Tag: ಲೋಕಸಭೆ ಚುನಾವಣೆ

  • UPA ಮೈತ್ರಿ ಕೂಟದ ಮಹತ್ವದ ಸಭೆಗೆ ಬೆಂಗಳೂರಿನಲ್ಲಿ ಮುಹೂರ್ತ

    UPA ಮೈತ್ರಿ ಕೂಟದ ಮಹತ್ವದ ಸಭೆಗೆ ಬೆಂಗಳೂರಿನಲ್ಲಿ ಮುಹೂರ್ತ

    ನವದೆಹಲಿ/ಬೆಂಗಳೂರು: UPA ಮೈತ್ರಿಕೂಟದ ಮಹತ್ವದ ಸಭೆ ಜುಲೈ 17 ಹಾಗೂ 18 ರಂದು ಬೆಂಗಳೂರಿನ (Bengaluru) ಖಾಸಗಿ ಹೋಟೆಲ್ ನಲ್ಲಿ ನಡೆಯಲಿದೆ.

    ಒಟ್ಟು 24 ಪಕ್ಷಗಳಿಗೆ ಆಹ್ವಾನ ನೀಡಲಾಗಿದೆ. ಕಳೆದ ಬಾರಿ ಪಾಟ್ನಾದಲ್ಲಿ ನಡೆದ ಸಭೆ 6 ಜನ ಮುಖ್ಯಮಂತ್ರಿಗಳೂ ಸೇರಿ 15 ಪಕ್ಷಗಳ 32 ನಾಯಕರನ್ನ ಒಳಗೊಂಡಿತ್ತು. ಈ ಬಾರಿ 24 ಪಕ್ಷದ 40ಕ್ಕೂ ಹೆಚ್ಚು ನಾಯಕರು ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

    ಸೋನಿಯಾ ಗಾಂಧಿ (Sonia Gandhi), ರಾಹುಲ್ ಗಾಂಧಿ (Rahul Gandhi) ಸೇರಿದಂತೆ ಪ್ರಮುಖ ನಾಯಕರು ಸೋಮವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಯುಪಿಎ ಮೈತ್ರಿಕೂಟದ ನಾಯಕರಿಗೆ ಸೋಮವಾರ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಔತಣಕೂಟ ಏರ್ಪಡಿಸಿದ್ದಾರೆ. ಅಲ್ಲಿ ಮೈತ್ರಿಕೂಟದ ಮೊದಲ ಅನೌಪಚಾರಿಕ ಸಭೆ ನಡೆಯಲಿದೆ. ಜುಲೈ 18 ರಂದು ಯುಪಿಎ ಮೈತ್ರಿ ಕೂಟದ ಅಧಿಕೃತ ಮಹತ್ವದ ಸಭೆ ನಡೆಯಲಿದೆ.

    ಭಾಗವಹಿಸುವ ಪಕ್ಷಗಳು:
    ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಎನ್‌ಸಿಪಿ, ಸಿಪಿಐಎಂ, ಸಿಪಿಐ, ಆರ್‌ಜೆಡಿ, ಜೆಡಿಯು, ಡಿಎಂಕೆ, ಸಮಾಜವಾದಿ ಪಾರ್ಟಿ, ಶಿವಸೇನೆ ಉದ್ದವ್ ಠಾಕ್ರೆ, ಎಎಪಿ, ಜೆಎಂಎಂ, ನ್ಯಾಷನಲ್ ಕಾನ್ಫರೆನ್ಸ್, ಪೀಪಲ್ಸ್ ಡೆಮಾಕ್ರೆಟಿಕ್‌ ಪಾರ್ಟಿ, ಸಿಪಿಐಎಂಎಲ್‌, ಎಂಡಿಕೆ, ಆರ್‌ಎಸ್‌ಪಿ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ಕೇರಳ ಕಾಂಗ್ರೆಸ್‌ನ ಎರಡೂ ಬಣಗಳು (ಜೋಸೇಫ್ ಮತ್ತು ಮಣಿ) ಪಕ್ಷಗಳು ಸಭೆಯಲ್ಲಿ ಭಾಗವಹಿಸಲಿವೆ ಎನ್ನಲಾಗಿದೆ. ಇದನ್ನೂ ಓದಿ: ನಿಯಮ ಮೀರಿ ಹುದ್ದೆ ನೀಡಿದ ಆರೋಪ- ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಿಂದ ಸರ್ಕಾರಕ್ಕೆ ಪತ್ರ

    ಸಭೆಯಲ್ಲಿ ಪಾಲ್ಗೊಳ್ಳುವ ಪ್ರಮುಖ ನಾಯಕರು:
    ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ, ಉದ್ಧವ್‌ ಠಾಕ್ರೆ, ಆದಿತ್ಯ ಠಾಕ್ರೆ, ಹೇಮಂತ್ ಸೊರೇನ್, ಎಂ.ಕೆ ಸ್ಟಾಲಿನ್‌, ನಿತೀಶ್ ಕುಮಾರ್, ಶರದ್ ಪವಾರ್, ಸುಪ್ರಿಯಾ ಸುಳೆ, ಅಖಿಲೇಶ್ ಯಾದವ್, ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್, ಮೆಹಬೂಬಾ ಮುಫ್ತಿ, ಲಾಲು ಪ್ರಸಾದ್ ಯಾದವ್, ಡಿ. ರಾಜಾ, ಸೀತಾರಾಂ ಯೆಚೂರಿ, ಒಮರ್ ಅಬ್ದುಲ್ಲಾ ಮೊದಲಾದ ನಾಯಕರು ಬೆಂಗಳೂರಿನ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ಲೋಕಸಮರಕ್ಕಾಗಿ BJP- JDS ದೋಸ್ತಿ- NDA ಸಭೆಯಲ್ಲಿ ಭಾಗಿಯಾಗ್ತಾರಾ ಹೆಚ್‍ಡಿಕೆ?

    ಸಭೆಯ ಪ್ರಮುಖ ಅಜೆಂಡ ಏನು….?
    * 24 ಪಕ್ಷಗಳು ಸೇರಿ ಒಟ್ಟು 150 ಲೋಕಸಭಾ ಸದಸ್ಯರನ್ನ ಹೊಂದಿವೆ ಅದನ್ನ ಹೆಚ್ಚಿಸಿಕೊಳ್ಳುವುದು ಮೈತ್ರಿ ಕೂಟದ ಲೆಕ್ಕಾಚಾರ..
    * ಈ ಸಭೆಯಲ್ಲಿ ಮೈತ್ರಿಕೂಟಕ್ಕೆ ಅಧಿಕೃತ ಹೆಸರು ಘೋಷಣೆ ಸಾಧ್ಯತೆ
    * ಲೋಕಸಭಾ ಸೀಟು ಹಂಚಿಕೆ ಸಂಬಂಧವೂ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ.
    * 150 ಸ್ಥಾನಕ್ಕಿಂತ ಹೆಚ್ಚುವರಿ ಎಷ್ಟು ಸ್ಥಾನ ಗಳಿಸಬಹುದು ಎಂಬುದನ್ನ ಸಭೆಯಲ್ಲಿ ಹೆಚ್ಚು ಒತ್ತು ಕೊಟ್ಟು ಚರ್ಚೆ ಮಾಡಲು ನಿರ್ಧಾರ
    * ಮೈತ್ರಿಕೂಟದ ನಾಯಕತ್ವ ಯಾರದ್ದು ಎಂಬುದು ಸಹಾ ತೀರ್ಮಾನ ಆಗುವ ಸಾಧ್ಯತೆ
    * ಪಾಟ್ನಾ ಸಭೆಯಲ್ಲಿ 15 ಪಕ್ಷಗಳು ಭಾಗವಹಿಸಿದ್ದು. ಈ ಬಾರಿ 24 ಪಕ್ಷಗಳಿಗೆ ಆಹ್ವಾನ ನೀಡಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೊಸ ರಾಷ್ಟ್ರೀಯ ಪಕ್ಷ ಘೋಷಿಸಲಿರುವ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್

    ಹೊಸ ರಾಷ್ಟ್ರೀಯ ಪಕ್ಷ ಘೋಷಿಸಲಿರುವ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್

    ನವದೆಹಲಿ: 2024ರ ಲೋಕಸಭೆ ಚುನಾವಣೆ (Lok Sabha Elections) ಸನಿಹವಾಗುತ್ತಿರುವ ಹಿನ್ನೆಲೆ ಹಲವು ರಾಜಕೀಯ ಪಕ್ಷಗಳು ತಂತ್ರಗಾರಿಕೆ ಆರಂಭಿಸಿದ್ದು, ಇದರ ಭಾಗವಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ (K Chandrasekhar Rao) ಹೊಸ ರಾಷ್ಟ್ರೀಯ ಪಕ್ಷವನ್ನು ಘೋಷಿಸಲಿದ್ದಾರೆ ಎಂದು ಮೂಲಗಳು ಖಚಿತ ಪಡಿಸಿವೆ.

    ಅಕ್ಟೋಬರ್ 5 ರಂದು ಸಂಜೆ ಏಳು ಗಂಟೆಗೆ ಹೊಸ ಪಕ್ಷದ ಹೆಸರನ್ನು ಘೋಷಣೆ ಮಾಡಲಿದ್ದು, ಡಿಸೆಂಬರ್ 9 ರಂದು ದೆಹಲಿಯಲ್ಲಿ (NewDelhi) ದೊಡ್ಡ ಕಾರ್ಯಕ್ರಮ ಆಯೋಜಿಸುವ ಮೂಲಕ ತಮ್ಮ ರಾಷ್ಟ್ರೀಯ ಅಜೆಂಡಾವನ್ನು ಚಂದ್ರಶೇಖರ್ ರಾವ್ ಜನರಿಗೆ ತಿಳಿಸಲಿದ್ದಾರೆ. ಇದನ್ನೂ ಓದಿ: ಸೇನೆ ಸೇರಿದ ಭಾರತದ ಮೊದಲ ಲಘು ಯುದ್ಧ ಹೆಲಿಕಾಪ್ಟರ್ – ಏನಿದರ ವಿಶೇಷತೆ?

    ಮೂಲಗಳ ಪ್ರಕಾರ ತೆಲಂಗಾಣ ರಾಷ್ಟ್ರ ಸಮಿತಿ (TRS) ಅನ್ನು ಭಾರತೀಯ ರಾಷ್ಟ್ರ ಸಮಿತಿ (BRS) ಆಗಿ ಮರು ನಾಮಕರಣ ಮಾಡಲು ಚಂದ್ರಶೇಖರ್ ರಾವ್ ಪಕ್ಷದ ಇತರೆ ನಾಯಕರಿಂದ ಅನುಮತಿ ಪಡೆದುಕೊಂಡಿದ್ದಾರೆ. ಪಕ್ಷದ ಹೆಸರು ಮಾತ್ರ ಬದಲಾಗಲಿದ್ದು, ಚಿಹ್ನೆ ಹಾಗೂ ಧ್ವಜ ಮುಂದುವರಿಯಲಿದೆ. ಇದನ್ನೂ ಓದಿ : ನಮ್ಮ ಇಲಾಖೆಯಲ್ಲಿರುವ ಕಳ್ಳ ಅಧಿಕಾರಿಗಳಿಗೆ ನಾನೇ ಬಾಸ್‌ ಎಂದಿದ್ದ ಕೃಷಿ ಸಚಿವ ರಾಜೀನಾಮೆ

    ಕೆಸಿಆರ್ ನೇತೃತ್ವದ ಬಿಆರ್‌ಎಸ್ ಪಕ್ಷವು ಆಂಧ್ರಪ್ರದೇಶ, ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಮತ್ತು ಇತರ ಕೆಲವು ರಾಜ್ಯಗಳ 100 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ. ಇದು ವಿವಿಧ ರಾಜಕೀಯ ಪಕ್ಷಗಳೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಬಹುದು. ಕೆಲವು ರಾಜಕೀಯ ಪಕ್ಷಗಳು ಬಿಆರ್‌ಎಸ್‍ನೊಂದಿಗೆ ವಿಲೀನಗೊಳ್ಳಬಹುದು ಮತ್ತು ರಾಷ್ಟ್ರ ಮಟ್ಟದಲ್ಲಿ ಬಿಆರ್‌ಎಸ್‍ನೊಂದಿಗೆ ಕೆಲಸ ಮಾಡಲು ಸಿದ್ಧರಿರುವ ಇತರ ನಾಯಕರೂ ಪಕ್ಷ ಸೇರಬಹುದು ಎಂದು ಮೂಲಗಳು ತಿಳಿಸಿವೆ.

    Live Tv
    [brid partner=56869869 player=32851 video=960834 autoplay=true]

  • 2024ರಲ್ಲಿ ಬಿಜೆಪಿಯೇತರ ಸರ್ಕಾರ ಬಂದ್ರೆ ರೈತರಿಗೆ ಉಚಿತ ವಿದ್ಯುತ್ – ಕೆಸಿಆರ್ ಭರವಸೆ

    2024ರಲ್ಲಿ ಬಿಜೆಪಿಯೇತರ ಸರ್ಕಾರ ಬಂದ್ರೆ ರೈತರಿಗೆ ಉಚಿತ ವಿದ್ಯುತ್ – ಕೆಸಿಆರ್ ಭರವಸೆ

    ಹೈದರಾಬಾದ್: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೇತರ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ರೈತರಿಗೆ ಉಚಿತವಾಗಿ ವಿದ್ಯುತ್ ಸರಬರಾಜು ಮಾಡಲಾಗುತ್ತದೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಹೇಳಿದ್ದಾರೆ.

    ನಿಜಾಮಾಬಾದ್‍ನಲ್ಲಿ ಸಮಗ್ರ ಜಿಲ್ಲಾ ಕಚೇರಿ ಸಂಕೀರ್ಣ ಹಾಗೂ ಟಿಆರ್‌ಎಸ್ ಪಕ್ಷದ ಜಿಲ್ಲಾ ಕಚೇರಿಯನ್ನು ಉದ್ಘಾಟಿಸಿದ ಬಳಿಕ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೃಷಿ ಪಂಪ್‍ಸೆಟ್‍ಗಳಿಗೆ ಮೀಟರ್‌ಗಳನ್ನು ಅಳವಡಿಸುವಂತೆ ರೈತರಿಗೆ ಒತ್ತಾಯಿಸುತ್ತಿದೆ ಎಂದು ಆರೋಪಿಸಿದರು.  ಇದನ್ನೂ ಓದಿ: ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದಕ್ಕೆ ಯುವಕ ಮರ್ಡರ್

    2024ರ ಲೋಕಸಭೆ ಚುನಾವಣೆಯ ನಂತರ ಈ ದೇಶದ ಎಲ್ಲ ರೈತರು ಬಿಜೆಪಿಯೇತರ ಬಾವುಟ ಹಾರಿಸಲಿದ್ದಾರೆ. ನಾವು ಈ ಬಡವರ ವಿರೋಧಿ, ರೈತ ವಿರೋಧಿ, ಕಾರ್ಮಿಕ ವಿರೋಧಿ ಸರ್ಕಾರವನ್ನು ಕಿತ್ತು ಹಾಕುತ್ತೇವೆ ಮತ್ತು ನಮ್ಮದೇ ಸರ್ಕಾರ ದೆಹಲಿಯಲ್ಲಿ ಕೂಡ (ರಾಷ್ಟ್ರೀಯ ಮಟ್ಟದಲ್ಲಿ) ಅಧಿಕಾರಕ್ಕೆ ಬರಲಿದೆ. ನಾನು ಈ ದೇಶದ ರೈತರಿಗೆ ಸಹಿ ಸುದ್ದಿಯನ್ನು ನೀಡುತ್ತಿದ್ದೇನೆ. ನೀವು ಬಿಜೆಪಿಯೇತರ ಸರ್ಕಾರವನ್ನು ಆರಿಸಿದರೆ, ತೆಲಂಗಾಣದಂತೆ ಉಚಿತ ವಿದ್ಯುತ್ ಸರಬರಾಜು ಮಾಡಲಾಗುತ್ತದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಒಲ್ಲದ ವಿವಾಹ – ವಿಷ ಸೇವಿಸಿ ನವ ವಿವಾಹಿತೆ ಆತ್ಮಹತ್ಯೆ

    ರೈತರು ಸೇರಿದಂತೆ ಎಲ್ಲರಿಗೂ 24/7 ವಿದ್ಯುತ್ ನೀಡುವ ಯಾವುದೇ ರಾಜ್ಯ ಈ ದೇಶದಲ್ಲಿ ಇಲ್ಲ ಮತ್ತು ಪ್ರತಿ ದಲಿತ ಕುಟುಂಬಕ್ಕೆ 10 ಲಕ್ಷ ಆರ್ಥಿಕ ನೆರವು ನೀಡುವ ಏಕೈಕ ರಾಜ್ಯ ತೆಲಂಗಾಣವಾಗಿದೆ ಎಂದು ಹೇಳಿದರು. ಜೊತೆಗೆ ಎನ್‍ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಪ್ರಧಾನಿ ಮೋದಿ ಸರ್ಕಾರವು ಈಗ ರಸಗೊಬ್ಬರ, ಡೀಸೆಲ್ ಮತ್ತು ಇತರ ಇನ್‍ಪುಟ್‍ಗಳ ಬೆಲೆಯನ್ನು ಹೆಚ್ಚಿಸುವ ಮೂಲಕ ಕೃಷಿ ಕೆಲಸ ಕಷ್ಟಕರ ಎಂಬಂತೆ ರೈತರಿಗೆ ತೋರಿಸಲು ಪ್ರಯತ್ನಿಸುತ್ತಿದೆ. ಇದರಿಂದಾಗಿ ಕೃಷಿ ಭೂಮಿಯನ್ನು ಕಿತ್ತುಕೊಂಡು ಕಾರ್ಪೋರೇಟ್‍ ಕಂಪನಿಗೆ ನೀಡಬಹುದು ಎಂದು ಆರೋಪಿಸಿದರು.

    ಅನುತ್ಪಾದಕ ಆಸ್ತಿ (ಎನ್‍ಪಿಎ) ಹೆಸರಿನಲ್ಲಿ 12 ಲಕ್ಷ ಕೋಟಿ ಮೌಲ್ಯದ ಸಾಲವನ್ನು ಮನ್ನಾ ಮಾಡಿರುವ ಕೇಂದ್ರವು ದೇಶದ ಎಲ್ಲ ರೈತರಿಗೆ 1.45 ಲಕ್ಷ ಕೋಟಿ ವೆಚ್ಚದ ಉಚಿತ ವಿದ್ಯುತ್ ನೀಡಲು ಇಚ್ಛಿಸುತ್ತಿಲ್ಲ ಎಂದು ಕಿಡಿಕಾರಿದರು.

    Live Tv
    [brid partner=56869869 player=32851 video=960834 autoplay=true]

  • ಹೃದಯಗಳ ರಾಣಿ ಮಮತಾ ಲೋಕಸಭೆ ಚುನಾವಣೆಯಲ್ಲಿ ಗೇಮ್ ಚೇಂಜರ್ ಆಗಲಿದ್ದಾರೆ: ಶತ್ರುಘ್ನ ಸಿನ್ಹಾ

    ಹೃದಯಗಳ ರಾಣಿ ಮಮತಾ ಲೋಕಸಭೆ ಚುನಾವಣೆಯಲ್ಲಿ ಗೇಮ್ ಚೇಂಜರ್ ಆಗಲಿದ್ದಾರೆ: ಶತ್ರುಘ್ನ ಸಿನ್ಹಾ

    ಕೋಲ್ಕತ್ತಾ: 2024ರ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ನಿಜವಾದ ಗೇಮ್ ಚೇಂಜರ್ ಆಗಲಿದ್ದಾರೆ ಎಂದು ಸಂಸದ ಶತ್ರುಘ್ನ ಸಿನ್ಹಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಈ ತಿಂಗಳ ಆರಂಭದಲ್ಲಿ ನಡೆದ ಉಪಚುನಾವಣೆಯಲ್ಲಿ ಅಸನ್ಸೋಲ್ ಲೋಕಸಭಾ ಕ್ಷೇತ್ರವನ್ನು ಗೆದ್ದ ಶತ್ರುಘ್ನ ಸಿನ್ಹಾ ಮಾಧ್ಯಮದ ಜೊತೆ ಮಾತನಾಡಿ, ನಾನು ಹೃದಯಗಳ ರಾಣಿ ಮಮತಾ ಬ್ಯಾನರ್ಜಿ ಅವರಿಂದ ಪ್ರಭಾವಿತನಾಗಿದ್ದೇನೆ. ಅವರು ಎಲ್ಲರೂ ಗೌರವಿಸಲ್ಪಡುವ ನಾಯಕಿಯಾಗಿದ್ದಾರೆ. 2024ರ ಚುನಾವಣೆಯಲ್ಲಿ ಅವರು ನಿಜವಾದ ಆಟ ಬದಲಾಯಿಸುವವರು ಎಂಬುದನ್ನು ನೋಡಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತೇವೆ ಎಂದರು. ಇದನ್ನೂ ಓದಿ: ಹನುಮಾನ್ ಚಾಲೀಸಾ ವಿಚಾರದಲ್ಲಿ ಬಿಜೆಪಿ ಜನರ ದಾರಿ ತಪ್ಪಿಸುತ್ತಿದೆ: ಸಂಜಯ್ ರಾವತ್

    ರಾಜಕೀಯದಲ್ಲಿ ತಮ್ಮ ಪ್ರಯಾಣದ ಕುರಿತು ಮಾತನಾಡಿದ ಅವರು, ನನ್ನ ಸಾಮಾಜಿಕ ಜವಾಬ್ದಾರಿಯನ್ನು ಪೂರೈಸಲು ನಾನು ರಾಜಕೀಯಕ್ಕೆ ಬಂದಿದ್ದೇನೆ. ನಾನು ರಾಜಕೀಯ ನಾಯಕ ಜಯಪ್ರಕಾಶ್ ನಾರಾಯಣರಿಂದ ಪ್ರಭಾವಿತನಾಗಿದ್ದೆ ಎಂದು ತಿಳಿಸಿದರು. ಇದನ್ನೂ ಓದಿ: ನಿರ್ಗತಿಕನಿಗೆ ಸ್ನಾನ ಮಾಡಿಸಿದ ಪೊಲೀಸ್ ಆಫೀಸರ್ – ಸಾರ್ವಜನಿಕರಿಂದ ಭಾರೀ ಮೆಚ್ಚುಗೆ

    ಇದಲ್ಲದೆ ಬಿಜೆಪಿಯು ಪ್ರಜಾಪ್ರಭುತ್ವದಿಂದ ನಿರಂಕುಶ ಪ್ರಭುತ್ವವಾಗಿ ಮಾರ್ಪಟ್ಟಿರುವುದರಿಂದ ಬಿಜೆಪಿಯನ್ನು ತೊರೆದು ಅಖಿಲ ಭಾರತ ತೃಣಮೂಲ ಕಾಂಗ್ರೆಸ್‍ಗೆ ಸೇರಿದ್ದೇನೆ ಎಂದು ಹೇಳಿದರು.

    ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಸಚಿವರಾಗಿದ್ದ ಅವರು, ವಾಜಪೇಯಿ ಮತ್ತು ಎಲ್ ಕೆ ಅಡ್ವಾಣಿಯವರಿದ್ದಾಗ ಬಿಜೆಪಿ ಪ್ರಜಾಸತ್ತಾತ್ಮಕ ಪಕ್ಷವಾಗಿತ್ತು. ಆದರೆ ಪ್ರಧಾನಿ ಮೋದಿ ನಡೆಸುತ್ತಿರುವ ಇಂದಿನ ಬಿಜೆಪಿ ನಿರಂಕುಶ ಪ್ರಭುತ್ವವಾಗಿದೆ ಎಂದು ದೂರಿದರು.

    ಉಪಚುನಾವಣೆಯಲ್ಲಿ ಬಿಜೆಪಿಯ ಅಗ್ನಿಮಿತ್ರ ಪಾಲ್ ಅವರನ್ನು 3 ಲಕ್ಷಕ್ಕೂ ಹೆಚ್ಚು ಮತಗಳಿಂದ ಶತ್ರುಘ್ನ ಸಿನ್ಹಾ ಸೋಲಿಸಿದ್ದರು. ಈ ಹಿಂದೆ ಪಶ್ಚಿಮ ಬಂಗಾಳದ ಅಸನ್ಸೋಲ್‍ನಲ್ಲಿ ಟಿಎಂಸಿ ಹಿಂದೆಂದೂ ಗೆದ್ದಿರಲಿಲ್ಲ.

  • ಕೈ ಪಡೆಗೆ ಪ್ರಶಾಂತ್ ಕಿಶೋರ್ ಶಕ್ತಿ – ಹಿರಿಯ ನಾಯಕರಿಗೆ ನೀಡಿದ ಸಲಹೆ ಏನು?

    ಕೈ ಪಡೆಗೆ ಪ್ರಶಾಂತ್ ಕಿಶೋರ್ ಶಕ್ತಿ – ಹಿರಿಯ ನಾಯಕರಿಗೆ ನೀಡಿದ ಸಲಹೆ ಏನು?

    ನವದೆಹಲಿ: ಪಂಚರಾಜ್ಯಗಳಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ಮತ್ತೆ ಪುಟಿದೇಳಲು ಪ್ರಯತ್ನಿಸುತ್ತಿದೆ. ಈ ಸಂಬಂಧ ಕಾರ್ಯತಂತ್ರಗಳನ್ನು ರೂಪಿಸುತ್ತಿದ್ದು ಮುಂಬರುವ ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ ಆರಂಭಿಸಿದೆ.

    ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆಗೆ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಇಂದು ಮೂರನೇ ಹಂತದ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್, ಕೆಸಿ ವೇಣುಗೋಪಾಲ್, ಮುಕುಲ್ ವಾಸ್ನಿಕ್, ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್, ಅಂಬಿಕಾ ಸೋನಿ, ಎಕೆ ಆಂಟನಿ, ರಣದೀಪ್ ಸುರ್ಜೆವಾಲಾ ಸೇರಿದಂತೆ ಅನೇಕರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಭಾರತ ಶ್ರೇಷ್ಠ ವೈವಿಧ್ಯತೆ ದೇಶ, ಎಲ್ಲರ ಬಗ್ಗೆಯೂ ಸಹಿಷ್ಣುತೆ ಹೊಂದಬೇಕು – ಅಲಹಾಬಾದ್ ಹೈಕೋರ್ಟ್

    ಒಂದೇ ವಾರದಲ್ಲಿ ನಡೆಯುತ್ತಿರುವ ಮೂರನೇ ಸಭೆ ಇದಾಗಿದೆ. ಇದಕ್ಕೂ ಮೊದಲು ಏಪ್ರಿಲ್ 16 ಮತ್ತು 18 ರಂದು ಸೋನಿಯಾಗಾಂಧಿ ಜೊತೆಗೆ ಪ್ರಶಾಂತ್ ಕಿಶೋರ್ ಸಭೆ ನಡೆಸಿದ್ದರು. ಮುಂದಿನ ದಿನಗಳಲ್ಲಿ ಇಂತಹ ಇನ್ನೆರಡು ಸಭೆಗಳು ನಡೆಯಲಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.

    ಪ್ರಶಾಂತ್ ಕಿಶೋರ್ 2024ರ ಚುನಾವಣೆಗೆ ಸಂಬಂಧಿಸಿದಂತೆ ಪವರ್ ಪಾಯಿಂಟ್ ನೀಡಿದ್ದು ಇಂದು ಹೊಸ ಅಂಶಗಳೊಂದಿಗೆ ಹೆಚ್ಚಿನ ಚರ್ಚೆ ನಡೆಯಲಿದೆ. ಈ ನಡುವೆ ಕಾಂಗ್ರೆಸ್‌ನಲ್ಲಿ ಪ್ರಶಾಂತ್ ಕಿಶೋರ್ ಪಾತ್ರ ಏನು ಎಂದು ಇನ್ನೊಂದು ವಾರದಲ್ಲಿ ತಿಳಿಯಲಿದೆ ಎಂದು ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೇಳಿದ್ದಾರೆ. ಇದನ್ನೂ ಓದಿ: ಧಾರ್ಮಿಕ ಮೆರವಣಿಗೆಗೂ ಮುನ್ನ ಆಯೋಜಕರಿಂದ ಅಫಿಡವಿಟ್ ಕಡ್ಡಾಯ

    ಉತ್ತರ ಪ್ರದೇಶ, ಬಿಹಾರ, ಒಡಿಶಾದಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಹೋರಾಡಬೇಕು. ಪಶ್ಚಿಮ ಬಂಗಾಳ, ತಮಿಳುನಾಡು, ಮಹಾರಾಷ್ಟ್ರದಲ್ಲಿ ಮೈತ್ರಿ ಮಾಡಿಕೊಳ್ಳಬೇಕು ಎಂದು ಪ್ರಶಾಂತ್ ಕಿಶೋರ್ ಸಲಹೆ ನೀಡಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ 370 ಕ್ಷೇತ್ರಗಳ ಮೇಲೆ ಪ್ರಶಾಂತ್ ಕಿಶೋರ್ ಗಮನಹರಿಸಿದ್ದಾರೆ.

  • ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧೆ: ಹೆಚ್‍ಡಿಕೆ ಘೋಷಣೆ

    ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧೆ: ಹೆಚ್‍ಡಿಕೆ ಘೋಷಣೆ

    ರಾಮನಗರ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿಯನ್ನು ಮಂಡ್ಯದ ಲೋಕಸಭೆ ಕ್ಷೇತ್ರದಿಂದಲೇ ಕಣಕ್ಕಿಳಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ ಮಾಡಿದರು.

     

    ತಮ್ಮ ಮತ್ತು ನಿಖಿಲ್ ವಿರುದ್ಧ ಕೆಲವರು ನೀಡುತ್ತಿರುವ ಹೇಳಿಕೆಗಳ ಬಗ್ಗೆ ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಜನರು ಮುಂದಿನ ಚುನಾವಣೆಯಲ್ಲಿ ಉತ್ತರ ಕೊಡುತ್ತಾರೆ. ಕಳೆದ ಚುನಾವಣೆಯಲ್ಲಿ ನಮ್ಮ ವಿರುದ್ಧ ಕುತಂತ್ರದ ರಾಜಕಾರಣ ನಡೆಯಿತು. ಕಾಂಗ್ರೆಸ್, ಬಿಜೆಪಿ, ರೈತಸಂಘ ಒಂದಾಗಿದ್ದರು ಎಂದು ಕಿಡಿಕಾರಿದರು. ಇದೇ ವೇಳೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿಯನ್ನು ಮಂಡ್ಯದಿಂದಲೇ ಸ್ಪರ್ಧೆ ಮಾಡಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಗಂಡಸ್ತನ ಪದ ಬಳಕೆಗೆ ಹೆಚ್‌.ಡಿ.ಕುಮಾರಸ್ವಾಮಿ ವಿಷಾದ

    ಇತ್ತೀಚೆಗಷ್ಟೆ ಮಂಡ್ಯದ ಮದ್ದೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಅವರು, ಬೇರೆಯವರನ್ನು ದೂರುವ ಬದಲು ಸಂಸದರು ಆತ್ಮಾವಲೋಕನ ಮಾಡಿಕೊಳ್ಳಲಿ. ಸಂಸದರಾಗಿ ಜಿಲ್ಲೆಗೆ ಅವರ ಕೊಡುಗೆ ಏನು ಎಂದು ಪ್ರಶ್ನೆ ಮಾಡಿಕೊಳ್ಳಲಿ. ಮಂಡ್ಯದ ಶಾಸಕರು ಎರಡು ಮೂರು ಬಾರಿ ಆಯ್ಕೆ ಆಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: ನಿಮಗೆ ಗಂಡಸ್ತನ ಇದ್ದರೆ, ಏನು ಗೊತ್ತಿಲ್ಲದಂತೆ ಮೌನವಾಗಿರಬೇಡಿ: ಸಿಎಂಗೆ ಹೆಚ್‍ಡಿಕೆ ಸವಾಲ್

    ಅಭಿವೃದ್ಧಿ ಆಗಿಲ್ಲ ಅಂದರೆ, ಶಾಸಕರನ್ನು ಜನರು ಪ್ರಶ್ನೆ ಮಾಡುತ್ತಾರೆ. ಆದರೆ ಇವರನ್ನು ಪ್ರಶ್ನೆ ಮಾಡುವವರು ಯಾರು? ಪ್ರತಿ ಬಾರಿ ಕಾಲು ಕೆರೆದುಕೊಂಡು ಜಗಳ ಹುಟ್ಟುಹಾಕಿ. ಯಾರೋ ಏನೋ ಅಂದ್ಬಿಟ್ರು, ಯಾರೋ ಏನೋ ಅಂದ್ಬಿಟ್ರು ಅಂತ ಅನುಕಂಪ ಗಿಟ್ಟಿಸಲು ಆಗಲ್ಲ. 2024ರವರೆಗೂ ಅವರ ಅಧಿಕಾರ ಇದೆ. ಜನಗಳ ಜೊತೆ ನಿಂತು ಕೆಲಸ ಮಾಡಲಿ ಎಂದು ಸಂಸದೆ ಸುಮಲತಾ ವಿರುದ್ಧ ಆಕ್ರೋಶ ಹೊರಹಾಕಿದರು.

  • ಅಣ್ಣ-ತಮ್ಮಂದಿರೂ ಎಲ್ಲರೂ ಒಂದೇ ಎಂಬ ಮನಸ್ಥಿತಿಯಿಂದ ಹೊರಗೆ ಬನ್ನಿ: ಸತೀಶ್ ಜಾರಕಿಹೊಳಿ

    ಅಣ್ಣ-ತಮ್ಮಂದಿರೂ ಎಲ್ಲರೂ ಒಂದೇ ಎಂಬ ಮನಸ್ಥಿತಿಯಿಂದ ಹೊರಗೆ ಬನ್ನಿ: ಸತೀಶ್ ಜಾರಕಿಹೊಳಿ

    ಚಿಕ್ಕೋಡಿ: ಅಣ್ಣ ತಮ್ಮಂದಿರೂ ಎಲ್ಲರೂ ಒಂದೇ ಎಂಬ ಮನಸ್ಥಿತಿಯಿಂದ ಹೊರಗೆ ಬರಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಜನರಲ್ಲಿ ಮನವಿ ಮಾಡಿದರು.

    ರಾಯಭಾಗದಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ನನ್ನನ್ನು ಅಣ್ಣ-ತಮ್ಮಂದಿರು ಸೋಲಿಸಿದ್ದಾರೆ. ಅದಕ್ಕೆ ಎಲ್ಲರೂ ಅಣ್ಣ-ತಮ್ಮಂದಿರೂ ಒಂದೇ ಎಂಬ ಭಾವನೆಯಿಂದ ಹೊರ ಬನ್ನಿ ಎಂದು ಕೇಳಿಕೊಂಡರು. ರಮೇಶ್ ಮತ್ತು ಲಖನ್ ಜಾರಕಿಹೊಳಿ ಅವರನ್ನು ಗೆಲ್ಲಿಸುವುದು ನನ್ನ ಕನಸಿನಲ್ಲಿಯೂ ಸಹ ಇಲ್ಲ ಎಂದರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ 7, ಜೈಪುರದಲ್ಲಿ 9 ಜನರಿಗೆ ಓಮಿಕ್ರಾನ್- 21ಕ್ಕೆ ಏರಿದ ಕೇಸ್ 

    ಪಕ್ಷೇತರ ಅಭ್ಯರ್ಥಿಯ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ್ದಂತೆ ಲಖನ್ ಜಾರಕಿಹೊಳಿ ಜಾಗದಲ್ಲಿ ವಿವೇಕರಾವ್ ಪಾಟೀಲ್ ಸ್ಪರ್ಧೆ ಮಾಡಿದ್ದರೆ ಈ ಗೊಂದಲವೇ ಇರುತ್ತಿರಲಿಲ್ಲ. ಸಚಿವ ಗೋವಿಂದ ಕಾರಜೋಳ ಅವರು ಜನವರಿ 10ಕ್ಕೆ ಚುನಾವಣೆ ಎಂದು ತಿಳಿದುಕೊಂಡಿರಬೇಕು. ಇನ್ನು ಕೂಡ ಅವರು ಎಲ್ಲೂ ಸಹ ಪತ್ತೆಯಾಗಿಲ್ಲ. ಉಮೇಶ್ ಕತ್ತಿ, ಸವದಿ ಬೆಂಗಳೂರಿನಲ್ಲಿದ್ದಾರೆ. ಬಿಜೆಪಿಯಿಂದ ಇಬ್ಬರು ಸ್ಪರ್ಧೆ ಮಾಡಿದ್ದಾರೆ. ಒಬ್ಬರು ಎ ಟೀಮ್ ಇನ್ನೊಬ್ಬರು ಬಿ ಟೀಮ್. ಸದ್ಯ ಗೊಂದಲ ಮಾಡೋರೆಲ್ಲರೂ ಈಗ ಬಿಜೆಪಿಯಲ್ಲಿದ್ದಾರೆ ಎಂದು ವ್ಯಂಗ್ಯವಾಡಿದರು.

    ಲೋಕಸಭೆ ಚುನಾವಣೆಯಲ್ಲಿ ನಮ್ಮ ಪಕ್ಷವನ್ನು ಹೀನಾಯವಾಗಿ ಸೋಲಿಸುವಲ್ಲಿ ಅವರು ಯಶಸ್ವಿಯಾದರು. ಆದರೆ ಈ ಚುನಾವಣೆಯಲ್ಲಿ ನಾಲ್ಕು ಸಾವಿರ ಮತಗಳಿಂದ ನಾವು ಗೆಲುವು ಸಾಧಿಸುತ್ತೇವೆ. ಅಣ್ಣ ತಮ್ಮಂದಿರೂ ಎಲ್ಲರೂ ಒಂದೇ ಎಂಬ ಮನಸ್ಥಿತಿಯಿಂದ ಹೊರಗೆ ಬರಬೇಕು. ಕಳೆದ ಬಾರಿ ನನ್ನ ಅವರು ಸೋಲಿಸಿದ್ದಾರೆ. ಅದನ್ನು ಈಗ ನಾವು ಪಡೆದುಕೊಳ್ಳಬೇಕಾಗಿದೆ ಎಂದು ಪ್ರಚೋದಿಸಿದರು. ಇದನ್ನೂ ಓದಿ: ಜರತಾರಿ ಸೀರೆ, ಆಭರಣ ಧರಿಸಿ ರೈಲ್ವೇ ನಿಲ್ದಾಣದಲ್ಲಿ ಊಟ ಹಂಚಿದ ಮಹಿಳೆ

    ಗೋಕಾಕದಲ್ಲಿ ನಾನೇ ಏಜೆಂಟ್ ಆಗುತ್ತಿದ್ದೇನೆ. ಏಜೆಂಟ್ ಆಗದಿದ್ದರೆ ನೂರಕ್ಕೆ ನೂರು ವೋಟ್ ಲಖನ್ ಅವರಿಗೆ ಬೀಳುತ್ತವೆ. ಹೀಗಾಗಿ ನಾನು ಏಜೆಂಟ್ ಆಗುತ್ತಿದ್ದೇನೆ. ನನ್ನ ಮಕ್ಕಳು ಸಹ ಬೂತ್ ಏಜೆಂಟ್ ಗಳು ಆಗುತ್ತಿದ್ದಾರೆ. ಅಣ್ಣ-ತಮ್ಮಂದಿರೂ ಒಂದೇ ಎಂಬ ಮನಸ್ಥಿತಿಯಿಂದ ನೀವು ಹೊರ ಬನ್ನಿ. ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಗೆಲ್ಲಿಸಬೇಕೆಂದು ಮನವಿ ಮಾಡಿದರು.

  • ಮಂಡ್ಯ ಜನರು ಮುಗ್ಧರು ಎಲ್ಲರನ್ನೂ ನಂಬ್ತಾರೆ – ಮಗನ ಸೋಲನ್ನು ಮರೆಯದ ಹೆಚ್‍ಡಿಕೆ

    ಮಂಡ್ಯ ಜನರು ಮುಗ್ಧರು ಎಲ್ಲರನ್ನೂ ನಂಬ್ತಾರೆ – ಮಗನ ಸೋಲನ್ನು ಮರೆಯದ ಹೆಚ್‍ಡಿಕೆ

    ಮಂಡ್ಯ: ಜಿಲ್ಲೆಯ ಜನರು ಮುಗ್ಧರು, ಹಾಗಾಗಿ ಎಲ್ಲರನ್ನು ಬಹುಬೇಗನೆ ನಂಬುತ್ತಾರೆ ಎಂದು ಹೇಳುವ ಮೂಲಕ ಪುತ್ರ ನಿಖಿಲ್ ಸೋಲಿನ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿದ್ದಾರೆ.

    ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬ್ಯಾಡರಹಳ್ಳಿಯ ಕಾರ್ಯಕ್ರಮದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಭಾಗಿಯಾಗಿದ್ದರು. ಈ ವೇಳೆ ಜನರನ್ನು ಉದ್ದೇಶಿಸಿ ಮಾತನಾಡುವಾಗ ಲೋಕಸಭೆ ಚುನಾವಣೆಯಲ್ಲಿ ಮಗನ ಸೋಲಿನ ಬಗ್ಗೆ ಬೇಸರದ ನುಡಿಗಳನ್ನಾಡಿದ್ದಾರೆ. ಹಲವರ ಒತ್ತಾಯದ ಮೇರೆಗೆ ಮಗನನ್ನು ಚುನಾವಣೆಗೆ ನಿಲ್ಲಿಸಿದೆ. ಕಾರ್ಯಕರ್ತರು ತುಂಬಾ ಕೆಲಸ ಮಾಡಿದರು. ಈ ಹಿಂದೆ ಗೆದ್ದಾಗ ಐದು ಕಾಲು ಲಕ್ಷ ಮತ ನೀಡಿದ್ದ ಜನರು ಸೋತಾಗ ಐದು ಮುಕ್ಕಾಲು ಲಕ್ಷ ಮತ ನೀಡಿದರು.

    ಎಲ್ಲರೂ ಸೇರಿ ಮುಗಿಸಬೇಕು ಅಂತಾ ಮುಗಿಸಿದರು. ಆದ್ರೆ ನನಗೆ ಮಂಡ್ಯ ಜಿಲ್ಲೆಯ ಜನರ ಬಗ್ಗೆ ಬೇಸರವಿಲ್ಲ. ರಾಜಕಾರಣಕ್ಕೆ ಬಂದ ದಿನದಿಂದ ಮಂಡ್ಯ ಜನರ ಜೊತೆ ನನ್ನ ಒಡನಾಟವಿದೆ. ಜಿಲ್ಲೆಯ ಜನರು ತುಂಬಾ ಮುಗ್ಧರು, ಎಲ್ಲರನ್ನು ನಂಬುತ್ತಾರೆ. ದೇವೇಗೌಡರು ಮತ್ತು ನಮ್ಮನ್ನು ಬೆಳೆಸಿದ್ದೇ ಮಂಡ್ಯದ ಜನತೆ. ಕೆಲವರು ನಾವು ಬೇರೆ ಜಿಲ್ಲೆಯವರೆಂದು ಹೇಳ್ತಾರೆ. ಆ ಮಾತುಗಳನ್ನೆಲ್ಲ ನಂಬಬೇಡಿ ಎಂದರು.

    ನಾನು ರಾಜಕೀಯದಿಂದ ನಿವೃತ್ತಿಯಾಗಬೇಕು ಎಂದು ಕೊಂಡಿದ್ದೆ. ಜನರು ತೋರಿಸುವ ಪ್ರೀತಿ ನೋಡಿದಾಗ ನಾನು ಅನ್ಯಾಯ ಮಾಡುತ್ತಿದ್ದೇನೆ ಅನ್ನಿಸಿತು. ನನಗೆ ಈ ವ್ಯವಸ್ಥೆಯಿಂದ ಆದ ಬೇಸರದಿಂದ ಹೊರಗೆ ಹೋದರೆ ಜನರಿಗೆ ಅನ್ಯಾಯ ಮಾಡಿದ ಹಾಗೆ ಆಗುತ್ತೆ. ಈ ಕಾರಣಕ್ಕೆ ನಾನು ರಾಜಕೀಯದಲ್ಲಿ ಮುಂದುವರಿದಿದ್ದೇನೆ. ವೈಯುಕ್ತಿಕವಾಗಿ ರಾಜಕೀಯದಲ್ಲಿ ಮುಂದುವರಿಯುವ ಆಸೆ ಇಲ್ಲ ಎಂದು ಹೇಳಿದರು.

  • ಸಿದ್ದರಾಮಯ್ಯ, ಹೆಚ್‍ಡಿಡಿ ಇಬ್ಬರು ಬೆನ್ನಿಗೆ ಚೂರಿ ಹಾಕುವವರೇ: ವಿ.ಶ್ರೀನಿವಾಸ್ ಪ್ರಸಾದ್

    ಸಿದ್ದರಾಮಯ್ಯ, ಹೆಚ್‍ಡಿಡಿ ಇಬ್ಬರು ಬೆನ್ನಿಗೆ ಚೂರಿ ಹಾಕುವವರೇ: ವಿ.ಶ್ರೀನಿವಾಸ್ ಪ್ರಸಾದ್

    – ಸಿದ್ದರಾಮಯ್ಯ ಬೆನ್ನಿಗೆ ಚೂರಿ ಹಾಕಿಯೇ ಮೇಲೆ ಬಂದಿದ್ದು

    ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಪ್ರಧಾನಿ ದೇವೇಗೌಡ ಇಬ್ಬರು ಬೆನ್ನಿಗೆ ಚೂರಿ ಹಾಕುವವರೇ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ಮಾಡಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಬೆನ್ನಿಗೆ ಚೂರಿ ಹಾಕಿಯೇ ಮೇಲೆ ಬಂದಿದ್ದು. ದೇವೇಗೌಡರು ಸಹ ಬೆನ್ನಿಗೆ ಚೂರಿ ಹಾಕಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಾಯಿಗೆ ಬಂದಂತೆ ಅಪ್ಪನಾಣೆ ಇಟ್ಟುಕೊಂಡು ಮಾತನಾಡಿದರು. ಆದರೆ ಲೋಕಸಭೆಯಲ್ಲಿ ಭಾಯಿ, ಭಾಯಿ ಎಂದು ಅಕ್ಕಪಕ್ಕದಲ್ಲಿ ಕುಳಿತುಕೊಂಡರು ಎಂದು ವ್ಯಂಗ್ಯವಾಡಿದರು.

    ಕಳೆದ ಮೂರು ದಿನದಿಂದ ಒಬ್ಬರ ಮೇಲೋಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ಜನ ಎಲ್ಲವನ್ನು ನೋಡುತ್ತಿದ್ದಾರೆ. ಇವರನ್ನು ನೋಡಿ ಜನ ಅಸಹ್ಯ ಪಡುತ್ತಿದ್ದಾರೆ. ವಿರೋಧ ಪಕ್ಷದಲ್ಲಿದ್ದೀರಾ. ಈಗಲಾದರೂ ಗಂಭೀರವಾಗಿ ಇರುವುದನ್ನು ಕಲಿಯಿರಿ ಎಂದು ದೇವೇಗೌಡರು ಹಾಗೂ ಸಿದ್ದರಾಮಯ್ಯಗೆ ಹೆಸರನ್ನು ಹೇಳಿ ವಿ.ಶ್ರೀನಿವಾಸ್ ಪ್ರಸಾದ್ ಸಲಹೆ ನೀಡಿದರು.

    ಮಾನಸಿಕವಾಗಿ ಅವರು ಮೈತ್ರಿಯಾಗಿರಲಿಲ್ಲ. ದೈಹಿಕವಾಗಿ ಬಂದು ಒಟ್ಟಿಗೆ ಕುಳಿತುಕೊಳ್ಳುತ್ತಿದ್ದರು. ಸದನದಲ್ಲಿ ಪಾಯಿಂಟ್ ಆಫ್ ಆರ್ಡರ್ ಎತ್ತಿ ಆಗಿನ ಸಿಎಂ ಕುಮಾರಸ್ವಾಮಿಯನ್ನು ಸಮರ್ಥಿಸಿಕೊಂಡಿದ್ದು ಸಿದ್ದರಾಮಯ್ಯನೇ ಅಲ್ವಾ. ಈಗ ಏಕೆ ಅವರ ವಿರುದ್ಧ ಮಾತನಾಡುತ್ತಿದ್ದಾರೆ. ಇವರ ಹೇಳಿಕೆಗಳನ್ನು ನೋಡುತ್ತಿದ್ದರೆ ಜನರಿಗೆ ಅಸಹ್ಯವಾಗುತ್ತದೆ ಎಂದು ಕಿಡಿಕಾರಿದರು.

  • ಎಚ್‍ಡಿಕೆ ಒಬ್ಬ ಲಜ್ಜೆಗೆಟ್ಟ ಮಾಜಿ ಸಿಎಂ, ನನ್ನ ಫೋನ್ ಟ್ಯಾಪ್ ಆಗಿದೆ – ಕೆ.ಎನ್.ರಾಜಣ್ಣ

    ಎಚ್‍ಡಿಕೆ ಒಬ್ಬ ಲಜ್ಜೆಗೆಟ್ಟ ಮಾಜಿ ಸಿಎಂ, ನನ್ನ ಫೋನ್ ಟ್ಯಾಪ್ ಆಗಿದೆ – ಕೆ.ಎನ್.ರಾಜಣ್ಣ

    ತುಮಕೂರು: ನನ್ನದು ಮತ್ತು ನನ್ನ ಮಗ ರಾಜೇಂದ್ರನ ಫೋನ್ ಕೂಡ ಕದ್ದಾಲಿಕೆ ಆಗಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ.

    ಇಂದು ನಗದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ವೇಳೆ ನಮ್ಮ ಕುಟುಂಬದ ಫೋನ್ ಕೂಡ ಟ್ಯಾಪಿಂಗ್ ಆಗಿದೆ. ಟ್ಯಾಪಿಂಗ್ ವಿಚಾರ ನನಗೆ ಮೊದಲೇ ಗೊತ್ತಿತ್ತು. ಆದರೆ ಸೂಕ್ತ ದಾಖಲೆ ಇಲ್ಲದಿರುವ ಕಾರಣ ನಾನು ದೂರು ಕೊಟ್ಟಿರಲಿಲ್ಲ ಎಂದು ಹೇಳಿದ್ದಾರೆ.

    ಈ ಪ್ರಕರಣವನ್ನು ಸಿಬಿಐಗೆ ನೀಡಿರುವುದು ಸ್ವಾಗತಾರ್ಹ ನಡೆ. ಟೆಲಿಫೋನ್ ಕದ್ದಾಲಿಕೆ ಅಂತ್ಯ ಆಗಬೇಕಾದರೆ ಸಿಬಿಐ ತನಿಖೆ ಸೂಕ್ತವಾದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಟೆಲಿಫೋನ್ ಕದ್ದಾಲಿಕೆಯಿಂದ ಖಾಸಗಿತನಕ್ಕೆ ಧಕ್ಕೆ ಉಂಟಾಗುತ್ತದೆ. ಕುಮಾರಸ್ವಾಮಿ ಒಬ್ಬ ಲಜ್ಜೆಗೆಟ್ಟ ಮಾಜಿ ಮುಖ್ಯಮಂತ್ರಿ. ಅಂಥವರನ್ನು ಈ ದೇಶದಲ್ಲಿ ಮುಖ್ಯಮಂತ್ರಿಯಾಗಿ ಕಂಡಿದ್ದು ದುರ್ದೈವ. ಮೂರೂ ಬಿಟ್ಟವರು ಊರಿಗೆ ದೊಡ್ಡವರು ಆ ಮಟ್ಟದಲ್ಲಿ ಕುಮಾರಸ್ವಾಮಿ ಮಾತನಾಡುತ್ತಾರೆ ಎಂದು ಕಿಡಿಕಾರಿದರು.