Tag: ವಯನಾಡ್

  • ವಯನಾಡ್ ಲೋಕಸಭಾ ಕ್ಷೇತ್ರದ ಮೆಪ್ಪಾಡಿಗೆ ಕರ್ನಾಟಕ ಸರ್ಕಾರದಿಂದ 10 ಕೋಟಿ ಹಣ

    ವಯನಾಡ್ ಲೋಕಸಭಾ ಕ್ಷೇತ್ರದ ಮೆಪ್ಪಾಡಿಗೆ ಕರ್ನಾಟಕ ಸರ್ಕಾರದಿಂದ 10 ಕೋಟಿ ಹಣ

    ಬೆಂಗಳೂರು: ನಮ್ಮ ದುಡ್ಡು, ಕೇರಳಕ್ಕೆ (Kerala) ನೆರವು. ಇದು ರಾಜ್ಯ ಸರ್ಕಾರದ ನಿಲುವು. ಕಾಂಗ್ರೆಸ್ (Congress) ನಾಯಕಿ ಪ್ರಿಯಾಂಕಾ ಗಾಂಧಿ ಕ್ಷೇತ್ರಕ್ಕೆ ಕರ್ನಾಟಕ (Karnataka) ಸರ್ಕಾರ ನೆರವು ನೀಡುತ್ತಿದೆ.

    ಪೂರಕ ಅಂದಾಜಿನಲ್ಲಿ ಕೇರಳ ರಾಜ್ಯದ ವಯನಾಡ್ (Wayanad) ಜಿಲ್ಲೆಯ ಮೆಪ್ಪಾಡಿ ಭೂಕುಸಿತ (Meppadi Landslide) ಕಾರಣದಿಂದ ಹಾನಿಗೊಳಗಾದವರ ಪುನರ್ವಸತಿಗೆ 10 ಕೋಟಿ ರೂ. ಕೊಡಲಾಗಿದೆ. ಭೂಕುಸಿತದಿಂದ ಹಾನಿಗೊಳಗಾದ 100 ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು 10 ಕೋಟಿ ಅನುದಾನ ಎಂದು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಪೋಷಕರಿಗೆ ಸೆಡ್ಡು – ಸಹಾಯವಾಣಿಗೆ ಕರೆ ಮಾಡಿ ತನ್ನ ಬಾಲ್ಯ ವಿವಾಹವನ್ನೇ ನಿಲ್ಲಿಸಿದ ಬಾಲಕಿ

    ಕಂದಾಯ ಇಲಾಖೆ ಅಡಿಯಲ್ಲಿ ಬರುವ ಎಸ್‌ಡಿಆರ್‌ಎಫ್ ಅನುದಾನ ನೀಡುತ್ತಿರುವುದಾಗಿ ಉಲ್ಲೇಖಿಸಿದೆ. ಆದರೆ ಪ್ರಿಯಾಂಕ ಗಾಂಧಿ ಸಂಸದೆಯಾಗಿರುವ ವಯನಾಡ್ ಕ್ಷೇತ್ರದ ಮೆಪ್ಪಾಡಿ ಹಾನಿಗೆ ರಾಜ್ಯ ಸರ್ಕಾರ ಹಣ ನೀಡುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಕಳ್ಳತನ ಪ್ರಕರಣದ ಆರೋಪಿ ಠಾಣೆಯಲ್ಲಿ ಆತ್ಮಹತ್ಯೆ – ಕುಟುಂಬಸ್ಥರಿಂದ ಲಾಕಪ್ ಡೆತ್ ಶಂಕೆ

  • ವಯನಾಡಿನಲ್ಲಿ ಪ್ರಿಯಾಂಕಾಗೆ 68,000 ಮತಗಳ ಭರ್ಜರಿ ಮುನ್ನಡೆ

    ವಯನಾಡಿನಲ್ಲಿ ಪ್ರಿಯಾಂಕಾಗೆ 68,000 ಮತಗಳ ಭರ್ಜರಿ ಮುನ್ನಡೆ

    ತಿರುವನಂತಪುರಂ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ (Priyanka Gandhi) ಅವರು ಕೇರಳ ವಯನಾಡ್‌ ಲೋಕಸಭಾ ಕ್ಷೇತ್ರದಲ್ಲಿ 68,000 ಮತಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ (Congress Workers) ಸಂಭ್ರಮ ಮುಗಿಲು ಮುಟ್ಟಿದೆ.

    ರಾಹುಲ್‌ ಗಾಂಧಿ (Rahul Gandhi) ಅವರ ರಾಜೀನಾಮೆಯಿಂದ ತೆರವಾದ ವಯನಾಡ್‌ ಲೋಕಸಭಾ ಕ್ಷೇತ್ರದಲ್ಲಿ (Wayanad Lok Sabha Constituency) ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದು, ಚೊಚ್ಚಲ ಗೆಲುವು ಸಾಧಿಸುವ ಉತ್ಸಾಹದಲ್ಲಿದ್ದಾರೆ. ಇದನ್ನೂ ಓದಿ: ಗಯಾನಾ ಅಧ್ಯಕ್ಷಗೆ ಚನ್ನಪಟ್ಟಣ ಗೊಂಬೆ ಗಿಫ್ಟ್ ನೀಡಿದ ಮೋದಿ

    ಈವರೆಗೆ ನಡೆದ ಮತ ಎಣಿಕೆಯಲ್ಲಿ ಪ್ರಿಯಾಂಕಾ ಗಾಂಧಿ 68,000 ಮತಗಳನ್ನು ಗಳಿಸಿದ್ದಾರೆ. ಸಿಪಿಐನ ಹಿರಿಯ ನಾಯಕ ಸತ್ಯನ್ ಮೊಕೇರಿ 20,000 ಮತಗಳು ಹಾಗೂ ಬಿಜೆಪಿಯ ನವ್ಯಾ ಹರಿದಾಸ್ 11,235 ಮತಗಳೊಂದಿಗೆ 3ನೇ ಸ್ಥಾನದಲ್ಲಿದ್ದಾರೆ. ಪ್ರಿಯಾಂಕಾ ಗಾಂಧಿ ಸೇರಿದಂತೆ ಒಟ್ಟು 16 ಅಭ್ಯರ್ಥಿಗಳು ವಯನಾಡ್‌ ಉಪಚುನಾವಣಾ ಕಣದಲ್ಲಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭ

    2019ರ ಲೋಕಸಭಾ ಚುನಾವಣೆಯಲ್ಲಿ ಅಮೇಥಿಯಲ್ಲಿ ಸ್ಮೃತಿ ಇರಾನಿ ಎದುರು ಸೋತಿದ್ದ ರಾಹುಲ್‌ ಗಾಂಧಿ, ವಯನಾಡ್‌ ಕ್ಷೇತ್ರದಿಂದ ಗೆದ್ದು ಸಂಸದರಾಗಿದ್ದರು. 2024ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್‌ ವಯನಾಡ್‌ ಮತ್ತು ರಾಯ್‌ ಬರೇಲಿ ಎರಡೂ ಕ್ಷೇತ್ರದಲ್ಲಿ ಸ್ಪರ್ಧಿಸಿ ಭಾರಿ ಮತಗಳ ಅಂತರದಿಂದ ಗೆದ್ದಿದ್ದರು. ಸೋನಿಯಾ ಗಾಂಧಿ ಅವರು ರಾಜ್ಯಸಭೆಗೆ ಪ್ರವೇಶಿಸಿದ್ದರಿಂದ ರಾಯ್‌ ಬರೇಲಿ ಕ್ಷೇತ್ರ ಉಳಿಸಿಕೊಂಡ ರಾಹುಲ್‌ ಗಾಂಧಿ, ವಯನಾಡ್‌ ಕ್ಷೇತ್ರವನ್ನು ಸಹೋದರಿಗೆ ಬಿಟ್ಟುಕೊಟ್ಟರು.

    ಕಳೆದ ಒಂದು ತಿಂಗಳಿಂದ ಪ್ರಿಯಾಂಕಾ ಪರ ಪ್ರಚಾರ ನಡೆಸಿದ್ದ ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು 5 ಲಕ್ಷಕ್ಕೂ ಹೆಚ್ಚು ಅಂತರದಿಂದ ಪ್ರಿಯಾಂಕಾ ಗೆಲ್ಲುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಇದನ್ನೂ ಓದಿ: ಮಹಾರಾಷ್ಟ್ರ ಮತ ಎಣಿಕೆ: ಎನ್‌ಡಿಎಗೆ ಆರಂಭಿಕ ಮುನ್ನಡೆ

  • ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿರೋ ಕ್ಷೇತ್ರದಲ್ಲಿ ಸಿದ್ದರಾಮಯ್ಯ, ಡಿಕೆಶಿ ಭಾವಚಿತ್ರ ಇರುವ 30 ರೇಶನ್ ಕಿಟ್‌ಗಳು ಜಪ್ತಿ

    ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿರೋ ಕ್ಷೇತ್ರದಲ್ಲಿ ಸಿದ್ದರಾಮಯ್ಯ, ಡಿಕೆಶಿ ಭಾವಚಿತ್ರ ಇರುವ 30 ರೇಶನ್ ಕಿಟ್‌ಗಳು ಜಪ್ತಿ

    ವಯನಾಡ್: ವಯನಾಡ್‌ನಲ್ಲಿ (Wayanad) ಪ್ರಿಯಾಂಕಾ ಗಾಂಧಿ (Priyanka Gandhi), ರಾಹುಲ್ ಗಾಂಧಿ (Rahul Gandhi), ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಭಾವಚಿತ್ರ ಇರುವ 30 ರೇಶನ್ ಕಿಟ್‌ಗಳನ್ನು ಜಪ್ತಿ ಮಾಡಲಾಗಿದೆ.

    ವಯನಾಡ್ ಲೋಕಸಭೆ ಉಪಚುನಾವಣೆಗೆ 6 ದಿನ ಬಾಕಿ ಇದೆ. ಈ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದಾರೆ. ಅವರ ಚಿತ್ರವಿರುವ ಆಹಾರ ಕಿಟ್‌ಗಳು ಗುರುವಾರ ಪತ್ತೆಯಾಗಿದ್ದು, ಚುನಾವಣಾ ಆಯೋಗವು ವಶಪಡಿಸಿಕೊಂಡಿದೆ.

    ವಯನಾಡಿನ ತೋಲ್ಪೆಟ್ಟಿಯಲ್ಲಿ ಕಾಂಗ್ರೆಸ್‌ಗೆ (Congress) ಸೇರಿದ ಆಹಾರ ಕಿಟ್‌ಗಳು ಸಿಕ್ಕಿದ್ದು, ಇಲ್ಲಿನ ಮನೆಯೊಂದರಲ್ಲಿ ಮತದಾರರಿಗೆ ಹಂಚಲು ಕಿಟ್‌ಗಳ ಸಿದ್ಧ ಮಾಡಲಾಗುತ್ತಿದೆ ಎಂಬ ಮಾಹಿತಿಯ ಮೇರೆಗೆ ಚುನಾವಣಾ ನಿಯಂತ್ರಣ ತಂಡ ದಾಳಿ ಮಾಡಿದೆ. ತಪಾಸಣೆಯಲ್ಲಿ ಕಾಂಗ್ರೆಸ್ ಮುಖಂಡ ಶಶಿಕುಮಾರ್ ತೋಲ್ಪೆಟ್ಟಿ ಮನೆಯ ಪಕ್ಕದ ಕೊಠಡಿಯಲ್ಲಿ ಈ ಕಿಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸುಮಾರು 30 ಆಹಾರ ಕಿಟ್‌ಗಳು ಸಿಕ್ಕಿದ್ದು, ಟೀ ಪುಡಿ, ಸಕ್ಕರೆ, ಅಕ್ಕಿ ಮತ್ತು ಇತರ ದಿನಸಿ ಪದಾರ್ಥಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಜಮ್ಮು & ಕಾಶ್ಮೀರ | ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ಬಲಿ

    ಕಿಟ್‌ಗಳ ಮೇಲೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವರ ಚಿತ್ರಗಳಿವೆ. ಇವನ್ನು ಇತ್ತೀಚೆಗೆ ಭೂಕುಸಿತ ಉಂಟಾದ ಪ್ರದೇಶಗಳಾದ ಮೆಪ್ಪಾಡಿ, ಮುಂಡಕೈ ಮತ್ತು ಚೂರ್ಲಮಾಲ ಸಂತ್ರಸ್ತರಿಗೆ ವಿತರಿಸುವುದಕ್ಕೆ ಯೋಜಿಸಲಾಗಿತ್ತು. ಕಿಟ್ ಮೇಲೆ ಭೂಕುಸಿತ ಸಂತ್ರಸ್ತರಿಗೆ ಎಂದು ಕೂಡ ಬರೆದಿದೆ. ಇದನ್ನೂ ಓದಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದ ಟ್ರಂಪ್‌, ಸೋತ ಹ್ಯಾರಿಸ್‌ಗೆ ರಾಹುಲ್‌ ಗಾಂಧಿ ಪತ್ರ

    ಪೊಲೀಸರು ಕಿಟ್‌ಗಳನ್ನು ವಶಪಡಿಸಿಕೊಂಡ ಮೇಲೆ ರಾಜಕೀಯ ಪ್ರತಿಪಕ್ಷಗಳ ಟೀಕೆ ಹೆಚ್ಚಾಗಿದೆ. ಮತಕ್ಕಾಗಿ ಕಾಂಗ್ರೆಸ್ ಕಿಟ್‌ಗಳನ್ನು ವಿತರಿಸುತ್ತಿದೆ ಎಂದು ಆರೋಪಿಸಿವೆ. ಇದು ಭೂಕುಸಿತದ ಸಂತ್ರಸ್ತರಿಗೆ ವಿತರಿಸಲು ಈ ಹಿಂದೆ ತಂದಿದ್ದ ಕಿಟ್‌ಗಳು ಎಂದು ಕಾಂಗ್ರೆಸ್ ಹೇಳಿದೆ. ಇದನ್ನೂ ಓದಿ: ವಕ್ಫ್ ನೋಟಿಸ್‌ನಿಂದ ರೈತ ಆತ್ಮಹತ್ಯೆ ಆರೋಪ – ಪೋಸ್ಟ್‌ ಹಾಕಿದ್ದ ತೇಜಸ್ವಿ ಸೂರ್ಯ ವಿರುದ್ಧ ಎಫ್‌ಐಆರ್

  • ವಯನಾಡ್ ಉಪಚುನಾವಣೆ | ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ

    ವಯನಾಡ್ ಉಪಚುನಾವಣೆ | ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ

    ವಯನಾಡ್: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್ (Wayanadu) ಲೋಕಸಭೆ ಕ್ಷೇತ್ರಕ್ಕೆ ಎಐಸಿಸಿ (AICC) ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ (Priyanka Gandhi) ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಚುನಾವಣಾ ಕಣಕ್ಕಿಳಿಯಲಿದ್ದಾರೆ.

    ಪ್ರಿಯಾಂಕಾ ಗಾಂಧಿ ಉಮೇದುವಾರಿಕೆ ಕುರಿತು ಮಾತನಾಡಿದ ರಾಹುಲ್ ಗಾಂಧಿ, ವಯನಾಡಿನ ಜನರು ನನ್ನ ಹೃದಯದಲ್ಲಿ ವಿಶೇಷ ಸ್ಥಾನವನ್ನು ಹೊಂದಿದ್ದಾರೆ. ನನ್ನ ಸಹೋದರಿ ಪ್ರಿಯಾಂಕಾ ಗಾಂಧಿಗಿಂತ ಉತ್ತಮ ಪ್ರತಿನಿಧಿಯನ್ನು ನಾನು ಊಹಿಸಲು ಸಾಧ್ಯವಿಲ್ಲ. ವಯನಾಡಿನ ಅಗತ್ಯತೆಗಳು ಮತ್ತು ಸಂಸತ್ತಿನಲ್ಲಿ ಪ್ರಬಲ ಧ್ವನಿಯಾಗಲಿದ್ದು, ಚಾಂಪಿಯನ್ ಆಗುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.ಇದನ್ನೂ ಓದಿ: ಸರ್ವರ್ ಸಮಸ್ಯೆಯಿಂದ ಅಕ್ಕಿ ಪಡೆಯಲು ಪರದಾಟ – ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

    ಉತ್ತರ ಪ್ರದೇಶದ (UttaraPradesh) ರಾಯ್ ಬರೇಲಿ (Raebareli) ಮತ್ತು ಕೇರಳದ (Kerala) ವಯನಾಡ್‌ನಿಂದ ಸ್ಪರ್ಧೆ ಮಾಡಿದ್ದ ರಾಹುಲ್ ಗಾಂಧಿ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರು. ಬಳಿಕ ರಾಯ್ ಬರೇಲಿ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಂಡ ರಾಹುಲ್ ಗಾಂಧಿ, ವಯನಾಡ್ ಕ್ಷೇತ್ರವನ್ನು ತೆರವು ಮಾಡಿದ್ದರು. ಈ ಹಿನ್ನಲೆ ವಯನಾಡ್‌ನಲ್ಲಿ ಉಪ ಚುನಾವಣೆ ನಡೆಯುತ್ತಿದೆ.

    ನಾಮಪತ್ರ ಸಲ್ಲಿಕೆ ವೇಳೆ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಕಾಂಗ್ರೆಸ್ (Congress) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಉಪಸ್ಥಿತರಿದ್ದರು. ನಾಮಪತ್ರದ ಬಳಿಕ ಸಹೋದರ ರಾಹುಲ್ ಗಾಂಧಿ ಅವರೊಂದಿಗೆ ಪ್ರಿಯಾಂಕಾ ಗಾಂಧಿ ಬೃಹತ್ ರೋಡ್ ಶೋ ನಡೆಸಿದರು.

    ವಯನಾಡ್ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಣಕ್ಕಿಳಿಸಿದರೆ, ಬಿಜೆಪಿ ತನ್ನ ಮಹಿಳಾ ಮೊರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ನವ್ಯಾ ಹರಿದಾಸ್ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಸಿಪಿಐನಿಂದ ಸತ್ಯೇನ್ ಮೊಕೇರಿ ಅವರು ಅಖಾಡದಲ್ಲಿದ್ದು, ತ್ರಿಕೋನ ಸ್ಪರ್ಧೆ ಏರ್ಪಡಲಿದೆ.

    ಪ್ರಿಯಾಂಕಾ ಗಾಂಧಿ ಸ್ಪರ್ಧೆ ಬಗ್ಗೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ನವ್ಯಾ ಹರಿದಾಸ್, ನನ್ನ ಪ್ರತಿಸ್ಪರ್ಧಿ ಪ್ರಿಯಾಂಕಾ ಗಾಂಧಿ ವಯನಾಡಿನಲ್ಲಿ ಕಾಂಗ್ರೆಸ್ ಪರ ಕಠಿಣ ಸವಾಲು ಎದುರಿಸಲಿದ್ದಾರೆ. ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಳ್ಳಲು ರಾಹುಲ್ ಗಾಂಧಿ ವಯನಾಡ್ ಕ್ಷೇತ್ರವನ್ನು ತೊರೆದರು. ವಯನಾಡ್ ಜನರು ಭೂಕುಸಿತದಿಂದ ತತ್ತರಿಸಿದಾಗ ಈ ಸಮಸ್ಯೆಗಳನ್ನು ಪ್ರಸ್ತಾಪಿಸಲು ಸಂಸತ್ತಿನಲ್ಲಿ ಅವರಿಗೆ ಯಾವುದೇ ಪ್ರತಿನಿಧಿ ಇರಲಿಲ್ಲ ಎಂದು ಹೇಳಿದರು.ಇದನ್ನೂ ಓದಿ: ಯೋಗೇಶ್ವರ್ ಬಿಜೆಪಿಯ ಕಟ್ಟಾಳು ಏನಾಗಿರಲಿಲ್ಲ: ಆರ್ ಅಶೋಕ್

  • Wayanad Landslide | ಜನರ ರಕ್ಷಣೆಗೆ ಕೇಂದ್ರ ಸರ್ಕಾರದಿಂದ ಸಂಪೂರ್ಣ ಸಹಕಾರ: ಪ್ರಹ್ಲಾದ್ ಜೋಶಿ

    Wayanad Landslide | ಜನರ ರಕ್ಷಣೆಗೆ ಕೇಂದ್ರ ಸರ್ಕಾರದಿಂದ ಸಂಪೂರ್ಣ ಸಹಕಾರ: ಪ್ರಹ್ಲಾದ್ ಜೋಶಿ

    ನವದೆಹಲಿ: ವಯನಾಡ್ (Wayanad) ದುರಂತ ಅತ್ಯಂತ ದುರದೃಷ್ಟಕರ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Prhlad Joshi) ವಿಷಾದ ವ್ಯಕ್ತಪಡಿಸಿದ್ದಾರೆ.

    ನವದೆಹಲಿಯಲ್ಲಿ ಇಂದು ಮಾಧ್ಯಮದೊಂದಿಗೆ ಮಾತನಾಡಿ, ವಯನಾಡ್ ಇಂದು ತೀವ್ರ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದ್ದು, ಇಲ್ಲಿನವರ ರಕ್ಷಣೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು.

     

    ಈ ದುರಂತ ಪರಿಸ್ಥಿತಿ ನಿರ್ವಹಿಸಲು ಕೇಂದ್ರ ಸರ್ಕಾರ ಸಜ್ಜಾಗಿದೆ. ಅಲ್ಲಿಯ ನಿವಾಸಿಗಳ ರಕ್ಷಣಾ ಕಾರ್ಯಕ್ಕೆ ಕೇಂದ್ರ ಅಗತ್ಯ ನೆರವು ಕಲ್ಪಿಸಲಿದೆ ಎಂದರು.

    ವಯನಾಡಿನಲ್ಲಿ ಜನಜೀವನವನ್ನು ಸಹಜ ಸ್ಥಿತಿಗೆ ತರುವಲ್ಲಿ ಕೇಂದ್ರ ಸಂಪೂರ್ಣ ಸಹಕಾರ, ಬೆಂಬಲ ನೀಡಲು ಬದ್ಧವಾಗಿದೆ ಎಂದು ಪ್ರಹ್ಲಾದ್‌ ಜೋಶಿ ತಿಳಿಸಿದರು.

     

  • ಕೇರಳ ಸಿಎಂ ಜೊತೆ ಸಿದ್ದರಾಮಯ್ಯ ದೂರವಾಣಿ ಮೂಲಕ ಮಾತುಕತೆ; ಅಗತ್ಯ ನೆರವು ನೀಡುವುದಾಗಿ ಭರವಸೆ

    ಕೇರಳ ಸಿಎಂ ಜೊತೆ ಸಿದ್ದರಾಮಯ್ಯ ದೂರವಾಣಿ ಮೂಲಕ ಮಾತುಕತೆ; ಅಗತ್ಯ ನೆರವು ನೀಡುವುದಾಗಿ ಭರವಸೆ

    ಬೆಂಗಳೂರು: ಭೂ ಕುಸಿತದಿಂತ ತತ್ತರಿಸಿರುವ ಕೇರಳಕ್ಕೆ ಅಗತ್ಯ ನೆರವು ಒದಗಿಸುವುದಾಗಿ ಕೇರಳ ಸಿಎಂ ಪಿಣರಾಯಿ ವಿಜಯನ್‌ (Pinarai vijayan) ಅವರಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಭರವಸೆ ನೀಡಿದರು.

    ದೂರವಾಣಿ ಮೂಲಕ ಪಿಣರಾಯಿ ಅವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದರು. ಪರಿಹಾರ ಕಾರ್ಯದಲ್ಲಿ ನಮ್ಮ ಸರ್ಕಾರ ನಿಮ್ಮೊಂದಿಗೆ ಕೈ ಜೋಡಿಸಲಿದೆ. ಅಗತ್ಯ ನೆರವು ಒದಗಿಸಲು ಸಿದ್ಧವಾಗಿದೆ. ರಕ್ಷಣಾ ತಂಡಗಳು ಮತ್ತು ಸಾಮಗ್ರಿಗಳನ್ನು ಕಳುಹಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.

    ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ (Santosh Lad) ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ. ಇದನ್ನೂ ಓದಿ: Wayanad Landslide : ರಕ್ಷಣಾ ಕಾರ್ಯಾಚರಣೆ ಯಾಕೆ ಕಷ್ಟವಾಗುತ್ತಿದೆ?

    ಪ್ರವಾಹ ಪೀಡಿತ ಪ್ರದೇಶದಲ್ಲಿ (Wayanad Landslides) ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ. ದೂರವಾಣಿ ಕರೆ ಸ್ವೀಕರಿಸುತ್ತಿದ್ದಂತೆ ವಯನಾಡಿಗೆ ಹೊರಟ ಸಚಿವ ಸಂತೋಷ್ ಲಾಡ್ ಸದ್ಯ ಕೇರಳ ರಾಜ್ಯದ ಮುಖ್ಯಮಂತ್ರಿ ಕಚೇರಿ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.

    ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ತುರ್ತು ಮತ್ತು ಕ್ಷಿಪ್ರ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಲಾಡ್ ತಿಳಿಸಿದ್ದಾರೆ. ಇದನ್ನೂ ಓದಿ: Wayanad Landslides: ನಾಲ್ವರು ಕನ್ನಡಿಗರು ದುರ್ಮರಣ – ಬೆಂಗಳೂರಿನ ಇಬ್ಬರು ಪ್ರವಾಸಿಗರು ಕಣ್ಮರೆ!

    ರಕ್ಷಣೆಗೆ ಕನ್ನಡಿಗರ ತಂಡ ಮುಂದು:
    ಕೇರಳದಲ್ಲಿ ಕನ್ನಡಿಗರ ರಕ್ಷಣೆಗೆ ಈಗಾಗಲೇ ಬೆಂಗಳೂರಿನಿಂದ ಎರಡು ತಂಡ ಹೊರಟಿದೆ. ಅಲ್ಲದೇ ಮಡಿಕೇರಿಯಿಂದ 20 ಜನರ ತಂಡ ಸ್ವಯಂಪ್ರೇರಿತವಾಗಿ ರಕ್ಷಣಾಕಾರ್ಯದಲ್ಲಿ ತೊಡಗಿಕೊಂಡಿದೆ. ಈ ನಡುವೆ ಸಚಿವ ಸಂತೋಷ್‌ ಲಾಡ್‌ ಅವರೂ ಸಹ ಹೊರಟಿದ್ದಾರೆ. ಅಲ್ಲದೇ ತಮಿಳುನಾಡು ಸರ್ಕಾರದಿಂದಲೂ ರಕ್ಷಣಾ ಕಾರ್ಯಕ್ಕೆ 5 ಕೋಟಿ ರೂ. ತುರ್ತು ನೆರವು ಘೋಷಿಸಲಾಗಿದೆ.

  • Wayanad Landslides: ಸಿಎಂ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ವಯನಾಡಿಗೆ

    Wayanad Landslides: ಸಿಎಂ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ವಯನಾಡಿಗೆ

    ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ (Santosh Lad) ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ.

    ಪ್ರವಾಹ ಪೀಡಿತ ಪ್ರದೇಶದಲ್ಲಿ (Wayanad Landslides) ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ. ದೂರವಾಣಿ ಕರೆ ಸ್ವೀಕರಿಸುತ್ತಿದ್ದಂತೆ ವಯನಾಡಿಗೆ ಹೊರಟ ಸಚಿವ ಸಂತೋಷ್ ಲಾಡ್ ಸದ್ಯ ಕೇರಳ ರಾಜ್ಯದ ಮುಖ್ಯಮಂತ್ರಿ ಕಚೇರಿ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.

    ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ತುರ್ತು ಮತ್ತು ಕ್ಷಿಪ್ರ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಲಾಡ್ ತಿಳಿಸಿದ್ದಾರೆ. ಇದನ್ನೂ ಓದಿ: Wayanad Landslides: ನಾಲ್ವರು ಕನ್ನಡಿಗರು ದುರ್ಮರಣ – ಬೆಂಗಳೂರಿನ ಇಬ್ಬರು ಪ್ರವಾಸಿಗರು ಕಣ್ಮರೆ!

    ಕೇರಳದಲ್ಲಿ ಕನ್ನಡಿಗರ ರಕ್ಷಣೆಗೆ ಈಗಾಗಲೇ ಬೆಂಗಳೂರಿನಿಂದ ಎರಡು ತಂಡ ಹೊರಟಿದೆ. ಅಲ್ಲದೇ ಮಡಿಕೇರಿಯಿಂದ 20 ಜನರ ತಂಡ ಸ್ವಯಂಪ್ರೇರಿತವಾಗಿ ರಕ್ಷಣಾಕಾರ್ಯದಲ್ಲಿ ತೊಡಗಿಕೊಂಡಿದೆ. ಈ ನಡುವೆ ಸಚಿವ ಸಂತೋಷ್‌ ಲಾಡ್‌ ಅವರೂ ಸಹ ಹೊರಟಿದ್ದಾರೆ. ಅಲ್ಲದೇ ತಮಿಳುನಾಡು ಸರ್ಕಾರದಿಂದಲೂ ರಕ್ಷಣಾ ಕಾರ್ಯಕ್ಕೆ 5 ಕೋಟಿ ರೂ. ತುರ್ತು ನೆರವು ಘೋಷಿಸಲಾಗಿದೆ.

    ಕನ್ನಡಿಗರ ಸಾವಿನ ಸಂಖ್ಯೆ 7ಕ್ಕೆ ಏರಿಕೆ:
    ವಯನಾಡಿನಲ್ಲಿ ಸಂಭವಿಸಿದ ಘೋರ ದುರಂತಕ್ಕೆ ಸಿಕ್ಕಿ ಮೃತಪಟ್ಟಿರುವ ಕನ್ನಡಿಗರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಈ ಪೈಕಿ ಸುಮಾರು 8 ಮಂದಿ ಕಣ್ಮರೆಯಾಗಿದ್ದಾರೆ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ. ಇದನ್ನೂ ಓದಿ: Wayanad Landslide : ರಕ್ಷಣಾ ಕಾರ್ಯಾಚರಣೆ ಯಾಕೆ ಕಷ್ಟವಾಗುತ್ತಿದೆ? 

  • Wayanad Landslides: ನಾಲ್ವರು ಕನ್ನಡಿಗರು ದುರ್ಮರಣ – ಬೆಂಗಳೂರಿನ ಇಬ್ಬರು ಪ್ರವಾಸಿಗರು ಕಣ್ಮರೆ!

    Wayanad Landslides: ನಾಲ್ವರು ಕನ್ನಡಿಗರು ದುರ್ಮರಣ – ಬೆಂಗಳೂರಿನ ಇಬ್ಬರು ಪ್ರವಾಸಿಗರು ಕಣ್ಮರೆ!

    – ಸಾವಿನ ಸಂಖ್ಯೆ 143ಕ್ಕೆ ಏರಿಕೆ; ರಕ್ಷಣಾ ಕಾರ್ಯದಲ್ಲಿ ಕನ್ನಡಿಗ ಯುವಕರ ತಂಡ

    ವಯನಾಡ್‌/ಬೆಂಗಳೂರು: ಕೇರಳದ ವಯನಾಡಿನಲ್ಲಿ ಮಹಾಮಳೆಗೆ ಸಂಭವಿಸಿರುವ ಭೂಕುಸಿತದಿಂದ (Wayanad Landslides) ನೂರಕ್ಕೂ ಅಧಿಕ ಜನ ಮೃತಪಟ್ಟಿದ್ದಾರೆ. ಒಟ್ಟು ಸಾವಿನ ಸಂಖ್ಯೆ 143ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆಯಾಗಿದೆ. ನೂರಾರು ಮಂದಿ ಆಶ್ರಯ ಕಳೆದುಕೊಂಡಿದ್ದಾರೆ.

    ವಯನಾಡಿನ ಮೆಪ್ಪಾಡಿಯಲ್ಲಿ ಸಂಭವಿಸಿದ ಘೋರ ಗುಡ್ಡಕುಸಿತ ದುರಂತದಲ್ಲಿ ನಾಲ್ವರು ಕನ್ನಡಿಗರೂ (Kannadigas) ಪ್ರಾಣ ತೆತ್ತಿದ್ದಾರೆ. ಅಲ್ಲದೇ ಮಂಡ್ಯದ ಇಬ್ಬರು ಹಾಗೂ ಬೆಂಗಳೂರಿನಿಂದ ಪ್ರವಾಸಕ್ಕೆ ತೆರಳಿದ್ದ ಇಬ್ಬರು ಕನ್ನಡಿಗರು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಲೋಕಸಭೆಯಲ್ಲೂ ವಾಲ್ಮೀಕಿ ಹಗರಣ ಪ್ರತಿಧ್ವನಿ; ಗ್ಯಾರಂಟಿಗೆ SC-ST ಹಣ ಬಳಕೆ – ಸಿದ್ದರಾಮಯ್ಯ ವಿರುದ್ಧ ವಿತ್ತ ಸಚಿವೆ ಟೀಕೆ

    ಈವೆರೆಗೆ 143 ಮಂದಿ ಮೃತಪಟ್ಟಿದ್ದು, 3 ಸಾವಿರ ಜನರನ್ನ ನಿರಾತ್ರಿತ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. 480ಕ್ಕೂ ಹೆಚ್ಚು ಜನರನ್ನ ರಕ್ಷಣೆ ಮಾಡಲಾಗಿದ್ದು, ಇನ್ನೂ 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ, ಈ ಪೈಕಿ ಕನ್ನಡಿಗರೂ ಇದ್ದಾರೆ ಎಂದು ರಕ್ಷಣಾ ತಂಡಗಳು ತಿಳಿಸಿವೆ.

    ಚಾಮರಾಜನಗರದ ನಾಲ್ವರ ದುರ್ಮರಣ:
    ದೇವರನಾಡಲ್ಲಿ ಸಂಭವಿಸಿದ ಜಲಪ್ರಳಯಕ್ಕೆ ಚಾಮರಾಜನಗರ (Chamarajanagara) ಮೂಲದ ಪುಟ್ಟಸಿದ್ದಶೆಟ್ಟಿ (62), ರಾಣಿ ಮದರ್ (50), ರಾಜನ್, ರಜಿನಿ ಎಂಬವರು ಸಾವನ್ನಪ್ಪಿದ್ದಾರೆ. ರಾಜನ್ ಮತ್ತು ರಜನಿ ದಂಪತಿ ನಾಪತ್ತೆಯಾಗಿದ್ದಾರೆ. ಅಲ್ಲದೇ ಮಂಡ್ಯ ಕೆ.ಆರ್ ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮ ಲೀಲಾವತಿ, ನಿಹಾಲ್ ಎಂಬವರೂ ನಾಪತ್ತೆಯಾಗಿದ್ದಾರೆ. ಮೂವರು (ಅನಿಲ್, ಪತ್ನಿ ಝಾನ್ಸಿ, ತಂದೆ ದೇವರಾಜು) ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಜಲಸ್ಫೋಟದ ಭೀಕರತೆ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ:
    ದುರಂತದಲ್ಲಿ ಬದುಕುಳಿದ ದೇವರಾಜು ಎಂಬವರು ಭೂಕುಸಿತ ಸಂಭವಿಸಿದ ಭೀಕರತೆಯನ್ನ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಅಬ್ಬಬ್ಬಾ, ಮಣ್ಣು, ನೀರು ಒಟ್ಟಿಗೇ ರಭಸವಾಗಿ ಬರುತ್ತಿತ್ತು. ಬಂಡೆಗಳು ಉರುಳಿಬಂದು ಅಪ್ಪಳಿಸಿತ್ತಿದ್ದವು, ಉಸಿರು ಹಿಡಿದು ಕುಳಿತುಕೊಂಡಿದ್ದೆ. 500ಕ್ಕೂ ಹೆಚ್ಚು ಜನ ನಾಪತ್ತೆಯಾಗಿರಬಹುದು ಎಂದು ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: Wayanad Landslides: ತಮಿಳುನಾಡಿನಿಂದ 5 ಕೋಟಿ ನೆರವು – ಅಗತ್ಯ ಸಹಕಾರ ನೀಡೋದಾಗಿ ಕರ್ನಾಟಕ ಸಿಎಂ ಭರವಸೆ

    ಬೆಂಗ್ಳೂರಿಂದ ಹೋಗಿದ್ದ ಇಬ್ಬರು ಕಣ್ಮರೆ:
    ಉತ್ತರ ಭಾರತದಿಂದ ಬೆಂಗಳೂರಿಗೆ ಬಂದು, ವಯನಾಡ್‌ಗೆ ತೆರಳಿದ್ದ 4 ಪ್ರವಾಸಿಗರು ಹಾಗೂ ಬೆಂಗಳೂರಿನ ಒಬ್ಬ ಚಾಲಕ ಪ್ರವಾಹದಲ್ಲಿ ಸಿಲುಕಿದ್ದರೂ ಈ ಪೈಕಿ ಇಬ್ಬರು ಪ್ರವಾಸಿಗರು ಹಾಗೂ ಬೆಂಗಳೂರಿನ (Bengaluru Tourists) ಚಾಲಕ ಸುರಕ್ಷಿತವಾಗಿದ್ದಾರೆ. ಮತ್ತಿಬ್ಬರು ಪ್ರವಾಸಿಗರು ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

    ರಕ್ಷಣಾ ಕಾರ್ಯಕ್ಕೆ ಕನ್ನಡಿಗರ ಯುವಕರ ತಂಡ
    ಕೇರಳ ದುರಂತದಲ್ಲಿ ರಕ್ಷಣಾ ಕಾರ್ಯಕ್ಕೆ ಕನ್ನಡಿಗರ ಯುವಕರ ತಂಡ ಹೋಗಿದೆ. ಮಡಿಕೇರಿ ಮೂಲದ ಸ್ವಯಂ ಸೇವಾ ಸಂಘಟನೆಯ 15 ಯುವಕರು ಅಂಬುಲೆನ್ಸ್‌ ಸಮೇತ ರಕ್ಷಣಾ ಸ್ಥಳಕ್ಕೆ ದೌಡಾಯಿಸಿದ್ದು, ಸೇವೆ ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ: ಕುಡಿಯುವ ನೀರಿಗಾಗಿ ಜನ ಮತ ಹಾಕಿದ್ದಾರೆ; ಬೆಂಗಳೂರಿಗೆ ನೀರು ಕೊಡಿ – ರಾಜ್ಯಸಭೆಯಲ್ಲಿ ಹೆಚ್‌ಡಿಡಿ ಮನವಿ

  • ಸಂಸತ್ ಅಧಿವೇಶನಕ್ಕೂ ಮುನ್ನ ವಯನಾಡ್ ಜನತೆಗೆ ರಾಗಾ ಭಾವನಾತ್ಮಕ ಪತ್ರ

    ಸಂಸತ್ ಅಧಿವೇಶನಕ್ಕೂ ಮುನ್ನ ವಯನಾಡ್ ಜನತೆಗೆ ರಾಗಾ ಭಾವನಾತ್ಮಕ ಪತ್ರ

    – ವಯನಾಡ್ ಸಂಸದ ಸ್ಥಾನಕ್ಕೆ ರಾಜೀನಾಮೆ

    ನವದೆಹಲಿ: ಇಂದು ಲೋಕಸಭಾ ಅಧಿವೇಶನಕ್ಕೂ (Parliament Session) ಮುನ್ನ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರು (Rahul Gandhi) ವಯನಾಡ್‌ ಜನತೆಗೆ ಭಾವನಾತ್ಮಕ ಪತ್ರವೊಂದನ್ನು ಬರೆದಿದ್ದಾರೆ.

    ವಯನಾಡ್ (Wayanad) ಲೋಕಸಭಾ ಕ್ಷೇತ್ರವನ್ನು ತೊರೆಯಲು ನಿರ್ಧರಿಸಿದ ಬಳಿಕ ಸಂಸದರು ಅಲ್ಲಿನ ಜನರಿಗೆ ಈ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಬೇಸರದ ಜೊತೆಗೆ ಸಂತಸವನ್ನು ಕೂಡ ವ್ಯಕ್ತಪಡಿಸಿದ್ದಾರೆ.

    ರಾಗಾ ಹೇಳಿದ್ದೇನು..?: ನೀವು ನನ್ನನ್ನು ಅಪರಿಮಿತ ಪ್ರೀತಿ ಮತ್ತು ವಾತ್ಸಲ್ಯದಿಂದ ಅಪ್ಪಿಕೊಂಡಿದ್ದೀರಿ. ನೀವು ಯಾವ ರಾಜಕೀಯ ರಚನೆಯನ್ನು ಬೆಂಬಲಿಸಿದ್ದೀರಿ?, ನೀವು ಯಾವ ಸಮುದಾಯಕ್ಕೆ ಸೇರಿದವರು?, ನೀವು ಯಾವ ಧರ್ಮವನ್ನು ನಂಬಿದ್ದೀರಿ? ಅಥವಾ ನೀವು ಯಾವ ಭಾಷೆಯಲ್ಲಿ ಮಾತನಾಡುತ್ತೀರಿ? ಎಂಬುದು ಮುಖ್ಯವಲ್ಲ ಎಂದರು.

    ನಾನು ದಿನದಿಂದ ದಿನಕ್ಕೆ ನಿಂದನೆಯನ್ನು ಎದುರಿಸಿದಾಗ ನೀವು ಕೊಟ್ಟ ಪ್ರೀತಿ ನನ್ನನ್ನು ರಕ್ಷಿಸಿತು. ನೀವೇ ನನ್ನ ಆಶ್ರಯ, ನನ್ನ ಮನೆ ಮತ್ತು ನನ್ನ ಕುಟುಂಬವಾಗಿದ್ದೀರಿ. ವಯನಾಡ್ ಕ್ಷೇತ್ರವನ್ನು ತೊರೆಯುತ್ತಿರುವುದಕ್ಕೆ ಬೇಸರವಾಗಿದೆ. ಆದರೆ ಒಂದೇ ಒಂದು ಸಮಾಧಾನವೆಂದರೆ ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಆ ಸ್ಥಾನದಿಂದ ಸ್ಪರ್ಧಿಸಲಿದ್ದಾರೆ ಎಂದು ಪತ್ರದಲ್ಲಿ ಬರೆದಿದ್ದಾರೆ.

    ವಯನಾಡಿನ ಜನತೆ ಆಕೆಗೆ ಅವಕಾಶ ನೀಡಿದರೆ ಆಕೆ ಒಳ್ಳೆಯ ಕೆಲಸ ಮಾಡುತ್ತಾಳೆ ಎಂಬುದಾಗಿ ಇದೇ ವೇಳೆ ರಾಹುಲ್‌ ಗಾಂಧಿ ಭರವಸೆ ನೀಡಿದರು. ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಯನಾಡ್ ಉಪಚುನಾವಣೆಗೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಾಂಗ್ರೆಸ್ ಹೆಸರಿಸಿದೆ.

    ವಯನಾಡ್ ಸಂಸದ ಸ್ಥಾನಕ್ಕೆ ರಾಹುಲ್ ಗಾಂಧಿ ನೀಡಿರುವ ರಾಜೀನಾಮೆಯನ್ನು ಲೋಕಸಭೆ ಸ್ವೀಕರ್ ಇಂದು ಅಂಗೀಕರಿಸಿದ್ದಾರೆ. ಈ ಮೂಲಕ ರಾಗಾ ಅವರು ರಾಯ್ ಬರೇಲಿ ಸಂಸದರಾಗಿ ಮುಂದುವರಿಯಲಿದ್ದಾರೆ. ಇದನ್ನೂ ಓದಿ; Parliament Session: ಸಂಸದರಾಗಿ ಮೋದಿ, ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಪ್ರಮಾಣ ವಚನ ಸ್ವೀಕಾರ

  • ಪ್ರಿಯಾಂಕಾ ಗಾಂಧಿ ವಯನಾಡಿನಿಂದ ಸ್ಪರ್ಧಿಸುತ್ತಿರುವುದು ನನಗೆ ಖುಷಿ ತಂದಿದೆ: ರಾಬರ್ಟ್ ವಾದ್ರಾ

    ಪ್ರಿಯಾಂಕಾ ಗಾಂಧಿ ವಯನಾಡಿನಿಂದ ಸ್ಪರ್ಧಿಸುತ್ತಿರುವುದು ನನಗೆ ಖುಷಿ ತಂದಿದೆ: ರಾಬರ್ಟ್ ವಾದ್ರಾ

    ನವದೆಹಲಿ: ಪ್ರಿಯಾಂಕಾ ಗಾಂಧಿ (Priyanka Gandhi) ವಯನಾಡಿನಿಂದ ಸ್ಪರ್ಧಿಸುತ್ತಿರುವುದು ನನಗೆ ಖುಷಿ ತಂದಿದೆ. ಅವರು ಸಂಸತ್ತಿನಲ್ಲಿ ಇರಬೇಕು ಎನ್ನುವುದು ನನ್ನ ಆಸೆ. ಜನರು ಪ್ರಿಯಾಂಕಾರನ್ನ ಆಯ್ಕೆ ಮಾಡುವ ಮೂಲಕ ಒಳ್ಳೆಯ ತೀರ್ಪು ನೀಡಲಿದ್ದಾರೆ ಎಂದು ರಾಬರ್ಟ್ ವಾದ್ರಾ (Robert Vadra) ಹೇಳಿದ್ದಾರೆ.

    ಪ್ರಿಯಾಂಕಾ ಗಾಂಧಿ ಸ್ಪರ್ಧೆ ಬಗ್ಗೆ ಮಾತನಾಡಿದ ಅವರು, ನಾನು ಯಾವಾಗಲೂ ಸಕ್ರಿಯ ರಾಜಕಾರಣದಲ್ಲಿರಲು ಬಯಸುತ್ತೇನೆ. ಪ್ರಿಯಾಂಕಾ ಗಾಂಧಿ ಸಂಸದರಾಗಬೇಕೆಂದು ನಾನು ಬಯಸುತ್ತೇನೆ. ಅವರು ಹೆಚ್ಚಿನ ಬಹುಮತದಿಂದ ಗೆಲ್ಲುತ್ತಾರೆ ಎಂದು ನಾನು ಭಾವಿಸುತ್ತೇನೆ. ಅವರು ಜನರ ನಿಜವಾದ ಸಮಸ್ಯೆಗಳನ್ನು ಪ್ರಸ್ತಾಪಿಸಬೇಕೆಂದು ನಾನು ಬಯಸುತ್ತೇನೆ. ಪ್ರಿಯಾಂಕಾ ಬುದ್ಧಿವಂತ ಮಹಿಳೆ. ಅವರು ನನಗಿಂತ ಮೊದಲು ಸಂಸತ್ತಿನಲ್ಲಿ ಇರಬೇಕೆಂದು ನಾನು ಬಯಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ನೀಟ್ ಪರೀಕ್ಷೆಯಲ್ಲಿ ಅಕ್ರಮ- 0.001 %ರಷ್ಟು ನಿರ್ಲಕ್ಷ್ಯ ಕಂಡುಬಂದ್ರೂ ಕೂಲಂಕುಷವಾಗಿ ನಿಭಾಯಿಸಬೇಕು: ಸುಪ್ರೀಂ

    ಆದರೆ ನಮ್ಮ ಈ ನಿರ್ಧಾರದಿಂದ ಬಿಜೆಪಿ ನಾಯಕರು ಚಿಂತಿತರಾಗಿದ್ದಾರೆ. ಮುಂದೇನು ಮಾಡಬಹುದೆಂಬುದನ್ನು ಅರ್ಥಮಾಡಿಕೊಳ್ಳಲು ಅವರು ಒಟ್ಟಿಗೆ ಸೇರುತ್ತಿದ್ದಾರೆ. ಪ್ರಿಯಾಂಕಾ ಅವರು ಸಮಸ್ಯೆಗಳನ್ನು ಎತ್ತುತ್ತಾರೆ. ಲಡ್ಕಿ ಹೂಂ ಲಾಡ್ ಸಕ್ತಿ ಹೂಂ ಎಂಬ ಘೋಷಣೆಯನ್ನು ನೀಡಿ ಅವರು ಮಹಿಳೆಯರಿಗಾಗಿ ದೀರ್ಘಕಾಲ ಹೋರಾಡಿದವರು. ಹೀಗಾಗಿ ಬಿಜೆಪಿ ಹೆದರುತ್ತಿದೆ ಎಂದು ತಿಳಿಸಿದ್ದಾರೆ.