ರಜನಿಕಾಂತ್ (Rajinikanth) ನಟನೆಯ 171ನೇ ಸಿನಿಮಾದ ಫಸ್ಟ್ ಲುಕ್ (First Look) ರಿಲೀಸ್ ಆಗಿದೆ. ಚಿತ್ರದ ನಿರ್ದೇಶಕ ಲೋಕೇಶ್ ಕನಕರಾಜ್ (Lokesh Kanakaraj) ಅವರೇ ತಮ್ಮ ಸೋಷಿಯಲ್ ಮೀಡಿಯಾದ ಪೇಜ್ ನಲ್ಲಿ ಫಸ್ಟ್ ಲುಕ್ ಅನ್ನು ಪೋಸ್ಟ್ ಮಾಡಿದ್ದಾರೆ. ಬಂಗಾರದ ವಾಚ್ ಅನ್ನು ಬೇಡಿ ಮಾಡಿಕೊಂಡು ಸಖತ್ ಲುಕ್ ನಲ್ಲಿ ರಜನಿ ಕಾಣಿಸಿಕೊಂಡಿದ್ದಾರೆ. ತಲೈವಾ ಅವತಾರ ಕಂಡು ಫ್ಯಾನ್ಸ್ ಕುಣಿದಿದ್ಧಾರೆ.

ಈ ಸಿನಿಮಾ ಕುರಿತಂತೆ ಭಾರೀ ಭಾರೀ ಸುದ್ದಿಗಳು ಹೊರ ಬರುತ್ತಿವೆ. ಅದರಲ್ಲೂ ತಾರಾಗಣದ ಕುರಿತಂತೆ ರೋಚಕ ವಿಷಯಗಳು ಕೇಳುತ್ತಿವೆ. ಅವುಗಳು ನಿಜವೋ ಸುಳ್ಳೋ ಗೊತ್ತಿಲ್ಲ. ಒಟ್ಟಿನಲ್ಲಿ ಥ್ರಿಲ್ ಅನುಭವಿಸುತ್ತಿದ್ದಾರೆ ರಜನಿ ಫ್ಯಾನ್ಸ್. ಇದೀಗ ಮತ್ತೊಂದು ಹೊಸ ಸುದ್ದಿ ಹರಿದಾಡುತ್ತಿದ್ದು ರಜನಿ ಜೊತೆ ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟ್ಟಿ (Mammootty) ಕೂಡ ಪಾತ್ರ ಮಾಡಲಿದ್ದಾರೆ.

‘ಜೈಲರ್’ (Jailer) ಸಿನಿಮಾದ ಭರ್ಜರಿ ಸಕ್ಸಸ್ ನಂತರ ರಜನಿಕಾಂತ್ ಸಿನಿಮಾ ಆಯ್ಕೆಯಲ್ಲಿ ಮತ್ತಷ್ಟು ಚ್ಯುಸಿಯಾಗಿದ್ದಾರೆ. ಹೀಗಿರುವಾಗ ತಮ್ಮ 171ನೇ ಚಿತ್ರಕ್ಕೆ ಲೋಕೇಶ್ ಕನಗರಾಜ್ ಜೊತೆ ಕೈಜೋಡಿಸಿದ್ದಾರೆ. ತಲೈವಾ ಮುಂದೆ ಅಬ್ಬರಿಸಲು ನಟ ರಾಘವ್ ಲಾರೆನ್ಸ್ ಕೂಡ ಸಜ್ಜಾಗಿದ್ದಾರೆ.

ರಜನಿಕಾಂತ್ ಅವರ 171ನೇ ಚಿತ್ರದಲ್ಲಿ ವಿಲನ್‌ಗೂ ಕೂಡ ತೂಕವಾಗಿರುವಂತಹ ಪಾತ್ರವಿದ್ದು, ತಲೈವಾ ಮುಂದೆ ಅಬ್ಬರಿಸೋಕೆ ರಾಘವ್ ಸೂಕ್ತ ಎಂದೇನಿಸಿ ನಿರ್ದೇಶಕರು ಆಯ್ಕೆ ಮಾಡಿದ್ದಾರೆ. ಹಾಗಾಗಿ ರಾಘವ್ ವಿಶೇಷ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುತ್ತಿವೆ ಮೂಲಗಳು.
ತಲೈವಾ ನಟಿಸಿದ್ದ ಚಂದ್ರಮುಖಿ ಸಿನಿಮಾದ ಮುಂದಿನ ಭಾಗ ಚಂದ್ರಮುಖಿ 2 ಸಿನಿಮಾದಲ್ಲಿ ರಾಘವ್ ಲಾರೆನ್ಸ್ (Raghava Lawrence) ನಾಯಕನಾಗಿ ನಟಿಸಿದ್ದರು. ಮೊದಲ ಚಂದ್ರಮುಖಿ ಸಿನಿಮಾದಲ್ಲಿ ರಜನೀಕಾಂತ್ ನಿರ್ವಹಿಸಿದ್ದ ಪಾತ್ರವನ್ನೇ ರಾಘವ್ ನಿರ್ವಹಿಸಿದ್ದರು. ರಜನಿಕಾಂತ್ 171ನೇ ಸಿನಿಮಾ, ಲೋಕೇಶ್ ಕನಗರಾಜ್ ಅವರ 6ನೇ ಸಿನಿಮಾ ಆಗಲಿದೆ. ರಜನೀಕಾಂತ್‌ಗೆ ನಿರ್ದೇಶಿಸಲಿರುವ ಮೊದಲ ಸಿನಿಮಾ ಇದಾಗಿದ್ದು, ರಾಘವ್ ಲಾರೆನ್ಸ್-ತಲೈವಾ ಮೊದಲ ಬಾರಿಗೆ ಜೊತೆಯಾಗಿ ನಟಿಸಲಿದ್ದಾರೆ.


ಕಮಲ್ ಹಾಸನ್ (Kamal Haasan) ನಟನೆಯ ‘ವಿಕ್ರಮ್’ ಚಿತ್ರಕ್ಕೆ ಲೋಕೇಶ್ ನಿರ್ದೇಶನ ಮಾಡುವ ಮೂಲಕ ಸೈ ಎನಿಸಿಕೊಂಡಿದ್ದರು. ಈ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಕೋಟಿ ಕೋಟಿ ಲೂಟಿ ಮಾಡಿತ್ತು. ಹಿಟ್ ಲಿಸ್ಟ್‌ಗೆ ವಿಕ್ರಮ್ ಸಿನಿಮಾ ಸೇರಿತ್ತು. ಈ ಚಿತ್ರಕ್ಕೆ ಕಮಲ್ ಹಾಸನ್ ನಿರ್ಮಾಣ ಮಾಡಿದ್ದರು. ಇದನ್ನೂ ಓದಿ:






ಲೋಕೇಶ್ ಕನಕರಾಜ್ ಮಾಡಿದ್ದು ಕೆಲವೇ ಸಿನಿಮಾ. ಅಷ್ಟರಲ್ಲಿ ಇಡೀ ದೇಶದ ತುಂಬಾ ಹೆಸರು ಮಾಡಿದ್ದಾರೆ. ಇವರ ಸಿನಿಮ್ಯಾಟಿಕ್ ಯುನಿವರ್ಸ್ ಕಥಾ ಹಂದರಕ್ಕೆ ಎಲ್ಲರೂ ಬೆಚ್ಚಿಬಿದ್ದಿದ್ದಾರೆ. ‘ವಿಕ್ರಮ್’ (Vikram) ಸಿನಿಮಾದಲ್ಲಿ ಖೈದಿ ಪಾತ್ರ ಕಾಣಿಸಿದ್ದು ಅದಕ್ಕೆ ಸಾಕ್ಷಿ. ಇದೀಗ ಪ್ರಭಾಸ್- ಲೋಕೇಶ್ ಸಿನಿಮಾ ಮಾಡೋದು ಖಚಿತವಾಗಿದೆ. ಹಾಗಿದ್ದರೆ ಇದೂ ಸಿನಿಮ್ಯಾಟಿಕ್ ಯುನಿವರ್ಸ್ ಕಥಾ ಹಂದರ ಹೊಂದಿರುತ್ತದಾ ಅಥವಾ ಕೇವಲ ಪ್ರಭಾಸ್ ಸಿನಿಮಾ ಮಾತ್ರವೇ ಆಗಿರುತ್ತದಾ? ಅನುಮಾನಕ್ಕೆ ಉತ್ತರ ಕೊಟ್ಟಿದ್ದಾರೆ ಲೋಕೇಶ್.
ಪ್ರಭಾಸ್ (Prabhas) ಸಿನಿಮಾ ನನ್ನ ಸಿನಿಮ್ಯಾಟಿಕ್ ಯುನಿವರ್ಸ್ ಕಥಾ ಹಂದರ ಹೊಂದಿರುವುದಿಲ್ಲ. ಇದು ಕೇವಲ ಪ್ರಭಾಸ್ ಸಿನಿಮಾ ಮಾತ್ರವೇ ಆಗಿರುತ್ತದೆ. ಹೀಗಾಗಿ ಬೇರೊಂದು ಆ್ಯಕ್ಷನ್ ಡ್ರಾಮಾ ಕತೆ ನೀವು ನೋಡಲಿದ್ದೀರಿ ಎಂದಿದ್ದಾರೆ. ಇದನ್ನೂ ಓದಿ:












