Tag: ವಜ್ರಾಭರಣ

  • ಫುಟ್ಬಾಲ್ ಆಟಗಾರನ ವಿಲ್ಲಾದಲ್ಲಿ 22 ಲಕ್ಷ ಮೌಲ್ಯದ ವಜ್ರಾಭರಣ ಕಳವು

    ಫುಟ್ಬಾಲ್ ಆಟಗಾರನ ವಿಲ್ಲಾದಲ್ಲಿ 22 ಲಕ್ಷ ಮೌಲ್ಯದ ವಜ್ರಾಭರಣ ಕಳವು

    ಚಿಕ್ಕಬಳ್ಳಾಪುರ: ಫುಟ್ಬಾಲ್ ಆಟಗಾರರೊಬ್ಬರು ವಾಸವಾಗಿದ್ದ ವಿಲ್ಲಾವೊಂದರಲ್ಲಿ 22 ಲಕ್ಷ ಮೌಲ್ಯದ ವಜ್ರಾಭರಣಗಳು ಕಳ್ಳತನವಾಗಿರುವುದಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    bangaluru resort

    ಅಂದಹಾಗೆ ದೇವನಹಳ್ಳಿ-ನಂದಿಬೆಟ್ಟ ಮಾರ್ಗದ ಪ್ರೆಸ್ಟೀಜ್ ಗಾಲ್ಪ್ ಶೈರ್ ರೆಸಾರ್ಟ್‍ನಲ್ಲಿ ಆಸ್ಟ್ರೇಲಿಯಾ ಮೂಲದ ಕ್ಲಬ್ ಫುಟ್ಬಾಲ್ ಆಟಗಾರ ವೊಹಾನ್ ಟ್ರೋಲಫಿ ವಾಸವಾಗಿದ್ದಾರೆ. ಈ ವೊಹಾನ್ ಟ್ರೊಲಫಿ ಬೆಂಗಳೂರಿನಲ್ಲಿ ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಈ ವಿಲ್ಲಾದಲ್ಲಿ ವಾಸವಾಗಿದ್ದಾರೆ. ಆದರೆ ಈ ಫುಟ್ಬಾಲ್ ಆಟಗಾರನ ವಿಲ್ಲಾಗೆ ಕಳ್ಳರು ಪ್ರವೇಶ ಮಾಡಿ, ಪತ್ನಿಯ 22 ಲಕ್ಷ ಮೌಲ್ಯದ ವಜ್ರಾಭರಣಗಳನ್ನು ಕಳವು ಮಾಡಿದ್ದಾರೆ. ನಂತರ ವಿಲ್ಲಾಗೆ ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ:ಪರಪ್ಪನ ಅಗ್ರಹಾರದಲ್ಲಿ ಕೃಷ್ಣಾಷ್ಟಮಿ ಆಚರಣೆ

    bangaluru resort

    ಈ ಬಗ್ಗೆ ರೆಸಾರ್ಟ್‍ಗೆ ಭಾರೀ ಭದ್ರತೆಯಿದ್ದು, ಸುತ್ತಲೂ ಸಿಸಿಟಿವಿ ಕಣ್ಗಾವಲು ಇದೆ. ರೆಸಾರ್ಟ್‍ಗೆ ಸಂಬಂಧಿಸಿದವರು, ಕೂಲಿ ಕಾರ್ಮಿಕರು, ಸಿಬ್ಬಂದಿ ಹೊರತುಪಡಿಸಿ ಬೇರೆ ಯಾರಿಗೂ ಒಳಗೆ ಪ್ರವೇಶವಿಲ್ಲ. ಹೀಗಾಗಿ ಅಲ್ಲಿನವರೇ ಯಾರೋ ಕಳವು ಮಾಡಿರಬೇಕು ಎಂಬ ಅನುಮಾನ ವ್ಯಕ್ತವಾಗುತ್ತಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ:ಕಾರಿನಿಂದ ರಾಕೆಟ್ ಉಡಾಯಿಸ್ತಿದ್ದ ಉಗ್ರರು- ಫೋಟೋಗಳು ಔಟ್

  • ಕಳ್ಳತನವಾಗಿದ್ದ ಕೆಎಎಸ್ ಅಧಿಕಾರಿ ಭೀಮಾನಾಯ್ಕ್ ಸಹೋದರನ ವಜ್ರ-ಚಿನ್ನಾಭರಣ ಪತ್ತೆ!

    ಕಳ್ಳತನವಾಗಿದ್ದ ಕೆಎಎಸ್ ಅಧಿಕಾರಿ ಭೀಮಾನಾಯ್ಕ್ ಸಹೋದರನ ವಜ್ರ-ಚಿನ್ನಾಭರಣ ಪತ್ತೆ!

    ಬಳ್ಳಾರಿ: ಸಂಡೂರು ತಾಲೂಕಿನ ಸುಶೀಲನಗರ ಗ್ರಾಮದಲ್ಲಿ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶ್ವಸಿಯಾಗಿದ್ದು, ಈ ಮೂಲಕ ಕೆಎಎಸ್ ಅಧಿಕಾರಿ ಭೀಮಾನಾಯ್ಕ್ ಸಹೋದರ ಕೃಷ್ಣಾನಾಯ್ಕ್ ಗೆ ಸೇರಿದ ವಜ್ರಾಭರಣಗಳು ಪತ್ತೆಯಾಗಿವೆ.

    ಸುಶೀಲನಗರ ನಿವಾಸಿ ಖೀರೂನಾಯ್ಕ ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ ಸುಮಾರು 132.700 ಮಿ.ಗ್ರಾಂ ತೂಕದ ವಜ್ರ ಮತ್ತು ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ವಜ್ರಾಭರಣಗಳ ಮೌಲ್ಯ ಸುಮಾರು 15.90 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

    ಏನಿದು ಪ್ರಕರಣ?: 2017ರ ಜನವರಿ 3 ರಂದು ಸುಶೀಲ ನಗರ ಗ್ರಾಮದ ಉಮಾನಾಯ್ಕ್ ರ ಪತ್ನಿ ಜ್ಯೋತಿಬಾಯಿಯರನ್ನು ಕಟ್ಟಿ, ಜೀವ ಬೆದರಿಕೆ ಹಾಕಿ ಸುಮಾರು 17 ಲಕ್ಷ ರೂ. ಮೌಲ್ಯದ ಬಂಗಾರ ಮತ್ತು ವಜ್ರದ ಅಭರಣಗಳನ್ನು ದೋಚಿಕೊಂಡು ಪರಾಗಿಯಾಗಿದ್ದರು. ಈ ಸಂಬಂಧ ಜ್ಯೋತಿಬಾಯಿ ಸಂಡೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು.

    ಈ ಬಂಗಾರದ ಆಭರಣಗಳು ಬೆಂಗಳೂರಿನ ವಿಶೇಷ ಭೂ ಸ್ವಾಧಿನಾಧಿಕಾರಿ ಹಾಗೂ ಕೆಎಎಸ್ ಅಧಿಕಾರಿ ಭೀಮಾನಾಯ್ಕ್ ಸಹೋದರ ಕೃಷ್ಣಾನಾಯ್ಕ್ ಗೆ ಸೇರಿದ್ದಾಗಿದೆ. ಕೃಷ್ಣಾನಾಯ್ಕ್ ರಿಂದ ತಗೆದುಕೊಂಡು ಬಂದಿದ್ದ ಬಂಗಾರದ ಆಭರಣಗಳನ್ನು ಜ್ಯೋತಿಭಾಯಿ ತಮ್ಮ ಮನೆಯಲ್ಲಿರಿಸಿದ್ದಾಗ ಆರೋಪಿಗಳು ಕಳ್ಳತನ ಮಾಡಿದ್ದರೆಂದು ದೂರು ದಾಖಲಾಗಿತ್ತು. ಕಳ್ಳತನದ ಆರೋಪಿ ಖೀರೂನಾಯ್ಕ್ , ಜ್ಯೋತಿಭಾಯಿ ಅವರ ಅಕ್ಕನ ಗಂಡ ಎಂದು ತಿಳಿದುಬಂದಿದೆ.

    ಬಳ್ಳಾರಿ ಡಿಸಿಬಿ ವಿಶೇಷ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಹಸನ್‍ಸಾಬ್ ಮತ್ತು ಪಿ.ಎಸ್.ಐ. ರಷೀದ್ ಅಹಮ್ಮದ್ ನೇತೃತ್ವದಲ್ಲಿ ಎಸ್.ದಿನಕರ, ಎಸ್.ಮಂಜುನಾಥ, ಸುಧೀರ್‍ಕುಮಾರ್, ಎಂ.ನವಾಬ್, ಬಿ.ಎಂ.ಸದ್ಯೋಜಾತಯ್ಯ, ಧಾರಾಸಿಂಗ್ ಉಮಾಮಹೇಶ್ವರ, ಕೆ.ಸುರೇಶ್, ಪಿ.ಲಲಿತಮ್ಮ ಅವರನ್ನು ಒಳಗೊಂಡ ತಂಡವನ್ನು ಈ ಪ್ರಕರಣದ ಪತ್ತೆಗಾಗಿ ನಿಯೋಜಿಸಲಾಗಿತ್ತು.