Tag: ಲೋಕಾಯುಕ್ತ ಅಧಿಕಾರಿಗಳು

  • ಕೊಪ್ಪಳ | ಬೆಳ್ಳಂಬೆಳಗ್ಗೆ ನಗರಸಭೆ ಕಚೇರಿ ಸೇರಿ ಐದು ಕಡೆ `ಲೋಕಾ’ ದಾಳಿ

    ಕೊಪ್ಪಳ | ಬೆಳ್ಳಂಬೆಳಗ್ಗೆ ನಗರಸಭೆ ಕಚೇರಿ ಸೇರಿ ಐದು ಕಡೆ `ಲೋಕಾ’ ದಾಳಿ

    ಕೊಪ್ಪಳ: ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ನಗರಸಭೆ ಕಚೇರಿ ಸೇರಿ ಐದು ಕಡೆ ಲೋಕಾಯುಕ್ತ ಅಧಿಕಾರಿಗಳು (Lokayuktha Officers) ದಾಳಿ ನಡೆಸಿದ್ದಾರೆ.

    ಕೊಪ್ಪಳದ ನಗರಸಭೆ ಕಚೇರಿ, ನಗರಸಭೆ ಜೆಇ ಸೋಮಲಿಂಗಪ್ಪ, ಕಂದಾಯ ನಿರೀಕ್ಷಕ ಉಜ್ವಲ್, ಗುತ್ತಿಗೆದಾರರಾದ ಶಕೀಲ್ ಪಟೇಲ್, ಪ್ರವೀಣ ಕಂದಾರಿ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರದ ಆರೋಪ ಹಾಗೂ ವಿವಿಧ ದೂರಿನ ಹಿನ್ನೆಲೆ ದಾಳಿ ನಡೆಸಿರುವುದಾಗಿ ತಿಳಿದುಬಂದಿದೆ.ಇದನ್ನೂ ಓದಿ: ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ ಎಚ್ಚರಿಕೆ

    ಐದು ತಂಡಗಳನ್ನು ರಚಿಸಿ ಡಿವೈಎಸ್ಪಿ ವಸಂತಕುಮಾರ್, ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಇನ್ಸ್‌ಪೆಕ್ಟರ್‌ಗಳಾದ ವಿಜಯಕುಮಾರ್, ಚಂದ್ರಪ್ಪ, ನಾಗರತ್ನ, ಶೈಲಾ, ಅಮರೇಶ ಹುಬ್ಬಳ್ಳಿ ಸೇರಿ ಹಲವು ಸಿಬ್ಬಂದಿ ಭಾಗಿಯಾಗಿದ್ದಾರೆ.

  • ಬಾಗಲಕೋಟೆ, ಗದಗ ಜಿಲ್ಲೆಯ ವಿವಿಧೆಡೆ ಬೆಳ್ಳಂಬೆಳಿಗ್ಗೆ ʻಲೋಕಾʼ ರೇಡ್

    ಬಾಗಲಕೋಟೆ, ಗದಗ ಜಿಲ್ಲೆಯ ವಿವಿಧೆಡೆ ಬೆಳ್ಳಂಬೆಳಿಗ್ಗೆ ʻಲೋಕಾʼ ರೇಡ್

    ಬಾಗಲಕೋಟೆ/ಗದಗ: ಇಂದು ಬೆಳಿಗ್ಗೆ ಬಾಗಲಕೋಟೆ (Bagalkote) ಹಾಗೂ ಗದಗ (Gadag) ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು (Lokayuktha Officers) ದಾಳಿ ನಡೆಸಿದ್ದಾರೆ.

    ಧಾರವಾಡದ ಕರ್ನಾಟಕ ನೀರಾವರಿ ನಿಗಮದ ಮಲಪ್ರಭಾ ಯೋಜನೆಯ ಮುಖ್ಯ ಇಂಜಿನಿಯರ್ ಆಗಿರುವ ಅಶೋಕ್ ವಸಂದ್‌ ಅವರ ನಿವಾಸದ ಮೇಲೆ ದಾಳಿ ನಡೆದಿದೆ. ಜಮಖಂಡಿ ಹಾಗೂ ಖಜ್ಜಿಡೋಣಿ ಗ್ರಾಮದಲ್ಲಿರುವ ಅಶೋಕ್ ಅವರ ಎರಡು ನಿವಾಸದ ಮೇಲೆಯೂ ಲೋಕಾ ದಾಳಿ ನಡೆಸಿ, ಪ್ರಮುಖ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ: ಪಬ್‌ನಲ್ಲಿ ಸಹೋದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯ – ಟೆಕ್ಕಿ ಅರೆಸ್ಟ್‌

    ಗದಗ ನಗರ ಠಾಣಾ ಸಿಪಿಐ ಆಗಿರುವ ಡಿ.ಬಿ.ಪಾಟೀಲ್ ಅವರ ಮನೆಯ ಗದಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಶಾಕ್ ನೀಡಿದ್ದಾರೆ. ಆದಾಯ ಮೀರಿ ಆಸ್ತಿಗಳಿಕೆ ಆರೋಪದ ಹಿನ್ನೆಲೆ ದಾಳಿ ಮಾಡಲಾಗಿದೆ. ಡಿ.ಬಿ ಪಾಟೀಲ್‌ಗೆ ಸಂಬಂಧಿಸಿದ ಏಳು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಪರಿಶೀಲನೆ ನಡೆಸಿದ್ದಾರೆ. ಶಿವಾನಂದ ನಗರದ ಬಾಡಿಗೆ ಮನೆ, ಶಹರ ಪೊಲೀಸ್ ಠಾಣೆ ಕಚೇರಿ, ಬಾಗಲಕೋಟೆ, ಜಮಖಂಡಿ, ಕೆರೂರು ಮನೆಗಳ ಮೇಲೂ ದಾಳಿ ಮಾಡಲಾಗಿದೆ.

    ಇಂಚಿಂಚು ಪರಿಶೀಲನೆ ನಡೆಸಿದ ಅಧಿಕಾರಿಗಳು, ಶೌಚಾಲಯದೊಳಗೆ ಕುಳಿತಿದ್ದ ಸಿಪಿಐ ಮೊಬೈಲ್‌ನಲ್ಲಿ ಯಾರ ಜೊತೆಯಾದರೂ ಕದ್ದು ಮಾತಾಡುತ್ತಿದ್ದಾನಾ ಎಂದು ಬಾಗಿಲಿಗೆ ಕಿವಿಗೊಟ್ಟು ಕೇಳಿಸಿಕೊಂಡಿದ್ದಾರೆ. ಬಾಗಿಲು ತಟ್ಟಿ ಹೊರಗೆ ಬರುವಂತೆ ಸೂಚಿಸಿದ್ದ ಅಧಿಕಾರಿಗಳ ನಡೆಯನ್ನು ಕಂಡು ಡಿ.ಬಿ ಪಾಟೀಲ್ ಬೆಚ್ಚಿ ಬಿದ್ದಿದ್ದಾರೆ.

    ಲೋಕಾಯುಕ್ತ ಡಿವೈಎಸ್ಪಿ ಪುಷ್ಪಲತಾ, ಪಿ.ಎಸ್ ಪಾಟೀಲ, ಸಿಪಿಐ ಪರಶುರಾಮ್ ಕವಟಗಿ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ದಾಳಿ ವೇಳೆ ಅನೇಕ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಹಣ, ಬೆಳ್ಳಿ, ಚಿನ್ನಾಭರಣಗಳ ದಾಖಲೆಗಳ ಪರಿಶೀಲನೆ ಮುಂದುವರೆದಿದೆ.ಇದನ್ನೂ ಓದಿ: ದೇಶ ತೊರೆಯಿರಿ ಇಲ್ವೋ ಇಂದು ಸಾಯಲು ಸಿದ್ಧವಾಗಿರಿ – ಕರೆ ಮಾಡಿ ಇರಾನ್‌ ಕಮಾಂಡರ್‌ಗಳಿಗೆ ಮೊಸಾದ್‌ ಎಚ್ಚರಿಕೆ

  • NOC ನೀಡಲು 10 ಲಕ್ಷಕ್ಕೆ ಬೇಡಿಕೆ – ಬೆಂಗಳೂರಲ್ಲಿ ‘ಲೋಕಾ’ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

    NOC ನೀಡಲು 10 ಲಕ್ಷಕ್ಕೆ ಬೇಡಿಕೆ – ಬೆಂಗಳೂರಲ್ಲಿ ‘ಲೋಕಾ’ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

    ಬೆಂಗಳೂರು: NOC ನೀಡಲು 10 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದ ಇಬ್ಬರು ಭ್ರಷ್ಟ ಎಂಜಿನಿಯರ್‌ಗಳನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

    ಬಂಧಿತರನ್ನು ಹೆಬ್ಬಾಳ ಸಬ್ ಡಿವಿಷನ್‌ನ AEE ಮಹದೇವ್ ಹಾಗೂ ಆರ್‌ಎಮ್‌ವಿ ಬಿಬಿಎಂಪಿಯ AE ಆಗಿರುವ ಸುರೇಂದ್ರ ಎಂದು ಗುರುತಿಸಲಾಗಿದೆ.ಇದನ್ನೂ ಓದಿ:ಯಡಿಯೂರಪ್ಪ, ವಿಜಯೇಂದ್ರ, ಕುಮಾರಸ್ವಾಮಿ ಪ್ರಾಮಾಣಿಕರಾ: ಸಿದ್ದರಾಮಯ್ಯ ಪ್ರಶ್ನೆ

    ಇಬ್ಬರು ಎಂಜಿನಿಯರ್‌ಗಳು ಎನ್‌ಒಸಿ ನೀಡಲು 10 ಲಕ್ಷ ರೂ.ಗೆ ಬೇಟಿಕೆಯಿಟ್ಟಿದ್ದರು. ಈ ಕುರಿತು ಸಂಜಯ್ ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬಲೆ ಬೀಸಿದ್ದ ಲೋಕಾಯುಕ್ತ ಅಧಿಕಾರಿಗಳು ಎಇ ಸುರೇಂದ್ರನನ್ನು 5 ಲಕ್ಷ ರೂ. ಪಡೆಯುವುದಾಗ ಬಂಧಿಸಿದ್ದಾರೆ.

    ಸದ್ಯ ಇಬ್ಬರು ಬಂಧಿಸಿದ್ದು, ಲಂಚದ ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ.ಇದನ್ನೂ ಓದಿ: ಐಎಎಸ್ ಹುದ್ದೆಗೆ ನಕಲಿ ಪ್ರಮಾಣಪತ್ರ: ಪೂಜಾ ಖೇಡ್ಕರ್‌ಗೆ ನಿರೀಕ್ಷಣಾ ಜಾಮೀನು

  • ಮುಡಾದಲ್ಲಿ ಜಿಲ್ಲಾಧಿಕಾರಿ ಪಾತ್ರವಿಲ್ಲ, ಲೋಕಾಯುಕ್ತರಿಗೆ ಸ್ಪಷ್ಟನೆ ನೀಡಿದ್ದೇನೆ: ಜಿ.ಕುಮಾರ ನಾಯಕ್

    ಮುಡಾದಲ್ಲಿ ಜಿಲ್ಲಾಧಿಕಾರಿ ಪಾತ್ರವಿಲ್ಲ, ಲೋಕಾಯುಕ್ತರಿಗೆ ಸ್ಪಷ್ಟನೆ ನೀಡಿದ್ದೇನೆ: ಜಿ.ಕುಮಾರ ನಾಯಕ್

    ರಾಯಚೂರು: ಮುಡಾ ಪ್ರಕರಣ (MUDA Scam) ವಿಚಾರವಾಗಿ ಸುಮಾರು ಒಂದೂವರೆ ಗಂಟೆಗಳ ಕಾಲ ಲೋಕಾಯುಕ್ತ ಪೊಲೀಸರು ನನಗೆ ಪ್ರಶ್ನೆಗಳನ್ನು ಕೇಳಿದ್ದಾರೆ. ಇದರಲ್ಲಿ ಜಿಲ್ಲಾಧಿಕಾರಿಗಳ ಪಾತ್ರ ಏನೂ ಇಲ್ಲ ಎನ್ನುವುದನ್ನು ಸವಿವರವಾಗಿ ಹೇಳಿದ್ದೇನೆ ಎಂದು ರಾಯಚೂರು ಸಂಸದ ಜಿ.ಕುಮಾರ ನಾಯಕ್ (G Kumar Naik) ಹೇಳಿದ್ದಾರೆ.

    ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ಪೊಲೀಸರ ವಿಚಾರಣೆಯಲ್ಲಿ ಹಲವು ವಿಚಾರಗಳ ಬಗ್ಗೆ ಪ್ರಸ್ತಾಪ ಆಗಿದೆ. ರಾಯಚೂರು (Raichuru) ಜಿಲ್ಲಾಧಿಕಾರಿಯಾದ ಬಳಿಕ 2002 ರಿಂದ 2005ವರೆಗೆ ಮೈಸೂರು ಜಿಲ್ಲಾಧಿಕಾರಿ ಆಗಿದ್ದೆ. 2005ರಲ್ಲಿ ಭೂ ಪರಿವರ್ತನೆ ಮಾಡಿರುವ ವಿಚಾರದಲ್ಲಿ ದೂರು ನೀಡಲಾಗಿತ್ತು. ಜಿಲ್ಲಾಧಿಕಾರಿ ತಪ್ಪು ಮಾಡಿದ್ದಾರೆ ಎಂದು ದೂರು ನೀಡಲಾಗಿತ್ತು. ದೂರು ನೀಡುವವರಿಗೆ ಕಾನೂನಿನ ಆಯಾಮಗಳ ಮಾಹಿತಿ ಇದೆಯಾ? ಇಲ್ವಾ? ನನಗೆ ಗೊತ್ತಿಲ್ಲ. ಭೂ ಪರಿವರ್ತನೆ ಮಾಡಬೇಕಾದ ಎಲ್ಲಾ ಆಯಾಮಗಳನ್ನು ಪರಿಶೀಲಿಸಿ, ಕಾನೂನು ಪಾಲನೆ ಮಾಡಲಾಗಿದೆ ಯಾವುದೇ ತಪ್ಪು ಜರುಗಿಲ್ಲ ಎಂದರು.ಇದನ್ನೂ ಓದಿ: ಪಕ್ಷದ ಉಳಿವಿಗಾಗಿ ನಿಖಿಲ್ ಚನ್ನಪಟ್ಟಣದಿಂದ ಸ್ಪರ್ಧೆ ಮಾಡಬೇಕು: ಸಾ.ರಾ ಮಹೇಶ್

    1997-98ರಲ್ಲಿ ಭೂಸ್ವಾಧೀನಕ್ಕೆ ನೋಟಿಫಿಕೇಷನ್ ಆಗಿದೆ. ಆಗ ಭೂ ಸಂತ್ರಸ್ತರಿಗೆ ಬೆಲೆ ನಿಗದಿ ಮಾಡಲಾಗಿತ್ತು. ಅವಾರ್ಡ್ ಪಾಸ್ ಮಾಡಿದ 45 ದಿನದ ಒಳಗಾಗಿ ರೈತರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಡಿನೋಟಿಫೀಕೇಷನ್ ಆಗಿದ್ದರಿಂದ 1998ರಲ್ಲಿ ಭೂ ಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಲಾಗಿತ್ತು. ಲ್ಯಾಂಡ್ ರೆಕಾರ್ಡ್ ಅಪಡೇಟ್ ಮಾಡಲಿ, ಬಿಡಲಿ ಅದು ರೈತರಿಗೆ ಹೋಗುತ್ತದೆ. ನಂತರ ಜಮೀನು ಕೈ ಬದಲಾವಣೆಯಾಗಿದೆ. ಬಳಿಕ ಆರು ವರ್ಷದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಭೂ ಪರಿವರ್ತನೆಗೆ ಅರ್ಜಿ ಹಾಕುತ್ತಾರೆ. ಸಾಮಾನ್ಯವಾಗಿ ಇದು ಎಲ್ಲಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಪ್ರಕ್ರಿಯೆಯಾಗಿರುತ್ತದೆ. ಈ ಎಲ್ಲಾ ಪ್ರಕ್ರಿಯೆ ಮುಗಿಸಲು 120 ರಿಂದ 150 ದಿನ ತೆಗೆದುಕೊಳ್ಳಲಾಗಿದೆ. ಹೀಗಾಗಿ ಇದರಲ್ಲಿ ಯಾವುದೇ ಒತ್ತಡ ಇಲ್ಲ ಎಂಬುವುದು ಗೊತ್ತಾಗುತ್ತದೆ ಎಂದು ಹೇಳಿದರು.

    ಡಿನೋಟಿಫಿಕೆಷನ್ ಆಗಿ ಆರು ವರ್ಷದ ನಂತರ ಭೂ ಪರಿವರ್ತನೆಗೆ ಬಂದಿತ್ತು. ವಸತಿ ಉದ್ದೇಶಕ್ಕಾಗಿ ಎಂದು ಮುಡಾದಿಂದ ಮಾಹಿತಿ ಪಡೆದ ನಂತರ ಪ್ರಕ್ರಿಯೆ ಮುಂದುವರೆಸಿದ್ದೇವೆ. ಜಿಲ್ಲಾಧಿಕಾರಿಯಾಗಿ ನನಗೆ ಅದನ್ನು ತಡೆಹಿಡಿಯಲು ಯಾವುದೇ ಕಾರಣ ಇರಲಿಲ್ಲ. ತಹಶೀಲ್ದಾರ ಸ್ಥಳ ಪರಿಶೀಲನೆ ಮಾಡಿದ್ದಾರೆ. ನಾನು ಸ್ಥಳ ಪರಿಶೀಲನೆ ಮಾಡಿದಾಗ ಯಾವುದೇ ಕುರುಹು ಕಂಡು ಬಂದಿರುವುದಿಲ್ಲ ಎನ್ನುವುದು ಕಡತದಲ್ಲಿದೆ ಎಂದು ತಿಳಿಸಿದರು.

    ವಾಲ್ಮೀಕಿ ನಿಗಮದ ಹಗರಣದ ಹಣ ಬಳ್ಳಾರಿ, ರಾಯಚೂರು ಲೋಕಸಭಾ ಚುನಾವಣೆಗೆ ಬಳಕೆಯಾಗಿದೆ ಆರೋಪ ಕೇಳಿಬಂದಿತ್ತು. ಇದರಿಂದಾಗಿ ಸಂಸದ ಸ್ಥಾನಕ್ಕೆ ರಾಜೀನಾಮೆಗೆ ಒತ್ತಾಯಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಬಿಜೆಪಿ ನಿರಾಧಾರ ಆರೋಪ ಮಾಡುತ್ತಿದೆ. ಕೇಂದ್ರದ ಏಜನ್ಸಿ ಪರಿಶೀಲನೆ ಮಾಡುತ್ತಿದೆ. ವಾಲ್ಮೀಕಿ ನಿಗಮದ ಹಗರಣ ಬುಡಕಟ್ಟಿನ ಪ್ರಕರಣ. ಆದರೆ ಅದೇ ಬುಡಕಟ್ಟು ಸಮಾಜದವನಾದ ನನ್ನ ಮೇಲೆ ಈ ರೀತಿ ಆರೋಪ ಮಾಡುವುದು ಅಮಾನವೀಯ. ಇದು ಕೇಂದ್ರದ ತನಿಖೆಯಲ್ಲಿದೆ. ಹಾಗಾಗಿ ನಾನು ಹೆಚ್ಚು ಮಾತನಾಡುವುದಿಲ್ಲ ಎಂದರು.ಇದನ್ನೂ ಓದಿ: ಜಮ್ಮು-ಕಾಶ್ಮೀರ| ಕಾರ್ಮಿಕನ ಮೇಲೆ ಭಯೋತ್ಪಾದಕರ ಗುಂಡಿನ ದಾಳಿ

  • ಕೃಷಿ ಇಲಾಖೆ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ರೇಡ್ – 2 ಆಮೆಗಳು ಪತ್ತೆ

    ಕೃಷಿ ಇಲಾಖೆ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ರೇಡ್ – 2 ಆಮೆಗಳು ಪತ್ತೆ

    ಬಾಗಲಕೋಟೆ: ಇಲ್ಲಿನ ಕೃಷಿ ಇಲಾಖೆ ಅಧಿಕಾರಿಗಳ (Agriculture Department) ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆದಿದ್ದು, ಎರಡು ಸಾಕು ಆಮೆಗಳು (Tortoise) ಪತ್ತೆಯಾಗಿವೆ.

    ಬಾಗಲಕೋಟೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚೇತನಾ ಪಾಟೀಲ್ ಹಾಗೂ ಸಹಾಯಕ ನಿರ್ದೇಶಕ ಕೃಷ್ಣಾ ಶಿರೂರು ಅವರ ಮನೆಗಳ ಮೇಲೆ ಲೋಕಾಯುಕ್ತ (Karnataka Lokayukta) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ನಾನು ಜೈಲಿಗೆ ಹೋಗೋವಾಗ ದುಡ್ಡು ಹೊಡೆದು ಹೋದೆ ಅಂತ ಜೊತೆಯಲ್ಲಿದ್ದವರೇ ಹೇಳಿದ್ರು: ಡಿಕೆಶಿ

    ವಿದ್ಯಾಗಿರಿಯ ಅಕ್ಕಿಮರಡಿ ಬಡಾವಣೆಯಲ್ಲಿರುವ ಚೇತನಾ ಪಾಟೀಲ್ ಹಾಗೂ ವಿದ್ಯಾಗಿರಿಯ 18ನೇ ಕ್ರಾಸ್‌ನಲ್ಲಿರುವ ಕೃಷ್ಣಾ ಶಿರೂರು ಅವರ ಮನೆಗಳ ಮೇಲೆ ಲೋಕಾಯುಕ್ತ ಡಿಎಸ್ಪಿ ಪುಷ್ಪಲತಾ ನೇತೃತ್ವದ ತಂಡ ದಾಳಿ ನಡೆಸಿದೆ. ಇದನ್ನೂ ಓದಿ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌

    ಈ ವೇಳೆ ಚೇತನಾ ಪಾಟೀಲ್ ಅವರ ಮನೆಯಲ್ಲಿ 2 ಸಾಕು ಆಮೆಗಳು ಪತ್ತೆಯಾಗಿವೆ. ಆಮೆಗಳನ್ನ ಮನೆಯಲ್ಲಿ ಸಾಕಿದ್ದೇಕೆ ಎಂಬ ಕುತೂಹಲ ವ್ಯಕ್ತಪಡಿಸಿರುವ ಅಧಿಕಾರಿಗಳು ಅರಣ್ಯ ಇಲಾಖೆ ಅಧಿಕಾರಿಗಳನ್ನೂ ಕರೆಸಿ ಪರಿಶೀಲಿಸಲಾಗುತ್ತಿದೆ. ಇದೇ ವೇಳೆ ಆಸ್ತಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳು ಪತ್ತೆಯಾಗಿವೆ. ಬಾಗಲಕೋಟೆ ವಿದ್ಯಾಗಿರಿಯ ಅಕ್ಕಿಮರಡಿ ಬಡಾವಣೆಯಲ್ಲಿರುವ ಮನೆಯಲ್ಲಿ ಶೋಧ ಮುಂದುವರಿದಿದ್ದು, ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

    ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬುಧವಾರ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಬೆಂಗಳೂರಿನ ಕೆಆರ್‌ಪುರಂ ತಹಶೀಲ್ದಾರ್‌ ಅಜಿತ್‌ ರೈ ಮನೆ ಸೇರಿ 10 ಕಡೆ ಲೋಕಾಯುಕ್ತ ದಾಳಿ ನಡೆಸಿತು. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಮನೆ, ಕಚೇರಿ ಸೇರಿದಂತೆ 10 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮನೆಯಲ್ಲಿದ್ದ 40 ಲಕ್ಷ ರೂ. ನಗದು ಸೇರಿದಂತೆ ಅನೇಕ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನೂ ಹಲವೆಡೆ ದಾಳಿ ನಡೆದಿದ್ದು, ಅಧಿಕಾರಿಗಳಿಂದ ಶೋಧ ಮುಂದುವರಿದಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]