Tag: ಲೈಂಗಿಕ ಶೋಷಣೆ

  • ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಶೋಷಣೆ ಆರೋಪ – WFI ಅಧ್ಯಕ್ಷ ಸ್ಥಾನಕ್ಕೆ ಬ್ರಿಜ್‌ ಭೂಷಣ್‌ ರಾಜೀನಾಮೆ ಸಾಧ್ಯತೆ

    ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಶೋಷಣೆ ಆರೋಪ – WFI ಅಧ್ಯಕ್ಷ ಸ್ಥಾನಕ್ಕೆ ಬ್ರಿಜ್‌ ಭೂಷಣ್‌ ರಾಜೀನಾಮೆ ಸಾಧ್ಯತೆ

    ನವದೆಹಲಿ: ಮಹಿಳಾ ಕುಸ್ತಿಪಟುಗಳ (Women Wrestlers) ಮೇಲೆ ಲೈಂಗಿಕ ಶೋಷಣೆ ನಡೆಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಭಾರತದ ಕುಸ್ತಿ ಫೆಡರೇಶನ್ (WFI) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವು ಕೊಟ್ಟಿದ್ದಾರೆ.

    ಕುಸ್ತಿಪಟುಗಳ ಮೇಲೆ ಲೈಂಗಿಕ ಶೋಷಣೆ (Sexually Harassing) ನಡೆಯುತ್ತಿದೆ ಎಂದು ಆರೋಪಿಸಿ ವಿನೇಶ್‌ ಫೋಗಟ್‌ (Vinesh Phogat) ಸೇರಿದಂತೆ ಅನೇಕ ರಾಷ್ಟ್ರೀಯ ಕುಸ್ತಿಪಟುಗಳು ನವದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸಿಂಗ್‌ ಅವರನ್ನು ವಜಾಗೊಳಿಸಬೇಕು ಎಂದು ಪಟ್ಟು ಹಿಡಿದಿದ್ದರು. ಆದರೆ ಈ ಆರೋಪವನ್ನು ಬ್ರಿಜ್‌ ಭೂಷಣ್‌ ತಳ್ಳಿ ಹಾಕಿದ್ದರು. ಸಾಕ್ಷಿ ಇದ್ದರೆ ಕೊಡಲಿ ಎನ್ನುವ ಮೂಲಕ ಮತ್ತಷ್ಟು ಟೀಕಿಗೆ ಗುರಿಯಾದರು. ತಮ್ಮ ಮೇಲಿನ ಗಂಭೀರ ಆರೋಪದ ಬೆನ್ನಲ್ಲೇ ಸಿಂಗ್ ಜನವರಿ 22 ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಇದನ್ನೂ ಓದಿ: ರಾಷ್ಟ್ರೀಯ ತರಬೇತುದಾರರಿಂದ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ – ವಿನೇಶ್‌ ಫೋಗಟ್‌ ಗಂಭೀರ ಆರೋಪ

    ಜನವರಿ 22 ರಂದು ನಡೆಯುವ ಎಮರ್ಜೆಂಟ್ ಜನರಲ್ ಕೌನ್ಸಿಲ್ ಸಭೆಯಲ್ಲಿ ಡಬ್ಲ್ಯುಎಫ್‌ಐ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬಹುದು ಎಂದು ವರದಿಗಳು ತಿಳಿಸಿವೆ.

    “ಇದು ನನ್ನ ವಿರುದ್ಧದ ಷಡ್ಯಂತ್ರ. ಇದರಲ್ಲಿ ದೊಡ್ಡ ಕೈಗಾರಿಕೋದ್ಯಮಿಯ ಕೈವಾಡವಿದೆ. ವಿನೇಶ್ ಫೋಗಟ್ ಸೋತಾಗ ಆಕೆಗೆ ಪ್ರೇರಣೆ ನೀಡಿದ್ದು ನಾನೇ ಎಂದು ಡಬ್ಲ್ಯುಎಫ್‌ಐ ಅಧ್ಯಕ್ಷರು ಹೇಳಿದ್ದಾರೆ. ಇದನ್ನೂ ಓದಿ: ಗ್ಲಾಸ್‍ನಲ್ಲಿ ಕೈ ಲಾಕ್ ಮಾಡಿ ಕಾರು ಓಡಿಸಿದ – ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆಗೆ ಕಿರುಕುಳ

    “ಲೈಂಗಿಕ ಕಿರುಕುಳ ನೀಡಿಲ್ಲ. ಒಬ್ಬ ಕ್ರೀಡಾಪಟು ಮುಂದೆ ಬಂದು ಇದನ್ನು ಸಾಬೀತುಪಡಿಸಿದರೆ, ನಾನು ನೇಣು ಹಾಕಿಕೊಳ್ಳುತ್ತೇನೆ. ನಾನು ಯಾವುದೇ ತನಿಖೆಗೆ ಸಿದ್ಧ” ಎಂದು ಸಿಂಗ್‌ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಶಾಲೆಯ ನಿರ್ದೇಶಕನಿಂದ 6 ನೇ ತರಗತಿ ಬಾಲಕನ ಮೇಲೆ ಲೈಂಗಿಕ ಶೋಷಣೆ

    ಶಾಲೆಯ ನಿರ್ದೇಶಕನಿಂದ 6 ನೇ ತರಗತಿ ಬಾಲಕನ ಮೇಲೆ ಲೈಂಗಿಕ ಶೋಷಣೆ

    ಪಟ್ನಾ: ಶಾಲೆಯ ನಿರ್ದೇಶಕನೊಬ್ಬ 6ನೇ ತರಗತಿಯ ಬಾಲಕನ ಮೇಲೆ ನಿರಂತರವಾಗಿ ಮೂರು ವರ್ಷಗಳ ಕಾಲ ಲೈಂಗಿಕ ಶೋಷಣೆ ಎಸಗಿರುವ ಅಘಾತಕಾರಿ ಘಟನೆ ಬಿಹಾರದ ಸಿತಮಾರಿ ಜಿಲ್ಲೆಯಲ್ಲಿ ನಡೆದಿದೆ.

    ಘಟನೆ ಬೆಳಕಿಗೆ ಬಂದ ನಂತರ ಬಾಲಕನ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ನಾಪತ್ತೆಯಾಗಿದ್ದಾನೆ. ಕಳೆದ ನಾಲ್ಕು ವರ್ಷಗಳಿಂದ ಬಾಲಕ ಅದೇ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಆರೋಪಿ ಮೂರು ವರ್ಷಗಳಿಂದ ನಿರಂತವಾಗಿ ಲೈಂಗಿಕ ಶೋಷಣೆ ಎಸಗಿದ್ದಾನೆ ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.

    ಆರೋಪಿ ತನ್ನ ಕೃತ್ಯದ ಬಗ್ಗೆ ಪೋಷಕರಿಗೆ ತಿಳಿಸಿದರೆ ಕೊಲೆ ಮಾಡುವ ಬೆದರಿಕೆ ಹಾಕಿದ್ದ. ಹೀಗಾಗಿ ಬಾಲಕ ತನ್ನ ಮೇಲೆ ನಡೆಯುತ್ತಿರುವ ಶೋಷಣೆ ಕುರಿತು ಯಾರಿಗೂ ಮಾಹಿತಿ ನೀಡಿಲ್ಲ. ಆದರೆ ಕಳೆದ ಶುಕ್ರವಾರ ತೀವ್ರವಾಗಿ ನೊಂದ ಬಾಲಕ ಪೋಷಕರ ಬಳಿ ಘಟನೆ ಕುರಿತು ವಿವರವಾಗಿ ತಿಳಿಸಿದ್ದಾನೆ. ತನ್ನ ಮಗನ ಮೇಲೆ ನಡೆದಿರುವ ಕೃತ್ಯದ ಬಗ್ಗೆ ಕೇಳಿದ ಪೋಷಕರು ಅಘಾತಕ್ಕೊಳಗಾಗಿದ್ದಾರೆ.

    ಆರೋಪಿ ಬಾಲಕನ ಮೇಲೆ ಲೈಂಗಿಕ ಶೋಷಣೆ ನಡೆಸುವ ವೇಳೆ ಕೆಲವು ರಾಸಾಯನಿಕ ವಸ್ತುಗಳನ್ನು ದೇಹಕ್ಕೆ ಎರಚುತ್ತಿದ್ದ. ಒಂದು ವೇಳೆ ಆತನ ಕೃತ್ಯಕ್ಕೆ ನಿರಾಕರಿಸಿದರೆ ನನ್ನ ಕುಟುಂಬವನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಎಂದು ಬಾಲಕ ತಿಳಿಸಿದ್ದಾನೆ.

    ಆರೋಪಿಯ ಕುರಿತು ಶಾಲಾ ಆಡಳಿತ ಮಂಡಳಿಗೆ ದೂರು ನೀಡಲು ತೆರಳಿದ ಸಂದರ್ಭದಲ್ಲಿ ಬಾಲಕನ ಪೋಷಕರ ವಿರುದ್ಧವೇ ಹಲ್ಲೆ ನಡೆಸಿದ್ದು, ಈ ವೇಳೆಯು ಘಟನೆ ಕುರಿತು ಪೊಲೀಸರಿಗೆ ಮಾಹಿತಿ ನೀಡದಂತೆ ಬೆದರಿಕೆ ಹಾಕಿದ್ದಾನೆ ಎಂದು ಬಾಲಕನ ಪೋಷಕರು ತಿಳಿದ್ದಾರೆ.