Tag: ವಜೂಭಾಯಿ ವಾಲಾ

  • ವಿಧಾನ ಪರಿಷತ್ ಸಭಾಪತಿಗಳ ಕಾರ್ಯವೈಖರಿ ಇತರರಿಗೆ ಮಾದರಿ: ರಾಜ್ಯಪಾಲರಿಂದ ಶ್ಲಾಘನೆ

    ವಿಧಾನ ಪರಿಷತ್ ಸಭಾಪತಿಗಳ ಕಾರ್ಯವೈಖರಿ ಇತರರಿಗೆ ಮಾದರಿ: ರಾಜ್ಯಪಾಲರಿಂದ ಶ್ಲಾಘನೆ

    ಬೆಂಗಳೂರು: ಕಳೆದ ನಾಲ್ಕು ದಶಕಗಳಿಂದ ಸತತವಾಗಿ 7 ಬಾರಿ ವಿಧಾನ ಪರಿಷತ್ತಿನ ಸದಸ್ಯರಾಗಿ, ಪ್ರಸ್ತುತ ವಿಧಾನ ಮಂಡಲದ ಮೇಲ್ಮನೆಯಾಗಿರುವ ವಿಧಾನ ಪರಿಷತ್ತಿನ ಸಾರಥ್ಯ ವಹಿಸಿರುವ ಸಭಾಪತಿ ಬಸವರಾಜ ಹೊರಟ್ಟಿಯವರ ಕಾರ್ಯವೈಖರಿ ಅನುಕರಣೀಯವಾಗಿದ್ದು, ಎಲ್ಲಾ ಪೀಠಾಸೀನಾಧಿಕಾರಿಗಳಿಗೆ ಮಾದರಿಯಾಗಿದೆ ಎಂದು ನಿರ್ಗಮಿತ ರಾಜ್ಯಪಾಲ ವಜೂಭಾಯಿ ವಾಲಾ ಶ್ಲಾಘಿಸಿದ್ದಾರೆ.

    ಆರು ವರ್ಷ ಹತ್ತು ತಿಂಗಳ ಕಾಲ ನಿರಂತರವಾಗಿ ಕರ್ನಾಟಕ ರಾಜ್ಯದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿ ನಿರ್ಗಮಿಸುತ್ತಿರುವ ವಜೂಭಾಯಿ ವಾಲಾರವರನ್ನು ರಾಜಭವನದಲ್ಲಿಂದು ಭೇಟಿ ಮಾಡಿದ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ನಿರ್ಗಮಿತ ರಾಜ್ಯಪಾಲರಿಗೆ ಶುಭ ಹಾರೈಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ವಾಜೂಭಾಯಿ ವಾಲಾರವರು, ಸಭಾಪತಿಗಳ ಸದನ ಕಲಾಪ ನಡೆಸುವ ಕಾರ್ಯ ಪದ್ಧತಿಯನ್ನು ಕೊಂಡಾಡಿದ ರಾಜ್ಯಪಾಲರು ನಾಲ್ಕು ದಶಕಗಳ ಸಮಾಜಮುಖಿ ಚಿಂತನೆಗಳು ಮತ್ತು ರಾಜಕೀಯ ಅನುಭವದಿಂದ ವಿಧಾನ ಪರಿಷತ್ತಿನ ಕಲಾಪಗಳನ್ನು ಅರ್ಥಪೂರ್ಣವಾಗಿ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ ಎಂದರು.

    ಚಿಂತಕರ ಚಾವಡಿಯಾಗಿರುವ ವಿಧಾನ ಪರಿಷತ್ತಿನಲ್ಲಿ ವರ್ತಮಾನದ ಸಮಸ್ಯೆಗಳ ಕುರಿತು ಚಿಂತನ ಮಂಥನ ನಡೆಯುತ್ತಿರುವುದರ ಜೊತೆಗೆ ಹಲವಾರು ಮೌಲ್ವಿಕ ವಿಚಾರಗಳ ಕುರಿತು ಅರ್ಥಪೂರ್ಣ ಚರ್ಚೆ ನಡೆಸುವ ಮೂಲಕ ಇಡೀ ಸಮಾಜಕ್ಕೆ ಪ್ರಜಾಪ್ರಭುತ್ವದ ಮೌಲ್ಯಗಳ ಸಾರ್ಥಕ್ಯದ ಕುರಿತು ಸ್ಪಷ್ಟ ಸಂದೇಶ ನೀಡುತ್ತಿರುವುದು ಸಂತಸದ ಸಂಗತಿ ಎಂದು ರಾಜ್ಯಪಾಲ ವಜೂಭಾಯಿ ವಾಲಾ ನುಡಿದರು. ಇದನ್ನೂ ಓದಿ: ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕ

    ಹಿರಿಯ ಸದಸ್ಯರ ಅನುಭವ, ವಿಚಾರಧಾರೆ ಹಾಗೂ ಸದನದ ಘನತೆ ಗೌರವ ಹೆಚ್ಚಿಸುವ ನಿಟ್ಟಿನಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರು ನಡೆಸುತ್ತಿರುವ ನಿರಂತರ ಪ್ರಯತ್ನ ಎಲ್ಲರಿಗೂ ಮಾದರಿಯಾಗಿದೆ. ಆರು ವರ್ಷ ಹತ್ತು ತಿಂಗಳ ಕಾಲ ಕರ್ನಾಟಕದ ಜನತೆ ತಮಗೆ ನೀಡಿದ ಗೌರವ ಹಾಗೂ ಸಹಕಾರಕ್ಕೆ ನಿರ್ಗಮಿತ ರಾಜ್ಯಪಾಲರು ಇದೇ ವೇಳೆ ಕೃತಜ್ಞತೆ ಸಲ್ಲಿಸಿದರು.

  • ಆಜಾದ್ ಕಿ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ರಾಜ್ಯಪಾಲರಿಗೆ ಆಮಂತ್ರಣ

    ಆಜಾದ್ ಕಿ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ರಾಜ್ಯಪಾಲರಿಗೆ ಆಮಂತ್ರಣ

    ಬೆಂಗಳೂರು: ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಇಂದು ರಾಜ್ಯಪಾಲರಾದ ವಜೂಭಾಯಿ ವಾಲಾ ಅವರನ್ನು ಭೇಟಿ ಮಾಡಿ ನಾಳೆ ವಿದುರಾಶ್ವತ್ಥದಲ್ಲಿ ನಡೆಯಲಿರುವ ಆಜಾದಿ ಕಿ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಲು ಆಮಂತ್ರಣ ನೀಡಿದರು.

    ರಾಜಭವನದಲ್ಲಿ ವಜೂಭಾಯಿ ವಾಲಾ ಅವರನ್ನು ಭೇಟಿ ಮಾಡಿದ ಅರವಿಂದ ಲಿಂಬಾವಳಿ ಪುಷ್ಪ ಗುಚ್ಚವನ್ನು ನೀಡಿ, ನಾಳೆ ವಿದುರಾಶ್ವತ್ಥದಲ್ಲಿ ನಡೆಯಲಿರುವ ಆಜಾದಿ ಕಿ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಬೇಕಾಗಿ ಕೇಳಿಕೊಂಡರು. ಈ ಸಂದರ್ಭ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಜೊತೆಗಿದ್ದರು.

    ದೇಶದ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ರಾಜ್ಯದ ಮೂರು ಸ್ಥಳಗಳನ್ನು ಒಳಗೊಂಡಂತೆ ದೇಶದ 75 ಸ್ಥಳಗಳಲ್ಲಿ 75 ವಾರಗಳ ಕಾಲ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ ಎಂಬ ಮಾಹಿತಿಯನ್ನು ರಾಜ್ಯಪಾಲರೊಂದಿಗೆ ಸಚಿವರು ಮಾಹಿತಿ ಹಂಚಿಕೊಂಡರು.

  • ಅರೇ, ಹೊರಟ್ಟಿಯವ್ರೇ ಸೈಡಿಗೆ ಬನ್ರಿ: ಸ್ಪೀಕರ್ ರಮೇಶ್ ಕುಮಾರ್

    ಅರೇ, ಹೊರಟ್ಟಿಯವ್ರೇ ಸೈಡಿಗೆ ಬನ್ರಿ: ಸ್ಪೀಕರ್ ರಮೇಶ್ ಕುಮಾರ್

    ಬೆಂಗಳೂರು: ಇಂದು ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನ ಆರಂಭವಾಗಿದೆ. ಎರಡು ಜಂಟಿ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣವನ್ನು ಮಾಡಿದ್ದಾರೆ. ರಾಜ್ಯಪಾಲರನ್ನು ವಿಧಾನ ಸಭೆಗೆ ಸ್ಪೀಕರ್ ಕರೆತರೋದು ಮತ್ತು ಕಳುಹಿಸಿ ಕೊಡುವುದು ಸಂಪ್ರದಾಯ. ಆದರೆ ರಾಜ್ಯಪಾಲರ ನಿರ್ಗಮನ ವೇಳೆ ಈ ಶಿಷ್ಟಾಚಾರ ಉಲ್ಲಂಘನೆ ಆಗಿತ್ತು.

    ರಾಜ್ಯಪಾಲ ವಜೂಭಾಯಿ ವಾಲಾ ತಮ್ಮ ಭಾಷಣ ಮುಗಿಸಿ ವಿಧಾನಸಭೆಯಿಂದ ನಿರ್ಗಮಿಸುತ್ತಿದ್ದರು. ಈ ವೇಳೆ ರಾಜ್ಯಪಾಲರ ಹಿಂದೆ ವಿಧಾನ ಪರಿಷತ್ ಹಂಗಾಮಿ ಸ್ಪೀಕರ್ ಬಸವರಾಜ ಹೊರಟ್ಟಿ ನಡೆದುಕೊಂಡು ಬರುತ್ತಿದ್ದರು. ಕೂಡಲೇ ಎಚ್ಚೆತ್ತ ವಿಧಾನ ಸಭೆ ಸ್ಪೀಕರ್ ರಮೇಶ್ ಕುಮಾರ್ ಮುಂದೆ ನಡೆದು ಹೋಗುತ್ತಿದ್ದ ಹೊರಟ್ಟಿಯವರ ಬೆನ್ನು ತಟ್ಟಿ ಪಕ್ಕಕ್ಕೆ ತೆರಳಲು ಸೂಚಿಸಿದ್ದಾರೆ. ಈ ವೇಳೆ ಹೊರಟ್ಟಿಯವರ ಪಕ್ಕದಲ್ಲಿದ್ದ ಸಿಎಂ ಸಹ ನನ್ನ ಕಡೆ ಬನ್ನಿ ಅಂತಾ ಸನ್ನೆ ಮಾಡಿದರು.

    ರಾಜ್ಯ ಸರ್ಕಾರ ರೈತರ ಕಲ್ಯಾಣಕ್ಕಾಗಿ ಬದ್ಧವಾಗಿದ್ದು, ಮುಂದಿನ ದಿನಗಳಲ್ಲಿ ನಾಡಿನ ಕೃಷಿಕ ಬಂಧುಗಳು ಸಮಸ್ಯೆಗಳು ಬಗೆಹರಿಯಲಿವೆ. ಯಾವ ರೈತರು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಬಾರದು ಎಂದು ಮನವಿ ಮಾಡಿಕೊಂಡರು. ಸರ್ಕಾರ ಅಖಂಡ ಕರ್ನಾಟಕದ ಅಭಿವೃದ್ಧಿಗಾಗಿ ಕೆಲಸ ಮಾಡಲಿದ್ದು, ಹಳೆಯ ಯೋಜನೆಗಳೊಂದಿಗೆ ಹೊಸ ಕಾರ್ಯಕ್ರಮಗಳು ಜಾರಿಯಾಗಲಿವೆ ಎಂದು ತಿಳಿಸಿದರು.

  • ರೈತರ ಧ್ವನಿಯಾಗಿ ಸಮ್ಮಿಶ್ರ ಸರ್ಕಾರ ಕೆಲಸ ಮಾಡಲಿದೆ: ವಜೂಭಾಯಿ ವಾಲಾ

    ರೈತರ ಧ್ವನಿಯಾಗಿ ಸಮ್ಮಿಶ್ರ ಸರ್ಕಾರ ಕೆಲಸ ಮಾಡಲಿದೆ: ವಜೂಭಾಯಿ ವಾಲಾ

    ಬೆಂಗಳೂರು: ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನ ಇಂದು ಆರಂಭವಾಗಿದೆ. ನಿಯಮದಂತೆ ಹೊಸ ವಿಧಾನಸಭೆಯ ಮೊದಲ ಅಧಿವೇಶನದ ಮೊದಲ ದಿನದಂದು ರಾಜ್ಯಪಾ ವಿ.ಆರ್.ವಾಲಾ ಜಂಟಿ ಸದನಗಳಾದ ವಿಧಾನಸಭೆ-ವಿಧಾನಪರಿಷತ್ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಿದರು.

    ಸ್ಪೀಕರ್ ರಮೇಶ್ ಕುಮಾರ್, ರಾಜ್ಯಪಾಲರನ್ನು ವಿಧಾನಸಭೆಗೆ ಕರೆತಂದರು. ರಾಷ್ಟ್ರಗೀತೆ ಮೊಳಗಿದ ಬಳಿಕ ಜಂಟಿ ಸದನ ಉದ್ದೇಶಿಸಿ ಭಾಷಣ ಆರಂಭಿಸಿದ ರಾಜ್ಯಪಾಲರು ಮೊದಲಿಗೆ ವಿಧಾನಸಭೆ ಚುನಾವಣೆಯಲ್ಲಿ ಆಯ್ಕೆಯಾದ ಎಲ ನಾಯಕರಿಗೂ ಶುಭಕೋರಿದರು. ಎಲ್ಲ ಶಾಸಕರು ಕರ್ನಾಟಕದ ಅಭಿವೃದ್ಧಿಗಾಗಿ ಕೆಲಸ ಮಾಡಬೇಕಿದೆ. ಎಲ್ಲ ಹಿರಿಯ ಶಾಸಕರು, ಮೊದಲ ಬಾರಿಗೆ ಆಯ್ಕೆಯಾಗಿರುವ ಕಿರಿಯ ಶಾಸಕರಿಗೆ ಮಾದರಿಯಾಗಿ, ಆಡಳಿತದಲ್ಲಿ ಮಾರ್ಗದರ್ಶನ ನೀಡಬೇಕು ಎಂದು ತಿಳಿಸಿದರು.

    ರಾಜ್ಯ ಸರ್ಕಾರ ರೈತರ ಧ್ವನಿಯಾಗಿ ಆಡಳಿತ ನಡೆಸಲಿದೆ. ನಮ್ಮ ಸರ್ಕಾರ ಮೊದಲು ನಾಡಿನ ರೈತ ಬಾಂಧವರಿಗೆ ಆಧ್ಯತೆ ನೀಡುತ್ತದೆ. ಸರ್ಕಾರ ರೈತರ ಸಮಸ್ಯೆಗಳನ್ನು ಪರಿಹರಿಸಲು ಹಳೆಯ ಯೋಜನೆಗಳೊಂದಿಗೆ ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರಲು ಬದ್ಧವಾಗಿದೆ. ಕಾಡು ಪ್ರಾಣಿಗಳಿಂದ ರೈತರ ಬೆಳೆ ಹಾಳಾದ್ರೆ ಸರ್ಕಾರ ಬೆಂಬಲ ನೀಡಲಿದೆ. ಕೃಷಿಯಲ್ಲಿ ಆಧುನೀಕರಣ, ತಂತ್ರಜ್ಞಾನದ ಬಳಕೆ, ಬೆಂಬಲ ಬೆಲೆ ಸೇರಿದಂತೆ ಹಲವು ಯೋಜನೆಗಳು ಜಾರಿಯಾಗಲಿದ್ದು, ನಾಡಿನ ರೈತರು ಆತ್ಮಹತ್ಯೆಗೆ ಶರಣಾಗಾಬಾರದು ಎಂದು ಹೇಳಿದರು.

    ಹೈದರಾಬಾದ್ ಕರ್ನಾಟಕ ಸೇರಿದಂತೆ ಅಖಂಡ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧ. ರಾಜ್ಯದ ಮಹಿಳೆಯರ ಭದ್ರತೆಗಾಗಿ ನಿರ್ಭಯಾ ಕೇಂದ್ರ ಸ್ಥಾಪನೆ ಮಾಡಲಾಗುವುದು. ಸೈಬರ್ ಕ್ರೈಂ ವಿಭಾಗದ ಅಪರಾಧಗಳ ತಡೆಗೆ ಸರ್ಕಾರ ಶಿಸ್ತಿನಿಂದ ಕೆಲಸ ಮಾಡಲಿದೆ. ಗ್ರಾಮೀಣ, ನಗರ ರಸ್ತೆ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡಲಾಗುವುದು. ಜಿಲ್ಲಾ, ತಾಲೂಕುಗಳಲ್ಲಿ ವಿಡಿಯೋ ಕಾನ್ಫೆರೆನ್ಸ್ ಗಳ ಮೂಲಕ ನಾಯಕರು ಅಧಿಕಾರಿಗಳೊಂದಿಗೆ ಸಂವಹನ ಮಾಡಲಿದ್ದಾರೆ ಎಂದರು.

    2021 ರೊಳಗೆ ನಮ್ಮ ಮೆಟ್ರೋ ಕಾಮಗಾರಿ ಪೂರ್ಣಗೊಳಿಸಲಾಗುವುದು. ಬೆಂಗಳೂರು ನಗರದಲ್ಲಿ ರಸ್ತೆ ಅಭಿವೃದ್ಧಿ, ಕುಡಿಯುವ ನೀರಿನ ವ್ಯವಸ್ಥೆ, ಮೆಟ್ರೋ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುವುದು. ಮಹಿಳೆಯ ಭದ್ರತೆಗಾಗಿ ಬೆಂಗಳೂರಿನ ಬಸ್‍ಗಳಲ್ಲಿ ಉಚಿತ ವೈಫೈ ಸೌಲಭ್ಯ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ರು.

    ಮಹಿಳೆಯರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ನೀಡುವಿಕೆ, ಬಂಜಾರ ಸಮುದಾಯದ ಅಭಿವೃದ್ಧಿ, ಹಿಂದುಳಿದ ವರ್ಗಗಳ ಯುವಕರ ಉದ್ಯೋಗ ಮತ್ತು ಶಿಕ್ಷಣಕ್ಕಾಗಿ ಹೊಸ ಯೋಜನೆಗಳು, ಉತ್ತಮ ಶಿಕ್ಷಣದ ಮೂಲಕ 2030 ರೊಳಗೆ ಬಾಲ ಕಾರ್ಮಿಕ ಮುಕ ರಾಜ್ಯ ನಿರ್ಮಾಣ, ಈ ಹಿನ್ನೆಲೆಯಲ್ಲಿ ಶಿಕ್ಷಣದಲ್ಲಿ ಬದಲಾವಣೆ ಗರ್ಭಿಣಿಯರಿಗೆ ಸಹಾಯ ಧನ, ಪ್ಲಾಸ್ಟಿಕ್ ನಿಯಂತ್ರಣಕ್ಕಾಗಿ ಕಠಿಣ ಕಾನೂನುಗಳನ್ನು ಸರ್ಕಾರ ಜಾರಿ ಮಾಡಲಿದೆ ಎಂದು ತಮ್ಮ ಭಾಷಣದಲ್ಲಿ ತಿಳಿಸಿದರು.

    ಮಲೀನಗೊಂಡಿರುವ ನದಿಗಳ ಅಭಿವೃದ್ಧಿ, ನೀರಾವರಿ ಯೋಜನೆಗಳಿಗೆ ಸರ್ಕಾರ ಬದ್ಧ. ಆರೋಗ್ಯ ಕರ್ನಾಟಕ ಯೋಜನೆ ಪೂರ್ಣ ಪ್ರಮಾಣದಲ್ಲಿ ಜಾರಿ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ, ಎಲ್ಲ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಕ್ಯಾನ್ಸರ್ ವಿಭಾಗ ತೆರೆಯಲಾಗುವುದು. ರೇಷನ್ ಕಾರ್ಡ್‍ಗಾಗಿ ಆನ್‍ಲೈನ್ ಸಲ್ಲಿಸುವ ಯೋಜನೆ ಜಾರಿ ಮಾಡಲಾಗಿದೆ. ಸೌರ ವಿದ್ಯುತ್, ಅಣು ವಿದ್ಯುತ್ ಘಟಕಗಳ ಅಭಿವೃದ್ಧಿಯ ಮೂಲಕ ಹೆಚ್ಚಿನ ವಿದ್ಯುತ್ ಉತ್ಪಾದನೆಗೆ ಆದ್ಯತೆ ನೀಡಲಾಗುವುದು ಎಂದರು.

    ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಮಂಗಳವಾರ ಮತ್ತು ಬುಧವಾರ ಎರಡೂ ಸದನಗಳಲ್ಲಿ ಪ್ರತ್ಯೇಕವಾಗಿ ಚರ್ಚೆ ಸಾಗಲಿದೆ. ರೈತರ ಸಾಲ ಮನ್ನಾ, ಸಿದ್ದರಾಮಯ್ಯ ಸರ್ಕಾರದ ಜನಪ್ರಿಯ ಯೋಜನೆಗಳ ಮುಂದುವರಿಕೆಯ ಒತ್ತಡದ ನಡುವೆ ಗುರುವಾರ ಕುಮಾರಸ್ವಾಮಿ ವಿಧಾನಸಭೆಗೆ ಹೊತ್ತು ಒಯ್ಯಲಿರುವ ಸೂಟ್‍ಕೇಸ್ ಸಾಕಷ್ಟು ಕುತೂಹಲ ಕೆರಳಿಸಿದೆ. ಅಧಿವೇಶನದ ಕೊನೆಯ ದಿನವಾಗಿರೋ ಜುಲೈ 12ರಂದು ಬಜೆಟ್‍ನ್ನು ವಿಧಾನಸಭೆ ಅಂಗೀಕರಿಸಲಿದೆ. ಅಧಿವೇಶನದಲ್ಲಿ ಒಂದೂವರೆ ತಿಂಗಳ ಸಮ್ಮಿಶ್ರ ಸರ್ಕಾರದ ಕಾರ್ಯವೈಖರಿಯನ್ನೇ ಪ್ರಸ್ತಾಪಿಸಿ ಬಿಜೆಪಿ ಸದನದೊಳಗೆ ಹೋರಾಟ ತೀವ್ರಗೊಳಿಸುವ ಸಾಧ್ಯತೆಯಿದೆ.

    ಈಗಾಗಲೇ ವಿಶ್ವಾಸಮತಯಾಚನೆ ವೇಳೆ 52 ಗಂಟೆ ಸಿಎಂ ಆಗಿದ್ದ ಯಡಿಯೂರಪ್ಪ ಮತ್ತು ಸಿಎಂ ಕುಮಾರಸ್ವಾಮಿ ಮಾತಿನ ಏಟು-ಎದಿರೇಟು ರೋಚಕತೆ ಹುಟ್ಟಿಸಿತ್ತು. ಸಾಲ ಮನ್ನಾ ಮತ್ತು ಸಮ್ಮಿಶ್ರ ಸರ್ಕಾರದ ಬಾಳಿಕೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯನ್ನು ಊಲ್ಲೇಖಿಸಿ ಬಿಜೆಪಿ ಮತ್ತೆ ಮುಗಿಬೀಳುವ ಸಾಧ್ಯತೆಯೂ ಇದೆ.

  • ರಾಜ್ಯಪಾಲರ ಆಗಮನದ ವೇಳೆ ತಪ್ಪಿತು ಭಾರೀ ಅನಾಹುತ!

    ರಾಜ್ಯಪಾಲರ ಆಗಮನದ ವೇಳೆ ತಪ್ಪಿತು ಭಾರೀ ಅನಾಹುತ!

    ಬೆಂಗಳೂರು: ರಾಜ್ಯಪಾಲ ವಜೂಭಾಯಿ ವಾಲಾ ಆಗಮಿಸುತ್ತಿದ್ದ ಮಾರ್ಗದಲ್ಲಿ ಅಪಘಾತ ಸಂಭವಿಸಿದ್ದು, ಪೊಲೀಸರ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದೆ.

    ಮಂಗಳವಾರ ರಾತ್ರಿ ಸುಮಾರು 10.50ಕ್ಕೆ ಸುಮಾರಿಗೆ ಯಲಹಂಕ ಏರ್‍ಫೋರ್ಸ್ ಮುಂಭಾಗದಲ್ಲಿ ಎಲಿವೇಟೆಡ್ ರಸ್ತೆ ಸಂಚಾರ ನಿರ್ಬಂಧಿಸಿ ಟ್ರಾಫಿಕ್ ನಿಯಂತ್ರಣ ಮಾಡಲಾಗಿತ್ತು. ರಾಜ್ಯಪಾಲರು ಇನ್ನೇನು ಕೆಲವೇ ನಿಮಿಷಗಳಲ್ಲಿ ಆಗಮಿಸುವ ವೇಳೆ ಕ್ಯಾಬ್, ಚಾಲಕನ ನಿಯಂತ್ರಣ ತಪ್ಪಿ ಬ್ಯಾರಿಕೇಡ್‍ಗಳಿಗೆ ಡಿಕ್ಕಿ ಹೊಡೆದಿದೆ.

    ಬ್ಯಾರಿಕೇಡ್ ಗಳ ಮುಂದೆ ನಿಂತಿದ್ದ 6 ಜನ ಪೇದೆಗಳು ಪಕ್ಕಕ್ಕೆ ಜಿಗಿದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ರಾಜ್ಯ ಸಚಿವ ಸಂಪುಟ ರಚನೆ – ಮಧ್ಯಾಹ್ನ 2.12ಕ್ಕೆ ರಾಜಭನದಲ್ಲಿ ಸಮಾರಂಭ

    ರಾಜ್ಯ ಸಚಿವ ಸಂಪುಟ ರಚನೆ – ಮಧ್ಯಾಹ್ನ 2.12ಕ್ಕೆ ರಾಜಭನದಲ್ಲಿ ಸಮಾರಂಭ

    ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಂದು ನಡೆಯಲಿದೆ. ಮಧ್ಯಾಹ್ನ 02-12 ಕ್ಕೆ ರಾಜಭವನದ ಗ್ಲಾಸ್ ಹೌಸ್ ನಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ವಜೂಭಾಯಿ ವಾಲಾ ಪ್ರಮಾಣ ವಚನ ಬೋಧಿಸಲಿದ್ದಾರೆ.

    ಜೆಡಿಎಸ್ ನಿಂದ 8 ಜನ ಪ್ರಮಾಣ ವಚನ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ. ಇತ್ತ ಕಾಂಗ್ರೆಸ್ ನಲ್ಲಿ 14-17 ಜನ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಕಾಂಗ್ರೆಸ್ ನಿಂದ ಪ್ರಮಾಣ ವಚನ ಸ್ವೀಕರಿಸುವ ವಿಷಯದಲ್ಲಿ ಸಣ್ಣಪುಟ್ಟ ಗೊಂದಲಗಳಿದ್ದು ಇಂದು ಮಧ್ಯಾಹ್ನದ ಒಳಗೆ ಎಲ್ಲವು ಸರಿಯಾಗಲಿದೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭಿಸಿವೆ.

    ರಾಜಭವನದಲ್ಲಿ ನಡೆಯಲಿರುವ ಪ್ರಮಾಣ ವಚನ ಕಾರ್ಯಕ್ರಮಕ್ಕೆ 1,500 ಜನರಿಗೆ ಪ್ರವೇಶ ಪಡೆಯಲು ಪಾಸ್ ವಿತರಿಸುವಂತೆ ಸರ್ಕಾರದಿಂದ ವಾರ್ತಾ ಇಲಾಖೆಗೆ ಸೂಚನೆ ನೀಡಲಾಗಿದೆ. ಒಟ್ಟು ಪ್ರಮಾಣ ವಚನ ಕಾರ್ಯಕ್ರಮ 1 ಗಂಟೆ ಕಾಲ ನಡೆಯಲಿದ್ದು. 03 ಗಂಟೆ 30 ನಿಮಿಷದಲ್ಲಿ ಮುಗಿಯುವ ಸಾಧ್ಯತೆ ಇದೆ.

  • ಬಹುಮತ ಪರೀಕ್ಷೆಗೂ ಮುನ್ನ ಸುಪ್ರೀಂ ಟೆಸ್ಟ್- ಸುಪ್ರೀಂಕೋರ್ಟ್ ನಿಂದ ಇಂದು ಬಿಎಸ್‍ವೈ ಭವಿಷ್ಯ ಪ್ರಕಟ

    ಬಹುಮತ ಪರೀಕ್ಷೆಗೂ ಮುನ್ನ ಸುಪ್ರೀಂ ಟೆಸ್ಟ್- ಸುಪ್ರೀಂಕೋರ್ಟ್ ನಿಂದ ಇಂದು ಬಿಎಸ್‍ವೈ ಭವಿಷ್ಯ ಪ್ರಕಟ

    -ಏಕ್ ದಿನ್ ಕಾ ಸುಲ್ತಾನ್ ಆಗ್ತಾರಾ ನೂತನ ಸಿಎಂ!!

    ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿರುವ ಖುಷಿಯಲಿರುವ ಬಿ.ಎಸ್ ಯಡಿಯೂರಪ್ಪ ಅವರಿಗೆ ಇಂದು ಅತ್ಯಂತ ಪ್ರಮುಖ ದಿನ. ಬಿಜೆಪಿ ಸರ್ಕಾರ ರಚನೆಗೆ ಅವಕಾಶ ನೀಡಿರುವ ರಾಜ್ಯಪಾಲ ವಜುಭಾಯಿ ವಾಲಾರ ನಡೆಯನ್ನು ಪ್ರಶ್ನಿಸಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಮುಂದುವರಿಯಲಿದೆ.

    ನ್ಯಾ. ಎ.ಕೆ. ಸಿಕ್ರಿ ನೇತೃತ್ವದ ತ್ರಿ ಸದಸ್ಯ ಪೀಠ ವಿಚಾರಣೆ ಮುಂದುವರಿಸಲಿದ್ದು, ಇಂದು ಮಹತ್ವದ ತೀರ್ಪು ನೀಡಲಿದೆ. ಬುಧವಾರ ರಾತ್ರಿ ಐದು ಗಂಟೆಗಳ ಕಾಲ ದೀರ್ಘ ವಿಚಾರಣೆ ನಡೆಸಿದ್ದ ಪೀಠ ಸಾಂವಿಧಾನಕ ಹುದ್ದೆ ರಾಜ್ಯಪಾಲರ ನಿರ್ಣಯಕ್ಕೆ ಹಸ್ತಕ್ಷೇಪ ಮಾಡದೆ ಪ್ರಮಾಣ ವಚನ ತಡೆ ಒಪ್ಪಿಗೆ ನೀಡಲಿಲ್ಲ. ಬದಲಿಗೆ ರಾಜ್ಯಪಾಲರಿಗೆ ಬಿಎಸ್‍ವೈ ಬರೆದಿರುವ ಪತ್ರದ ಪ್ರತಿಯನ್ನು ಸುಪ್ರಿಂಕೊರ್ಟ್ ಗೆ ಸಲ್ಲಿಸುವಂತೆ ಕೇಳಿತ್ತು.

    ರಾಜ್ಯಪಾಲರಿಗೆ ಸರ್ಕಾರ ರಚನೆ ವಿಚಾರವಾಗಿ ಬಿಎಸ್ ಯಡಿಯೂರಪ್ಪ ಬರೆದಿರುವ ಪತ್ರದಲ್ಲಿ ಏನಿದೆ? ಬಹುಮತ ಸಾಬೀತಿಗೆ ಬೇಕಾದ ಬೆಂಬಲ ಯಾರು ನೀಡ್ತಾರೆ? ಎಂಬೆಲ್ಲ ಮಾಹಿತಿ ಆಧರಿಸಿ ವಿಚಾರಣೆ ನಡೆಯಲಿದೆ. ಇದರ ಜೊತೆಗೆ ಹಿರಿಯ ವಕೀಲ ರಾಮ್ ಜೇಠ್ಮಾಲಾನಿ ಕೂಡಾ ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿದ್ದು, ಯಾವ ಆಯಾಮದಲ್ಲಿ ವಾದ ಮಂಡಸಿಲಿದ್ದಾರೆ ಎಂಬ ಕುತೂಹಲ ಮೂಡಿದೆ.

    ಈ ಎಲ್ಲ ಅರ್ಜಿಯ ಜೊತೆಗೆ ಆಂಗ್ಲೋ ಇಂಡಿಯನ್ ಶಾಸಕರನ್ನು ತರಾತುರಿಯಲ್ಲಿ ರಾಜ್ಯಪಾಲರು ನೇಮಕ ಮಾಡಿದ್ದಾರೆ ಅಂತಾ ಆರೋಪಿಸಿರುವ ಕಾಂಗ್ರೆಸ್ ಜೆಡಿಎಸ್ ಜಂಟಿಯಾಗಿ ಮತ್ತೊಂದು ಅರ್ಜಿಯೊಂದನ್ನ ಸುಪ್ರಿಂಕೊರ್ಟ್ ಗೆ ಸಲ್ಲಿಸಿದ್ದು, ಒಟ್ಟು ನಾಲ್ಕು ಅರ್ಜಿಗಳು ಏಕ ಕಾಲದಲ್ಲಿ ವಿಚಾರಣೆಗೆ ಬರಲಿದ್ದು ಇಂದು ಬಿಎಸ್‍ವೈ ಭವಿಷ್ಯ ನಿರ್ಧರಿಸಲಿವೆ.