Tag: ಲೋಕ ಅದಾಲತ್

  • ರಾಜ್ಯಾದ್ಯಂತ ಮಾ.8 ರಂದು ರಾಷ್ಟ್ರೀಯ ಲೋಕ-ಅದಾಲತ್

    ರಾಜ್ಯಾದ್ಯಂತ ಮಾ.8 ರಂದು ರಾಷ್ಟ್ರೀಯ ಲೋಕ-ಅದಾಲತ್

    ಮಂಡ್ಯ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ರಾಜ್ಯಾದ್ಯಂತ ಮಾ. 08ರಂದು ರಾಷ್ಟ್ರೀಯ ಲೋಕ-ಅದಾಲತ್ (Lok Adalat) ನಡೆಯಲಿದೆ.

    ಈ ಹಿನ್ನೆಲೆಯಲ್ಲಿ ಮಂಡ್ಯ (Mandya) ಜಿಲ್ಲೆಯ 7 ತಾಲೂಕುಗಳಲ್ಲಿಯೂ ಸಹ ಲೋಕ-ಅದಾಲತ್ ಮುಖಾಂತರ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಸಲುವಾಗಿ ಪೂರ್ವಭಾವಿ ಬೈಠಕ್‌ಗಳನ್ನು ನಡೆಸಲಾಗುತ್ತಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಆನಂದ್ ಎಂ ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗೋದಲ್ಲಿ ನಿಗೂಢ `ಅಳುವ ರೋಗ’ಕ್ಕೆ 50ಕ್ಕೂ ಹೆಚ್ಚು ಮಂದಿ ಬಲಿ – 400 ಮಂದಿಗೆ ಸೋಂಕು

    ರಾಷ್ಟ್ರೀಯ ಲೋಕ-ಅದಾಲತ್‌ನಲ್ಲಿ ಆಸ್ತಿ ವಿವಾದಗಳನ್ನು ಒಳಗೊಂಡಂತೆ ಸಿವಿಲ್ ವ್ಯಾಜ್ಯಗಳು, ವಿಭಾಗ ದಾವೆಗಳು, ಹಣ ವಸೂಲಾತಿ ದಾವೆಗಳು, ನಿರ್ದಿಷ್ಟ ಪರಿಹಾರ ಕಾಯ್ದೆಯಡಿ ದಾಖಲಿಸಿರುವ ದಾವೆಗಳು ಮೋಟಾರ್ ವಾಹನಗಳ ಪ್ರಕರಣಗಳು, ಜೀವನಾಂಶ ಪ್ರಕರಣ, ದಾಂಪತ್ಯ ಪುನರ್ ಸ್ಥಾಪನೆ ಪ್ರಕರಣಗಳು, ರಾಜಿ ಆಗಬಹುದಾತಂತಹ ಕ್ರಿಮಿನಲ್ ಪ್ರಕರಣಗಳು ಮತ್ತು ಚೇಕ್ ಬೌನ್ಸ್ ಪ್ರಕರಣಗಳು ಎಲ್ಲವನ್ನೂ ರಾಜಿಗೆ ತೆಗೆದುಕೊಂಡು ಆಯಾ ನ್ಯಾಯಲಯಗಳಲ್ಲಿ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಪ್ರಯತ್ನ ಮಾಡಲಾಗುವುದು. ಇದನ್ನೂ ಓದಿ: ಉಡುಪಿ| ಕೆನರಾ ಬ್ಯಾಂಕ್ ಎಟಿಎಂ ಕಳ್ಳತನಕ್ಕೆ ಯತ್ನ ಕೇಸ್ – ಇಬ್ಬರ ಬಂಧನ

    ಲೋಕ-ಅದಾಲತ್ ನ್ಯಾಯಾಲಯಗಳಲ್ಲಿ ಬಾಕಿ ಇರುವಂತಹ ಪ್ರಕರಣಗಳ ಜೊತೆಗೆ ನ್ಯಾಯಾಲಯಕ್ಕೆ ದಾಖಲಾಗುವ ಮುನ್ನ ಅಂದರೆ, ವ್ಯಾಜ್ಯ ಪೂರ್ವ ಪ್ರಕರಣಗಳಿಗೆ ಸಂಬಂಧಿಸಿದಂತೆ ಉಭಯ ಪಕ್ಷದವರಿಗೆ ನೋಟಿಸ್ ನೀಡಿ ಕರೆಸಿ ಪ್ರಾಧಿಕಾರದ ವತಿಯಿಂದ ಪೂರ್ವಭಾವಿ ಬೈಠಕ್ ನಡೆಸಿ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಇಂತಹ ಪ್ರಕರಣಗಳಿಗೆ ನ್ಯಾಯಾಲಯಕ್ಕೆ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ. ವಕೀಲರ ಮುಖಾಂತರ ಅಥವಾ ತಾವೇ ಖುದ್ದಾಗಿ ಪ್ರಾಧಿಕಾರಕ್ಕೆ ಭೇಟಿ ನೀಡಿ ಪ್ರಕರಣವನ್ನು ರಾಜಿ ಮಾಡಿಕೊಳ್ಳಬಹುದು. ಇದನ್ನೂ ಓದಿ:  ದಾಖಲೆಯ ಮಹಾ ಕುಂಭಮೇಳಕ್ಕೆ ವಿದ್ಯುಕ್ತ ತೆರೆ – ತ್ರಿವೇಣಿ ಸಂಗಮದಲ್ಲಿ ಶುರುವಾಯ್ತು ಸ್ವಚ್ಛತಾ ಕಾರ್ಯ

    ಜನಸಾಮಾನ್ಯರು ಹಾಗೂ ಕಕ್ಷಿದಾರರು ಇದರ ಸದುಪಯೋಗವನ್ನು ಪಡೆದುಕೊಂಡು ಲೋಕ-ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವ ಮೂಲಕ ಲೋಕ-ಅದಾಲತನ್ನು ಯಶಸ್ವಿಗೊಳಿಸಿಕೊಳ್ಳುವಂತೆ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ಕೋರಿದ್ದಾರೆ.

  • ಲೋಕ ಅದಾಲತ್‌ನಲ್ಲಿ 520 ಪ್ರಕರಣ ಇತ್ಯರ್ಥ – 14 ಕೋಟಿ ಪರಿಹಾರಕ್ಕೆ ಜನತಾ ನ್ಯಾಯಾಲಯ ಆದೇಶ!

    ಲೋಕ ಅದಾಲತ್‌ನಲ್ಲಿ 520 ಪ್ರಕರಣ ಇತ್ಯರ್ಥ – 14 ಕೋಟಿ ಪರಿಹಾರಕ್ಕೆ ಜನತಾ ನ್ಯಾಯಾಲಯ ಆದೇಶ!

    ಕಲಬುರಗಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಶನಿವಾರ ಇಲ್ಲಿನ ಕಲಬುರಗಿ ಹೈಕೋರ್ಟ್ (Kalaburagi Highcourt) ಪೀಠದಲ್ಲಿ ಜರುಗಿದ ಲೋಕ ಅದಾಲತ್‌ನಲ್ಲಿ (Lok Adalat) ಪರಸ್ಪರ ರಾಜಿ ಸಂಧಾನದ ಮೂಲಕ 520 ಪ್ರಕರಣ ವಿಲೇವಾರಿ ಮಾಡಿ 14,00,71,305 ರೂ. ಪರಿಹಾರ ವಿತರಣೆಗೆ ಜನತಾ ನ್ಯಾಯಾಲಯ ಆದೇಶಿಸಿದೆ.

    ಉಚ್ಚ ನ್ಯಾಯಾಲಯ ಕಾನೂನು ಸೇವಾ ಸಮಿತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು ವಾಹನ ವಿಮೆ ಮತ್ತು ಸಿವಿಲ್ ಪ್ರಕರಣಗಳನ್ನು ಅರ್ಜಿದಾರ, ಪ್ರತಿವಾದಗಳು ಹಾಗೂ ವಕೀಲರ ಸಮಕ್ಷಮ ರಾಜಿ-ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಲಾಯಿತು. ಇದನ್ನೂ ಓದಿ: ಇನ್ನು ಮುಂದೆ ಕ್ರೆಡಿಟ್‌ ಕಾರ್ಡ್‌ನಂತೆ ಯುಪಿಐ ಬಳಸಬಹುದು – ಇದು ಹೇಗೆ ಕೆಲಸ ಮಾಡುತ್ತೆ?

    ಲೋಕ ಅದಾಲತ್‌ನಲ್ಲಿ ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯಾಧೀಶರಾದ ನ್ಯಾ.ಅಶೋಕ್ ಎಸ್ ಕಿಣಗಿ, ನ್ಯಾ.ಉಮೇಶ್ ಎಂ ಅಡಿಗ ಹಾಗೂ ನ್ಯಾ.ರಾಜೇಶ್ ರೈಕೆ ಅವರು ಭಾಗವಹಿಸಿದ್ದರು. ಇದನ್ನೂ ಓದಿ: Assembly Bypolls: 13 ಕ್ಷೇತ್ರಗಳ ಪೈಕಿ 10ರಲ್ಲಿ ಇಂಡಿಯಾ ಒಕ್ಕೂಟ ಜಯಭೇರಿ – 2ರಲ್ಲಿ ಬಿಜೆಪಿ ಗೆಲುವು!

    ಉಚ್ಚನ್ಯಾಯಾಲಯದ ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿ ದಯಾನಂದ ವಿ.ಹಿರೇಮಠ, ಅಪರ ಮಹಾ ವಿಲೇಖನಾಧಿಕಾರಿ ಬಸವರಾಜ ಚೇಂಗಟಿ ಸೇರಿದಂತೆ ನ್ಯಾಯಾವಾದಿಗಳು, ಕಕ್ಷಿದಾರರು ಭಾಗವಹಿಸಿದ್ದರು. ಇದನ್ನೂ ಓದಿ: ರಾಮನಗರ ಅನ್ನೋದಕ್ಕಿಂತ ಬೇರೊಂದು ಒಳ್ಳೆಯ ಪದ ಸಿಗಲ್ಲ: ಡಾ.ಮಂಜುನಾಥ್

  • ಹೊಳೆನರಸೀಪುರ ಕೋರ್ಟ್ ಆವರಣದಲ್ಲಿಯೇ ಪತ್ನಿಯ ಕತ್ತು ಸೀಳಿದ ಪತಿ

    ಹೊಳೆನರಸೀಪುರ ಕೋರ್ಟ್ ಆವರಣದಲ್ಲಿಯೇ ಪತ್ನಿಯ ಕತ್ತು ಸೀಳಿದ ಪತಿ

    – ಎಸ್ಕೇಪ್ ಆಗ್ತಿದ್ದ ಆರೋಪಿಯನ್ನು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

    ಹಾಸನ: ಕೋರ್ಟ್ ಆವರಣದಲ್ಲೇ ಪತಿಯೇ ಪತ್ನಿಯ ಕತ್ತು ಸೀಳಿ ಕೊಲೆ ಮಾಡಲು ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಪತ್ನಿ ಆಸ್ಪತ್ರೆಯಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ.

    ಚೈತ್ರಾ (32) ಕೊಲೆಯಾದ ಮಹಿಳೆಯಾಗಿದ್ದು, ಶಿವಕುಮಾರ್ ಕೊಲೆ ಆರೋಪಿಯಾಗಿದ್ದಾನೆ. ಹೊಳೆನರಸೀಪುರ ತಾಲ್ಲೂಕಿನ, ತಟ್ಟೆಕೆರೆ ಗ್ರಾಮದ ಶಿವಕುಮಾರ್ ಹಾಗೂ ಚನ್ನರಾಯಪಟ್ಟಣ ತಾಲ್ಲೂಕಿನ, ನುಗ್ಗೇಹಳ್ಳಿ ಹೋಬಳಿ ಅವೇರಹಳ್ಳಿ ಗ್ರಾಮದ ಚೈತ್ರಾ ಕಳೆದ 7 ವರ್ಷದ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಎರಡು ಹೆಣ್ಣುಮಕ್ಕಳಿದ್ದು, ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಇಲ್ಲದ ಕಾರಣ ಮೂರು ವರ್ಷಗಳ ಹಿಂದೆ ಶಿವಕುಮಾರ್ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದನು. ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆಗೆ ಕಾಂತಾರ ಸಿನಿಮಾದಿಂದ ಮೊದಲ ಹಾಡು ಗಿಫ್ಟ್

    ಚೈತ್ರಾ ಜೀವನಾಂಶ ಕೋರಿ ಕೋರ್ಟ್ ಮೆಟ್ಟಿಲೇರಿದ್ದಳು. ಇಂದು ಹೊಳೆನರಸೀಪುರದ ನ್ಯಾಯಾಲಯದಲ್ಲಿ ಲೋಕ ಅದಾಲತ್ ನಡೆದಿದ್ದು, ಇಲ್ಲಿ ನ್ಯಾಯಧೀಶರು ದಂಪತಿ ಮನವೊಲಿಸಿ ಒಂದಾಗಿ ಬಾಳುವಂತೆ ತಿಳಿ ಹೇಳಿದ್ದರು. ನಂತರ ಇಬ್ಬರು ಪರಸ್ಪರ ಮಾತನಾಡಿಕೊಂಡು ಬರುವಂತೆ ಕಳುಹಿಸಿದ್ದರು. ಈ ವೇಳೆ ಚೈತ್ರಾ ಮಗಳನ್ನು ಶೌಚಾಲಯಕ್ಕೆ ಕರೆದುಕೊಂಡು ಹೋಗಿದ್ದಾಳೆ. ಆಕೆಯನ್ನು ಹಿಂಬಾಲಿಸಿ ಹೋದ ಶಿವಕುಮಾರ್ ಶೌಚಾಲಯದಲ್ಲೇ ಚಾಕುವಿನಿಂದ ಪತ್ನಿಯ ಕತ್ತು ಕೊಯ್ದು ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಚೈತ್ರಾ ಕುಸಿದು ಬಿದ್ದು ರಕ್ತಸ್ರಾವದಿಂದ ಒದ್ದಾಡುತ್ತಿದ್ದನ್ನು ಕಂಡ ವಕೀಲರು ಹಾಗೂ ಸಾರ್ವಜನಿಕರು ಕೂಡಲೇ ಆಕೆಯನ್ನು ಹೊಳೆನರಸೀಪುರ ಆಸ್ಪತ್ರೆಗೆ ದಾಖಲಿಸಿ, ತಪ್ಪಿಸಿಕೊಂಡು ಓಡುತ್ತಿದ್ದ ಶಿವಕುಮಾರ್‌ನ ಬೆನ್ನತ್ತಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಮಡಿಕೇರಿಗೆ ತೆರಳುತ್ತಿದ್ದ KSRTC ಬಸ್ ಅಪಘಾತ – ಜನರ ರಕ್ಷಣೆಗೆ ಮುಂದಾದ ಅಪ್ಪಚ್ಚು ರಂಜನ್

    ಚೈತ್ರಾಗೆ ಹೊಳೆನರಸೀಪುರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಅಂಬುಲೆನ್ಸ್‌ನಲ್ಲಿ ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಆಸ್ಪತ್ರೆಗೆ ದಾಖಲಾದ ಕೆಲವೇ ನಿಮಿಷಗಳಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಚೈತ್ರಾ ಕೊನೆಯುಸಿರೆಳೆದಿದ್ದಾಳೆ. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು, ಹೊಳೆನರಸೀಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    Live Tv
    [brid partner=56869869 player=32851 video=960834 autoplay=true]

  • ವಿಚ್ಛೇದನ ಪಡೆದಿದ್ದ ದಂಪತಿಗಳನ್ನು ಒಂದು ಮಾಡಿದ ಲೋಕ ಅದಾಲತ್

    ವಿಚ್ಛೇದನ ಪಡೆದಿದ್ದ ದಂಪತಿಗಳನ್ನು ಒಂದು ಮಾಡಿದ ಲೋಕ ಅದಾಲತ್

    ದಾವಣಗೆರೆ: ನ್ಯಾಯಾಲಯದ ಮೆಟ್ಟಿಲೇರಿ ವಿಚ್ಛೇದನ ಪಡೆದಿದ್ದ ಜೋಡಿಗಳಿಗೆ ದಾವಣಗೆರೆಯ ಎರಡನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್‍ನಲ್ಲಿ ನ್ಯಾಯಾಧೀಶರು ಮತ್ತೆ ಒಂದಾಗಿ ಬದುಕು ನಡೆಸುವ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ.

    court order law

    ನಗರದ ಎರಡನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್‍ನಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿವೇದಿತಾ ಸಂಧಾನ ಪ್ರಕ್ರಿಯೆ ನಡೆಸಿ ಜೋಡಿಯು ಮತ್ತೆ ಒಂದಾಗಿ ದಾಂಪತ್ಯ ಜೀವನ ನಡೆಸುವ ಭಾಗ್ಯ ಕಲ್ಪಿಸಿದ್ದಾರೆ. ದಾವಣಗೆರೆ ವಾಸಿಗಳಾದ ದಂಪತಿಗೆ 2007ರಲ್ಲಿ ವಿವಾಹ ನಡೆದಿತ್ತು. 2007 ರಿಂದ 2014 ರವರೆಗೆ ಸಣ್ಣಪುಟ್ಟ ಕೌಟುಂಬಿಕ ಕಲಹ ನಡೆದಿತ್ತು. ಇದರಿಂದ ಬೇಸತ್ತ ಪತ್ನಿಯು 2014ರಲ್ಲಿ ಪತಿ ಸೇರಿದಂತೆ ಕುಟುಂಬದ ಕೆಲ ಸದಸ್ಯರ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದು ಪ್ರಕರಣದ ವಿಚಾರಣೆ ಮುಂದುವರಿದಿತ್ತು. ಇದನ್ನೂ ಓದಿ: ಬ್ರಾ ಧರಿಸದೇ ಸಾರ್ವಜನಿಕವಾಗಿ ಕಾಣಿಸಿಕೊಂಡ ಪೂನಂ ಪಾಂಡೆ: ನೆಟ್ಟಿಗರು ಗರಂ

    ಈ ಸಂದರ್ಭದಲ್ಲಿ ಪತಿ ವಿಚ್ಛೇದನಕ್ಕೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ನ್ಯಾಯಾಲಯ ವಿಚಾರಣೆ ನಡೆಸಿ 2022ರಲ್ಲಿ ಈ ಇಬ್ಬರಿಗೆ ವಿಚ್ಛೇದನಕ್ಕೆ ಅವಕಾಶ ಕೊಟ್ಟಿತ್ತು. ಜೊತೆಗೆ ಜೀವನಾಂಶವಾಗಿ ಪತಿಗೆ ಸೇರಿದ ಅರ್ಧ ಎಕರೆ ನೀರಾವರಿ ಜಮೀನು ನೀಡುವಂತೆ ಸೂಚಿಸಿತ್ತು. ಆದರೆ ಮಗಳ ತಂದೆ ಮೇಲಿನ ಪ್ರೀತಿ, ತಾಯಿಯನ್ನು ಮತ್ತೆ ಒಂದಾಗುವ ಹಾಗೇ ಪ್ರೇರಿಪಿಸಿತು. ಆಗ ಪತ್ನಿ ವಿಚ್ಛೇದನದ ಬಳಿಕವೂ ಪತಿಯೊಂದಿಗೆ ಒಂದಾಗಿ ಜೀವನ ನಡೆಸಲು ಇಚ್ಛಿಸಿ ವಕೀಲರ ಮೂಲಕ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು.

    ಈ ಪ್ರಕರಣವನ್ನು ಜನತಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿವೇದಿತಾ ಅವರು, ಇಬ್ಬರ ಮನವೊಲಿಸಿ ವಿಚ್ಛೇದನ ಪಡೆದ ದಂಪತಿಗೆ ಮತ್ತೆ ಒಂದಾಗಿ ಜೀವನ ನಡೆಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಅಲ್ಲದೆ ಇನ್ನೊಂದು ಪ್ರಕರಣದಲ್ಲಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದ ದಾವಣಗೆರೆ ನಿವಾಸಿ ದಂಪತಿಗೆ ಜನತಾ ನ್ಯಾಯಾಲಯ ಇಬ್ಬರು ಒಟ್ಟುಗೂಡಿ ಜೀವನ ಸಾಗಿಸುವ ಅವಕಾಶ ಕಲ್ಪಿಸಿದೆ. 2011ರಲ್ಲಿ ವಿವಾಹದ ದಂಪತಿ 2020ರಲ್ಲಿ ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿ ವಿಚಾರಣೆ ಮುಂದುವರಿದಿತ್ತು. ಈ ಇಬ್ಬರ ದಂಪತಿಯ ಮನವೊಲಿಸಿದ ನ್ಯಾಯಾಧೀಶರು ಲೋಕ ಅದಾಲತ್‍ನಲ್ಲಿ ಮತ್ತೆ ಒಂದಾಗಿಸುವ ಭಾಗ್ಯ ಕಲ್ಪಿಸಿದೆ. ಈ ದಂಪತಿಗೆ ಮೂರು ಜನ ಹೆಣ್ಣು ಮಕ್ಕಳಿದ್ದು, ಅವರ ಭವಿಷ್ಯದ ದೃಷ್ಟಿಯಿಂದ ಇಬ್ಬರು ಒಂದಾಗಿದ್ದಾರೆ. ಇದನ್ನೂ ಓದಿ: ಬೈದವರನ್ನು ಅಟ್ಟಾಡಿಸಿಕೊಂಡು ಸೇಡು ತೀರಿಸಿಕೊಳ್ಳುತ್ತಿರುವ ಕೋಣ – ಕಂಟೆಮ್ಮ ದೇವಿಯ ಪಾವಡಕ್ಕೆ ಹೈರಾಣಾದ ಗ್ರಾಮಸ್ಥ

    ವಿಚ್ಛೇದನ ಪಡೆದ ಈ ಎರಡು ಜೋಡಿಗಳು ಮತ್ತೆ ಒಂದಾಗಿ ಜೀವನ ನಡೆಸಲು ಮುಂದಾಗಿರುವುದು ಸಂತಸ ತರಿಸಿದೆ. ಪತಿ ಮತ್ತು ಪತ್ನಿ ನಡುವೆ ಏನೇ ವೈಮನಸ್ಸು ಉಂಟಾದರೆ ಅದನ್ನು ಸರಿದೂಗಿಸಿಕೊಂಡು ಹೋಗುವ ಜಾಣ್ಮೆಯನ್ನು ಪ್ರತಿಯೊಂದು ದಂಪತಿ ಅಳವಡಿಸಿಕೊಂಡು ಹೋದರೆ ವೈವಾಹಿಕ ಜೀವನದಲ್ಲಿ ಯಾವುದೇ ವಿರಹ ಅಥವಾ ಸಮಸ್ಯೆಗಳು ಉಂಟಾಗುವುದಿಲ್ಲ ಎಂದು 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿವೇದಿತಾ ಕಿವಿಮಾತು ಹೇಳಿದರು.

    Live Tv