Tag: ಲೋಕಸಭಾ ಅಭ್ಯರ್ಥಿ

  • ಮಧ್ಯಪ್ರದೇಶದಲ್ಲಿ ಲೋಕಸಭಾ ಅಭ್ಯರ್ಥಿ ನಿಧನ- ಚುನಾವಣೆ ಮುಂದೂಡಿಕೆ

    ಮಧ್ಯಪ್ರದೇಶದಲ್ಲಿ ಲೋಕಸಭಾ ಅಭ್ಯರ್ಥಿ ನಿಧನ- ಚುನಾವಣೆ ಮುಂದೂಡಿಕೆ

    ಭೋಪಾಲ್:‌ ಮಧ್ಯಪ್ರದೇಶದ ಬೆತುಲ್ ಕ್ಷೇತ್ರದಿಂದ ಮಾಯಾವತಿಯವರ ಬಹುಜನ ಸಮಾಜ ಪಕ್ಷದ (BSP) ಲೋಕಸಭಾ ಅಭ್ಯರ್ಥಿ ಅಶೋಕ್ ಭಾಲವಿ (Ashok Bhalawi) ಅವರು ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಹಿಂದೆ ಏಪ್ರಿಲ್ 26 ರಂದು ಎರಡನೇ ಹಂತದಲ್ಲಿ ನಡೆಯಬೇಕಿದ್ದ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ.

    ಪಕ್ಷದ ಪ್ರಕಾರ, ಭಾಲವಿಗೆ ಎದೆನೋವು ಕಾಣಿಸಿಕೊಂಡ ತಕ್ಷಣ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ವಿಚಾರವನ್ನು ಬೆತುಲ್ ಡಿಎಂ ನರೇಂದ್ರ ಕುಮಾರ್ ಸೂರ್ಯವಂಶಿ ಖಚಿತಪಡಿಸಿದ್ದಾರೆ. ಅಲ್ಲದೇ ಈ ಬಗ್ಗೆ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದೇವೆ. ಹೀಗಾಗಿ ಏಪ್ರಿಲ್‌ 26ರಂದು ನಡೆಯಬೇಕಿದ್ದ ಎರಡನೇ ಹಂತದ ಮತದಾನವನ್ನು ಮುಂದೂಡಿದ್ದೇವೆ ಎಂದು ಹೇಳಿದರು.

    ಇತ್ತ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ನರೇಂದ್ರ ಸಿಂಗ್ ರಘುವಂಶಿ ಪ್ರತಿಕ್ರಿಯಿಸಿ, ಪ್ರಜಾಪ್ರತಿನಿಧಿ ಕಾಯ್ದೆಯಡಿ ಚುನಾವಣಾ ಪ್ರಕ್ರಿಯೆಯನ್ನು ನಿಲ್ಲಿಸಲಾಗಿದ್ದು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಣಾಳಿಕೆಯಲ್ಲಿ ಸಿಎಎ ಉಲ್ಲೇಖಿಸಲು ಭಯ – ಕಾಂಗ್ರೆಸ್‌ ವಿರುದ್ಧ ಪಿಣರಾಯಿ ಕಿಡಿ

    ಬೇತುಲ್‌ನ ಹಾಲಿ ಸಂಸದ ದುರ್ಗಾ ದಾಸ್ ಉಯಿಕೆ ಅವರನ್ನು ಬಿಜೆಪಿ ಮತ್ತೊಮ್ಮೆ ಕ್ಷೇತ್ರದಿಂದ ಕಣಕ್ಕಿಳಿಸಿದರೆ, ಕಾಂಗ್ರೆಸ್ ರಾಮು ಟೇಕಂ ಅವರನ್ನು ಕಣಕ್ಕಿಳಿಸಿದೆ. ಏಪ್ರಿಲ್ 26 ರಂದು ಟಿಕಮ್‌ಗಢ್, ದಾಮೋಹ್, ಖಜುರಾಹೊ, ಸತ್ನಾ, ರೇವಾ ಮತ್ತು ಹೊಶಂಗಾಬಾದ್ ಸ್ಥಾನಗಳೊಂದಿಗೆ ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಬೇತುಲ್ ಮತದಾನ ಮಾಡಲು ನಿರ್ಧರಿಸಲಾಗಿತ್ತು.

  • ಶಿವಮೊಗ್ಗದಲ್ಲಿ ಬಾಡಿಗೆಗೆ ಮನೆ ಪಡೆದ ದೊಡ್ಮನೆ ಸೊಸೆ

    ಶಿವಮೊಗ್ಗದಲ್ಲಿ ಬಾಡಿಗೆಗೆ ಮನೆ ಪಡೆದ ದೊಡ್ಮನೆ ಸೊಸೆ

    – ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್‌ಕುಮಾರ್‌

    ಶಿವಮೊಗ್ಗ: ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಹೆಸರು ಘೋಷಣೆಯಾಗುತ್ತಿದ್ದಂತೆ ದೊಡ್ಮನೆ ಸೊಸೆ ಗೀತಾ ಶಿವರಾಜ್‌ಕುಮಾರ್‌ (Geetha Shivarajkumar) ಶಿವಮೊಗ್ಗದಲ್ಲಿ ಚುನಾವಣಾ ಕಾರ್ಯಗಳಿಗೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

    ಕಾಂಗ್ರೆಸ್‌ ಪಕ್ಷ ಶುಕ್ರವಾರ (ಫೆ.8) ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 9 ರಾಜ್ಯಗಳ 39 ಕ್ಷೇತ್ರಗಳಿಗೆ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಮೊದಲ ಪಟ್ಟಿಯಲ್ಲೇ ಗೀತಾ ಶಿವರಾಜ್‌ಕುಮಾರ್‌ ಅವರ ಹೆಸರನ್ನು ಘೋಷಣೆ ಮಾಡಿದೆ. ಇದನ್ನೂ ಓದಿ: ಬಿಜೆಪಿ ಜೊತೆ ಕೈಜೋಡಿಸಿದ ಟಿಡಿಪಿ, ಜೆಎಸ್‌ಪಿ – ಆಂಧ್ರದ ಲೋಕಸಭಾ, ವಿಧಾನಸಭಾ ಚುನಾವಣೆಗೆ ಮೈತ್ರಿ ಸ್ಪರ್ಧೆ

    ಟಿಕೆಟ್‌ ಘೋಷಣೆಯಾದ ಮರುದಿನವೇ ಗೀತಾ ಶಿವರಾಜ್‌ಕುಮಾರ್‌ ಅವರು, ಚುನಾವಣಾ ಕಾರ್ಯಗಳಿಗಾಗಿ ಬಾಡಿಗೆಮನೆ (Rent House) ಪಡೆದಿದ್ದಾರೆ. ಚುನಾವಣಾ ಪ್ರಚಾರ ಕಾರ್ಯಗಳಿಗೆ ಸಚಿವ ಮಧು ಬಂಗಾರಪ್ಪ ಮತ್ತು ಗೀತಾ ಶಿವರಾಜ್‌ಕುಮಾರ್‌ ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ಶಿವಮೊಗ್ಗದ ಕಲ್ಲಹಳ್ಳಿ ಬಡಾವಣೆಯಲ್ಲಿ ಮಧು ಬಂಗಾರಪ್ಪ ನಿವಾಸದ ಪಕ್ಕದಲ್ಲೇ ಮನೆಯೊಂದನ್ನ ಬಾಡಿಗೆಗೆ ಪಡೆದುಕೊಂಡಿದ್ದಾರೆ.

    ಇಲ್ಲಿಯೇ ವಾರ್‌ ರೂಂ ಸ್ಥಾಪಿಸಲಾಗುತ್ತದೆ. ಜೊತೆಗೆ ಚುನಾವಣಾ ಪ್ರಚಾರ ಕಾರ್ಯಗಳ ಕುರಿತು ಮಹತ್ವದ ಸಿದ್ಧತೆಗಳನ್ನು ಇಲ್ಲಿಯೇ ಮಾಡಿಕೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ನಿಮ್ಮ ರಾಮಮಂದಿರ ಸ್ಫೋಟಿಸುತ್ತೇವೆ – ಅಲ್ಲಾಹು ಅಕ್ಬರ್ ಹೆಸರಿನಲ್ಲಿ ಬೆದರಿಕೆ ಪತ್ರ

    ಯಾವ ಕ್ಷೇತ್ರದಿಂದ ಯಾರು ಕಣಕ್ಕೆ?
    ವಿಜಯಪುರ (SC) – ಹೆಚ್.ಆರ್. ಆಲಗೂರು (ರಾಜು)
    ಹಾವೇರಿ – ಆನಂದಸ್ವಾಮಿ ಗಡ್ಡದೇವರಮಠ
    ಶಿವಮೊಗ್ಗ – ಗೀತಾ ಶಿವರಾಜ್ ಕುಮಾರ್
    ಹಾಸನ – ಎಂ. ಶ್ರೇಯಸ್ ಪಟೇಲ್
    ತುಮಕೂರು – ಎಸ್.ಪಿ ಮುದ್ದಹನುಮೇಗೌಡ
    ಮಂಡ್ಯ – ವೆಂಕಟರಾಮೇಗೌಡ (ಸ್ಟಾರ್ ಚಂದ್ರು)
    ಬೆಂಗಳೂರು ಗ್ರಾಮಾಂತರ – ಡಿಕೆ ಸುರೇಶ್

  • ಬೆಂಗಳೂರು ಗ್ರಾಮಾಂತರದಿಂದ ಡಿಕೆಸು ಅಖಾಡಕ್ಕೆ – ಯಾರಾಗ್ತಾರೆ ಎದುರಾಳಿ?

    ಬೆಂಗಳೂರು ಗ್ರಾಮಾಂತರದಿಂದ ಡಿಕೆಸು ಅಖಾಡಕ್ಕೆ – ಯಾರಾಗ್ತಾರೆ ಎದುರಾಳಿ?

    – ಹ್ಯಾಟ್ರಿಕ್‌ ಗೆಲುವಿನ ವಿಶ್ವಾಸದಲ್ಲಿ ಸಂಸದ

    ಬೆಂಗಳೂರು: 2024ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು (Congress 1st Lok Sabha List) ಶುಕ್ರವಾರ ಬಿಡುಗಡೆಗೊಳಿಸಿದೆ. ಕರ್ನಾಟಕ ಕಾಂಗ್ರೆಸ್‌ ಪಕ್ಷದ ಏಕೈಕ ಸಂಸದ ಡಿ.ಕೆ ಸುರೇಶ್‌ (DK Suresh) ಅವರಿಗೆ ಬೆಂಗಳೂರು ಗ್ರಾಮಾಂತರದಿಂದಲೇ ಟಿಕೆಟ್‌ ಘೋಷಣೆ ಮಾಡಲಾಗಿದೆ.

    2014, 2019ರ ಚುನಾವಣೆಗಳಲ್ಲಿ ಸತತ ಎರಡು ಬಾರಿ ಗೆಲುವು ಸಾಧಿಸಿರುವ ಡಿ.ಕೆ ಸುರೇಶ್‌, ಇದೀಗ ಹ್ಯಾಟ್ರಿಕ್‌ ಗೆಲುವಿನ ವಿಶ್ವಾಸದಲ್ಲಿದ್ದಾರೆ. 2014ರಲ್ಲಿ ಡಿಕೆ ಸುರೇಶ್‌ 14,55,244 ಮತಗಳನ್ನು ಪಡೆದು, 2,31,480 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. 2019ರಲ್ಲಿ 2,06,870 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಹಾಗಾಗಿ ಹೈಕಮಾಂಡ್‌ ಸತತ 3ನೇ ಬಾರಿಗೆ ಬೆಂಗಳೂರು ಗ್ರಾಮಾಂತರದಿಂದಲೇ ಟಿಕೆಟ್‌ ನೀಡಿದೆ.

    ಇನ್ನೂ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಬಿಜೆಪಿಯಿಂದ ಹಲವು ಘಟಾನುಘಟಿ ನಾಯಕರ ಹೆಸರುಗಳು ಕೇಳಿಬರುತ್ತಿದ್ದು. ಇದೇ ವಾರದಲ್ಲಿ 2ನೇ ಪಟ್ಟಿ ಪ್ರಕಟಿಸಲಿದ್ದು, ಕುತೂಹಲಕ್ಕೆ ತೆರೆ ಎಳೆಯಲಿದೆ. ಇದನ್ನೂ ಓದಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಗಾರಪ್ಪ ಫ್ಯಾಮಿಲಿ V/S ಯಡಿಯೂರಪ್ಪ ಫ್ಯಾಮಿಲಿ

    ಟಿಕೆಟ್‌ ಘೋಷಣೆ ಮಾಡಿದ ಬೆನ್ನಲ್ಲೆ ಪ್ರತಿಕ್ರಿಯಿಸಿರುವ ಡಿಕೆ ಸುರೇಶ್‌, ಬೆಂಗಳೂರು ಗ್ರಾಮಾಂತರದಲ್ಲಿ ನನ್ನ ಕೆಲಸ, ಪಕ್ಷಕ್ಕೆ ಸಲ್ಲಿಸಿದ ಸೇವೆಯನ್ನು ಮನಗಂಡು ಮೂರನೆಯ ಅವಧಿಗೂ ಕ್ಷೇತ್ರದ ಜನರ ಸೇವೆಗೆ ಅವಕಾಶ ಕಲ್ಪಿಸಿದ ರಾಷ್ಟ್ರೀಯ ಕಾಂಗ್ರೆಸ್‌ಗೆ ನನ್ನ ಧನ್ಯವಾದಗಳು. ನ್ನ ಪ್ರೀತಿಯ ಕನ್ನಡಿಗರ ಹಾಗೂ ಗ್ರಾಮಾಂತರ ಜನತೆಯ ಸೇವೆ ಮಾಡಲು ಇನ್ನಷ್ಟು ಬಲ ಬಂದಂತಾಗಿದೆ ಎಂದು ಎಕ್ಸ್‌ ಖಾತೆಯಲ್ಲಿ ಧನ್ಯವಾದ ಸಲ್ಲಿಸಿದ್ದಾರೆ.

    ಕರ್ನಾಟದಲ್ಲಿ ಯಾರ್ಯಾರಿಗೆ ಟಿಕೆಟ್?
    ಕಾಂಗ್ರೆಸ್‌ ಮೊದಲ ಪಟ್ಟಿಯಲ್ಲಿ 9 ರಾಜ್ಯಗಳಿಂದ 39 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಕರ್ನಾಟಕದ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಕಾಂಗ್ರೆಸ್, ತುಮಕೂರಿನಿಂದ ಮುದ್ದ ಹನುಮೇಗೌಡ, ವಿಜಯಪುರದಿಂದ ಎಸ್.ಆರ್. ಅಲಗೂರ, ಹಾವೇರಿಯಿಂದ ಆನಂದಸ್ವಾಮಿ ಗಡ್ಡದವೇರಮಠ, ಶಿವಮೊಗ್ಗದಿಂದ ಗೀತಾ ಶಿವರಾಜ್‌ಕುಮಾರ್, ಬೆಂಗಳೂರು ಗ್ರಾಮಾಂತರದಿಂದ ಡಿ.ಕೆ ಸುರೇಶ್ ಹಾಗೂ ಹಾಸನದಿಂದ ಶ್ರೇಯಸ್ ಪಟೇಲ್, ಮಂಡ್ಯದಿಂದ ವೆಂಕಟರಮಣಗೌಡ (ಸ್ಟಾರ್ ಚಂದ್ರು) ಹೆಸರನ್ನು ಪಕ್ಷ ಫೈನಲ್ ಮಾಡಿದೆ. ಉಳಿದಂತೆ ಛತ್ತೀಸಗಢ 6, ಕೇರಳ 16, ಲಕ್ಷದ್ವೀಪ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರಾ ಕ್ಷೇತ್ರಗಳಿಂದ ತಲಾ 1, ಮೇಘಾಲಯ 2, ತೆಲಂಗಾಣದಿಂದ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.

    ಮೊದಲ ಪಟ್ಟಿ ಪ್ರಕಟಿಸಿದ ಬಳಿಕ ಮಾತನಾಡಿದ ಕೆ.ಸಿ.ವೇಣುಗೋಪಾಲ್ ಮಾತನಾಡಿ, ಸಾಮಾಜಿಕ ನ್ಯಾಯದ ಅಡಿಯಲ್ಲಿ 15 ಸಾಮಾನ್ಯ ಹಾಗೂ ಪರಿಶಿಷ್ಟ ಜಾತಿ ಹಾಗೂ ಪಂಗಡ ಮತ್ತು ಹಿಂದುಳಿದ ವರ್ಗಕ್ಕೆ ಸೇರಿದ ಒಟ್ಟು 24 ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Congress 1st Lok Sabha List: ಮತ್ತೆ ವಯನಾಡಿನಿಂದಲೇ ಅದೃಷ್ಟ ಪರೀಕ್ಷೆಗಿಳಿದ ರಾಗಾ!

  • Congress 1st Lok Sabha List: ಶಿವಮೊಗ್ಗದಿಂದ ದೊಡ್ಮನೆ ಸೊಸೆ ಕಣಕ್ಕೆ!

    Congress 1st Lok Sabha List: ಶಿವಮೊಗ್ಗದಿಂದ ದೊಡ್ಮನೆ ಸೊಸೆ ಕಣಕ್ಕೆ!

    – ಮೊದಲ ಪಟ್ಟಿಯಲ್ಲಿ ಕರ್ನಾಟದ 7 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ

    ನವದೆಹಲಿ: 2024ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು (Congress 1st Lok Sabha List) ಶುಕ್ರವಾರ ಬಿಡುಗಡೆಗೊಳಿಸಿದೆ.

    ರಾಹುಲ್ ಗಾಂಧಿ (Rahul Gandhi), ಕೆ.ಸಿ ವೇಣುಗೋಪಾಲ್, ಶಶಿ ತರೂರ್ ಸೇರಿದಂತೆ ಒಟ್ಟು 9 ರಾಜ್ಯಗಳ 39 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಈ ಪಟ್ಟಿಯಲ್ಲಿ ಕರ್ನಾಟಕದ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಘೋಷಿಸಿದೆ.

    ನಿರೀಕ್ಷೆಯಂತೆ ನಟ ಶಿವರಾಜ್‌ಕುಮಾರ್ ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ (Geetha Shivarajkumar) ಅವರಿಗೆ ಟಿಕೆಟ್ ನೀಡಲಾಗಿದ್ದು, ಶಿವಮೊಗ್ಗದಿಂದ ಕಣಕ್ಕಿಳಿಯಲಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಹಾಲಿ ಸಂಸದ ಡಿ.ಕೆ ಸುರೇಶ್ (DK Suresh) ಮತ್ತೆ ಕಣಕ್ಕಿಳಿಯಲಿದ್ದು, ಬಿಜೆಪಿ ನಡುವೆ ಪ್ರಬಲ ಪೈಪೋಟಿಯ ನಿರೀಕ್ಷೆಯಿದೆ.

    ಯಾವ ಕ್ಷೇತ್ರದಿಂದ ಯಾರು ಕಣಕ್ಕೆ?
    ವಿಜಯಪುರ (SC) – ಹೆಚ್.ಆರ್. ಅಲ್ಗೂರು (ರಾಜು)
    ಹಾವೇರಿ – ಆನಂದಸ್ವಾಮಿ ಗಡ್ಡದೇವರಮಠ
    ಶಿವಮೊಗ್ಗ – ಗೀತಾ ಶಿವರಾಜ್ ಕುಮಾರ್
    ಹಾಸನ – ಎಂ. ಶ್ರೇಯಸ್ ಪಟೇಲ್
    ತುಮಕೂರು – ಎಸ್.ಪಿ ಮುದ್ದಹನುಮೇಗೌಡ
    ಮಂಡ್ಯ – ವೆಂಕಟರಾಮೇಗೌಡ (ಸ್ಟಾರ್ ಚಂದ್ರು)
    ಬೆಂಗಳೂರು ಗ್ರಾಮಾಂತರ – ಡಿಕೆ ಸುರೇಶ್

  • ಗಂಡ ಬಿಜೆಪಿ ಲೋಕಸಭಾ ಅಭ್ಯರ್ಥಿ – ಹೆಂಡ್ತಿ ಕಾಂಗ್ರೆಸ್ ಕಟ್ಟಾಳು!

    ಗಂಡ ಬಿಜೆಪಿ ಲೋಕಸಭಾ ಅಭ್ಯರ್ಥಿ – ಹೆಂಡ್ತಿ ಕಾಂಗ್ರೆಸ್ ಕಟ್ಟಾಳು!

    – ಬಳ್ಳಾರಿ ಕದನ ಕಣದಲ್ಲಿ ವಿಶಿಷ್ಟ ಪರಿಸ್ಥಿತಿ

    ಬಳ್ಳಾರಿ: ಗಣಿನಾಡಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಕಾವು ಏರುತ್ತಿದ್ದಂತೆ ಚುನಾವಣಾ ಕಾವು ಕೂಡ ಹೆಚ್ಚಾಗ್ತಿದೆ. ಜಿಲ್ಲೆಯಲ್ಲಿ ಪತ್ನಿ ಜಿಲ್ಲಾ ಪಂಚಾಯತ್ ಕಾಂಗ್ರೆಸ್ ಸದಸ್ಯರಾದರೆ, ಪತಿ ಬಿಜೆಪಿಯಿಂದ ಲೋಕಸಭಾ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಹೀಗಾಗಿ ಜನ ಯಾರನ್ನೂ ನಂಬಿ ಮತ ಹಾಕಬೇಕು ಎಂದು ಗೊಂದಲದಲ್ಲಿದ್ದಾರೆ.

    ಅಣ್ಣ ಒಂದು ಪಕ್ಷದಲ್ಲಿದ್ದರೆ ತಮ್ಮ ಇನ್ನೊಂದು ಪಕ್ಷದಲ್ಲಿರೋದು ಸಾಮಾನ್ಯ. ಆದ್ರೆ ಬಳ್ಳಾರಿ ಲೋಕಸಭಾ ಚುನಾವಣೆಯಲ್ಲೀಗ ಪತಿ-ಪತ್ನಿಯ ಜುಗಲ್‍ಬಂಧಿ ಸಾಕಷ್ಟು ಸುದ್ದಿ ಮಾಡುತ್ತಿದೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅರಸಿಕೇರಿ ದೇವೇಂದ್ರಪ್ಪ ಸ್ಪರ್ಧೆ ಮಾಡುತ್ತಿದ್ದಾರೆ. ಆದ್ರೆ ದೇವೇಂದ್ರಪ್ಪ ಪತ್ನಿ ಸುಶೀಲಮ್ಮ ಬಳ್ಳಾರಿ ಜಿಲ್ಲಾ ಪಂಚಾಯತ್‍ನಲ್ಲಿ ಕಾಂಗ್ರೆಸ್ ಸದಸ್ಯೆ. ಇದು ಮತದಾರರನ್ನು ಗೊಂದಲಕ್ಕೀಡು ಮಾಡಿದೆ.

    ಈ ಬಗ್ಗೆ ಬಿಜೆಪಿ ಅಭ್ಯರ್ಥಿ ಅರಸಿಕೇರಿ ದೇವೇಂದ್ರಪ್ಪ ಅವರನ್ನು ಕೇಳಿದ್ರೆ, ಅವರನ್ನೇ ಕೇಳಬೇಕು. ಈ ಪ್ರಜಾಪ್ರಭುತ್ವದಲ್ಲಿ ಅವರಿಗೂ ಹಕ್ಕು ಇದೆ ಎಂದು ಹೇಳುತ್ತಿದ್ದಾರೆ. ಇತ್ತ ಇದುವರೆಗೂ ಕಾಂಗ್ರೆಸ್‍ನಲ್ಲಿದ್ದುಕೊಂಡು ಚುನಾವಣೆ ಬರುತ್ತಿದ್ದಂತೆ ಬಿಜೆಪಿಗೆ ಜಿಗಿದ ದೇವೇಂದ್ರಪ್ಪರ ಬಗ್ಗೆ ಕಾಂಗ್ರೆಸ್ ನಾಯಕರು ಸಹ ಹರಿಹಾಯುತ್ತಿದ್ದಾರೆ.

    ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಮಾತನಾಡಿ, ನನ್ನ ಸ್ನೇಹಿತರಾದ ಶ್ರೀರಾಮುಲು ಅಣ್ಣ ಸೇರಿ ಬಿಜೆಪಿಯ ಒಂದು ಕಾರ್ಯಕರ್ತನನ್ನು ಹುಡುಕಿ ಅವನನ್ನು ನಾಯಕನನ್ನಾಗಿ ಮಾಡಕ್ಕಾಗಿಲ್ಲ ಎಂಬ ವ್ಯಥೆ ನನ್ನ ಕಾಡುತ್ತಿದೆ. ನಮ್ಮ ಶ್ರೀರಾಮುಲು ಅಣ್ಣನಿಗೆ ಚಿಂತೆ ಮಾಡಕ್ಕಾಗಿಲ್ಲ. ಕಾಂಗ್ರೆಸ್ ಅಭ್ಯರ್ಥಿಯೇ ಬೇಕಾಗಿತ್ತಾ ನಿಮಗೆ ಎಂದು ಪ್ರಶ್ನಿಸಿದ ಅವರು, ಪಾಪ ದೇವೇಂದ್ರಪ್ಪ ಅವರು ದೇವರು ಇದ್ದಂಗೆ ಇರಲಿ ಎಂದಿದ್ದಾರೆ.

    ಒಟ್ಟಿನಲ್ಲಿ ಪತಿ- ಪತ್ನಿ ಬೇರೆ ಬೇರೆ ಪಕ್ಷದಲ್ಲಿರೋದ್ರಿಂದ ಮತದಾರರಿಗೆ ಗೊಂದಲವೋ ಗೊಂದಲ. ಯಾರು ಯಾರ ಪರವಾಗಿ ಪ್ರಚಾರ ಮಾಡ್ತಾರೆ? ಕಾಂಗ್ರೆಸ್‍ನಲ್ಲಿ ಸದಸ್ಯರಾಗಿದ್ದುಕೊಂಡು ಪತಿಯ ಪರವಾಗಿ ಪತ್ನಿ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಾರಾ ಎನ್ನುವ ಗೊಂದಲದಲ್ಲಿ ಮತದಾರರು ಇದ್ದಾರೆ.