Tag: ವಂಶಿ

  • ‘ಫೈರ್‌ ಫ್ಲೈ’ ಟೀಸರ್ ರಿಲೀಸ್- ವಿಕ್ಕಿಯಾಗಿ ವಂಶಿಯನ್ನು ಪರಿಚಯಿಸಿದ ಚಿತ್ರತಂಡ

    ‘ಫೈರ್‌ ಫ್ಲೈ’ ಟೀಸರ್ ರಿಲೀಸ್- ವಿಕ್ಕಿಯಾಗಿ ವಂಶಿಯನ್ನು ಪರಿಚಯಿಸಿದ ಚಿತ್ರತಂಡ

    ‘ಫೈರ್‌ ಫ್ಲೈ’ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shivarajkumar) ಅವರ ಪುತ್ರಿ ನಿವೇದಿತಾ (Niveditha) ನಿರ್ಮಾಣದ ಮೊದಲ ಸಿನಿಮಾ. ಯುವ ಪ್ರತಿಭೆ ವಂಶಿ ನಟಿಸಿ, ನಿರ್ದೇಶಿಸುತ್ತಿರುವ ಈ ಚಿತ್ರದ ಮೊದಲ ಝಲಕ್ ರಿಲೀಸ್ ಆಗಿದೆ. ವಿಕ್ಕಿಯಾಗಿ ನಾಯಕ ವಂಶಿಯನ್ನು ‘ಫೈರ್‌ ಫ್ಲೈ’ (Fire Fly) ಬಳಗ ಸಿನಿಮಾ ಪ್ರೇಮಿಗಳಿಗೆ ಪರಿಚಯಿಸಿದೆ. ಇದನ್ನೂ ಓದಿ:ಹೊಸ ರಿಯಾಲಿಟಿ ಶೋಗೆ ‘ಬಿಗ್ ಬಾಸ್’ ವಿನ್ನರ್ ಕಾರ್ತಿಕ್ ಹೋಸ್ಟ್‌

    ವಿವೇಕಾನಂದ ಎಂದು ಪರಿಚಯಿಸಿಕೊಳ್ಳುವ ನಾಯಕ ತಾನೊಬ್ಬ ಅವಾರ್ಡ್ ವಿನ್ನಿಂಗ್ ಮ್ಯಾಥ್ಸ್ ಟೀಚರ್ ಎಂದು ಹೇಳಿಕೊಳ್ಳುತ್ತಾನೆ. ವಿಕ್ಕಿ ಪ್ರಪಂಚದಲ್ಲಿ ಬೆಳಿಗ್ಗೆ 7, ಮಧ್ಯಾಹ್ನ 1 ಮತ್ತು ರಾತ್ರಿ 8 ಗಂಟೆಗೆ ಏನ್ ನಡೆಯುತ್ತದೆ. ವಿಕ್ಕಿ ವಿಚಿತ್ರ ವರ್ತನೆಯನ್ನು ಸಖತ್ ಫನ್ನಿಯಾಗಿ ಕಟ್ಟಿಕೊಡಲಾಗಿದೆ. 2 ನಿಮಿಷ 49 ಸೆಕೆಂಡ್ ಇರುವ ‘ಫೈರ್ ಫ್ಲೈ’ ಟೀಸರ್ ಕುತೂಹಲದಿಂದ ಕೂಡಿದ್ದು, ವಿಕ್ಕಿ ಯಾರು ಅನ್ನೋದನ್ನು ಹೇಳಿರುವ ಚಿತ್ರತಂಡ ಅಸಲಿಗೆ ಯಾಕೆ ವಿಚಿತ್ರವಾಗಿ ವರ್ತನೆ ಮಾಡ್ತಾನೆ ಅನ್ನೋದರ ಗುಟ್ಟು ಬಿಟ್ಟು ಕೊಟ್ಟಿಲ್ಲ.

    ವಂಶಿ ನಾಯಕನಾಗಿ ನಿರ್ದೇಶಕನಾಗಿ ಮಿಂಚಿದ್ದು, ತಾಂತ್ರಿಕವಾಗಿ ಟೀಸರ್ ಶ್ರೀಮಂತಿಕೆಯಿಂದ ಕೂಡಿದೆ. ಚಿತ್ರದ ಫ್ರೇಮ್, ಕಲರಿಂಗ್, ಕಂಟೆಂಟ್, ಕ್ವಾಲಿಟಿಯಲ್ಲಿ ಕಾಂಪ್ರಮೈಸ್ ಆಗದೆ ಒಳ್ಳೆಯ ಔಟ್‌ಫುಟ್ ನೀಡಲಾಗಿದೆ. ಚರಣ್ ರಾಜ್ ಸಂಗೀತ, ಅಭಿಲಾಷ್ ಕಳತ್ತಿ ಕ್ಯಾಮೆರಾ ವರ್ಕ್ ರಘು ನಿಡುವಳ್ಳಿ ಸಂಭಾಷಣೆ, ಸುರೇಶ್ ಆರುಮುಗಂ ಸಂಕಲನ ‘ಫೈರ್‌ ಫ್ಲೈ’ ಟೀಸರ್ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ.

    ‘ಫೈರ್‌ ಫ್ಲೈ’ ನಾಯಕನಾಗಿ ಅಭಿನಯಿಸಿರುವ ವಂಶಿಗೆ ಜೋಡಿಯಾಗಿ ರಚನಾ ಇಂದರ್, ಉಳಿದಂತೆ ಅಚ್ಯುತ್ ಕುಮಾರ್, ಸುಧಾರಾಣಿ, ಶೀತಲ್ ಶೆಟ್ಟಿ, ಮೂಗು ಸುರೇಶ್, ಚಿತ್ಕಲಾ ಬಿರಾದಾರ್, ಸಿಹಿ ಕಹಿ ಚಂದ್ರು ತಾರಾಬಳಗದಲ್ಲಿದ್ದಾರೆ. ಈ ಸಿನಿಮಾವನ್ನು ಶ್ರೀ ಮುತ್ತು ಸಿನಿ ಸರ್ವಿಸ್ ಸಂಸ್ಥೆ ನಿರ್ಮಾಣ ಮಾಡುತ್ತಿದೆ. ಈ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಕೂಡ ಕೊಡಲು ಮುಂದಾಗಿದೆ.

    ‘ಫೈರ್‌ ಫ್ಲೈ’ ಮೂಲಕವೇ ನಿರ್ದೇಶಕ ವಂಶಿ ಪೂರ್ಣ ಪ್ರಮಾಣದ ನಾಯಕರಾಗುತ್ತಿದ್ದಾರೆ. ಇವರ ಮೊದಲ ಪ್ರಯತ್ನದ ಬಗ್ಗೆ ಟಾಕ್ ಇದ್ದೇ ಇದೆ. ಚಿತ್ರದ ಮೊದಲ ಝಲಕ್‌ನಲ್ಲಿ ಫನ್-ಎಮೋಷನ್ ಎಲ್ಲವೂ ಸಿನಿಮಾದಲ್ಲಿದೆ. ಶೂಟಿಂಗ್ ಮುಗಿಸಿರುವ ಚಿತ್ರತಂಡ ಈ ವರ್ಷಾಂತ್ಯಕ್ಕೆ ಸಿನಿಮಾವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ.

  • ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಚಿತ್ರಕ್ಕೆ ಟೈಟಲ್ ಫಿಕ್ಸ್

    ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಚಿತ್ರಕ್ಕೆ ಟೈಟಲ್ ಫಿಕ್ಸ್

    ವಿರಾಗಿ ಶುರುವಾದ ಕಥೆಗೆ ಹೆಸರೊಂದು ಮೂಡಿದೆ. ಹೆಸರ ಜೊತೆಗೆ ಬರುವೆವು ಎಂದು ಚಿತ್ರತಂಡ ಶೀರ್ಷಿಕೆ ಅನಾವರಣ ಮಾಡುವುದಾಗಿ ತಿಳಿಸಿತ್ತು. ಅದರಂತೆ ಇಂದು ಟೈಟಲ್ (Title) ರಿವೀಲ್ ಮಾಡಿದೆ. ನಿವೇದಿತಾ  (Nivedita) ಮೊದಲ ಹೆಜ್ಜೆಗೆ ‘ಫೈರ್ ಫ್ಲೈ’ (Fire fly) ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಅಂದಹಾಗೇ ಈ ಚಿತ್ರಕ್ಕೆ ವಂಶಿ (Vamshi) ಹೀರೋ. ನಿರ್ದೇಶನ ಕೂಡ ಅವರದ್ದೇ.

    ‘ಪಿ.ಆರ್.ಕೆ ಪ್ರೊಡಕ್ಷನ್ಸ್’ ನಿರ್ಮಾಣದ ‘ಮಯಾಬಜಾರ್’ ಸಿನಿಮಾದಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದ ಅವರು,  ಇತ್ತೀಚೆಗೆ ಬಂದ ‘ಪೆಂಟಗನ್’ ಚಿತ್ರದಲ್ಲೂ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದರು. ಇದನ್ನೂ ಓದಿ:ಸುದೀಪ್ ಮನೆಯಿಂದ ಮತ್ತೊಬ್ಬ ಸ್ಟಾರ್: ಸಂಚಿತ್ ಚಿತ್ರಕ್ಕೆ ಮುಹೂರ್ತ

    ನಿವೇದಿತಾ ಬಂಡವಾಳ ಹೂಡುತ್ತಿರುವ ಮೊದಲ ಚಿತ್ರಕ್ಕೆ ನಿರ್ದೇಶನ ಮಾಡುವ ಮೂಲಕ ವಂಶಿ ಸ್ವತಂತ್ರ ನಿರ್ದೇಶಕರಾಗಿ ಮತ್ತು ಪೂರ್ಣಪ್ರಮಾಣದ ಹೀರೋ ಆಗಿ ಚಿತ್ರರಂಗದಲ್ಲಿ ಹೊಸ ಜರ್ನಿ ಆರಂಭಿಸುತ್ತಿದ್ದಾರೆ. ಜಯ್ ರಾಮ್ ಸಹ-ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಅಭಿಲಾಷ್ ಕಲ್ಲಟ್ಟಿ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ನಿರ್ದೇಶನ ಹಾಗೂ ರಘು ನಿಡುವಳ್ಳಿ ಅವರು ಸಂಭಾಷಣೆಯ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

    ಶಿವರಾಜ್ ಕುಮಾರ್ (Shivaraj Kumar) ಯಾವಾಗಲೂ ಹೊಸಬರಿಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಅದೇ ರೀತಿ ಅಪ್ಪನ ಹಾದಿಯಲ್ಲೇ ನಿವೇದಿತಾ ಕೂಡ ಹೊಸ ಪ್ರತಿಭೆಗಳಿಗೆ ವೇದಿಕೆ ಒದಗಿಸಿಕೊಡುತ್ತಿದ್ದಾರೆ. ‘ಶ್ರೀ ಮುತ್ತು ಸಿನಿ ಸರ್ವೀಸ್’ ಸಂಸ್ಥೆಯು ಅವರ ಕನಸಿನ ಕೂಸು. ಯುವ ಪ್ರತಿಭೆಗಳಿಗೆ ಮತ್ತು ಹೊಸ ಆಲೋಚನೆಗಳಿಗೆ ಅವಕಾಶ ನೀಡಲು ಈ ಸಂಸ್ಥೆ ಮುಡಿಪಾಗಿದೆ.

  • ರವಿತೇಜ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್

    ರವಿತೇಜ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್

    ತೆಲುಗು ಚಿತ್ರರಂಗದ ಮಾಸ್ ಮಹಾರಾಜ ರವಿತೇಜ (Raviteja)ನಟನೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಟೈಗರ್ ನಾಗೇಶ್ವರ್ ರಾವ್ ಬಿಡುಗಡೆ (Release) ದಿನಾಂಕ ನಿಗದಿಯಾಗಿದೆ. ದಸರಾ ಹಬ್ಬಕ್ಕೆ ಟೈಗರ್ ನಾಗೇಶ್ವರ್ ರಾವ್ (Tiger Nageswara Rao) ಬಾಕ್ಸಾಫೀಸ್ ಬೇಟೆಗಿಳಿದಿದ್ದಾನೆ. ಅಂದರೆ ಅಕ್ಟೋಬರ್ 22ರಂದು ವಿಶ್ವಾದ್ಯಂತ ರವಿತೇಜ ಸಿನಿಮಾ ಬೆಳ್ಳಿತೆರೆಗಪ್ಪಳಿಸಲಿದೆ. ದಸರಾ ಹಬ್ಬದ ಸುಸಂದರ್ಭ ಹಾಗೂ ದಸರಾ ರಜೆ ಹಿನ್ನೆಲೆ ಪ್ಲಾನ್ ಮಾಡಿಕೊಂಡು ಚಿತ್ರ ರಿಲೀಸ್ ಮಾಡಲಾಗ್ತಿದೆ.

    ವಂಶಿ ನಿರ್ದೇಶನದಲ್ಲಿ ತಯಾರಾಗಿರುವ ಟೈಗರ್ ನಾಗೇಶ್ವರ್ ರಾವ್ ಸಿನಿಮಾವನ್ನು ಕಾಶ್ಮೀರಿ ಫೈಲ್ಸ್ ಹಾಗೂ ಕಾರ್ತಿಕೇಯ-2 ನಂತಹ ಎರಡು ಬ್ಲಾಕ್ ಬಸ್ಟರ್ ಹಿಟ್ ಚಿತ್ರ ನಿರ್ಮಿಸಿರುವ ಅಭಿಷೇಕ್ ಅರ್ಗವಾಲ್ ತಮ್ಮದೇ ಅಭಿಷೇಕ್ ಅಗವಾಲ್ ಆರ್ಟ್ಸ್ ನಡಿ ಅದ್ಧೂರಿಯಾಗಿ ನಿರ್ಮಿಸಿದ್ದಾರೆ. ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಸಿನಿಮಾ ಮೂಡಿಬಂದಿದ್ದು, ಅದಕ್ಕಾಗಿ ಐದು ಎಕರೆ ಜಾಗದಲ್ಲಿ ಹಳ್ಳಿಯೊಂದನ್ನು ರೀ ಕ್ರಿಯೇಟ್ ಮಾಡಿ ಕೋಟ್ಯಾತರ ರೂಪಾಯಿ ಬಜೆಟ್ ನಲ್ಲಿ ಸೆಟ್ ಹಾಕಿ ಚಿತ್ರೀಕರಿಸಲಾಗಿದೆ. ಇದನ್ನೂ ಓದಿ: ಪ್ರೀತಿಯ ಹೊಸ ಮಗ್ಗುಲಿಗೆ ಕಣ್ಣಾದ `ಚೌ ಚೌ ಬಾತ್’ ಸಿನಿಮಾ

    70ರ ಕಾಲಘಟ್ಟದ ಹೈದ್ರಾಬಾದ್ ದ ಸ್ಟುವರ್ಟ್ ಪುರಂ ಹಳ್ಳಿಯೊಂದರ ಕುಖ್ಯಾತ ಕಳ್ಳನ ಜೀವನಾಧಾರಿತ ಸಿನಿಮಾ ಇದಾಗಿದ್ದು, ಈ ಹಿಂದಿನ ಎಲ್ಲಾ ಚಿತ್ರಗಳಿಗಿಂತಲೂ ರವಿತೇಜ ಗೆಟಪ್, ಬಾಡಿ ಲಾಗ್ವೇಜ್ ಸಂಪೂರ್ಣವಾಗಿ ಭಿನ್ನವಾಗಿರಲಿದೆ. ನೂಪುರ್ ಸನೋನ್ ಮತ್ತು ಗಾಯತ್ರಿ ಭಾರದ್ವಾಜ್ ನಾಯಕಿಯರಾಗಿ ಮಾಸ್ ಮಹಾರಾಜನಿಗೆ ಸಾಥ್ ಕೊಟ್ಟಿದ್ದಾರೆ. ಆರ್ ಮಧಿ ಛಾಯಾಗ್ರಹಣ, ಶ್ರೀಕಾಂತ್ ವೀಸಾ ಸಂಭಾಷಣೆ, ವಿ ಪ್ರಕಾಶ್ ಕುಮಾರ್ ಸಂಗೀತ ಸಿನಿಮಾಕ್ಕಿದೆ. ಅವಿನಾಶ್ ಕೊಲ್ಲಾ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಮಯಾಂಕ್ ಸಿಂಘಾನಿಯಾ ಸಹ ನಿರ್ಮಾಣದ ಜವಾಬ್ದಾರಿ ನಿಭಾಯಿಸಿದ್ದಾರೆ.

  • ಬಳ್ಳಾರಿಗೆ ಬರಲಿದ್ದಾರೆ ವಿಜಯ್ ಮತ್ತು ರಶ್ಮಿಕಾ ಮಂದಣ್ಣ

    ಬಳ್ಳಾರಿಗೆ ಬರಲಿದ್ದಾರೆ ವಿಜಯ್ ಮತ್ತು ರಶ್ಮಿಕಾ ಮಂದಣ್ಣ

    ಮಿಳಿನ ಸೂಪರ್ ಸ್ಟಾರ್ ವಿಜಯ್ ಮತ್ತು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸದ್ಯದಲ್ಲೇ ಬಳ್ಳಾರಿಗೆ ಆಗಮಿಸಲಿದ್ದಾರೆ. ಇದೇ ಮೊದಲ ಬಾರಿಗೆ ಈ ಜೋಡಿ ಸಿನಿಮಾದಲ್ಲಿ ನಟಿಸುತ್ತಿರುವುದರಿಂದ ಮತ್ತು ಒಟ್ಟಾಗಿ ಕರ್ನಾಟಕಕ್ಕೆ ಬರುತ್ತಿರುವುದರಿಂದ ರಶ್ಮಿಕಾ ಅಭಿಮಾನಿಗಳಿಗೆ ಸಹಜವಾಗಿಯೇ ಸಂಭ್ರಮ ತಂದಿದೆ. ಅಷ್ಟಕ್ಕೂ ಈ ಜೋಡಿ ಬಳ್ಳಾರಿಗೆ ಬರುತ್ತಿರುವುದು ಯಾಕೆ ಎನ್ನುವುದನ್ನು ಸ್ವತಃ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಬಹಿರಂಗ ಪಡಿಸಿದ್ದಾರೆ.

    ವಿಜಯ್ ಮತ್ತು ರಶ್ಮಿಕಾ ದೇವರಕೊಂಡ ‘ವಾರಿಸು’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ವಿಜಯ್ ಜೊತೆ ರಶ್ಮಿಕಾ ತೆರೆ ಹಂಚಿಕೊಂಡಿದ್ದಾರೆ. ಈ ಸಿನಿಮಾದ ಹಾಡೊಂದರ ಚಿತ್ರೀಕರಣ ಬಳ್ಳಾರಿಯಲ್ಲಿ ನಡೆಯಲಿದೆ. ಅದಕ್ಕಾಗಿ ಅವರು ಬಳ್ಳಾರಿಗೆ ಆಗಮಿಸುತ್ತಿದ್ದಾರೆ. ಈ ಹಾಡಿನ ನೃತ್ಯ ಸಂಯೋಜನೆಯನ್ನು ಜಾನಿ ಮಾಸ್ಟರ್ ಮಾಡುತ್ತಿದ್ದು, ಈಗಾಗಲೇ ಬಳ್ಳಾರಿ ಸುತ್ತಮುತ್ತ ಲೋಕೇಶನ್ ಕೂಡ ನೋಡಿಕೊಂಡು ಹೋಗಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಮನೆಗೆ ದೀಪಿಕಾ ದಾಸ್ ವೈಲ್ಡ್ ಕಾರ್ಡ್ ಎಂಟ್ರಿ

    ಕೆಲವೇ ದಿನಗಳಲ್ಲಿ ವಾರಿಸು ಸಿನಿಮಾದ ಬ್ಯುಟಿಫುಲ್ ಗೀತೆಯೊಂದು ಈ ನೆಲದಲ್ಲಿ ಚಿತ್ರೀಕರಣಗೊಳ್ಳಲಿದೆ. ಹಾಗಾಗಿ ಶೂಟಿಂಗ್ ಸ್ಥಳವನ್ನು ನೋಡಲು ಬಂದಿದೆ. ಬಂದಿರುವ ಕೆಲಸ ಪಕ್ಕಾ ಆಗಿದ್ದು, ಆ ಭಾಗದ ಜನತೆ ಸಹಕರಿಸಿದ್ದಕ್ಕೆ ಧನ್ಯವಾದಗಳು ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೇ, ಸದ್ಯದಲ್ಲೇ ಈ ಹಾಡಿನ ಶೂಟಿಂಗ್ ನಡೆಸುವುದಾಗಿಯೂ ಅವರು ಹೇಳಿದ್ದಾರೆ.

    ಚಿಕ್ಕಂದಿನಿಂದಲೂ ವಿಜಯ್ ಅವರ ಸಿನಿಮಾಗಳನ್ನು ನೋಡುತ್ತಾ ಬೆಳೆದವರು ರಶ್ಮಿಕಾ. ಅವರೊಂದಿಗೆ ನಟಿಸಬೇಕು ಎಂದು ಕನಸು ಕೂಡ ಕಂಡವರು. ವಾರಿಸು ಮೂಲಕ ಕನಸು ನನಸಾಗಿದೆ. ವಂಶಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಬಹುತೇಕ ಟಾಕಿ ಭಾಗದ ಚಿತ್ರೀಕರಣ ಮುಗಿದಿದೆ. ಹಾಡುಗಳ ಚಿತ್ರೀಕರಣವಷ್ಟೇ ಬಾಕಿ ಉಳಿದಿದ್ದು,  ಆ ಹಾಡುಗಳಲ್ಲಿ ಒಂದನ್ನು ಕರ್ನಾಟಕದಲ್ಲಿ ಶೂಟ್ ಮಾಡುತ್ತಿದ್ದಾರೆ ನಿರ್ದೇಶಕರು.

    Live Tv
    [brid partner=56869869 player=32851 video=960834 autoplay=true]

  • ಪವನ್ ಕಲ್ಯಾಣ್ ಮಾಜಿ ಪತ್ನಿ ರೇಣು ದೇಸಾಯಿ ಸಿನಿಮಾ ರಂಗಕ್ಕೆ ಕಂಬ್ಯಾಕ್

    ಪವನ್ ಕಲ್ಯಾಣ್ ಮಾಜಿ ಪತ್ನಿ ರೇಣು ದೇಸಾಯಿ ಸಿನಿಮಾ ರಂಗಕ್ಕೆ ಕಂಬ್ಯಾಕ್

    ಮಾಸ್ ಮಹಾರಾಜ ರವಿತೇಜ್ (Ravitej) ಅಕೌಂಟ್ ನಲ್ಲಿರುವ ಬಹುನಿರೀಕ್ಷಿತ ಸಿನಿಮಾ ‘ಟೈಗರ್ ನಾಗೇಶ್ವರ ರಾವ್’ ಅಂಗಳದಿಂದ ಹೊಸ ಅಪ್ ಡೇಟ್ ಸಿಕ್ಕಿದೆ. ವಂಶಿ (Vamshi) ಸಾರಥ್ಯದಲ್ಲಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ಪವನ್ ಕಲ್ಯಾಣ್ (Pawan Kalyan) ಮಾಜಿ ಪತ್ನಿ ರೇಣು ದೇಸಾಯಿ ಎಂಟ್ರಿ ಕೊಟ್ಟಿದ್ದಾರೆ. ರೇಣು ಸಿನಿಮಾದಲ್ಲಿ ಪ್ರಮುಖವಾದ ಪಾತ್ರವೊಂದು ಪ್ಲೇ ಮಾಡುತ್ತಿದ್ದು, ಅವರ ಇಂಟ್ರೂಡಕ್ಷನ್ ಟೀಸರ್ ರಿಲೀಸ್ ಆಗಿದೆ.

    ಭಾರತೀಯ ಸಾಮಾಜಿಕ ಕಾರ್ಯಕರ್ತೆ, ಲೇಖಕಿಯೂ ಆಗಿರುವ, ಅಸ್ಪೃಶ್ಯತೆ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಹೇಮಲತಾ ಲವಣಂ ಪಾತ್ರದಲ್ಲಿ ರೇಣು ದೇಸಾಯಿ (Renu Desai) ಅಭಿನಯಿಸುತ್ತಿದ್ದು, ಶುಭ್ರ ಬಿಳಿ ಬಣ್ಣದ ಸೀರೆಯುಟ್ಟು ಪವರ್ ಫುಲ್ ಎಂಟ್ರಿ ಕೊಟ್ಟಿರುವ ರೇಣು ದೇಸಾಯಿ ಟೀಸರ್ ಝಲಕ್‌ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ:ಕಾವ್ಯಶ್ರೀ ರೂಪೇಶ್‌ಗೆ ಪ್ರಪೋಸ್ ಮಾಡಿದ್ರೆ ಸಾನ್ಯಗ್ಯಾಕೆ ಸಿಟ್ಟು?

    ದಿ ಕಾಶ್ಮೀರಿ ಫೈಲ್ಸ್ ಸಿನಿಮಾ ನಿರ್ಮಾಣ ಮಾಡಿ ದೊಡ್ಡ ಮಟ್ಟದ ಖ್ಯಾತಿ ಗಳಿಸಿರುವ ಅಭಿಷೇಕ್ ಅರ್ಗವಾಲ್ ತಮ್ಮದೇ ‘ಅಭಿಷೇಕ್ ಅಗರ್ವಾಲ್ ಆರ್ಟ್ಸ್’ ಬ್ಯಾನರ್ ಮೂಲಕ  ‘ಟೈಗರ್ ನಾಗೇಶ್ವರ ರಾವ್’ (Tiger Nageswara Rao) ಚಿತ್ರವನ್ನು ಅದ್ಧೂರಿಯಾಗಿ ನಿರ್ಮಾಣ ಮಾಡುತ್ತಿದ್ದು, ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ತಯಾರಾಗುತ್ತಿರುವ ಈ ಚಿತ್ರದ ಮೂಲಕ ರವಿ ತೇಜ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ದಿಬ್ಬಣ ಹೊರಡಲಿದ್ದಾರೆ.

    ಕುಖ್ಯಾತ ಹಾಗೂ ಧೈರ್ಯಶಾಲಿ ಕಳ್ಳನ ಕಥಾನಕವನ್ನು ಒಳಗೊಂಡಿರುವ ಈ ಚಿತ್ರದಲ್ಲಿ ರವಿತೇಜ ಸಂಪೂರ್ಣ ಭಿನ್ನವಾಗಿ ಕಾಣಿಸಿಕೊಳ್ಳಲಿದ್ದಾರೆ. ಇವರಿಗೆ ಜೋಡಿಯಾಗಿ ನೂಪುರ್ ಸನೋನ್, ಗಾಯತ್ರಿ ಭಾರದ್ವಜ್ ನಟಿಸುತ್ತಿದ್ದು, ರೆಟ್ರೋ ಶೈಲಿಯಲ್ಲಿ ಸಿನಿಮಾ ಮೂಡಿಬರಲಿದೆ. ಆರ್.ಮ್ಯಾಥಿ ಐಎಸ್ಸಿ ಛಾಯಾಗ್ರಹಣ, ಜಿವಿ ಪ್ರಕಾಶ್ ಕುಮಾರ್ ಸಂಗೀತ ನಿರ್ದೇಶನ, ಶ್ರೀಕಾಂತ್ ವಿಸ್ಸಾ ಸಂಭಾಷಣೆಯ ಜವಾಬ್ದಾರಿ ಹೊತ್ತಿದ್ದಾರೆ. ಮಯಾಂಕ್ ಸಿಂಘಾನಿಯಾ ಸಹ-ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದಿ ಕಾಶ್ಮೀರ್ ಫೈಲ್ಸ್ ನಿರ್ಮಾಪಕರಿಂದ ಮತ್ತೊಂದು ಚಿತ್ರ ಘೋಷಣೆ : ರವಿತೇಜ ಹೀರೋ

    ದಿ ಕಾಶ್ಮೀರ್ ಫೈಲ್ಸ್ ನಿರ್ಮಾಪಕರಿಂದ ಮತ್ತೊಂದು ಚಿತ್ರ ಘೋಷಣೆ : ರವಿತೇಜ ಹೀರೋ

    ಮಾಸ್ ಮಹಾರಾಜ ಎಂದೇ ಖ್ಯಾತರಾಗಿರುವ ರವಿತೇಜ ಅವರು ಹೊಸ ಸಿನಿಮಾ ‘ಟೈಗರ್ ನಾಗೇಶ್ವರ್ ರಾವ್’ಗೆ ಯುಗಾದಿಯಂದು ಮುಹೂರ್ತ ಕಾಣಲಿದೆ. ವಂಶಿ ಡೈರೆಕ್ಷನ್ ನಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ದಿ ಕಾಶ್ಮೀರ್ ಫೈಲ್ಸ್ ಚಿತ್ರದ ನಿರ್ಮಾಪಕ ಅಭಿಷೇಕ್ ಅರ್ಗವಾಲ್ ಈ ಚಿತ್ರಕ್ಕೆ ಹಣ ಹೂಡಿದ್ದಾರೆ. ತೆಲುಗಿನ ಮಾಸ್ ಮಹಾರಾಜ ರವಿತೇಜ ಟೈಗರ್ ನಾಗೇಶ್ವರ್ ರಾವ್ ಆಗಿ ಬಣ್ಣ ಹಚ್ಚಲಿದ್ದು, ಇದು ರವಿತೇಜ ಮೊದಲ ಪ್ಯಾನ್ ಇಂಡಿಯಾ ಸಿನಿಮಾವಾಗಿದೆ. ಇದನ್ನೂ ಓದಿ:  ಕಷ್ಟಪಟ್ಟು ಮಾಡುವ ಸಿನಿಮಾ ಬಗ್ಗೆ ಅಪಪ್ರಚಾರ ಮಾಡಬೇಡಿ ಎಂದು ಆಲಿಯಾ ಗರಂ

    ದಿ ಕಾಶ್ಮೀರಿ ಫೈಲ್ಸ್ ಸಿನಿಮಾ ಮೂಲಕ ಬಾಲಿವುಡ್ ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಕನಸಿನ ಸಿನಿಮಾವಾಗಿರುವ ಟೈಗರ್ ನಾಗೇಶ್ವರ್ ರಾವ್ ಸಿನಿಮಾದ ಮುಹೂರ್ತ ಯುಗಾದಿ ಹಬ್ಬದಂದು ಅದ್ಧೂರಿಯಾಗಿ ನಡೆಯಲಿದೆ. ಯುಗಾದಿ ಶುಭದಿನದಂದು ಮಧ್ಯಾಹ್ನ 12.6ಕ್ಕೆ ಸಿನಿಮಾದ ಫ್ರೀ ಲುಕ್ ರಿಲೀಸ್ ಆಗಲಿದೆ, ಅಂದಹಾಗೇ ಇದು ರವಿತೇಜ ಸಿನಿಕರಿಯರ್ ನ ಬಿಗ್ ಬಜೆಟ್ ಸಿನಿಮಾವಾಗಿರಲಿದೆ. ಇದನ್ನೂ ಓದಿ: ಬಾಲ್ಯ ವಿವಾಹ ಮಾಡಿ ತಾಳಿ ಬಿಚ್ಚಿಸಿ ಪರೀಕ್ಷೆಗೆ ಕಳುಹಿಸಿದ್ರು

    ಟೈಗರ್ ನಾಗೇಶ್ವರ್ ರಾವ್, 1970ರಲ್ಲಿ ಸ್ಟುವರ್ಟ್‌ಪುರಂ ಎಂಬಲ್ಲಿ ನಡೆದ ನೈಜ ಘಟನೆಯಾಧಾರಿತ ಸಿನಿಮಾವಾಗಿದ್ದು, ಕುಖ್ಯಾತ ಹಾಗೂ ಧೈರ್ಯಶಾಲಿ ಕಳ್ಳನ ಕಥಾನಕವನ್ನು ಒಳಗೊಂಡಿರುವ ಈ ಚಿತ್ರದಲ್ಲಿ ರವಿತೇಜ ಸಂಪೂರ್ಣವಾಗಿ ತಮ್ಮ ಮೇಕ್ ಓವರ್ ನ್ನು ಬದಲಿಸಿಕೊಂಡಿದ್ದಾರೆ. ಒಂದು ವಿಭಿನ್ನ ಪಾತ್ರದಲ್ಲಿ ರವಿತೇಜ ಮಿಂಚಲಿದ್ದಾರೆ. ಬಾಲಿವುಡ್ ಬ್ಯೂಟಿ ಕೃತಿ ಸನೂನ್ ಸಹೋದರಿ ನೂಪೂರ್ ಸನೂನ್ ರವಿತೇಜ್ ಗೆ ಜೋಡಿಯಾಗಿ ಮಿಂಚಲಿದ್ದಾರೆ. ಇದನ್ನೂ ಓದಿ : ಸೆನ್ಸಾರ್ ಪಾಸ್ ಆದ ರಾಕಿಭಾಯ್ : ಕೆಜಿಎಫ್ 1 ಗಿಂತ ಕೆಜಿಎಫ್ 2 ಸಿನಿಮಾ 13 ನಿಮಿಷ ಉದ್ದ

    ತೆಲುಗು, ಕನ್ನಡ, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಯಲ್ಲಿ ಸಿನಿಮಾ ಮೂಡಿಬರಲಿದ್ದು, 70ರ ದಶಕದ ಟಚ್ ಜೊತೆಗೆ ಮೈ ಜುಮ್ ಎನಿಸುವ ಆಕ್ಷನ್ ಸೀನ್ಸ್ ಸಿನಿಮಾದಲ್ಲಿರಲಿದೆ. ಆರ್.ಮ್ಯಾಥಿ ಐಎಸ್ ಸಿ ಕ್ಯಾಮೆರಾ ವರ್ಕ್, ಜೆವಿ ಪ್ರಕಾಶ್ ಕುಮಾರದ್ ಸಂಗೀತ, ಶ್ರೀಕಾಂತ್ ವಿಸ್ಸಾ ಸಂಭಾಷಣೆ ಬರೆದಿದ್ದು, ಮಯಾಂಕ್ ಸಿಂಘಾನಿಯಾ ಸಹ ನಿರ್ಮಾಪಕರಾಗಿ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.