Tag: ಲೋಕಸಭಾ ಚುನಾವಣೆಯ ಫಲಿತಾಂಶ

  • ಲೋಕಸಭಾ ಚುನಾವಣಾ ಫಲಿತಾಂಶ ಹಿನ್ನೆಲೆ – ಆದಿಚುಂಚನಗಿರಿ ಮಠದಲ್ಲಿ ಹೆಚ್‍ಡಿಕೆ ವಿಶೇಷ ಪೂಜೆ

    ಲೋಕಸಭಾ ಚುನಾವಣಾ ಫಲಿತಾಂಶ ಹಿನ್ನೆಲೆ – ಆದಿಚುಂಚನಗಿರಿ ಮಠದಲ್ಲಿ ಹೆಚ್‍ಡಿಕೆ ವಿಶೇಷ ಪೂಜೆ

    ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ (Lok Sabha Election Results 2024) ಇನ್ನೇನೂ ಕೆಲವೇ ಗಂಟೆಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು (H.D Kumaraswamy) ವಿಜಯನಗರದ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ (Adichunchana Giri mutt) ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಮಠದ ಆವರಣದಲ್ಲಿರುವ ಗಂಗಾಧರೇಶ್ವರ ದೇವಾಲಯದಲ್ಲಿ ಡಾ.ನಿರ್ಮಲಾನಂದ ಶ್ರೀಗಳ (Nirmalananda Swamiji) ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ವಿಶೇಷ ಮಂಗಳಾರತಿ ಮಾಡಿಸಿ, ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಆರಂಭಿಕ ಮುನ್ನಡೆಯಲ್ಲಿದ್ದೇವೆ. ಕೊನೆ ಹಂತದವರೆಗೆ ಇದು ಹೀಗೆಯೇ ಇರಲಿದೆ. ದೇಶದಲ್ಲಿ ಎನ್‍ಡಿಎ ಅಭ್ಯರ್ಥಿಗಳು ಜಯಗಳಿಸುವ ವಿಶ್ವಾಸವಿದೆ. ರಾಜ್ಯದಲ್ಲಿ 25ಕ್ಕೂ ಹೆಚ್ಚು ಸೀಟ್‍ಗಳನ್ನು ಎನ್‍ಡಿಎ ಗೆಲ್ಲುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

    ಚುನಾವಣೆಯಲ್ಲಿ ಉತ್ಸಾಹದಿಂದಲೇ ಇದ್ದೇನೆ. ಮಂಡ್ಯ ಕ್ಷೇತ್ರಕ್ಕೆ ಸೇವೆ ಮಾಡಲು ಅವಕಾಶ ಸಿಗುವುದರಲ್ಲಿ ಯಾವ ಅನುಮಾನ ಇಲ್ಲ. ಕ್ಷೇತ್ರದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.

  • ಮೇ 23, 24ರಂದು ಹಾಸನ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

    ಮೇ 23, 24ರಂದು ಹಾಸನ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

    – 2 ದಿನ ಮದ್ಯ ಮಾರಾಟಕ್ಕೆ ಬ್ರೇಕ್

    ಹಾಸನ: ಮೇ 23 ಮತ್ತು 24 ರಂದು ಹಾಸನ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿಗೊಳಿಸಲು ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನ್ ಸಿಂಗ್ ರಾಥೋಡ್ ಹೇಳಿದ್ದಾರೆ.

    ಮುಜಾಗೃತ ಕ್ರಮವಾಗಿ ಹಾಸನ ಜಿಲ್ಲೆಯಾದ್ಯಂತ ಮೆ 23 ಹಾಗೂ 24ರಂದು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮತ ಏಣಿಕೆ ಸಮಯದಲ್ಲಿ ಹಾಗೂ ಫಲಿತಾಂಶ ಪ್ರಕಟವಾದ ಬಳಿಕ ಯಾವುದೇ ಅಹಿತಕರ ಘಟನೆಗಳು ನಡೆಯಬಾರದೆಂದು ಈ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ 129 ಗ್ರಾಮಗಳನ್ನ ಸೂಕ್ಷ್ಮ ಪ್ರದೇಶಗಳನ್ನಾಗಿ ಗುರುತಿಸಲಾಗಿದೆ. ಅಲ್ಲದೆ ಈ 2 ದಿನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ. ಜೊತೆಗೆ ಭದ್ರತೆಗಾಗಿ 1200 ಮಂದಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದು ಅವರು ತಿಳಿಸಿದರು.

    ಹಾಸನ ಡಿಸಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಇಂದು ಮತ ಎಣಿಕೆ ಕೇಂದ್ರದ ಸಿದ್ಧತೆಯನ್ನು ವೀಕ್ಷಣೆ ಮಾಡಿದ್ದಾರೆ. ಹಾಸನದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಈ ಬಾರಿ ಮತ ಎಣಿಕೆ ನಡೆಯಲಿದೆ. ಈಗಾಗಲೇ ಸ್ಟ್ರಾಂಗ್ ರೂಮ್‌ನಲ್ಲಿ ಅಭ್ಯರ್ಥಿಗಳ ಹಣೆಬರಹ ಭದ್ರವಾಗಿದೆ.

    ಅಷ್ಟೇ ಅಲ್ಲದೇ ಹಿಂದೆಂದೂ ಇರದ ನಿರ್ಬಂಧಗಳನ್ನು ಮಾಧ್ಯಮದವರ ಮೇಲೆ ಹೇರಲಾಗಿದೆ. ಮತ ಎಣಿಕೆ ಕೇಂದ್ರಗಳ ಬಳಿ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಹಾಗೆಯೇ ಮತ ಎಣಿಕೆ ಕೇಂದ್ರಗಳಿಗೆ ಅಧಿಕಾರಿಗಳ ಜೊತೆ ಮಾತ್ರ ಮಾಧ್ಯಮದವರಿಗೆ ಹೋಗಲು ಅವಕಾಶ ನೀಡಲಾಗುತ್ತದೆ. ಆದರೆ ಪದೇ ಪದೇ ಮತ ಎಣಿಕೆ ಕೇಂದ್ರಕ್ಕೆ ಮಾಧ್ಯಮ ಪ್ರತಿನಿಧಿಗಳು ಪ್ರವೇಶಿಸುವಂತಿಲ್ಲ ಎಂದು ಅಧಿಕಾರಿಗಳಿಗೆ ಡಿಸಿ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.