Tag: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು

  • ಕೇರಳದಲ್ಲಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಕಲ್ಲು ತೂರಾಟ

    ಕೇರಳದಲ್ಲಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಕಲ್ಲು ತೂರಾಟ

    ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಚಾಲನೆ ನೀಡಿದ ಕೇರಳದ (Kerala) ಮೊದಲ ವಂದೇ ಭಾರತ್‌ ಎಕ್ಸ್‌ಪ್ರೆಸ್‌ (Vande Bharat Express) ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.

    ದಕ್ಷಿಣ ರೈಲ್ವೆ ಅಧಿಕಾರಿಗಳ ಪ್ರಕಾರ, ರೈಲು ತಿರುನಾವಯ ಮತ್ತು ತಿರೂರ್ ನಡುವೆ ಸಂಚರಿಸುತ್ತಿದ್ದಾಗ ಕಲ್ಲು ತೂರಾಟ (Stones Pelted) ನಡೆದಿದೆ. ಈ ರೈಲು ಕಾಸರಗೋಡಿನಿಂದ ತಿರುವನಂತಪುರಕ್ಕೆ ತೆರಳುತ್ತಿತ್ತು.

    ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ. ಒಂದು ಕೋಚ್‌ನ ವಿಂಡ್‌ಶೀಲ್ಡ್ ಹಾನಿಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ದಕ್ಷಿಣ ರೈಲ್ವೇ ತಿಳಿಸಿದೆ. ಇದನ್ನೂ ಓದಿ: ಆರಂಭಗೊಂಡ ಕೆಲವೇ ಗಂಟೆಗಳಲ್ಲಿ ವಂದೇ ಭಾರತ್ ಎಕ್ಸಪ್ರೆಸ್ ರೈಲನ್ನು ವಿರೂಪಗೊಳಿಸಿದ ‘ಕೈ’ ಕಾರ್ಯಕರ್ತರು

    ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 25 ರಂದು ತಿರುವನಂತಪುರಂ ಸೆಂಟ್ರಲ್ ನಿಲ್ದಾಣದಲ್ಲಿ ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಿದ್ದರು. ಕಳೆದ ಮೂರು ತಿಂಗಳಲ್ಲಿ ಕಲ್ಲು ತೂರಾಟ ನಡೆದ ಮೂರನೇ ಘಟನೆ ಇದಾಗಿದೆ.

    ಈ ಹಿಂದೆ ಏಪ್ರಿಲ್ 6 ರಂದು ವಿಶಾಖಪಟ್ಟಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಕಲ್ಲು ತೂರಾಟ ನಡೆದಿತ್ತು. ಮಾರ್ಚ್ 12 ರಂದು ಪಶ್ಚಿಮ ಬಂಗಾಳದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು.

  • ಕೇರಳದಲ್ಲಿ ದೇಶದ ಮೊದಲ ವಾಟರ್ ಮೆಟ್ರೋ, ರಾಜ್ಯದ ಮೊದಲ ವಂದೇ ಭಾರತ್ ರೈಲಿಗೆ ಮೋದಿ ಚಾಲನೆ

    ಕೇರಳದಲ್ಲಿ ದೇಶದ ಮೊದಲ ವಾಟರ್ ಮೆಟ್ರೋ, ರಾಜ್ಯದ ಮೊದಲ ವಂದೇ ಭಾರತ್ ರೈಲಿಗೆ ಮೋದಿ ಚಾಲನೆ

    ತಿರುವನಂತಪುರಂ: 2 ದಿನಗಳ ಕೇರಳ (Kerala) ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ ತಿರುವನಂತಪುರಂ (Thiruvananthapuram) ಹಾಗೂ ಕಾಸರಗೋಡು (Kasargod) ನಡುವೆ ಸಂಚರಿಸುವ ರಾಜ್ಯದ ಮೊದಲ ವಂದೇ ಭಾರತ್ ರೈಲಿಗೆ (Vande Bharat Express Train) ಹಾಗೂ ದೇಶದ ಮೊದಲ ವಾಟರ್ ಮೆಟ್ರೋಗೆ (Water Metro) ಚಾಲನೆ ನೀಡಿದ್ದಾರೆ.

    ಮಂಗಳವಾರ ಬೆಳಗ್ಗೆ 11:10ರ ವೇಳೆಗೆ ತಿರುವನಂತಪುರಂ ಸೆಂಟ್ರಲ್ ಸ್ಟೇಷನ್‌ನಿಂದ ವಂದೇ ಭಾರತ್ ರೈಲಿಗೆ ಮೋದಿ ಚಾಲನೆ ನೀಡಿದ್ದಾರೆ. ಬಳಿಕ ಕೊಚ್ಚಿಗೆ (Kochi) ತೆರಳಿ ದೇಶದ ಮೊದಲ ವಾಟರ್ ಮೆಟ್ರೋಗೆ ಮೋದಿ ಚಾಲನೆ ನೀಡಿದರು.

    ಕೇರಳದ ಮೊದಲ ವಂದೇ ಭಾರತ್ ರೈಲು ರಾಜಧಾನಿ ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ, ತ್ರಿಶ್ಯೂರ್, ಪಾಲಕ್ಕಾಡ್, ಪತ್ತನಂತಿಟ್ಟ, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು, ಕಾಸರಗೋಡು ಹೀಗೆ ಒಟ್ಟು 11 ಜಿಲ್ಲೆಗಳಲ್ಲಿ ಸಂಚರಿಸಲಿದೆ ಎಂದು ಪ್ರಧಾನ ಮಂತ್ರಿಗಳ ಕಚೇರಿ (PMO) ತಿಳಿಸಿದೆ. ಇದನ್ನೂ ಓದಿ: ಭ್ರಷ್ಟಾಚಾರ, ಕುಟುಂಬ ರಾಜಕಾರಣದ ಕೂಗು – ಹಾಸನದಲ್ಲಿ ಯಾರಿಗೆ ಒಲಿಯಲಿದೆ ಜಯ?

    ಕೊಚ್ಚಿಯಲ್ಲಿ ಪ್ರಾರಂಭವಾಗಿರುವ ನೀರಿನ ಮೆಟ್ರೋ ಯೋಜನೆ ಕೊಚ್ಚಿ ಮತ್ತು ಸುತ್ತಮುತ್ತಲಿನ ಊರಿನ ಜನರಿಗೆ ಸುರಕ್ಷಿತ ಹಾಗೂ ಕೈಗೆಟಕುವ ದರದಲ್ಲಿ ಪ್ರಯಾಣವನ್ನು ಒದಗಿಸಲಿದೆ. ಇದು ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ. ನೀರಿನ ಮೆಟ್ರೋ ಯೋಜನೆ ಮೊದಲ ಹಂತದಲ್ಲಿ 2 ಮಾರ್ಗಗಳಲ್ಲಿ 8 ವಿದ್ಯುತ್ ಹೈಬ್ರಿಡ್ ದೋಣಿಗಳೊಂದಿಗೆ ನೌಕಾಯಾನವನ್ನು ಪ್ರಾರಂಭಿಸುತ್ತದೆ. ಹೈಕೋರ್ಟ್‌ನಿಂದ ವೈಪಿನ್‌ವರೆಗಿನ ಏಕಮುಖ ಪ್ರಯಾಣಕ್ಕೆ 20 ರೂ. ಇದ್ದು, ವೈಟ್ಟಿಲದಿಂದ ಕಾಕ್ಕನಾಡು ಮಾರ್ಗಕ್ಕೆ 30 ರೂ. ನಿಗದಿಪಡಿಸಲಾಗಿದೆ.

    ವಾಟರ್ ಮೆಟ್ರೋ ಯೋಜನೆಯ ಒಟ್ಟು ವೆಚ್ಚ 1,137 ಕೋಟಿ ರೂ.ಯದ್ದಾಗಿದೆ. ಕೊಚ್ಚಿಯ ಪೋರ್ಟ್ ಸಿಟಿಯ ಸುತ್ತಲಿನ 10 ದ್ವೀಪಗಳ ಸುತ್ತ ಈ ಮೆಟ್ರೋ ಸಂಚಾರ ಮಾಡಲಿದೆ. 38 ಟರ್ಮಿನಲ್‌ಗಳ ಮೂಲಕ ಪ್ರಯಾಣಿಕರಿಗೆ ಸೇವೆ ನೀಡಲಿದೆ. ಈ ವಾಟರ್ ಮೆಟ್ರೋ ಯೋಜನೆಯು 78 ಕಿ.ಮೀ. ವ್ಯಾಪಿಸಿದ್ದು ಇಲ್ಲಿನ ದ್ವೀಪಗಳಲ್ಲಿ ವಾಸಿಸುವ ಒಂದು ಲಕ್ಷಕ್ಕೂ ಹೆಚ್ಚು ಜನರಿಗೆ ಅನುಕೂಲವಾಗಲಿದೆ. ಈ ವಾಟರ್ ಮೆಟ್ರೋ ರಬ್ಬರ್ ಟೈರ್ಡ್ ಎಲೆಕ್ಟ್ರಿಕ್ ಬೋಗಿಗಳನ್ನು ಹೊಂದಿದ್ದು, ಇದನ್ನು ಮಹಾರಾಷ್ಟ್ರದ ನಾಸಿಕ್‌ನಲ್ಲಿ ತಯಾರು ಮಾಡಲಾಗಿದೆ. ಇದನ್ನೂ ಓದಿ: ಹಾಲಿ ಸಚಿವರ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ತ್ರಿಕೋನ ಪೈಪೋಟಿ

  • ಹಸುವಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ಡಿಕ್ಕಿ – ಮೂತ್ರ ವಿಸರ್ಜನೆ ಮಾಡ್ತಿದ್ದಾಗ ಮೈಮೇಲೆ ಬಿದ್ದ ಹಸುವಿನೊಂದಿಗೆ ವ್ಯಕ್ತಿ ಸಾವು

    ಹಸುವಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ಡಿಕ್ಕಿ – ಮೂತ್ರ ವಿಸರ್ಜನೆ ಮಾಡ್ತಿದ್ದಾಗ ಮೈಮೇಲೆ ಬಿದ್ದ ಹಸುವಿನೊಂದಿಗೆ ವ್ಯಕ್ತಿ ಸಾವು

    ಜೈಪುರ: ವೇಗವಾಗಿ ಚಲಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್‌ (Vande Bharat Express) ರೈಲು ಡಿಕ್ಕಿ ಹೊಡೆದು, ಹಸು ಸಾವನ್ನಪ್ಪಿದ್ದಲ್ಲದೇ, ರೈಲ್ವೆ ಅಳಿ ಸಮೀಪದಲ್ಲೇ ಮೂತ್ರ ವಿಸರ್ಜನೆ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಹಸು ಬಿದ್ದು ಆತನೂ ಸಾವಿಗೀಡಾದ ಘಟನೆ ರಾಜಸ್ಥಾನ (Rajasthan) ಅಲ್ವಾರ್ ಜಿಲ್ಲೆಯ ಅರಾವಳಿ ವಿಹಾರ್ ಪೊಲೀಸ್ (Aravali Vihar Police) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ದೆಹಲಿ-ಜೈಪುರ-ಅಜ್ಮೀರ್ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ ನೀಡಿದ್ದರು. ವೇಗವಾಗಿ ಚಲಿಸುತ್ತಿದ್ದ ರೈಲು ಅಡ್ಡ ಬಂದ ಹಸುವಿಗೆ ಬಡಿದಿದೆ. ರೈಲು ಬಡಿದ ರಭಸಕ್ಕೆ ಹಾರಿದ ಹಸು ಅಳಿಯ ಪಕ್ಕದಲ್ಲೇ ಮೂತ್ರ ವಿಸರ್ಜನೆ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಬಿದ್ದು, ಹಸುವಿನೊಂದಿಗೆ ವ್ಯಕ್ತಿಯೂ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಮದುವೆಯಾಗುವಂತೆ ಕೇಳಿದ್ದಕ್ಕೆ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಗೆಳತಿಯನ್ನ ಕೊಂದೇಬಿಟ್ಟ – ಮುಂದೇನಾಯ್ತು?

    ಮೃತ ವ್ಯಕ್ತಿ ಭಾರತೀಯ ರೈಲ್ವೆಯ ನಿವೃತ್ತ ಎಲೆಕ್ಟ್ರಿಷಿಯನ್ ಶಿವದಯಾಳ್ ಶರ್ಮಾ ಎಂದು ಹೇಳಲಾಗಿದೆ. 23 ವರ್ಷಗಳ ಹಿಂದೆ ಶರ್ಮಾ ನಿವೃತ್ತರಾಗಿದ್ದರು. ಮೂತ್ರ ವಿಸರ್ಜನೆ ಮಾಡುವ ವೇಳೆ ಶರ್ಮಾ ಸಾವನ್ನಪ್ಪಿದ್ದಾರೆ ಎಂದು ಶಿವದಯಾಳ್ ಶರ್ಮ ಅವರ ಸಂಬಂಧಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: AisaCup: ಕೊನೆಗೂ ಭಾರತದ ಎದುರು ಮಂಡಿಯೂರಿದ ಪಾಕ್‌ – ICCಗೆ ಕಳಿಸಿರೋ ಪ್ರಸ್ತಾವನೆಯಲ್ಲಿ ಏನಿದೆ?

    ಏನಿದು ಘಟನೆ?
    ಶುಕ್ರವಾರ ಬೆಳಗ್ಗೆ 8.30ರ ವೇಳೆ ಕಾಲಿಮೊರಿ ಗೇಟ್‌ನಿಂದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಪಾಸ್ ಆಗಿತ್ತು. ಈ ವೇಳೆ ಟ್ರೈನ್ ಬಹಳ ವೇಗದಲ್ಲಿದ್ದು, ಹಸುವಿಗೆ ಡಿಕ್ಕಿ ಹೊಡೆಯಿತು. ಡಿಕ್ಕಿ ಹೊಡೆದ ರಭಸಕ್ಕೆ ಹಸು 30 ಮೀಟರ್ ದೂರಕ್ಕೆ ಹಾರಿ, ರೈಲ್ವೆ ಟ್ರ‍್ಯಾಕ್‌ನ ಪಕ್ಕದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ಶಿವದಯಾಳ್ ಅವರ ಮೇಲೆ ಬಿದ್ದಿದೆ. ಹಸು ಇದ್ದ ಭಾರ ಹಾಗೂ ರೈಲು ಹೊಡೆದ ರಭಸ ಇವೆಲ್ಲವೂ ಶಿವದಯಾಳ್ ಅವರ ಸಾವಿಗೆ ಕಾರಣವಾಗಿದೆ. ವ್ಯಕ್ತಿಯ ಶವವನ್ನು ಜಿಲ್ಲಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಶಿವದಯಾಳ್ ಅವರ ಜೊತೆ ಇನ್ನೊಬ್ಬ ವ್ಯಕ್ತಿ ಕೂಡ ಇದ್ದ, ಆತನಿಗೆ ಘಟನೆಯಲ್ಲಿ ಯಾವುದೇ ದೊಡ್ಡ ಪ್ರಮಾಣದ ಗಾಯವಾಗಿಲ್ಲ ಎಂದು ತಿಳಿದುಬಂದಿದೆ.

  • ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಕಸದ ರಾಶಿ – ಫೋಟೋ ವೈರಲ್

    ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಕಸದ ರಾಶಿ – ಫೋಟೋ ವೈರಲ್

    ನವದೆಹಲಿ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ (Vande Bharat Express) ಬೋಗಿಯಲ್ಲಿ ಕಸದ ರಾಶಿ (Garbage) ಬಿದ್ದಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಐಎಎಸ್ (IAS) ಅಧಿಕಾರಿ ಅವನೀಶ್ ಶರಣ್ (Awanish Sharan) ಅವರು ಈ ಫೋಟೋವನ್ನು ಟ್ವೀಟ್ ಮಾಡಿ, ನಾವು ಜನರೆಂದು ಶೀರ್ಷಿಕೆ ನೀಡಿದ್ದಾರೆ.

    ಈ ಫೋಟೋದಲ್ಲಿ ರೈಲಿನೊಳಗೆ ಖಾಲಿ ಬಾಟಲಿ, ಆಹಾರದ ಡಬ್ಬಗಳು ಹಾಗೂ ಪ್ಲಾಸ್ಟಿಕ್ ಚೀಲಗಳು ಚಲ್ಲಾಪಿಲ್ಲಿಯಾಗಿದೆ.  ಕೆಲಸಗಾರ ಇವೆಲ್ಲವನ್ನು ಸ್ವಚ್ಛಗೊಳಿಸಲು ಪೊರಕೆ ಹಿಡಿದಿರುವುದು ಫೋಟೋದಲ್ಲಿ ಸೆರೆಯಾಗಿದೆ.

    ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನೊಳಗೆ ಕಸ ಹಾಕಿರುವುದನ್ನು ಹಲವರು ಖಂಡಿಸಿದ್ದಾರೆ. ಇದನ್ನೂ ಓದಿ: ವಲಸಿಗರಿಗೆ ಆಪರೇಷನ್ ಮಾಡಲು ಹೋಗಿ ಕೈ ಸುಟ್ಟುಕೊಂಡ ಕಾಂಗ್ರೆಸ್ ಪಾಳಯ

    ನೆಟ್ಟಿಗನೊಬ್ಬ ಕಾಮೆಂಟ್ ಮಾಡಿದ್ದು, ನಾವು ಉತ್ತಮ ಸೌಲಭ್ಯಗಳು ಮತ್ತು ಉತ್ತಮ ಮೂಲಸೌಕರ್ಯಕ್ಕಾಗಿ ಕೇಳುತ್ತಲೇ ಇರುತ್ತೇವೆ. ಆದರೆ ನಮ್ಮ ದೇಶದ ಜನರಿಗೆ ಅದನ್ನು ಹೇಗೆ ಸ್ವಚ್ಛವಾಗಿಟ್ಟುಕೊಳ್ಳಬೇಕು ಮತ್ತು ಅದನ್ನು ನೋಡಿಕೊಳ್ಳಬೇಕು ಎಂಬುದು ತಿಳಿದಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: Madhya Pradesh Plane Crash: ಮಿರಾಜ್ 2000 ಯುದ್ಧ ವಿಮಾನದ ಪೈಲಟ್ ದುರ್ಮರಣ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k