ಲಕ್ನೋ: ಕಿವಿ ಗಡಚಿಕ್ಕುವ ಧ್ವನಿವರ್ಧಕ ಬಳಸಿದ್ದಕ್ಕೆ ಸಂಭಲ್ ಈದ್ಗಾ ಮಸೀದಿ ಇಮಾಂಗೆ (Sambhal Mosque Imam) 2 ಲಕ್ಷ ರೂ. ದಂಡ ವಿಧಿಸಲಾಗಿದೆ.
ಈಚೆಗೆ, ಸಂಭಲ್‌ನಲ್ಲಿ ಮೊಘಲರ ಕಾಲದ ಮಸೀದಿಯ ಸಮೀಕ್ಷೆ ವೇಳೆ ನಡೆದ ಹಿಂಸಾಚಾರದಲ್ಲಿ ನಾಲ್ವರು ಬಲಿಯಾಗಿದ್ದರು. ಇದರ ಬೆನ್ನಲ್ಲೇ ಇಲ್ಲಿನ ಇನ್ನೊಂದು ಮಸೀದಿ ಸುದ್ದಿಯಲ್ಲಿದೆ. ಕೋಟ್ ಗರ್ವಿ ಪ್ರದೇಶದ ಅನಾರ್ ವಾಲಿ ಮಸೀದಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಒಂದು ದೇಶ ಒಂದು ಚುನಾವಣೆ- ಜಾಣ್ಮೆಯ ಹೆಜ್ಜೆಯಿಟ್ಟ ಕೇಂದ್ರ
ಮಸೀದಿಯಲ್ಲಿ ಹೆಚ್ಚಿನ ಧ್ವನಿಯಲ್ಲಿ ಧ್ವನಿವರ್ಧಕವನ್ನು ಬಳಸಲಾಗುತ್ತಿತ್ತು. ಈ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ಪ್ರೇರೇಪಿಸಿತು. 2 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ ಎಂದು ಸಂಭಾಲ್ ಸಬ್- ವಿಭಾಗೀಯ ಮ್ಯಾಜಿಸ್ಟ್ರೇಟ್ (SDM) ವಂದನಾ ಮಿಶ್ರಾ ತಿಳಿಸಿದ್ದಾರೆ.
ಬೆಂಗಳೂರು: ಕರ್ನಾಟಕದಲ್ಲಿ (Karnataka) ಆಜಾನ್ (Azaan) ದಂಗಾಲ್ ಹಿನ್ನೆಲೆ ಪರವಾನಗಿ ಇಲ್ಲದೇ ಲೌಡ್ ಸ್ಪೀಕರ್ (Loudspeaker) ಬಳಸುವಂತಿಲ್ಲ ಎಂದು ಸರ್ಕಾರ ನಿರ್ಬಂಧ ಹೇರಿತ್ತು. ಆ ಬಳಿಕ ಇದೀಗ ಪರವಾನಿಗೆ ನೀಡಿ ಒಟ್ಟು 10,889 ಮಸೀದಿಗಳಿಗೆ (Mosques) ಲೌಡ್ ಸ್ಪೀಕರ್ ಬಳಸಲು ಅನುಮತಿ ನೀಡಿದೆ.
ಆಜಾನ್ ವಿರುದ್ಧ ವಿರೋಧ ಕೇಳಿ ಬಂದ ಬಳಿಕ ರಾಜ್ಯ ಸರ್ಕಾರ ಲೌಡ್ ಸ್ಪೀಕರ್‌ಗೆ ಬ್ರೇಕ್ ಹಾಕಲು ಮುಂದಾಗಿತ್ತು. ಪರವಾನಗಿ ಇಲ್ಲದೇ ಲೌಡ್ ಸ್ಪೀಕರ್ ಬಳಸುವಂತಿಲ್ಲ ಎಂದು ನಿರ್ಬಂಧ ಹೇರಲಾಗಿತ್ತು. ಆ ಬಳಿಕ ಪರವಾನಿಗೆ ನೀಡಲು ಮಸೀದಿ, ದೇವಾಲಯ (Temples), ಚರ್ಚ್‍ಗಳಿಗೆ (Churche) ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ನೀಡಿತ್ತು. ಪರವಾನಗಿ ನೀಡುವ ಅಧಿಕಾರವನ್ನು ಸರ್ಕಾರ ರಾಜ್ಯ ಪೊಲೀಸರಿಗೆ ನೀಡಿತ್ತು. ಈ ಹಿನ್ನೆಲೆ ಮಂದಿರ, ಮಸೀದಿ, ಚರ್ಚ್‍ಗಳಿಂದ 17 ಸಾವಿರಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಪೈಕಿ ರಾಜ್ಯಾದ್ಯಂತ 10,889 ಮಸೀದಿಗಳಿಗೆ ಲೌಡ್ ಸ್ಪೀಕರ್ ಬಳಸಲು ಅನುಮತಿ ನೀಡಿ ಕರ್ನಾಟಕ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ಈ ಬಾರಿ ಸಂಪುಟ ವಿಸ್ತರಣೆಯೋ, ಪುನರ್ ರಚನೆಯೋ ಕಾದು ನೋಡಿ: ಬೊಮ್ಮಾಯಿ
17 ಸಾವಿರದ 850 ಅರ್ಜಿಗಳ ಪೈಕಿ 10 ಸಾವಿರ ಅರ್ಜಿಗಳಿಗೆ ಸರ್ಕಾರ ಎರಡು ವರ್ಷಗಳ ಅವಧಿಗೆ ಅನುಮತಿ ನೀಡಿ ಆದೇಶ ಮಾಡಿದೆ. 450 ರೂಪಾಯಿ ಶುಲ್ಕ ಪಡೆದು ಲೌಡ್ ಸ್ಪೀಕರ್ ಬಳಕೆಗೆ ಅನುಮತಿ ಪಡೆಯಲಾಗಿತ್ತು. ಈ ಪೈಕಿ ಬೆಂಗಳೂರಿನಲ್ಲಿ (Bengaluru) 1,841 ಮಸೀದಿಗಳಿಗೆ ಅನುಮತಿ ನೀಡಲಾಗಿದೆ. ರಾಜ್ಯಾದ್ಯಂತ ಮೂರು ಸಾವಿರಕ್ಕೂ ಹೆಚ್ಚು ಹಿಂದೂ ದೇವಾಲಯ, 1,400ಕ್ಕೂ ಹೆಚ್ಚು ಚರ್ಚ್‍ಗಳಿಗೆ ಸರ್ಕಾರ ಅನುಮತಿ ನೀಡಿದೆ. ಇದನ್ನೂ ಓದಿ: ಜನಪ್ರತಿನಿಧಿಗಳೇ ಬದುಕಿದ್ದೀರಾ? ಅಧಿಕಾರಿಗಳೇ ಇತ್ತ ಗಮನಿಸಿ – ಫ್ಲೆಕ್ಸ್‌ಗೆ ಚಪ್ಪಲಿ ಹಾರ ಹಾಕಿ ಆಕ್ರೋಶ
17 ಸಾವಿರದ 850 ಅರ್ಜಿಗಳನ್ನು ಪರಿಶೀಲಿಸಿ ಸದ್ಯ 10 ಸಾವಿರ ಅರ್ಜಿದಾರರಿಗೆ ಲೌಡ್ ಸ್ಪೀಕರ್ ಬಳಸಲು ಅನುಮತಿ ನೀಡಿರುವ ರಾಜ್ಯ ಸರ್ಕಾರ ಕೆಲ ನಿಯಮಾವಳಿಗಳನ್ನು ಜಾರಿಗೆ ತಂದಿದೆ.
ನಿಯಮಾವಳಿಗಳು:
ಬೆಳಗ್ಗೆ 6 ರಿಂದ ರಾತ್ರಿ 10 ರವರೆಗೆ ಲೌಡ್ ಸ್ಪೀಕರ್ ಬಳಸಬೇಕು. ನಿಯಮಿತ ಡೆಸಿಬಲ್ ಮಾತ್ರ ಬಳಸಬೇಕು. ಡೆಸಿಬಲ್ ನಿಯಂತ್ರಿಸೋ ಉಪಕರಣ ಅಳವಡಿಕೆ ಕಡ್ಡಾಯ. ರೆಸಿಡೆನ್ಸಿಯಲ್, ಕಮರ್ಷಿಯಲ್, ಕೈಗಾರಿಕಾ ಪ್ರದೇಶಗಳ ಅನುಗುಣವಾಗಿ ಡೆಸಿಬಲ್ ಅಳವಡಿಕೆ, ಮಸೀದಿ – ಮಂದಿರದ ಆವರಣದ ಒಳಗೆ ಲೌಡ್ ಸ್ಪೀಕರ್‌ಗಳು ಇರಬೇಕು. ಪೊಲೀಸರು ಸೂಚಿಸಿರುವಷ್ಟು ಮಾತ್ರ ಲೌಡ್ ಸ್ಪೀಕರ್ ಬಳಸಬೇಕು.
Live Tv
[brid partner=56869869 player=32851 video=960834 autoplay=true]
ಧಾರವಾಡ: 5 ಬಾರಿ ಮೈಕ್ ಕೂಗೋದನ್ನು ನಿಲ್ಲಿಸಿ, ನಾನೇ ಡಿಜೆಯನ್ನು ನಿಲ್ಲಿಸುತ್ತೇನೆ, ಒಂದೇ ಒಂದು ಡಿಜೆ ಹೊರಗೆ ಬಾರದಂತೆ ನಾನೇ ನೋಡಿಕೊಳ್ಳುತ್ತೇನೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದರು.
ಪ್ರಾರ್ಥನಾ ಮಂದಿರಗಳ ಮೇಲೆ ಹಾಕಿರುವ ಮೈಕ್ ವಿಚಾರವಾಗಿ ಧಾರವಾಡ ಎಸ್‌ಪಿ ಕಚೇರಿ ಎದುರು ಶ್ರೀರಾಮ ಸೇನೆ ಕಾರ್ಯಕರ್ತರು ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಮುತಾಲಿಕ್, ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದೇವೆ. ಸುಪ್ರೀಂ ಕೋರ್ಟ್ 15 ವರ್ಷದ ಹಿಂದೆಯೇ ಆದೇಶ ನೀಡಿದೆ. ಶಬ್ದ ಮಾಲಿನ್ಯ ಆಗಬಾರದು ಅಂತ ಹೇಳಿದ್ರೂ ಇಲ್ಲಿಯವರೆಗೆ ರಾಜ್ಯ ಸರ್ಕಾರ ಆದೇಶ ಜಾರಿ ಮಾಡಿಲ್ಲ ಎಂದರು.
ಶಬ್ದದ ಪರಿಣಾಮದಿಂದ ಎಲ್ಲರಿಗೂ ತೊಂದರೆಯಾಗುತ್ತಿದೆ. ಪ್ರಾರ್ಥನಾ ಮಂದಿರಗಳು ಯಾವುದೇ ಧರ್ಮಕ್ಕೆ ಸೇರಿರಲಿ. ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಆದರೆ ಸರ್ಕಾರ ನಾಟಕವಾಡುತ್ತಿದೆ. ಇದಕ್ಕಾಗಿಯೇ ನಾವು ನಿರಂತರವಾಗಿ ಹೋರಾಡುತ್ತಿದ್ದೇವೆ. ಸರ್ಕಾರದ ಕಾನೂನು ಜಾರಿ ಮಾಡದಿದ್ದರೆ, ಅವರಿಗೆ ಕುಮ್ಮಕ್ಕು ಕೊಟ್ಟಂತಾಗುತ್ತದೆ ಎಂದರು. ಇದನ್ನೂ ಓದಿ: ಗಣೇಶ ಹಬ್ಬಕ್ಕೆ ಮುನ್ನೆಚ್ಚರಿಕಾ ಕ್ರಮ – ಸರ್ಕಾರದ ಸುತ್ತೋಲೆಯಲ್ಲಿ ಏನಿದೆ?
ಈ ಕಾರಣಕ್ಕೆ ನಾವು ಕಾನೂನು ಕೈಗೆತ್ತಿಕೊಳ್ಳಬೇಕಾಗುತ್ತದೆ. ಬೆಳಗ್ಗೆ 5 ಗಂಟೆಯಿಂದ ಮೈಕ್ ಕೂಗುತ್ತಿವೆ. ಇದು ಇನ್ನೂ ನಿಂತಿಲ್ಲ. ನಮ್ಮನ್ಯಾರೂ ಕೇಳೋದಿಲ್ಲ ಎನ್ನುವ ಮನಸ್ಥಿತಿ ದೊಡ್ಡ ಮುಳ್ಳಾಗಿ ಪರಿಣಮಿಸಲಿದೆ. ಸರ್ಕಾರಕ್ಕೆ ಇದು ಗೊತ್ತಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ನಾವು ಮುಂದಿನ ಹೆಜ್ಜೆ ಇಡಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಮನವಿ ಇಲ್ಲ, ನೇರವಾಗಿ ನುಗ್ಗುವುದೇ. ಅದು ಹೇಗೆ, ಏನು ಎನ್ನುವುದನ್ನು ಮುಂದಿನ ಹೋರಾಟದಲ್ಲಿಯೇ ನಿರ್ಧಾರ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಪೊಲೀಸ್ ಇಲಾಖೆ ಗಣೇಶ ಮಂಡಳಿಯವರಿಗೆ ಡಿಜೆ ನಿಷೇಧಿಸಿದ್ದಾರೆ. ಅವರು ಸುಪ್ರೀಂ ಕೋರ್ಟ್ ಆದೇಶ ತೋರಿಸುತ್ತಾರೆ. ಅದೇ ಆದೇಶ ಪ್ರಾರ್ಥನಾ ಮಂದಿರಗಳ ಮೈಕ್ ಬಗ್ಗೆಯೂ ಹೇಳಿದೆಯಲ್ಲವೇ? ಹಾಗಾದರೆ ಅದನ್ನೇಕೆ ಪಾಲಿಸುತ್ತಿಲ್ಲ? ವರ್ಷಕ್ಕೆ ಒಂದೇ ಬಾರಿ ಡಿಜೆ ಹಚ್ಚಿದರೆ ಅದು ನಿಮ್ಮ ಕಣ್ಣಿಗೆ ಬೀಳುತ್ತದೆ. ಪ್ರತಿ ದಿನ 5 ಬಾರಿ ಮೈಕ್ ಹಚ್ಚೋದು ಕಾಣೋದಿಲ್ವಾ? ಎಂದು ಕಿಡಿ ಕಾರಿದರು. ಇದನ್ನೂ ಓದಿ: ಎಸಿಬಿ ರದ್ದು; ಹೈಕೋರ್ಟ್ ಆದೇಶ ಪಾಲಿಸ್ತೀವಿ, ಸುಪ್ರೀಂಗೆ ಹೋಗಲ್ಲ – ಸಿಎಂ
ನೀವು ಡಿಜೆ ಸೀಜ್ ಮಾಡಿ, ನಾವು ಇದನ್ನು ಸವಾಲಾಗಿ ಸ್ವೀಕರಿಸಿದ್ದೇವೆ. 3 ವರ್ಷದಿಂದ ಕೊರೊನಾದಿಂದಾಗಿ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ವೇಳೆಯಲ್ಲಿ ಎಲ್ಲದಕ್ಕೂ ನಿರ್ಬಂಧ ಏಕೆ? 5 ಬಾರಿ ಮೈಕ್ ಕೂಗೋದನ್ನು ನಿಲ್ಲಿಸಿ, ನಾನೇ ಡಿಜೆಯನ್ನು ನಿಲ್ಲಿಸುತ್ತೇನೆ. ಒಂದು ಡಿಜೆಯೂ ಹೊರಗೆ ಬಾರದಂತೆ ನಾನೇ ನಿಲ್ಲಿಸುತ್ತೇನೆ. ಆದರೆ ವಿನಾಕಾರಣ ಗಣೇಶೋತ್ಸವಕ್ಕೆ ಕಿರಿಕಿರಿ ಮಾಡಬೇಡಿ ಎಂದು ಮನವಿ ಮಾಡಿದರು.
Live Tv
[brid partner=56869869 player=32851 video=960834 autoplay=true]
ದಾವಣಗೆರೆ: ಡಿಜೆ ಸೌಂಡ್ ಸಿಸ್ಟಮ್‌ಗೆ ಅನುಮತಿ ಪಡೆಯಬೇಡಿ, ಡಬಲ್ ಸೌಂಡ್ ಹಚ್ಚಿ, ಏನ್ ಮಾಡ್ತಾರೆ ನೋಡೋಣ. ಸುಪ್ರೀಂ ಕೋರ್ಟ್ ಹೆಸರು ಹೇಳುತ್ತಾ ನಮ್ಮನ್ನು ಹತ್ತಿಕ್ಕುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗಣೇಶ ಮಂಡಳಿಗಳಿಗೆ ಕರೆ ನೀಡಿದರು.
ದಾವಣಗೆರೆಯಲ್ಲಿ ಮಾತನಾಡಿದ ಅವರು, ನಾವು ಸೌಂಡ್ ಸಿಸ್ಟಮ್‌ಗೆ ಪರ್ಮಿಷನ್ ತೆಗೆದುಕೊಳ್ಳುವುದಿಲ್ಲ. ಸರ್ಕಾರ ಮೊದಲು ಮಸೀದಿ ಮೇಲಿರುವ ಲೌಡ್ ಸ್ಪೀಕರ್ ಅನುಮತಿ ಪಡೆದಿರುವುದನ್ನು ತೋರಿಸಲಿ. ಬಳಿಕ ನಾವು ಡಿಜೆಗೆ ಅನುಮತಿಯನ್ನು ಪಡೆಯುತ್ತೇವೆ. ಮೊದಲು ಮಸೀದಿ ಮೇಲಿರುವ ಲೌಡ್ ಸ್ಪೀಕರ್‌ಗಳ ಅನುಮತಿ ಬಗ್ಗೆ ದಾಖಲೆ ನೀಡಿ. ಇಂದಿಗೂ ಲೌಡ್ ಸ್ಪೀಕರ್ ಶಬ್ದ ನಿಂತಿಲ್ಲ, ಇಂದಿಗೂ ಕಿರಿಕಿರಿ ಆಗುತ್ತಿದೆ ಎಂದು ಕಿಡಿಕಾರಿದರು.
ನಮ್ಮ ಸೌಂಡ್ ಸಿಸ್ಟಮ್ ಅನ್ನು ನಿಲ್ಲಿಸಲು ನಿಮಗೆ ಹಕ್ಕಿಲ್ಲ. ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಹೇರಬೇಡಿ. ಗಲಭೆ ಆಗದಂತೆ ಮುಂಜಾಗೃತಾ ಕ್ರಮ ವಹಿಸುತ್ತೇವೆ. ಗಣೇಶನ ಕೂರಿಸಲು ಅನುಮತಿ ಪಡೆಯುವ ಪ್ರಕ್ರಿಯೆ ಸರಿ ಅಲ್ಲ. ನೀವು ಸ್ವಾತಂತ್ರ‍್ಯ ಹರಣ ಮಾಡ್ಬೇಡಿ. ನಿಮ್ಮ ಅನುಮತಿ ಪಡೆಯುವ ಅವಶ್ಯಕತೆ ನಮಗಿಲ್ಲ. ನಮಗೆ ಮುಕ್ತವಾದ ಹಕ್ಕಿದೆ. ನಿಮಗೆ ಕೇಳಿಕೊಂಡು ಗಣೇಶೋತ್ಸವ ಮಾಡುವುದಿಲ್ಲ ಎಂದು ಸರ್ಕಾರದ ವಿರುದ್ಧ ಗುಡುಗಿದರು.
ಬೆಂಗಳೂರಿನ ಈದ್ಗಾ ಮೈದಾನದ ಜಾಗ ಸರ್ಕಾರದ್ದು ಎಂದು ನಿರ್ಧರಿಸಲಾಗಿದೆ. ಜಮೀರ್ ಅಹ್ಮದ್ ಸೇರಿ ಕೆಲ ಮುಸ್ಲಿಂ ನಾಯಕರು ಇದು ನಮ್ಮದು ಎಂದು ಹೇಳುತ್ತಿದ್ದವರ ಬಾಯಿ ಬಂದ್ ಆಗಿದೆ. ಸರ್ಕಾರದಿಂದ ಚಾಮರಾಜಪೇಟೆ ಮೈದಾನದಲ್ಲಿ ರಾಷ್ಟ್ರಧ್ವಜ ಹಾರಿಸುವುದನ್ನು ನಾನು ಸ್ವಾಗತಿಸುತ್ತೇನೆ. ಅಲ್ಲಿ ಜಮೀರ್ ಅಹ್ಮದ್‌ಗೆ ಮಾತ್ರ ಅವಕಾಶ ಎಂದಲ್ಲ, ಅಲ್ಲಿ ಸಾರ್ವಜನಿಕರೂ ಆಗಮಿಸಬೇಕು. 75ನೇ ಸ್ವಾತಂತ್ರ‍್ಯೋತ್ಸವ ಮಾಡಬೇಕು. ಆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೂ ಅವಕಾಶ ಮಾಡಿಕೊಡಬೇಕು ಎಂದರು. ಇದನ್ನೂ ಓದಿ: ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಿಎಂ ಚಾಲನೆ – ಭವ್ಯ ಭಾರತ ಕಟ್ಟಲು ಯುವಜನತೆ ಸನ್ನದ್ಧರಾಗುವಂತೆ ಕರೆ
ಅಲ್ಲಿ ಮುಸ್ಲಿಮರ ಧಾರ್ಮಿಕ ಚಟುವಟಿಕೆಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ನಾವು ಹಿಂದೂಗಳು ಏನ್ ಪಾಪ ಮಾಡಿದ್ದೇವೆ? ನಮಗೂ ಗಣೇಶೋತ್ಸವ ಆಚರಣೆ ಮಾಡಲು ಅವಕಾಶ ನೀಡಿ. ಸರ್ಕಾರ ಪ್ರತಿನಿಧಿಗಳೇ ನಿಮ್ಮ ಗಡ್ಸ್ ತೋರ್ಸಿ. ಅಲ್ಲಿ ಕೋಮು ಗಲಭೆ ಮಾಡಿದರೆ ಗುಂಡು ಹೊಡೀರಿ. ಗಣೇಶ ಮಂಡಳಿಯವರು ಯಾವಾಗಲೂ ಗಲಾಟೆ, ಗೊಂದಲ ಮಾಡುವುದಿಲ್ಲ. ಗಣೇಶೋತ್ಸವ ಆಚರಣೆ ಮೈದಾನದಲ್ಲಿ ಮಾಡಲಾಗುವುದಿಲ್ಲ ಎಂದು ಜಮೀರ್ ಸೊಕ್ಕಿನಿಂದ ಹೇಳಿದ್ದಾರೆ. ಜಮೀರ್ ನೀನು ಮುಸ್ಲಿಂ ಮತದಿಂದ ಗೆದ್ದಿಲ್ಲ, ಎಲ್ಲರಿಂದಲೂ ಗೆದ್ದಿದ್ದೀಯ. ನೀನು ಮುಸ್ಲಿಂ ಶಾಸಕ ಅಲ್ಲಪ್ಪ, ನೀನೇ ಮುಂದೆ ನಿಂತು ಗಣೇಶೋತ್ಸವ ಮಾಡ್ಬೇಕು ಎಂದರು.
ಪರೇಶ್ ಮೇಸ್ತಾ ಕೊಲೆ ಮಾಡಿದ ಎ1 ಆರೋಪಿ ಅಣ್ಣಿಗೇರಿಯನ್ನು ವಕ್ಫ್ ಬೋರ್ಡ್‌ನ ಉಪಾಧ್ಯಕ್ಷನಾಗಿ ಬಿಜೆಪಿ ಸರ್ಕಾರ ನೇಮಕ ಮಾಡಿರುವುದು ನಾಚಿಕೆಗೇಡಿನ ಸಂಗತಿ. ಅವನೊಬ್ಬ ಕೊಲೆಗಡುಕ, ಕ್ರಿಮಿನಲ್. ಕೊಲೆಗಡುಕನನ್ನು ವಕ್ಫ್ ಬೋರ್ಡ್ ಉಪಾಧ್ಯಕ್ಷನಾಗಿ ನೇಮಕ ಮಾಡಿದ ಅಧಿಕಾರಿಗಳನ್ನು ವಜಾ ಮಾಡಿ. ವಕ್ಫ್ ಬೋರ್ಡ್ ಅಧ್ಯಕ್ಷ ಶಫೀನೇ ಕೊಲೆಗಡುಕ, ಹಿಂದೂದ್ರೋಹಿ. ಅವನೇ ಕಾಂಗ್ರೆಸ್‌ನವರನ್ನು, ಕೊಲೆಗಡುಕರನ್ನು, ಹಿಂದೂ ವಿರೋಧಿಗಳನ್ನು ವಕ್ಫ್ ಬೋರ್ಡ್‌ನಲ್ಲಿ ಸೇರಿಸುತ್ತಿದ್ದಾನೆ. ಬಿಜೆಪಿಯವರೇ ಜಾಗೃತರಾಗಿ, ಅನಾಹುತ ಆಗಬಹುದು ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ತಿರಂಗಮಯವಾದ ಸುಪ್ರಸಿದ್ಧ ಮುಗಳಖೋಡ ಶ್ರೀಮಠ
ಬೆಂಗಳೂರಿನ ಜೈಲಿನಲ್ಲಿ ಆರೋಪಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ. ಜೈಲಿನಲ್ಲಿ ವೀಡಿಯೋ ಮಾಡುವ ಮೂಲಕ ಮುಸ್ಲಿಂ ಗೂಂಡಾಗಳು ಅವ್ಯವಹಾರ ಮಾಡುತ್ತಿದ್ದಾರೆ. ಇದಕ್ಕೆ ಒಂದು ವಿಶೇಷ ಸಮಿತಿ ನಿಯೋಜನೆ ಮಾಡಿ ಎಂದು ಮುತಾಲಿಕ್ ಒತ್ತಾಯಿಸಿದರು.
Live Tv
[brid partner=56869869 player=32851 video=960834 autoplay=true]
ಲಕ್ನೋ: ಅಧಿಕಾರಕ್ಕೆ ಬಂದ 100 ದಿನದಲ್ಲಿ 68 ಸಾವಿರ ಒತ್ತುವರಿಯನ್ನು ತೆರವುಗೊಳಿಸಿ 844 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಬಿಜೆಪಿ ಸರ್ಕಾರದ 100 ದಿನದ ಸಾಧನೆಯ ವಿವರವನ್ನು ಪ್ರಕಟಿಸಿದ ಅವರು, ಬಿಜೆಪಿ ಸರ್ಕಾರ ಕುಶಾಸನ(ಕೆಟ್ಟ ಆಡಳಿತ) ತೆಗೆದು ಹಾಕಿ ಸುಶಾಸನವನ್ನು(ಉತ್ತಮ ಆಡಳಿತ) ನೀಡುತ್ತಿದ್ದೇವೆ ಎಂದು ತಿಳಿಸಿದರು.
100 ದಿನದ ಬಳಿಕ ಮುಂದೆ 6 ತಿಂಗಳು, ವರ್ಷ, 2 ವರ್ಷ, 5 ವರ್ಷದ ಟಾರ್ಗೆಟ್ ಸಿದ್ಧಪಡಿಸಿ ಕಾರ್ಯಯೋಜನೆ ಮಾಡುತ್ತೇವೆ. ನಮ್ಮ ಸರ್ಕಾರ ಭಾಷಣಗಳನ್ನು ನಂಬುವುದಿಲ್ಲ. ನಾವು ನೀಡಿದ ಭರವಸೆಗಳನ್ನು ಈಡೇರಿಸುವುದರಲ್ಲಿ ನಂಬಿಕೆ ಇಟ್ಟಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಹಿಂದೂ ದೇವರ ಫೋಟೋವಿದ್ದ ಪೇಪರ್‌ನಲ್ಲಿ ಕೋಳಿ ಮಾಂಸ ಮಾರಾಟ – ವ್ಯಕ್ತಿ ಅರೆಸ್ಟ್
विधान सभा चुनाव के बाद उ.प्र. के स्थानीय प्राधिकारी विधान परिषद की 36 सीटों पर हुए चुनाव में 33 सीट भाजपा और 3 सीटें निर्दलीय प्रत्याशियों ने जीती थीं।
सपा, बसपा और कांग्रेस जीरो पर रहीं।
इतने वर्षों बाद पहली बार उत्तर प्रदेश विधान मंडल का उच्च सदन अब कांग्रेस मुक्त हो गया है।
ಕಾನೂನು ಸುವ್ಯವಸ್ಥೆಯ ಬಗ್ಗೆ ಮಾತಾನಡಿದ ಅವರು, ಕ್ರಿಮಿನಲ್ ಮತ್ತು ಮಾಫಿಯಾ ವ್ಯಕ್ತಿಗಳು ಮಾಡಿಕೊಂಡಿದ್ದ ಒಟ್ಟು 68 ಸಾವಿರ ಅಕ್ರಮ ಒತ್ತುವರಿಯನ್ನು ತೆರವು ಮಾಡಲಾಗಿದೆ. ಮೊದಲ ಬಾರಿಗೆ 1.2 ಲಕ್ಷ ಲೌಡ್ ಸ್ಪೀಕರ್‌ಗಳನ್ನು ತೆರವು ಮಾಡಲಾಗಿದೆ ಅಥವಾ ಧ್ವನಿಯನ್ನು ಇಳಿಕೆ ಮಾಡಲಾಗಿದೆ ಎಂದು ವಿವರಿಸಿದರು.
ಅಜಂಪುರ, ರಾಂಪುರ ಲೋಕಸಭಾ ಉಪಚುನಾವಣೆ ಗೆಲುವು, ವಿಧಾನ ಪರಿಷತ್‌ನಲ್ಲಿ 33 ಸ್ಥಾನಗಳ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಅವರು, 36ರ ಪೈಕಿ 33 ಸ್ಥಾನಗಳನ್ನು ನಾವು ಗೆದ್ದಿದ್ದೇವೆ. ಉಳಿದ ಮೂರು ಸ್ಥಾನಗಳನ್ನು ಪಕ್ಷೇತರರು ಗೆದ್ದಿದ್ದಾರೆ. ಉತ್ತರ ಪ್ರದೇಶದ ವಿಧಾನ ಪರಿಷತ್ ಸ್ಥಾಪನೆಯಾಗಿ 37 ವರ್ಷದ ಬಳಿಕ ಈಗ ಕಾಂಗ್ರೆಸ್ ಮುಕ್ತವಾಗಿದೆ ಎಂದು ತಿಳಿಸಿದರು.
Live Tv
[brid partner=56869869 player=32851 video=960834 autoplay=true]
ಧಾರವಾಡ: ರಾಜ್ಯದಲ್ಲಿ ಮೈಕ್ ದಂಗಲ್‍ನ 2ನೇ ಚಾಪ್ಟರ್ ಶುರು ಮಾಡಲು ಶ್ರೀರಾಮಸೇನೆ ಸಜ್ಜಾಗಿದೆ. ಸುಪ್ರೀಂಕೋರ್ಟ್ ಆದೇಶದನ್ವಯ ಮೈಕ್ ತೆರವು ವಿಳಂಬವಾಗಿರೋದ್ರಿಂದ ಇವತ್ತು ಬಿಜೆಪಿ ಮುಖಂಡರ ಮನೆ ಮುಂದೆ ಪ್ರತಿಭಟನೆ ಆಯೋಜಿಸಲಾಗಿದೆ.
ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಮನೆ ಮುಂದೆ ಧರಣಿಗೆ ಶ್ರೀರಾಮಸೇನೆ ಕರೆ ಕೊಟ್ಟಿದೆ. ಇಂದು ಬೆಳಗ್ಗೆ 11 ಗಂಟೆಗೆ ಆರಂಭವಾಗಲಿರುವ ಪ್ರತಿಭಟನೆಗೆ ಹಲವು ಹಿಂದೂಪರ ಸಂಘಟನೆಗಳು ಬೆಂಬಲ ಕೊಟ್ಟಿವೆ. ಇದನ್ನೂ ಓದಿ:ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದಕ್ಕೆ ಮಗಳನ್ನು ಕೊಂದ ಪೋಷಕರು
ಈಗಾಗಲೇ ಸೋಷಿಯಲ್ ಮೀಡಿಯಾ ಮೂಲಕ ಧರಣಿಯಲ್ಲಿ ಭಾಗವಹಿಸುವಂತೆ ಶ್ರೀರಾಮಸೇನೆಯ ಸದಸ್ಯರಿಗೆ, ಪದಾಧಿಕಾರಿಗಳಿಗೆ, ಹಿಂದೂಪರ ಸಂಘಟನೆ ಮತ್ತು ಹಿಂದೂಗಳಿಗೆ ಸಂದೇಶ ರವಾನಿಸಲಾಗಿದೆ. ಈ ಬಗ್ಗೆ ಜೂನ್ 2ರಂದು ನಡೆಸಿದ ಸುದ್ದಿಗೋಷ್ಠಿಯಲ್ಲಿ ಮುತಾಲಿಕ್ ಮಾಹಿತಿ ಕೊಟ್ಟಿದ್ದರು. ಜೂನ್ 8ರಂದು ಬಿಜೆಪಿ ಎಂಎಲ್‍ಎಗಳ ಕಚೇರಿ ಮುಂದೆ ಧರಣಿ ಕೂರುವ ಬಗ್ಗೆ ಎಚ್ಚರಿಸಿದ್ದರು. ಇದನ್ನೂ ಓದಿ: ಪ್ರವಾದಿ ಮೊಹಮ್ಮದ್ ಕುರಿತು ಅವಹೇಳನಕಾರಿ ಟ್ವೀಟ್ – ಬಿಜೆಪಿ ಮುಖಂಡ ಅರೆಸ್ಟ್
ಬೆಂಗಳೂರು: ಧಾರ್ಮಿಕ ಕೇಂದ್ರಗಳಲ್ಲಿ ಅಳವಡಿಸಲಾಗಿರುವ ಲೌಡ್ ಸ್ಪೀಕರ್ ಸಕ್ರಮಗೊಳಿಸಲು ನಗರದ ಠಾಣೆಗಳಲ್ಲಿ ಸಾಲು ಸಾಲು ಅರ್ಜಿ ಸಲ್ಲಿಕೆಯಾಗಿದೆ.
ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳಲ್ಲಿ ಮೈಕ್ ಬಳಕೆ ವಿಚಾರ ತಾರಕಕ್ಕೇರಿದ್ದರಿಂದ ಸಕ್ರಮಕ್ಕೆ ಸರ್ಕಾರ 15 ದಿನಗಳ ಗಡುವು ನೀಡಿ ಡೆಡ್‍ಲೈನ್ ಕೊಟ್ಟಿತ್ತು. ಅಲ್ಲದೇ ಯಾವುದೇ ಧಾರ್ಮಿಕ ಕೇಂದ್ರಗಳಲ್ಲಿ ಲೌಡ್ ಸ್ಪೀಕರ್ ಬಳಕೆಗೆ ಪೊಲೀಸರ ಅನುಮತಿ ಕಡ್ಡಾಯ ಎಂದು ಸರ್ಕಾರ ಆದೇಶಿಸಿತ್ತು.
ಈ ಬೆನ್ನಲ್ಲೇ ನಗರದ ಎಂಟೂ ವಿಭಾಗಗಳ ಎಸಿಪಿ ಕಚೇರಿಗಳು, ಠಾಣೆಗಳಿಗೆ ಸಾಲು ಸಾಲು ಅರ್ಜಿಗಳು ಬಂದಿವೆ. ನಗರದಾದ್ಯಂತ 700ಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಲಾಗಿದೆ. ಇದರಲ್ಲಿ ಮಸೀದಿ ಅರ್ಜಿಗಳೇ ಜಾಸ್ತಿ ಇದೆ. 62 ದೇವಾಲಯ, 611 ಮಸೀದಿ, 42 ಚರ್ಚ್, ಇತರೆ ಕೇಂದ್ರಗಳಿಂದ 2 ಅರ್ಜಿಗಳು ಸಲ್ಲಿಕೆಯಾಗಿವೆ. ಇದನ್ನೂ ಓದಿ: ಧರ್ಮ ದಂಗಲ್‌ಗೆ ತೆರೆ ಎಳೆಯಲು ಮುಂದಾದ ಬಿಜೆಪಿ – ರಾಜ್ಯ ಘಟಕಗಳಿಗೆ ಹೈಕಮಾಂಡ್ ವಾರ್ನಿಂಗ್
ಯಾವ ವಲಯದಿಂದ ಎಷ್ಟು?
ಬೆಂಗಳೂರು ಕೇಂದ್ರ ವಿಭಾಗ 36 ಅರ್ಜಿ – ದೇವಾಲಯ 1, ಮಸೀದಿ 32, 2 ಚರ್ಚ್
ಪೂರ್ವ ವಿಭಾಗ 233 ಅರ್ಜಿ – ದೇವಾಲಯ 22, ಮಸೀದಿ 191, 20 ಚರ್ಚ್
ಪಶ್ಚಿಮ ವಿಭಾಗ 114 ಅರ್ಜಿ – ದೇವಾಲಯ 5, ಮಸೀದಿ 108, 1 ಚರ್ಚ್
ಸಾಂದರ್ಭಿಕ ಚಿತ್ರ
ದಕ್ಷಿಣ ವಿಭಾಗ 47 ಅರ್ಜಿ – ದೇವಾಲಯ 2, ಮಸೀದಿ 43, ಇತರೆ 2
ಉತ್ತರ ವಿಭಾಗ 101 ಅರ್ಜಿ – ದೇವಾಲಯ 10, ಮಸೀದಿ 79, 12 ಚರ್ಚ್
ಈಶಾನ್ಯ ವಿಭಾಗ 86 ಅರ್ಜಿ – ದೇವಾಲಯ 18, ಮಸೀದಿ 66, 2 ಚರ್ಚ್
ಆಗ್ನೇಯ ವಿಭಾಗ 67 ಅರ್ಜಿ – ದೇವಾಲಯ 3, ಮಸೀದಿ 60, 4 ಚರ್ಚ್
ವೈಟ್ ಫೀಲ್ಡ್ ವಿಭಾಗ 33 ಅರ್ಜಿ – ದೇವಾಲಯ 1, ಮಸೀದಿ 31, 1 ಚರ್ಚ್
ಹುಬ್ಬಳ್ಳಿ: ಸುಪ್ರೀಂ ಆದೇಶ ಪಾಲಸಿದವರ ಮೇಲೆ ಗುಂಡು ಹೊಡಿತೀವಿ ಎಂದು ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಲೌಡ್ ಸ್ಪೀಕರ್ ವಿಚಾರವಾಗಿ ಸರ್ಕಾರ ನೀಡಿದ್ದ ಗಡುವು ಮುಗಿದಿದೆ. ಆದರೂ ಸರ್ಕಾರ ಏನು ಮಾಡುತ್ತಿದೆ? ಹಿಂದೂಗಳ ಹೆಸರಿನಲ್ಲಿ ಅಧಿಕಾರ ಹಿಡಿದ ನಿಮಗೆ ಈ ಬಗ್ಗೆ ಅರಿವು ಇಲ್ವಾ? ಲೌಡ್ ಸ್ಪೀಕರ್ ವಿರುದ್ಧ ಕ್ರಮ ತೆಗೆದುಕೊಳ್ಳಲು ನಿಮಗೆ ಧಮ್ ಇಲ್ವಾ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು. ಇದನ್ನೂ ಓದಿ: ‘ಸಾಮ್ರಾಟ್ ಪೃಥ್ವಿರಾಜ್’ ಸಿನಿಮಾ ನೋಡಿ ಪತ್ನಿಗೆ ‘ಚಲಿಯೇ ಹುಕುಂ’ ಎಂದ ಅಮಿತಾ ಶಾ
ಹುಬ್ಬಳ್ಳಿಯ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುತಾಲಿಕ್, ಒಂದು ವರ್ಷದಿಂದ ನಾವು ಲೌಡ್ ಸ್ಪೀಕರ್ ವಿರುದ್ಧ ಹೋರಾಟ ನಡೆಸುತ್ತಿದ್ದೇವೆ. ಇದರ ಮುಂದುವರಿದ ಭಾಗವಾಗಿ ನಾವು ಭಜನೆ ಹಾಗೂ ಭಕ್ತಿಗೀತೆಗಳ ಅಭಿಯಾನಕ್ಕೂ ಚಾಲನೆ ನೀಡಿದ್ದೇವೆ. ಆದರೆ ಸರ್ಕಾರ ಕೇವಲ ಒಂದು ಪತ್ರ ಕಳುಹಿಸಿ ತಮ್ಮ ಕೆಲಸ ಮುಗಿಯಿತು ಎಂದುಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.
ನಮಗೆ 10 ಹಿಂದೂ ಸಂಘಟನೆಗಳ ಬೆಂಬಲವಿದೆ. ಹಿಂದೂಗಳ ಹೆಸರಿನಲ್ಲಿ ಅಧಿಕಾರ ಹಿಡಿದಿರುವ ನಿಮಗೆ ಈ ಬಗ್ಗೆ ಅರಿವು ಇಲ್ವಾ? ಇನ್ನು ನಮಗೂ ನಿಮ್ಮ ಮೇಲೆ ನಂಬಿಕೆ ಇರುವುದಿಲ್ಲ. ಈ ತಿಂಗಳ 8 ರಿಂದ ಬಿಜೆಪಿಯ ಎಲ್ಲಾ ಶಾಸಕರ ಕಚೇರಿ ಎದುರು ಧರಣಿ ನಡೆಸುತ್ತೇವೆ. ನಿಮ್ಮ ನಾಟಕವನ್ನು ಬಟಬಯಲು ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಸರ್ಕಾರ ನನ್ನ ಕೈಗೆ ಕೊಡಿ:
ಲೌಡ್ ಸ್ಪೀಕರ್ ವಿಚಾರದಲ್ಲಿ ಯಾರು ಕಾನೂನು ಪಾಲನೆ ಮಾಡುತ್ತಿಲ್ಲವೋ, ಅವರಿಗೆ ಗುಂಡು ಹೊಡೆಯಬೇಕು. ನಿಮ್ಮಿಂದ ಸಾಧ್ಯವಿಲ್ಲ ಎಂದರೆ ನನಗೆ ಅಧಿಕಾರ ಕೊಡಿ, ನಾನು ಗುಂಡು ಹೊಡೆಯುತ್ತೇನೆ. ಸುಪ್ರೀಂಕೋರ್ಟ್ ಆದೇಶ ಪಾಲನೆ ಮಾಡದವರ ಮೇಲೆ ಗುಂಡು ಹಾಕುತ್ತೇನೆ ಎಂದು ಹೇಳಿಕೆ ನೀಡಿದರು.
ಬಿಜೆಪಿ ನಿಮ್ಮಪ್ಪನದ್ದಲ್ಲ. ನಾವು ರಕ್ತ ಸುರಿಸಿ ಬಿಜೆಪಿ ಕಟ್ಟಿರುವುದು. ರಾಜಕೀಯ ಈಗ ಮಾತನಾಡುವುದಿಲ್ಲ. ನಮ್ಮ ಶ್ರಮದಿಂದ ನೀವು ಅಧಿಕಾರ ಅನುಭವಿಸುತ್ತಿದ್ದೀರಿ ಎಂದು ಆರೋಪಿಸಿದರು. ಇದನ್ನೂ ಓದಿ: ನಾನು ಒಬ್ಬ ಸಣ್ಣ ಸೈನಿಕ: ಕಮಲ ಹಿಡಿದ ಹಾರ್ದಿಕ್ ಪಟೇಲ್
ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ ವಿಚಾರವಾಗಿ ಮಾತನಾಡಿದ ಮುತಾಲಿಕ್, ಇಂದು ಕೂಡಾ ಕಾಶ್ಮೀರದಲ್ಲಿ ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಇದು ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯ. ಇದು ಹೀಗೇ ಮುಂದುವರಿದರೆ ಇಡೀ ಸಮಾಜ ಒಟ್ಟಾಗಿ ಚಲೋ ಕಾಶ್ಮೀರ ಚಳುವಳಿ ನಡೆಸಬೇಕಾಗುತ್ತದೆ ಎಂದು ತಿಳಿಸಿದರು.
ಬೆಂಗಳೂರು: ರಾಜ್ಯದಲ್ಲಿ ಆರಂಭಗೊಂಡಿದ್ದ ಲೌಡ್ ಸ್ಪೀಕರ್ ವಿವಾದಕ್ಕೆ ಇದೀಗ ಪೊಲೀಸರು ಫುಲ್‍ಸ್ಟಾಪ್ ಹಾಕಲು ಮುಂದಾಗಿದ್ದು, ಅನಧಿಕೃತ ಮೈಕ್‍ಗಳಿಗೆ ಮೇ 25ರೊಳಗೆ ಅನುಮತಿ ಪಡೆಯಲು ಡೆಡ್‍ಲೈನ್ ನೀಡಲಾಗಿದೆ.
ಸಾಂದರ್ಭಿಕ ಚಿತ್ರ
ಕೆಲ ದಿನಗಳ ಹಿಂದೆ ರಾಜ್ಯದಲ್ಲಿ ಲೌಡ್ ಸ್ಪೀಕರ್ ವಿವಾದ ತಾರಕಕ್ಕೇರಿತ್ತು. ಬಳಿಕ ಸರ್ಕಾರ ಅನಧಿಕೃತ ಮೈಕ್‍ಗಳ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಇದೀಗ ಅನಧಿಕೃತ ಇರುವ ಮೈಕ್‍ಗೆ 25ರ ಒಳಗಾಗಿ ಅನುಮತಿ ಪಡೆಯಬೇಕು. ಆಯಾ ಎಸಿಪಿ ವ್ಯಾಪ್ತಿಯ ಕಚೇರಿಯಲ್ಲಿ ಸಂಬಂಧಪಟ್ಟವರು ಅರ್ಜಿ ಸಲ್ಲಿಸಿ ಅಧಿಕೃತ ಮಾಡಿಕೊಳ್ಳಬೇಕಾಗಿ ಸೂಚಿಸಿದೆ. ಇದನ್ನೂ ಓದಿ: ಸಿಎಂ ದಾವೋಸ್ ಪ್ರವಾಸ ನಾಳೆ ನಿರ್ಧಾರ: ಕುತೂಹಲ ಮೂಡಿಸಿದ ಬಿಜೆಪಿ ಹೈಕಮಾಂಡ್ ಸಂದೇಶ
ಮೇ 25ರ ಒಳಗಾಗಿ ಅರ್ಜಿ ಸಲ್ಲಿಸಿ ಅನಧಿಕೃತ ಮೈಕ್‍ಗಳನ್ನು ಅಧಿಕೃತ ಮಾಡಿಕೊಳ್ಳದೇ ಹೊದರೆ ಕ್ರಮಕೈಗೊಳ್ಳುವ ಎಚ್ಚರಿಕೆ ನೀಡಿದ್ದು, ರಜೆ ದಿನ ಹೊರತುಪಡಿಸಿ ಉಳಿದ ದಿನಗಳಲ್ಲಿ ಹೋಗಿ ಅರ್ಜಿ ಸಲ್ಲಿಸುವಂತೆ ಸಂಬಂಧಪಟ್ಟವರಿಗೆ ಪೊಲೀಸ್ ಇಲಾಖೆ ಸೂಚನೆ ನೀಡಿದೆ. ಇದನ್ನೂ ಓದಿ: ಸ್ವಾಮೀಜಿ ವೇಷಧರಿಸಿ ತಲೆಮರೆಸಿಕೊಂಡಿದ್ದ ಆ್ಯಸಿಡ್ ನಾಗ ಅರೆಸ್ಟ್
ರಾಜ್ಯದಲ್ಲಿ ಮಾತ್ರವಲ್ಲದೆ ಉತ್ತರ ಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಕೆಲ ರಾಜ್ಯಗಳಲ್ಲಿ ಲೌಡ್ ಸ್ಪೀಕರ್ ವಿವಾದ ಬಾರಿ ಚರ್ಚೆಗೆ ಗ್ರಾಸವಾಗಿದೆ. ಉತ್ತರ ಪ್ರದೇಶದಲ್ಲಿ ಈಗಾಗಲೇ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.
ಧಾರವಾಡ: ಮಸೀದಿಗಳಲ್ಲಿ ಹಾಕಿರುವ ಧ್ವನಿವರ್ಧಕ ತೆಗೆಯದಿದ್ದರೆ ನಾವೂ ಬೆಳಗ್ಗೆ 5ಕ್ಕೆ ಮಂದಿರಗಳಲ್ಲಿ ಈಶ್ವರನ ಭಜನೆ, ಓಂಕಾರ ಹಾಕಿಸುತ್ತೇವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
6 ತಿಂಗಳ ಹಿಂದೆ ನಮ್ಮ ಸಂಘಟನೆಯೂ ಮೈಕ್ ಬಗ್ಗೆ ಮನವಿ ಮಾಡಿತ್ತು. ಸುಪ್ರೀಂಕೋರ್ಟ್ ತೀರ್ಪಿನ ಆಧಾರದ ಮೇಲೆ ನಡೆದುಕೊಳ್ಳಲು ಕೇಳಿದ್ದೇವೆ. ಬೆಳಗ್ಗೆ 5 ಗಂಟೆಗೆ ಲೌಡ್ ಸ್ಪೀಕರ್ ಹಾಕುವುದನ್ನು ತಡೆಯಲು ಮನವಿ ಮಾಡಿದ್ದೆವು. ಮೊದಲು ತಹಸೀಲ್ದಾರರಿಗೆ ಮನವಿ ಮಾಡಿದ್ದೆವು. ಆದರೆ ಎಲ್ಲಿಯೂ ತಹಸೀಲ್ದಾರರು ಕ್ರಮ ಕೈಗೊಳ್ಳಲಿಲ್ಲ. ಧ್ವನಿ ಮಾಲಿನ್ಯ ಆಗುತ್ತಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಗೂ ಮನವಿ ಮಾಡಿದ್ದೆವು. ಆದರೂ ಪ್ರಯೋಜನವಾಗಲಿಲ್ಲ ಎಂದರು. ಇದನ್ನೂ ಓದಿ: ಅಲ್ಲಾಹು ಅಕ್ಬರ್ ಎಂದು ಕೂಗುತ್ತ ಗೋರಖ್‍ನಾಥ ದೇವಾಲಯ ಪ್ರವೇಶಿಸಲು ಯತ್ನಿಸಿದ್ದ ಯುವಕ ಬಂಧನ
ಇದೀಗ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡುತ್ತೇವೆ. ಕೊನೆಯ ಎಚ್ಚರಿಕೆಯಾಗಿ ಮನವಿ ಸಲ್ಲಿಸುತ್ತಿದ್ದೇವೆ. ಕೋರ್ಟ್ ಆದೇಶ ಪಾಲಿಸಲು ಮುಸ್ಲಿಂ ಸಮಾಜಕ್ಕೆ ಸರ್ಕಾರ ಹೇಳಬೇಕು. ಅವರ ಪ್ರಾರ್ಥನೆಗೆ ನಮ್ಮ ವಿರೋಧ ಇಲ್ಲ. ಆದರೆ ಧ್ವನಿವರ್ಧಕಗಳ ಬಳಕೆಗೆ ವಿರೋಧ ಇದೆ. ಇದರಿಂದ ಸಾಕಷ್ಟು ಜನರಿಗೆ ತೊಂದರೆಯಾಗುತ್ತಿದೆ ಎಂದರು.
ಈಗ ಮಹಾರಾಷ್ಟ್ರದಲ್ಲಿ ರಾಜ್ ಠಾಕ್ರೆ ಧ್ವನಿ ಎತ್ತಿದ್ದಾರೆ. ಇದಕ್ಕೆ ನಾವು ಬೆಂಬಲ ಕೊಡುತ್ತೇವೆ. ಸರ್ಕಾರ ಈ ಲೌಡ್‌ಸ್ಪೀಕರ್ ನಿಲ್ಲಿಸಬೇಕು. ಮಸೀದಿಯಲ್ಲಿ ಮೈಕ್ ನಿಲ್ಲಿಸಲಾಗದ ಸರ್ಕಾರ ಹೇಡಿ ಸರ್ಕಾರ. ನಾವೂ ಇನ್ನು ಬೆಳಗ್ಗೆ 5 ಗಂಟೆಗೆ ಮಂದಿರ, ಮಠಗಳಲ್ಲಿ ಮೈಕ್ ಅಳವಡಿಸಿ ರಾಮ, ಈಶ್ವರನ ಭಜನೆ, ಓಂಕಾರ ಹಾಕುತ್ತೇವೆ ಎಂದರು.