Tag: ಲೈಕಾ ಪ್ರೊಡಕ್ಷನ್

  • ರಜನಿ-ಅಮಿತಾಭ್ ಮೊದಲ ದಿನದ ಶೂಟಿಂಗ್: ಫೋಟೋ ವೈರಲ್

    ರಜನಿ-ಅಮಿತಾಭ್ ಮೊದಲ ದಿನದ ಶೂಟಿಂಗ್: ಫೋಟೋ ವೈರಲ್

    ರೋಬ್ಬರು 33 ವರ್ಷಗಳ ನಂತರ ಇಬ್ಬರು ಹೆಸರಾಂತ ನಟರು ಜೊತೆಯಾಗಿ ನಟಿಸಲಿದ್ದಾರೆ ಎನ್ನುವುದೇ ಒಂದು ಹೆಮ್ಮೆಯ ಸಂಗತಿಯಾಗಿತ್ತು. ಅದು ನಿಜವಾಗಬಹುದಾ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿತ್ತು. ಕೊನೆಗೂ ಅಂತಹ ಕ್ಷಣವನ್ನು ಕಣ್ತುಂಬಿಕೊಳ್ಳುವಂತಹ ಅವಕಾಶ ಇಬ್ಬರ ಅಭಿಮಾನಿಗಳಿಗೂ ಸಿಕ್ಕಿದೆ. ರಜನಿಕಾಂತ್ (Rajinikanth) ಮತ್ತು ಅಮಿತಾಭ್ ಬಚ್ಚನ್ ನಿನ್ನೆಯಿಂದ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದಾರೆ. ರಜನಿ ನಟನೆಯ 170ನೇ ಸಿನಿಮಾದ ಶೂಟಿಂಗ್ ಸದ್ದಿಲ್ಲದೇ ಶುರುವಾಗಿದೆ.

    ರಜನಿ ನಟನೆಯ 170ನೇ ಸಿನಿಮಾ ಬಗ್ಗೆ ಸಾಕಷ್ಟು ಮಾಹಿತಿಗಳು ಹೊರ ಬೀಳುತ್ತಿವೆ. ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ಲೈಕಾ ಸಂಸ್ಥೆಯು ಒಂದೊಂದು ಮಾಹಿತಿಯನ್ನು ಹೊರ ಹಾಕುತ್ತಿದೆ. ಜೊತೆಗೆ ಮೊನ್ನೆಯಷ್ಟೇ ರಜನಿಕಾಂತ್ ಮತ್ತು ಅಮಿತಾಭ್ ಬಚ್ಚನ್ ಅವರ ಫಸ್ಟ್ ಲುಕ್ ಕೂಡ ರಿಲೀಸ್ ಮಾಡಿತ್ತು. ಇದೀಗ ಶೂಟಿಂಗ್ ಸ್ಪಾಟ್ ನಲ್ಲಿ ಅಮಿತಾಭ್ ಮತ್ತು ರಜನಿಯ ಫೋಟೋವನ್ನು ಶೇರ್ ಮಾಡಿದೆ.

    ಈ ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದು  ದುಶಾರ ವಿಜಯನ್ (Dushara Vijayan) ಮತ್ತು ಮಂಜು ವಾರಿಯರ್ (Manju Warrier) ಕಾಣಿಸಿಕೊಳ್ಳಲಿದ್ದಾರೆ. ದುಶಾರ ಈಗಾಗಲೇ ಬೋಧೈ ಯೇರಿ ಬುಧಿ ಮಾರಿ, ಅನೀತಿ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಮಂಜು ವಾರಿಯರ್ ಲೂಸಿಫರ್, ಅಸುರನ್ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಾಯಕಿಯರಾಗಿ ನಟಿಸಿದ್ದಾರೆ.

    ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ(Lyca Productions) ಮತ್ತೊಂದು ಸಾಹಸಕ್ಕೆ ಕೈ ಹಾಕಿದೆ. ಇಂಡಿಯನ್, ಖೈದಿ ನಂಬರ್ 150, 2.0, ದರ್ಬಾರ್ ಇತ್ತೀಚೆಗೆ ಪೊನ್ನಿಯಿನ್ ಸೆಲ್ವನ್ ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಲೈಕಾ, ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಮತ್ತೆ ಕೈ ಜೋಡಿಸಿದೆ. ರಜನಿಯ 170ನೇ ಚಿತ್ರಕ್ಕೆ ಹಣ ಸುರಿಯುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿಖಿಲ್ ಕುಮಾರ್ ಹೊಸ ಸಿನಿಮಾ ಸೆಟ್ ನಲ್ಲಿ ಶಿವರಾಜ್ ಕುಮಾರ್

    ನಿಖಿಲ್ ಕುಮಾರ್ ಹೊಸ ಸಿನಿಮಾ ಸೆಟ್ ನಲ್ಲಿ ಶಿವರಾಜ್ ಕುಮಾರ್

    ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shivaraj Kumar) ಯು.ಎಸ್ ಪ್ರವಾಸ ಮುಗಿಸಿ ಇತ್ತೀಚೆಗಷ್ಟೇ ಬಂದಿದ್ದು ವಿದೇಶದಿಂದ ಬಂದ ನಂತರ ನಟ ನಿಖಿಲ್ ಕುಮಾರ್ (Nikhil Kumar) ಅವ್ರನ್ನ ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿ  ನಟ ನಿಖಿಲ್ ಕುಮಾರ್ ಅವರ ಹೊಸ ಸಿನಿಮಾದ ಚಿತ್ರೀಕರಣ (Shooting) ನೆಡೆಯುತ್ತಿದ್ದು, ಸಿನಿಮಾ ಸೆಟ್ ಗೆ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಭೇಟಿಕೊಟ್ಟಿದ್ದಾರೆ.

    ಬಹಳ ದಿನಗಳ ನಂತರ ನಿಖಿಲ್ ಹಾಗೂ ಶಿವಣ್ಣ ಭೇಟಿ ಮಾಡಿದ್ದು ಒಂದಿಷ್ಟು ಸಮಯ ಒಟ್ಟಿಗೆ ಕಾಲ ಕಳೆದಿದ್ದಾರೆ. ಸಿನಿಮಾ ವಿಚಾರ ಹೊರೆತು ಪಡಿಸಿ ಒಂದಿಷ್ಟು ವಯಕ್ತಿಕ ವಿಚಾರವಾಗಿಯೂ ಶಿವಣ್ಣ ಹಾಗೂ ನಿಖಿಲ್ ಚರ್ಚೆ ಮಾಡಿದ್ದಾರೆ. ಇದೇ ಸಮಯದಲ್ಲಿ ಲೈಕಾ ಸಂಸ್ಥೆ ನಿರ್ಮಾಣ ಮಾಡ್ತಿರೋ ಸಿನಿಮಾ ಬಗ್ಗೆಯೂ ಶಿವಣ್ಣ ಮಾಹಿತಿ ಪಡ್ಕೊಂಡಿದ್ದಾರೆ. ಇದನ್ನೂ ಓದಿ:ಬಾಲಿವುಡ್‌ನಲ್ಲಿ ಬಂಪರ್ ಆಫರ್ ಗಿಟ್ಟಿಸಿಕೊಂಡ ‘ಸೀತಾರಾಮಂ’ ಬೆಡಗಿ

    ನಿಖಿಲ್ ಅವ್ರ ಸಿನಿಮಾದ ಚಿತ್ರೀಕರಣ ಹಳೆ ಕಟ್ಟಡ ಒಂದರ ಮೂರನೇ ಮಹಡಿಯಲ್ಲಿ ನಡೆಯುತ್ತಿತ್ತು. ಲಿಫ್ಟ್ ಇಲ್ಲದ ಕಾರಣ ನಿಖಿಲ್ ಭೇಟಿ ಮಾಡಲು ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಮೆಟ್ಟಿಲು ಹತ್ತಿಕೊಂಡೇ ಹೋಗಿ ನಿಖಿಲ್ ಅವ್ರನ್ನ ಭೇಟಿ ಮಾಡಿ ಹೊಸ ಸಿನಿಮಾಗೆ ಶುಭಕೋರಿದ್ರು. ಪ್ರೀತಿಯಿಂದ ತಮ್ಮನ್ನ ನೋಡಲು ಬಂದ ಶಿವಣ್ಣ ಹಾಗೂ ಗೀತಾ ಶಿವರಾಜ್ ಕುಮಾರ್ ಅವ್ರನ್ನ ನಿಖಿಲ್  ಕೊನೆಯಲ್ಲಿ ಕಾರ್ ವರೆಗೂ ಹೋಗಿ ಬಿಟ್ಟುಬಂದ್ರು.

    ಅಣ್ಣಾವ್ರ ಕುಟುಂಬ ಹಾಗೂ ದೊಡ್ಡ ಗೌಡರ ಕುಟುಂಬ ಈಗಿನಿಂದ ಮಾತ್ರವಲ್ಲ ಹಿಂದಿನಿಂದಲೂ ಚೆನ್ನಾಗಿದ್ದಾರೆ. ಅದರಲ್ಲೂ ಪುನೀತ್ ರಾಜ್ ಕುಮಾರ್ ಅವ್ರಿಗೆ ನಿಖಿಲ್ ಡೆಡಿಕೇಷನ್ ಬಗ್ಗೆ ತುಂಬಾ ಪ್ರೀತಿ ಇತ್ತು. ಈಗ ಶಿವಣ್ಣ ಹಾಗೂ ನಿಖಿಲ್ ಭೇಟಿ ಎರಡೂ ಕುಟುಂಬದ ಬಾಂಧವ್ಯವನ್ನ ನೆನಪಿಸುತ್ತಿದೆ.

    ಇನ್ನು ನಿಖಿಲ್ ಅಭಿನಯ ಮಾಡುತ್ತಿರೋ ಲೈಕಾ ಸಂಸ್ಥೆ (Lyca  Production)ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ಇನ್ನು ಟೈಟಲ್ ಫಿಕ್ಸ್ ಆಗಬೇಕಿದೆ. ಚಿತ್ರವನ್ನ ಲಕ್ಷ್ಮಣ್ ನಿರ್ದೇಶನ ಮಾಡುತ್ತಿದ್ದು ಚಿತ್ರೀಕರಣದ ಮೊದಲ ಶೆಡ್ಯೂಲ್ ಇತ್ತೀಚಿಗಷ್ಟೇ ಶುರುವಾಗಿದೆ. ಚಿತ್ರಕ್ಕೆ ಯುಕ್ತಿ ತರೇಜಾ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದ ಮೂಲಕ ಲೈಕಾ ಸಂಸ್ಥೆ ಮೊದಲ ಬಾರಿಗೆ ಕನ್ನಡ ಇಂಡಸ್ಟ್ರಿಯಲ್ಲಿ ಮೊದಲ ಸಿನಿಮಾ ನಿರ್ಮಾಣ ಮಾಡುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಖ್ಯಾತನಟ ದಳಪತಿ ವಿಜಯ್ ಪುತ್ರ ಈಗ ಡೈರೆಕ್ಟರ್: ಲೈಕಾ ನಿರ್ಮಾಣ

    ಖ್ಯಾತನಟ ದಳಪತಿ ವಿಜಯ್ ಪುತ್ರ ಈಗ ಡೈರೆಕ್ಟರ್: ಲೈಕಾ ನಿರ್ಮಾಣ

    ಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ (Lyca Production) ಕನ್ನಡಕ್ಕೂ ಪದಾರ್ಪಣೆ ಮಾಡಿದೆ. ನಿಖಿಲ್ ಕುಮಾರಸ್ವಾಮಿ ಹೊಸ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ಈ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಇದೀಗ ಮತ್ತೊಂದು ಮೆಗಾ ಅನೌನ್ಸ್ ಮೆಂಟ್ ಮಾಡಿದೆ. ತಮಿಳು ಚಿತ್ರರಂಗದ ಖ್ಯಾತ ನಟ ಇಳಯ ದಳಪತಿ ವಿಜಯ್ (Dalpati Vijay) ಸುಪುತ್ರ ನಿರ್ದೇಶನದ ಚೊಚ್ಚಲ ಸಿನಿಮಾಗೆ ಲೈಕಾ ಹಣ ಹಾಕುತ್ತಿದೆ.

    ಸ್ಟಾರ್ ಸಿನಿಮಾ ಮೇಕರ್ಸ್ ಜೊತೆಗೆ ಯುವ ಪ್ರತಿಭೆಗಳಿಗೂ ವೇದಿಕೆ ಕಲ್ಪಿಸುತ್ತಿರುವ ಲೈಕಾ ಸೃರ್ಷಿಕರ್ತ ಸುಭಾಷ್ ಕರಣ್ (Subhash Karan) ಈಗ ವಿಜಯ್ ಪುತ್ರ ಜೇಸನ್ ಸಂಜಯ್ ವಿಜಯ್ ಗೂ ಹೊಸ ಹೆಜ್ಜೆಗೆ ಸಾಥ್ ಕೊಟ್ಟಿದ್ದಾರೆ. ಜೇಸನ್ ಸಂಜಯ್ ವಿಜಯ್ (Jason Sanjay Vijay) ಜೊತೆ ಕೈ ಜೋಡಿಸಿರುವ ಸುಭಾಸ್ ಕರಣ್ ಮಾತನಾಡಿ, ಲೈಕಾ ಪ್ರೊಡಕ್ಷನ್ ಹೌಸ್ ಸದಾ ಯುವ ಪ್ರತಿಭೆಗಳಿಗೆ ವೇದಿಕೆ ನಿರ್ಮಾಣ ಮಾಡಿಕೊಡುತ್ತಿದೆ. ನಮ್ಮ ಮುಂದಿನ ಪ್ರಾಜೆಕ್ಟ್ ಜೇಸನ್ ಸಂಜಯ್ ವಿಜಯ್ ಅನ್ನೋದನ್ನು ಘೋಷಿಸಲು ಖುಷಿಯಾಗುತ್ತಿದೆ’ ಎನ್ನುತ್ತಾರೆ. ಇದನ್ನೂ ಓದಿ:ಶಾರುಖ್ ಖಾನ್ ಮನೆಗೆ ಹೆಚ್ಚಿನ ಭದ್ರತೆ: ಮನೆ ಮುಂದೆ ಪ್ರತಿಭಟನೆ

    ಜೇಸನ್ ಲಂಡನ್‌ನಲ್ಲಿ ಬಿಎ ಚಿತ್ರಕಥೆಯಲ್ಲಿ ಪರಿಪೂರ್ಣ ಶೈಕ್ಷಣಿಕ ಹಿನ್ನೆಲೆಯನ್ನು ಹೊಂದಿದ್ದಾರೆ. ನಂತರ ಟೊರೊಂಟೊ ಫಿಲ್ಮ್ ಸ್ಕೂಲ್‌ನಲ್ಲಿ ಫಿಲ್ಮ್ ಪ್ರೊಡಕ್ಷನ್ ಡಿಪ್ಲೊಮಾವನ್ನು ಪಡೆದಿದ್ದಾರೆ. ‘ಅವರು ಸ್ಕ್ರಿಪ್ಟ್ ಅನ್ನು ವಿವರಿಸಿದಾಗ, ಅದು ನಮಗೆ ಸಿನಿಮೀಯ ಅನುಭವವನ್ನು ನೀಡಿದ್ದರಿಂದ ನಾವು ಚಿತ್ರ ನಿರ್ಮಾಣ ಮಾಡಲು ಮುಂದೆ ಬಂದೆವು. ಅವರು ಚಿತ್ರಕಥೆ ಮತ್ತು ನಿರ್ದೇಶನದಲ್ಲಿ ಪರಿಣತಿ ಹೊಂದಿದ್ದಾರೆ. ಜೇಸನ್ ಸಂಜಯ್ ವಿಜಯ್ ಅವರೊಂದಿಗೆ ಕೆಲಸ ಮಾಡುವ ಅದ್ಭುತ ಅನುಭವಕ್ಕಾಗಿ ನಾವು ಎದುರು ನೋಡುತ್ತಿದ್ದೇವೆ. ಉದಯೋನ್ಮುಖ ತಾರೆಗಳು ಚಿತ್ರದಲ್ಲಿ ನಟಿಸಲಿದ್ದಾರೆ’ ಎನ್ನುವುದು ಲೈಕಾ ಸಂಸ್ಥೆಯ ಮಾತು.

    ನಿರ್ದೇಶಕ ಜೇಸನ್ ಸಂಜಯ್ ವಿಜಯ್ ಮಾತನಾಡಿ, ಲೈಕಾ ಪ್ರೊಡಕ್ಷನ್ಸ್‌ನಂತಹ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಡಿ ನನ್ನ ಮೊದಲ ಚಿತ್ರವನ್ನು ನಿರ್ದೇಶಿಸುವ ಅವಕಾಶ ಸಿಕ್ಕಿರುವುದು ಗೌರವದ ಸಂಗತಿಯಾಗಿದೆ. ಇದು ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಕೇಂದ್ರವಾಗಿದೆ. ಈ ಅವಕಾಶಕ್ಕಾಗಿ ನಾನು ಸುಭಾಸ್ಕರನ್ ಸರ್ ಅವರಿಗೆ ಧನ್ಯವಾದ ಹೇಳುತ್ತೇನೆ. ನಾನು ನಿರ್ದೇಶಕನಾಗುವ ನನ್ನ ಕನಸುಗಳನ್ನು ಈಡೇರಿಸಲು ಉತ್ತಮ ಬೆಂಬಲವನ್ನು ನೀಡಿದ ತಮಿಳು ಕುಮಾರನ್ ಅವರಿಗೆ ಧನ್ಯವಾದ. ನಾನು ಈ ಅವಕಾಶವನ್ನು ಬಳಸಿಕೊಳ್ಳುತ್ತೇನೆ ಎಂದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿಖಿಲ್ ಕುಮಾರ್ ಚಿತ್ರಕ್ಕೆ ಆಯ್ಕೆಯಾದ ಹಿರೋಯಿನ್ ಎಲ್ಲಿಯವರು?

    ನಿಖಿಲ್ ಕುಮಾರ್ ಚಿತ್ರಕ್ಕೆ ಆಯ್ಕೆಯಾದ ಹಿರೋಯಿನ್ ಎಲ್ಲಿಯವರು?

    ನಿಖಿಲ್ ಕುಮಾರ್ ಸ್ವಾಮಿ (Nikhil Kumaraswamy) ನಟನೆಯ ಹೊಸ ಸಿನಿಮಾದ ಮೂಲಕ ಬಾಲಿವುಡ್ ನಟಿ ಯುಕ್ತಿ ತಾರೇಜ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿದ್ದಾರೆ. ಇದು ಇವರ ದಕ್ಷಿಣದ ಎರಡನೇ ಚಿತ್ರವಾದರೆ, ಕನ್ನಡದಲ್ಲಿ ಮೊದಲು.

    ನಟ ನಾಗಶೌರ್ಯ ಜೊತೆ ರಂಗಾಬಲಿ ಸಿನಿಮಾದ ಮೂಲಕ ಟಾಲಿವುಡ್ ಗೆ ಎಂಟ್ರಿ ಕೊಟ್ಟವರು ಯುಕ್ತಿ ತಾರೇಜ. ಮಾಡೆಲಿಂಗ್ ಕ್ಷೇತ್ರದಲ್ಲಿದ್ದ ಹುಡುಗಿಯನ್ನು ಟಾಲಿವುಡ್ ಗೆ ಕರೆತರಲಾಗಿತ್ತು.

    ಯುಕ್ತಿ ತಾರೇಜ (Yukti Thareja) ಮೂಲತಃ ಹರಿಯಾಣ ಮೂಲದವರು. ದೆಹಲಿಯಲ್ಲಿ ವಾಣಿಜ್ಯ ವಿಷಯದಲ್ಲಿ ಪದವಿ ಮಾಡಿಕೊಂಡಿದ್ದಾರೆ. ಕೋವಿಡ್ ವೇಳೆಯಲ್ಲಿ ಮತ್ತೆ ಹರಿಯಾಣಕ್ಕೆ ಪ್ರಯಾಣ ಬೆಳೆಸಿದ್ದರು.

    ಕಾಲೇಜು ದಿನಗಳಲ್ಲೇ ಫ್ಯಾಷನ್ ಜಗತ್ತಿನತ್ತ ಮುಖ ಮಾಡಿ, ಓದುತ್ತಿರುವಾಗಲೇ ‘ದೆಹಲಿ ಫ್ರೆಶ್ ಫೇಸ್’ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದೇ ಮಾಡೆಲಿಂಗ್ ಜಗತ್ತಿಗೆ ಬರಲು ಪ್ರೇರಣೆ ಅಂತಾರೆ.

    ದೆಹಲಿಯಲ್ಲೇ ಮಾಡೆಲಿಂಗ್ ಜಗತ್ತಿನಲ್ಲಿ ಹೆಸರು ಮಾಡುತ್ತಿರುವಾಗಲೇ ಸಿನಿಮಾ ರಂಗದತ್ತ ಒಲವು. ಮಾಡೆಲಿಂಗ್ ಮಾಡುವಾಗಲೇ ಚಿತ್ರದಲ್ಲಿ ನಟಿಸುವಂತೆ ಆಫರ್. ಹಾಗಾಗಿ ದೆಹಲಿಯಿಂದ ಮುಂಬೈಗೆ ಶಿಫ್ಟ್ ಆಗಿದ್ದಾರೆ.

    ಬಾಲಿವುಡ್ ನಲ್ಲಿ ‘ಲುಟ್ ಗಯೆ’ ಹಾಡಿನ ಮೂಲಕ ಸಖತ್ ಫೇಮಸ್. ಆ ಹಾಡಿನ ಮೂಲಕ ಬಾಲಿವುಡ್ ಗೆ ಪರಿಚಯವಾದ ನಟಿ. ಈ ಹಾಡು ಪಡ್ಡೆಗಳ ಹಾರ್ಟ್ ಬೀಟ್ ಹೆಚ್ಚು ಕಡಿಮೆ ಮಾಡಿತ್ತು.

    ಲುಟ್ ಗಯೆ ಹಾಡಿನ ನಂತರ ಬಾಲಿವುಡ್ ನಲ್ಲಿ ಸಾಕಷ್ಟು ಆಫರ್ ಬಂದರೂ, ಆಯ್ಕೆ ಮಾಡಿಕೊಳ್ಳಲು ಹಿಂದೇಟು ಹಾಕಿದರು. ಹಾಗಾಗಿ ರಂಗಬಲಿ ಇವರ ಚೊಚ್ಚಲು ಸಿನಿಮಾವಾಯಿತು.

    ರಂಗಬಲಿ ಸಿನಿಮಾದಲ್ಲಿ ಸಖತ್ ಬೋಲ್ಡ್ ಆಗಿಯೇ ಕಾಣಿಸಿಕೊಂಡಿದ್ದರು ಯುಕ್ತಿ ತಾರೇಜ. ಮೊದಲ ಸಿನಿಮಾದಲ್ಲೇ ಅಷ್ಟೊಂದು ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದು ಚರ್ಚೆಗೂ ಕಾರಣವಾಗಿತ್ತು.

    ಇದೀಗ ಕನ್ನಡ ಸಿನಿಮಾ ರಂಗಕ್ಕೂ ಯುಕ್ತಿ ತಾರೇಜ ಕಾಲಿಟ್ಟಿದ್ದಾರೆ. ಈ ಸಿನಿಮಾದಲ್ಲಿ ಯಾವ ರೀತಿಯ ಪಾತ್ರ ಮಾಡುತ್ತಾರೆ ಎನ್ನುವುದು ಬಹಿರಂಗವಾಗಿಲ್ಲ. ಮುಂದಿನ ದಿನಗಳಲ್ಲಿ ತಿಳಿಯಬಹುದು.

    ಈ ಸಿನಿಮಾದ ಮೂಲಕ ಲೈಕಾ ಸಂಸ್ಥೆ (Lyca Production) ಕೂಡ ಇದೇ ಮೊದಲ ಬಾರಿಗೆ ಕನ್ನಡ ಸಿನಿಮಾವೊಂದನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರಕ್ಕೆ ಯುಕ್ತಿ ತಾರೇಜ ಆಯ್ಕೆ ಕೂಡ ಕುತೂಹಲ ಮೂಡಿಸಿದೆ.

    ಮೊನ್ನೆಯಷ್ಟೇ ಯುಕ್ತಿ ತಾರೇಜ ಮತ್ತು ನಿಖಿಲ್ ಕಾಂಬಿನೇಷನ್ ಚಿತ್ರಕ್ಕೆ ಮುಹೂರ್ತವಾಗಿದೆ. ಮಾಜಿ ಸಿಎಂ ಕುಮಾರ ಸ್ವಾಮಿ (H.D. Kumar Swamy) ಅವರು ಕ್ಲ್ಯಾಪ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿಖಿಲ್ ಕುಮಾರ್ ಹೊಸ ಚಿತ್ರಕ್ಕೆ ಮುಹೂರ್ತ : ಕ್ಲ್ಯಾಪ್ ಮಾಡಿ ವಿಶ್ ಮಾಡಿದ ಹೆಚ್.ಡಿ.ಕೆ

    ನಿಖಿಲ್ ಕುಮಾರ್ ಹೊಸ ಚಿತ್ರಕ್ಕೆ ಮುಹೂರ್ತ : ಕ್ಲ್ಯಾಪ್ ಮಾಡಿ ವಿಶ್ ಮಾಡಿದ ಹೆಚ್.ಡಿ.ಕೆ

    ನಿಖಿಲ್ ಕುಮಾರ್ (Nikhil Kumar) ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಅವರು ಕಾರ್ಯಕ್ರಮಕ್ಕೆ ಆಗಮಿಸಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ (Kumaraswamy) ನೂತನ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು.

    ದಕ್ಷಿಣ ಭಾರತದ ಹೆಸರಾಂತ ಚಿತ್ರ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಸಂಸ್ಥೆ (Lyca Production) ಈಗ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ. ಈ ಚಿತ್ರದ ನಾಯಕನಾಗಿ ನಾನು ನಟಿಸುತ್ತಿದ್ದೇನೆ. ಲಕ್ಷ್ಮಣ್ ಅವರು ಈ ಚಿತ್ರದ ನಿರ್ದೇಶಕರು.

    ಈ ಹಿಂದೆ ‘ಸೀತಾರಾಮ ಕಲ್ಯಾಣ’ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಲೈಕಾ ಸಂಸ್ಥೆಯ ಸುಭಾಸ್ಕರನ್ (Subhaskaran) ಅವರು ಆಗಮಿಸಿದ್ದರು.  ‘ನಮ್ಮ ಸಂಸ್ಥೆಯ ನಿರ್ಮಾಣದ ಚಿತ್ರದಲ್ಲಿ ನೀವು ನಾಯಕರಾಗಿ ನಟಿಸಬೇಕು’ ಎಂದು ಸುಭಾಸ್ಕರನ್ ಹೇಳಿದ್ದರು. ಈಗ ಚಿತ್ರ ಆರಂಭವಾಗುತ್ತಿದೆ. ಈ ಚಿತ್ರಕ್ಕಾಗಿ ನಿರ್ದೇಶಕರು ಒಂದು ವರ್ಷದಿಂದ ಬೆಂಗಳೂರಿನಲ್ಲೇ ಇದ್ದು ಕೆಲಸ  ಮಾಡುತ್ತಿದ್ದಾರೆ. ಸದ್ಯದಲ್ಲೇ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ನಿಖಿಲ್ ಕುಮಾರ್ ತಿಳಿಸಿದರು.

    ತಮ್ಮ‌ ತಂಡವನ್ನು ಪರಿಚಯಿಸುತ್ತಾ ಮಾತು ಪ್ರಾರಂಭಿಸಿದ ನಿರ್ದೇಶಕ ಲಕ್ಷ್ಮಣ್, ಕನ್ನಡದಲ್ಲಿ ಇದು ನನ್ನ ಮೊದಲ ಚಿತ್ರ. ನಾನು ಬರೆದ ಕಥೆಯನ್ನು ಒಪ್ಪಿ ಚಿತ್ರ ನಿರ್ಮಾಣಕ್ಕೆ ಮುಂದಾಗಿರುವ ನಿರ್ಮಾಪಕರಿಗೆ ಹಾಗೂ ನಾಯಕ ನಿಖಿಲ್ ಕುಮಾರ್ ಅವರಿಗೆ ಧನ್ಯವಾದ. ಒಳ್ಳೆಯ ತಂಡದೊಂದಿಗೆ ಒಳ್ಳೆಯ ಚಿತ್ರ ನೀಡುವ ನಂಬಿಕೆ ಇದೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ವಿವರಣೆ ನೀಡುತ್ತೇನೆ. ನಿಮ್ಮೆಲ್ಲರ ಹಾರೈಕೆ ಇರಲಿ ಎಂದರು. ಇದನ್ನೂ ಓದಿ:ಇಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಹರ್ಷಿಕಾ ಪೂಣಚ್ಚ- ಭುವನ್

    ಈ ಚಿತ್ರದಲ್ಲಿ ನಟಿಸುವಂತೆ ನಿಖಿಲ್ ಅವರು ಹೇಳಿದರು. ನಾನು ಕಥೆ ಕೇಳಿ ಒಪ್ಪಿಕೊಂಡೆ. ಕಥೆ ಚೆನ್ನಾಗಿದೆ ಎಂದು ನಟ ಕೋಮಲ್ (Komal) ತಿಳಿಸಿದರು. ಲೈಕಾ ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ ನಿರ್ಮಾಣವಾಗುತ್ತಿರುವ ಮೊದಲ ಕನ್ನಡ ಚಿತ್ರವಿದು. ಚಿತ್ರ ಯಶಸ್ವಿಯಾಗಲಿ ಎಂದು ಲೈಕಾ ಪ್ರೊಡಕ್ಷನ್ಸ್ ಮುಖ್ಯಸ್ಥರಾದ ಸುಭಾಸ್ಕರನ್  ಹಾರೈಸಿದರು.

    ನಾಯಕಿ ಯುಕ್ತಿ ತರೇಜ ಸಹ ನೂತನ ಚಿತ್ರದ ಕುರಿತು ಮಾತನಾಡಿದರು. ಹಲವಾರು ತಂತ್ರಜ್ಞರು ಹಾಗೂ ಗಣ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಗನಿಗಾಗಿ ಕಥೆ ಬರೆದಿದ್ದೇನೆ, ಕಾಲ್ ಶೀಟ್ ಕೊಡ್ತಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

    ಮಗನಿಗಾಗಿ ಕಥೆ ಬರೆದಿದ್ದೇನೆ, ಕಾಲ್ ಶೀಟ್ ಕೊಡ್ತಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

    ಇಂದು ನಿಖಿಲ್ ಕುಮಾರ್ ಸ್ವಾಮಿ ಅವರ ಹೊಸ ಸಿನಿಮಾದ ಮುಹೂರ್ತ ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ನಡೆಯುತ್ತಿದೆ. ಲೈಕಾ ಸಂಸ್ಥೆಯು (Lyca Production) ನಿಖಿಲ್ ಚಿತ್ರಕ್ಕಾಗಿ ಹಣ ಹೂಡುತ್ತಿದೆ. ಅದೊಂದು ಭಾರೀ ಬಜೆಟ್ ಸಿನಿಮಾವಾಗಿದ್ದರಿಂದ ಮುಹೂರ್ತ ಕಾರ್ಯಕ್ರಮವನ್ನು ಅದ್ಧೂರಿಯಾಗಿಯೇ ಮಾಡುತ್ತಿದೆ ಚಿತ್ರತಂಡ. ಈ ಸಂದರ್ಭದಲ್ಲಿ ನಿಖಿಲ್ ತಂದೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಪಾಲ್ಗೊಂಡಿದ್ದರು.

    ನಿಖಿಲ್ (Nikhil Kumar Swamy) ಚಿತ್ರದ ಮುಹೂರ್ತಕ್ಕೆ  (Muhurta) ಆಗಮಿಸಿದ್ದ ಕುಮಾರಸ್ವಾಮಿ ಅವರು ಮಗನನ್ನು ಉದ್ದೇಶಿಸಿ, ‘ನಾನು ನಿಖಿಲ್ ಗಾಗಿ ಕಥೆಯೊಂದನ್ನು ಬರೆದಿದ್ದೇನೆ. ಅದು ಕೂಡ ಭಾರೀ ಬಜೆಟ್ ಸಿನಿಮಾ. ಆ ಚಿತ್ರಕ್ಕಾಗಿ ಅವರು ಕಾಲ್ ಶೀಟ್ ಕೊಡುತ್ತಿಲ್ಲ’ ಎಂದು ಮಗನ ಬಗ್ಗೆ ಹೆಮ್ಮೆಯಿಂದಲೇ ಮಾತನಾಡಿದರು. ಇದನ್ನೂ ಓದಿ:ಡಾಲಿ ಹುಟ್ಟುಹಬ್ಬಕ್ಕೆ ಖಡಕ್ ರೊಟ್ಟಿ, ಪುಂಡೆಪಲ್ಯೆ ಮೆನು

    ಮುಂದುವರೆದು ಮಾತನಾಡಿದ ಕುಮಾರಸ್ವಾಮಿ, ‘ಚಿತ್ರರಂಗಕ್ಕೂ ನನಗೂ ಅವಿನಾಭವ ಸಂಬಂಧ ಇದೆ. ನನ್ನ ಕಾಲೇಜು ಶಿಕ್ಷಣ ಮುಗಿಸಿದ ಕೂಡಲೇ ತೊಡಗಿಕೊಂಡೆ. ಚಿತ್ರದ ಡಿಸ್ಡ್ರಿಬ್ಯೂಟರ್ ಆಗಿದ್ದೆ. ಆಗಿನ ಕಾಲದಲ್ಲಿ ಒಂದು ಸಿನಿಮಾಗೆ ನಾಲ್ಕೈದು ಲಕ್ಷಕ್ಕೆ ಹಂಚಿಕೆ ಮಾಡ್ತಿದ್ದೆ. ದುಡ್ಡು ಹೆಚ್ಚಾದ್ರೆ ಕುಮಾರಣ್ಣ ಕೊಡಿ ಅಂತಿದ್ರು. ನಾನು ಆಗಿನಿಂದಲೂ ಕನ್ನಡ ಚಿತ್ರರಂಗದ ಒಳಿತಿಗಾಗಿ ಕೆಲಸ ಮಾಡ್ತಿದ್ದೇನೆ. ಚಿತ್ರರಂಗಕ್ಕೆ ಬರಲು ಡಾ. ರಾಜ್ ಕುಮಾರ್ ಅವರೇ ನನಗೆ ದೊಡ್ಡ ಆಕರ್ಷಣೆ’ ಎಂದರು.

    ‘ಆವತ್ತಿನ ಸಿನಿಮಾಗಳು ಕೌಟುಂಬಿಕ, ಮಾನವೀಯ ಮೌಲ್ಯಗಳನ್ನ ಬೆಸೆಯುತ್ತಿದ್ದವು. ‌ಈಗ ಪ್ಯಾನ್ ಇಂಡಿಯಾ ಸಿನಿಮಾ ಮಾಡ್ತೀವಿ, ಹಣ ಮಾಡ್ತೀವಿ ಅಂತಾರೆ. ಆದರೆ ಸಾಮಾಜಿಕ ಸಂದೇಶ ಇರೋದಿಲ್ಲ. ಆವತ್ತಿನ ದೊಡ್ಡ ದೊಡ್ಡ ನಟರು ಹಣ ಸಂಪಾದಿಸುತ್ತಿರಲಿಲ್ಲ. ಜನ ಸಂಪಾದಿಸಿದ್ರು. ಸಂದೇಶ ಕೊಡುವಂತಹ ಸಿನಿಮಾ ಮಾಡ್ತಿದ್ರು’ ಎನ್ನುವುದು ಕುಮಾರಸ್ವಾಮಿ ಅವರ ಮಾತಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿಖಿಲ್ ಕುಮಾರ್ ಸ್ವಾಮಿ ಚಿತ್ರಕ್ಕೆ ಲೈಕಾ ಪ್ರೊಡಕ್ಷನ್ ಹಣ ಹೂಡಿದ್ದೇಕೆ?

    ನಿಖಿಲ್ ಕುಮಾರ್ ಸ್ವಾಮಿ ಚಿತ್ರಕ್ಕೆ ಲೈಕಾ ಪ್ರೊಡಕ್ಷನ್ ಹಣ ಹೂಡಿದ್ದೇಕೆ?

    ಮಿಳಿನ ದುಬಾರಿ ಚಿತ್ರಗಳನ್ನು ನಿರ್ಮಾಣ ಮಾಡಿರುವ ಲೈಕಾ ಪ್ರೊಡಕ್ಷನ್ (Lyca Production) ಹೌಸ್, ಮೊದಲ ಬಾರಿಗೆ ಕನ್ನಡ ಸಿನಿಮಾಗೆ ಹಣ ಹೂಡುತ್ತಿದೆ. ತಮ್ಮ ಹೊಸ ಚಿತ್ರಕ್ಕೆ ನಿಖಿಲ್ ಕುಮಾರ್ ಸ್ವಾಮಿ ಅವರನ್ನು ಆಯ್ಕೆ ಮಾಡಿಕೊಂಡಿದೆ. ಇದು ಕೂಡ ಭಾರೀ ಬಜೆಟ್ ಸಿನಿಮಾವಾಗಿದ್ದು, ಅಷ್ಟೊಂದು ಬಜೆಟ್ ಹೂಡಲು ನಿಖಿಲ್ ನಟನೆಯ ಸೀತಾ ರಾಮ ಕಲ್ಯಾಣ ಸಿನಿಮಾವಂತೆ. ಈ ಸಿನಿಮಾ ನೋಡಿದ್ದ ಸಂಸ್ಥೆಯ ಮುಖ್ಯಸ್ಥರು ನಿಖಿಲ್ ಚಿತ್ರವನ್ನು ನಿರ್ಮಾಣ ಮಾಡಲು ಮುಂದಾಗಿದ್ದಾರಂತೆ.

    ಕರ್ನಾಟಕ ವಿಧಾನಸಭೆ ಚುನಾವಣಾ ಹಿನ್ನೆಲೆಯಲ್ಲಿ ಚಿತ್ರರಂಗದಿಂದ ದೂರವಿದ್ದು, ಪಕ್ಷ ಸಂಘಟನೆಯಲ್ಲಿ ಬ್ಯುಸಿಯಾಗಿದ್ದರು ನಟ ನಿಖಿಲ್ ಕುಮಾರಸ್ವಾಮಿ (Nikhil Kumaraswamy). ಚುನಾವಣೆಗೂ ಮುನ್ನ ಎರಡು ಚಿತ್ರಗಳನ್ನು ಅವರು ಒಪ್ಪಿಕೊಂಡಿದ್ದರೂ, ಎರಡಕ್ಕೂ ಶೂಟಿಂಗ್ ಗಾಗಿ ಗ್ರೀನ್ ಸಿಗ್ನಲ್ ಕೊಟ್ಟಿರಲಿಲ್ಲ. ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟಿಸುವ ಹೊಣೆ ಹೊತ್ತಿದ್ದರಿಂದ ಚಿತ್ರೀಕರಣದಲ್ಲಿ ಭಾಗಿಯಾಗಿರಲಿಲ್ಲ. ಚುನಾವಣೆ ಮುಗಿದ ಕಾರಣದಿಂದಾಗಿ ಮತ್ತೆ ಚಿತ್ರರಂಗದತ್ತ ನಿಖಿಲ್ ಮುಖ ಮಾಡಿದ್ದಾರೆ.

    ಸೀತಾ ರಾಮ್ ಕಲ್ಯಾಣ್ ಸಿನಿಮಾದ ನಂತರ ಧನುಷ್ (Dhanush) ಮತ್ತು ಯದುವೀರ (Yaduveer) ಎಂಬೆರಡು ಚಿತ್ರಗಳನ್ನು ನಿಖಿಲ್ ಒಪ್ಪಿಕೊಂಡಿದ್ದರೂ, ಎರಡೂ ಚಿತ್ರಗಳ ಚಿತ್ರೀಕರಣ ಪ್ರಾರಂಭವಾಗಿರಲಿಲ್ಲ. ಹಾಗಾಗಿ ನಿರಾಳರಾಗಿ ಚುನಾವಣೆಗೆ ಕಳುಹಿಸಿ ಕೊಟ್ಟಿದ್ದರು ಆಯಾ ಚಿತ್ರಗಳ ನಿರ್ಮಾಪಕರು. ಆ ಚಿತ್ರಗಳ ಬಗ್ಗೆ ಇನ್ನೂ ಯಾವುದೇ ಮಾಹಿತಿ ಬಂದಿಲ್ಲ. ಈ ನಡುವೆ ನಿಖಿಲ್ ಲೈಕಾ ಸಂಸ್ಥೆ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಇದನ್ನೂ ಓದಿ:ಎಲ್ಲೆಲ್ಲೂ ‘ಜೈಲರ್’ ಚಿತ್ರದ ಹವಾ, ನಿಲ್ಲುತ್ತಿಲ್ಲ ರಜನಿ ತಾಕತ್ತು

    ನಿಖಿಲ್ ಮತ್ತು ಲೈಕಾ ಪ್ರೊಡಕ್ಷನ್ ಜಂಟಿಯಾಗಿ ಮಾಡುತ್ತಿರುವ ಹೊಸ ಚಿತ್ರಕ್ಕೆ ನಾಳೆಯೇ ಚಾಲನೆ  (Muhurta) ನೀಡಲಾಗುತ್ತಿದೆ. ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ಚಿತ್ರಕ್ಕೆ ಮುಹೂರ್ತ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಿನಿಮಾ ಕುರಿತಾಗಿ ಹೆಚ್ಚಿನ ಮಾಹಿತಿ ನಾಳೆಯೇ ಸಿಗಲಿದೆ.

    ನಿಖಿಲ್ ಕುಮಾರ ಸ್ವಾಮಿ ದೊಡ್ಡದೊಂದು ಬ್ರೇಕ್ ಗಾಗಿ ಕಾಯುತ್ತಿದ್ದಾರೆ. ಈವರೆಗೂ ಬಂದ ಚಿತ್ರಗಳು ನಿಖಿಲ್ ಅವರಿಗೆ ಅಷ್ಟೇನೂ ಹೇಳಿಕೊಳ್ಳುವಂತಹ ಆದಾಯ ಮತ್ತು ಹೆಸರು ತಂದುಕೊಟ್ಟಿಲ್ಲ. ಹಾಗಾಗಿ ದೊಡ್ಡ ಬ್ರೇಕ್ ಗಾಗಿಯೇ ಅವರು ಕಾಯುತ್ತಿದ್ದಾರೆ. ಒಪ್ಪಿಕೊಂಡ ಚಿತ್ರಗಳು ಅವರ ಕೈ ಹಿಡಿಯಲಿ ಎನ್ನುವುದು ಅಭಿಮಾನಿಗಳ ಆಸೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿಖಿಲ್ ಕುಮಾರ್ ಹೊಸ ಚಿತ್ರಕ್ಕೆ ಆ.23ರಂದು ಮುಹೂರ್ತ

    ನಿಖಿಲ್ ಕುಮಾರ್ ಹೊಸ ಚಿತ್ರಕ್ಕೆ ಆ.23ರಂದು ಮುಹೂರ್ತ

    ರ್ನಾಟಕ ವಿಧಾನಸಭೆ ಚುನಾವಣಾ ಹಿನ್ನೆಲೆಯಲ್ಲಿ ಚಿತ್ರರಂಗದಿಂದ ದೂರವಿದ್ದು, ಪಕ್ಷ ಸಂಘಟನೆಯಲ್ಲಿ ಬ್ಯುಸಿಯಾಗಿದ್ದರು ನಟ ನಿಖಿಲ್ ಕುಮಾರಸ್ವಾಮಿ (Nikhil Kumaraswamy). ಚುನಾವಣೆಗೂ ಮುನ್ನ ಎರಡು ಚಿತ್ರಗಳನ್ನು ಅವರು ಒಪ್ಪಿಕೊಂಡಿದ್ದರೂ, ಎರಡಕ್ಕೂ ಶೂಟಿಂಗ್ ಗಾಗಿ ಗ್ರೀನ್ ಸಿಗ್ನಲ್ ಕೊಟ್ಟಿರಲಿಲ್ಲ. ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟಿಸುವ ಹೊಣೆ ಹೊತ್ತಿದ್ದರಿಂದ ಚಿತ್ರೀಕರಣದಲ್ಲಿ ಭಾಗಿಯಾಗಿರಲಿಲ್ಲ. ಚುನಾವಣೆ ಮುಗಿದ ಕಾರಣದಿಂದಾಗಿ ಮತ್ತೆ ಚಿತ್ರರಂಗದತ್ತ ನಿಖಿಲ್ ಮುಖ ಮಾಡಿದ್ದಾರೆ.

    ಸೀತಾ ರಾಮ್ ಕಲ್ಯಾಣ್ ಸಿನಿಮಾದ ನಂತರ ಧನುಷ್ (Dhanush) ಮತ್ತು ಯದುವೀರ (Yaduveer) ಎಂಬೆರಡು ಚಿತ್ರಗಳನ್ನು ನಿಖಿಲ್ ಒಪ್ಪಿಕೊಂಡಿದ್ದರೂ, ಎರಡೂ ಚಿತ್ರಗಳ ಚಿತ್ರೀಕರಣ ಪ್ರಾರಂಭವಾಗಿರಲಿಲ್ಲ. ಹಾಗಾಗಿ ನಿರಾಳರಾಗಿ ಚುನಾವಣೆಗೆ ಕಳುಹಿಸಿ ಕೊಟ್ಟಿದ್ದರು ಆಯಾ ಚಿತ್ರಗಳ ನಿರ್ಮಾಪಕರು. ಆ ಚಿತ್ರಗಳ ಬಗ್ಗೆ ಇನ್ನೂ ಯಾವುದೇ ಮಾಹಿತಿ ಬಂದಿಲ್ಲ. ಈ ನಡುವೆ ಮತ್ತೊಂದು ಹೆಸರಾಂತ ಸಂಸ್ಥೆ ನಿಖಿಲ್ ಚಿತ್ರ ಮಾಡಲು ಮುಂದಾಗಿದೆ. ಇದನ್ನೂ ಓದಿ:‘ಟೈಗರ್ ನಾಗೇಶ್ವರ್ ರಾವ್’ ಟೀಸರ್ ಔಟ್- ಮಾಸ್ ಆಗಿ ಎಂಟ್ರಿ ಕೊಟ್ಟ ರವಿತೇಜ

    ದಕ್ಷಿಣ ಭಾರತದ ಶ್ರೀಮಂತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ (LYCA Production) ಇದೀಗ ನಿಖಿಲ್ ಅವರ ಸಿನಿಮಾವನ್ನು ನಿರ್ಮಾಣ ಮಾಡಲು ಮುಂದೆ ಬಂದಿದೆ. ನಿಖಿಲ್ ಕೂಡ ಈ ಕಂಪೆನಿಯಲ್ಲಿ ಕೆಲಸ ಮಾಡಲು ಒಪ್ಪಿಕೊಂಡಿದ್ದರಿಂದ ಹೊಸ ಚಿತ್ರಕ್ಕೆ ಆಗಸ್ಟ್ 23 ರಂದು ಚಾಲನೆ  (Muhurta)ನೀಡಲಾಗುತ್ತಿದೆ. ತಮಿಳಿನಲ್ಲಿ ದುಬಾರಿ ಬಜೆಟ್ ಸಿನಿಮಾ ಮಾಡಿದ ಲೈಕಾ ಇದೀಗ ಕನ್ನಡದ ನಟನ ಮೇಲೆ ಹಣ ಹೂಡುತ್ತಿದೆ.

    ನಿಖಿಲ್ ಕುಮಾರ ಸ್ವಾಮಿ ದೊಡ್ಡದೊಂದು ಬ್ರೇಕ್ ಗಾಗಿ ಕಾಯುತ್ತಿದ್ದಾರೆ. ಈವರೆಗೂ ಬಂದ ಚಿತ್ರಗಳು ನಿಖಿಲ್ ಅವರಿಗೆ ಅಷ್ಟೇನೂ ಹೇಳಿಕೊಳ್ಳುವಂತಹ ಆದಾಯ ಮತ್ತು ಹೆಸರು ತಂದುಕೊಟ್ಟಿಲ್ಲ. ಹಾಗಾಗಿ ದೊಡ್ಡ ಬ್ರೇಕ್ ಗಾಗಿಯೇ ಅವರು ಕಾಯುತ್ತಿದ್ದಾರೆ. ಒಪ್ಪಿಕೊಂಡ ಚಿತ್ರಗಳು ಅವರ ಕೈ ಹಿಡಿಯಲಿ ಎನ್ನುವುದು ಅಭಿಮಾನಿಗಳ ಆಸೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೆನ್ಸೇಷನಲ್ ಡೈರೆಕ್ಟರ್ ಜೊತೆ ಕೈ ಜೋಡಿಸಿದ ಲೈಕಾ ಪ್ರೊಡಕ್ಷನ್

    ಸೆನ್ಸೇಷನಲ್ ಡೈರೆಕ್ಟರ್ ಜೊತೆ ಕೈ ಜೋಡಿಸಿದ ಲೈಕಾ ಪ್ರೊಡಕ್ಷನ್

    ಭಾರತೀಯ ಚಿತ್ರರಂಗದ ದುಬಾರಿ ನಿರ್ಮಾಣ ಸಂಸ್ಥೆ ಎನಿಸಿಕೊಂಡಿರುವ ಲೈಕಾ ಪ್ರೊಡಕ್ಷನ್ ಮತ್ತೊಂದು ಹೊಸ ಸಿನಿಮಾ ಘೋಷಣೆ ಮಾಡಿದೆ. ಇಂಡಿಯನ್, ಖೈದಿ-150, ವಡಾ ಚೆನ್ನೈ, ದರ್ಬಾರ್, ಪೊನ್ನಿಯಿನ್ ಸೆಲ್ವನ್ ನಂತಹ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಿಸಿರುವ ಇಂಡಿಯನ್-2, ರಜನಿ ಜೊತೆ ಲಾಲ್ ಸಲಾಂ ಸೇರಿದಂತೆ ಹಲವು ಚಿತ್ರಗಳಿಗೆ ಹಣ ಸುರಿದಿರುವ ಸುಭಾಷ್ ಕರಣ್ ಈಗ ಸೆನ್ಸೇಷನಲ್ ಸಿನಿಮಾ 2018 ನಿರ್ದೇಶಕರ ಜೊತೆ ಕೈ ಜೋಡಿಸಿದ್ದಾರೆ.

    ಲೈಕಾ ಬರೀ ಸೂಪರ್ ಸ್ಟಾರ್ ಸಿನಿಮಾಗಳನ್ನು ಮಾತ್ರವಲ್ಲ ಹೊಸ ಪ್ರತಿಭೆಗಳಿಗೂ ವೇದಿಕೆ ಕಲ್ಪಿಸಿಕೊಡುತ್ತಿದೆ. ಮೋಸ್ಟ್ ಹ್ಯಾಪನಿಂಗ್ ಡೈರೆಕ್ಟರ್ ಜೂಡಾ ಆಂಥನಿ ಜೋಸೆಫ್ (Jude Anthany Joseph) ಜೊತೆ ಸಿನಿಮಾ ಮಾಡುವುದಾಗಿ ಲೈಕಾ (LYCA Production) ಅನೌನ್ಸ್ ಮಾಡಿದೆ. ಇದನ್ನೂ ಓದಿ:‘ತೇಜಸ್’ ಸಿನಿಮಾದ ರಿಲೀಸ್ ಡೇಟ್ ಘೋಷಣೆ ಮಾಡಿದ ಕಂಗನಾ

    ಕೇರಳದಲ್ಲಿ 2018ರಲ್ಲಿ ಪ್ರವಾಹ ಉಂಟಾದಾಗ ಮಾನವೀಯತೆ ಗೆದ್ದಿತ್ತು. ಈ ಧೈರ್ಯಶಾಲಿ ನೈಜ ಕಥೆಯು ಬೆಳ್ಳಿತೆರೆಯಲ್ಲಿ ಅದ್ಭುತವಾಗಿ ಮೂಡಿಬಂದಿತ್ತು. ಕೇರಳ (Malayalam, Keral) ಚಿತ್ರೋದ್ಯಮದ ಇತಿಹಾಸದಲ್ಲಿ ಅತಿದೊಡ್ಡ ಬ್ಲಾಕ್‌ ಬಸ್ಟರ್ ಸಿನಿಮಾ ಆಗಿತ್ತು. ಈ ಚಿತ್ರವನ್ನು ನಿರ್ದೇಶಿಸಿದ್ದು ಇದೇ ಜೂಡಾ ಆಂಥನಿ ಜೋಸೆಫ್. ಇದೇ ನಿರ್ದೇಶಕರಿಗೆ ಈಗ ಲೈಕಾ ಸಿನಿಮಾ ಮಾಡುತ್ತಿದೆ. ಶೀಘ್ರದಲ್ಲಿಯೇ ಈ ಚಿತ್ರದ ತಾರಾಬಳಗ ಹಾಗೂ ತಾಂತ್ರಿಕವರ್ಗದ ಬಗ್ಗೆ ಅಪ್ ಡೇಟ್ ನೀಡಲಿದೆ ಎಂದು ಅದು ತಿಳಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮತ್ತೆ ಸಿನಿಮಾ ರಂಗಕ್ಕೆ ಮರಳಿದ ನಿಖಿಲ್ ಕುಮಾರಸ್ವಾಮಿ

    ಮತ್ತೆ ಸಿನಿಮಾ ರಂಗಕ್ಕೆ ಮರಳಿದ ನಿಖಿಲ್ ಕುಮಾರಸ್ವಾಮಿ

    ರ್ನಾಟಕ ವಿಧಾನಸಭೆ ಚುನಾವಣಾ ಹಿನ್ನೆಲೆಯಲ್ಲಿ ಚಿತ್ರರಂಗದಿಂದ ದೂರವಿದ್ದು, ಪಕ್ಷ ಸಂಘಟನೆಯಲ್ಲಿ ಬ್ಯುಸಿಯಾಗಿದ್ದರು ನಟ ನಿಖಿಲ್ ಕುಮಾರಸ್ವಾಮಿ (Nikhil Kumaraswamy). ಎರಡು ಚಿತ್ರಗಳನ್ನು ಅವರು ಒಪ್ಪಿಕೊಂಡಿದ್ದರೂ, ಎರಡಕ್ಕೂ ಶೂಟಿಂಗ್ ಗಾಗಿ ಗ್ರೀನ್ ಸಿಗ್ನಲ್ ಕೊಟ್ಟಿರಲಿಲ್ಲ. ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟಿಸುವ ಹೊಣೆ ಹೊತ್ತಿದ್ದರಿಂದ ಚಿತ್ರೀಕರಣದಲ್ಲಿ ಭಾಗಿಯಾಗಿರಲಿಲ್ಲ. ಚುನಾವಣೆ ಮುಗಿದ ಕಾರಣದಿಂದಾಗಿ ಮತ್ತೆ ಚಿತ್ರರಂಗದತ್ತ ನಿಖಿಲ್ ಮುಖ ಮಾಡುತ್ತಿದ್ದಾರೆ.

    ಸೀತಾ ರಾಮ್ ಕಲ್ಯಾಣ್ ಸಿನಿಮಾದ ನಂತರ ಧನುಷ್ (Dhanush) ಮತ್ತು ಯದುವೀರ (Yaduveer) ಎಂಬೆರಡು ಚಿತ್ರಗಳನ್ನು ನಿಖಿಲ್ ಒಪ್ಪಿಕೊಂಡಿದ್ದರೂ, ಎರಡೂ ಚಿತ್ರಗಳ ಚಿತ್ರೀಕರಣ ಪ್ರಾರಂಭವಾಗಿರಲಿಲ್ಲ. ಹಾಗಾಗಿ ನಿರಾಳರಾಗಿ ಚುನಾವಣೆಗೆ ಕಳುಹಿಸಿ ಕೊಟ್ಟಿದ್ದರು ಆಯಾ ಚಿತ್ರಗಳ ನಿರ್ಮಾಪಕರು. ಆ ಚಿತ್ರಗಳ ಬಗ್ಗೆ ಇನ್ನೂ ಯಾವುದೇ ಮಾಹಿತಿ ಬಂದಿಲ್ಲ. ಈ ನಡುವೆ ಮತ್ತೊಂದು ಹೆಸರಾಂತ ಸಂಸ್ಥೆ ನಿಖಿಲ್ ಚಿತ್ರ ಮಾಡಲು ಮುಂದಾಗಿದೆ. ಇದನ್ನೂ ಓದಿ:ಗೋಲ್ಡನ್ ಹೀರೋಗೆ ಜೋಡಿಯಾದ ‘ಗಟ್ಟಿಮೇಳ’ ನಟಿ ಶರಣ್ಯ ಶೆಟ್ಟಿ

    ದಕ್ಷಿಣ ಭಾರತದ ಶ್ರೀಮಂತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ (LYCA Production) ಇದೀಗ ನಿಖಿಲ್ ಅವರ ಸಿನಿಮಾವನ್ನು ನಿರ್ಮಾಣ ಮಾಡಲು ಮುಂದೆ ಬಂದಿದೆ. ಈಗಾಗಲೇ ನಿಖಿಲ್ ಜೊತೆ ಮಾತುಕತೆಯನ್ನೂ ಅದು ಆಡಿದೆ. ನಿಖಿಲ್ ಕೂಡ ಆ ಕಂಪೆನಿಯಲ್ಲಿ ಕೆಲಸ ಮಾಡಲು ಒಪ್ಪಿಕೊಂಡಿದ್ದಾರೆ ಎನ್ನುವುದು ಸದ್ಯಕ್ಕಿರುವ ವರ್ತಮಾನ.