Tag: ಲೋಕಸಭೆ ಚುನಾವಣೆ

  • ಲಫಂಗರು, ಮೂರು ಬಿಟ್ಟವರು ರಾಜಕಾರಣ ಮಾಡಬೇಕು: ರಾಯರೆಡ್ಡಿ ಬೇಸರ

    ಲಫಂಗರು, ಮೂರು ಬಿಟ್ಟವರು ರಾಜಕಾರಣ ಮಾಡಬೇಕು: ರಾಯರೆಡ್ಡಿ ಬೇಸರ

    ಕೊಪ್ಪಳ: ರಾಜಕೀಯ ವ್ಯವಸ್ಥೆ ಗಲೀಜು ಆಗಿದೆ. ಮಾನ ಮರ್ಯಾದೆ ಇದ್ರೆ ರಾಜಕಾರಣ ಮಾಡಬಾರದು, ಲಫಂಗರು, ಮೂರು ಬಿಟ್ಟವರು ರಾಜಕಾರಣ ಮಾಡಬೇಕು ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಬೇಸರದ ನುಡಿಗಳನ್ನು ಆಡಿದ್ದಾರೆ.

    ಯಲಬುರ್ಗಾ ತಾಲೂಕಿನ ಚಿಕ್ಕವಂಕಲಕೂಟದಲ್ಲಿ ದೇವಸ್ಥಾನ ಒಂದಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರಾಯರೆಡ್ಡಿ ಮಾಧ್ಯಮ ಮುಂದೆ ರಾಜಕೀಯದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಲಫಂಗರು, ಮೂರು ಬಿಟ್ಟವರು ರಾಜಕಾರಣ ಮಾಡಬೇಕು. ಎಲ್ಲಾ ಪಕ್ಷದಲ್ಲಿ ನೈತಿಕತೆ ಇಲ್ಲ. ರಾಜಕೀಯ ಪಕ್ಷದಲ್ಲಿ ಅಷ್ಟೇ ಅಲ್ಲ, ಎಲ್ಲಾ ಕಡೆ ಅನೈತಿಕತೆ ನಡೆದಿದೆ. ಜನರೇ ರಾಜಕೀಯವನ್ನು ಸುಧಾರಣೆ ಮಾಡಬೇಕು ಎಂದು ಹೇಳಿದರು.

    ಲೋಕಸಭೆ ಚುನಾವಣೆಯ ಸೀಟು ಹಂಚಿಕೆ ವಿಚಾರದಲ್ಲಿ ಸಿಎಂ ಬೆಗ್ಗರ್ಸ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಸಿದ ರಾಯರೆಡ್ಡಿ ಅವರು, ಯಾರು ಸಹ ಆ ರೀತಿ ಮಾತನಾಡಬಾರದು. ಸಿಎಂ ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಹೀಗಾಗಿ ಅವರು ಆ ರೀತಿ ಮಾತನಾಡಬಾರದು ಎಂದರು.

    ನಾನು ಲೋಕಸಭಾ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದ್ದೇನೆ. ನಾನು ಟಿಕೆಟ್ ಗಾಗಿ ಅರ್ಜಿ ಹಾಕಿಲ್ಲ. ಕೆಲವರು ನಾನು ಸ್ಪರ್ಧೆ ಮಾಡುವಂತೆ ಒತ್ತಾಯ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆ ಎನ್ನುವ ಗಾಸಿಪ್‍ಗೆ ತೆರೆ ಎಳೆದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಹುಲ್ ಗಾಂಧಿಯೇ ದೇಶದ ಮುಂದಿನ ಪ್ರಧಾನಿ: ಸಿದ್ದರಾಮಯ್ಯ

    ರಾಹುಲ್ ಗಾಂಧಿಯೇ ದೇಶದ ಮುಂದಿನ ಪ್ರಧಾನಿ: ಸಿದ್ದರಾಮಯ್ಯ

    ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರು ಜನತೆಗೆ ನೀಡಿದ ಭರವಸೆ ಈಡೇರಿಸಿಲ್ಲ. ಆದರಿಂದ ರಾಹುಲ್ ಗಾಂಧಿ ಅವರೇ ದೇಶದ ಮುಂದಿನ ಪ್ರಧಾನಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಭವಿಷ್ಯ ನುಡಿದಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೋದಿ ಸರ್ಕಾರದ ವೈಫಲ್ಯಗಳಿಂದಾಗಿ ನಾನು ಅವರು ಮತ್ತೊಮ್ಮೆ ಪ್ರಧಾನಿ ಆಗುವುದಿಲ್ಲ ಎಂದಿದ್ದೇನೆ. ಜನತೆಗೆ ನೀಡಿದ ಭರವಸೆಯನ್ನು ಅವರು ಈಡೇರಿಸಿಲ್ಲ. ಅಲ್ಲದೆ ರಾಹುಲ್ ಗಾಂಧಿ ನಮ್ಮ ಪಕ್ಷದ ಪ್ರಧಾನಿ ಅಭ್ಯರ್ಥಿ, ಅವರೇ ಈ ದೇಶದ ಮುಂದಿನ ಪ್ರಧಾನಿ ಎಂದರು.

    ಲೋಕಸಭಾ ಚುನಾವಣಾ ತಯಾರಿ ನಡೆಯುತ್ತಿದೆ. ಜೆಡಿಎಸ್- ಕಾಂಗ್ರೆಸ್ ಸ್ಥಾನ ಹಂಚಿಕೆ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ. ಲೋಕಸಭಾ ಚುನಾವಣಾ ಪ್ರಚಾರಕ್ಕೆ ಪ್ರಿಯಾಂಕಾ ಗಾಂಧಿ ಅವರನ್ನ ಕರೆಸಬೇಕೆಂಬ ಬೇಡಿಕೆ ಇದೆ. ಅವರು ಉತ್ತರ ಪ್ರದೇಶದತ್ತ ಹೆಚ್ಚು ಗಮನ ಹರಿಸಿದ್ದಾರೆ. ಅವರಿಗೆ ಸಮಯ ಇದ್ದರೆ ಕರ್ನಾಟಕಕ್ಕೂ ಕರೆಸುತ್ತೇವೆ. ಸುಮಲತಾ ಅವರು ನಿನ್ನೆ ನನ್ನನ್ನು ಭೇಟಿಯಾಗಿದ್ದರು. ಅಲ್ಲದೆ ಅವರು ಮಂಡ್ಯ ಪ್ರವಾಸ ಮಾಡುವುದಾಗಿ ಹೇಳಿದ್ದಾರೆ. ಚುನಾವಣಾ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ತಿಳಿಸಿದ್ದಾರೆ.

    ಮೈಸೂರಿನಿಂದ ದೇವೇಗೌಡರ ಸ್ಪರ್ಧೆ ವಿಚಾರ ನನಗೆ ಗೊತ್ತಿಲ್ಲ. ಮೈತ್ರಿ ಸರ್ಕಾರದಲ್ಲಿ ಯಾರು ಬೆಗ್ಗರ್ಸ್ ಅಲ್ಲ. ಸಮನ್ವಯತೆಯಿಂದ ಕೂತು ಸ್ಥಾನ ಹಂಚಿಕೆ ಮಾಡಿಕೊಳ್ಳುತ್ತೇವೆ. ಸ್ಥಾನ ಹಂಚಿಕೆ ಬಗ್ಗೆ ರಾಹುಲ್ ಗಾಂಧಿ ಜೊತೆ ಮಾತನಾಡುವುದಾಗಿ ಜೆಡಿಎಸ್ ನಾಯಕರು ಹೇಳಿದ್ದಾರೆ. ನಾನು ರೇವಣ್ಣ ಅವರ ಹೇಳಿಕೆಯನ್ನು ಗಮನಿಸಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಲೋಕಸಭಾ ಚುನಾವಣೆ ಅಖಾಡಕ್ಕೆ ಅಮಿತ್ ಶಾ ಅದ್ಧೂರಿ ಎಂಟ್ರಿ

    ಲೋಕಸಭಾ ಚುನಾವಣೆ ಅಖಾಡಕ್ಕೆ ಅಮಿತ್ ಶಾ ಅದ್ಧೂರಿ ಎಂಟ್ರಿ

    ಬೆಂಗಳೂರು: ಲೋಕಸಭಾ ಚುನಾವಣೆಯ ಅಖಾಡಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಅದ್ಧೂರಿ ಎಂಟ್ರಿ ಕೊಡುತ್ತಿದ್ದಾರೆ.

    ಅಮಿತ್ ಶಾ ಆಂಧ್ರ ಪ್ರದೇಶ, ಕರ್ನಾಟಕ ಹಾಗು ತಮಿಳುನಾಡಿಗೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದು, ಇಂದು ಬೆಂಗಳೂರಿಗೆ ಬರುತ್ತಿದ್ದಾರೆ. ಚಾಣಾಕ್ಯನ ಭೇಟಿಯಿಂದಾಗಿ ರಾಜ್ಯ ಬಿಜೆಪಿ ಪಾಳಯದಲ್ಲಿನ ರಾಜಕೀಯ ಚಟುವಟಿಕೆ ಗರಿಗೆದರಿದೆ.

    ದೇವನಹಳ್ಳಿ, ಬೆಂಗಳೂರು ಹೊರವಲಯದ ರೆಸಾರ್ಟ್‍ನಲ್ಲಿ ಶಕ್ತಿಕೇಂದ್ರದ ಸಮಾವೇಶ, ಶಾಸಕರು, ಸಂಸದರ ಜೊತೆ ಸಭೆ, ಪ್ರಭಾರಿಗಳ ಜೊತೆ ಸಭೆಯಲ್ಲಿ ಭಾಗವಹಿಸಲಿದ್ದು, ಇಡೀ ದಿನ ಕ್ಲಾಸ್ ತೆಗೆದುಕೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

    ಈ ನಡುವೆ ಇಂದು ರಾತ್ರಿಯೇ ಬೆಂಗಳೂರಿನ ಹೊರ ವಲಯದ ರೆಸಾರ್ಟ್‍ನಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಆಪರೇಷನ್ ಡೀಲ್ ಆಡಿಯೋ ಆರೋಪದಿಂದಾದ ಡ್ಯಾಮೇಜ್ ಕಂಟ್ರೋಲ್ ಮಾಡುವ ಬಗ್ಗೆ, ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯ ಬಗ್ಗೆ ವಿಸ್ತೃತವಾದ ಚರ್ಚೆ ನಡೆಯಲಿದೆ.

    ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 3 ಗಂಟೆಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 3.40ಕ್ಕೆ ದೇವನಹಳ್ಳಿಯ ಅವತಿಯ ಸಾಯಿ ಗಾರ್ಡನ್ ನಲ್ಲಿರುವ ಶಕ್ತಿಕೇಂದ್ರದ ಸಮಾವೇಶದಲ್ಲಿ ಭಾಗವಹಿಸಿ, ಸಂಜೆ 5.45ಕ್ಕೆ ಯಲಹಂಕದಲ್ಲಿರುವ ರೆಸಾರ್ಟ್‍ನಲ್ಲಿ ಶಾಸಕರು, ಸಂಸದರ ಸಭೆ ನಡೆಸಲಿದ್ದಾರೆ.

    ಸಂಜೆ 7.15 ಕ್ಕೆ ಲೋಕಸಭಾ ಪ್ರಭಾರಿಗಳು, ಸಂಚಾಲಕರು, ವಿಸ್ತಾರಕರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರ ಸಭೆ ನಡೆಸಲಿದ್ದು, ರೆಸಾರ್ಟ್‍ನಲ್ಲಿಯೇ ರಾತ್ರಿ 9 ಗಂಟೆಗೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ, ರೆಸಾರ್ಟ್‍ನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಫೆ.22 ರಂದು ಬೆಳಗ್ಗೆ 9.30ಕ್ಕೆ ತಮಿಳುನಾಡಿನ ಮಧುರೈಗೆ ಪ್ರವಾಸ ಕೈಗೊಳ್ಳಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಾಂಗ್ರೆಸ್ ಬಿಟ್ಟು ಬಿಜೆಪಿಯಿಂದ ಸ್ಪರ್ಧಿಸಲು ಸುಮಲತಾ ಅವರಿಗೇನು ಹುಚ್ಚು ಇದೆಯಾ: ಡಾ. ಸಿದ್ದರಾಮಯ್ಯ

    ಕಾಂಗ್ರೆಸ್ ಬಿಟ್ಟು ಬಿಜೆಪಿಯಿಂದ ಸ್ಪರ್ಧಿಸಲು ಸುಮಲತಾ ಅವರಿಗೇನು ಹುಚ್ಚು ಇದೆಯಾ: ಡಾ. ಸಿದ್ದರಾಮಯ್ಯ

    ಮಂಡ್ಯ: ಬಿಜೆಪಿಯಿಂದ ಸ್ಪರ್ಧಿಸಲು ದಿವಂಗತ ಅಂಬರೀಶ್ ಪತ್ನಿ ಸುಮಲತಾಗೆ ಹುಚ್ಚಿದ್ಯಾ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಪರಾಜಿತ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

    ಮಾಧ್ಯಮಗಳ ಜೊತೆ ಡಾ.ಸಿದ್ದರಾಮಯ್ಯ ಮಾತನಾಡಿ, ಆರ್.ಅಶೋಕ್ ಸುಮಲತಾ ಅವರನ್ನು ಪರೋಕ್ಷವಾಗಿ ಬಿಜೆಪಿಗೆ ಆಹ್ವಾನಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಮುಂದಿನ ಲೋಕಸಭಾ ಸಾರ್ವತ್ರಿಕ ಚುನಾವಣೆಗೂ ನಾನೇ ಬಿಜೆಪಿ ಅಭ್ಯರ್ಥಿ. ಅಂಬರೀಶ್ ಹಾಗೂ ಸುಮಲತಾ ಕಾಂಗ್ರೆಸ್‍ನಲ್ಲಿ ಗುರುತಿಸಿಕೊಂಡವರು. ಅವರಿಗೆ ಬಿಜೆಪಿಯಿಂದ ಸ್ಪರ್ಧೆ ಮಾಡುವ ಅವಶ್ಯಕತೆ ಇಲ್ಲ. ಅಧಿಕಾರದಲ್ಲಿರುವ ಸಮ್ಮಿಶ್ರ ಸರ್ಕಾರದ ವತಿಯಿಂದ ಸ್ಪರ್ಧೆ ಮಾಡುವುದನ್ನು ಬಿಟ್ಟು ವಿರೋಧ ಪಕ್ಷವಾದ ಬಿಜೆಪಿಯಿಂದ ಕಣಕ್ಕಿಳಿಯಲು ಅವರಿಗೇನಾದರೂ ಹುಚ್ಚು ಇದ್ಯಾ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ:ಸುಮಲತಾ ಎಂದೂ ಕೂಡ ಮಂಡ್ಯದ ಗೌಡ್ತಿ ಅಲ್ಲ: ಕೆ.ಟಿ.ಶ್ರೀಕಂಠೇಗೌಡ

    ನನಗೆ ನಮ್ಮ ಪಕ್ಷದ ವರಿಷ್ಠರು ಸೂಚನೆ ನೀಡಿದಕ್ಕೆ ಮಂಡ್ಯ ಜಿಲ್ಲಾದ್ಯಂತ ಕಾರ್ಯಕರ್ತರ ಸಭೆ ನಡೆಸುತ್ತಿದ್ದೇನೆ. ಚುನಾವಣೆ ಮುಗಿದ ಮೇಲೆ ಜನರ ಸೇವೆ ಮಾಡುತ್ತೇನೆ ಎಂದಿದ್ದೆ. ಆ ಪ್ರಕಾರವಾಗಿ ಜನರ ಮಧ್ಯೆ ಇದ್ದೇನೆ. ನವೆಂಬರ್ 15ರಿಂದ ಹಿಡಿದು ಇಲ್ಲಿಯವರೆಗೂ ನನ್ನ ಕ್ಷೇತ್ರದ ಜನರಿಗಾಗಿ ಕೆಲಸ ಮಾಡುತ್ತಿದ್ದೇನೆ. ಮಂಡ್ಯ ಜಿಲ್ಲೆಯಲ್ಲಿ ವಿರೋಧವಿರುವ ಪಕ್ಷವೆಂದರೆ ಅದು ಬಿಜೆಪಿ. ಈಗಾಗಲೇ ವರಿಷ್ಠರು ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಆದರಿಂದ ನಾನು ಚುನಾವಣಾ ಅಭ್ಯರ್ಥಿಯ ರೀತಿಯೇ ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸುಮಲತಾರನ್ನು ಚುನಾವಣಾ ಕಣಕ್ಕಿಳಿಸಲು ಪಟ್ಟು ಹಿಡಿದ ಅಂಬಿ ಅಭಿಮಾನಿ ಬಳಗ

    ಸುಮಲತಾರನ್ನು ಚುನಾವಣಾ ಕಣಕ್ಕಿಳಿಸಲು ಪಟ್ಟು ಹಿಡಿದ ಅಂಬಿ ಅಭಿಮಾನಿ ಬಳಗ

    ಮಂಡ್ಯ: ಈ ಬಾರಿ ಮಂಡ್ಯ ಲೋಕಸಭೆ ಚುನಾವಣಾ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಸ್ಪರ್ಧೆ ಮಾಡಲೇ ಬೇಕು ಅಂತ ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಇಂದು ಮಂಡ್ಯದಿಂದ ಸಾವಿರಾರು ಅಂಬಿ ಅಭಿಮಾನಿಗಳು ಬೆಂಗಳೂರಿನತ್ತ ಪ್ರಯಾಣ ಬೆಳೆಸಲಿದ್ದಾರೆ.

    ಸ್ಯಾಂಡಲ್‍ವುಡ್ ಕಲಾವಿದರು ಒತ್ತಾಯ ಮಾಡಿದ್ದು ಆಯ್ತು, ಈಗ ಅಂಬರೀಶ್ ಅಭಿಮಾನಿಗಳ ಒತ್ತಾಯ ಶುರುವಾಗಿದೆ. ಹೌದು ಬರುವ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರನ್ನು ಕಣಕ್ಕಿಳಿಸುವಂತೆ ರೆಬೆಲ್ ಸ್ಟಾರ್ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಈ ಕುರಿತು ಮನವಿ ಮಾಡಿಕೊಳ್ಳಲು ಇಂದು ಮಂಡ್ಯದಿಂದ ಬೆಂಗಳೂರಿನ ಅಂಬರೀಶ್ ಅವರ ನಿವಾಸಕ್ಕೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಬರಲಿದ್ದಾರೆ.

    ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ಸಕ್ಕರೆನಾಡಿನಲ್ಲಿ ರಾಜಕೀಯ ಗರಿಗೆದರಿದೆ. ಈ ಬಾರಿ ಲೋಕಸಭಾ ಚುನಾವಣೆಗೆ ಸುಮಲತಾ ಅಂಬರೀಶ್ ಸ್ಪರ್ಧೆ ಮಾಡಲೇ ಬೇಕು ಅನ್ನೋ ಒತ್ತಾಯ ತೀವ್ರವಾಗಿ ಕೇಳಿಬರ್ತಿದೆ. ಈ ಬಗ್ಗೆ ಕೆಲ ದಿನಗಳ ಹಿಂದೆ ಸ್ಯಾಂಡಲ್‍ವುಡ್‍ನ ಪ್ರಮುಖರು ಕೂಡ ಸುಮಲತಾ ಅವರನ್ನು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮನವಿ ಮಾಡಿಕೊಂಡಿದ್ದರು. ಈಗ ಮತ್ತೆ ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಂಬಿ ಅಭಿಮಾನಿಗಳಿಂದ ಸುಮಲತಾ ಸ್ಪರ್ಧೆಗೆ ಒತ್ತಾಯ ಕೇಳಿ ಬಂದಿದೆ. ಇಷ್ಟೇ ಅಲ್ಲದೆ ಈಗಾಗಲೇ ಮೈತ್ರಿ ಪಕ್ಷದಿಂದ ಸುಮಲತಾರನ್ನು ಕಣಕ್ಕಿಳಿಸುವ ಉದ್ದೇಶದಿಂದ ಜೆಡಿಎಸ್ ವರಿಷ್ಠ ಹೆಚ್‍ಡಿ ದೇವೇಗೌಡರನ್ನ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿದ್ದಾರೆ. ಹಾಗೆಯೇ ಅಂಬಿ ಅಭಿಮಾನಿಗಳು ಸುಮಲತಾ ಅವರನ್ನೇ ಅಭ್ಯರ್ಥಿಯನ್ನಾಗಿ ಮಾಡುವಂತೆ ಒತ್ತಾಯ ಮಾಡಲಾಗಿದೆ ಅಂತ ಮಾಹಿತಿ ಮೂಲಗಳು ತಿಳಿಸಿವೆ.

    ಇಂದು ಬೆಳಗ್ಗೆ ಮಂಡ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಅಂಬರೀಶ್ ರವರ ಮನೆಗೆ ತೆರಳಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇಂದು ಶತಾಯಾ-ಗತಾಯ ಸುಮಲತಾ ಅಂಬರೀಶ್ ರವರ ಮನವೊಲಿಸಿ ಈ ಬಾರಿ ಮಂಡ್ಯದಿಂದ ಸ್ಪರ್ಧೆ ಮಾಡುವಂತೆ ಒತ್ತಾಯ ಮಾಡಲಿದ್ದಾರೆ. ಬೆಳಗ್ಗೆ ಮಂಡ್ಯ ನಗರದಿಂದ ಎರಡು ಬಸ್ಸುಗಳನ್ನು ಮಾಡಲಾಗಿದ್ದು, ಜಿಲ್ಲಾದ್ಯಂತ ಹಲವಾರು ಬಸ್ ಮೂಲಕ ತೆರಳಲು ಅಭಿಮಾನಿಗಳು ತಯಾರಿ ನಡೆಸಿದ್ದಾರೆ.

    ಮತ್ತೊಂದು ಕಡೆ ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿಯವರನ್ನು ಕಣಕ್ಕಿಳಿಸಲು ಜೆಡಿಎಸ್ ಕೂಡ ತಯಾರಿ ನಡೆಸಿದೆ. ಈ ಹಿನ್ನೆಲೆಯಲ್ಲಿ ನಿಖಿಲ್ ಮಂಡ್ಯದ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ತಿದ್ದಾರೆ. ಇದಕ್ಕೆ ಪುಷ್ಟಿ ನೀಡುವಂತೆ ಈ ಹಿಂದೆ ಕುಮಾರಸ್ವಾಮಿಯವರು ಕೂಡ ಅಭಿಮಾನಿಗಳ ಒತ್ತಾಯ ಇದೆ. ಹೀಗಾಗಿ ನಿಖಿಲ್ ಮಂಡ್ಯದಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಿದ್ದರು. ಸದ್ಯ ಮಂಡ್ಯದಲ್ಲಿ ಈ ಬಾರಿ ಯಾರು ಅಭ್ಯರ್ಥಿ ಆಗ್ತಾರೆ ಅನ್ನೋ ಗೊಂದಲ ಶುರುವಾಗಿದ್ದು, ಮೈತ್ರಿ ಪಕ್ಷ ಯಾವ ರೀತಿ ಇದನ್ನ ಸರಿಪಡಿಸಿಕೊಂಡು ಅಭ್ಯರ್ಥಿಯನ್ನ ಕಣಕ್ಕಿಳಿಸುತ್ತೆ ಅಂತ ಕಾದು ನೋಡಬೇಕಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಸಿದ್ದರಾಮಯ್ಯ ನೇತೃತ್ವದಲ್ಲಿ ಹಳೆ ಮೈಸೂರು ‘ಕೈ’ ಮುಖಂಡರ ಸಭೆ: ಏನೆಲ್ಲ ಚರ್ಚೆ ಆಯ್ತು?

    ಸಿದ್ದರಾಮಯ್ಯ ನೇತೃತ್ವದಲ್ಲಿ ಹಳೆ ಮೈಸೂರು ‘ಕೈ’ ಮುಖಂಡರ ಸಭೆ: ಏನೆಲ್ಲ ಚರ್ಚೆ ಆಯ್ತು?

    ಬೆಂಗಳೂರು: ಮಾಜಿ ಸಿಎಂ, ಸಮನ್ವಯ ಸಮಿತಿಯ ಅಧ್ಯಕ್ಷರಾದ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ನಗರದ ಕೆಪಿಸಿಸಿ ಕಚೇರಿಯಲ್ಲಿ ಹಳೆ ಮೈಸೂರು ಪ್ರಾಂತ್ಯದ ಕಾಂಗ್ರೆಸ್ ಮುಖಂಡರ ಸಭೆ ನಡೆಸಲಾಯಿತು.

    ಕೆಪಿಸಿಸಿ ಕಚೇರಿಗೆ ಆಗಮಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ತುಮಕೂರು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ ಸೇರಿ ಹತ್ತಕ್ಕೂ ಹೆಚ್ಚು ಕ್ಷೇತ್ರಗಳ ಮುಖಂಡರೊಂದಿಗೆ ಸಭೆ ಏರ್ಪಡಿಸಲಾಗಿತ್ತು. ಈ ವೇಳೆ ಪ್ರಮುಖವಾಗಿ ಜೆಡಿಎಸ್ ಜೊತೆಗಿನ ಮೈತ್ರಿ ಹಾಗೂ ಲೋಕಸಭಾ ಚುನಾವಣೆಗೆ ಟಿಕೆಟ್ ಹಂಚಿಕೆ ಸಂಬಂಧ ಚರ್ಚೆ ನಡೆಸಲಾಗಿದೆ.

    ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಡಿಸಿಎಂ ಪರಮೇಶ್ವರ್, ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಎ.ಮಂಜು, ಚಲುವರಾಯಸ್ವಾಮಿ, ಮಾಜಿ ಶಾಸಕರಾದ ನರೇಂದ್ರಸ್ವಾಮಿ, ಬಾಲಕೃಷ್ಣ, ಮಾಜಿ ಸಂಸದ ವಿಜಯ್ ಶಂಕರ್ ಸೇರಿದಂತೆ ಹಲವರು ಮುಖಂಡರು ಭಾಗವಹಿಸಿದ್ದರು.

    ಹಾಸನ, ಮಂಡ್ಯಕ್ಕಾಗಿ ಪಟ್ಟು: ಸಭೆಯಲ್ಲಿ ಮಂಡ್ಯ ಹಾಗೂ ಹಾಸನ ಲೋಕಸಭಾ ಕ್ಷೇತ್ರದ ಬಗ್ಗೆ ಪ್ರಮುಖ ಚರ್ಚೆ ನಡೆದಿದ್ದು, ಒಂದೊಮ್ಮೆ ಮೈತ್ರಿ ಆದರೆ ಹಾಸನ ಅಥವಾ ಮಂಡ್ಯ ಎರಡರಲ್ಲಿ ಒಂದು ಕ್ಷೇತ್ರವನ್ನ ಕಾಂಗ್ರೆಸ್ ಕೇಳಲೇಬೇಕು ಎಂದು ಮುಖಂಡರು ಪಟ್ಟು ಹಿಡಿದಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ಹಾಸನ ಕ್ಷೇತ್ರವನ್ನು ಬಿಟ್ಟು ಕೊಡುವುದಾದರೆ ಹಾಲಿ ಸಂಸದರಾದ ಎಚ್‍ಡಿ ದೇವೇಗೌಡ ಅವರೇ ಸ್ಪರ್ಧೆ ಮಾಡಬೇಕು ಎಂಬ ಬಗ್ಗೆಯೂ ಒತ್ತಡ ಹಾಕಲು ಮುಖಂಡರು ಆಗ್ರಹಿಸಿದ್ದಾರೆ ಎನ್ನಲಾಗಿದ್ದು, ಎಚ್‍ಡಿಡಿ ಸ್ಪರ್ಧೆ ಮಾಡಿದರೆ ಮಾತ್ರ ಮೈತ್ರಿಗಾಗಿ ಕಾರ್ಯನಿರ್ವಹಿಸುತ್ತೇವೆ ಪ್ರಜ್ವಲ್ ಅಭ್ಯರ್ಥಿ ಆದರೆ ಹಾಸನದಲ್ಲಿ ಮೈತ್ರಿಯೇ ಬೇಡ. ಒಂದೊಮ್ಮೆ ಮುಂದುವರಿದರೆ ಹಾಸನ ಜಿಲ್ಲಾ ಕಾಂಗ್ರೆಸ್ ನಿಂದಲೇ ಅಭ್ಯರ್ಥಿ ಸ್ಪರ್ಧೆ ನಡೆಯುತ್ತದೆ ಎಂಬ ಎಚ್ಚರಿಕೆಯನ್ನು ನಾಯಕರಿಗೆ ರವಾನೆ ಮಾಡಿದ್ದಾರೆ ಎನ್ನಲಾಗಿದೆ.

    ಸದ್ಯ ಮಂಡ್ಯದಲ್ಲಿ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಲು ಕಾಂಗ್ರೆಸ್ ನಾಯಕರ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದ್ದು, ಮೈತ್ರಿ ಏರ್ಪಟ್ಟರೆ ಮಂಡ್ಯವನ್ನ ಜೆಡಿಎಸ್‍ಗೆ ಬಿಟ್ಟು ಕೊಡಲೇ ಬೇಕು. ಆದ್ದರಿಂದ ಮೈತ್ರಿ ಮಾತುಕತೆ ನಡೆಯುವವರೆಗೂ ಕಾದು ನೋಡಿ ಅಭ್ಯರ್ಥಿ ಬಗ್ಗೆ ಯೋಚನೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ.

    ಸುಮಲತಾ ಅಂಬರೀಶ್ ಅಭ್ಯರ್ಥಿ: ಒಂದೊಮ್ಮೆ ಮೈತ್ರಿಯಲ್ಲಿ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೇಳಿದರೆ ಕಾಂಗ್ರೆಸ್ ನಿಂದ ಅವರನ್ನು ಸ್ಪರ್ಧೆಗೆ ಕೇಳುವುದು ಬೇಡ ಎಂಬ ಬಗ್ಗೆಯೂ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದ್ದು, ಅವರು ಅಭ್ಯರ್ಥಿ ಆದರೆ ಮುಂದೇ ತೀರ್ಮಾನ ಮಾಡೋಣ. ಮೈತ್ರಿ ಆದರೆ ಸುಮಲತಾ ಅವರನ್ನು ಅಭ್ಯರ್ಥಿಯನ್ನಾಗಿ ಮಾಡುವುದು ಕಷ್ಟಸಾಧ್ಯ. ಆದ್ದರಿಂದ ಮುನ್ನವೇ ಕೇಳುವುದು ಬೇಡ ಎಂಬ ಗಂಭೀರ ಚರ್ಚೆ ನಡೆದಿದ್ದು, ಅವರ ಸ್ಪರ್ಧೆ ಬಗ್ಗೆಯೂ ಸಾಕಷ್ಟು ಸುದ್ದಿಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಕಾದು ನೋಡುವ ತಂತ್ರಕ್ಕೆ ಸಭೆಯಲ್ಲಿ ನಿರ್ಧರಿಸಿದ್ದಾರೆ ಎನ್ನಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಚುನಾವಣೆಗೂ ಮುನ್ನವೇ ಜೆಡಿಎಸ್ ವಿರುದ್ಧ ತಿರುಗಿ ಬಿದ್ದ ‘ಕೈ’ ಮಾಜಿ ಸಚಿವ

    ಚುನಾವಣೆಗೂ ಮುನ್ನವೇ ಜೆಡಿಎಸ್ ವಿರುದ್ಧ ತಿರುಗಿ ಬಿದ್ದ ‘ಕೈ’ ಮಾಜಿ ಸಚಿವ

    ಹಾಸನ: ಲೋಕಸಭಾ ಚುನಾವಣೆಗೆ ಮೈತ್ರಿ ಪಕ್ಷಗಳಲ್ಲಿ ಮಾತುಕತೆ ಮುಂದುವರಿದಿದ್ದು, ಆದರೆ ಯಾವುದೇ ಅಂತಿಮ ನಿರ್ಧಾರವಾಗದೇ ಪ್ರಜ್ವಲ್ ರೇವಣ್ಣ ಅವರನ್ನು ಅಭ್ಯರ್ಥಿ ಎಂದು ಬಿಂಬಿಸುವುದಕ್ಕೆ ನಮ್ಮ ವಿರೋಧವಿದೆ ಎಂದು ಕಾಂಗ್ರೆಸ್ ಮಾಜಿ ಸಚಿವ ಎ.ಮಂಜು ತಿಳಿಸಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಾಸನದಲ್ಲಿ ಎಚ್‍ಡಿ ದೇವೇಗೌಡ ಅವರು ಸ್ಪರ್ಧೆ ಮಾಡಿದರೆ ನಮ್ಮ ಬೆಂಬಲ ಇದೆ. ಆದರೆ ಪ್ರಜ್ವಲ್ ಅವರನ್ನು ಈಗಾಲೇ ಅಭ್ಯರ್ಥಿ ಎಂದು ಎಚ್‍ಡಿಡಿ ಹೇಳುತ್ತಿರುವುದು ತಪ್ಪು. ಮೈತ್ರಿ ಮೇರೆಗೆ ರಾಜ್ಯದಲ್ಲಿ ಕ್ಷೇತ್ರಗಳ ಹಂಚಿಕೆ ಆಗಬೇಕಿದೆ. ಆದರೆ ಯಾವುದೇ ಅಂತಿಮ ನಿರ್ಧಾರ ಇಲ್ಲದೇ ಹೇಳಿಕೆ ನೀಡುವುದು ಸರಿಯಲ್ಲ. ಒಂದೊಮ್ಮೆ ಮೈತ್ರಿ ಮುಂದುವರಿದು ದೇವೇಗೌಡರು ಅಭ್ಯರ್ಥಿ ಆದರೆ ನಮ್ಮ ಬೆಂಬಲ ಇದೆ ಎಂದು ಸ್ಪಷ್ಟಪಡಿಸಿದರು.

    ಇದೇ ವೇಳೆ ಸಿಎಂ ಕುಮಾರಸ್ವಾಮಿ ಅವರ ರಾಜೀನಾಮೆ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಕುಮಾರಸ್ವಾಮಿ ಅವರನ್ನು ರಾಜ್ಯದ ಜನರ ಕೆಲಸ ಮಾಡಿ ಎಂದು ಸಿಎಂ ಮಾಡಿದ್ದೇವೆ. ಕಾಂಗ್ರೆಸ್ ಶಾಸಕರಿಂದ ತೊಂದರೆಯಾಗುತ್ತಿದೆ ಎಂದು ಮುಖ್ಯಮಂತ್ರಿಗಳು ಬ್ಲಾಕ್ ಮೇಲ್ ಮಾಡುತ್ತಿರುವುದು ಸರಿಯಲ್ಲ ಎಂದರು. ಅಲ್ಲದೇ ಪಕ್ಷದ ನಾಯಕ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡ ಅವರು, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾಗಾಂಧಿಯವರು ನಮ್ಮ ಮುಖಂಡರು. ನಮ್ಮ ಮನೆಯವರನ್ನು ಅಥವಾ ಮನೆ ದೇವರನ್ನ ನಾವು ಪ್ರೀತಿ ಮಾಡುತ್ತೇವೆ, ಹೊಗಳುತ್ತೇವೆ. ನಮಗೆ ಇವತ್ತಿಗೂ ಕೂಡ ಸಿದ್ದರಾಮಯ್ಯರ ಆಡಳಿತವೇ ಉತ್ತಮ ಆಡಳಿತ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರಜ್ವಲ್ ರೇವಣ್ಣ ಹಾಸನದಿಂದ ಸ್ಪರ್ಧೆ – ಇಂದಿನ ಸಭೆಯಲ್ಲಿ ಅಂತಿಮ ನಿರ್ಧಾರ ಸಾಧ್ಯತೆ

    ಪ್ರಜ್ವಲ್ ರೇವಣ್ಣ ಹಾಸನದಿಂದ ಸ್ಪರ್ಧೆ – ಇಂದಿನ ಸಭೆಯಲ್ಲಿ ಅಂತಿಮ ನಿರ್ಧಾರ ಸಾಧ್ಯತೆ

    ಬೆಂಗಳೂರು: ಲೋಕಸಭೆ ಚುನಾವಣೆಗೆ ಜೆಡಿಎಸ್ ಸಿದ್ಧತೆ ಆರಂಭಿಸಿದ್ದು, ಲೋಕಸಭೆ ಅಭ್ಯರ್ಥಿ ಆಯ್ಕೆ ಸಂಬಂಧ, ಜೆಡಿಎಸ್ ವರಿಷ್ಠ ದೇವೇಗೌಡ, ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ನೇತೃತ್ವದಲ್ಲಿ ಜೆಪಿ ಭವನದಲ್ಲಿ ಇಂದು ಸಭೆ ನಡೆಯಲಿದೆ.

    ಸಚಿವರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಜಿಲ್ಲಾ ಅಧ್ಯಕ್ಷರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಸೀಟು ಹಂಚಿಕೆ, ಮೈತ್ರಿ ವಿಚಾರ ಕುರಿತು ಮುಖಂಡರ ಅಭಿಪ್ರಾಯವನ್ನ ಜೆಡಿಎಸ್ ವರಿಷ್ಠ ದೇವೇಗೌಡ ಸಂಗ್ರಹಿಸಲಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣಗೆ ಹಾಸನ ಕ್ಷೇತ್ರವನ್ನು ಬಿಟ್ಟುಕೊಡುತ್ತೇನೆ : ಎಚ್‍ಡಿಡಿ

    ಇದೇ ವೇಳೆ ಮೊಮ್ಮಗ ಪ್ರಜ್ವಲ್ ರೇವಣ್ಣ ಹಾಸನದಿಂದ ಸ್ಪರ್ಧೆ ಮಾಡುವ ವಿಚಾರ ಅಂತಿಮಗೊಳ್ಳುವ ಸಾಧ್ಯತೆ ಇದೆ. ಇನ್ನೂ ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನದಿಂದ ಬಿಡುಗಡೆಗೊಳಿಸಲು ಎಚ್.ವಿಶ್ವನಾಥ್ ಮನವಿ ಮಾಡಿದ್ದು, ಇದಕ್ಕೆ ದೇವೇಗೌಡರು ಒಪ್ಪುವ ಸಾಧ್ಯತೆ ಕಡಿಮೆ ಇದೆ. ಹೀಗಾಗಿ ನೀವೇ ಮಂದುವರಿಯಿರಿ ಎಂದು ವಿಶ್ವನಾಥ್ ಅವರಿಗೆ ದೇವೇಗೌಡರು ಸಲಹೆ ನೀಡುವ ಸಾಧ್ಯತೆಯೇ ಹೆಚ್ಚಿದೆ.

    ಈ ಹಿಂದೆಯೇ ಪ್ರಜ್ವಲ್ ರೇವಣ್ಣ ಕಳೆದ ಎಂಟು ವರ್ಷದಿಂದ ಹಾಸನ ಜಿಲ್ಲೆಯಲ್ಲಿ ಓಡಾಡುತ್ತಿದ್ದಾನೆ. ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಕಾರ್ಯದಲ್ಲಿ ತೊಡಗಿದ್ದು, ಮುಂದಿನ ಲೋಕಸಭಾ ಚುನಾವಣೆಗೆ ಕ್ಷೇತ್ರವನ್ನ ಆತನಿಗೆ ಬಿಟ್ಟುಕೊಡುತ್ತೇನೆ ಎಂದು ಎಚ್.ಡಿ ದೇವೇಗೌಡ ಈ ಹಿಂದೆ ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಲೋಕಸಭಾ ಚುನಾವಣೆಗೆ ಮಾಸ್ಟರ್ ಪ್ಲಾನ್ – RSSಗೆ 7 ಬಿಜೆಪಿ ನಾಯಕರೇ ಟಾರ್ಗೆಟ್

    ಲೋಕಸಭಾ ಚುನಾವಣೆಗೆ ಮಾಸ್ಟರ್ ಪ್ಲಾನ್ – RSSಗೆ 7 ಬಿಜೆಪಿ ನಾಯಕರೇ ಟಾರ್ಗೆಟ್

    ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿದ್ದು, ಆರ್‍ಎಸ್‍ಎಸ್ ಮುಖಂಡರು ಬ್ರಹ್ಮಾಸ್ತ್ರ ಪ್ರಯೋಗ ಮಾಡಲು ಸಿದ್ಧರಾಗುತ್ತಿದ್ದಾರೆ. ಒಂದು ವೇಳೆ ಬ್ರಹ್ಮಾಸ್ತ್ರ ಪ್ರಯೋಗ ಆದರೆ ಬಿಜೆಪಿ ನಾಯಕರಿಗೆ ಶಾಕ್ ಆಗೋದು ಗ್ಯಾರಂಟಿಯಾಗಿದೆ.

    ಆರ್ ಎಸ್‍ಎಸ್ ಅವರು 7 ಬಿಜೆಪಿ ನಾಯಕರನ್ನೇ ಟಾರ್ಗೆಟ್ ಮಾಡಿದ್ದು, ಲೋಕಸಭಾ ಚುನಾವಣೆಗೆ 7 ಮಂದಿಗೆ ಟಿಕೆಟ್ ಕೊಡಬೇಡಿ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷರಿಗೆ ಹೇಳಿದ್ದಾರೆ. ಹಾಲಿ 7 ಮಂದಿ ಸಂಸದರಿಗೆ ಟಿಕೆಟ್ ಕೊಡಬೇಡಿ. ಅವರಿಗೆ ಟಿಕೆಟ್ ಕೊಟ್ಟರೆ ಕಷ್ಟ ಆಗುತ್ತದೆ. ಮೈತ್ರಿ ಅಸ್ತ್ರಕ್ಕೆ ತಿರುಗೇಟು ನೀಡಬೇಕು ಅಂದರೆ ಹೊಸ ಮುಖ ನೋಡಿ. ಈಗಾಗಲೇ 7 ಮಂದಿ ಕ್ಷೇತ್ರಗಳಲ್ಲಿ ಆಡಳಿತ ವಿರೋಧಿ ಅಲೆ ಇದೆ. ಹಾಗಾಗಿ ಅವರಿಗೆ ಟಿಕೆಟ್ ನೀಡಿದರೆ ಇರುವ ಸ್ಥಾನಗಳು ಕೈತಪ್ಪಿ ಹೋಗಲಿವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಮುಂದೆ ಆರ್ ಎಸ್‍ಎಸ್ ಮುಖಂಡರು ಪ್ರಸ್ತಾಪ ಮಾಡಿದ್ದಾರೆ ಎಂದು ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಇತ್ತ ಆರ್ ಎಸ್‍ಎಸ್ ಮುಖಂಡರ ಪ್ರಸ್ತಾಪಕ್ಕೂ ಮೊದಲೇ ಅಮಿತ್ ಷಾ ಕೈಗೆ ಗುಪ್ತವರದಿ ಸೇರಿದ್ದು, 7 ಅಲ್ಲ 9 ಕ್ಷೇತ್ರಗಳಲ್ಲಿ ಆಡಳಿತ ವಿರೋಧಿ ಅಲೆ ಇದೆ ಎಂದು ಅಮಿತ್ ಷಾ ಹೇಳಿದ್ದಾರೆ ಎನ್ನಲಾಗಿದೆ. ಹಾಗಾದ್ರೆ ಆರ್‍ಎಸ್‍ಎಸ್ ಬ್ರಹ್ಮಾಸ್ತ್ರವನ್ನು ಬಿಜೆಪಿ ಹೈಕಮಾಂಡ್ ಪ್ರಯೋಗ ಮಾಡುತ್ತಾ ಎಂಬ ಪ್ರಶ್ನೆ ಮೂಡಿದೆ.

    ಏಳು ಕ್ಷೇತ್ರಗಳ ಟಾರ್ಗೆಟ್ ಲಿಸ್ಟ್ ನಲ್ಲಿ ಸೀನಿಯರ್ ಸಂಸದರು ಕೂಡ ಇದ್ದಾರೆ. 3 ಬಾರಿ ಹಾಗೂ 2 ಬಾರಿ ಗೆದ್ದ ಸಂಸದರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಹೀಗಾಗಿ ಯಡಿಯೂರಪ್ಪ ಅಭಿಪ್ರಾಯದ ಮೇಲೆ ಬದಲಾವಣೆಯ ಪರ್ವ ನಿಂತಿದ್ದು, ಬಿಜೆಪಿ ಹೈಕಮಾಂಡ್ ನಿರ್ಧಾರವನ್ನು ಯಡಿಯೂರಪ್ಪ ಒಪ್ಪಿ ಬಿಡುತ್ತಾರಾ ಎಂದು ನಾಯಕರಲ್ಲಿ ಗೊಂದಲ ಮೂಡಿದೆ.

    ಸದ್ಯಕ್ಕೆ ಪ್ರಧಾನಿ ಮೋದಿ ಮತ್ತು ಅಮಿತ್ ಷಾ ಅವರು ಆರ್ ಎಸ್‍ಎಸ್ ಮುಖಂಡರ ಮಾತುಗಳನ್ನು ತೆಗೆದು ಹಾಕುವುದಿಲ್ಲ ಎಂದು ಹೇಳಲಾಗುತ್ತಿದೆ. ಯಾಕೆಂದ್ರೆ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಆರ್ ಎಸ್‍ಎಸ್ ಸಲಹೆಯನ್ನು ಪಡೆಯಬೇಕು ಎಂದು ಚಿಂತನೆಯನ್ನು ಮಾಡಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಲೋಕಸಭೆ ಟಿಕೆಟ್ ನೀಡಲು 5 ಕೋಟಿ ರೂ. ಕೇಳಿದ್ರು ಮಾಯಾವತಿ- ಮಾಜಿ ಎಂಎಲ್‍ಸಿ ಆರೋಪ

    ಲೋಕಸಭೆ ಟಿಕೆಟ್ ನೀಡಲು 5 ಕೋಟಿ ರೂ. ಕೇಳಿದ್ರು ಮಾಯಾವತಿ- ಮಾಜಿ ಎಂಎಲ್‍ಸಿ ಆರೋಪ

    ಲಕ್ನೋ: ಅಲಿಗಢ್ ಕ್ಷೇತ್ರದಿಂದ ನನಗೆ ಲೋಕಸಭೆ ಚುನಾವಣೆಗೆ ಟಿಕೆಟ್ ಕೊಡಲು ಬಹುಜನ್ ಸಮಾಜ್ ಪಕ್ಷ (ಬಿಎಸ್‍ಪಿ) ಅಧ್ಯಕ್ಷೆ ಮಾಯಾವತಿ 5 ಕೋಟಿ ರೂ. ಕೇಳಿದ್ರು ಎಂದು ಮಾಜಿ ಎಂಎಲ್‍ಸಿ ಮುಕುಲ್ ಉಪಾಧ್ಯಾಯ ಆರೋಪಿಸಿದ್ದಾರೆ.

    ಬಿಎಸ್‍ಪಿ ಇಂದ ಹೊರಬಂದ ನಂತರ ಮುಕುಲ್ ಉಪಾಧ್ಯಾಯ, ಮಾಯಾವತಿ ಅವರು ಲೋಕಸಭೆ ಚುನಾವಣೆ ಟಿಕೆಟ್ ನೀಡಲು ನನ್ನ ಬಳಿ ನಾಲ್ಕು ಬಾರಿ 5 ಕೋಟಿ ರೂ. ಕೇಳಿದ್ರು. ಇದಕ್ಕೆ ನಿರಾಕರಿಸಿದ್ದಕ್ಕೆ ಅಲಿಗಢ್ ಕ್ಷೇತ್ರದಿಂದ ಸ್ಪರ್ಧಿಸಲು ನನ್ನ ಸಹೋದರ ರಾಮ್‍ವೀರ್ ಉಪಧ್ಯಯನ ಪತ್ನಿ ಸೀಮಾರಿಗೆ ಟಿಕೆಟ್ ನೀಡಿದ್ದಾರೆ. ರಾಜಕಾರಣಕ್ಕಾಗಿ ಸಹೋದರನೇ ನನ್ನ ವಿರುದ್ಧ ನಿಂತಿದ್ದಾನೆ ಎಂದು ಬಿಎಸ್‍ಪಿ ನಾಯಕರ ವಿರುದ್ಧ ಮುಕುಲ್ ಉಪಾಧ್ಯಾಯ ಕಿಡಿಕಾರಿದ್ದಾರೆ.

    ಅಷ್ಟೇ ಅಲ್ಲದೆ ಬಿಎಸ್‍ಪಿಯ ಸಂಯೋಜಕರು ಕೆಲವು ದಿನಗಳ ಹಿಂದೆಯಷ್ಟೆ ತನ್ನ ಬಳಿ ಅಲಿಗಢ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಪಕ್ಷದ ನಿಧಿಗೆಂದು 5 ಕೋಟಿ ರೂ. ಬೇಡಿಕೆ ಇಟ್ಟಿದ್ದರು ಎಂದು ಹೇಳಿದ್ದಾರೆ.

    ಮುಕುಲ್ ಅವರ ಈ ಆರೋಪವನ್ನು ಬಿಎಸ್‍ಪಿ ತಳ್ಳಿಹಾಕಿದೆ. ಬಿಜೆಪಿಯನ್ನು ಮೆಚ್ಚಿಸಲು ಮುಕುಲ್ ಪ್ರಯತ್ನಿಸುತ್ತಿದ್ದರು ಅದಕ್ಕಾಗಿ ಪಕ್ಷದಿಂದ ಉಚ್ಛಾಟಿಸಿದ್ದೇವೆ. ಮುಕುಲ್ ಪಕ್ಷದ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಕೆಲಸವಿಲ್ಲದೆ ಅರ್ಥವಿಲ್ಲದ ಹೇಳಿಕೆಯನ್ನು ನೀಡುತ್ತಿದ್ದಾರೆ ಎಂದು ಮಾಧ್ಯಮಗಳಿಗೆ ಆಗ್ರಾ- ಅಲಿಗಢ್ ವಿಭಾಗದ ಬಿಎಸ್‍ಪಿ ಪಕ್ಷದ ವಲಯ ಸಂಯೋಜಕ ಮುಖ್ಯಸ್ಥರಾದ ಸುನೀಲ್ ಚಿತ್ತೋರ್ ಸ್ಪಷ್ಟಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews