Tag: ಲೋಕಸಭಾ ಸ್ಪೀಕರ್

  • ಯಶವಂತ್ ವರ್ಮಾ ನಗದು ವಿವಾದ; ನ್ಯಾಯಾಧೀಶರ ವಿರುದ್ಧ ವಾಗ್ದಂಡನೆ ಪ್ರಸ್ತಾವನೆಗೆ ಲೋಕಸಭೆ ಸ್ಪೀಕರ್ ತ್ರಿಸದಸ್ಯ ಸಮಿತಿ ರಚನೆ

    ಯಶವಂತ್ ವರ್ಮಾ ನಗದು ವಿವಾದ; ನ್ಯಾಯಾಧೀಶರ ವಿರುದ್ಧ ವಾಗ್ದಂಡನೆ ಪ್ರಸ್ತಾವನೆಗೆ ಲೋಕಸಭೆ ಸ್ಪೀಕರ್ ತ್ರಿಸದಸ್ಯ ಸಮಿತಿ ರಚನೆ

    ನವದೆಹಲಿ: ನಗದು ಹಣ ಪತ್ತೆ ವಿವಾದದಲ್ಲಿ ಸಿಲುಕಿರುವ ದೆಹಲಿ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಯಶವಂತ್ ವರ್ಮಾ (Yashwant Varma) ಅವರನ್ನು ಪದಚ್ಯುತಗೊಳಿಸುವ ಪ್ರಸ್ತಾಪವನ್ನು ಪರಿಶೀಲಿಸಲು ಮೂವರು ಸದಸ್ಯರ ಸಮಿತಿಯನ್ನು ರಚಿಸುವುದಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರಕಟಿಸಿದ್ದಾರೆ.

    ನ್ಯಾಯಮೂರ್ತಿ ವರ್ಮಾ ವಿರುದ್ಧದ ಆರೋಪಗಳ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ನ್ಯಾಯಾಧೀಶ ಅರವಿಂದ್ ಕುಮಾರ್, ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮಣೀಂದ್ರ ಮೋಹನ್ ಶ್ರೀವಾಸ್ತವ ಮತ್ತು ನ್ಯಾಯಶಾಸ್ತ್ರಜ್ಞ ಬಿ.ವಿ. ಆಚಾರ್ಯ ಅವರನ್ನು ಒಳಗೊಂಡ ಸಮಿತಿ ಇರಲಿದೆ. ಇದನ್ನೂ ಓದಿ: ಕಂತೆ ಕಂತೆ ಹಣ ಕೇಸ್ – ನ್ಯಾ.ಯಶವಂತ್ ವರ್ಮಾ ಅರ್ಜಿ ವಜಾ

    ವರ್ಮಾ ಅವರ ನಿವಾಸದಲ್ಲಿ ಭಾರಿ ಪ್ರಮಾಣದ ನಗದು ಪತ್ತೆಯಾದ ನಂತರ, ಅವರ ವಿರುದ್ಧದ ದೋಷಾರೋಪಣೆಗೆ 146 ಸಂಸದರು ಬೆಂಬಲಿಸಿದ ನಿರ್ಣಯವನ್ನು ಅಂಗೀಕರಿಸಿದ ನಂತರ ಲೋಕಸಭಾ ಸ್ಪೀಕರ್ ಈ ಘೋಷಣೆ ಮಾಡಿದರು.

    ಮಾ.14 ರ ಸಂಜೆ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಸಂಭವಿಸಿದ ಬೆಂಕಿಯ ಪರಿಣಾಮವಾಗಿ ಅಗ್ನಿಶಾಮಕ ದಳದವರು ಲೆಕ್ಕಕ್ಕೆ ಸಿಗದ ದೊಡ್ಡ ಪ್ರಮಾಣದ ಹಣವನ್ನು ಪತ್ತೆಹಚ್ಚಿದರು. ನಂತರ ಬಂದ ವೀಡಿಯೊದಲ್ಲಿ ಬೆಂಕಿಯಲ್ಲಿ ಹಣದ ಬಂಡಲ್‌ಗಳು ಸುಟ್ಟುಹೋಗುತ್ತಿರುವುದನ್ನು ತೋರಿಸಲಾಗಿದೆ. ಇದನ್ನೂ ಓದಿ: ನ್ಯಾ. ವರ್ಮಾ ನಡೆ ವಿಶ್ವಾಸ ಮೂಡಿಸುವುದಿಲ್ಲ; ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

    ಈ ಘಟನೆಯು ನ್ಯಾಯಮೂರ್ತಿ ವರ್ಮಾ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಹೊರಿಸಿತು. ಆದರೆ, ಅವರು ಆರೋಪಗಳನ್ನು ನಿರಾಕರಿಸಿದರು. ಈ ಆರೋಪಗಳನ್ನು ತಮ್ಮ ಮೇಲೆ ಹೊರಿಸಲು ನಡೆಸಲಾದ ಪಿತೂರಿ ಎಂದು ಬಣ್ಣಿಸಿದರು. ಇದಕ್ಕೆ ಪ್ರತಿಕ್ರಿಯೆಯಾಗಿ, ಭಾರತದ ಮುಖ್ಯ ನ್ಯಾಯಾಧೀಶರು ಆಂತರಿಕ ತನಿಖೆಗೆ ಆದೇಶಿಸಿದರು. ಮಾ.22 ರಂದು ಈ ವಿಷಯದ ತನಿಖೆಗಾಗಿ ಮೂವರು ಸದಸ್ಯರ ಸಮಿತಿಯನ್ನು ರಚಿಸಿದರು.

    ಆರೋಪಗಳ ನಂತರ, ನ್ಯಾಯಮೂರ್ತಿ ವರ್ಮಾ ಅವರನ್ನು ಅವರ ಮಾತೃ ನ್ಯಾಯಾಲಯವಾದ ಅಲಹಾಬಾದ್ ಹೈಕೋರ್ಟ್‌ಗೆ ವಾಪಸ್ ಕಳುಹಿಸಲಾಯಿತು. ಅಲ್ಲಿ ಅವರು ಇತ್ತೀಚೆಗೆ ಪ್ರಮಾಣ ವಚನ ಸ್ವೀಕರಿಸಿದರು. ಆದಾಗ್ಯೂ, ಸಿಜೆಐ ನಿರ್ದೇಶನಗಳ ಮೇರೆಗೆ ಅವರ ನ್ಯಾಯಾಂಗ ಜವಾಬ್ದಾರಿಗಳನ್ನು ಹಿಂತೆಗೆದುಕೊಳ್ಳಲಾಯಿತು.

  • ಸ್ಪೀಕರ್ ಆಯ್ಕೆ ಕಸರತ್ತು, ಮೋದಿ ನಿರ್ಧಾರಕ್ಕೆ ಎನ್‌ಡಿಎ ನಾಯಕರ ಬೆಂಬಲ?

    ಸ್ಪೀಕರ್ ಆಯ್ಕೆ ಕಸರತ್ತು, ಮೋದಿ ನಿರ್ಧಾರಕ್ಕೆ ಎನ್‌ಡಿಎ ನಾಯಕರ ಬೆಂಬಲ?

    ನವದೆಹಲಿ: ಜೂನ್ 24 ರಿಂದ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗುತ್ತಿದ್ದು, ಈ ನಡುವೆ ಸ್ಪೀಕರ್ (Speaker) ಆಯ್ಕೆ ಕಸರತ್ತು ಜೋರಾಗಿದೆ. ಸ್ಪೀಕರ್ ಆಯ್ಕೆಗೆ ಸಂಬಂಧಿಸಿದಂತೆ ಬಿಜೆಪಿ ಹಿರಿಯ ನಾಯಕರು ಮೈತ್ರಿ ನಾಯಕರ ಜೊತೆಗೆ ಮಾತುಕತೆ ನಡೆಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನಿರ್ಧಾರಕ್ಕೆ ಬದ್ಧ ಎಂದು ಎನ್‌ಡಿಎ (NDA) ನಾಯಕರು ತಿಳಿಸಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ.

    ಸ್ಪೀಕರ್ ಹುದ್ದೆಯ ಅಭ್ಯರ್ಥಿ ಆಯ್ಕೆಗಾಗಿ ಸಲಹೆಗಳನ್ನು ಪಡೆಯಲು ಬಿಜೆಪಿ ಮಿತ್ರಪಕ್ಷಗಳ ಮಾತುಕತೆ ನಡೆಸಿತು. ಅದಾಗ್ಯೂ, ಹೆಚ್ಚಿನ ಮಿತ್ರಪಕ್ಷಗಳು ನಿರ್ದಿಷ್ಟ ವ್ಯಕ್ತಿ ಅಥವಾ ಹೆಸರನ್ನು ಆಯ್ಕೆ ಮಾಡಿಲ್ಲ. ನರೇಂದ್ರ ಮೋದಿ ಅವರ ನಿರ್ಧಾರಕ್ಕೆ ಎನ್‌ಡಿಎ ನಾಯಕರು ಸಮ್ಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಹಿರಿಯ ಸಂಸದರನ್ನು ಒಳಗೊಂಡಿರುವ ಕೆಲವು ಮಿತ್ರಪಕ್ಷಗಳು ಒಮ್ಮತವನ್ನು ಪಡೆಯಬಹುದಾದ ಅಭ್ಯರ್ಥಿಯನ್ನು ಸ್ಪೀಕರ್ ಹುದ್ದೆಗೆ ಕಣಕ್ಕಿಳಿಸಲು ಬಿಜೆಪಿಗೆ ಮನವಿ ಮಾಡಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ರೇಪ್‌ ಮಾಡಲು ಸಹಕರಿಸದ ಚಿಕ್ಕಮ್ಮನನ್ನೇ ಕೊಲೆಗೈದ ಬಾಲಕ!

    ಉಪಸಭಾಪತಿ ಸ್ಥಾನವನ್ನು ಮೈತ್ರಿಕೂಟದ ಪಾಲುದಾರರೊಬ್ಬರಿಗೆ ನೀಡಲು ಉತ್ಸುಕರಾಗಿದ್ದೇವೆ ಎಂದು ಬಿಜೆಪಿ ವರಿಷ್ಠರು ಮೈತ್ರಿ ಪಾಲುದಾರರಿಗೆ ತಿಳಿಸಿದ್ದಾರೆ. ಆದರೆ ಪ್ರತಿಪಕ್ಷಗಳು ಈ ಹುದ್ದೆ ಮೇಲೆ ಕಣ್ಣಿಟ್ಟಿದ್ದು, ಹಕ್ಕು ಪ್ರತಿಪಾದಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಸಂಸತ್ತಿನ ವಿಶೇಷ ಅಧಿವೇಶನವು ಜೂನ್ 24 ರಂದು ಪ್ರಾರಂಭವಾಗಲಿದೆ. ಈ ಅಧಿವೇಶನವು ಪ್ರಾಥಮಿಕವಾಗಿ ಲೋಕಸಭೆಯಲ್ಲಿ ಸಂಸತ್ತಿನ ಎಲ್ಲಾ ಚುನಾಯಿತ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಲಾಗುವುದು. ಜೂನ್ 26 ರಂದು ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಯಲಿದೆ. ಪ್ರಸ್ತುತ ಓಂ ಬಿರ್ಲಾ ಅವರು ಕಳೆದ ಐದು ವರ್ಷಗಳಿಂದ ಲೋಕಸಭಾ ಸ್ಪೀಕರ್ ಕಚೇರಿಯಲ್ಲಿದ್ದಾರೆ. ಇದನ್ನೂ ಓದಿ: ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಅಶ್ವಿನಿ ವೈಷ್ಣವ್ ಜೊತೆಗೆ ಹೆಚ್‌ಡಿಕೆ ಚರ್ಚೆ

  • ನಮ್ಮ ಸಿಂಹ ರಾಹುಲ್‌ ಗಾಂಧಿ ಗೆದ್ದಿದ್ದಾರೆ – ಸಂಸತ್‌ ಸದಸ್ಯತ್ವ ಅನರ್ಹತೆ ವಾಪಸ್‌ ಬೆನ್ನಲ್ಲೇ ಸಿಹಿ ಹಂಚಿ INDIA ಒಕ್ಕೂಟ ಸಂಭ್ರಮ

    ನಮ್ಮ ಸಿಂಹ ರಾಹುಲ್‌ ಗಾಂಧಿ ಗೆದ್ದಿದ್ದಾರೆ – ಸಂಸತ್‌ ಸದಸ್ಯತ್ವ ಅನರ್ಹತೆ ವಾಪಸ್‌ ಬೆನ್ನಲ್ಲೇ ಸಿಹಿ ಹಂಚಿ INDIA ಒಕ್ಕೂಟ ಸಂಭ್ರಮ

    ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರ ಸಂಸತ್‌ ಸ್ಥಾನದ ಅನರ್ಹತೆಯನ್ನ ಲೋಕಸಭೆಯ ಸ್ಪೀಕರ್‌ ಓಂ ಪ್ರಕಾಶ್‌ ಬಿರ್ಲಾ ವಾಪಸ್‌ ಅವರಿಂದು ವಾಪಸ್‌ ಪಡೆದಿದ್ದಾರೆ. ನಾಲ್ಕು ತಿಂಗಳ ಬಳಿಕ ಇಂದು ಸಂಸತ್‌ ಕಲಾಪಕ್ಕೆ ರಾಹುಲ್‌ ಗಾಂಧಿ ಹಾಜರಾಗಲಿದ್ದಾರೆ. ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು INDIA ಒಕ್ಕೂಟದ ನಾಯಕರಿಗೆ ಸಿಹಿ ತಿನ್ನಿಸುವ ಮೂಲಕ ಸಂಭ್ರಮ ಹಂಚಿಕೊಂಡಿದ್ದಾರೆ.

    ಸೋಮವಾರ (ಆ.7) ಕಲಾಪ ಆರಂಭಗೊಳ್ಳುವುದಕ್ಕು ಮುನ್ನ ಪಕ್ಷದ ಕೊಠಡಿಯಲ್ಲಿ ನಡೆದ ಸರಳ ಸಭೆಯಲ್ಲಿ ಸಹಿ ಹಂಚಿ ಸಂಭ್ರಮಿಸಿದ್ದಾರೆ. ಈ ಕುರಿತು ಟ್ವೀಟ್‌ನಲ್ಲಿ ಪ್ರತಿಕ್ರಿಯಿಸಿರುವ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ಗಾಂಧಿ ಅವರನ್ನು ಸಂಸದರಾಗಿ ಮರುಸ್ಥಾಪಿಸುವ ನಿರ್ಧಾರ ಸ್ವಾಗತಾರ್ಹ. ಇನ್ನಾದರೂ ಬಿಜೆಪಿ (BJP) ಮತ್ತು ಮೋದಿ (Modi) ಸರ್ಕಾರ ತಮ್ಮ ಉಳಿದ ಅವಧಿಯಲ್ಲಿ ವಿಪಕ್ಷ ನಾಯಕರನ್ನ ಗುರಿಯಾಗಿಸುವ ಮೂಲಕ ಪ್ರಜಾಪ್ರಭುತ್ವ ಅವಮಾನಿಸುವ ಬದಲು ನಿಜವಾದ ಆಡಳಿತದ ಮೇಲೆ ಕೇಂದ್ರೀಕರಿಸಬೇಕು ಎಂದು ತಿರುಗೇಟು ನೀಡಿದ್ದಾರೆ.

    ಮತ್ತೊಬ್ಬ ಕಾಂಗ್ರೆಸ್‌ ನಾಯಕ ಪ್ರಮೋದ್‌ ತಿವಾರಿ, ಸತ್ಯಕ್ಕೆ ಜಯ ಸಿಕ್ಕಿದೆ. ಇದರಿಂದ ಭಾರತವೇ ಗೆದ್ದಂತಾಗಿದೆ. ನಮ್ಮ ಸಿಂಹ ರಾಹುಲ್‌ ಗಾಂಧಿ ಗೆದ್ದಿದ್ದು, ಮೋದಿ ಜೀ ಅವರಿಗೆ ಸೋಲು ಆರಂಭವಾಗಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಒಳನುಸುಳಲು ಪ್ರಯತ್ನಿಸುತ್ತಿದ್ದ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭದ್ರತಾ ಪಡೆ

    ಅನರ್ಹತೆ ವಾಪಸ್ ಪಡೆದ ಲೋಕಸಭೆ ಸ್ಪೀಕರ್:
    ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಸಂಸತ್ ಸ್ಥಾನದ ಅನರ್ಹತೆಯನ್ನ ಲೋಕಸಭೆಯ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ವಾಪಸ್ ಪಡೆದಿದ್ದಾರೆ. ಈ ಮೂಲಕ ರಾಹುಲ್ ಗಾಂಧಿ ಅವರ ಸಂಸದೀಯ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ. ಶುಕ್ರವಾರ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ಸ್ಪೀಕರ್ ಈ ನಿರ್ಧಾರ ಕೈಗೊಂಡಿದ್ದಾರೆ. ಇದನ್ನೂ ಓದಿ: ಭಾರತ ಮಾತೆಯನ್ನು ವಿರೋಧಿಸುವವರ ಪ್ರಾಣ ತೆಗೆಯಲು ನಾವು ಹಿಂಜರಿಯಲ್ಲ: ಬಿಜೆಪಿ ನಾಯಕ

    ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಧಿಸಿದ್ದ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಆದೇಶದ ವಿರುದ್ಧ ಜು.15 ರಂದು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ, ಪಿ.ಎಸ್ ನರಸಿಂಹ ಮತ್ತು ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಪ್ರಕರಣದ ವಿಚಾರಣೆ ನಡೆಸಿತು. ಈ ವೇಳೆ ಸೂರತ್ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿತ್ತು. ಸುಪ್ರೀಂ ಆದೇಶ ಬೆನ್ನಲ್ಲೇ ಸೋಮವಾರ ಲೋಕಸಭೆಯ ಸ್ಪೀಕರ್ ಸದಸ್ಯತ್ವವನ್ನ ಮರಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಲೋಕಸಭೆ ಅಧಿವೇಶನಕ್ಕೆ ಹಾಜರಾಗಲಿದ್ದಾರೆ.

    ರಾಹುಲ್ ಅವರು 2019ರ ಏಪ್ರಿಲ್ 13 ರಂದು ಕೋಲಾರದಲ್ಲಿ ನಡೆದ ಲೋಕಸಭಾ ಚುಣಾವಣಾ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ್ದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿದೆ ಎಂದು ಪ್ರಶ್ನಿಸಿದ್ದರು. ಈ ಬಗ್ಗೆ ಗುಜರಾತ್ ಶಾಸಕ ಪೂರ್ಣೇಶ್ ಮೋದಿ ಅವರು, ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಪ್ರಕರಣದಲ್ಲಿ ರಾಹುಲ್ ಅವರು ಎರಡು ವರ್ಷ ಶಿಕ್ಷೆಗೆ ಗುರಿಯಾಗಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Breaking: ಅನರ್ಹತೆ ವಾಪಸ್ ಪಡೆದ ಲೋಕಸಭೆ ಸ್ಪೀಕರ್‌ – ಇಂದು ಸಂಸತ್ ಕಲಾಪಕ್ಕೆ ರಾಹುಲ್ ಗಾಂಧಿ

    Breaking: ಅನರ್ಹತೆ ವಾಪಸ್ ಪಡೆದ ಲೋಕಸಭೆ ಸ್ಪೀಕರ್‌ – ಇಂದು ಸಂಸತ್ ಕಲಾಪಕ್ಕೆ ರಾಹುಲ್ ಗಾಂಧಿ

    ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ (Rahul Gandhi) ಸಂಸತ್‌ ಸ್ಥಾನದ ಅನರ್ಹತೆಯನ್ನ ಲೋಕಸಭೆಯ ಸ್ಪೀಕರ್‌ (Lok Sabha Speaker) ಓಂ ಪ್ರಕಾಶ್‌ ಬಿರ್ಲಾ ವಾಪಸ್‌ ಪಡೆದಿದ್ದಾರೆ. ಈ ಮೂಲಕ ರಾಹುಲ್‌ ಗಾಂಧಿ ಅವರ ಸಂಸದೀಯ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ. ಶುಕ್ರವಾರ ಸುಪ್ರೀಂ ಕೋರ್ಟ್‌ (Supreme Court) ನೀಡಿರುವ ಆದೇಶದ ಹಿನ್ನೆಲೆಯಲ್ಲಿ ಸ್ಪೀಕರ್‌ ಈ ನಿರ್ಧಾರ ಕೈಗೊಂಡಿದ್ದಾರೆ.

    ಮಾನನಷ್ಟ ಪ್ರಕರಣದಲ್ಲಿ ಸೂರತ್ ಜಿಲ್ಲಾ ನ್ಯಾಯಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಬಳಿಕ ಜನಪ್ರತಿನಿಧಿ ಕಾಯ್ದೆಯಡಿ ಕಳೆದ ಮಾರ್ಚ್ ನಲ್ಲಿ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ (Lok Sabha Membership) ಅನರ್ಹಗೊಳಿಸಲಾಗಿತ್ತು. ಇದನ್ನೂ ಓದಿ: ಭಾರತ ಮಾತೆಯನ್ನು ವಿರೋಧಿಸುವವರ ಪ್ರಾಣ ತೆಗೆಯಲು ನಾವು ಹಿಂಜರಿಯಲ್ಲ: ಬಿಜೆಪಿ ನಾಯಕ

    ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‍ನ ಸೂರತ್ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಧಿಸಿದ್ದ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು. ಆದೇಶದ ವಿರುದ್ಧ ಜು.15 ರಂದು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ, ಪಿ.ಎಸ್ ನರಸಿಂಹ ಮತ್ತು ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಪ್ರಕರಣದ ವಿಚಾರಣೆ ನಡೆಸಿತು. ಈ ವೇಳೆ ಸೂರತ್ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿತ್ತು.

    ಸುಪ್ರೀಂ ಆದೇಶ ಬೆನ್ನಲ್ಲೇ ಸೋಮವಾರ ಲೋಕಸಭೆಯ ಸ್ಪೀಕರ್‌ ಸದಸ್ಯತ್ವವನ್ನ ಮರಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಲೋಕಸಭೆ ಅಧಿವೇಶನಕ್ಕೆ ಹಾಜರಾಗಬಹುದಾಗಿದೆ. ಇದನ್ನೂ ಓದಿ: ಒಳನುಸುಳಲು ಪ್ರಯತ್ನಿಸುತ್ತಿದ್ದ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭದ್ರತಾ ಪಡೆ

    ರಾಹುಲ್ ಅವರು 2019ರ ಏಪ್ರಿಲ್ 13 ರಂದು ಕೋಲಾರದಲ್ಲಿ ನಡೆದ ಲೋಕಸಭಾ ಚುಣಾವಣಾ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ್ದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿದೆ ಎಂದು ಪ್ರಶ್ನಿಸಿದ್ದರು. ಈ ಬಗ್ಗೆ ಗುಜರಾತ್ ಶಾಸಕ ಪೂರ್ಣೇಶ್ ಮೋದಿ ಅವರು, ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಪ್ರಕರಣದಲ್ಲಿ ರಾಹುಲ್ ಅವರು ಎರಡು ವರ್ಷ ಶಿಕ್ಷೆಗೆ ಗುರಿಯಾಗಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಹುಲ್‍ಗೆ ಇಂದು ಮರಳಿ ಸಿಗುತ್ತಾ ಸಂಸತ್ ಸದಸ್ಯತ್ವ?

    ರಾಹುಲ್‍ಗೆ ಇಂದು ಮರಳಿ ಸಿಗುತ್ತಾ ಸಂಸತ್ ಸದಸ್ಯತ್ವ?

    ನವದೆಹಲಿ: ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿಗೆ (Rahul Gandhi) ವಿಧಿಸಿರುವ 2 ವರ್ಷ ಜೈಲು ಶಿಕ್ಷೆಗೆ ಸುಪ್ರೀಂಕೋರ್ಟ್ (Supreme Court) ತಡೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಂಸದ ಸ್ಥಾನ ಅನರ್ಹತೆಯನ್ನು ತೆರವು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

    ಈ ಬಗ್ಗೆ ಇಂದು ಲೋಕಸಭೆ ಸ್ಪೀಕರ್ (Loksabha Speaker) ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ರಾಹುಲ್ ಗಾಂಧಿಗೆ ಸಂಸದ ಸ್ಥಾನ ಮರಳಿಸುವ ಕುರಿತು ಸ್ಪೀಕರ್ ಓಂ ಬಿರ್ಲಾ ಅವರು ಇಂದು ಅಧಿಕಾರಿಗಳೊಂದಿಗೆ ಸಮಾಲೋಚಿಸಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಮಾತ್ರವಲ್ಲದೇ ರಾಹುಲ್ ಗಾಂಧಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಇದ್ದ ತಡೆಯ ಆತಂಕ ಕೂಡ ನಿವಾರಣೆಯಾಗಿದೆ.

    ಏನಿದು ಪ್ರಕರಣ..?: ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‍ನ ಸೂರತ್ ಮ್ಯಾಜಿಸ್ಟ್ರೇಟ್ ಕೋರ್ಟ್ (Surat Magistrate Court) ವಿಧಿಸಿರುವ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು. ಆದೇಶದ ವಿರುದ್ಧ ಜು.15 ರಂದು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಪಿಎಸ್ ನರಸಿಂಹ ಮತ್ತು ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿತು. ಈ ವೇಳೆ ಸೂರತ್ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿದೆ. ಇದನ್ನೂ ಓದಿ: ಏನೇ ಬಂದರೂ ನನ್ನ ಕರ್ತವ್ಯ ಹಾಗೆಯೇ ಇರಲಿದೆ: ಸುಪ್ರೀಂ ತೀರ್ಪಿಗೆ ರಾಗಾ ಪ್ರತಿಕ್ರಿಯೆ

    ರಾಹುಲ್ ಅವರು 2019ರ ಏಪ್ರಿಲ್ 13 ರಂದು ಕೋಲಾರದಲ್ಲಿ ನಡೆದ ಲೋಕಸಭಾ ಚುಣಾವಣಾ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ್ದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿದೆ ಎಂದು ಪ್ರಶ್ನಿಸಿದ್ದರು. ಈ ಬಗ್ಗೆ ಗುಜರಾತ್ ಶಾಸಕ ಪೂರ್ಣೇಶ್ ಮೋದಿ ಅವರು, ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಪ್ರಕರಣದಲ್ಲಿ ರಾಹುಲ್ ಅವರು ಎರಡು ವರ್ಷ ಶಿಕ್ಷೆಗೆ ಗುರಿಯಾಗಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡೋಂಟ್ ಟಚ್ ಮೈ ಸ್ಟಾಫ್: ವಿರೋಧ ಪಕ್ಷದ ಸದಸ್ಯರಿಗೆ ಸ್ಪೀಕರ್ ಓಂ ಬಿರ್ಲಾ ಎಚ್ಚರಿಕೆ

    ಡೋಂಟ್ ಟಚ್ ಮೈ ಸ್ಟಾಫ್: ವಿರೋಧ ಪಕ್ಷದ ಸದಸ್ಯರಿಗೆ ಸ್ಪೀಕರ್ ಓಂ ಬಿರ್ಲಾ ಎಚ್ಚರಿಕೆ

    ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ವಿರೋಧ ಪಕ್ಷದ ಸದಸ್ಯರಿಗೆ ಡೋಂಟ್ ಟಚ್ ಮೈ ಸ್ಟಾಫ್ ಎಂದು ಗುಡುಗಿದ ಪ್ರಸಂಗ ಶುಕ್ರವಾರ ಅಧಿವೇಶನದಲ್ಲಿ ನಡೆದಿದೆ.

    ಪ್ರಶ್ನೋತ್ತರ ವೇಳೆ ಕಾಂಗ್ರೆಸ್, ಡಿಎಂಕೆ, ಟಿಎಂಸಿ ನಾಯಕರುಗಳು ಕರ್ನಾಟಕದ ರಾಜಕೀಯ ಬಿಕ್ಕಟ್ಟಿನ ವಿಚಾರವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬಳಿಕ ಸದನದ ಬಾವಿಗೆ ಇಳಿದು ಪ್ರತಿಭಟನೆ ಆರಂಭಿಸಿದರು. ಇದಕ್ಕೆ ಆಸ್ಪದ ನೀಡದ ಓಂ ಬಿರ್ಲಾ ಅವರು, ನಿಮ್ಮ ಸ್ಥಾನಗಳಿಗೆ ಹೋಗಿ ಕುಳಿತುಕೊಳ್ಳಿ ಎಂದು ಪ್ರತಿಭಟನಾನಿರತ ಸದಸ್ಯರಿಗೆ ಸೂಚನೆ ನೀಡಿದರು. ಆದರೆ ಪ್ರತಿಪಕ್ಷದ ಸದಸ್ಯರು ನಮಗೆ ನ್ಯಾಯ ಬೇಕು, ತಾನ್ ಶಾಹಿ ನಹಿ ಚಲೇಗಿ ಎಂದು ಘೋಷಣೆ ಕೂಗಲು ಆರಂಭಿಸಿದರು.

    ಪ್ರತಿಪಕ್ಷದ ಸದಸ್ಯರ ಘೋಷಣೆ ಜೋರಾಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ ಸ್ಪೀಕರ್, ಸದನದಲ್ಲಿ ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ಎತ್ತಬೇಡಿ. ಇದು ಕರ್ನಾಟಕಕ್ಕೆ ಸಂಬಂಧಿಸಿದ ವಿಚಾರವಾಗಿದೆ. ಅದರಲ್ಲೂ ಪ್ರಮುಖವಾಗಿ ಸಂವಿಧಾನಿಕ ಹುದ್ದೆಗೆ ಸಂಬಂಧಪಟ್ಟದ್ದಾಗಿದೆ ಎಂದು ಹೇಳಿದರು.

    ಪ್ರತಿಪಕ್ಷ ನಾಯಕರ ಪ್ರತಿಭಟನೆ ಮಾತ್ರ ಮುಂದುವರಿದಿತ್ತು. ಸ್ವಲ್ಪ ಸಮಯದ ನಂತರ ಸ್ಪೀಕರ್ ಓಂ ಬಿರ್ಲಾ ಅವರು, ಪ್ರಶ್ನೋತ್ತರ ಅವಧಿಯ ಚರ್ಚೆ ನಡೆಸಲು ಅವಕಾಶ ಮಾಡಿಕೊಡಿ ಎಂದು ಒತ್ತಾಯಿಸಿದರು.

    ಬಳಿಕ ಮಾತನಾಡಿದ ಓಂ ಬಿರ್ಲಾ ಅವರು, ಕರ್ನಾಟಕ ರಾಜಕೀಯ ಬೆಳವಣಿಗೆ ವಿಚಾರವಾಗಿ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಚರ್ಚೆ ಮಾಡಲು ಈ ಹಿಂದಿನ ಎರಡು ಬಾರಿ ಅವಕಾಶ ನೀಡಿದ್ದೆ ಎಂದು ಪ್ರಸ್ತಾಪಿಸಿದರು. ಇದರಿಂದಾಗಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ವಿರೋಧ ಪಕ್ಷದ ಸದಸ್ಯರು ತಮ್ಮ ಆಸನದ ಕಡೆಗೆ ಮರಳಿದರು.