Tag: ವಂಚನೆ ಪ್ರಕರಣ

  • ಮೊದಲು 60 ಕೋಟಿ ಠೇವಣಿ ಇಡಿ – ಶಿಲ್ಪಾ ಶೆಟ್ಟಿ ದಂಪತಿ ವಿದೇಶಿ ಪ್ರವಾಸಕ್ಕೆ ಬಾಂಬೆ ಹೈಕೋರ್ಟ್ ತಡೆ

    ಮೊದಲು 60 ಕೋಟಿ ಠೇವಣಿ ಇಡಿ – ಶಿಲ್ಪಾ ಶೆಟ್ಟಿ ದಂಪತಿ ವಿದೇಶಿ ಪ್ರವಾಸಕ್ಕೆ ಬಾಂಬೆ ಹೈಕೋರ್ಟ್ ತಡೆ

    – ಲಾಸ್ ಏಂಜಲೀಸ್‌ ಸೇರಿ ವಿವಿಧ ದೇಶಗಳ ಪ್ರವಾಸಕ್ಕೆ ಅನುಮತಿ ಕೋರಿದ್ದ ಶಿಲ್ಪಾ ಶೆಟ್ಟಿ ದಂಪತಿ

    ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಗೆ ಸಂಕಷ್ಟಗಳು ಹೆಗಲೇರಿಕೊಂಡಿವೆ. 60 ಕೋಟಿ ವಂಚನೆ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾಗೆ (Raj Kundra) ಭಾರಿ ಹಿನ್ನಡೆಯಾಗಿದೆ. ಅಮೆರಿಕದ ಲಾಸ್ ಏಂಜಲೀಸ್‌ ಸೇರಿದಂತೆ ಇತರ ದೇಶಗಳ ಪ್ರವಾಸಕ್ಕೆ ತೆರಳಲು ಮುಂದಾಗಿದ್ದ ಶಿಲ್ಪಾ ಶೆಟ್ಟಿ (Shilpa Shetty) ದಂಪತಿಗೆ ಬಾಂಬೆ ಹೈಕೋರ್ಟ್‌ ತಡೆ ನೀಡಿದೆ.

    ವಿದೇಶಕ್ಕೆ ಹೋಗೋದಾದ್ರೆ 60 ಕೋಟಿ ರೂಪಾಯಿ ಠೇವಣಿ ಇಟ್ಟು ಹೋಗಿ ಎಂದು ಖಡಕ್ ಆಗಿ ಹೇಳಿದೆ. 60 ಕೋಟಿ ರೂಪಾಯಿ ವಂಚನೆ ಆರೋಪದಡಿ ತಮ್ಮ ವಿರುದ್ಧ ಹೊರಡಿಸಲಾದ ಲುಕ್‌ಔಟ್‌ ನೋಟಿಸ್ ರದ್ದುಗೊಳಿಸುವಂತೆ ಕೋರಿ ಶಿಲ್ಪಾ ಶೆಟ್ಟಿ, ರಾಜ್‌ಕುಂದ್ರಾ ಬಾಂಬೆ ಕೋರ್ಟ್‌ಗೆ (Bombay High Court) ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: 60 ಕೋಟಿ ವಂಚನೆ ಕೇಸ್; ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ವಿರುದ್ಧ ಲುಕ್ ಔಟ್ ನೋಟಿಸ್

    ಕಾರ್ಯಕ್ರಮ ನಿಮಿತ್ತ ಲಾಸ್ ಎಂಜಲೀಸ್ (Los Angeles) ಮತ್ತು ಇತರ ದೇಶಗಳಿಗೆ ತೆರಳಬೇಕಿತ್ತು. ಹೀಗಾಗಿ ಬಾಂಬೆ ಹೈಕೋರ್ಟ್, ಲಾಸ್ ಏಂಜಲೀಸ್ ಮತ್ತು ಇತರ ವಿದೇಶಗಳಿಗೆ ಪ್ರಯಾಣಿಸಲು ಬಯಸಿದರೆ ಮೊದಲು 60 ಕೋಟಿ ರೂಪಾಯಿ ಡೆಪಾಸಿಟ್ ಇಡಿ ಎಂದು ಹೇಳಿದೆ. ಇದನ್ನೂ ಓದಿ: ರಸ್ತೆ ಬದಿ `ಬಡವರ ಬರ್ಗರ್’ ತಿಂದು ಓವರ್‌ ಆ್ಯಕ್ಟಿಂಗ್ ಮಾಡಿದ್ರಾ ಶಿಲ್ಪಾ ಶೆಟ್ಟಿ?

    ಏನಿದು ಕೇಸ್‌?
    2015 ರಿಂದ 2023ರ ನಡುವೆ, ದಂಪತಿ ತಮ್ಮ ವ್ಯವಹಾರ ವಿಸ್ತರಿಸುವ ನೆಪದಲ್ಲಿ ನನ್ನಿಂದ 60 ಕೋಟಿ ರೂ.ಗಳನ್ನು ಪಡೆದಿದ್ದಾರೆ. ಆದರೆ, ಅದನ್ನು ವೈಯಕ್ತಿಕ ವೆಚ್ಚಗಳಿಗೆ ಖರ್ಚು ಮಾಡಿದ್ದಾರೆ ಎಂದು ಉದ್ಯಮಿ ದೀಪಕ್ ಕೊಠಾರಿ ಆರೋಪಿಸಿದ್ದರು. ದಂಪತಿ ಹಣವನ್ನು ಸಾಲವಾಗಿ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಬಿಗ್‌ಬಾಸ್‌ಗೆ ಬಿಗ್‌ ರಿಲೀಫ್‌ – ಸಮಸ್ಯೆ ಇತ್ಯರ್ಥಕ್ಕೆ 10 ದಿನ ಕಾಲಾವಕಾಶ

    12% ವಾರ್ಷಿಕ ಬಡ್ಡಿಯೊಂದಿಗೆ ನಿರ್ದಿಷ್ಟ ಸಮಯದೊಳಗೆ ಹಣ ಹಿಂತಿರುಗಿಸುವುದಾಗಿ ಶಿಲ್ಪಾ ಶೆಟ್ಟಿ ಭರವಸೆ ನೀಡಿದ್ದರು. 2016ರಲ್ಲಿ ಲಿಖಿತವಾಗಿ ವೈಯಕ್ತಿಕ ಖಾತರಿ ಕೂಡ ನೀಡಿದ್ದರು. ಆದರೆ, ಕೆಲವೇ ತಿಂಗಳುಗಳಲ್ಲಿ ಶಿಲ್ಪಾ ಶೆಟ್ಟಿ ಅವರು ಸಂಸ್ಥೆ ನಿರ್ದೇಶಕಿ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು ಉದ್ಯಮಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಕೋರ್ಟ್‌ನಲ್ಲಿ ಕೇಸ್‌ ವಿಚಾರಣೆ ನಡೆಯುತ್ತಿದೆ.

  • 3.15 ಕೋಟಿ ವಂಚನೆ ಆರೋಪ ಪ್ರಕರಣ – ನಟ ಧ್ರುವ ಸರ್ಜಾಗೆ ತಾತ್ಕಾಲಿಕ ರಿಲೀಫ್‌

    3.15 ಕೋಟಿ ವಂಚನೆ ಆರೋಪ ಪ್ರಕರಣ – ನಟ ಧ್ರುವ ಸರ್ಜಾಗೆ ತಾತ್ಕಾಲಿಕ ರಿಲೀಫ್‌

    ವಂಚನೆ ಆರೋಪ ಪ್ರಕರಣದಲ್ಲಿ ನಟ ಧ್ರುವ ಸರ್ಜಾಗೆ (Dhruva Sarja) ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ನಟನ ವಿರುದ್ಧ ನ್ಯಾಯಾಲಯದ ಅನುಮತಿಯಿಲ್ಲದೆ ಆರೋಪಪಟ್ಟಿ ಸಲ್ಲಿಸದಂತೆ ಬಾಂಬೆ ಹೈಕೋರ್ಟ್, ಮುಂಬೈ ಪೊಲೀಸರಿಗೆ ನಿರ್ದೇಶನ ನೀಡಿದೆ.

    ಮುಖ್ಯ ನ್ಯಾಯಮೂರ್ತಿ ಚಂದ್ರಶೇಖರ್ ಮತ್ತು ನ್ಯಾಯಮೂರ್ತಿ ಗೌತಮ್ ಅಂಕಡ್ ಅವರಿದ್ದ ವಿಭಾಗೀಯ ಪೀಠವು, ನ್ಯಾಯಾಲಯದ ಅನುಮತಿಯಿಲ್ಲದೆ ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಸದಂತೆ ನಿರ್ದೇಶಿಸಿದೆ. ಇದನ್ನೂ ಓದಿ: 3.15 ಕೋಟಿ ವಂಚನೆ ಆರೋಪ; ನಟ ಧ್ರುವ ಸರ್ಜಾ ವಿರುದ್ಧ ಎಫ್‌ಐಆರ್

    ನಟನ ವಿರುದ್ಧ ಮುಂಬೈನಲ್ಲಿ ಬಹುಕೋಟಿ ವಂಚನೆ ಪ್ರಕರಣವನ್ನು ಜಗ್ಗುದಾದ ಸಿನಿಮಾದ ನಿರ್ದೇಶಕ ರಾಘವೇಂದ್ರ ಹೆಗಡೆ ದಾಖಲಿಸಿದ್ದರು. ಈ ಸಂಬಂಧ ಮುಂಬೈ ಪೊಲೀಸರು ಕ್ರಿಮಿನಲ್‌ ಪ್ರಕರಣ ದಾಖಲಿಸಿದ್ದರು. ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

    ಧ್ರುವ ಸರ್ಜಾಗೆ ನಟಿಸುವುದಕ್ಕಾಗಿ ಮುಂಗಡ ಹಣ ನೀಡಿದ್ದೆ. 3.15 ಕೋಟಿ ರೂಪಾಯಿ ನೀಡಲಾಗಿತ್ತು. ಆದರೆ, ಸಿನಿಮಾದಲ್ಲಿ ನಟಿಸುವುದಕ್ಕೆ ಸರ್ಜಾ ನಿರಾಕರಿಸಿದ್ದರು. ಮುಂಗಡ ತಗೆದುಕೊಂಡಿರುವ ಹಣವನ್ನು ವಾಪಸ್ಸು ನೀಡುತ್ತಿಲ್ಲ ಎಂದು ಹೆಗಡೆ ದೂರಿನಲ್ಲಿ ಆರೋಪಿಸಿದ್ದರು. ಇದನ್ನೂ ಓದಿ: ಕೆಜಿಎಫ್ ಖ್ಯಾತಿಯ ಹರೀಶ್ ರಾಯ್ ಸಹಾಯಕ್ಕೆ ನಿಂತ ಧ್ರುವ ಸರ್ಜಾ

    ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ಸರ್ಜಾ ಅರ್ಜಿ ಸಲ್ಲಿಸಿದ್ದರು. ನಾನು ಯಾವುದೇ ಚಿತ್ರದಲ್ಲಿ ಕೆಲಸ ಮಾಡುವ ಒಪ್ಪಂದದಿಂದ ಎಂದಿಗೂ ಹಿಂದೆ ಸರಿದಿಲ್ಲ. ಹೆಗಡೆ ಅವರು ಕೆಲಸ ಮಾಡಲು ಯಾವುದೇ ಕಾರ್ಯಸಾಧ್ಯವಾದ ಸ್ಕ್ರಿಪ್ಟ್‌ಗಳನ್ನು ನೀಡಲು ವಿಫಲರಾಗಿದ್ದಾರೆ ಎಂದು ಸರ್ಜಾ ತಿಳಿಸಿದ್ದರು.

  • 60 ಕೋಟಿ ವಂಚನೆ ಕೇಸ್; ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ವಿರುದ್ಧ ಲುಕ್ ಔಟ್ ನೋಟಿಸ್

    60 ಕೋಟಿ ವಂಚನೆ ಕೇಸ್; ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ವಿರುದ್ಧ ಲುಕ್ ಔಟ್ ನೋಟಿಸ್

    ಮುಂಬೈ: ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ವಿರುದ್ಧ ಮುಂಬೈ ಪೊಲೀಸರು ಲುಕ್ ಔಟ್ ನೋಟಿಸ್‌ ಹೊರಡಿಸಿದ್ದಾರೆ.

    ತಮ್ಮ ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್‌ನ (ಈಗ ಕಾರ್ಯನಿರ್ವಹಿಸುತ್ತಿಲ್ಲ) ಹೂಡಿಕೆ ಒಪ್ಪಂದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಈ ಸೆಲೆಬ್ರಿಟಿ ದಂಪತಿ, ಉದ್ಯಮಿಯೊಬ್ಬರಿಗೆ ಸುಮಾರು 60 ಕೋಟಿ ರೂ. ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

    ಆರ್ಥಿಕ ಅಪರಾಧಗಳ ವಿಭಾಗ (EOW) ಮೂಲಗಳು ಸೂಚಿಸುವಂತೆ ಪೊಲೀಸರು ಈಗ ಶೆಟ್ಟಿ ಮತ್ತು ಕುಂದ್ರಾ ಅವರ ಪ್ರಯಾಣ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಕಂಪನಿಯ ಲೆಕ್ಕಪರಿಶೋಧಕರನ್ನು ಸಹ ವಿಚಾರಣೆಗೆ ಕರೆಯಲಾಗಿದೆ.

    2015 ರಿಂದ 2023 ರ ನಡುವೆ, ದಂಪತಿ ತಮ್ಮ ವ್ಯವಹಾರವನ್ನು ವಿಸ್ತರಿಸುವ ನೆಪದಲ್ಲಿ ನನ್ನಿಂದ 60 ಕೋಟಿ ರೂ.ಗಳನ್ನು ಪಡೆದಿದ್ದಾರೆ. ಆದರೆ, ಅದನ್ನು ವೈಯಕ್ತಿಕ ವೆಚ್ಚಗಳಿಗೆ ಖರ್ಚು ಮಾಡಿದ್ದಾರೆ ಎಂದು ಉದ್ಯಮಿ ದೀಪಕ್ ಕೊಠಾರಿ ಆರೋಪಿಸಿದ್ದರು. ದಂಪತಿ ಹಣವನ್ನು ಸಾಲವಾಗಿ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

    12% ವಾರ್ಷಿಕ ಬಡ್ಡಿಯೊಂದಿಗೆ ನಿರ್ದಿಷ್ಟ ಸಮಯದೊಳಗೆ ಹಣ ಹಿಂತಿರುಗಿಸುವುದಾಗಿ ಶಿಲ್ಪಾ ಶೆಟ್ಟಿ ಭರವಸೆ ನೀಡಿದ್ದರು. 2016ರಲ್ಲಿ ಲಿಖಿತವಾಗಿ ವೈಯಕ್ತಿಕ ಖಾತರಿ ಕೂಡ ನೀಡಿದ್ದರು. ಆದರೆ, ಕೆಲವೇ ತಿಂಗಳುಗಳಲ್ಲಿ ಶಿಲ್ಪಾ ಶೆಟ್ಟಿ ಅವರು ಸಂಸ್ಥೆ ನಿರ್ದೇಶಕಿ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು ಉದ್ಯಮಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

  • ಮಂಜುನಾಥಸ್ವಾಮಿಗೆ ಬೆದರಿಕೆ – ತುಮಕೂರಿನಲ್ಲಿ ಯೂಟ್ಯೂಬರ್‌ ಅರೆಸ್ಟ್‌

    ಮಂಜುನಾಥಸ್ವಾಮಿಗೆ ಬೆದರಿಕೆ – ತುಮಕೂರಿನಲ್ಲಿ ಯೂಟ್ಯೂಬರ್‌ ಅರೆಸ್ಟ್‌

    ತುಮಕೂರು: ಕುಣಿಗಲ್ ತಾಲ್ಲೂಕಿನ ಹಂಗರಹಳ್ಳಿ ವಿದ್ಯಾ ಚೌಡೇಶ್ವರಿ ಮಠದ ಬಾಲ ಮಂಜುನಾಥಸ್ವಾಮಿಗೆ ಬೆದರಿಕೆ ಹಾಕಿ 25 ಲಕ್ಷ ರೂ.ಗೆ ಬೇಡಿಕೆ ಇಟ್ಟ ಆರೋಪದಲ್ಲಿ ತುಮಕೂರಿನ ಯೂಟ್ಯೂಬರ್‌ (Youtuber) ಸುಧೀಂದ್ರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

    ಸುಧೀಂದ್ರ ಜನವರಿ 21 ರಿಂದಲೂ ಹಣಕ್ಕೆ ಬೇಡಿಕೆ ಇಡುತ್ತಿದ್ದ. ಜೂನ್ 28ರಂದು ಮಠದ ಸಿಬ್ಬಂದಿ ಅಭಿಲಾಷ್, ಸುರೇಶ್ ಮತ್ತು ಭಕ್ತರಾದ ಬೀಚನಹಳ್ಳಿ ಕರಿಗೌಡ ಅವರನ್ನು ಸಂಪರ್ಕಿಸಿ ಮಠಕ್ಕೆ ಸಂಬಂಧಿಸಿದಂತೆ ಹಲವು ವಿಷಯಗಳನ್ನು ಹೊಂದಿದ್ದು, ಅವುಗಳನ್ನು ಪ್ರಕಟಿಸಿದರೆ ಮಠದ ಹೆಸರು ಹಾಳಾಗುತ್ತದೆ. ಇದನ್ನು ಪ್ರಸಾರ ಮಾಡದಿರಲು 25 ಲಕ್ಷ ರೂ. ನೀಡಿ ಎಂದು ಬೆದರಿಕೆ ಹಾಕಿದ್ದ ಎಂದು ಸ್ವಾಮೀಜಿ ದೂರಿದ್ದಾರೆ. ಇದನ್ನೂ ಓದಿ: ಸೆ.3-4ಕ್ಕೆ ಜಿಎಸ್‌ಟಿ ಕೌನ್ಸಿಲ್ ಸಭೆ; ಮೋದಿಯ ದೀಪಾವಳಿ ಗಿಫ್ಟ್ ಘೋಷಣೆಯ ಬಗ್ಗೆ ಸಭೆಯಲ್ಲಿ ಅಂತಿಮ ನಿರ್ಧಾರ

    ಹಣ ನೀಡದ ಕಾರಣ ಜುಲೈ 10ರಂದು ಸುಧೀಂದ್ರ ತನ್ನ ಯೂಟೂಬ್ ಚಾನಲ್‌ನಲ್ಲಿ ಪುಣ್ಯ ಕ್ಷೇತ್ರ- ಕ್ಷೇತ್ರ ಪಾಪಿ ಬಾಲ ಮೌಡ್ಯ ಲೀಲೆ- ಭಾಗ-1 ನಂತರ 17ರಂದು ಭಾಗ- 2 ಪ್ರಸಾರ ಮಾಡಿದ್ದಾನೆ. ಇವೆಲ್ಲವೂ ಕಲ್ಪಿತ ಮತ್ತು ಆಧಾರ ರಹಿತ ಆರೋಪ. ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಾಲಮಂಜುನಾಥ ಸ್ವಾಮೀಜಿ ನೀಡಿದ್ದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಸ್ವತಃ ದೇವರೇ ಹೇಳಿದ್ರೂ ಮತ್ತೆ ಚುನಾವಣೆಗೆ ನಿಲ್ಲಲ್ಲ: ಕೇಂದ್ರ ಸಚಿವ ವಿ.ಸೋಮಣ್ಣ ರಾಜಕೀಯ ನಿವೃತ್ತಿ ಮಾತು

  • ಸಿಎಂ, ಡಿಸಿಎಂ ಹೆಸ್ರಲ್ಲಿ ಕೋಟಿ ಕೋಟಿ ವಂಚನೆ – 20ಕ್ಕೂ ಹೆಚ್ಚು ಮಂದಿಗೆ ಪಂಗನಾಮ ಹಾಕಿದ್ದ ಮಹಿಳೆ ಅರೆಸ್ಟ್‌

    ಸಿಎಂ, ಡಿಸಿಎಂ ಹೆಸ್ರಲ್ಲಿ ಕೋಟಿ ಕೋಟಿ ವಂಚನೆ – 20ಕ್ಕೂ ಹೆಚ್ಚು ಮಂದಿಗೆ ಪಂಗನಾಮ ಹಾಕಿದ್ದ ಮಹಿಳೆ ಅರೆಸ್ಟ್‌

    ಬೆಂಗಳೂರು: ನಗರದಲ್ಲಿ ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾಗಿ ಸ್ನೇಹಿತೆಯರಿಗೆ ಕೋಟಿ ಕೋಟಿ ವಂಚನೆ ಮಾಡಿದ ಆರೋಪದಡಿ ಮಹಿಳೆಯನ್ನು (Bengaluru Women) ಬಂಧಿಸಲಾಗಿದೆ.

    20ಕ್ಕೂ ಹೆಚ್ಚು ಮಹಿಳೆಯರಿಗೆ 30 ಕೂಟಿ ರೂ.ಗಿಂತಲೂ ಹೆಚ್ಚು ವಂಚನೆ (Fraud Case) ಮಾಡಿದ್ದ ಆರೋಪದಡಿ ಬಸವೇಶ್ವರನಗರ ಪೊಲೀಸರಿಂದ ಸವಿತಾ ಎಂಬಾಕೆಯ ಬಂಧಿಸಲಾಗಿದೆ. ಇದನ್ನೂ ಓದಿ: ಮೂವರು ಶಂಕಿತ ಉಗ್ರರ ಬಂಧನ ಕೇಸ್‌ – ಬೆಂಗ್ಳೂರಲ್ಲಿ ವಿಧ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ ಮಾಡಿದ್ದ ಉಗ್ರ ನಾಸೀರ್

    ಕಿಟ್ಟಿ ಪಾರ್ಟಿ ಹೆಸರಲ್ಲಿ ಶ್ರೀಮಂತ ಮಹಿಳೆಯರನ್ನ ಪರಿಚಯ ಮಾಡಿಕೊಂಡಿದ್ದ ಸವಿತಾ ತನಗೆ ಹಲವು ರಾಜಕಾರಣಿಗಳು ಗೊತ್ತೆಂದು ಹೇಳಿಕೊಳ್ಳುತ್ತಿದ್ದಳು. ಸಿಎಂ, ಡಿಸಿಎಂ, ಎಂಬಿ ಪಾಟಿಲ್ ಹೆಸರೇಳಿ ಗಾಳ ಹಾಕ್ತಿದ್ದ ಸವಿತಾ.. ನಿಧಾನವಾಗಿ ಹೂಡಿಕೆ ನೆಪದಲ್ಲಿ ಹಣ ಪಡೆದುಕೊಳ್ತಿದ್ದಳು. ಇದನ್ನೂ ಓದಿ: ಪತ್ನಿಯೊಂದಿಗೆ ಅನೈತಿಕ ಸಂಬಂಧ- ಬೆಂಗಳೂರಿನಿಂದ ಕಲಬುರಗಿಗೆ ಕರೆತಂದು ಪ್ರಾಣಸ್ನೇಹಿತನ ಹತ್ಯೆ

    ಅಮೆರಿಕದಿಂದ (USA) ಕಮ್ಮಿ ಬೆಲೆಗೆ ಚಿನ್ನ ತರಿಸಿಕೊಡುವುದಾಗಿ ವಂಚನೆ ಮಾಡಿದ್ದಾಳೆ. ಒಬ್ಬರಿಂದ ತಲಾ 50 ಲಕ್ಷದಿಂದ ಎರಡೂವರೆ ಕೋಟಿ ಹಣ ಪಡೆದು ವಾಪಸ್ ಹಣ ನೀಡದೇ ನೆಪ ಹೇಳಿ ತಪ್ಪಿಸಿಕೊಳ್ತಿದ್ದಳು. ಈ ಹಿಂದೆ ಗೋವಿಂದರಾಜನಗರ ಠಾಣೆಯಲ್ಲಿ ಕೇಸ್ ದಾಖಲಾಗಿ ಬಂಧನವಾಗಿ ಬೇಲ್ ಮೇಲೆ ಹೊರಗಿದ್ದ ಸವಿತಾ ಮತ್ತದೇ ಚಾಳಿ ಮುಂದುವರೆಸಿ ಈಗ ಬಸವೇಶ್ವರ ನಗರ ಪೊಲೀಸರ ಅತಿಥಿ ಆಗಿದ್ದಾಳೆ. ಇದನ್ನೂ ಓದಿ: 77 ಲಕ್ಷ ವಂಚನೆ – ಆಲಿಯಾ ಭಟ್‌ ಮಾಜಿ ಆಪ್ತ ಕಾರ್ಯದರ್ಶಿ ಬೆಂಗಳೂರಿನಲ್ಲಿ ಅರೆಸ್ಟ್‌

  • 77 ಲಕ್ಷ ವಂಚನೆ – ಆಲಿಯಾ ಭಟ್‌ ಮಾಜಿ ಆಪ್ತ ಕಾರ್ಯದರ್ಶಿ ಬೆಂಗಳೂರಿನಲ್ಲಿ ಅರೆಸ್ಟ್‌

    77 ಲಕ್ಷ ವಂಚನೆ – ಆಲಿಯಾ ಭಟ್‌ ಮಾಜಿ ಆಪ್ತ ಕಾರ್ಯದರ್ಶಿ ಬೆಂಗಳೂರಿನಲ್ಲಿ ಅರೆಸ್ಟ್‌

    ಮುಂಬೈ: ನಟನೊಬ್ಬನಿಗೆ 77 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟಿ ಆಲಿಯಾ ಭಟ್‌ (Alia Bhatt) ಅವರ ಮಾಜಿ ಆಪ್ತ ಕಾರ್ಯದರ್ಶಿಯನ್ನ ಜುಹು ಪೊಲೀಸರು (Juhu Police) ಬೆಂಗಳೂರಿನಲ್ಲಿ (Bengaluru) ಬಂಧಿಸಿದ್ದಾರೆ.

    ವೇದಿಕಾ ಪ್ರಕಾಶ್ ಶೆಟ್ಟಿ (32) ಬಂಧಿತ ಆರೋಪಿ. ಭಟ್‌ ನಿರ್ಮಾಣ ಸಂಸ್ಥೆ ಎಟರ್ನಲ್ ಸನ್‌ಶೈನ್ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್‌ (Eternal Sunshine Productions Private Limited) ಖಾತೆ ಹಾಗೂ ನಟಿಯ ಖಾತೆಯಿಂದ ಸುಮಾರು 76.9 ಲಕ್ಷ ರೂ. ಹಣ ವಂಚಿಸಿದ ಆರೋಪ ವೇದಿಕಾ ಮೇಲೆ ಹೊರಿಸಲಾಗಿದೆ. 2022ರ ಮೇ ಮತ್ತು 2024ರ ಆಗಸ್ಟ್‌ ತಿಂಗಳ ನಡುವೆ ಈ ವಂಚನೆ ಎಸಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಆಪರೇಷನ್‌ ಸಿಂಧೂರದಲ್ಲಿ ಭಾರತೀಯ ಸೇನೆ ರಫೇಲ್‌ ಯುದ್ಧ ವಿಮಾನ ಕಳೆದುಕೊಂಡಿಲ್ಲ: ಡಸಾಲ್ಟ್‌ ಏವಿಯೇಷನ್‌ ಸ್ಪಷ್ಟನೆ

    ಆಲಿಯಾ ಭಟ್‌ ಅವರ ತಾಯಿ, ನಟಿ-ನಿರ್ದೇಶಕಿ ಸೋನಿ ರಜ್ದಾನ್ ಕಳೆದ ಜನವರಿ 23ರಂದು ಜುಹು ಪೊಲೀಸರಿಗೆ ದೂರು ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ದೂರನ್ನಾಧರಿಸಿ ಕ್ರಿಮಿನಲ್‌ ಮತ್ತು ವಂಚನೆಗೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿ ವೇದಿಕಾಗಾಗಿ ಹುಡುಕಾಟ ನಡೆಸಿದ್ದರು. ಇದನ್ನೂ ಓದಿ: ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು `ಮುರ್ಮಾಜೀ’ ಎಂದು ಉಚ್ಛರಿಸಿ ಅಪಮಾನ ಮಾಡಿದ ಖರ್ಗೆ

    ಪೊಲೀಸ್‌ ಮೂಲಗಳ ಪ್ರಕಾರ, ವೇದಿಕಾ (Vedika Prakash Shetty) 2021ರಿಂದ 2024ರ ವರೆಗೆ ಆಲಿಯಾ ಭಟ್‌ ಅವರ ಆಪ್ತ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಳು. ಈ ವೇಳೆ ನಟಿಗೆ ಸಂಬಂಧಿಸಿದ ಹಣಕಾಸಿನ ದಾಖಲೆಗಳನ್ನು ನೋಡಿಕೊಳ್ಳುತ್ತಿದ್ದಳು. ನಟಿಗೆ ಸಂಬಂಧಿದ ವೇಳಾಪಟ್ಟಿಯನ್ನೂ ಈಕೆಯೇ ನಿರ್ವಹಿಸುತ್ತಿದ್ದಳು. ಈ ಸಮಯದಲ್ಲಿ ನಕಲಿ ಹಣಕಾಸಿನ ಬಿಲ್‌ಗಳನ್ನು ತಯಾರಿಸಿ, ಆಲಿಯಾ ಭಟ್‌ ಸಹಿ ಮಾಡಿಸಿ ಹಣ ವಂಚಿಸಿದ್ದಾಳೆ. ನಟಿ ನಕಲಿ ಬಿಲ್‌ಗಳಿಗೆ ಸಹಿ ಮಾಡಿದ ಬಳಿಕ ಸ್ನೇಹಿತರ ಖಾತೆಗಳಿಗೆ ಹಣ ವರ್ಗಾಯಿಸಿದ್ದಾಳೆ ವೇದಿಕಾ ಎಂದು ತಿಳಿದುಬಂದಿದೆ.

    ಬೆಂಗಳೂರಿನಲ್ಲಿ ಅರೆಸ್ಟ್‌
    ಆಲಿಯಾ ಭಟ್‌ ಅವರ ತಾಯಿ ದೂರು ನೀಡಿದ್ದ ಬಳಿಕ ಎಸ್ಕೇಪ್‌ ಆಗಿದ್ದ ವೇದಿಕಾ ಸ್ಥಳ ಬದಲಾಯಿಸುತ್ತಲೇ ಇದ್ದಳು. ಕೊನೆಗೆ ರಾಜಸ್ಥಾನದ ಬಳಿಕ ಕರ್ನಾಟಕದ ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದಳು. ಖಚಿತ ಮಾಹಿತಿ ಪಡೆದ ಪೊಲೀಸರು ಆಕೆಯನ್ನ ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಮುಂಬೈಗೆ ಕರೆತಂದಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ತಾಮ್ರದ ಮೇಲೆ 50%, ಔಷಧ ಆಮದಿನ ಮೇಲೆ 200% ಸುಂಕದ ಎಚ್ಚರಿಕೆ – ಭಾರತದ ಮೇಲೆ ಏನು ಪರಿಣಾಮ?

  • ಸರ್ಕಾರಿ ನೌಕರಿ ಕೊಡಿಸುವುದಾಗಿ 200 ರೂ. ವಂಚನೆ; 30 ವರ್ಷದ ನಂತರ ಬಂಧನ

    ಸರ್ಕಾರಿ ನೌಕರಿ ಕೊಡಿಸುವುದಾಗಿ 200 ರೂ. ವಂಚನೆ; 30 ವರ್ಷದ ನಂತರ ಬಂಧನ

    ಕಾರವಾರ: ಸರ್ಕಾರಿ ನೌಕರಿ ಕೊಡಿಸುವುದಾಗಿ 30 ವರ್ಷದ ಹಿಂದೆ 200 ರೂ. ಪಡೆದು ವಿದ್ಯಾರ್ಥಿಯೋರ್ವನನ್ನು ವಂಚಿಸಿದ ಪ್ರಕರಣದಲ್ಲಿ 30 ವರ್ಷದ ನಂತರ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಸುಪರ್ಧಿಗೆ ವಹಿಸಿದ್ದಾರೆ.

    ಬೈಂದೂರಿ ಮೂಲದ ಪ್ರಸ್ತುತ ಬೆಂಗಳೂರಿನ ಬಳೆಪೇಠೆಯಲ್ಲಿ ನೆಲಸಿರುವ ಬಿ.ಕೆ.ರಾಮಚಂದ್ರರಾವ್ ಬಂಧಿತ ಆರೋಪಿಯಾಗಿದ್ದಾನೆ. ಈತನು 1990 ರಲ್ಲಿ ಶಿರಸಿಯಲ್ಲಿ ಬಿಳಿಗಿರಿ ಕೊಪ್ಪ ವೆಂಕಟೇಶ ವೈದ್ಯ ಎಂಬಾತನು ಪದವಿ ಓದುತ್ತಿರುವಾಗ ನೀಲಕಂಠ ಹೆಗಡೆ ಎಂಬವರ ಮೂಲಕ ಪರಿಚಯವಾಗಿತ್ತು. ವೆಂಕಟೇಶ್ ಎಂಬಾತನಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ 200 ರೂ. ಗಳನ್ನು ಪಡೆದು ವಂಚಿಸಿ ಪರಾರಿಯಾಗಿದ್ದ.

    ಈ ಕುರಿತು ಶಿರಸಿ ಠಾಣೆಯಲ್ಲಿ ವೆಂಕಟೇಶ್ ವೈದ್ಯ ದೂರು ದಾಖಲಿಸಿದ್ದರು‌. ಆದರೆ, ಆರೋಪಿ ಪತ್ತೆಯಾಗಿರಲಿಲ್ಲ. ಆದರೇ ಡಿವೈಎಸ್‌ಪಿ ಗೀತಾ ಪಾಟೀಲ್ ಹಾಗೂ ಶಿರಸಿ ಗ್ರಾಮೀಣ ಠಾಣೆಯ ಪಿಐ ಮಂಜುನಾಥ್ ಮಾರ್ಗದರ್ಶನ ಮತ್ತು ಪಿಎಸ್ಐ ಸಂತೋಷಕುಮಾರ್ ಹಾಗೂ ಅಶೋಕ್ ರಾಠೋಡ್ ಅವರ ತಂಡ 30 ವರ್ಷದ ನಂತರ ಆರೋಪಿಯನ್ನು ಬೆಂಗಳೂರಿನಲ್ಲಿ ಪತ್ತೆ ಮಾಡಿ ಬಂಧಿಸಿ ಶಿರಸಿಗೆ ಕರೆತಂದು ನ್ಯಾಯಾಲಯಕ್ಕೆ ಒಪ್ಪಿಸಿದೆ.

    ಅಪರಾಧ ಮಾಡಿದವರು ಒಂದಲ್ಲಾ ಒಂದು ದಿನ ಸಿಕ್ಕಿ ಹಾಕಿಕೊಳ್ಳಲೇಬೇಕು ಎಂಬುದು ಈ ಘಟನೆಯಿಂದ ಸಾಬೀತಾಗಿದ್ದು, ಇದೀಗ ಕಾರವಾರ ಜೈಲಿಗೆ ಅಟ್ಟಲಾಗಿದೆ.

  • 2 ಕೋಟಿಗೂ ಅಧಿಕ ಮೌಲ್ಯದ ಫ್ಲ್ಯಾಟ್‌ ಸೇರಿ ʻಬಂಗಾರಿʼಗೌಡಳ 3.98 ಕೋಟಿ ಆಸ್ತಿ ಜಪ್ತಿ

    2 ಕೋಟಿಗೂ ಅಧಿಕ ಮೌಲ್ಯದ ಫ್ಲ್ಯಾಟ್‌ ಸೇರಿ ʻಬಂಗಾರಿʼಗೌಡಳ 3.98 ಕೋಟಿ ಆಸ್ತಿ ಜಪ್ತಿ

    ಬೆಂಗಳೂರು: ಐಶ್ವರ್ಯಗೌಡ ವಂಚನೆ ಪ್ರಕರಣದಲ್ಲಿ (Fraud Case) ಮಾಜಿ ಸಂಸದ, ಕಾಂಗ್ರೆಸ್ ಮುಖಂಡ ಡಿ.ಕೆ.ಸುರೇಶ್ (DK Suresh) ಇಂದು ಇಡಿ ತನಿಖೆ ಎದುರಿಸಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ಸಂಜೆ 6 ಗಂಟೆವರೆಗೆ ಸುದೀರ್ಘ 7 ಗಂಟೆಗಳ ವಿಚಾರಣೆ ಎದುರಿಸಿದ್ದಾರೆ. ಜುಲೈ 8ಕ್ಕೆ ಮತ್ತೆ ವಿಚಾರಣೆಗೆ ಬರುವಂತೆ ಇಡಿ ಸೂಚಿಸಿದೆ.

    ಈ ನಡುವೆ ಐಶ್ವರ್ಯಗೌಡಗೆ (Aishwarya Gowda) ಸೇರಿದ್ದ 3.98 ಕೋಟಿ ಆಸ್ತಿಯನ್ನು ಇಡಿ ಜಪ್ತಿ ಮಾಡಿದೆ. ಇದರಲ್ಲಿ 2.01 ಕೋಟಿ ಮೌಲ್ಯದ ಫ್ಲ್ಯಾಟ್, 1.97 ಕೋಟಿ ಮೌಲ್ಯದ ನಗದು, ಚಿನ್ನಾಭರಣ ಸೇರಿದೆ. ಆಸ್ತಿ ಸೀಜ್ ಆಗಿರೊ ಬಗ್ಗೆ ಇಡಿ ಅಧಿಕೃತ ಮಾಹಿತಿ ಹಂಚಿಕೊಂಡಿದೆ.ಇದನ್ನೂ ಓದಿ: ಮದ್ವೆಯಾದ ಒಂದೇ ತಿಂಗಳಿಗೆ ಪತಿ ಶವವಾಗಿ ಪತ್ತೆ – ಬ್ಯಾಂಕ್ ಉದ್ಯೋಗಿ ಜೊತೆಗಿನ ಅಫೇರ್ ಕಾರಣ; ರಹಸ್ಯ ಬಯಲು

    ಐಶ್ವರ್ಯಗೌಡಳ ಮೇಲೆ ರಾಜ್ಯದಲ್ಲಿ ವಂಚನೆ ಸಂಬಂಧ ಹಲವು ಎಫ್‌ಐಆರ್‌ಗಳಾಗಿದ್ವು. ಅಕ್ರಮ ಹಣ ವರ್ಗಾವಣೆ ಹಿನ್ನೆಲೆ ಇದೀಗ ಇಡಿ ಐಶ್ವರ್ಯಳ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ.

    ಇನ್ನೂ ವಿಚಾರಣೆ ಬಳಿಕ ಮಾತನಾಡಿದ ಡಿ.ಕೆ ಸುರೇಶ್, ಇಡಿ ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದೇನೆ. ಜುಲೈ 8ಕ್ಕೆ ವಿಚಾರಣೆಗೆ ಕರೆದಿದ್ದಾರೆ. ಸಹಕಾರ ಕೊಡ್ತೇನೆ ಅಂದಿದ್ದಾರೆ. ಇದನ್ನೂ ಓದಿ: ಉಪಚುನಾವಣೆ ಫಲಿತಾಂಶ ಪ್ರಕಟ – ಎಎಪಿ 2, ಬಿಜೆಪಿ, ಕಾಂಗ್ರೆಸ್, ಟಿಎಂಸಿ ತಲಾ ಒಂದೊಂದು ಕ್ಷೇತ್ರಗಳಲ್ಲಿ ಗೆಲುವು

  • ಹೆಲ್ಪ್‌ಲೈನ್‌ ಹೆಸರಲ್ಲಿ ವಂಚನೆ ಆರೋಪ – ಬೆಂಗಳೂರಿನ ಸಂಧ್ಯಾ ಪವಿತ್ರ ವಿರುದ್ಧ ಎಫ್‌ಐಆರ್

    ಹೆಲ್ಪ್‌ಲೈನ್‌ ಹೆಸರಲ್ಲಿ ವಂಚನೆ ಆರೋಪ – ಬೆಂಗಳೂರಿನ ಸಂಧ್ಯಾ ಪವಿತ್ರ ವಿರುದ್ಧ ಎಫ್‌ಐಆರ್

    ಮಂಗಳೂರು: ಹೆಲ್ಪ್‌ಲೈನ್‌ ಹೆಸರಿನಲ್ಲಿ ವಂಚನೆ ಮಾಡಿರುವ ಆರೋಪದಲ್ಲಿ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

    ವಂಚನೆಗೊಳಗಾದ ರಾಜೇಶ್.ಕೆ ದೂರಿನ‌ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ರಾಜೇಶ್‌, ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್‌ನ ಮಾಲಾಡಿ ನಿವಾಸಿ. ವೃತ್ತಿಯಲ್ಲಿ ಗಾಯಕರಾಗಿರುವ ರಾಜೇಶ್, Arvind vivek ಎಂಬ ಹೆಸರಿನಲ್ಲಿ ಫೇಸ್‌ಬುಕ್ ಪೇಜ್‌ನಲ್ಲಿ ಲೈವ್ ಸಂಗೀತ ಕಾರ್ಯಕ್ರಮ ನೀಡುತ್ತಿದ್ದರು. 2024 ರಲ್ಲಿ ಫೇಸ್ಬುಕ್ ಮೂಲಕ ಸಂಧ್ಯಾ ಪವಿತ್ರ ನಾಗರಾಜ್ ಪರಿಚಯವಾಗಿದೆ. ಈ ವೇಳೆ ಹೋರಾಟಗಾರ್ತಿ ಎಂದು ನಂಬಿಸಿದ್ದ ಸಂಧ್ಯಾ, Helpline ಹೆಸರಿನಲ್ಲಿ ನೊಂದವರಿಗೆ, ವಂಚನೆಗೊಳಪಟ್ಟವರಿಗೆ ಸಹಾಯ ಮಾಡುತ್ತಿರುವುದಾಗಿ ತಿಳಿಸಿದ್ದರು.

    ರಾಜ್ಯದಲ್ಲಿ ಅಮಾಯಕರ ಮೇಲೆ ದಾಖಲಾಗಿದ್ದ ಅನೇಕ ಪ್ರಕರಣ ಬಗೆಹರಿಸಿಕೊಟ್ಟಿರುವುದಾಗಿ ಸಂಧ್ಯಾ ಹೇಳಿಕೊಂಡಿದ್ದರು. ಈ ವೇಳೆ ಬಂಟ್ವಾಳ‌ ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಬಗ್ಗೆ ರಾಜೇಶ್‌ ತಿಳಿಸಿದ್ದರು. ಈ ಪ್ರಕರಣವನ್ನು‌ ಹೈಕೋರ್ಟ್‌ನಲ್ಲಿ ಬಗೆಹರಿಸುವುದಾಗಿ ಆಕೆ ನಂಬಿಸಿದ್ದರು. ಈ ಬಗ್ಗೆ ದಾಖಲಾತಿ ಪಡೆಯಲು 2025ರ ಜನವರಿಯಲ್ಲಿ ಬೆಂಗಳೂರಿನ ಜೆ.ಪಿ‌ನಗರದ ಮನೆಗೆ ಸಂಧ್ಯಾ ಕರೆಸಿದ್ದರು.
    ಬಳಿಕ ಪ್ರಕರಣ ಬಗೆಹರಿಸಲು ಸ್ವಲ್ಪ ಖರ್ಚು ಇದೆ ಎಂದಿದ್ದರು.

    ದೂರುದಾರ ರಾಜೇಶ್‌ರಿಂದ ಹಂತ ಹಂತವಾಗಿ 3.20 ಲಕ್ಷ ರೂ. ಹಣ ಪಡೆದಿದ್ದರು. ಬಳಿಕವೂ ಸಮಸ್ಯೆ ಬಗೆಹರಿಯದ ಕಾರಣ ಈ ಬಗ್ಗೆ ರಾಜೇಶ್‌ ಪ್ರಶ್ನಿಸಿದ್ದರು. ಆಗ ಸಂಧ್ಯಾ ಇನ್ನೂ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಸಂಶಯಗೊಂಡು ವಿಚಾರಿಸಿದಾಗ ಮೋಸ ಹೋಗಿರುವುದು ಬೆಳಕಿಗೆ ಬಂದಿದೆ.

    ನ್ಯಾಯಾಲಯಕ್ಕೆ ಸಲ್ಲಿಸಿರುವ ದಾಖಲೆಯನ್ನು ರಾಜೇಶ್‌ ಕೇಳಿದಾಗ, ಮನೆಗೆ ಹೆಂಗಸರನ್ನು ಕರೆದುಕೊಂಡು ಬಂದು ಜಗಳ ಮಾಡೋದಾಗಿ, ಕೈ ಕಾಲು ಮುರಿಯುವುದಾಗಿ ಸಂಧ್ಯಾ ಬೆದರಿಕೆ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸ್‌ ಠಾಣೆಗೆ ದೂರು ನೀಡಿರುವುದಾಗಿ ರಾಜೇಶ್‌ ತಿಳಿಸಿದ್ದಾರೆ. ದೂರಿನ‌ ಹಿನ್ನೆಲೆ BNS ಕಾಯ್ದೆಯಡಿ 318(4), 351(2) ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ.

  • ಐಶ್ವರ್ಯಗೌಡ ವಂಚನೆ ಕೇಸ್ – ಡಿ.ಕೆ.ಸುರೇಶ್‌ಗೆ ED ಸಮನ್ಸ್

    ಐಶ್ವರ್ಯಗೌಡ ವಂಚನೆ ಕೇಸ್ – ಡಿ.ಕೆ.ಸುರೇಶ್‌ಗೆ ED ಸಮನ್ಸ್

    ಬೆಂಗಳೂರು: ಐಶ್ವರ್ಯಗೌಡ (Aishwarya Gowda) ವಂಚನೆ ಪ್ರಕರಣದಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್ (D.K.Suresh) ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಕೊಟ್ಟಿದೆ.

    ಐಶ್ವರ್ಯಗೌಡ ಕೇಸ್‌ನಲ್ಲಿ ಈಗಾಗಲೇ ಶಾಸಕ ವಿನಯ್ ಕುಲಕರ್ಣಿ ಸಂಕಷ್ಟ ಎದುರಿಸುತ್ತಿದ್ದಾರೆ. ಅವರ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಡಿ.ಕೆ.ಸುರೇಶ್‌ಗೆ ಇ.ಡಿ ಶಾಕ್ ಕೊಟ್ಟಿದೆ. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ವಿಸ್ಕಿ ಪ್ರಚಾರ ಮಾಡೋದಕ್ಕೆ RCB ಸಂಭ್ರಮ ಕಾರ್ಯಕ್ರಮ ಮಾಡಿದ್ರಾ?: ಸಿ.ಟಿ.ರವಿ ವಾಗ್ದಾಳಿ

    ಈ ಕುರಿತು ಪ್ರತಿಕ್ರಿಯಿಸಿರುವ ಡಿಕೆ ಸುರೇಶ್, ಮಧ್ಯಾಹ್ನ 12-30 ಗಂಟೆಗೆ ಇ.ಡಿಯವರು ಬಂದು ಸಮನ್ಸ್ ನೀಡಿದ್ದಾರೆ. ನಾನು ಹೊರಗೆ ಹೋಗಿದ್ದೆ ಇಡಿಯವರು ಬಂದಿದ್ದಾರೆ ಎಂದು ಗೊತ್ತಾದ ಮೇಲೆ ಬಂದೆ. ಅವರು ಸಮನ್ಸ್ ಕೊಟ್ಟಿದ್ದಾರೆ. ಸಮನ್ಸ್ನಲ್ಲಿ ಯಾವ ಪ್ರಕರಣ ಅಂತ ಇಲ್ಲ. ಆದರೆ, ದಾಖಲಾತಿ ನೋಡಿದಾಗ ಈ ಪ್ರಕರಣ ಅಂತ ಗೊತ್ತಾಯ್ತು ಎಂದು ತಿಳಿಸಿದ್ದಾರೆ.

    ಗುರುವಾರ ಬನ್ನಿ ಅಂದಿದ್ದಾರೆ. ಆದರೆ ಪೂರ್ವ ನಿಯೋಜಿತ ಕಾರ್ಯಕ್ರಮ ಇದೆ. ಅದಕ್ಕೆ ಸೋಮವಾರ ಬರುತ್ತೇನೆ ಎಂದು ಮೌಕಿಕವಾಗಿ ತಿಳಿಸಿದ್ದೇನೆ. ಈಗ ಇ-ಮೇಲ್ ಮೂಲಕ ಅಧಿಕೃತವಾಗಿ ತಿಳಿಸುತ್ತಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: EXCLUSIVE | ಲೋಕಾಯುಕ್ತ ಲಂಚ ಪ್ರಕರಣಕ್ಕೆ ಡೈರಿ ಮಿಸ್ಟರಿ – ನಿಂಗಪ್ಪ ಮನೆಯಲ್ಲಿದ್ದ 2 ಡೈರಿ ರಿಕವರಿ

    ನಾನು ಯಾವುದೇ ವ್ಯವಹಾರ ನಡೆಸಿಲ್ಲ. ಅವರು (ಐಶ್ವರ್ಯಗೌಡ) ನಮ್ಮ ಕ್ಷೇತ್ರದವರು ಒಂದೆರಡು ಕಾರ್ಯಕ್ರಮಕ್ಕೆ ಹೋಗಿದ್ದೆ. ನನ್ನ ತಂಗಿ ಅಂತಾ ಹೇಳಿಕೊಂಡು ಒಡಾಡುವುದರ ಬಗ್ಗೆ ನಾನೇ ದೂರು ಕೊಟ್ಟಿದ್ದೇನೆ. ಇ.ಡಿಯವರು 7-8 ದಾಖಲೆಗಳನ್ನು ಕೇಳಿದ್ದಾರೆ. ನನ್ನ ಬಳಿ ದಾಖಲೆ ಕೇಳಿದ್ದು ಅಸಂಬದ್ಧ. ಇ.ಡಿ ವಿಚಾರಣೆಗೆ ಹೋದಾಗ ಅಲ್ಲಿ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.