Tag: ಲೋಕಾರ್ಪಣೆ

  • ಇಂದು ರೆಬೆಲ್ ಸ್ಟಾರ್ ಅಂಬರೀಶ್ ಸ್ಮಾರಕ ಲೋಕಾರ್ಪಣೆ

    ಇಂದು ರೆಬೆಲ್ ಸ್ಟಾರ್ ಅಂಬರೀಶ್ ಸ್ಮಾರಕ ಲೋಕಾರ್ಪಣೆ

    ಕನ್ನಡ ಸಿನಿಮಾ ರಂಗದ ಖ್ಯಾತ ನಟ, ರೆಬಲ್ ಸ್ಟಾರ್ ಅಂತಾನೇ ಫೇಮಸ್ ಆಗಿರುವ ಅಂಬರೀಶ್ (Ambarish) ಅವರ ಸ್ಮಾರಕವನ್ನು (memorial) ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai)  ಅವರು ಸಂಜೆ 6 ಗಂಟೆಗೆ ಲೋಕಾರ್ಪಣೆ ಮಾಡಲಿದ್ದಾರೆ. ಹಲವು ವರ್ಷಗಳ ಅಂಬರೀಶ್ ಅಭಿಮಾನಿಗಳ ಕನಸು ಇಂದು ನನಸಾಗುತ್ತಿದೆ.

    ಕೇವಲ ಸ್ಮಾರಕ ಮಾತ್ರವಲ್ಲ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಗೆ (Race Course Road) ಅಂಬರೀಶ್ ಅವರ ಹೆಸರನ್ನು ಇಡುವುದಾಗಿ ಈ ಹಿಂದೆ ಸಿಎಂ ಘೋಷಿಸಿದ್ದರು. ಅದರಂತೆ ಇಂದು ಸಂಜೆ 5 ಗಂಟೆಗೆ  ಶಿವಾಜಿನಗರ ಕ್ಷೇತ್ರಕ್ಕೆ ಒಳಪಡುವ ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಅವರ ಹೆಸರನ್ನು ನಾಮಕರಣ ಮಾಡಲಾಗುತ್ತಿದೆ. ಈ ಸಮಾರಂಭವನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರೇ ಉದ್ಘಾಟಿಸಲಿದ್ದಾರೆ. ಇದನ್ನೂ ಓದಿ: ಪಿಂಕ್ ಕಲರ್ ಡ್ರೆಸ್‌ನಲ್ಲಿ ದೀಪಿಕಾ ದಾಸ್ ಮಿಂಚಿಂಗ್

    ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಸ್ಮಾರಕ ತಲೆಯೆತ್ತಿದೆ. ವಿಶೇಷ ವಿನ್ಯಾಸದಲ್ಲಿ ಸ್ಮಾರಕವನ್ನು ನಿರ್ಮಾಣ ಮಾಡಲಾಗದೆ. ಅಸಂ‍ಖ್ಯಾತ ಅಭಿಮಾನಿಗಳ ಸಮ್ಮುಖದಲ್ಲಿ ನಡೆಯಲಿರುವ ಲೋಕಾರ್ಪಣೆ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ್, ತೋಟಗಾರಿಕಾ ಸಚಿವ ಮುನಿರತ್ನ, ಅಂಬರೀಶ್ ಪತ್ನಿ ಸುಮಲತಾ ಅಂಬರೀಶ್ (Sumalatha Ambarish), ಪುತ್ರ ಅಭಿಷೇಕ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

    ಡಾ.ರಾಜ್ ಕುಮಾರ್ ಸ್ಮಾರಕದ ಕೂಗಳತೆಯಲ್ಲಿಯೇ ಅಂಬರೀಶ್ ಸ್ಮಾರಕವಿದೆ. ಒಂದು ಕಡೆ ಡಾ.ರಾಜ್ ಕುಮಾರ್, ಪಾರ್ವತಮ್ಮ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಸಮಾಧಿ ಇದ್ದು, ಪಕ್ಕದಲ್ಲೇ ಅಂಬರೀಶ್ ಸ್ಮಾರಕ ತಲೆಯೆತ್ತಿದೆ.  ಅಲ್ಲದೇ ಕೆಲವೇ ತಿಂಗಳಲ್ಲಿ ಪುನೀತ್ ರಾಜ್ ಕುಮಾರ್ ಸ್ಮಾರಕಕ್ಕೂ ಸರಕಾರ ಮುಂದಾಗಲಿದೆಯಂತೆ. ಅಲ್ಲಿಗೇ ಪಕ್ಕಪಕ್ಕದಲ್ಲೇ ಮೂರು ಸ್ಮಾರಕಗಳು ತಲೆಯೆತ್ತಲಿವೆ.

  • ನಿತಿನ್ ಗಡ್ಕರಿಯನ್ನು ಹಾಡಿ ಹೊಗಳಿದ ಮಲ್ಲಿಕಾರ್ಜುನ ಖರ್ಗೆ

    ನಿತಿನ್ ಗಡ್ಕರಿಯನ್ನು ಹಾಡಿ ಹೊಗಳಿದ ಮಲ್ಲಿಕಾರ್ಜುನ ಖರ್ಗೆ

    ಧಾರವಾಡ: ನಾನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಹಳಷ್ಟು ಸಂತೋಷವಾಗಿ ಬಂದಿದ್ದೇನೆ. ಅವರಿಂದ ನಾನು ಯಾವುದೇ ರಾಜಕೀಯವಾಗಿ ಲಾಭವನ್ನು ನಿರೀಕ್ಷೆ ಮಾಡುತ್ತಿಲ್ಲ. ನಿತಿನ್ ಗಡ್ಕರಿ ಅಭಿವೃದ್ಧಿ ಪರ ಇರುವ ವ್ಯಕ್ತಿ ಎಂದು ಅವರನ್ನು ರಾಜ್ಯ ಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಡಿ ಹೊಗಳಿದ್ದಾರೆ.

    ಹೊಸ ರಸ್ತೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿತಿನ್ ಗಡ್ಕರಿ ಕರ್ನಾಟಕದಿಂದ ಯಾವುದೇ ಮನವಿಯನ್ನು ನೀಡಿದರು ಶೀಘ್ರವಾಗಿ ಜಾರಿ ಮಾಡತ್ತಾರೆ. ಅವರ ಕಾರ್ಯ ವೈಖರಿ ಮೆಚ್ಚಿ ಅಭಿನಂದನೆ ಸಲ್ಲಿಸಲು ಬಂದಿದ್ದೇನೆ. ಅವರು ಯಾವಾಗಲೂ ಅಭಿವೃದ್ಧಿ ಬಗ್ಗೆ ಮಾತನಾಡುತ್ತಾರೆ. ಆದರೆ ಬೇರೆಯವರು ಬರೀ ರಾಜಕೀಯ ಮಾಡುತ್ತಾರೆ ಎಂದರು. ಇದನ್ನೂ ಓದಿ: ಅಮೆರಿಕ ಮಾದರಿ ರಸ್ತೆ ಸಂಪರ್ಕ ಜಾಲ ಅಭಿವೃದ್ಧಿ: ನಿತಿನ್ ಗಡ್ಕರಿ ಭರವಸೆ

    ಅನೇಕ ಮಂತ್ರಿಗಳು ಅವರ ಕ್ಷೇತ್ರಕ್ಕೆ ತೆರಳಿದರು ಗೌರವ ಸೀಗುತ್ತಿಲ್ಲ. ಗಡ್ಕರಿ ಅವರು ಬಹಳಷ್ಟು ಯೋಜನೆ ಹಾಕಿಕೊಂಡು ಕೆಲಸ ಮಾಡುತ್ತಿದ್ದರು ಆದರೆ ಇತ್ತಿಚೆಗೆ ಅವರ ಯೋಜನೆಯಲ್ಲಿ ಯಾಕೋ ತಡವಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ವಿದ್ಯುತ್ ಪೂರೈಕೆ ಉಚಿತವಲ್ಲ, ಬಿಲ್ ಪಾವತಿಸದಿದ್ದರೆ ಕರೆಂಟ್ ಕಟ್ : ನಿತಿನ್ ರಾವತ್

    ನಿತಿನ್ ಗಡ್ಕರಿ ಅವರಿಗೆ ಹಣ ಎಲ್ಲಿಂದ ಬರುತ್ತೆ ಹೇಗೆ ಬರುತ್ತೆ ಅದನ್ನು ಹೇಗೆ ಉಪಯೋಗ ಮಾಡಬೇಕು ಅಂತ ಬಹಳಷ್ಟು ಚೆನ್ನಾಗಿ ಗೊತ್ತು. ಅವರಿಗೆ ನಾನು ದೆಹಲಿಯಲ್ಲಿದ್ದಾಗ ಕೆಲವು ಪ್ರಸ್ತಾವನೆಗಳನ್ನಿಟ್ಟಿದೆ. ಅವರು ನಮ್ಮ ಪಕ್ಷ ಕಚೇರಿಗೆ ಬಂದು ನನ್ನ ಪತ್ರಗಳು ತೆಗೆದುಕೊಂಡು ಹೋಗಿ ಎಲ್ಲಾ ಬೇಡಿಕೆಗೆ ಸ್ಪಂದನೆ ಮಾಡಿದರು. ಇದಕ್ಕಾಗಿ ಅವರಿಗೆ ಧನ್ಯವಾದಗಳನ್ನು ಅರ್ಪಿಸುವ ನಿಟ್ಟಿನಲ್ಲಿ ಇಲ್ಲಿಗೆ ಬಂದಿದ್ದೇನೆ ಎಂದರು.

  • ಕೆ.ಸಿ.ವ್ಯಾಲಿ ಯೋಜನೆಯ ಮೂಲಕ ಬಂತು ಮೊದಲ ನೀರು- ಕುಣಿದು ಕುಪ್ಪಳಿಸಿದ ಕೋಲಾರದ ಮಕ್ಕಳು

    ಕೆ.ಸಿ.ವ್ಯಾಲಿ ಯೋಜನೆಯ ಮೂಲಕ ಬಂತು ಮೊದಲ ನೀರು- ಕುಣಿದು ಕುಪ್ಪಳಿಸಿದ ಕೋಲಾರದ ಮಕ್ಕಳು

    ಕೋಲಾರ: ಕೋರಮಂಗಲ ಚೆಲ್ಲಘಟ್ಟ (ಕೆ.ಸಿ.ವ್ಯಾಲಿ) ಏತ ನೀರಾವರಿ ಯೋಜನೆ ಅಡಿ ಕೋಲಾರ ಜಿಲ್ಲೆಯ ನರಸಾಪುರದ ಗ್ರಾಮಕ್ಕೆ ಮೊದಲ ಬಾರಿಗೆ ನೀರು ಬಂದಿದೆ.

    ತಮ್ಮ ಗ್ರಾಮದ ಕೆರೆಗೆ ಕೊನೆಗೂ ನೀರು ಬಂದ ಹಿನ್ನೆಲೆಯಲ್ಲಿ ನರಸಾಪುರ ಹೋಬಳಿಯ ಲಕ್ಷ್ಮೀಪುರ ಮಕ್ಕಳು ಕುಪ್ಪಳಿಸಿದ್ದಾರೆ. ಜೂನ್ 7 ರಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೆ.ಸಿ.ವ್ಯಾಲಿ ನೀರಾವರಿ ಯೋಜನೆ ಲೋಕಾರ್ಪಣೆ ಮಾಡಲಿದ್ದು, ಈ ಹಿನ್ನೆಯಲ್ಲಿ ಲಕ್ಷ್ಮೀಪುರ ಕೆರೆಗೆ ನೀರು ಹರಿಸಲಾಗುತ್ತಿದೆ. ಮೊದಲ ಬಾರಿ ಕೊಳವೆ ಮೂಲಕ ನೀರು ಬರುತ್ತಿರುವುದನ್ನು ಗ್ರಾಮಸ್ಥರು ಹಾಗೂ ಮಕ್ಕಳು ಕುತೂಹಲದಿಂದ ವಿಕ್ಷೀಸಿದರು.

    2016 ರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕೆ.ಸಿ.ವ್ಯಾಲಿ ನೀರಾವರಿ ಯೋಜನೆಗೆ ಚಾಲನೆ ನೀಡಿದ್ದರು. 12 ಸಾವಿರ ಕೋಟಿ ವೆಚ್ಚದಲ್ಲಿ ಜಿಲ್ಲೆಯ 126 ಕೆರೆಗಳಿಗೆ ನೀರು ಹರಿಸುವ ಯೋಜನೆಯ ಉದ್ದೇಶವಾಗಿದೆ. ಸ್ವಾತಂತ್ರ್ಯ ನಂತರ ಬಯಲು ಸೀಮೆ ಕೋಲಾರಕ್ಕೆ ಸಿಕ್ಕ ಮೊದಲ ನೀರಾವರಿ ಯೋಜನೆ ಇದಾಗಿದೆ.

  • ದಾವಣಗೆರೆಯಲ್ಲಿ ದೇಶದ ಅತ್ಯಂತ ದೊಡ್ಡ ಗಾಜಿನ ಅರಮನೆ ಇಂದು ಲೋಕಾರ್ಪಣೆ

    ದಾವಣಗೆರೆಯಲ್ಲಿ ದೇಶದ ಅತ್ಯಂತ ದೊಡ್ಡ ಗಾಜಿನ ಅರಮನೆ ಇಂದು ಲೋಕಾರ್ಪಣೆ

    ದಾವಣಗೆರೆ: ದೇಶದ ಅತ್ಯಂತ ದೊಡ್ಡ ಗಾಜಿನ ಅರಮನೆ ಲೋಕಾರ್ಪಣೆಗೆ ಸಿದ್ಧಗೊಂಡಿದೆ. ಸ್ವರ್ಗವನ್ನೇ ಧರೆಗಿಳಿಸುವ ಗಾಜಿನ ಅರಮನೆಯನ್ನ ಸಿಎಂ ಸಿದ್ದರಾಮಯ್ಯ ಇಂದು ಅನಾವರಣಗೊಳಿಸಲಿದ್ದಾರೆ.

    ಕೆರೆಯ ದಡದಲ್ಲಿ ಸುಂದರವಾಗಿ ಕಾಣುತ್ತಿರುವ ಗಾಜಿನ ಮನೆ, ಲಾಲ್ ಬಾಗ್ ನಲ್ಲಿರುವ ಗ್ಲಾಸ್ ಹೌಸ್ ಅನ್ನೇ ನಾಚಿಸುವಂತೆ ರೆಡಿಯಾಗುತ್ತಿರುವ ಗಾಜಿನ ಸುಂದರಿ. ಇಡೀ ದೇಶಕ್ಕೆ ದೊಡ್ಡದು ಮತ್ತು ವಿಶಿಷ್ಟ ಎನ್ನಬಹುದಾದ ಲಕ್ಷಣಗಳನ್ನ ಈ ಗಾಜಿನ ಅರಮನೆ ಹೊಂದಿದೆ. ಇದು ನಿರ್ಮಾಣವಾಗಿರೋದು ಮಧ್ಯ ಕರ್ನಾಟಕದ ದಾವಣಗೆರೆಯಲ್ಲಿ. ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕುಂದುವಾಡ ಕೆರೆ ಬಳಿ 108 ಮೀಟರ್ ಉದ್ದ, 68 ಮೀಟರ್ ಅಗಲ, 18 ಮೀಟರ್ ಎತ್ತರದಲ್ಲಿ ಗಾಜಿನ ಅರಮನೆ ನಿರ್ಮಾಣವಾಗಿದೆ.

    2014-15 ನೇ ಸಾಲಿನಲ್ಲಿ ಶಾಮನೂರು ಶಿವಶಂಕರಪ್ಪ ಸಚಿವರಾಗಿದ್ದಾಗ 5 ಕೋಟಿ ರೂ. ವೆಚ್ಚದಲ್ಲಿ ಆರಂಭವಾದ ಕಾಮಗಾರಿ ಈಗ ಅಂದಾಜು 30 ಕೋಟಿ ರೂಪಾಯಿಗೆ ಬಂದು ತಲುಪಿದೆ. ಇದು ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಗ್ಲಾಸ್ ಹೌಸ್ ಗಿಂತ ದೊಡ್ಡದಾಗಿದೆ. ಅಲ್ಲದೆ ಇಡೀ ದೇಶದಲ್ಲೇ ಇದು ದೊಡ್ಡ ಅರಮನೆ ಎನ್ನಬಹುದಾಗಿದೆ.

    ಗಾಜಿನ ಮನೆಗೆ 13.35 ರೂ. ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. 1.50 ಕೋಟಿ ರೂ. ವೆಚ್ಚದಲ್ಲಿ ಗ್ರಾನೈಟ್, 1.99 ಕೋಟಿ ರೂ. ವೆಚ್ಚದಲ್ಲಿ ಕಾಂಪೌಂಡ್, 1.08 ಕೋಟಿ ರೂ. ವೆಚ್ಚದಲ್ಲಿ ತೋಟಗಾರಿಕೆ ಮಾಹಿತಿ ಕೇಂದ್ರ, ರಸ್ತೆ ನಿರ್ಮಾಣ, ಸುತ್ತಮುತ್ತ ವಿದೇಶಿ ಗಿಡಗಳನ್ನ ಬೆಳೆಸುವ ಜೊತೆ ಸುಂದರವಾದ ಉದ್ಯಾನವನ ನಿರ್ಮಾಣದ ಗುರಿ ಹೊಂದಲಾಗಿದೆ. ಇಂತಹ ಸುಂದರ ಸ್ಥಳವನ್ನ ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದಾರೆ.

    ಒಟ್ಟಾರೆ ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾದ ದಾವಣಗೆರೆಗೆ ಈ ಗಾಜಿನ ಅರಮನೆ ಮತ್ತೊಂದು ಗರಿಯನ್ನ ತಂದುಕೊಡಲಿದೆ. ಈ ಸುಂದರವಾದ ಅರಮನೆ ದೇಶ-ವಿದೇಶಿಗರನ್ನ ದಾವಣಗೆರೆಯತ್ತ ಸೆಳೆಯುವ ಜೊತೆಗೆ ಜಿಲ್ಲೆಯ ಹಿರಿಮೆಯನ್ನೂ ಹೆಚ್ಚಿಸಲಿದೆ.