Tag: ಲೋಕಸಭಾ ಚುನಾವಣೆ

  • 4.8 ಕೋಟಿ ಪತ್ತೆ ಕೇಸ್‌ – ಸುಧಾಕರ್‌ಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌, FIR ರದ್ದು

    4.8 ಕೋಟಿ ಪತ್ತೆ ಕೇಸ್‌ – ಸುಧಾಕರ್‌ಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌, FIR ರದ್ದು

    ಬೆಂಗಳೂರು: ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ ಕೆ ಸುಧಾಕರ್‌ಗೆ (Dr Sudhakar) ಹೈಕೋರ್ಟ್‌ (High Court) ಬಿಗ್ ರಿಲೀಫ್ ನೀಡಿದೆ.

    ಲೋಕಸಭಾ ಚುನಾವಣೆ (Loksabha Election) ವೇಳೆ ಮಾದನಾಯಕನಹಳ್ಳಿ ಮನೆಯಲ್ಲಿ 4.8 ಕೋಟಿ ರೂ. ಪತ್ತೆಯಾಗಿತ್ತು. ಹಣ ಕೆ ಸುಧಾಕರ್ ಗೆ ಸೇರಿದ್ದು ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು.

    ಈ ಪ್ರಕರಣ ರದ್ದು ಕೋರಿ ಡಾ.ಕೆ. ಸುಧಾಕರ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅರುಣ್ ಅವರಿದ್ದ ಏಕಸದಸ್ಯ ಪೀಠ ಎಫ್‌ಐಆರ್‌ ರದ್ದುಗೊಳಿಸಿ ಆದೇಶ ಪ್ರಕಟಿಸಿದೆ. ಇದನ್ನೂ ಓದಿ: ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಏನಿದು ಪ್ರಕರಣ?
    ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನದ ಹಿಂದಿನ ದಿನ ಚುನಾವಣಾ ಆಯೋಗದ ಅಧಿಕಾರಿಗಳು ಗೋವಿಂದಪ್ಪ ಅವರ ಮನೆಯಿಂದ 4.8 ಕೋಟಿ ರೂಪಾಯಿ ಹಣವನ್ನು ಜಪ್ತಿ ಮಾಡಿದ್ದರು. ಈ ಹಣ ಚಿಕ್ಕಬಳ್ಳಾಪುರ ಲೋಕಸಭೆ ಚುನಾವಣೆಯಲ್ಲಿ ಮತದಾರರಿಗೆ ಹಂಚುವ ಉದ್ದೇಶದಿಂದ ಇರಲಿಸಲಾಗಿತ್ತು ಎಂದು ಆರೋಪಿಸಲಾಗಿತ್ತು.

    ಈ ವಿಚಾರವಾಗಿ ಚುನಾವಣಾ ನೀತಿ ಸಂಹಿತೆ ಜಾರಿಯ ರಾಜ್ಯ ನೋಡಲ್ ಅಧಿಕಾರಿಯಾಗಿದ್ದ ಮನೀಶ್ ಮೌದ್ಗಿಲ್ ಅವರಿಗೆ ಸುಧಾಕರ್ ಅವರು ವಾಟ್ಸಾಪ್‌ ಮೆಸೇಜ್ ಮಾಡಿದ್ದರು ಎನ್ನಲಾಗಿತ್ತು. ಪ್ರಕರಣದ ಕುರಿತು ಚುನಾವಣಾ ನೀತಿ ಸಂಹಿತೆ ಜಾರಿ ತಂಡದ ಅಧಿಕಾರಿ ಮಾದನಾಯಕಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಎಫ್‌ಐಆರ್ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದ ಪೊಲೀಸರು ನೆಲಮಂಗಲ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಸುಧಾಕರ್ ಹೈಕೋರ್ಟ್ ಮೆಟ್ಟಿಲೇರಿದ್ದರು.

  • ಇಂದೇ ಲೋಕಸಭೆ ಚುನಾವಣೆ ನಡೆದರೆ ಎನ್‌ಡಿಎ‌ 324 ಸ್ಥಾನ ಗೆಲ್ಲುವ ಸಾಧ್ಯತೆ

    ಇಂದೇ ಲೋಕಸಭೆ ಚುನಾವಣೆ ನಡೆದರೆ ಎನ್‌ಡಿಎ‌ 324 ಸ್ಥಾನ ಗೆಲ್ಲುವ ಸಾಧ್ಯತೆ

    – ಮೈತ್ರಿಕೂಟಕ್ಕೆ ಆಘಾತ; 234 ರಿಂದ 208ಕ್ಕೆ ಇಳಿಯುವ ನಿರೀಕ್ಷೆ

    ನವದೆಹಲಿ: ಮೂರು ಪ್ರಮುಖ ವಿಧಾನಸಭಾ ಚುನಾವಣೆಗಳಲ್ಲಿ ಸತತ ಜಯಗಳಿಸಿದ ನಂತರ ಬಿಜೆಪಿ ಚೇತರಿಸಿಕೊಂಡಿದೆ. ಇಂದು ಲೋಕಸಭಾ ಚುನಾವಣೆ ನಡೆದರೆ ಎನ್‌ಡಿಎ (NDA) ಪ್ರಬಲ ಪ್ರದರ್ಶನ ನೀಡುವ ಮೂಲಕ 324 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಇಂಡಿಯಾ ಟುಡೇ-ಸಿ ವೋಟರ್, ಮೂಡ್ ಆಫ್ ದಿ ನೇಷನ್ ಸಮೀಕ್ಷೆ ತಿಳಿಸಿದೆ.

    ಮತ್ತೊಂದೆಡೆ 2024 ರಲ್ಲಿ 234 ಸ್ಥಾನಗಳನ್ನು ಗೆದ್ದು ಎನ್‌ಡಿಎಗೆ ಆಘಾತ ನೀಡಿದ್ದ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಮೈತ್ರಿಕೂಟ ಇಂದು ಚುನಾವಣೆ ನಡೆದರೆ 208 ಸ್ಥಾನಗಳಿಗೆ ಇಳಿಯುವ ನಿರೀಕ್ಷೆಯಿದೆ ಎಂದು ಸಮೀಕ್ಷೆ ಹೇಳಿದೆ. ಇದನ್ನೂ ಓದಿ: ಬಿಜೆಪಿ-ಆರ್‌ಎಸ್‌ಎಸ್‌ ನಡ್ವೆ ಕೆಲ ಭಿನ್ನಾಭಿಪ್ರಾಯ ಇರಬಹುದು, ಎಲ್ಲಿಯೂ ಸಂಘರ್ಷವಿಲ್ಲ: ಮೋಹನ್ ಭಾಗವತ್

    ಈ ಸಮೀಕ್ಷೆಯನ್ನು 2025 ರ ಜುಲೈ 1 ರಿಂದ ಆಗಸ್ಟ್ 14ರ ನಡುವೆ ನಡೆಸಲಾಯಿತು. ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ 54,788 ವ್ಯಕ್ತಿಗಳನ್ನು ಸಮೀಕ್ಷೆ ಮಾಡಲಾಯಿತು. ಸಿ-ವೋಟರ್‌ನ ನಿಯಮಿತ ಟ್ರ್ಯಾಕರ್ ಡೇಟಾದಿಂದ ಹೆಚ್ಚುವರಿಯಾಗಿ 1,52,038 ಜನರ ಅಭಿಪ್ರಾಯಗಳನ್ನು ಸಹ ವಿಶ್ಲೇಷಿಸಲಾಗಿದೆ.

    2024 ರ ಲೋಕಸಭಾ ಚುನಾವಣೆಯಲ್ಲಿ 543 ಸ್ಥಾನಗಳಲ್ಲಿ ಬಿಜೆಪಿ 240 ಸ್ಥಾನಗಳನ್ನು ಗೆದ್ದಿತ್ತು. ಸ್ವಂತವಾಗಿ ಸರ್ಕಾರ ರಚಿಸಲು ಸರಳ ಬಹುಮತಕ್ಕೆ ಅಗತ್ಯವಿರುವ 272 ಸ್ಥಾನಗಳಿಗೆ 32 ಸ್ಥಾನಗಳ ಕೊರತೆಯಾಗಿತ್ತು. ಎನ್‌ಡಿಎ ಪಾಲುದಾರರೊಂದಿಗೆ, ಒಟ್ಟಾರೆ 293 ಸ್ಥಾನಗಳೊಂದಿಗೆ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಸರ್ಕಾರ ರಚಿಸಿದರು. ಇದನ್ನೂ ಓದಿ: ಸರ್ಕಾರಿ ಸೌಲಭ್ಯಗಳ ದುರ್ಬಳಕೆ ಆರೋಪ – ಕರ್ನಾಟಕ ಭವನದ ಹೆಚ್ಚುವರಿ ಆಯುಕ್ತೆ ವಿರುದ್ಧ ಸಿಎಸ್‌ಗೆ ದೂರು

  • ಮತದಾರರಿಗೆ ಹಣ ಹಂಚಿಕೆ ಆರೋಪ – ಕಾಂಗ್ರೆಸ್ ನಾಯಕರ ವಿರುದ್ಧ ಆಯೋಗಕ್ಕೆ ದೇವರಾಜೇಗೌಡ ದೂರು

    ಮತದಾರರಿಗೆ ಹಣ ಹಂಚಿಕೆ ಆರೋಪ – ಕಾಂಗ್ರೆಸ್ ನಾಯಕರ ವಿರುದ್ಧ ಆಯೋಗಕ್ಕೆ ದೇವರಾಜೇಗೌಡ ದೂರು

    ನವದೆಹಲಿ: ಕಳೆದ ಲೋಕಸಭಾ ಚುನಾವಣೆ (Lok Sabha Election) ಸಂದರ್ಭದಲ್ಲಿ ಹಾಸನದಲ್ಲಿ ಮತದಾರರಿಗೆ ಹಣ ಹಂಚಿಕೆ (Money Distribution) ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ (G Devarajegowda) ಅವರು ಕೇಂದ್ರ ಚುನಾವಣಾ ಆಯೋಗಕ್ಕೆ (Election Commission) ದೂರು ನೀಡಿದ್ದಾರೆ.

    ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯಸಭಾ ಸದಸ್ಯ ಜಿಸಿ ಚಂದ್ರಶೇಖರ್ ವಿರುದ್ಧ ಆಡಿಯೋ ಕ್ಲಿಪ್, ದಾಖಲೆಗಳ ಸಮೇತ ದೂರು ನೀಡಲಾಗಿದೆ. ಅಲ್ಲದೇ ಹಾಸನ ಸಂಸದ ಶ್ರೇಯಸ್ ಪಟೇಲ್ ವಿರುದ್ಧವೂ ಆಯೋಗಕ್ಕೆ ದೂರು ನೀಡಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಅರಣ್ಯದಲ್ಲಿ ಶವ ಹೂತಿದ್ದರೆ ಕ್ರಮ: ಈಶ್ವರ ಖಂಡ್ರೆ

    ದೂರು ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ದೇವರಾಜೇಗೌಡ, ಆಡಿಯೋ ಬೆನ್ನಲ್ಲೇ ನಾನು ಸಿಬಿಐಗೆ ದೂರು ನೀಡಿದ್ದೆ. ಚುನಾವಣಾ ಆಯೋಗಕ್ಕೆ ಸಿಬಿಐ ದೂರು ವರ್ಗಾಯಿಸಿದೆ. ಆಯೋಗ ಮಾಹಿತಿ ನೀಡುವಂತೆ ನನಗೆ ಇಮೇಲ್ ಬಂದಿತ್ತು. ಇಮೇಲ್ ಹಿನ್ನೆಲೆಯಲ್ಲಿ ನಾನು ಇಂದು ಖುದ್ದು ದೆಹಲಿಗೆ ಆಗಮಿಸಿ ದಾಖಲೆಗಳನ್ನು ನೀಡಿದ್ದೇನೆ. ಇದರಲ್ಲಿ ಸಿಎಂ, ಡಿಸಿಎಂ ಹೆಸರು ಉಲ್ಲೇಖವಾಗಿವೆ ಎಂದರು. ಇದನ್ನೂ ಓದಿ: ವಿಧಾನ ಪರಿಷತ್‌ನಲ್ಲಿ ಸಹಕಾರಿ ಬಿಲ್ ಸೋಲಿಸಿ ಸರ್ಕಾರಕ್ಕೆ ಮುಖಭಂಗ ಮಾಡಿದ ದೋಸ್ತಿಗಳು

    2024ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ನ ಅಭ್ಯರ್ಥಿಯಾಗಿದ್ದ ಸಂಸದ ಶ್ರೇಯಸ್ ಎಮ್ ಪಟೇಲ್ ಪರವಾಗಿ ಜಿಲ್ಲೆಯಲ್ಲಿ ಹಣ ಹಂಚಿಕೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ರಾಜ್ಯಸಭಾ ಸದಸ್ಯ ಎನ್ ಚಂದ್ರಶೇಖರ್ ಸಮ್ಮುಖದಲ್ಲಿ ತೀರ್ಮಾನಿಸಲಾಗಿದೆ ಎಂದು ಶಾಸಕ ಶಿವಲಿಂಗೇಗೌಡ ಅವರು ಫೋನಿನಲ್ಲಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿತ್ತು. ಇದನ್ನೂ ಓದಿ: ವಿಜಯನಗರ ಸಾಧನಾ ಸಮಾವೇಶಕ್ಕೆ 10 ಕೋಟಿ – ಲಾಡ್ V/S ಸಿ.ಟಿ.ರವಿ ವಾಕ್ಸಮರ

  • ಮಹಾದೇವಪುರದಲ್ಲಿ ಮತಗಳ್ಳತನ – ದಾಖಲೆ ಸಮೇತ ಮಾಹಿತಿ ಬಹಿರಂಗಪಡಿಸಿದ ರಾಹುಲ್ ಗಾಂಧಿ

    ಮಹಾದೇವಪುರದಲ್ಲಿ ಮತಗಳ್ಳತನ – ದಾಖಲೆ ಸಮೇತ ಮಾಹಿತಿ ಬಹಿರಂಗಪಡಿಸಿದ ರಾಹುಲ್ ಗಾಂಧಿ

    -ಸಂಜೆ 5 ಗಂಟೆ ಬಳಿಕ ಅತೀ ಹೆಚ್ಚು ಮತದಾನವಾಗುತ್ತದೆ 

    ನವದೆಹಲಿ: ಶುಕ್ರವಾರ ಬೆಂಗಳೂರಿಗೆ (Bengaluru) ಬರುವ ಮುನ್ನ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಮಹಾದೇವಪುರದಲ್ಲಿ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

    ಲೋಕಸಭೆ ಚುನಾವಣೆ (Lokasabha Election) ವೇಳೆ ಮತಗಳ್ಳತನ ನಡೆದಿದೆ ಎಂದು ಆರೋಪಿಸುತ್ತಿದ್ದ ವಿಪಕ್ಷ ನಾಯಕ ಇಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದದಲ್ಲಿ ಬರುವ ಮಹಾದೇವಪುರದಲ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಭಾರೀ ಅಕ್ರಮ ಅಕ್ರಮ ನಡೆದಿದೆ ಎಂದು ದಾಖಲೆ ಸಮೇತವಾಗಿ ಆರೋಪಿಸಿದ್ದಾರೆ.ಇದನ್ನೂ ಓದಿ: 25 ಲಕ್ಷ ವಂಚನೆ, ಸುಧಾಕರ್‌ ಹೆಸರು ಬರೆದಿಟ್ಟು ಚಾಲಕ ಸೂಸೈಡ್‌ – ಡೆತ್‌ನೋಟ್‌ನಲ್ಲಿ ಏನಿದೆ?

    ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 16 ಸ್ಥಾನ ಹಾಗೂ ಕಾಂಗ್ರೆಸ್ 9 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ ಅಚ್ಚರಿಯಾಗಿ ಸೋಲನ್ನು ಅನುಭವಿಸಿತು. ಹೀಗಾಗಿ ಕಡಿಮೆ ಅಂತರದಲ್ಲಿ ಸೋತ ಏಳು ಕ್ಷೇತ್ರಗಳ ಪೈಕಿ ಮಹಾದೇವಪುರ ಕ್ಷೇತ್ರದಲ್ಲಿ ತನಿಖೆ ನಡೆಸಿದೆವು. ಈ ವೇಳೆ ಕಾಂಗ್ರೆಸ್ 1,15,586 ಮತಗಳನ್ನು ಪಡೆದರೆ, ಬಿಜೆಪಿ 2,29,632 ಮತಗಳನ್ನು ಪಡೆದುಕೊಂಡಿದೆ. ಕಾಂಗ್ರೆಸ್‌ಗಿಂತ ಬಿಜೆಪಿ 1,14,046 ಮತಗಳ ಬಹುಮತ ಪಡೆದುಕೊಂಡಿದೆ. ಈ ಮತಗಳಲ್ಲಿ 11,965 ನಕಲಿ ಮತದಾರರು, 40,009 ನಕಲಿ ವಿಳಾಸದ ಮತಗಳು, ಒಂದೇ ವಿಳಾಸದಲ್ಲಿ ಹತ್ತಾರು ಮತಗಳಿರುವಂತಹ 10,452 ಮತಗಳು, ಫೋಟೋ ಇಲ್ಲದಿರುವ 4,132 ಹಾಗೂ ಫಾರಂ 6 ದುರ್ಬಳಕೆಯಾದ 33,692 ಮತಗಳಿವೆ ಸ್ಫೋಟಕ ಆರೋಪ ಮಾಡಿದರು.

    ಮಹಾರಾಷ್ಟ್ರ, ಹರಿಯಾಣ, ಕರ್ನಾಟಕ ಚುನಾವಣೆ ಸೇರಿ ಹಲವೆಡೆ ಮತಗಳ್ಳತನ ಆಗಿದೆ. ಇನ್ನೂ ಕಳೆದ ಐದು ತಿಂಗಳಲ್ಲಿ ಮಹಾರಾಷ್ಟ್ರಕ್ಕೆ ಅತಿ ಹೆಚ್ಚು ಮತದಾರರು ಸೇರ್ಪಡೆಯಾಗಿದ್ದಾರೆ. ಜನಸಂಖ್ಯೆಗಿಂತ ಹೆಚ್ಚು ಮತದಾರರಿದ್ದಾರೆ. ಸಂಜೆ ಐದು ಗಂಟೆಯ ಬಳಿಕ ಅತಿ ಹೆಚ್ಚು ಮತದಾನವಾಗುತ್ತದೆ ಎಂದು ಆರೋಪಿಸಿದ್ದಾರೆ.

    ಈ ಕುರಿತು ನಾವು ಚುನಾವಣಾ ಆಯೋಗವನ್ನು ಸಂಪರ್ಕಿಸಿದರೆ ನಮಗೆ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ಆಯೋಗ ನಮಗೆ ಮತದಾರರ ಪಟ್ಟಿ ನೀಡಲು ನಿರಾಕರಿಸಿದೆ. ಅದಲ್ಲದೇ ರಾಜಕೀಯ ಪಕ್ಷಗಳಿಗೂ ಕೂಡ ಮತದಾರರ ಪಟ್ಟಿ ನೀಡಿಲ್ಲ. ಜೊತೆಗೆ ಸಿಸಿಟಿವಿ ದೃಶ್ಯಗಳನ್ನು ಡಿಲೀಟ್ ಮಾಡಲಾಗಿದೆ ಎಂದು ಆಗ್ರಹಿಸಿದ್ದಾರೆ.ಇದನ್ನೂ ಓದಿ: ನಾಳೆ ಬೆಂಗ್ಳೂರಿಗೆ ರಾಹುಲ್ ಗಾಂಧಿ – ಹಲವೆಡೆ ಸಂಚಾರ ಬಂದ್, ಟ್ರಾಫಿಕ್ ತಪ್ಪಿಸೋಕೆ ಪರ್ಯಾಯ ವ್ಯವಸ್ಥೆ

  • ಬೆಂಗಳೂರಿನಲ್ಲಿ ಆ.5ರ ಪ್ರತಿಭಟನೆಗೆ ಮಂಡ್ಯದಿಂದ 5 ಸಾವಿರ ಜನ: ಚಲುವರಾಯಸ್ವಾಮಿ

    ಬೆಂಗಳೂರಿನಲ್ಲಿ ಆ.5ರ ಪ್ರತಿಭಟನೆಗೆ ಮಂಡ್ಯದಿಂದ 5 ಸಾವಿರ ಜನ: ಚಲುವರಾಯಸ್ವಾಮಿ

    ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಮತಗಳ್ಳತನ ನಡೆದಿರುವ ಸಂಬಂಧ ಆಗಸ್ಟ್ 5ರಂದು ಕಾಂಗ್ರೆಸ್ (Congress) ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಷ್ಟ್ರಮಟ್ಟದ ಬೃಹತ್ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಳಲಾಗಿದೆ. ಈ ಪ್ರತಿಭಟನೆಗೆ ಮಂಡ್ಯ (Mandya) ಜಿಲ್ಲೆಯಿಂದ 5 ಸಾವಿರ ಜನರು ಬರಬೇಕೆಂದು ಸಚಿವ ಎನ್.ಚಲುವರಾಯಸ್ವಾಮಿ (Chaluvarayaswamy) ತಿಳಿಸಿದ್ದಾರೆ.

    ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ (Rahul Gandhi) ಅವರು ಮತಗಳ್ಳತನವಾಗಿರುವ ಸಂಬಂಧ ಈಗಾಗಲೇ ಅಭಿಪ್ರಾಯ ವ್ಯಕ್ತಪಡಿಸಿ, ಉದಯಪುರ ಲೋಕಸಭಾ ಕ್ಷೇತ್ರದಲ್ಲಿ ಮತದಾನದ ಸಂಶೋಧನೆ ನಡೆಸಲಾಗಿ ಸಾಬೀತಾದ ಕಾರಣದಿಂದ ಪ್ರತಿಭಟನೆಯ ಮೂಲಕ ರಾಷ್ಟ್ರವ್ಯಾಪಿ ಜಾಗೃತಿ ಮೂಡಿಸಲಾಗುವುದು ಎಂದರು. ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆ ಕೇಸ್ – ಬಜಪೆ, ಸುರತ್ಕಲ್‌ನ 14 ಕಡೆ ಎನ್‌ಐಎ ದಾಳಿ

    ಉದಯಪುರ ಲೋಕಸಭಾ ಕ್ಷೇತ್ರದಲ್ಲಿ ಮತದಾನದ ಸಂಶೋಧನೆ ಆಧಾರದ ಮೇಲೆ ಚುನಾವಣಾ ಆಯೋಗಕ್ಕೆ ದೂರು ನೀಡಿದರೂ ದೂರು ಸ್ವೀಕರಿಸದ ಕಾರಣ ಪ್ರತಿಭಟನೆಯ ಮೂಲಕ ಚುನಾವಣಾ ಆಯೋಗದ ವೈಫಲ್ಯ ಹಾಗೂ ಕೇಂದ್ರಾಡಳಿತದ ಬಿಜೆಪಿ ಚುನಾವಣಾ ಆಯೋಗದ ದುರುಪಯೋಗವನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಅಶ್ಲೀಲ ಮೆಸೇಜ್ ಮಾಡಿದ್ದ ಮೂವರು ಅರೆಸ್ಟ್ – ಬೆಂಗ್ಳೂರು ಪೊಲೀಸರ ಕಾರ್ಯಕ್ಕೆ ನಟಿ ರಮ್ಯಾ ಮೆಚ್ಚುಗೆ

    ಆರ್‌ಸಿಬಿ ಕಾಲ್ತುಳಿತದ ಪ್ರಕರಣದ ಹಿನ್ನೆಲೆ ರ‍್ಯಾಲಿ ನಡೆಸಲು ಹೈಕೋರ್ಟ್ ನಿರ್ಬಂಧ ಹೇರಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾ ಸಮಾವೇಶ ನಡೆಸಲಾಗುತ್ತಿದೆ. ಬೆಂಗಳೂರಿನ ಅನಂತ್‌ರಾವ್ ವೃತ್ತದಿಂದ ಫ್ರೀಡಂ ಪಾರ್ಕ್‌ವರೆಗೂ ಸಂಚಾರದ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ತಿಳಿಸಿದರು. ಇದನ್ನೂ ಓದಿ: ಇಡೀ ರಾಷ್ಟ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ: ಬಿ.ಕೆ ಹರಿಪ್ರಸಾದ್‌ ಬಾಂಬ್‌

    ಮಂಡ್ಯ ಜಿಲ್ಲೆಯಿಂದ ಕಾಂಗ್ರೆಸ್ ಕಾರ್ಯಕರ್ತರು ಸೇರಿ 5 ಸಾವಿರ ಮಂದಿ ಪಾಲ್ಗೊಳ್ಳಬೇಕಾಗಿದೆ. ಅಂದು ಬೆಳಿಗ್ಗೆ 10 ಗಂಟೆಯೊಳಗೆ ಎಲ್ಲರೂ ಫ್ರೀಡಂ ಪಾರ್ಕ್ ಸೇರುವಂತೆ ಮನವಿ ಮಾಡಿದ ಅವರು, ರಾಷ್ಟ್ರೀಯ ನಾಯಕ ರಾಹುಲ್‌ಗಾಂಧಿ ಅವರು ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕೈಚಳಕದ ಬಗ್ಗೆ, ಮಹಾರಾಷ್ಟ್ರದಲ್ಲಿಯೂ ಇದೇ ರೀತಿ ಬಿಜೆಪಿ ಕೈಚಳಕ ತೋರಿರುವ ಅನುಮಾನವಿದ್ದು, ಎಲ್ಲದರ ಮಾಹಿತಿ ಹಂಚಿಕೊಳ್ಳಲಿದ್ದಾರೆ. 50ರಿಂದ 70 ಸಾವಿರ ಮಂದಿ ಭಾಗವಹಿಸುಲಿದ್ದಾರೆಂದು ಅಂದಾಜಿಸಲಾಗಿದ್ದು, 1 ಲಕ್ಷ ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಹಿಮಾಚಲ ಪ್ರದೇಶ | ಭಾರೀ ಮಳೆಯಿಂದ ನೀರಿನ ಮಟ್ಟ ದಿಢೀರ್‌ ಏರಿಕೆ – ಡ್ಯಾಂ ಕುಸಿತ

    ಮತಗಳ್ಳತನವೆಂದರೆ ಮತ ಪೆಟ್ಟಿಗೆಯಿಂದ ಮತಗಳ ಸೇರ್ಪಡೆ, ಮತ ತೆಗೆಯುವ ಕ್ರಿಯೆಯಾಗಿದೆ. ಬೆಂಗಳೂರಿನ ಮಹದೇವಪುರದಲ್ಲಿಯೂ 52 ಸಾವಿರ ಮತಗಳ ಅದಲಿ ಬದಲಿಯಾಗಿರುವ ಸಂಶಯವನ್ನು ರಾಹುಲ್‌ಗಾಂಧಿ ಪ್ರಾರಂಭದಲ್ಲಿಯೇ ವ್ಯಕ್ತಪಡಿಸಿದ್ದರು. ರಾಜ್ಯದಲ್ಲಿ ನಮ್ಮ ಸರ್ಕಾರವಿದ್ದರೂ ಈ ರೀತಿಯಾಗಲಿಕ್ಕೆ ಚುನಾವಣೆಯಲ್ಲಿ ಮೋಸ ಮಾಡಲಾಗದೆಂಬ ಉದಾಸೀನತೆಯೇ ಕಾರಣವಾಗಿದೆ. ಕೇಂದ್ರ ಸರ್ಕಾರ ಇಡಿ, ಐಟಿ ದುರುಪಯೋಗ ಮಾಡಿಕೊಂಡಂತೆ ಚುನಾವಣಾ ಆಯೋಗವನ್ನು ದುರುಪಯೋಗ ಮಾಡಿಕೊಂಡಿದೆ ಎಂದು ಗಂಭೀರ ಆರೋಪ ಮಾಡಿದರು. ಇದನ್ನೂ ಓದಿ: ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕ ಬಾವಿಯಲ್ಲಿ ಶವವಾಗಿ ಪತ್ತೆ

  • ಲೋಕಸಭಾ ಚುನಾವಣೆ ವೇಳೆ ಹಣ ದುರ್ಬಳಕೆ – ಹರಿಹರ ನಗರಸಭೆ ವ್ಯವಸ್ಥಾಪಕಿ ಸಸ್ಪೆಂಡ್

    ಲೋಕಸಭಾ ಚುನಾವಣೆ ವೇಳೆ ಹಣ ದುರ್ಬಳಕೆ – ಹರಿಹರ ನಗರಸಭೆ ವ್ಯವಸ್ಥಾಪಕಿ ಸಸ್ಪೆಂಡ್

    ದಾವಣಗೆರೆ: ಕಳೆದ ಲೋಕಸಭಾ ಚುನಾವಣೆ (Lok Sabha Elections) ವೇಳೆ ಹಣ ದುರುಪಯೋಗ ಮಾಡಿಕೊಂಡ ಆರೋಪದ ಮೇಲೆ ಹರಿಹರ ನಗರಸಭೆ ವ್ಯವಸ್ಥಾಪಕಿಯನ್ನು (Harihar Municipal Corporation) ಅಮಾನತುಗೊಳಿಸಲಾಗಿದೆ.

    ಹೆಚ್.ನಿರಂಜನಿ ಅಮಾನತಾದ ಅಧಿಕಾರಿಯಾಗಿದ್ದಾರೆ. ಇವರ ಮೇಲೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಹಣ ದುರುಪಯೋಗ ಮಾಡಿರುವ ಆರೋಪವಿದೆ. ಅಲ್ಲದೇ ಕರ್ತವ್ಯಕ್ಕೆ ಸರಿಯಾಗಿ ಹಾಜರಾಗದೇ ಇರುವುದು, ಸಾರ್ವಜನಿಕರ ಕೆಲಸ ಮಾಡದಿರುವುದು ಹಾಗೂ ಇನ್ನಿತರೆ ಕರ್ತವ್ಯ ಲೋಪ ಹಿನ್ನೆಲೆ ಜಿಲ್ಲಾಧಿಕಾರಿ ಜಿ.ಎಂ ಗಂಗಾಧರಸ್ವಾಮಿಯವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಅಬ್ದುಲ್ ರಹೀಂ ಹತ್ಯೆ| ಇಬ್ಬರು ಪರಿಚಯಸ್ಥರು ಸೇರಿ 15 ಮಂದಿ ವಿರುದ್ಧ ಎಫ್‌ಐಆರ್‌

    ಹೊನ್ನಾಳಿಯ ಪುರಸಭೆಯ ಪ್ರಭಾರಿ ಮುಖ್ಯಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ ಲೋಕಸಭಾ ಚುನಾವಣೆಯ ವೇಳೆ ಹಣ ದುರುಪಯೋಗವಾಗಿದೆ. ಹರಿಹರ ನಗರಸಭೆಯ ವ್ಯವಸ್ಥಾಪಕರಾಗಿ ವರ್ಗಾವಣೆಗೊಂಡ ಅವಧಿಯಲ್ಲಿಯೂ ಪ್ರಭಾರಿ ಕಂದಾಯ ಅಧಿಕಾರಿಯಾಗಿ ಬಿ ಖಾತಾ ವಿತರಣೆಯಲ್ಲಿ, ದಾಖಲೆ ಕೊಠಡಿ ನಿರ್ವಹಣೆಯಲ್ಲಿನ ಕರ್ತವ್ಯ ಲೋಪದ ಮೇಲೆ ಅಮಾನತುಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ರಹೀಂ ಹತ್ಯೆ| ಮಂಗಳೂರು-ಬಂಟ್ವಾಳ ರಸ್ತೆಯಲ್ಲಿರುವ ನೂರಾರು ಅಂಗಡಿಗಳು ಬಂದ್

  • 2 ಬಾರಿ ಪ್ರಧಾನಿಯಾಗಿ ದೇಶ ಮುನ್ನಡೆಸಿದ್ದ ಸಿಂಗ್‌ ಎಂದೂ ಲೋಕಸಭೆ ಚುನಾವಣೆ ಗೆದ್ದಿಲ್ಲ

    2 ಬಾರಿ ಪ್ರಧಾನಿಯಾಗಿ ದೇಶ ಮುನ್ನಡೆಸಿದ್ದ ಸಿಂಗ್‌ ಎಂದೂ ಲೋಕಸಭೆ ಚುನಾವಣೆ ಗೆದ್ದಿಲ್ಲ

    ನವದಹೆಲಿ: ಭಾರತದ ರಾಜಕೀಯ ವಲಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು ಮನಮೋಹನ್‌ ಸಿಂಗ್.‌ ಪಿ.ವಿ.ನರಸಿಂಹ ರಾವ್‌ ಸರ್ಕಾರದಲ್ಲಿ ವಿತ್ತ ಮಂತ್ರಿಯಾಗಿದ್ದರು. ಎರಡು ಬಾರಿ ಪ್ರಧಾನಿಯಾಗಿ ದೇಶವನ್ನು ಮುನ್ನಡೆಸಿದ್ದ ಮನಮೋಹನ್‌ ಸಿಂಗ್‌ (Manmohan Singh) ಒಂದು ಬಾರಿಯೂ ಲೋಕಸಭೆ ಚುನಾವಣೆ ಗೆದ್ದಿಲ್ಲ ಎಂಬುದು ಗಮನಾರ್ಹ.

    1999ರಲ್ಲಿ ಸೋತಿದ್ದ ಮನಮೋಹನ್‌ ಸಿಂಗ್‌
    1991ರಿಂದ 2019ರ ವರೆಗೆ ಸತತ ಐದು ಬಾರಿ ಅಸ್ಸಾಂನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಒಮ್ಮೆ ದಕ್ಷಿಣ ದೆಹಲಿಯಿಂದ 1999ರಲ್ಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಸಿಂಗ್‌ 30 ಸಾವಿರ ಮತಗಳ ಅಂತರದಿಂದ ಸೋತಿದ್ದರು. ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣ, ನಮ್ಮ ಮೆಟ್ರೋ ಉದ್ಘಾಟಿಸಿದ್ದ ಮನಮೋಹನ್‌ ಸಿಂಗ್‌!

    ರಾಜಕೀಯದ ಗಂಧ ಗಾಳಿಯೇ ಗೊತ್ತಿಲ್ಲದ ಸಂದರ್ಭದಲ್ಲೇ ಅಚಾನಕ್‌ ಆಗಿ ಹಣಕಾಸು ಸಚಿವ ಸ್ಥಾನ ಅಲಂಕರಿಸುವ ಆಫರ್‌ ಸಿಂಗ್‌ಗೆ ಬಂದಿತ್ತು. ಆಗ ರಾಜ್ಯಸಭೆಯಿಂದ ಆಯ್ಕೆಯಾಗಿ ಕೇಂದ್ರ ಮಂತ್ರಿಯಾಗಿದ್ದರು.

    ಒಮ್ಮೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತ ನಂತರ ಅವರು ಮತ್ತೆ ಚುನಾವಣೆ ಕಡೆ ಮುಖ ಮಾಡಲಿಲ್ಲ. ಎಲ್ಲಾ ಅವಧಿಯಲ್ಲೂ ರಾಜ್ಯಸಭೆಯಿಂದಲೇ ಆಯ್ಕೆಯಾಗಿ ಹೋದದ್ದು ಅವರ ರಾಜಕೀಯ ಜೀವನದ ಇತಿಹಾಸ. ಇದನ್ನೂ ಓದಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ಗೆ ಅಂತಿಮ ನಮನ ಸಲ್ಲಿಸಿದ ಮೋದಿ

    2019ರಿಂದ ರಾಜಸ್ಥಾನದಿಂದ ರಾಜ್ಯಸಭಾ ಸದಸ್ಯರಾಗಿದ್ದರು. ಈ ವರ್ಷದ (2024) ಆರಂಭದ ವರೆಗೆ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದರು. ಏಪ್ರಿಲ್‌ನಲ್ಲಿ ರಾಜ್ಯಸಭೆಯಿಂದ ನಿವೃತ್ತರಾದರು.

  • ಬಿಜೆಪಿ ಟಿಕೆಟ್‌ ಹೆಸರಲ್ಲಿ ವಂಚನೆ – ಜೋಶಿ ಸಹೋದರ ಗೋಪಾಲ್‌ ಜೋಶಿ ಅರೆಸ್ಟ್‌

    ಬಿಜೆಪಿ ಟಿಕೆಟ್‌ ಹೆಸರಲ್ಲಿ ವಂಚನೆ – ಜೋಶಿ ಸಹೋದರ ಗೋಪಾಲ್‌ ಜೋಶಿ ಅರೆಸ್ಟ್‌

    ಹುಬ್ಬಳ್ಳಿ: ಲೋಕಸಭೆ ಚುನಾವಣೆಯಲ್ಲಿ (Loksabha Election) ಬಿಜೆಪಿ ಟಿಕೆಟ್​ ಕೊಡಿಸುವುದಾಗಿ 2.25 ಕೋಟಿ ರೂ. ಸುಲಿಗೆ ಮಾಡಿದ ಆರೋಪದ ಮೇಲೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಅವರ ಸಹೋದರ ಗೋಪಾಲ್​ ಜೋಶಿ (Gopal Joshi) ಅವರನ್ನು ಹುಬ್ಬಳ್ಳಿಯಲ್ಲಿ ಬಂಧಿಸಲಾಗಿದೆ.

    ಎಸಿಪಿ ಚಂದನ್ (ACP Chandan)​ ಅವರ ನೇತೃತ್ವದಲ್ಲಿ ಬೆಂಗಳೂರಿನ ಬಸವೇಶ್ವರ ನಗರ ಠಾಣಾ ಪೊಲೀಸರು ಗೋಪಾಲ್‌ ಜೋಶಿ ಅವರನ್ನು ಬಂಧಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಗೋಪಾಲ್ ಜೋಶಿ ತಲೆಮರೆಸಿಕೊಂಡಿದ್ದರು.

    ಹುಬ್ಬಳ್ಳಿ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ತೀವ್ರ ವಿಚಾರಣೆ ನಡೆಸಿದ ಬಳಿಕ ಹುಬ್ಬಳ್ಳಿಯ ಇಂದಿರಾ ಕಾಲೋನಿಯಲ್ಲಿನ ಗೋಪಾಲ ಜೋಶಿ ಅವರ ಮನೆಗೆ ಕರೆ ತಂದು ವಿಚಾರಣೆ ನಡೆಸುತ್ತಿದ್ದಾರೆ. ದೂರುದಾರೆ ಸುನೀತಾ ಚೌಹ್ವಾಣ್ ಸಹ ಕೇಶ್ವಾಪುರ ಠಾಣೆ ಆಗಮಿಸಿದ್ದು ಅವರಿಂದ ಪೊಲೀಸರು ಹೇಳಿಕೆ ಪಡೆಯುತ್ತಿದ್ದಾರೆ.

    ಬಿಜೆಪಿ ಮಾಜಿ ಶಾಸಕ ದೇವಾನಂದ್ ಸಿಂಗ್ ಚವ್ಹಾಣ್ ಅವರ ಪತ್ನಿ ಸುನಿತಾ ಚವ್ಹಾಣ್​ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರು ಪೊಲೀಸರು ಗೋಪಾಲ್ ಜೋಶಿ, ವಿಜಯಲಕ್ಷ್ಮೀ ಹಾಗೂ ಅಜಯ್ ಜೋಶಿ ವಿರುದ್ಧ ಎಫ್ಐಆರ್ ದಾಖಲಿಸಿದ್ದು ಪೊಲೀಸರು ಆರೋಪಿಗಳನ್ನು ಬೆಂಗಳೂರಿಗೆ ಕರೆತರಲು ಸಿದ್ಧತೆ ನಡೆಸುತ್ತಿದ್ದಾರೆ.

    ಯಾವುದೇ ಸಂಬಂಧ ಇಲ್ಲ:
    ಗೋಪಾಲ್ ಜೋಶಿ ನನ್ನ ಸಹೋದರ ಅದರಲ್ಲಿ ಯಾವುದೇ ಅನುಮಾನವಿಲ್ಲ. ಈಗ ಅವರಿಗೂ ನನಗೂ ಯಾವುದೇ ಕೌಟುಂಬಿಕ ಹಾಗೂ ಹಣಕಾಸಿಕ ಸಂಬಂಧ ಇಲ್ಲ ಎಂದು ಪ್ರಹ್ಲಾದ್‌ ಜೋಶಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದರು.

    ನನ್ನ ಹಿರಿಯ ಸಹೋದರ ಗೋಪಾಲ್ ಜೋಶಿ ಅವರು ನಾನು ಬೇರೆಯಾಗಿ 33 ವರ್ಷಗಳು ಕಳೆದಿವೆ. ಈ ಹಿಂದೆಯೂ ಅವರ ವಿರುದ್ಧ ಎರಡು ಸಲ ಆರೋಪ ಕೇಳಿ ಬಂದಿತ್ತು. ಅದಕ್ಕಾಗಿ ನಾನು ಹಿಂದೆಯೇ ಗೋಪಾಲ್ ಜೋಶಿ ಅವರೊಂದಿಗೆ ನನ್ನ ಹೆಸರು ಲಿಂಕ್ ಮಾಡಬಾರದು ಎಂದು ಕೋರ್ಟ್‌ನಿಂದ ಆದೇಶ ತಂದಿದ್ದೇನೆ. ಸಾಮಾಜಿಕವಾಗಿ ಆರ್ಥಿಕವಾಗಿ ಯಾವುದೇ ಸಂಬಂಧ ಇಲ್ಲ ಎಂದು ಕೋರ್ಟ್‌ಗೆ ಮಾಹಿತಿ ನೀಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.

     

  • ಮೋದಿ ಬದಲು ನೀವೇ ಪ್ರಧಾನಿಯಾಗಿ- ಲೋಕಸಭೆ ಚುನಾವಣೆಗೆ ಮೊದಲು ಗಡ್ಕರಿಗೆ ಆಫರ್‌ ನೀಡಿದ್ದ ವಿಪಕ್ಷಗಳು

    ಮೋದಿ ಬದಲು ನೀವೇ ಪ್ರಧಾನಿಯಾಗಿ- ಲೋಕಸಭೆ ಚುನಾವಣೆಗೆ ಮೊದಲು ಗಡ್ಕರಿಗೆ ಆಫರ್‌ ನೀಡಿದ್ದ ವಿಪಕ್ಷಗಳು

    ನವದೆಹಲಿ: ಲೋಕಸಭೆ ಚುನಾವಣೆಗೆ (Lok Sabha Election) ಮುನ್ನ ಮತ್ತು ನಂತರ ಬಿಜೆಪಿ (BJP) ವಿರುದ್ಧ ವಿಪಕ್ಷಗಳು ನಡೆಸಿದ್ದ ಸಂಚನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಅನಾವರಣ ಮಾಡಿದ್ದಾರೆ.

    ಮೋದಿ (Narendra Modi) ಬದಲು ನೀವೇ ಪ್ರಧಾನಿ ಆಗಿ. ನಮ್ಮ ಬೆಂಬಲ ನಿಮಗೆ ಇರುತ್ತದೆ ಎಂದು ಲೋಕಸಭೆ ಚುನಾವಣೆಗೆ ಮೊದಲು ಮತ್ತು ನಂತರ ವಿಪಕ್ಷಗಳು ತಮಗೆ ಆಫರ್ ನೀಡಿದ್ದವು. ಆದರೆ ಪಕ್ಷದ ಹಿತದೃಷ್ಟಿಯಿಂದ ನಾನು ಇದಕ್ಕೆ ಒಪ್ಪಲಿಲ್ಲ ಎಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ.  ಇದನ್ನೂ ಓದಿ: MUDA Case| ರಾಜಧರ್ಮ ಪಾಲಿಸದಿದ್ದರೆ ಅದು ರಾವಣ ರಾಜ್ಯ ಆಗಲಿದೆ: ಕೋರ್ಟ್ ಆದೇಶದಲ್ಲಿ ಏನಿದೆ?

    ಮೋದಿ ಬದಲು ನಾನು ಪ್ರಧಾನಿ ಅಭ್ಯರ್ಥಿ ಆಗಿದ್ದರೆ ಬಿಜೆಪಿಯಲ್ಲಿ (BJP) ಬಿರುಕು ಮೂಡುತ್ತಿತ್ತು. ಇದುವೇ ವಿಪಕ್ಷಗಳ ಉದ್ದೇಶ ಆಗಿತ್ತು. ಆದರೆ ಇದಕ್ಕೆ ನಾನು ಅವಕಾಶ ನೀಡಬಾರದು ಎನ್ನುವ ದೃಷ್ಟಿಯಿಂದ ವಿಪಕ್ಷಗಳ ಪ್ರಸ್ತಾವನೆಯನ್ನು ತಿರಸ್ಕರಿಸಿದೆ ಎಂದಿದ್ದಾರೆ. ಇದನ್ನೂ ಓದಿ: ಸಿಎಂ ವಿರುದ್ಧ ದೂರು ದಾಖಲಿಸಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ವಂಚನೆ ಕೇಸ್‌ – RTI ಕಾರ್ಯಕರ್ತ ಸ್ಪಷ್ಟನೆ

    ಮೋದಿ ಆಡಳಿತದಲ್ಲಿ ನನಗೆ ನೀಡಲಾದ ಜವಾಬ್ದಾರಿಗಳ ಬಗ್ಗೆ ನಾನು ಸಂತೃಪ್ತನಾಗಿದ್ದೇನೆ. ನನಗೆ ಪ್ರಧಾನಿ ಹುದ್ದೆ ಮೇಲೆ ಆಸೆ ಇಲ್ಲ. ನಾನು ಮೊದಲು ಸಂಘದ ಸದಸ್ಯ. ನಂತರ ಪಕ್ಷದ ಕಾರ್ಯಕರ್ತ. ನನಗೆ ಅಧಿಕಾರ ಇದ್ದರೂ ಒಂದೇ ಇಲ್ಲದಿದ್ದರೂ ಒಂದೇ. ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಿಕೊಂಡಿರುತ್ತೇನೆ ಎಂದು ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ. ನಿತಿನ್ ಗಡ್ಕರಿ ಮಾತುಗಳು ಈಗ ಚರ್ಚೆಗೆ ಗ್ರಾಸವಾಗಿವೆ.

     

  • ಚುನಾವಣೆಗೆ ರಾಹುಲ್ ಗಾಂಧಿಗೆ ಎಷ್ಟು ಹಣ ನೀಡಲಾಗಿದೆ? – ಲೆಕ್ಕ ನೀಡಿದ ಕಾಂಗ್ರೆಸ್‌

    ಚುನಾವಣೆಗೆ ರಾಹುಲ್ ಗಾಂಧಿಗೆ ಎಷ್ಟು ಹಣ ನೀಡಲಾಗಿದೆ? – ಲೆಕ್ಕ ನೀಡಿದ ಕಾಂಗ್ರೆಸ್‌

    ನವದೆಹಲಿ: ಕಳೆದ ಲೋಕಸಭೆ ಚುನಾವಣೆಯಲ್ಲಿ (Lok Sabah Election) ರಾಯ್ ಬರೇಲಿ (Raebareli) ಮತ್ತು ವಯನಾಡ್‌ನಿಂದ (Wayanad) ಸ್ಪರ್ಧಿಸಿದ್ದ ರಾಹುಲ್ ಗಾಂಧಿ (Rahul Gandhi) ಅವರಿಗೆ ಚುನಾವಣಾ ಖರ್ಚು ವೆಚ್ಚಗಳಿಗೆ ತಲಾ 70 ಲಕ್ಷ ರೂಪಾಯಿ ಪಕ್ಷದ ಕಡೆಯಿಂದ ನೀಡಲಾಗಿತ್ತು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ (Election Commission) ಕಾಂಗ್ರೆಸ್‌ ತಿಳಿಸಿದೆ.

    ಚುನಾವಣಾ ವೆಚ್ಚಗಳಿಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗಕ್ಕ ಕಾಂಗ್ರೆಸ್‌ ಮಾಹಿತಿ ನೀಡಿದೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಲ್ಲಿ ಕಂಗನಾ ರನೌತ್ ವಿರುದ್ಧ ಸ್ಪರ್ಧಿಸಿದ್ದ ವಿಕ್ರಮಾಧಿತ್ಯ ಸಿಂಗ್ ಅವರಿಗೆ 87 ಲಕ್ಷ ನೀಡಲಾಗಿದೆ. ಇದು ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ನೀಡಿದ ಹಣದ ಪೈಕಿ ಹೆಚ್ಚು ಎಂದು ಹೇಳಿಕೊಂಡಿದೆ. ಇದನ್ನೂ ಓದಿ: ಸುಪ್ರೀಂ ಛೀಮಾರಿ ಹಾಕಿದ ಬೆನ್ನಲ್ಲೇ ಕ್ಷಮೆಯಾಚಿಸಿದ ರೇವಂತ್ ರೆಡ್ಡಿ

    ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸಿದ್ದ ಕಿಶೋರಿ ಲಾಲ್ ಶರ್ಮಾ, ಕೇರಳದ ಅಲಪ್ಪುಳದಿಂದ ಸ್ಪರ್ಧಿಸಿದ್ದ ಕೆ.ಸಿ ವೇಣುಗೋಪಾಲ್, ತಮಿಳುನಾಡಿನ ವಿರುಧುನಗರದಿಂದ ಸ್ಪರ್ಧಿಸಿದ್ದ ಮಾಣಿಕಂ ಟ್ಯಾಗೋರ್, ಗುಲ್ಬರ್ಗದ ಕಾಂಗ್ರೆಸ್ ಅಭ್ಯರ್ಥಿಗಳಾದ ರಾಧಾಕೃಷ್ಣ ಮತ್ತು ಪಂಜಾಬ್‌ನ ಆನಂದಪುರ ಸಾಹಿಬ್ ಅಭ್ಯರ್ಥಿ ವಿಜಯ್ ಇಂದರ್ ಸಿಂಗ್ಲಾಗೆ ತಲಾ 70 ಲಕ್ಷ ರೂ. ನೀಡಿದೆ. ಕಾಂಗ್ರೆಸ್‌ನ ಹಿರಿಯ ನಾಯಕರಾದ ಆನಂದ್ ಶರ್ಮಾ ಮತ್ತು ದಿಗ್ವಿಜಯ್ ಸಿಂಗ್ ಇಬ್ಬರೂ ಚುನಾವಣೆಯಲ್ಲಿ ಸೋತಿದ್ದು ಕ್ರಮವಾಗಿ 46 ಲಕ್ಷ ಮತ್ತು 50 ಲಕ್ಷ ರೂ. ನೀಡಿದೆ. ಇದನ್ನೂ ಓದಿ: ಕಿತ್ತೂರು ಪಟ್ಟಣ ಪಂಚಾಯಿತಿ ಬಿಜೆಪಿ ಸದಸ್ಯನ ಕಿಡ್ನ್ಯಾಪ್ – ಕಾಂಗ್ರೆಸ್ ಶಾಸಕನ ಆಪ್ತರ ವಿರುದ್ಧ ದೂರು

    ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮಿತಿಯನ್ನು ಲೋಕಸಭೆ ಚುನಾವಣೆಗೆ 70 ಲಕ್ಷ ರೂ.ನಿಂದ ದಿಂದ 95 ಲಕ್ಷ ರೂ.ಗೆ ತ್ತು ವಿಧಾನಸಭೆ ಚುನಾವಣೆಗೆ 28 ​​ಲಕ್ಷ ರೂ.ನಿಂದ 40 ಲಕ್ಷ ರೂ.ಗೆ ಹೆಚ್ಚಿಸಲಾಗಿತ್ತು. 2024ರ ಲೋಕಸಭಾ ಚುನಾವಣೆಯನ್ನು ಏಳು ಹಂತಗಳಲ್ಲಿ ನಡೆಸಲಾಗಿತ್ತು ಮತ್ತು ಜೂನ್ 4 ರಂದು ಫಲಿತಾಂಶ ಪ್ರಕಟವಾಗಿತ್ತು.