗೆ (Lt Governor) ಹೆಚ್ಚಿನ ಅಧಿಕಾರವನ್ನು ನೀಡಲು ಗೃಹ ವ್ಯವಹಾರಗಳ ಸಚಿವಾಲಯ ಜಮ್ಮು ಮತ್ತು ಕಾಶ್ಮೀರ (Jammu And Kashmir) ಮರುಸಂಘಟನೆ ಕಾಯ್ದೆಗೆ ತಿದ್ದುಪಡಿ ಮಾಡಿದೆ. ಇದರಿಂದಾಗಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಕೂಡ ಈಗ ದೆಹಲಿಯ ಲೆಫ್ಟಿನೆಂಟ್ ಗವರ್ನರ್‌ನಂತೆ ಆಡಳಿತಾತ್ಮಕ ಅಧಿಕಾರವನ್ನು ಪಡೆಯಲಿದ್ದಾರೆ.

    ಹೊಸ ತಿದ್ದುಪಡಿ ಅನ್ವಯ ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಸರ್ಕಾರವು ಲೆಫ್ಟಿನೆಂಟ್ ಗವರ್ನರ್ ಅನುಮತಿಯಿಲ್ಲದೆ ವರ್ಗಾವಣೆ, ನೇಮಕಾತಿ ಅಥವಾ ಯೋಜನೆಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ. 2019ರ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆಯ ಸೆಕ್ಷನ್ 55ರ ಅಡಿಯಲ್ಲಿ ತಿದ್ದುಪಡಿ ಮಾಡಿದ ನಿಯಮಗಳನ್ನು ಗೃಹ ಇಲಾಖೆ ಸೂಚಿಸಿದೆ. ಇದರಲ್ಲಿ ಎಲ್‌ಜಿಗೆ ಹೆಚ್ಚಿನ ಅಧಿಕಾರವನ್ನು ನೀಡುವ ಹೊಸ ವಿಭಾಗಗಳನ್ನು ಸೇರಿಸಿದೆ. ಇದನ್ನೂ ಓದಿ: ಆಟೋ ಚಕ್ರದಿಂದ ಮೈಗೆ ಚಿಮ್ಮಿದ ಕೆಸರು – ಮರಳಿ ಬರುವವರೆಗೂ ಕಾದು ಚಾಲಕನಿಗೆ ಚಾಕು ಇರಿತ

    ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ಬಳಿಕ ಅಲ್ಲಿ ಚುನಾವಣೆ ನಡೆದಿಲ್ಲ. ಆದರೆ ಕೇಂದ್ರ ಚುನಾವಣಾ ಆಯೋಗ ಯಾವಾಗ ಬೇಕಾದರೂ ಚುನಾವಣೆ ನಡೆಸಬಹುದಾಗಿದ್ದು, ಅಲ್ಲಿ ಸರ್ಕಾರ ರಚನೆಯಾಗಲಿದೆ. ಸರ್ಕಾರ ರಚನೆಗೂ ಮುನ್ನ ಲೆಫ್ಟಿನೆಂಟ್ ಗವರ್ನರ್‌ಗೆ ಚುನಾಯಿತ ಸರ್ಕಾರಕ್ಕಿಂತ ಹೆಚ್ಚಿನ ಅಧಿಕಾರವನ್ನು ಕೇಂದ್ರ ಸರ್ಕಾರ ನೀಡಿದೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ ಭೂಕುಸಿತ – ಚಾರ್‌ಧಾಮ್ ಯಾತ್ರೆಗೆ ತೆರಳಿದ್ದ ಕನ್ನಡಿಗರು ಪಾರು

    ಈ ನಿಯಮದಿಂದ ದೆಹಲಿಯಲ್ಲಿ ಆಪ್ ಸರ್ಕಾರ ಮತ್ತು ಲೆಫ್ಟಿನೆಂಟ್ ಗರ್ವನರ್ ನಡುವೆ ಆಗಾಗ ಸಮರ ನಡೆಯುತ್ತಲೇ ಇರುತ್ತದೆ. ಲೆಫ್ಟಿನೆಂಟ್ ಗರ್ವನರ್ ಬದಲು ಜನರಿಂದ ಆಯ್ಕೆಯಾಗಿ ಬಂದ ಸರ್ಕಾರಕ್ಕೆ ಹೆಚ್ಚಿನ ಅಧಿಕಾರ ನೀಡಬೇಕು. ನೇಮಕಾತಿ, ವರ್ಗಾವಣೆ ಮತ್ತು ಯೋಜನೆಗಳ ಜಾರಿ ವಿಚಾರದಲ್ಲಿ ವಿಧಾನಸಭೆಗೆ ಹೆಚ್ಚು ಮಾನ್ಯತೆ ನೀಡಬೇಕು ಎಂದು ಈಗಾಗಲೇ ಆಪ್ ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟ ಮಾಡುತ್ತಿದೆ. ಇದನ್ನೂ ಓದಿ: 6 ತಿಂಗಳ ಹಿಂದೆ ಮೃತಪಟ್ಟಿದ್ದ ಅಧಿಕಾರಿಗೆ ವರ್ಗಾವಣೆ – ಪೌರಾಡಳಿತ ಇಲಾಖೆ ಯಡವಟ್ಟು

  • AAP ನಾಯಕರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ದೆಹಲಿ ಲೆಫ್ಟಿನೆಂಟ್ ಗವರ್ನರ್

    AAP ನಾಯಕರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ದೆಹಲಿ ಲೆಫ್ಟಿನೆಂಟ್ ಗವರ್ನರ್

    ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ತಮ್ಮ ವಿರುದ್ಧದ ಸುಳ್ಳು ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ಎಎಪಿ ನಾಯಕರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

    ಎಎಪಿ ಶಾಸಕರಾದ ಅತಿಶಿ, ಸೌರಭ್ ಭಾರದ್ವಾಜ್ ಮತ್ತು ದುರ್ಗೇಶ್ ಪಾಠಕ್ ಸೇರಿದಂತೆ ಇತರ ಎಎಪಿ ನಾಯಕರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ. ಸಕ್ಸೆನಾ 2016ರಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಅಧ್ಯಕ್ಷರಾಗಿದ್ದಾಗ 1,400 ಕೋಟಿ ರೂ. ಭ್ರಷ್ಟಾಚಾರ ಮಾಡಿದ್ದಾರೆ ಎಂದು ಎಎಪಿ ನಾಯಕರು ಆರೋಪಿಸಿದ್ದರು. ಈ ಆರೋಪವನ್ನು ವಿ.ಕೆ ಸಕ್ಸೇನಾ ತಳ್ಳಿಹಾಕಿದ್ದಾರೆ. ಇದನ್ನೂ ಓದಿ: ಲಕ್ಷ್ಮೀನಾರಾಯಣ ಕಾಂಗ್ರೆಸ್‌ಗೆ ರಾಜೀನಾಮೆ- ಬಿಜೆಪಿ ಸೇರಲು ಸಿದ್ಧ

    ಕಳೆದ ತಿಂಗಳು ಕೇಜ್ರಿವಾಲ್ ಸರ್ಕಾರದ ಅಬಕಾರಿ ನೀತಿಯಲ್ಲಿನ ಅಕ್ರಮಗಳ ಬಗ್ಗೆ ಸಿಬಿಐ ತನಿಖೆಗೆ ಸಕ್ಸೆನಾ ಶಿಫಾರಸು ಮಾಡಿದ ಬಳಿಕ ಆಡಳಿತ ಪಕ್ಷ ಮತ್ತು ಲೆಫ್ಟಿನೆಂಟ್ ಗವರ್ನರ್ ನಡುವೆ ಜಿದ್ದಾಜಿದ್ದಿ ಆರಂಭವಾಗಿತ್ತು. ಆ ಬಳಿಕ ಲೆಫ್ಟಿನೆಂಟ್ ಗವರ್ನರ್ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಇದೀಗ ಎಎಪಿ ಶಾಸಕರು ಸೇರಿದಂತೆ ದೆಹಲಿಯ ಸಂವಾದ ಮತ್ತು ಅಭಿವೃದ್ಧಿ ಆಯೋಗದ ಉಪಾಧ್ಯಕ್ಷರಾಗಿರುವ ಜಾಸ್ಮಿನ್ ಶಾ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇದೀಗ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಏಪ್ರಿಲ್‌- ಜೂನ್‌ GDP ಬೆಳವಣಿಗೆ 13.5% ರಷ್ಟು ಏರಿಕೆ

    Live Tv
    [brid partner=56869869 player=32851 video=960834 autoplay=true]

  • ಹೊಸ ಮದ್ಯ ನೀತಿಯಲ್ಲಿ ಭ್ರಷ್ಟಾಚಾರ – ಮಾಜಿ ಲೆಫ್ಟಿನೆಂಟ್ ಗವರ್ನರ್ ಮೇಲೆ ಎಎಪಿ ಆರೋಪ

    ಹೊಸ ಮದ್ಯ ನೀತಿಯಲ್ಲಿ ಭ್ರಷ್ಟಾಚಾರ – ಮಾಜಿ ಲೆಫ್ಟಿನೆಂಟ್ ಗವರ್ನರ್ ಮೇಲೆ ಎಎಪಿ ಆರೋಪ

    ನವದೆಹಲಿ: ರಾಷ್ಟ್ರ ರಾಜಧಾನಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ಹೊಸ ಅಬಕಾರಿ ನೀತಿಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ದೆಹಲಿ ಸರ್ಕಾರ ಶನಿವಾರ ಆರೋಪಿಸಿದೆ.

    ಹೊಸ ಅಬಕಾರಿ ನೀತಿಯಿಂದ ರಾಜ್ಯಕ್ಕೆ ಸಾವಿರಾರು ಕೋಟಿ ರೂ. ನಷ್ಟವಾಗಿದೆ. ಅದರ ಅನುಷ್ಠಾನದ ಬಗ್ಗೆ ಸಿಬಿಐ ತನಿಖೆ ನಡೆಸಿದ ಬಳಿಕ ಅದನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಅನಿಲ್ ಬೈಜಾಲ್ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರಾಜ್ಯದ ಮುಖ್ಯಮಂತ್ರಿ ಸುಳ್ಳು ಹೇಳಲ್ಲ ಎಂದು ಅಂದುಕೊಂಡಿದ್ದೇವೆ: ಯು.ಟಿ ಖಾದರ್

    ಹೊಸ ಅಬಕಾರಿ ನೀತಿಯಿಂದಾಗಿ ಕೆಲವು ಬಾರ್ ಮಾಲೀಕರು ಸಾವಿರಾರು ಕೋಟಿ ರೂ. ಲಾಭ ಪಡೆದಿದ್ದಾರೆ. ಇದರಿಂದ ಸರ್ಕಾರ ಸಾವಿರಾರು ಕೋಟಿ ರೂ. ಕಳೆದುಕೊಂಡಿದೆ. ದೆಹಲಿ ಸರ್ಕಾರ 2021-22 ರ ಹೊಸ ಅಬಕಾರಿ ನೀತಿಯನ್ನು ಅನುಮತಿಸದ ಕಾರಣ ಕೆಲವು ಜನರಿಗೆ ಪ್ರಯೋಜನವಾಗಿದೆ ಎಂದರು. ಇದನ್ನೂ ಓದಿ: ರಾಜ್ಯಕ್ಕೆ ಭೇಟಿ ನೀಡಿದ್ದ ಅಮಿತ್‌ ಶಾ ಬಳಿ ನೆರೆ ಪರಿಹಾರ ಕೇಳಲಿಲ್ಲವೇಕೆ – BJP ಸರ್ಕಾರಕ್ಕೆ ಕಾಂಗ್ರೆಸ್‌ ಪ್ರಶ್ನೆ

    ಅನಿಲ್ ಬೈಜಾಲ್ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿದ್ದಾಗ ಅರವಿಂದ್ ಕೇಜ್ರಿವಾಲ್ ಸರ್ಕಾರ 2021ರ ನವೆಂಬರ್ 17 ರಂದು ಹೊಸ ಅಬಕಾರಿ ನೀತಿಯನ್ನು ಸಿದ್ಧಪಡಿಸಿತ್ತು. 2021ರಲ್ಲಿ ಅಂಗೀಕರಿಸಿದ ಹೊಸ ಅಬಕಾರಿ ನೀತಿಯಲ್ಲಿ ಪ್ರತೀ ಪ್ರದೇಶಗಳಲ್ಲೂ ಸಮಾನ ಸಂಖ್ಯೆಯ ಮದ್ಯದ ಅಂಗಡಿಗಳು ಇರಬೇಕೆಂದು ನಿರ್ಧರಿಸಲಾಗಿದೆ. ಆದರೆ ಈ ಹಿಂದೆ ಒಂದೇ ಸ್ಥಳದಲ್ಲಿ 20 ಬಾರ್‌ಗಳಿದ್ದರೆ, ಇನ್ನೂ ಕೆಲವೆಡೆ ಒಂದೂ ಇರುತ್ತಿರಲಿಲ್ಲ ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ಸಿಂಗಾಪುರ ಭೇಟಿಗೆ ಕೇಜ್ರಿವಾಲ್‌ಗೆ ಅನುಮತಿ ನಿರಾಕರಿಸಿದ ಲೆಫ್ಟಿನೆಂಟ್ ಗವರ್ನರ್

    ಸಿಂಗಾಪುರ ಭೇಟಿಗೆ ಕೇಜ್ರಿವಾಲ್‌ಗೆ ಅನುಮತಿ ನಿರಾಕರಿಸಿದ ಲೆಫ್ಟಿನೆಂಟ್ ಗವರ್ನರ್

    ನವದೆಹಲಿ: ಆಗಸ್ಟ್ 1 ರಂದು ಸಿಂಗಾಪುರದಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೋರಿದ ಅನುಮತಿಯನ್ನು ದೆಹಲಿ ಲೆಫ್ಟಿನೆಂಟ್ ಗವರ್ನರ್(ಎಲ್‌ಜಿ) ವಿ.ಕೆ ಸಕ್ಸೇನಾ ಗುರುವಾರ ತಿರಸ್ಕರಿಸಿದ್ದಾರೆ.

    ಸಿಂಗಾಪುರದಲ್ಲಿ ನಡೆಯಲಿರುವ ಶೃಂಗಸಭೆ ಮೇಯರ್‌ಗಳಿಗೆ ಮೀಸಲಾಗಿದ್ದು, ಆ ಕಾರ್ಯಕ್ರಮದಲ್ಲಿ ಸಿಎಂ ಹಾಜರಾಗುವುದು ಸರಿಯಲ್ಲ ಎಂದು ಸಕ್ಸೇನಾ ಹೇಳಿದ್ದಾರೆ.

    ಲೆಫ್ಟಿನೆಂಟ್ ಗವರ್ನರ್ ಶೃಂಗಸಭೆಯ ಭೇಟಿಗೆ ಅನುಮತಿ ನೀಡದಿದ್ದರೂ ಕೇಜ್ರಿವಾಲ್ ಸಿಂಗಾಪುರಕ್ಕೆ ಭೇಟಿ ನೀಡುವುದಾಗಿ ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ಕೈ ಕೊಟ್ಟ ಮೋದಿ ಪ್ಲಾನ್ – ಕಾಡುಗಳ್ಳರ ಪತ್ತೆ ಹಚ್ಚಲು ವಿಫಲವಾಯ್ತು ಮುಧೋಳ ತಳಿಯ ಶ್ವಾನ

    ಅನುಮತಿ ನಿರಾಕರಣೆಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್, ನಮ್ಮ ದೇಶದ ಪ್ರತಿಯೊಂದು ಸಾಂವಿಧಾನಿಕ ಪ್ರಾಧಿಕಾರದ ಭೇಟಿಯನ್ನು ಆ ಪ್ರಾಧಿಕಾರದ ವ್ಯಾಪ್ತಿಯೊಳಗೆ ಬರುವ ವಿಷಯಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ನಿಮ್ಮ ಮಾತಿನಂತೆ ನಡೆಯುವುದಾದರೆ, ಪ್ರಧಾನಿ ನರೇಂದ್ರ ಮೋದಿಯವರು ಯಾವುದೇ ವಿದೇಶಿ ಭೇಟಿಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿರಲಿಲ್ಲ. ಅವರು ಹೆಚ್ಚಿನ ಭೇಟಿಗಳಲ್ಲಿ ರಾಜ್ಯದ ಪಟ್ಟಿಯಲ್ಲಿ ಹಾಗೂ ಅಧಿಕಾರದ ವ್ಯಾಪ್ತಿಯಲ್ಲಿ ಬಾರದ ವಿಷಯಗಳನ್ನೇ ಚರ್ಚಿಸುತ್ತಾರೆ ಎಂದಿದ್ದಾರೆ.

    ಕೇಜ್ರಿವಾಲ್ ಅವರನ್ನು ಜೂನ್‌ನಲ್ಲಿ ಸಿಂಗಾಪುರದ ಹೈ ಕಮಿಷನರ್ ಸೈಮನ್ ವಾಂಗ್ ಅವರು ಶೃಂಗಸಭೆಗೆ ಆಹ್ವಾನಿಸಿದ್ದರು. ಈ ಬಗ್ಗೆ ಕಳೆದ ವಾರ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಸಿಂಗಾಪುರ ಭೇಟಿಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದರು. ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ

    ಕೇಂದ್ರ ತನಗೆ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅನುಮತಿ ನೀಡದೇ ಹೋದಾಗ ಕೇಜ್ರಿವಾಲ್ ಅಸಮಾಧಾನ ವ್ಯಕ್ತಪಡಿಸಿ, ನಾನು ಅಪರಾಧಿಯಲ್ಲ, ದೆಹಲಿಯ ಚುನಾಯಿತ ಮುಖ್ಯಮಂತ್ರಿ. ಸಿಂಗಾಪುರದಲ್ಲಿ ನಡೆಯುತ್ತಿರುವ ಜಾಗತಿಕ ಶೃಂಗಸಭೆಯಲ್ಲಿ ಭಾಗವಹಿಸುವುದು ಹೆಮ್ಮೆಯ ವಿಚಾರ. ಆದರೆ ಕೇಂದ್ರ ನನಗೆ ಭೇಟಿಗೆ ಅನುಮತಿ ನೀಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದರು.

    Live Tv
    [brid partner=56869869 player=32851 video=960834 autoplay=true]

  • ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ರಾಜೀನಾಮೆ

    ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ತಮ್ಮ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಬುಧವಾರ ಮೂಲಗಳು ತಿಳಿಸಿವೆ.

    ಈ ಹಿಂದೆ 2016ರ ಡಿಸೆಂಬರ್‌ನಲ್ಲಿ ನಜೀಬ್ ಜಂಗ್ ದೆಹಲಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ಹಠಾತ್ ರಾಜೀನಾಮೆ ನೀಡಿದ್ದರು. ಬಳಿಕ ಬೈಜಾಲ್ ಲೆಫ್ಟಿನೆಂಟ್ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡಿದ್ದರು. ಇದನ್ನೂ ಓದಿ: ಕುದುರೆ ರೇಸ್, ಆನ್‌ಲೈನ್‌ ಆಟ, ಕ್ಯಾಸಿನೋಗಳ ಮೇಲೆ ಶೇ.28 ಜಿಎಸ್‌ಟಿ

    ದೆಹಲಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ಯಾವುದೇ ನಿಶ್ಚಿತ ಅಧಿಕಾರಾವಧಿ ಇಲ್ಲ. ಇದೀಗ 5 ವರ್ಷಗಳ ಅಧಿಕಾರವನ್ನು ಪೂರ್ಣಗೊಳಿಸಿರುವ ಬೈಜಾಲ್ ವೈಯಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದಾರೆ. ಇದನ್ನೂ ಓದಿ: ಮಧ್ಯಪ್ರದೇಶ ಸ್ಥಳೀಯ ಸಂಸ್ಥೆ ಎಲೆಕ್ಷನ್- ಒಬಿಸಿ ಕೋಟಾಕ್ಕೆ ಸುಪ್ರೀಂ ಸಮ್ಮತಿ

    ಬೈಜಾಲ್ ಯಾರು?
    ಅನಿಲ್ ಬೈಜಾಲ್ ಕೇಂದ್ರಾಡಳಿತ ಪ್ರದೇಶದ ಕೇಡರ್‌ನ 1969ರ ಬ್ಯಾಚ್‌ನ ಮಾಜಿ ಭಾರತೀಯ ಆಡಳಿತ ಸೇವಾ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಇದಕ್ಕೂ ಮುನ್ನ ಅವರು ದೆಹಲಿ ಅಭಿವೃದ್ಧಿ ಪ್ರಾಧಿಕಾರದ(ಡಿಡಿಎ) ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸಾರ ಭಾರತಿ ಹಾಗೂ ಇಂಡಿಯನ್ ಏರ್‌ಲೈನ್ಸ್‌ನಂತಹ ಪ್ರಮುಖ ಸಾರ್ವಜನಿಕ ವಲಯದ ಕಂಪನಿಗಳ ಮುಖ್ಯಸ್ಥರಾಗಿದ್ದರು.

  • ನಿರ್ಭಯಾ ಕೇಸ್ – ಜೀವ ಉಳಿಸಿಕೊಳ್ಳಲು ದೋಷಿಗಳಿಂದ ಮತ್ತೊಂದು ಹೊಸ ಪ್ರಯತ್ನ

    ನಿರ್ಭಯಾ ಕೇಸ್ – ಜೀವ ಉಳಿಸಿಕೊಳ್ಳಲು ದೋಷಿಗಳಿಂದ ಮತ್ತೊಂದು ಹೊಸ ಪ್ರಯತ್ನ

    ನವದೆಹಲಿ: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ದೋಷಿಗಳು ಜೀವ ಉಳಿಸಿಕೊಳ್ಳಲು ಮತ್ತೊಂದು ಹೊಸ ಪ್ರಯತ್ನ ಆರಂಭಿಸಿದ್ದಾರೆ.

    ಗಲ್ಲು ಶಿಕ್ಷೆಗೆ 10 ದಿನಗಳು ಬಾಕಿ ಇರುವಾಗ ದೋಷಿ ವಿನಯ್ ಶರ್ಮಾ ಕ್ಷಮಾದಾನ ಕೋರಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರಿಗೆ ಅರ್ಜಿ ಸಲ್ಲಿಸಿದ್ದಾನೆ. ಇದನ್ನೂ ಓದಿ: ಕೊನೆಗೂ ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಫಿಕ್ಸ್ – ಮಾರ್ಚ್ 20ಕ್ಕೆ ಡೆತ್ ವಾರೆಂಟ್ ಜಾರಿ

    ಹೈ ಕೋರ್ಟ್, ಸುಪ್ರೀಂಕೋರ್ಟ್, ರಾಷ್ಟ್ರಪತಿಗಳಿಗೆ ಕ್ಷಮದಾನ ಅರ್ಜಿ ಸಲ್ಲಿಸಿ ವಜಾ ಆದ ಬಳಿಕ ನಾಲ್ವರು ಅಪರಾಧಿಗಳು ಮತ್ತೊಂದು ಹೊಸ ಪ್ರಯತ್ನ ಆರಂಭಿಸಿದ್ದು, ಕಡೆಯ ಕಾನೂನು ಅವಕಾಶ ಬಳಸಿಕೊಳ್ಳಲು ಮುಂದಾಗಿದ್ದಾರೆ.

    ಈಗಾಗಲೇ ಮೂರು ಬಾರಿ ಗಲ್ಲು ಶಿಕ್ಷೆಗೆ ಡೆತ್ ವಾರೆಂಟ್ ಜಾರಿಯಾಗಿದ್ದ ನಾಲ್ವರು ಅಪರಾಧಿಗಳನ್ನು ಬೇರೆ ಬೇರೆ ಕಾನೂನು ಹೋರಾಟಗಳ ನೆಪವೊಡ್ಡಿ ಗಲ್ಲು ಶಿಕ್ಷೆಯಿಂದ ಪಾರಾಗಿದ್ದರು. ಈಗ ನಾಲ್ಕನೇ ಬಾರಿಗೆ ಡೆತ್ ವಾರಂಟ್ ಜಾರಿಯಾಗಿದ್ದು, ಮಾರ್ಚ್ 20ಕ್ಕೆ ದಿನಾಂಕ ನಿಗದಿ ಮಾಡಲಾಗಿದೆ.

  • ಫ್ರಾನ್ಸ್ ಫಿಫಾ ಫುಟ್ಬಾಲ್ ಕಪ್ ವಿಕ್ಟರಿ ಟ್ವೀಟ್ ಮಾಡಿ ಟ್ರೋಲ್ ಆದ್ರು ಕಿರಣ್ ಬೇಡಿ

    ಫ್ರಾನ್ಸ್ ಫಿಫಾ ಫುಟ್ಬಾಲ್ ಕಪ್ ವಿಕ್ಟರಿ ಟ್ವೀಟ್ ಮಾಡಿ ಟ್ರೋಲ್ ಆದ್ರು ಕಿರಣ್ ಬೇಡಿ

    ನವದೆಹಲಿ: ರಷ್ಯಾದಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಫುಟ್ಬಾಲ್ ಕಪ್ ಫೈನಲ್ ಪಂದ್ಯದಲ್ಲಿ ಫ್ರಾನ್ಸ್ ಜಯಗಳಿಸಿದ ಬಳಿಕ ಮಾಜಿ ಐಪಿಎಸ್ ಅಧಿಕಾರಿ, ಪಾಂಡಿಚೇರಿ ಲೆಫ್ಟಿನೆಂಟ್ ಗವರ್ನರ್ ಆಗಿರುವ ಕಿರಣ್ ಬೇಡಿ ಅವರು ಮಾಡಿದ್ದ ಟ್ವೀಟ್ ಸದ್ಯ ಟ್ರೋಲ್‍ಗೆ ಒಳಗಾಗಿದೆ.

    ಭಾನುವಾರ ನಡೆದ ಪಂದ್ಯದಲ್ಲಿ ಫ್ರಾನ್ಸ್, ಕ್ರೊವೇಷಿಯಾ ವಿರುದ್ಧ 4-2 ಗೋಲುಗಳಿಂದ ಜಯಗಳಿಸಿತ್ತು. ಈ ವೇಳೆ ಫ್ರಾನ್ಸ್ ಜಯವನ್ನು ಸಂಭ್ರಮಿಸಲು ಟ್ವೀಟ್ ಮಾಡಿದ್ದ ಕಿರಣ್ ಬೇಡಿ ಅವರು, ಪಾಂಡಿಚೇರಿ ಸ್ವಾತಂತ್ರ್ಯ ಪೂರ್ವ ಫ್ರೆಂಚ್ ವಸಾಹತು ಆಗಿದ್ದ ಕಾರಣ ಫ್ರಾನ್ಸ್ ಗೆಲುವುವನ್ನು ನಾವು ಸಂಭ್ರಮಿಸಬಹುದು. ಕ್ರೀಡೆ ಎಲ್ಲರನ್ನು ಒಂದಾಗಿಸುತ್ತದೆ ಎಂದು ತಮ್ಮ ಟ್ವೀಟ್ ನಲ್ಲಿ ಬರೆದುಕೊಂಡಿದ್ದರು.

    ಕಿರಣ್ ಬೇಡಿ ಅವರ ಆ ಟ್ವೀಟ್ ಬಳಿಕ ಹಲವರು ಈ ಕುರಿತು ಅಸಮಾಧಾನ ವ್ಯಕ್ತಿ ಪಡಿಸಿ ಮರುಟ್ವೀಟ್ ಮಾಡಿದ್ದಾರೆ. ಅದರಲ್ಲೂ ಕೆಲ ಅಭಿಮಾನಿಗಳು ಕಿರಣ್ ಬೇಡಿ ಅವರು ವಸಾಹತು ಸಂಸ್ಕೃತಿಗೆ ಬೆಂಬಲ ನೀಡಿರುವುದು ತೀವ್ರ ನಿರಾಸೆ ಉಂಟು ಮಾಡಿದೆ ಎಂದು ಹೇಳಿದ್ದಾರೆ. ಇನ್ನು ಇಂಗ್ಲೆಂಡ್ ವಿಶ್ವಕಪ್ ಗೆದ್ದರೆ ನೀವು ಸಂಭ್ರಮಾಚರಣೆ ಮಾಡುತ್ತೀರಾ? ಏಕೆಂದರೆ ಭಾರತ ಬ್ರಿಟಿಷರ ವಸಾಹತು ಕಾಲೋನಿ ಆಗಿತ್ತು ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

    ತೀವ್ರ ಹಣಾಹಣಿಯಿಂದ ಕೂಡಿದ್ದ ಫಿಫಾ ಫುಟ್ಬಾಲ್ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಚಾಂಪಿಯನ್ ಆದ ಫ್ರಾನ್ಸ್ ತಂಡ ಬರೋಬ್ಬರಿ 260 ಕೋಟಿ ರೂ. ಹಾಗೂ ರನ್ನರ್-ಅಪ್ ತಂಡ ಕ್ರೊವೇಷಿಯಾ 191 ಕೋಟಿ ರೂ. ನಗದು ಬಹುಮಾನ ಪಡೆಯಿತು.

    https://twitter.com/TrueFactsIndia1/status/1018619534394052608

    https://twitter.com/PatakaBomb/status/1018622487490203648

  • ನಾನೇ ಸೂಪರ್ ಮ್ಯಾನ್ ಅಂತೀರಾ, ಕೆಲ್ಸಾನೇ ಮಾಡಲ್ಲ-ದೆಹಲಿ ಗವರ್ನರ್ ಗೆ ಸುಪ್ರೀಂ ಚಾಟಿ

    ನಾನೇ ಸೂಪರ್ ಮ್ಯಾನ್ ಅಂತೀರಾ, ಕೆಲ್ಸಾನೇ ಮಾಡಲ್ಲ-ದೆಹಲಿ ಗವರ್ನರ್ ಗೆ ಸುಪ್ರೀಂ ಚಾಟಿ

    ನವದೆಹಲಿ: ನಾನೇ ಸೂಪರ್ ಮ್ಯಾನ್ ಎಂದು ಹೇಳುತ್ತೀರಿ, ಆದರೆ ಯಾವುದೇ ಕೆಲಸ ಮಾಡುವುದಿಲ್ಲ ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರನ್ನು ಗುರುವಾರ ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.

    ರಾಜಧಾನಿಯಲ್ಲಿ ಹೆಚ್ಚುತ್ತಿರುವ ಕಸದ ಸಮಸ್ಯೆ ಕುರಿತು ದೆಹಲಿ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಎಂ.ಬಿ. ಲೋಕೂರ್ ಮತ್ತು ದೀಪಕ್ ಗುಪ್ತರ ದ್ವಿಸದಸ್ಯ ಪೀಠದಲ್ಲಿ ನಡೆಯಿತು.

    ಈ ವೇಳೆ ಕಸದ ಸಮಸ್ಯೆಯನ್ನು ಸರಿಯಾಗಿ ನಿರ್ವಹಣೆ ಮಾಡದ್ದಕ್ಕೆ “ನನಗೆ ಅಧಿಕಾರ ಇದೆ, ನಾನೇ ಸೂಪರ್ ಮ್ಯಾನ್ ಎಂದು ನೀವು ಹೇಳುತ್ತೀರಿ. ಆದರೆ ನೀವು ಏನೂ ಕೆಲಸ ಮಾಡುವುದಿಲ್ಲ” ಎಂದು ಹೇಳಿ ಚಾಟಿ ಬೀಸಿದೆ. ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿಂಕಿ ಆನಂದ್ ಕಸ ವಿಲೇವಾರಿ ಸಂಬಂಧ ಸುಪ್ರೀಂ ಕೋರ್ಟ್ ಕೇಳಿದ್ದ ಸಮಯ ನಿಗದಿಗೆ ಸಮಪರ್ಕವಾದ ಉತ್ತರ ನೀಡದ್ದಕ್ಕೆ ಗರಂ ಆದ ನ್ಯಾಯಾಮೂರ್ತಿಗಳು ತರಾಟೆಗೆ ತೆಗೆದುಕೊಂಡರು.

    ಈ ಸಮಸ್ಯೆಗೆ ದೆಹಲಿ ಮಹಾನಗರ ಪಾಲಿಕೆ ಕಾರಣ ಎಂದು ನೀವು ಹೇಳುತ್ತೀರಿ. ಪಾಲಿಕೆಯ ನಿಯಂತ್ರಣ ನಿಮ್ಮಲ್ಲಿರುವಾಗ ನಾವು ಯಾಕೆ ಅವರನ್ನು ಪ್ರಶ್ನೆ ಮಾಡಬೇಕು. ಹೀಗಾಗಿ ಈ ಸಮಸ್ಯೆ ಪರಿಹಾರಕ್ಕೆ ಮಾರ್ಗಗಳನ್ನು ಹುಡುಕಿ ಎಂದು ಆದೇಶಿಸಿತು.

    ರಾಷ್ಟ್ರ ರಾಜಧಾನಿಯ ಕಸದ ಸಮಸ್ಯೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೂರುವಂತಿಲ್ಲ. ಈ ವಿಚಾರದಲ್ಲಿ  ದೆಹಲಿ ಸಿಎಂ ಅವರನ್ನು ಎಳೆದು ತರಬೇಡಿ ಎಂದು ಹೇಳಿತು.

    ಜುಲೈ 16ರ ಒಳಗಡೆ ಕಸ ವಿಲೇವಾರಿಗೆ ಸಂಬಂಧಿಸಿದಂತೆ ತೆಗೆದುಕೊಂಡ ಕ್ರಮಗಳ ಬಗ್ಗೆ ಅಫಿಡವಿಟ್ ಸಲ್ಲಿಸಿ ಎಂದು ಕೋರ್ಟ್ ಲೆಫ್ಟಿನೆಂಟ್ ಗವರ್ನರ್ ಗೆ ಸೂಚಿಸಿ ಅರ್ಜಿ ವಿಚಾರಣೆಯನ್ನು ಮುಂದೂಡಿತು.