Tag: ಲೋಕಾಯುಕ್ತ ರೇಡ್‌

  • ಲಂಚದ ಆರೋಪ – ರಾಜ್ಯಾದ್ಯಂತ ವಿವಿಧೆಡೆ RTO ಚೆಕ್‌ಪೋಸ್ಟ್‌ಗಳ ಮೇಲೆ ಲೋಕಾಯುಕ್ತ ದಾಳಿ

    ಲಂಚದ ಆರೋಪ – ರಾಜ್ಯಾದ್ಯಂತ ವಿವಿಧೆಡೆ RTO ಚೆಕ್‌ಪೋಸ್ಟ್‌ಗಳ ಮೇಲೆ ಲೋಕಾಯುಕ್ತ ದಾಳಿ

    ಬೀದರ್‌: ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಆರ್‌ಟಿಒ ಚೆಕ್‌ಪೋಸ್ಟ್‌ಗಳ (RTO Checkpost) ಮೇಲೆ ದಾಳಿ ನಡೆಸಿದ್ದಾರೆ.

    ಚೆಕ್‌ ಪೋಸ್ಟ್‌ಗಳಲ್ಲಿ ಅಧಿಕಾರಿಗಳು ಲಂಚ ಪಡೆಯುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ವಿವಿಧೆಡೆ ದಾಳಿ (Lokayukta Raid) ನಡೆಸಿದ್ದಾರೆ. ಬೀದರ್‌, ಬಳ್ಳಾರಿ, ಕೋಲಾರ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ.

    ಬೀದರ್:
    ಸಾರಿಗೆ ವಾಹನಗಳ ಸವಾರರಿಂದ ಹಣ ವಸೂಲಿ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತಾ ಅಧಿಕಾರಿಗಳು ಬೀದರ್‌ನ ಆರ್‌ಟಿಒ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 9 ರಲ್ಲಿರುವ ಆರ್‌ಟಿಒ ಚೆಕ್‌ಪೋಸ್ಟ್‌ ಮೇಲೆ ದಾಳಿ ಮಾಡಿ ಲೋಕಾಯುಕ್ತಾ ಅಧಿಕಾರಿಗಳು ತೀವ್ರ ಪರಿಶೀಲನೆ ಮಾಡುತ್ತಿದ್ದಾರೆ.

    ವಾಹನ ಸವಾರದಿಂದ ಹಣ ವಸೂಲಿ ಹಾಗೂ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಲಂಚ ಪಡೆಯಲಾಗುತ್ತಿದೆ ಎಂಬ ಗಂಭೀರ ಆರೋಪ ಹಿನ್ನೆಲೆ ದಾಳಿ ಮಾಡಲಾಗಿದೆ. ಲೋಕಾಯುಕ್ತ ಎಸ್ಪಿ ಬಿ.ಕೆ ಉಮೇಶ್ ನೇತ್ರತ್ವದಲ್ಲಿ ನಾಲ್ಕು ಅಧಿಕಾರಿಗಳ ತಂಡದಿಂದ ದಾಳಿ ಮಾಡಿ ತೀವ್ರ ಪರಿಶೀಲನೆ ನಡೆಸಲಾಗುತ್ತಿದೆ.

    ಬಳ್ಳಾರಿ:
    ಇನ್ನೂ ಬಳ್ಳಾರಿ ತಾಲೂಕಿನ ಪಿಡಿ ಹಳ್ಳಿ ಸಮೀಪದ ಆರ್‌ಟಿಒ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಧ್ಯರಾತ್ರಿ 2 ಗಂಟೆಗೆ ದಾಳಿ ಮಾಡಿದ್ದು, ಚೆಕ್ ಪೋಸ್ಟ್‌ನಲ್ಲಿದ್ದ ಹೆಚ್ಚಿನ ಹಣವನ್ನು ವಶಪಡಿಸಿಕೊಂಡು ತಪಾಸಣೆ ಮುಂದುವರಿಸಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ದಾಳಿ ನಡೆದಿದ್ದು, ಲೋಕಾಯುಕ್ತ ಡಿವೈಎಸ್ಪಿ ವಸಂತಕುಮಾರ್, ರಫೀಕ್, ಸಂಗಮೇಶ್ ಸೇರಿದಂತೆ ಇತರ ಅಧಿಕಾರಿಗಳು ತಂಡದಲ್ಲಿದ್ದಾರೆ.

    ಕೋಲಾರ:
    ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಲ ಕ್ರಾಸ್ ಬಳಿ ಇರುವ ಚೆಕ್‌ಪೋಸ್ಟ್‌ ಮೇಲೂ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಕಳೆದ ಮೂರು ಗಂಟೆಯಿಂದಲೂ ತೀವ್ರ ತಪಾಸಣೆ ನಡೆಸುತ್ತಿದ್ದಾರೆ. ಜೊತೆಗೆ ಮಹತ್ವದ ದಾಖಲೆಗಳ ಪರಿಶೀಲನೆಯಲ್ಲಿ ಅಧಿಕಾರಿಗಳು ತೊಡಗಿದ್ದಾರೆ.

  • ತಹಶೀಲ್ದಾರ್ ಅಜಿತ್ ರೈ ರಾಯಚೂರಿನ ಸಿರಿವಾರಕ್ಕೆ ಎತ್ತಂಗಡಿ

    ತಹಶೀಲ್ದಾರ್ ಅಜಿತ್ ರೈ ರಾಯಚೂರಿನ ಸಿರಿವಾರಕ್ಕೆ ಎತ್ತಂಗಡಿ

    -ಗ್ರೇಡ್-1 ನಿಂದ ಗ್ರೇಡ್-2ಗೆ ಹಿಂಬಡ್ತಿ

    ರಾಯಚೂರು/ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಲೋಕಾಯುಕ್ತ ಪೊಲೀಸರಿಂದ (Lokayukta Police) ಬಂಧನಕ್ಕೊಳಗಾಗಿರುವ ತಹಶೀಲ್ದಾರ್ ಅಜಿತ್ ರೈ (Ajit Rai) ಅವರನ್ನ ಬೆಂಗಳೂರು ಕೆ.ಆರ್ ಪುರಂನಿಂದ ರಾಯಚೂರು ಸಿರಿವಾರ ತಾಲೂಕಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

    ಬೆಂಗಳೂರಿನ ಕೆ.ಆರ್ ಪುರಂನಲ್ಲಿ (KR Puram) ಗ್ರೇಡ್-1 ತಹಶೀಲ್ದಾರ್ ಆಗಿದ್ದ ಅಜಿತ್ ರೈ ಅವರಿಗೆ ಗ್ರೇಡ್-2 ಹಿಂಬಡ್ತಿ ನೀಡಿ ಸಿರಿವಾರಕ್ಕೆ (Raichur Siriwara) ವರ್ಗಾವಣೆ ಮಾಡಿ ರಾಜ್ಯಪಾಲರ ಸೂಚನೆ ಮೇರೆಗೆ ಕಂದಾಯ ಇಲಾಖೆಯ ಸರ್ಕಾರದ ಉಪಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಕೆ.ಆರ್‌ ಪುರಂ ತಹಶೀಲ್ದಾರ್‌ ಅಜಿತ್‌ ರೈ ಅಮಾನತು

    ಜೂನ್ 28ರಿಂದ ಅಮಾನತ್ತಿನಲ್ಲಿರುವ ಅಜಿತ್ ರೈ ಆದಾಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದ ಅಡಿ ಲೋಕಾಯುಕ್ತ ಪೊಲೀಸರ ದಾಳಿಗೆ ಒಳಗಾಗಿದ್ದಾರೆ. ಆದ್ರೆ ವಿಚಾರಣೆಯಲ್ಲಿರುವ ಅಧಿಕಾರಿಯನ್ನ ವರ್ಗಾವಣೆ ಮಾಡಿದ್ದಕ್ಕೆ ಸರ್ಕಾರದ ವಿರುದ್ಧ ಜನ ಆಕ್ರೋಶ ಹೊರಹಾಕಿದ್ದಾರೆ. ಹಿಂದುಳಿದ ನೂತನ ತಾಲೂಕು ಸಿರವಾರ ಅಭಿವೃದ್ಧಿಗೆ ದಕ್ಷ ಅಧಿಕಾರಿಯನ್ನ ನೇಮಿಸುವಂತೆ ಜನ ಆಗ್ರಹಿಸಿದ್ದಾರೆ.

    ಅನುಕಂಪದ ಆಧಾರದಲ್ಲಿ ಕಂದಾಯ ಇಲಾಖೆಯಲ್ಲಿ ಕೆಲಸ ಪಡೆದುಕೊಂಡಿದ್ದ ಅಜಿತ್ ರೈ ನಂತರ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಬಡ್ತಿ ಪಡೆದಿದ್ದರು. ಪ್ರಸ್ತುತ ಕೆ.ಆರ್. ಪುರಂನಲ್ಲಿ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಆದಾಯಕ್ಕಿಂತ 69% ಹೆಚ್ಚುವರಿ ಆಸ್ತಿ ಹೊಂದಿರುವ ಆರೋಪದಲ್ಲಿ ಅಜಿತ್ ರೈ ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನೂ ಓದಿ: ಮಲ್ಲಿಗೆ ಮುಡಿಯುವ ಮಹಿಳೆಯರಿಗೆ ಶಾಕ್ – ಹೂವುಗಳ ಬೆಲೆ ಈಗ ಇನ್ನಷ್ಟು ದುಬಾರಿ!

    ಭ್ರಷ್ಟಾಚಾರ ಆರೋಪದಡಿ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಅಜಿತ್ ರೈ ಮನೆ ಮೇಲೆ ಬುಧವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಸಹಕಾರನಗರದ ನಿವಾಸ ಸೇರಿ 12 ಕಡೆ ದಾಳಿ ಮಾಡಿ ಪರಿಶೀಲನೆ ಮಾಡಿದ್ದರು. ಪರಿಶೀಲನೆ ವೇಳೆ 40 ಲಕ್ಷ ರೂ. ನಗದು, ಕೋಟ್ಯಂತರ ಮೌಲ್ಯದ ಭೂ ದಾಖಲಾತಿ ಪತ್ರಗಳು, ದುಬಾರಿ ಬೆಲೆಯ ಕಾರು ಖರೀದಿಸಿದ ರಶೀದಿಗಳು, ದೇಶ-ವಿದೇಶ ಬ್ರ‍್ಯಾಂಡ್‌ನ ಮದ್ಯ ಪತ್ತೆಯಾಗಿತ್ತು. ಸತತ 30 ಗಂಟೆಗಳ ಪರಿಶೀಲನೆ ವೇಳೆ ಅಕ್ರಮ ಆಸ್ತಿ ಗಳಿಕೆ ಮಾಡಿರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅಜಿತ್ ರೈನನ್ನ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು.

    ಆರೋಪಿಯನ್ನು 7 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು. ಲೋಕಾಯುಕ್ತ ಪೊಲೀಸರು 10 ದಿನಗಳ ಕಸ್ಟಡಿಗೆ ಕೇಳಿದ್ದರು. ಆದರೆ ನ್ಯಾಯಾಲಯ 7 ದಿನ ಪೊಲೀಸ್ ಕಸ್ಟಡಿಗೆ ಅವಕಾಶ ನೀಡಿದೆ. ಅಜಿತ್ ರೈ ಪುತ್ತೂರಿನಲ್ಲೂ ಆಸ್ತಿ ಮಾಡಿದ್ದು, ಸ್ವತಃ ಊರಿಗೆ ಕರೆದುಕೊಂಡು ಹೋಗಿ ತನಿಖೆ ನಡೆಸಲು ಪೊಲೀಸರಿಗೆ ನ್ಯಾಯಾಲಯ ಅವಕಾಶ ನೀಡಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೆ.ಆರ್‌ ಪುರಂ ತಹಶೀಲ್ದಾರ್‌ ಅಜಿತ್‌ ರೈ ಅಮಾನತು

    ಕೆ.ಆರ್‌ ಪುರಂ ತಹಶೀಲ್ದಾರ್‌ ಅಜಿತ್‌ ರೈ ಅಮಾನತು

    ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಲೋಕಾಯುಕ್ತ ಪೊಲೀಸರ (Lokayukta Police) ವಶದಲ್ಲಿರುವ ಕೆ.ಆರ್‌. ಪುರಂ ತಹಶೀಲ್ದಾರ್‌ ಅಜಿತ್‌ ರೈ (Ajit Rai) ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

    ಅನುಕಂಪದ ಆಧಾರದಲ್ಲಿ ಕಂದಾಯ ಇಲಾಖೆಯಲ್ಲಿ ಕೆಲಸ ಪಡೆದುಕೊಂಡಿದ್ದ ಅಜಿತ್‌ ರೈ ನಂತರ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಬಡ್ತಿ ಪಡೆದಿದ್ದರು. ಪ್ರಸ್ತುತ ಕೆ.ಆರ್‌. ಪುರಂನಲ್ಲಿ ತಹಶೀಲ್ದಾರ್‌ (KR Puram Tahsildar) ಆಗಿ ಕಾರ್ಯನಿರ್ವಹಿಸುತ್ತಿದ್ದರು. ಆದಾಯಕ್ಕಿಂತ 69% ಹೆಚ್ಚುವರಿ ಆಸ್ತಿ ಹೊಂದಿರುವ ಆರೋಪದಲ್ಲಿ ಅಜಿತ್ ರೈ ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 

    ಭ್ರಷ್ಟಾಚಾರ ಆರೋಪದಡಿ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್‌ ಅಜಿತ್‌ ರೈ ಮನೆ ಮೇಲೆ ಬುಧವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಸಹಕಾರನಗರದ ನಿವಾಸ ಸೇರಿ 12 ಕಡೆ ದಾಳಿ ಮಾಡಿ ಪರಿಶೀಲನೆ ಮಾಡಿದ್ದರು. ಇದನ್ನೂ ಓದಿ: ಆನ್‍ಲೈನ್ ಶಾಪಿಂಗ್‍ನಲ್ಲಿ ಬೆಂಗಳೂರಿಗರೇ ಮುಂದು – ಸರಾಸರಿ ಖರೀದಿಯಲ್ಲಿ ಮುಂಬೈ ಫಸ್ಟ್

    ಪರಿಶೀಲನೆ ವೇಳೆ 40 ಲಕ್ಷ ರೂ. ನಗದು, ಕೋಟ್ಯಂತರ ಮೌಲ್ಯದ ಭೂ ದಾಖಲಾತಿ ಪತ್ರಗಳು, ದುಬಾರಿ ಬೆಲೆಯ ಕಾರು ಖರೀದಿಸಿದ ರಶೀದಿಗಳು, ದೇಶ-ವಿದೇಶಿ ಬ್ರ್ಯಾಂಡ್‌ನ ಮದ್ಯ ಪತ್ತೆಯಾಗಿತ್ತು. ಸತತ 30 ಗಂಟೆಗಳ ಪರಿಶೀಲನೆ ವೇಳೆ ಅಕ್ರಮ ಆಸ್ತಿ ಗಳಿಕೆ ಮಾಡಿರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅಜಿತ್ ರೈನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಇದನ್ನೂ ಓದಿ: ಹಿಂದೂಗಳ ಪವಿತ್ರ ‘ಅಮರನಾಥ ಯಾತ್ರೆ’ ಆರಂಭ

    ಆರೋಪಿಯನ್ನು 7 ದಿನಗಳ ಪೊಲೀಸ್‌ ಕಸ್ಟಡಿಗೆ ನೀಡಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು. ಲೋಕಾಯುಕ್ತ ಪೊಲೀಸರು 10 ದಿನಗಳ ಕಸ್ಟಡಿಗೆ ಕೇಳಿದ್ದರು. ಆದರೆ ನ್ಯಾಯಾಲಯ 7 ದಿನ ಪೊಲೀಸ್‌ ಕಸ್ಟಡಿಗೆ ಅವಕಾಶ ನೀಡಿದೆ. ಅಜಿತ್‌ ರೈ ಪುತ್ತೂರಿನಲ್ಲೂ ಆಸ್ತಿ ಮಾಡಿದ್ದು, ಸ್ವತಃ ಊರಿಗೆ ಕರೆದುಕೊಂಡು ಹೋಗಿ ತನಿಖೆ ನಡೆಸಲು ಪೊಲೀಸರಿಗೆ ನ್ಯಾಯಾಲಯ ಅವಕಾಶ ನೀಡಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]