Tag: ವಧು

  • ತಾಳಿ ಕಟ್ಟುವ ವೇಳೆ ಮುರಿದು ಬಿದ್ದ ಮದುವೆ – ನಂಗೆ ಮದ್ವೆ ಬೇಡ ಎಂದ ವಧು, ವರ ಶಾಕ್‌

    ತಾಳಿ ಕಟ್ಟುವ ವೇಳೆ ಮುರಿದು ಬಿದ್ದ ಮದುವೆ – ನಂಗೆ ಮದ್ವೆ ಬೇಡ ಎಂದ ವಧು, ವರ ಶಾಕ್‌

    – ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಘಟನೆ

    ಹಾಸನ : ಸಿನಿಮಾ ದೃಶ್ಯದಂತೆ ತಾಳಿ ಕಟ್ಟುವ ವೇಳೆ ವಧು (Bride) ಮದುವೆಯನ್ನೇ ನಿಲ್ಲಿಸಿದ ಘಟನೆ ಹಾಸನ ನಗರದಲ್ಲಿ ನಡೆದಿದೆ.

    ಹಾಸನ (Hassana) ನಗರದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಬೂವನಹಳ್ಳಿ ಗ್ರಾಮದ ಪಲ್ಲವಿ ಹಾಗೂ ಆಲೂರು ತಾಲ್ಲೂಕಿನ ವೇಣುಗೋಪಾಲ.ಜಿ ಜೊತೆ ಮದುವೆ (Marriage) ನಿಶ್ಚಯವಾಗಿತ್ತು.

    ಮುಹೂರ್ತದ ವೇಳೆ ವಧುವಿಗೆ ಕರೆ ಬಂದಿದೆ. ಕರೆ ಬಂದ ಬೆನ್ನಲ್ಲೇ ವಧು ನಾನು ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದೇನೆ. ಈ ಮದುವೆ ಬೇಡ ಎಂದು ಹಠ ಹಿಡಿದಿದ್ದಾಳೆ.

    ತಕ್ಷಣವೇ ಮದುವೆ ಬೇಡ ಎಂದು ಪಲ್ಲವಿ ಕೊಠಡಿಗೆ ಹೋಗ ಬಾಗಿಲು ಹಾಕಿಕೊಂಡಿದ್ದಾಳೆ. ಪಲ್ಲವಿಯ ಮನವೊಲಿಸಲು ಪೋಷಕರು ಶತಾಯಗತಾಯ ಪ್ರಯತ್ನಪಟ್ಟಿದ್ದಾರೆ. ವಿಚಾರ ತಿಳಿದು ಬಡಾವಣೆ ಹಾಗೂ ನಗರಠಾಣೆ ಪೊಲೀಸರು ಮಧ್ಯೆ ಪ್ರವೇಶಿಸಿ ಮಾತುಕತೆ ನಡೆಸಿದ್ದಾರೆ.

     

    ಪೋಷಕರ ಮನವೊಲಿಕೆಗೂ ಕ್ಯಾರೇ ಎನ್ನದ ಯುವತಿ ಮದುವೆ ಬೇಡವೇ ಬೇಡ ಎಂದು ಹಠ ಹಿಡಿದಿದ್ದಾಳೆ. ಯುವತಿ ಹಠವನ್ನು ನೋಡಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿರುವ ವೇಣುಗೋಪಾಲ ನನಗೂ ಈ ಮದುವೆ ಬೇಡ ಎಂದು ಹೇಳಿದ್ದಾರೆ. ಇದನ್ನೂ ಓದಿ: ಯೂಟ್ಯೂಬ್‌ ಸಂದರ್ಶನ ನೀಡಿ ತಗಲಾಕಿಕೊಂಡ ದಾಸ – ಖುದ್ದು ಹಾಜರಿಗೆ ಕೋರ್ಟ್‌ನಿಂದ ದರ್ಶನ್‌, ವಿಜಯಲಕ್ಷ್ಮಿಗೆ ಸಮನ್ಸ್‌ 

    ಕಲ್ಯಾಣಮಂಟಪಕ್ಕೆ ವಧು-ವರನ ಕಡೆಯ ನೂರಾರು ಮಂದಿ ಆಗಮಿಸಿದ್ದರು. ಕಡೆ ಗಳಿಗೆಯಲ್ಲಿ ಮದುವೆ ನಿಂತು ಹೋಗಿದ್ದಕ್ಕೆ ವಧುವಿನ ಪೋಷಕರು ಕಣ್ಣೀರಿಟ್ಟಿದ್ದಾರೆ.

    ಪಲ್ಲವಿ ಸ್ನಾತಕೋತ್ತರ ಪದವಿ ಓದಿದ್ದು ಸದ್ಯ ಯಾವುದೇ ಉದ್ಯೋಗ ಮಾಡುತ್ತಿರಲಿಲ್ಲ. ಪ್ರೀತಿಸುವ ಹುಡುಗನ ಬಗ್ಗೆ ಸದ್ಯ ಯಾವುದೇ ವಿವರ ಲಭ್ಯವಾಗಿಲ್ಲ.

    ಪಬ್ಲಿಕ್‌ ಟಿವಿ ಜೊತೆ ವಧುವಿನ ಸಂಬಂಧಿ ಮಂಜುನಾಥ್‌ ಮಾತನಾಡಿ, ಯುವತಿ ಪೋಷಕರ ಜೊತೆ ಪ್ರೀತಿಸುವ ವಿಚಾರವನ್ನು ತಿಳಿಸಿರಲಿಲ್ಲ. ಮೊದಲೇ ತಿಳಿಸಿದ್ದರೆ ಮದುವೆ ಮಾಡುತ್ತಿರಲಿಲ್ಲ. ಆಕೆಯ ಪೋಷಕರು ಶಾಕ್‌ನಲ್ಲಿ ಇದ್ದು ಮಾತನಾಡುವ ಸ್ಥಿತಿಯಲ್ಲಿ ಇಲ್ಲ. ಮದುವೆಗೆ ಬಹಳಷ್ಟು ಹಣ ಖರ್ಚು ಮಾಡಿದ್ದಾರೆ. ಈಗ ಪೊಲೀಸರ ಮೂಲಕ ಖರ್ಚು ವೆಚ್ಚಗಳ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

  • ಮದುವೆ ಮಂಟಪದಿಂದ ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಬಂದು ಎಕ್ಸಾಂ ಬರೆದ ನವವಧು

    ಮದುವೆ ಮಂಟಪದಿಂದ ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಬಂದು ಎಕ್ಸಾಂ ಬರೆದ ನವವಧು

    ಹಾಸನ: ಮದುವೆ ಮಂಟಪದಲ್ಲಿ ತಾಳಿ ಕಟ್ಟಿಸಿಕೊಂಡ ಕೂಡಲೇ ನವವಧು (Bride) ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಿ ಪರೀಕ್ಷೆ (Exam) ಬರೆದ ಘಟನೆ ಹಾಸನ (Hassan) ನಗರದಲ್ಲಿ ನಡೆದಿದೆ.

    ಹಾಸನ ನಗರದ ಚನ್ನಪಟ್ಟಣ ಬಡಾವಣೆಯ ಕುಮಾರ್ ಅನಸೂಯ ದಂಪತಿ ಪುತ್ರಿ ಕವನ ಪರೀಕ್ಷೆ ಬರೆದ ನವವಧು. ಹಾಸನದ ಪ್ರೈಡ್ ಪದವಿ ಕಾಲೇಜಿನಲ್ಲಿ ಅಂತಿಮ ಬಿಕಾಂ ಓದುತ್ತಿರುವ ಕವನ ಅಂತಿಮ ವರ್ಷದ ಕೊನೆಯ ಸಬ್ಜೆಕ್ಟ್ ಪರೀಕ್ಷೆಗೆ ಹಾಜರಾಗಿದ್ದಾರೆ. ಇದನ್ನೂ ಓದಿ: ಕೊನೆ ಕ್ಷಣದಲ್ಲಿ ಡಿಜಿಪಿ ಪ್ರಮೋಷನ್‌ಗೆ ತಡೆ – ಅಲೋಕ್ ಕುಮಾರ್‌ಗೆ ಇಲಾಖೆಯಲ್ಲೇ ಪಿತೂರಿ?

    ಹಾಸನದ ಗುಡ್ಡೆನಹಳ್ಳಿಯ ದಿನೇಶ್ ಜೊತೆ ಕವನ ಮದುವೆ ನಿಶ್ಚಯವಾಗಿದ್ದು, ಇಂದು ಬೆಳಗ್ಗೆ 9 ಗಂಟೆಗೆ ಮುಹೂರ್ತವಿತ್ತು. ಮಾಂಗಲ್ಯ ಧಾರಣೆ ಆಗುತ್ತಲೇ ಪರೀಕ್ಷಾ ಕೇಂದ್ರಕ್ಕೆ ದೌಡಾಯಿಸಿ ಬಂದ ನವವಧು ಅಂತಿಮ ವರ್ಷದ ಬಿಕಾಂ ಆದಾಯ ತೆರಿಗೆ ಎರಡು ವಿಷಯಗಳ ಪರೀಕ್ಷೆ ಬರೆದಿದ್ದಾರೆ. ಇದನ್ನೂ ಓದಿ: Exclusive: ಕಾಮಿಡಿ ಕಿಲಾಡಿ ಸ್ಟಾರ್‌, ನಟ ಮಡೆನೂರು ಮನು ವಿರುದ್ಧ ರೇಪ್‌ ಕೇಸ್‌

    ಪರೀಕ್ಷೆ ಬರೆಯಲೇಬೇಕೆಂಬ ಯುವತಿ ಆಸೆಗೆ ಆಕೆಯ ಪೋಷಕರು ಸಾಥ್ ನೀಡಿದ್ದು, ಮುಹೂರ್ತ ಮುಗಿಯುತ್ತಲೇ ಸಹೋದರಿಯನ್ನು ಅಣ್ಣ ಕಾರ್ತಿಕ್ ಪರೀಕ್ಷಾ ಕೇಂದ್ರಕ್ಕೆ ಕರೆ ತಂದಿದ್ದಾರೆ. ಪರೀಕ್ಷೆ ಬರೆದ ಬಳಿಕ ಯುವತಿ ಆರತಕ್ಷತೆಗೆ ಕಲ್ಯಾಣಮಂಟಪಕ್ಕೆ ವಾಪಸ್ ಆಗಿದ್ದಾರೆ. ಇದನ್ನೂ ಓದಿ: ಜ್ಯೋತಿಗೆ ಒಡಿಶಾ ಲಿಂಕ್ – ‘ಪಾಕ್‌ನಲ್ಲಿ ಒಡಿಶಾ ಹುಡುಗಿ’ ವೀಡಿಯೋ ಮಾಡಿದ್ದ ಯೂಟ್ಯೂಬರ್ ವಿಚಾರಣೆ

  • 7 ತಿಂಗಳಲ್ಲಿ 25 ಮದುವೆ; ಅಮಾಯಕರಿಗೆ ಲಕ್ಷಾಂತರ ಹಣ ವಂಚಿಸಿದ್ದ ಖತರ್ನಾಕ್‌ ಲೇಡಿ ಅರೆಸ್ಟ್‌

    7 ತಿಂಗಳಲ್ಲಿ 25 ಮದುವೆ; ಅಮಾಯಕರಿಗೆ ಲಕ್ಷಾಂತರ ಹಣ ವಂಚಿಸಿದ್ದ ಖತರ್ನಾಕ್‌ ಲೇಡಿ ಅರೆಸ್ಟ್‌

    ಜೈಪುರ: ಮದುವೆ ನೆಪದಲ್ಲಿ 25 ವರರಿಗೆ ಲಕ್ಷಾಂತರ ವಂಚನೆ ಮಾಡಿದ ಆರೋಪದಲ್ಲಿ ಖತರ್ನಾಕ್‌ ಮಹಿಳೆಯನ್ನು ಸವಾಯಿ ಮಾಧೋಪುರ್ ಪೊಲೀಸರು ಬಂಧಿಸಿದ್ದಾರೆ.

    ‘ಲೂಟಿಕೋರ ದುಲ್ಹನ್’ ಎಂದೇ ಕುಖ್ಯಾತಿ ಪಡೆದಿರುವ ಅನುರಾಧ ಪಾಸ್ವಾನ್, 25 ಅಮಾಯಕ ವರರನ್ನು ವಂಚಿಸಿ ಲಕ್ಷಾಂತರ ಮೌಲ್ಯದ ಆಭರಣ ಮತ್ತು ನಗದು ದೋಚಿ ಪರಾರಿಯಾಗಿದ್ದಳು. ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಇದನ್ನೂ ಓದಿ: 3 ದಿನಗಳಲ್ಲಿ 11 ಪಾಕ್ ಸ್ಪೈಗಳ ಬಂಧನ – ವ್ಲಾಗರ್, ವಿದ್ಯಾರ್ಥಿ, ಉದ್ಯಮಿ, ಗಾರ್ಡ್‌ಗಳಾಗಿದ್ದವರು ಬೇಹುಗಾರರಾಗಿ ಕೆಲಸ

    ಅನುರಾಧ ಬಡತನ ಕುಟುಂಬದವಳು. ಆಕೆಯ ಸಹೋದರರು ಕೂಡ ನಿರುದ್ಯೋಗಿಗಳು. ಆರ್ಥಿಕ ಸಂಕಷ್ಟದಿಂದಾಗಿ ಕುಟುಂಬ ನಿರ್ವಹಣೆ ಕಷ್ಟವಾಗಿತ್ತು. ಹೀಗಾಗಿ, ಅನುರಾಧ ವಂಚನೆ ದಾರಿ ಆಯ್ಕೆ ಮಾಡಿಕೊಂಡಳು. 32 ವಯಸ್ಸಿನ ಈಕೆ ವಧುವಿನಂತೆ ನಟಿಸಿ ಅಮಾಯಕ ವರರನ್ನು ವಂಚಿಸುತ್ತಿದ್ದಳು.

    ಗ್ಯಾಂಗ್ ಸದಸ್ಯರು ಈಕೆಯ ಫೋಟೋಗಳು ಮತ್ತು ಪ್ರೊಫೈಲ್ ಅನ್ನು ವರರಿಗೆ ತೋರಿಸಿ ಮದುವೆಗೆ ಗೊತ್ತು ಮಾಡುತ್ತಿದ್ದರು. ವಿವಾಹ ಒಪ್ಪಿಗೆ ಪತ್ರವನ್ನು ತಯಾರಿಸಲಾಗುತ್ತದೆ. ವಧು-ವರ ದೇವಸ್ಥಾನದಲ್ಲಿ ಅಥವಾ ಮನೆಯಲ್ಲಿ ವಿಧಿವಿಧಾನಗಳ ಪ್ರಕಾರ ಮದುವೆಯಾಗುತ್ತಿದ್ದರು. ನಂತರ ಈಕೆಯ ಅಸಲಿ ಆಟ ಪ್ರಾರಂಭವಾಗುತ್ತಿತ್ತು. ಇದನ್ನೂ ಓದಿ: ವಾಮಾಚಾರ ಮಾಡುತ್ತಿರುವುದಾಗಿ ಶಂಕಿಸಿ ಮಹಿಳೆಯ ಹತ್ಯೆ – 23 ಜನರಿಗೆ ಜೀವಾವಧಿ ಶಿಕ್ಷೆ

    ಗಂಡನ ಮನೆಯಲ್ಲಿ ಎಲ್ಲರೊಟ್ಟಿಗೂ ಅನ್ಯೋನ್ಯವಾಗಿರುವಂತೆ ನಟಿಸುತ್ತಿದ್ದಳು. ಮುಗ್ಧಳಂತೆ ವರ್ತಿಸಿ ಎಲ್ಲರನ್ನೂ ಮರಳು ಮಾಡುತ್ತಿದ್ದಳು. ಹೀಗೆ, ಮದುವೆಯಾದ ಕೆಲವೇ ದಿನಗಳಲ್ಲಿ ಆಹಾರದಲ್ಲಿ ಮತ್ತು ಬರುವ ಪದಾರ್ಥ ಬೆರೆಸಿ ಪತಿ ಕುಟುಂಬದವರಿಗೆ ಕೊಡುತ್ತಿದ್ದಳು. ನಂತರ ಮನೆಯಲ್ಲಿ ನಗದು, ಚಿನ್ನಾಭರಣವನ್ನು ದೋಚಿ ಪರಾರಿಯಾಗುತ್ತಿದ್ದಳು.

    ಈ ಬಗ್ಗೆ ವಂಚನೆಗೆ ಒಳಗಾದ ವರರು ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ.

  • ಶ್ರುತಿ, ಸಪ್ತಮಿ ಗೌಡ ಪರಿಚಯಿಸಿದ ಸೀರಿಯಲ್‌ಗೆ ಪ್ರೇಕ್ಷಕರಿಂದ ಸಿಕ್ತು ಅದ್ಭುತ ರೆಸ್ಪಾನ್ಸ್

    ಶ್ರುತಿ, ಸಪ್ತಮಿ ಗೌಡ ಪರಿಚಯಿಸಿದ ಸೀರಿಯಲ್‌ಗೆ ಪ್ರೇಕ್ಷಕರಿಂದ ಸಿಕ್ತು ಅದ್ಭುತ ರೆಸ್ಪಾನ್ಸ್

    ಸಿನಿಮಾ ತಾರೆಯರಾದ ಶ್ರುತಿ (Shruthi Krishna) ಮತ್ತು ಸಪ್ತಮಿ ಗೌಡ (Sapthami Gowda) ಪರಿಚಯಿಸಿದ ಎರಡು ಹೊಸ ಕತೆಗಳು ಕನ್ನಡ ವೀಕ್ಷಕರ ಮನಸ್ಸಿಗೆ ಲಗ್ಗೆ ಇಡುವಲ್ಲಿ ಸಕ್ಸಸ್ ಕಂಡಿದೆ. ಸದಾ ವಿಭಿನ್ನ ಕತೆಗಳನ್ನು ಹೇಳುತ್ತಾ ಬಂದಿರುವ ಕಲರ್ಸ್ ಕನ್ನಡ ಚಾನೆಲ್ ಇದೀಗ ಮತ್ತೆರೆಡು ಹೊಸ ಧಾರಾವಾಹಿಗಳ ಮೋಡಿ ಮಾಡುತ್ತಿದ್ದಾರೆ. ‘ವಧು’ ಮತ್ತು ‘ಯಜಮಾನ’ ದೈನಿಕ ಧಾರಾವಾಹಿಗಳು ಜ.27ರಂದು ಶುರುವಾಗಿ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸುತ್ತಿದೆ.

    ಜ.27ರಂದು ಶುರುವಾದ ಜೋಡಿ ಕತೆಗಳಾದ ಡಿವೋರ್ಸ್ ಲಾಯರ್ ಮದುವೆ ಕತೆ ‘ವಧು’ ರಾತ್ರಿ 9.30ಕ್ಕೆ, ಕಾಂಟ್ರಾಕ್ಟ್ ಮದುವೆ ಕತೆ ‘ಯಜಮಾನ’ ರಾತ್ರಿ 10 ಗಂಟೆಗೆ ಪ್ರಸಾರವಾಗುತ್ತಿದೆ. ಎರಡು ಸೀರಿಯಲ್‌ಗಳನ್ನು ಟಿವಿ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ.

    ಸಂಬಂಧಗಳನ್ನು ಪ್ರೀತಿಸೋ, ಅಷ್ಟೇ ಗೌರವಿಸುವ ‘ವಧು’ ಒಬ್ಬ ಅವಿವಾಹಿತೆ, ವೃತ್ತಿಯಲ್ಲಿ ಡಿವೋರ್ಸ್ ಲಾಯರ್. ಮನುಷ್ಯ ಸಂಬಂಧಗಳ ಬಗ್ಗೆ ಅವಳಿಗಿರುವ ಗೌರವವೇ ಅವಳನ್ನು ತನ್ನ ವೃತ್ತಿಯಲ್ಲಿ ಹಿಂದುಳಿಯುವಂತೆ ಮಾಡಿದೆ ಅಂದ್ರೂ ತಪ್ಪಾಗಲ್ಲ. ಗಂಡ ಹೆಂಡ್ತಿ ನಡುವೆ ಬಿರುಕು ಮೂಡಿ ಡಿವೋರ್ಸ್ ಕೇಳಿ ಬಂದ ಜೋಡಿಗಳ ನಡುವೆ ಸಾಮರಸ್ಯ ಮೂಡಿಸಿ ಅವ್ರನ್ನ ಒಂದು ಮಾಡುವುದರಲ್ಲೇ ಅವಳಿಗೆ ಆಸಕ್ತಿ. ಹೀಗಿರುವಾಗ ಒಂದು ಮಹತ್ವದ ಕೇಸು ಎಲ್ಲವನ್ನೂ ತಲೆಕೆಳಗು ಮಾಡುತ್ತದೆ. ಮೋಸ್ಟ್ ಸಕ್ಸಸ್ ಫುಲ್ ಬ್ಯುಸಿನೆಸ್ ಮ್ಯಾನ್ ಸಾರ್ಥಕ್ ದಾಂಪತ್ಯದಲ್ಲಿ ಬಿರುಕುಂಟಾಗಿ, ಪತ್ನಿ ಪ್ರಿಯಾಂಕಾ ಡಿವೋರ್ಸ್ ಕೇಸ್ ಫೈಲ್ ಮಾಡಿದಾಗ ವಧು ಹತ್ತಿರ ಸಹಾಯ ಕೋರಿ ಬರುತ್ತಾರೆ. ಈ ವೇಳೆ ಕತೆ ಕುತೂಹಲಕರ ತಿರುವು ಪಡೆಯುತ್ತದೆ.

    ಸಂಬಂಧಗಳನ್ನು ಪರೀಕ್ಷೆಗೊಳಪಡಿಸುವ ‘ವಧು’ ಧಾರಾವಾಹಿಯು ವೃತ್ತಿಧರ್ಮ ಮತ್ತು ಆತ್ಮಸಾಕ್ಷಿಗಳ ನಡುವಿನ ತಿಕ್ಕಾಟವನ್ನು ಹೇಳುತ್ತದೆ. ಪ್ರೀತಿ, ಮೋಸ ಮತ್ತು ನಂಬಿಕೆಗಳು ನಮ್ಮನ್ನು ಹೇಗೆಲ್ಲಾ ಘಾಸಿಗೊಳಿಸಬಹುದೆಂಬುದನ್ನು ಬಿಡಿಸಿಡುತ್ತದೆ. ತನ್ನ ಭಾವನೆಗಳ ಜೊತೆಗೆ ಗುದ್ದಾಡುತ್ತಲೇ ತನಗೆ ಸಿಕ್ಕಿರುವ ಈ ಹೊಸ ಕೇಸನ್ನು ‘ವಧು’ ಸರಿಯಾಗಿ ನಿಭಾಯಿಸುತ್ತಾಳಾ? ಪ್ರೀತಿ ಮತ್ತು ಬದ್ಧತೆಗಳ ಬಗೆಗಿನ ಅವಳ ನಿಲುವುಗಳನ್ನು ಈ ಕೇಸ್ ಬದಲಾಯಿಸುತ್ತಾ ಅನ್ನುವುದೇ ಕತೆಯನ್ನು ಮುನ್ನೆಡೆಸುವ ಎಳೆಯಾಗಿದೆ. ಇನ್ನೂ ಹೆಸರಾಂತ ಕಲಾವಿದರಾದ ವಿನಯಾ ಪ್ರಸಾದ್, ಸುಧಾ ಬೆಳವಾಡಿ, ರವಿ ಭಟ್, ರವಿ ಕುಮಾರ್ ಮತ್ತು ರೇಖಾ ಸಾಗರ್ ಅವರು ಅಭಿನಯಿಸಿದ್ದಾರೆ. ಸಾರ್ಥಕ್ ಪಾತ್ರದಲ್ಲಿ ‘ಲಕ್ಷಣ’ ಧಾರಾವಾಹಿ ಖ್ಯಾತಿಯ ಅಭಿಷೇಕ್ ಶ್ರೀಕಾಂತ್, ವಧು ಪಾತ್ರದಲ್ಲಿ ದುರ್ಗಾಶ್ರೀ ಮತ್ತು ಪ್ರಿಯಾಂಕಾ ಪಾತ್ರದಲ್ಲಿ ಸೋನಿ ಮುಲೇವಾ ನಟಿಸುತ್ತಿದ್ದಾರೆ.

    ಇನ್ನೂ ‘ಯಜಮಾನ’ ಸೀರಿಯಲ್‌ನಲ್ಲಿ ಚೂರೂ ಸ್ವಾರ್ಥವಿಲ್ಲದ ಸರಳ ವ್ಯಕ್ತಿ ರಘುಗೆ ತನ್ನ ಕುಟುಂಬದ ಪ್ರೀತಿ ಗಳಿಸುವ ಮಹದಾಸೆ. ಝಾನ್ಸಿ ಹಾಗಲ್ಲ. ತಾತನ ಮಡಿಲಲ್ಲಿ ಬೆಳೆದ ಈಕೆ ಗಂಡಸರನ್ನು ದ್ವೇಷಿಸುವ ಹಠಮಾರಿ ಹುಡುಗಿ. ವಿಧಿ ಇವರಿಬ್ಬರನ್ನೂ ಒಂದು ಮದುವೆಯ ರೂಪದಲ್ಲಿ ಹತ್ತಿರ ತರುತ್ತದೆ. ತನ್ನ ಕಷ್ಟದಲ್ಲಿರುವ ಕುಟುಂಬದ ಒಳಿತಿಗೆ ಈ ಮದುವೆ ದಾರಿಯಾದೀತೆಂದು ಬಗೆಯುವ ರಘು ಮದುವೆಗೆ ಒಪ್ಪುತ್ತಾನೆ. ಮದುವೆಯ ನಂತರ ಅನೇಕ ಅನೂಹ್ಯ ತಿರುವುಗಳು ಬಂದು ಕತೆಯನ್ನು ಮತ್ತೆಲ್ಲಿಗೋ ಸೆಳೆದೊಯ್ಯುತ್ತವೆ. ರಘು ಮತ್ತು ಝಾನ್ಸಿ ತಮ್ಮ ವ್ಯಕ್ತಿತ್ವದಲ್ಲಿರುವ ಭಿನ್ನತೆಯನ್ನು ಎದುರಿಸಬೇಕಾಗುತ್ತದೆ. ಅನುಕೂಲಕ್ಕೆಂದು ಆರಂಭವಾದ ಅವರಿಬ್ಬರ ಸಂಬಂಧ ಈಗ ಗಾಢವಾಗುತ್ತಾ ಬೆಳೆದರೂ ಯಾವುದೇ ಕ್ಷಣದಲ್ಲೂ ಒಡೆದುಹೋಗುವ ಭಯವನ್ನೂ ಹುಟ್ಟಿಸುತ್ತದೆ.

    ಪ್ರೀತಿ, ಮಹತ್ವಾಕಾಂಕ್ಷೆ ಮತ್ತು ಸ್ವಾರ್ಥದ ಆಟ ‘ಯಜಮಾನ’ದ ಕತೆಯಾಗಿದೆ. ರಘು ಮತ್ತು ಝಾನ್ಸಿ ಎಂದಾದರೂ ಬದುಕು ತಮಗೆ ಒಡ್ಡುವ ಸವಾಲುಗಳನ್ನು ಗೆಲ್ಲುತ್ತಾರಾ? ಸೀರಿಯಲ್‌ನಲ್ಲಿ ಉತ್ತರ ಸಿಗಲಿದೆ. ಹೊಸ ಮುಖಗಳಾದ ಹರ್ಷ ಬಿ. ಎಸ್. ಮತ್ತು ಮಧುಶ್ರೀ ಭೈರಪ್ಪ ‘ಯಜಮಾನ’ದ ಮುಖ್ಯ ಭೂಮಿಕೆಯಲ್ಲಿದ್ದಾರೆ. ಅವರಿಗೆ ಬೆಂಬಲವಾಗಿ ರಮೇಶ್ ಭಟ್, ನಾಗಾಭರಣ, ಮಂಜುಳ, ಅಂಕಿತಾ ಜೈರಾಮ್, ತಿಲಕ್, ಸ್ಪೂರ್ತಿ, ಪ್ರದೀಪ್ ಮತ್ತು ವಿಶ್ವ ನಟಿಸುತ್ತಿದ್ದಾರೆ.

    ‘ವಧು’ ಮತ್ತು ‘ಯಜಮಾನ’ ಎರಡೂ ಕತೆಗಳು ಆಧುನಿಕ ಬದುಕಿನ ಸಂಬಂಧಗಳ ಹೊಸ ಸಂಕೀರ್ಣತೆಯನ್ನು ಎಳೆಎಳೆಯಾಗಿ ಬಿಡಿಸಿಡುವ ಹೊಸ ಬಗೆಯ ಕತೆಗಳು. ಈ ಸೀರಿಯಲ್ ಶುರುವಾದ ಕೆಲವೇ ದಿನಗಳಲ್ಲಿ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.

  • ಇನ್ಸ್ಟಾದಲ್ಲೇ 3 ವರ್ಷ ಲವ್; ಅಡ್ರೆಸ್ ಇಲ್ಲದ ಕಲ್ಯಾಣದ ಮಂಟಪದಲ್ಲಿ ಮದುವೆ ಫಿಕ್ಸ್ ಮಾಡಿ ವಧು ಎಸ್ಕೇಪ್!

    ಇನ್ಸ್ಟಾದಲ್ಲೇ 3 ವರ್ಷ ಲವ್; ಅಡ್ರೆಸ್ ಇಲ್ಲದ ಕಲ್ಯಾಣದ ಮಂಟಪದಲ್ಲಿ ಮದುವೆ ಫಿಕ್ಸ್ ಮಾಡಿ ವಧು ಎಸ್ಕೇಪ್!

    – ದುಬೈನಿಂದ ಬಂದ ವರನಿಗೆ ಶಾಕ್

    ಚಂಡೀಗಢ: 3 ವರ್ಷದ ಹಿಂದೆ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದ ಹುಡುಗಿಯನ್ನು ವಿವಾಹವಾಗಲು ಸಕಲ ಸಿದ್ಧತೆಗಳೊಂದಿಗೆ ಮದುಮಗಳು ತಿಳಿಸಿದ್ದ ಜಾಗಕ್ಕೆ ಬಂದಿದ್ದ ವರನಿಗೆ (Groom) ದೊಡ್ಡ ಆಘಾತವೇ ಉಂಟಾಗಿತ್ತು. ಇತ್ತ ವಧುವೂ ಇಲ್ಲ ಅತ್ತ ಆಕೆ ಹೇಳಿದ್ದ ಕಲ್ಯಾಣ ಮಂಟಪವೂ ಇಲ್ಲವಾದ್ದರಿಂದ ಇದೀಗ ವರ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿರುವ ಘಟನೆ ಪಂಜಾಬ್‌ನ (Punjab) ಮೋಗಾದಲ್ಲಿ ನಡೆದಿದೆ.

    ಮನ್‌ಪ್ರೀತ್ ಕೌರ್ ಎಂಬ ಯುವತಿ ಹಾಗೂ ಜಲಂಧರ್ ಮೂಲದ ಯುವಕ ದೀಪಕ್ ಕುಮಾರ್ (24) ಇನ್ಸ್ಟಾದಲ್ಲಿ ಪರಿಚಯವಾಗಿ ಕಳೆದ 3 ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಒಮ್ಮೆಯೂ ಮುಖಾಮುಖಿಯಾಗಿ ಭೇಟಿಯಾಗಿಲ್ಲ. ಆನ್‌ಲೈನ್‌ನಲ್ಲೇ ವಧು-ವರರ ಕುಟುಂಬಸ್ಥರು ವಿವಾಹ ನಿಶ್ಚಯವೂ ಮಾಡಿಕೊಂಡು ಮದುವೆಗೆ ದಿನಾಂಕ ಕೂಡ ಗೊತ್ತುಪಡಿಸಿ, ಕಲ್ಯಾಣ ಮಂಟಪ ಯಾವುದು ಎಂಬುದನ್ನೂ ಕೂಡ ನಿರ್ಧರಿಸಿದ್ದರು. ಅದರಂತೆಯೇ ವರ ದೀಪಕ್ ಕಳೆದ ತಿಂಗಳು ದುಬೈನಿಂದ (Dubai) ಆಗಮಿಸಿ ಕುಟುಂಬಸ್ಥರೊಂದಿಗೆ ಮದುವೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದ. ಇದನ್ನೂ ಓದಿ: ಗಂಡಸರಿಗೂ ಫ್ರೀ ಬಸ್‌ ಕೊಟ್ರೆ KSRTC ಮುಚ್ಚಬೇಕಾಗುತ್ತೆ: ಸಿದ್ದರಾಮಯ್ಯ

    ಸಾಂದರ್ಭಿಕ ಚಿತ್ರ
    ಸಾಂದರ್ಭಿಕ ಚಿತ್ರ

    ಮದುವೆಯ ದಿನ ಜಲಂಧರ್‌ನಿಂದ ಮಂಡಿಯಾಲಿ ಗ್ರಾಮದಿಂದ ಮೋಗಾದಲ್ಲಿನ ಮದುಮಗಳು ಹೇಳಿದ ಸ್ಥಳಕ್ಕೆ ವರ ಹಾಗೂ ಆತನ ಕುಟುಂಬಸ್ಥರು ತೆರಳಿದ್ದರು. ಮೋಗಾ ತಲುಪಿದ ಬಳಿಕ ತಮ್ಮ ಕಡೆಯ ಕೆಲವರು ಅಲ್ಲಿಗೆ ಬಂದು ನಿಮ್ಮನ್ನು ಮದುವೆ ಹಾಲ್‌ಗೆ ಕರೆದುಕೊಂಡು ಬರುತ್ತಾರೆ ಎಂದು ವಧು ತಿಳಿಸಿದ್ದಳು. ಆದರೆ ಬೆಳಗ್ಗೆಯಿಂದ ಸಂಜೆಯವರೆಗೆ ಕಾದರೂ ಹುಡುಗಿಯ ಕಡೆಯವರ ಪತ್ತೆಯಿರಲಿಲ್ಲ. ಬಳಿಕ ತಾವೇ ಕಲ್ಯಾಣ ಮಂಟಪ ಹುಡಕುವ ಸಲುವಾಗಿ ಸ್ಥಳಿಯರಲ್ಲಿ ‘ರೋಸ್ ಗಾರ್ಡನ್ ಪ್ಯಾಲೇಸ್’ ಎಲ್ಲಿದೆ ಎಂದು ಕೇಳಿದಾಗ ಅಂತಹದೊಂದು ಜಾಗವೇ ಇಲ್ಲವೆಂದು ಸ್ಥಳೀಯರು ತಿಳಿಸಿದ್ದಾರೆ. ತಾನು ಮೋಸ ಹೋಗಿರುವುದನ್ನು ಅರಿತ ಮದುಮಗ ಪೊಲೀಸ್ ಠಾಣೆಗೆ ತೆರಳಿ ವಧು ಹಾಗೂ ಆಕೆಯ ಕುಟುಂಬಸ್ಥರ ವಿರುದ್ಧ ದೂರು ನೀಡಿದ್ದಾನೆ. ಇದನ್ನೂ ಓದಿ: ವಿಜಯೇಂದ್ರರನ್ನ ಪಕ್ಷದ ಅಧ್ಯಕ್ಷರಾಗಿ ಮಾಡಿರೋದು ಹೈಕಮಾಂಡ್‌ಗೆ ಔಚಿತ್ಯ: ರಾಧಾ ಮೋಹನದಾಸ್

    ಮದುವೆ ಸಿಧ್ಧತೆಗಾಗಿ 50,000 ಹಣ ಪಡೆದಿದ್ದ ವಧು:
    ತಾನು ದುಬೈನಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದು, ಇನ್‌ಸ್ಟಾಗ್ರಾಂನಲ್ಲಿ ಕಳೆದ ಮೂರು ವರ್ಷದಿಂದ ಕೌರ್ ಜತೆಗೆ ಸಂಪರ್ಕದಲ್ಲಿದ್ದೆ ಎಂದು ದೀಪಕ್ ತಿಳಿಸಿದ್ದಾನೆ. ಆಕೆ ಆತನೊಂದಿಗೆ ತನ್ನ ಫೋಟೋಗಳನ್ನು ಹಂಚಿಕೊಂಡಿದ್ದಳು. ಆದರೆ ಎಂದಿಗೂ ಪರಸ್ಪರ ಭೇಟಿ ಮಾಡಿರಲಿಲ್ಲ. ಇಬ್ಬರೂ ಮದುವೆಯಾಗುವುದಾಗಿ ತೀರ್ಮಾನಿಸಿದ ನಂತರ ಫೋನ್ ಮೂಲಕವೇ ಎರಡೂ ಕುಟುಂಬದ ಹಿರಿಯರು ಮಾತುಕತೆಗಳನ್ನು ನಡೆಸಿದ್ದರು. ಮದುವೆ ಸಿದ್ಧತೆಗಾಗಿ ಆಕೆಗೆ ದಿನೇಶ್ 50 ಸಾವಿರ ರೂ ಹಣ ಸಹ ಕಳುಹಿಸಿದ್ದ. ಇದನ್ನೂ ಓದಿ: ಇಷ್ಟು ಕಾಲ ಸಹಿಸಿದ್ದೇವೆ, ಇನ್ಮುಂದೆ ಸಹಿಸಲು ಆಗಲ್ಲ: ಯತ್ನಾಳ್ ವಿರುದ್ಧ ವಿಜಯೇಂದ್ರ ಆಕ್ರೋಶ

    ಮದುವೆ ಸ್ಥಳಕ್ಕೆ 150 ಬರಾತಿಗಳ ಜತೆ ತೆರಳಿದ್ದಲ್ಲದೆ, ಟ್ಯಾಕ್ಸಿಗಳನ್ನು ಬಾಡಿಗೆಗೆ ಪಡೆದುಕೊಂಡಿದ್ದೆವು. ಕ್ಯಾಟರಿಂಗ್ ಮತ್ತು ವಿಡಿಯೋಗ್ರಾಫರ್‌ಗೆ ಮುಂಗಡ ಹಣ ಕೂಡ ಪಾವತಿಸಿದ್ದೆವು ಎಂದು ದೀಪಕ್‌ನ ತಂದೆ ಪ್ರೇಮ್ ಚಂದ್ ತಿಳಿಸಿದ್ದಾರೆ. ಇದನ್ನೂ ಓದಿ: ಕೇಂದ್ರೀಯ ಶಿಸ್ತು ಸಮಿತಿಗೆ ಮಾತ್ರ ಶಾಸಕರ ವಿರುದ್ಧ ಕ್ರಮದ ಅಧಿಕಾರ: ಸಿ.ಟಿ ರವಿ

    ತಾನು ಮೋಗಾದವಳಾಗಿದ್ದು, ಫಿರೋಜ್‌ಪುರದಲ್ಲಿ ಕೆಲಸ ಮಾಡುತ್ತಿರುವುದಾಗಿ ಮನ್‌ಪ್ರೀತ್ ಕೌರ್ ಹೇಳಿಕೊಂಡಿದ್ದಳು. ಮದುಮಗಳ ಫೋನ್ ಸ್ವಿಚ್ ಆಫ್ ಆಗಿದ್ದು, ಆಕೆಯನ್ನು ಸಂಪರ್ಕಿಸುವುದು ವರನ ಕಡೆಯವರಿಗೆ ಸಾಧ್ಯವಾಗುತ್ತಿಲ್ಲ ಎಂದು ದೀಪಕ್ ಕುಮಾರ್ ಕಡೆಯಿಂದ ದೂರು ದಾಖಲಿಸಲಾಗಿದೆ ಎಂಬುದಾಗಿ ಮೋಗಾದ ಸಹಾಯಕ ಸಬ್ ಇನ್‌ಸ್ಪೆಕ್ಟರ್ ಹರ್ಜಿಂದರ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು – ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

  • ಬೆಳಗ್ಗೆ ಮದುವೆ, ಮಧ್ಯಾಹ್ನ ಮಚ್ಚಿನಿಂದ ಹೊಡೆದಾಟ – ನಿನ್ನೆ ವಧು, ಇಂದು ವರ ಸಾವು!

    ಬೆಳಗ್ಗೆ ಮದುವೆ, ಮಧ್ಯಾಹ್ನ ಮಚ್ಚಿನಿಂದ ಹೊಡೆದಾಟ – ನಿನ್ನೆ ವಧು, ಇಂದು ವರ ಸಾವು!

    – ಕೋಲಾರ: ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ನವಜೋಡಿ

    ಕೋಲಾರ: ಪರಸ್ಪರ ಪ್ರೀತಿಸಿ ಬುಧವಾರ (ಆ.7) ಬೆಳಗ್ಗೆ ಮದುವೆಯಾದ ನವಜೋಡಿ, ಅದೇ ದಿನ ಮಧ್ಯಾಹ್ನ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡ ಪರಿಣಾಮ ನವವಧು (Bride) ಸಾವನ್ನಪ್ಪಿದ್ದಳು. ಗುರುವಾರ (ಇಂದು) ಚಿಕಿತ್ಸೆ ಫಲಕಾರಿಯಾಗದೇ ವರನೂ (Groom) ಸಾವನ್ನಪ್ಪಿರುವ ಘಟನೆ ನಡೆದಿದೆ.

    ಆಂಧ್ರದ ಬೈನಪಲ್ಲಿ ಗ್ರಾಮದ ಲಿಖಿತಾಶ್ರೀ (20) ಬುಧವಾರ ಕೋಲಾರದಲ್ಲಿ (Kolara) ಮೃತಪಟ್ಟಿದ್ದಳು. ಚಂಬರಸನಹಳ್ಳಿಯ ನವೀನ್ (28) ಗುರುವಾರ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ (Bengaluru) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಕೋಲಾರದ ಆರ್.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಬುಧವಾರ ದಾಖಲಾಗಿದ್ದ ನವೀನ್‌ ನನ್ನ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ (Victoria Hospital) ರಾತ್ರಿ ರವಾನಿಸಲಾಗಿತ್ತು. ಗುರುವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

    ಅಷ್ಟಕ್ಕೂ ಮಾರಾಮಾರಿಯಾಗಿದ್ದು ಏಕೆ?
    ನವೀನ್ ಮತ್ತು ಲಿಖಿತಾಶ್ರೀ ಜೋಡಿ ಪರಸ್ಪರ ಒಪ್ಪಿ ಮದುವೆಯಾಗಿದ್ದರು. ಬುಧವಾರ ಮುಂಜಾನೆ ಹಿರಿಯರ ಸಮ್ಮುಖದಲ್ಲಿ ಚಂಬರಸನಹಳ್ಳಿಯಲ್ಲಿ ಮದುವೆಯಾದರು. ಮದುವೆ ಕೆಲಗಂಟೆಗಳ ನಂತರ ನವಜೋಡಿ ರೂಮಿಗೆ ಹೋಗಿದ್ದಾರೆ. ಬಳಿಕ ಮಚ್ಚಿನಿಂದ ಪರಸ್ಪರರ ಮೇಲೆ ಹಲ್ಲೆ ನಡೆಸಿಕೊಂಡಿದ್ದಾರೆ. ಮಾರಾಮಾರಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಕೆಜಿಎಫ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಲಿಖಿತಾಶ್ರೀ ಸಾವನ್ನಪ್ಪಿದ್ದಳು. ನವೀನ್ ಸ್ಥಿತಿ ಚಿಂತಾಜನಕವಾಗಿದ್ದರಿಂದ ಆತನನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ವರನೂ ಸಾವನ್ನಪ್ಪಿದ್ದಾನೆ.

    ಘಟನಾ ಸ್ಥಳಕ್ಕೆ ಬುಧವಾರ ಅಂಡರ್‌ಸನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇಬ್ಬರೂ ಪ್ರೀತಿಸಿ ಎರಡೂ ಕುಟುಂಬದವರನ್ನು ಒಪ್ಪಿಸಿ ಮದುವೆಯಾಗಿದ್ದರು. ಬೆಳಗಿನ ಜಾವ ಇಬ್ಬರಿಗೂ ಮದುವೆಯಾಗಿತ್ತು. ಮದುವೆ ನಂತರ ಇಬ್ಬರೂ ಮನೆಯ ಕೊಠಡಿಗೆ ಹೋಗಿದ್ದರು. ಕೆಲ ಹೊತ್ತಿನಲ್ಲೇ ಕೊಠಡಿಯಲ್ಲಿದ್ದ ನವಜೋಡಿ ಮಚ್ಚಿನಿಂದ ಹೊಡೆದಾಡಿಕೊಂಡಿದ್ದಾರೆ. ಇಬ್ಬರ ಗಲಾಟೆಗೆ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದರು.

    ಮೂರನೇ ವ್ಯಕ್ತಿ ಇದರಲ್ಲಿ ಇದ್ದಾರೆ:
    ಇಬ್ಬರ ಸಾವಿನ ಕುರಿತು ಪ್ರತಿಕ್ರಿಯೆ ನೀಡಿರುವ ಮೃತ ಲಿಖಿತಶ್ರೀ ಕುಟುಂಬಸ್ಥರು, ನವಜೋಡಿಗಳು ಇಬ್ಬರೂ ಅನ್ಯೂನ್ಯವಾಗಿದ್ದವರು, ಪ್ರೀತಿಸಿ ಮದುವೆಯಾಗಿದ್ದವರು. ಇಬ್ಬರು ಹೊಡರದಾಡಿಕೊಂಡಿರುವುದೇ ಅನುಮಾನ. ಯಾರೋ ಮೂರನೇ ವ್ಯಕ್ತಿ ಇದರಲ್ಲಿ ಇದ್ದಾರೆ. ನಾವೂ ಮದುವೆಗೆ ಹೋಗಿದ್ದೆವು, ಇಬ್ಬರೂ ತುಂಬಾ ಖುಷಿಯಿಂದಲೇ ಇದ್ದರು. ಇಬ್ಬರನ್ನೂ ಯಾರೋ ಹೊಡೆದಿರುವ ಅನುಮಾನ ಇದೆ ಅಂತಾ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ.

  • ಬೆಳಗ್ಗೆ ಮದುವೆ, ಮಧ್ಯಾಹ್ನ ಮಚ್ಚಿನಿಂದ ಮಾರಾಮಾರಿ.. ವಧು ಸಾವು, ವರ ಗಂಭೀರ!

    ಬೆಳಗ್ಗೆ ಮದುವೆ, ಮಧ್ಯಾಹ್ನ ಮಚ್ಚಿನಿಂದ ಮಾರಾಮಾರಿ.. ವಧು ಸಾವು, ವರ ಗಂಭೀರ!

    – ಕೋಲಾರದಲ್ಲಿ ಘಟನೆ; ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ನವಜೋಡಿ

    ಕೋಲಾರ: ಪರಸ್ಪರ ಪ್ರೀತಿಸಿ ಒಪ್ಪಿ ಬೆಳಗ್ಗೆ ಮದುವೆಯಾದ ನವಜೋಡಿ, ಅದೇ ದಿನ ಮಧ್ಯಾಹ್ನ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡ ಪರಿಣಾಮ ನವವಧು ಸಾವನ್ನಪ್ಪಿದ್ದಾಳೆ. ಮದುಮಗನ ಸ್ಥಿತಿ ಚಿಂತಾಜನಕವಾಗಿದೆ.

    ಕೋಲಾರ (Kolar) ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಚಂಬರಸನಹಳ್ಳಿಯಲ್ಲಿ ಘಟನೆ ನಡೆದಿದೆ. ಆಂಧ್ರದ ಬೈನಪಲ್ಲಿ ಗ್ರಾಮದ ಲಿಖಿತಾಶ್ರೀ ಮೃತಪಟ್ಟಿದ್ದಾಳೆ. ಚಂಬರಸನಹಳ್ಳಿಯ ನವೀನ್‌ ಸ್ಥಿತಿ ಗಂಭೀರವಾಗಿದೆ. ಇದನ್ನೂ ಓದಿ: ಪಬ್‍ನಲ್ಲಿ ಯುವತಿಯ ಮಾನಭಂಗಕ್ಕೆ ಯತ್ನ – ನಾಲ್ವರು ಕಾಮುಕರು ಅರೆಸ್ಟ್

    ನಡೆದಿದ್ದೇನು?
    ನವೀನ್‌ ಮತ್ತು ಲಿಖಿತಾಶ್ರೀ ಜೋಡಿ ಪರಸ್ಪರ ಒಪ್ಪಿಕೊಂಡು ಮದುವೆಯಾಗಿದ್ದರು. ಇಂದು ಮುಂಜಾನೆ ಹಿರಿಯರ ಸಮ್ಮುಖದಲ್ಲಿ ಚಂಬರಸನಹಳ್ಳಿಯಲ್ಲಿ ಮದುವೆಯಾದರು. ಮದುವೆ ಕೆಲಗಂಟೆಗಳ ನಂತರ ನವಜೋಡಿ ರೂಂಗೆ ಹೋಗಿದ್ದಾರೆ. ಬಳಿಕ ಮಚ್ಚಿನಿಂದ ಪರಸ್ಪರರ ಮೇಲೆ ಹಲ್ಲೆ ನಡೆಸಿಕೊಂಡಿದ್ದಾರೆ.

    ಮಾರಾಮಾರಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಕೆಜಿಎಫ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಲಿಖಿತಾಶ್ರೀ ಸಾವನ್ನಪ್ಪಿದ್ದಾಳೆ. ನವೀನ್‌ ಸ್ಥಿತಿ ಚಿಂತಾಜನಕವಾಗಿದೆ. ಸ್ಥಳಕ್ಕೆ ಅಂಡರ್‌ಸನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಸಿಎಂ ನೋಡಲು ಹೋಗಿದ್ದ ಯುವಕನಿಗೆ ವಿದ್ಯುತ್ ಶಾಕ್!

    ಇಬ್ಬರೂ ಪ್ರೀತಿಸಿ ಎರಡೂ ಕುಟುಂಬದವರನ್ನು ಒಪ್ಪಿಸಿ ಮದುವೆಯಾಗಿದ್ದರು. ಇಂದು ಬೆಳಗಿನ ಜಾವ ಇಬ್ಬರಿಗೂ ಮದುವೆಯಾಗಿತ್ತು. ಮದುವೆ ನಂತರ ಇಬ್ಬರೂ ಮನೆಯ ಕೊಠಡಿಗೆ ಹೋಗಿದ್ದರು. ಕೆಲ ಹೊತ್ತಿನಲ್ಲೇ ಕೊಠಡಿಯಲ್ಲಿದ್ದ ನವಜೋಡಿ ಮಚ್ಚಿನಿಂದ ಹೊಡೆದಾಡಿಕೊಂಡಿದ್ದಾರೆ. ಇಬ್ಬರ ಗಲಾಟೆಗೆ ಕಾರಣ ತಿಳಿದು ಬಂದಿಲ್ಲ.

  • ಮದುವೆಯಾಗಿ ಹಣ, ಚಿನ್ನದೊಂದಿಗೆ ಎಸ್ಕೇಪ್‌ ಆಗ್ತಿದ್ದ ಮಹಿಳೆಗೆ ಹೆಚ್‌ಐವಿ – ಆಕೆ ದೈಹಿಕ ಸಂಪರ್ಕಕ್ಕೆ ಬಂದ ಪುರುಷರಿಗಾಗಿ ಹುಡುಕಾಟ

    ಮದುವೆಯಾಗಿ ಹಣ, ಚಿನ್ನದೊಂದಿಗೆ ಎಸ್ಕೇಪ್‌ ಆಗ್ತಿದ್ದ ಮಹಿಳೆಗೆ ಹೆಚ್‌ಐವಿ – ಆಕೆ ದೈಹಿಕ ಸಂಪರ್ಕಕ್ಕೆ ಬಂದ ಪುರುಷರಿಗಾಗಿ ಹುಡುಕಾಟ

    ಡೆಹ್ರಾಡೂನ್: ಮದುವೆಯಾಗಿ ನಗದು, ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗಿ ಅನೇಕ ಪುರುಷರನ್ನು ಯಾಮಾರಿಸಿದ್ದ ಮಹಿಳೆ ಈಗ ಪೊಲೀಸರ ಬಲೆಗೆ ಬಿದ್ದಿದ್ದಾಳೆ. ವೈದ್ಯಕೀಯ ತಪಾಸಣೆ ವೇಳೆ ಆಕೆಗೆ ಹೆಚ್‌ಐವಿ ಪಾಸಿಟಿವ್‌ ಬಂದಿರುವುದು ಪೊಲೀಸರಿಗೆ ಶಾಕ್‌ ನೀಡಿದೆ.

    ಮದುವೆ ಹೆಸರಿನಲ್ಲಿ ಅನೇಕ ಪುರುಷರನ್ನು ವಂಚಿಸಿದ್ದ ಮಹಿಳೆಯರು ಮೇ 6 ರಂದು ಉತ್ತರಪ್ರದೇಶದ ಪೊಲೀಸರು ಬಂಧಿಸಿದ್ದರು. ಯುಪಿ ಮತ್ತು ಉತ್ತರಾಖಂಡದ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆಕೆಯ ಗ್ಯಾಂಗ್‌ನ 6 ಸದಸ್ಯರನ್ನೂ ಬಂಧಿಸಿದ್ದು, ಪುಜಾಫರ್‌ನಗರ ಜೈಲಿಗೆ ಕಳುಹಿಸಲಾಗಿದೆ.

    ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಆಕೆಗೆ ಹೆಚ್‌ಐವಿ ಸೋಂಕು ಇರುವುದು ಪತ್ತೆಯಾಗಿದೆ. ಬಂಧಿತ ಮಹಿಳೆ ಈಗ ಆಂಟಿರೆಟ್ರೋವೈರಲ್ ಥೆರಪಿ (ಎಆರ್‌ಟಿ)ಗೆ ಒಳಗಾಗುತ್ತಿದ್ದಾಳೆ ಎಂದು ಜೈಲು ಅಧೀಕ್ಷಕ ಸೀತಾರಾಮ್ ಶರ್ಮಾ ಹೇಳಿದ್ದಾರೆ.

    ಮಹಿಳೆಗೆ ಹೆಚ್‌ಐವಿ ಇರುವುದು ದೃಢಪಟ್ಟಿರುವುದು ಎರಡೂ ರಾಜ್ಯಗಳ ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈಗ ಅವಳ ಜೊತೆ ಮದುವೆಯಾಗಿ ಯಾಮಾರಿದ್ದ ಪುರುಷರಿಗಾಗಿ ತೀವ್ರ ಹುಡುಕಾಟ ನಡೆಸಲಾಗಿದೆ.

    ಉತ್ತರಾಖಂಡದ ಆರೋಗ್ಯ ಇಲಾಖೆಯು, ರಾಜ್ಯದೊಳಗೆ ಆಕೆ ದೈಹಿಕ ಸಂಪರ್ಕಕ್ಕೆ ಬಂದ ಮೂವರು ಪುರುಷರು ಈಗ ಹೆಚ್ಐವಿ ಪಾಸಿಟಿವ್ ಎಂದು ದೃಢಪಡಿಸಿದ್ದಾರೆ. ಉಧಮ್ ಸಿಂಗ್ ನಗರದ ಆರೋಗ್ಯ ಇಲಾಖೆಯು ಎನ್‌ಜಿಒ ಸಹಯೋಗದೊಂದಿಗೆ ಈ ಪುರುಷರಲ್ಲಿ ಪರೀಕ್ಷೆಗಳನ್ನು ನಡೆಸಿ ART ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತ ಪುರುಷರ ಕುಟುಂಬದ ಇತರೆ ಸದಸ್ಯರನ್ನೂ ಪರೀಕ್ಷಿಸುವ ಪ್ರಕ್ರಿಯೆ ನಡೆಯುತ್ತಿದೆ.

    ಇದುವರೆಗೆ ಆರೋಪಿ ಮಹಿಳೆ ಐದು ಮದುವೆಯಾಗಿರುವುದಾಗಿ ತಿಳಿಸಿದ್ದಾಳೆ. ಐವರ ಪೈಕಿ ಮೂವರು ಪುರುಷರು ಉತ್ತರಾಖಂಡ ರಾಜ್ಯದವರೇ ಆಗಿದ್ದಾರೆ. ಆದರೆ ಆಕೆ ಇನ್ನೂ ಹೆಚ್ಚಿನ ಮಂದಿಗೆ ಮದುವೆಯಾಗಿ ವಂಚಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

  • ಮದುವೆ ಮಂಟಪಕ್ಕೆ ನುಗ್ಗಿ ವಧುವನ್ನು ಎಳೆದೊಯ್ಯಲು ಯತ್ನಿಸಿದ ಆಕೆಯ ಕುಟುಂಬ!

    ಮದುವೆ ಮಂಟಪಕ್ಕೆ ನುಗ್ಗಿ ವಧುವನ್ನು ಎಳೆದೊಯ್ಯಲು ಯತ್ನಿಸಿದ ಆಕೆಯ ಕುಟುಂಬ!

    ಅಮರಾವತಿ: ಆಂಧ್ರಪ್ರದೇಶದ (Andhrapradesh) ಪೂರ್ವ ಗೋದಾವರಿ ಜಿಲ್ಲೆಯಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ವಧುವಿನ ಕುಟುಂಬದವರೇ ಆಕೆಯನ್ನು ಸ್ಥಳದಿಂದ ಬಲವಂತವಾಗಿ ಕರೆದೊಯ್ಯಲು ಪ್ರಯತ್ನಿಸಿದ ಘಟನೆ ನಡೆದಿದೆ.

    ಈ ಘಟನೆ ಕಡಿಯಂ ಪ್ರದೇಶದಲ್ಲಿ ನಡೆದಿದ್ದು, ಸ್ನೇಹಾ ಮತ್ತು ಬತ್ತಿನ ವೆಂಕಟಾನಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ವಿವಾಹ ಮಂಟಪಕ್ಕೆ ಏಕಾಏಕಿ ನುಗ್ಗಿದ ವಧುವಿನ ಕುಟುಂಬ ಆಕೆಯನ್ನು ಅಪಹರಣ ಮಾಡಲು ಯತ್ನಿಸಿದೆ. ಅಲ್ಲದೇ ಅಪಹರಣ ತಡೆಯಲು ಬಂದವರ ಮೇಲೆ ಮೆಣಸಿನ ಪುಡಿಯನ್ನು ಎರಚಿದ್ದಾರೆ.

    ವಧು ಸ್ನೇಹಾಳ ತಾಯಿ, ಸಹೋದರ ಮತ್ತು ಸೋದರಸಂಬಂಧಿಗಳು ಆಕೆಯನ್ನು ಸ್ಥಳದಿಂದ ಬಲವಂತವಾಗಿ ಎಳೆದೊಯ್ಯಲು ಯತ್ನಿದ್ದಾರೆ. ಆದರೆ ಸ್ನೇಹಾ ಹರಸಾಹಪಟ್ಟು ಅವರ ಕೈಯಿಂದ ತಪ್ಪಿಸಿಕೊಂಡಿದ್ದಾಳೆ. ಇದರ ವೀಡಿಯೋ ಮಂಟಪದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಅಪಹರಣ ಯತ್ನವನ್ನು ವರ, ಆತನ ಕುಟುಂಬದವರು ಹಾಗೂ ಸ್ನೇಹಿತರು ವಿಫಲಗೊಳಿಸಿದ್ದಾರೆ. ಗಲಾಟೆಯಲ್ಲಿ ವರನ ಸ್ನೇಹಿತರೊಬ್ಬರು ತೀವ್ರ ಗಾಯಗೊಂಡಿದ್ದಾರೆ. ಸ್ನೇಹಾ ಅವರ ಕುಟುಂಬವು ಈಗ ಹಲ್ಲೆ, ಅಪಹರಣ ಯತ್ನ ಮತ್ತು ಚಿನ್ನ ಕಳ್ಳತನ ಸೇರಿದಂತೆ ಹಲವಾರು ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದೆ. ಈ ಮದುವೆಗೆ ಅವರ ವಿರೋಧದ ಹಿಂದಿನ ಉದ್ದೇಶ ಸ್ಪಷ್ಟವಾಗಿಲ್ಲ. ಇದನ್ನೂ ಓದಿ: ಇಂದು ಮಧ್ಯರಾತ್ರಿ ವಿಶ್ವವಿಖ್ಯಾತ ಐತಿಹಾಸಿಕ ಕರಗೋತ್ಸವಕ್ಕೆ ವಿದ್ಯುಕ್ತ ಚಾಲನೆ

    ಘಟನೆ ಕುರಿತು ಮಾತನಾಡಿದ ಕಡಿಯಂ ಸರ್ಕಲ್ ಇನ್ಸ್‌ಪೆಕ್ಟರ್ ಬಿ ತುಳಸಿಧರ್, ವೀರಬಾಬು ಕುಟುಂಬದವರು ಸ್ನೇಹಾ ಕುಟುಂಬದ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದಿದ್ದಾರೆ.

  • ತಾಳಿ ಕಟ್ಟಿದ ಬಳಿಕ ಅನಾರೋಗ್ಯ ಕಾರಣ ಕೊಟ್ಟು ವರ ಎಸ್ಕೇಪ್

    ತಾಳಿ ಕಟ್ಟಿದ ಬಳಿಕ ಅನಾರೋಗ್ಯ ಕಾರಣ ಕೊಟ್ಟು ವರ ಎಸ್ಕೇಪ್

    ಮಂಗಳೂರು: ತಾಳಿ ಕಟ್ಟಿದ ಬಳಿಕ ವರನೊಬ್ಬ ಅನಾರೋಗ್ಯ ಕಾರಣ ಕೊಟ್ಟು ಎಸ್ಕೇಪ್ ಆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಬೀರಿ ಬಳಿ ನಡೆದಿದೆ.

    ಕೇರಳದ (Kerala) ಕೊಝಿಕ್ಕೋಡ್ ಮೂಲದ ಅಕ್ಷಯ್ ಮದುವೆ ಮಂಗಳೂರು (Mangaluru) ಮೂಲದ ಯುವತಿ ಜೊತೆ ನಡೆಯಬೇಕಿತ್ತು. ಅಂತೆಯೇ ಯುವತಿ ಕರ್ನಾಟಕದ-ಕೇರಳ ಗಡಿಭಾಗ ಬೀರಿಯ ಖಾಸಗಿ ಹಾಲ್ ಗೆ ಬಂದಿದ್ದಾರೆ. ಆದರೆ ವರ ತಾಳಿ ಕಟ್ಟಿದ ಬಳಿಕ ಭಾರೀ ಹೈಡ್ರಾಮಾ ನಡೆಸಿದ್ದಾನೆ.

    ನಡೆದಿದ್ದೇನು..?: ಕಲ್ಯಾಣ ಮಂಟಪದಲ್ಲಿ ಅಕ್ಷಯ್ ಮಂಗಳೂರು ಮೂಲದ ಯುವತಿ ಜೊತೆ ಮದುವೆಯಾಗುತ್ತಿರುವ ವಿಚಾರ ಮಾಜಿ ಪ್ರೇಯಸಿ ಗಮನಕ್ಕೆ ಬಂದಿದೆ. ಹೀಗಾಗಿ ಮಾಜಿ ಪ್ರೇಯಸಿ ಕಲ್ಯಾಣಮಂಟಪಕ್ಕೆ ಬಂದು ಕ್ಯಾತೆ ತೆಗೆದಿದ್ದಾಳೆ. ಈ ಹಿನ್ನೆಲೆಯಲ್ಲಿ ವರ, ಅನಾರೋಗ್ಯ ಕಾರಣ ಮುಂದಿಟ್ಟಿದ್ದಾನೆ. ಮದುವೆಗೆ ಬಂದಿದ್ದ ಸಂಬಂಧಿಕರಿಗೆ ಕಿಡ್ನಿಯಲ್ಲಿ ಕಲ್ಲುಂಟಾಗಿ ಆಸ್ಪತ್ರೆಗೆ ದಾಖಲು ಆಗುತ್ತೇವೆ ಅಂತ ಹೇಳಿದ್ದಾನೆ. ಅಲ್ಲದೇ ಸಂಬಂಧಿಕರೇ ವರನನ್ನು ಕಲ್ಯಾಣ ಮಂಟಪದಿಂದ (Kalyana Mantapa) ಕರೆದುಕೊಂಡು ಹೋಗಿದ್ದಾರೆ. ಇದನ್ನೂ ಓದಿ: ಸತೀಶ್‌ ಜಾರಕಿಹೊಳಿ ನಿವಾಸದಲ್ಲಿ ಸಚಿವರ ಡಿನ್ನರ್‌ ಪಾಲಿಟಿಕ್ಸ್‌ – ಒಂದೂವರೆಗೆ ಗಂಟೆ ಏನು ಚರ್ಚೆ ನಡೆದಿದೆ?

    ಅಕ್ಷಯ್ ಮದುವೆಗೆ ಮಾಜಿ ಪ್ರಿಯತಮೆ ವಿರೋಧ: ಒಂದೂವರೆ ವರ್ಷದ ಹಿಂದೆ ಮೈಸೂರಿನ ಯುವತಿಗೆ ಶಾದಿ ಡಾಟ್ ಕಾಮ್ ಮೂಲಕ ಅಕ್ಷಯ್ ಪರಿಚಯವಾಗಿದೆ. ಈ ಪರಿಚಯವು ಪ್ರೀತಿಗೆ ತಿರುಗಿ ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ ಆರೋಪ ಕೇಳಿಬಂದಿದೆ. ಇದನ್ನೂ ಓದಿ; ಬಿಜೆಪಿ ನಾಯಕರ ‘ನನ್ನನ್ನೂ ಬಂಧಿಸಿ’ ಪೋಸ್ಟರ್‌ ಅಭಿಯಾನಕ್ಕೆ ಕಾಂಗ್ರೆಸ್‌ ಠಕ್ಕರ್‌

    ಈ ಸಂಬಂಧ ಯುವತಿಯು ಕೇರಳದ ಪೊಲೀಸ್ ಠಾಣೆಯಲ್ಲಿ ಡಿ.26ಕ್ಕೆ ಅತ್ಯಾಚಾರ ದೂರು ದಾಖಲಿಸಿದ್ದರು. ಆರೋಪಿ ಅಕ್ಷಯ್ ನ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಈ ನಡುವೆ ಮಂಗಳೂರಿನ ಯುವತಿ ಜೊತೆ ಅಕ್ಷಯ್ ಗೆ ವಿವಾಹ ನಿಶ್ಚಯವಾಗಿದೆ. ವಿಷಯ ತಿಳಿದು ಆಗಮಿಸಿದ ಮಾಜಿ ಪ್ರಿಯತಮೆ ಹಾಲ್ ಮುಂಭಾಗ ಹೈಡ್ರಾಮ ಮಾಡಿದ್ದಾಳೆ.