Tag: ವಯೋಮಿತಿ

  • ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್- ನೇಮಕಾತಿಗಳಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ

    ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್- ನೇಮಕಾತಿಗಳಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ

    ಬೆಂಗಳೂರು: ಸರ್ಕಾರಿ ಉದ್ಯೋಗಾಕಾಂಕ್ಷಿ ಯುವಕರಿಗೆ ರಾಜ್ಯ ಸರ್ಕಾರ ದಸರಾ ಗಿಫ್ಟ್ ನೀಡಿದೆ. ರಾಜ್ಯ ಸರ್ಕಾರದ ಸಿವಿಲ್ ನೇರ ನೇಮಕಾತಿಗಳಲ್ಲಿ 3 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಮಹತ್ವದ ಆದೇಶ ಹೊರಡಿಸಲಾಗಿದೆ.

    ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೂ ಒಂದು ಬಾರಿಗೆ ಅನ್ವಯವಾಗುವಂತೆ 3 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಇತ್ತೀಚೆಗೆ ಧಾರವಾಡದಲ್ಲಿ ಯುವ ಸಮೂಹ 5 ವರ್ಷಗಳ ವಯೋಮಿತಿ ಸಡಿಲಿಕೆ ಹಾಗೂ ಪಿಎಸ್‌ಐ/ಕಾನ್ಸಟೇಬಲ್ ಹುದ್ದೆಗಳಿಗೆ ನೇಮಕಾತಿ ಆದೇಶಕ್ಕೆ ಆಗ್ರಹಿಸಿ ಜೆನ್ ಜಿ ಮಾದರಿಯಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ರು. ಇದರ ಮಧ್ಯೆ ಇದೇ ತಿಂಗಳ 6ರಂದು ರಾಜ್ಯ ಸರ್ಕಾರ ಸಿವಿಲ್ ಹುದ್ದೆಗಳ ನೇರ ನೇಮಕಾತಿಗಳಿಗೆ 2 ವರ್ಷ ಸಡಿಲಿಕೆ ಮಾಡಿ ಆದೇಶಿಸಿತ್ತು.

    ಈಗ 5 ವರ್ಷ ವಯೋಮಿತಿ ಸಡಿಲಿಕೆ ಮಾಡುವಂತೆ ಜನಪ್ರತಿನಿಧಿಗಳು, ಸಂಘಟನೆಗಳು ಸರ್ಕಾರದ ಮೇಲೆ ಒತ್ತಡ ಹಾಕಿದ ಪರಿಣಾಮ ಸರ್ಕಾರ ಇದೀಗ 3 ವರ್ಷಗಳ ಸಡಿಲಿಕೆ ಮಾಡಿದೆ. ಈ ವಯೋಮಿತಿ ಸಡಿಲಿಕೆ 2027 ರ ಡಿಸೆಂಬರ್ 31ರೊಳಗೆ ಸರ್ಕಾರ ಹೊರಡಿಸುವ ಎಲ್ಲ ನೇರ ನೇಮಕಾತಿಗಳಿಗೂ ಒಂದು ಬಾರಿ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೂ ಅನ್ವಯಿಸಲಿದೆ.

    2019ರಿಂದಲೂ ಕೋವಿಡ್ ಹಾಗೂ ಮತ್ತಿತರೆ ಕಾರಣಗಳಿಂದ ನೇರನೇಮಕಾತಿಗಳಿಗೆ ಸರ್ಕಾರ ಅಧಿಸೂಚನೆ ಹೊರಡಿಸಲಿಲ್ಲ. ಪಿಎಸ್‌ಐ ಹಾಗೂ ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ಪರೀಕ್ಷೆ ನಡೆಸಿತ್ತಿದ್ದಾರೂ ನೇಮಕಾತಿ ಆದೇಶ ಇನ್ನೂ ನೀಡಿಲ್ಲ. ಇದರಿಂದ ಸರ್ಕಾರಿ ಕೆಲಸವನ್ನೇ ನೆಚ್ಚಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡಿಕೊಂಡಿರುವ ಲಕ್ಷಾಂತರ ಯುವಕರು ವಯೋಮಿತಿ ಮೀರುತ್ತಿರುವ ಹಿನನೆಲೆಯಲ್ಲಿ ಆತಂಕಗೊಂಡಿದ್ದರು.

    ವಯೋಮಿತಿ ಸಡಿಲಿಕೆ ಎಷ್ಟು?
    * ಸಾಮಾನ್ಯ ವರ್ಗ – 35 ವರ್ಷದಿಂದ 38 ವರ್ಷ
    * ಒಬಿಸಿ – 38 ವರ್ಷದಿಂದ 41 ವರ್ಷ
    * ಎಸ್‌ಸಿ/ಎಸ್‌ಟಿ/ಪ್ರವರ್ಗ-1 – 40 ವರ್ಷದಿಂದ 43 ವರ್ಷ

  • ನ್ಯಾಯಾಧೀಶರ ವಯೋಮಿತಿ ಹೆಚ್ಚಿಸಿ –  ಸಂವಿಧಾನಿಕ ತಿದ್ದುಪಡಿಗೆ ಬಾರ್ ಕೌನ್ಸಿಲ್ ಮನವಿ

    ನ್ಯಾಯಾಧೀಶರ ವಯೋಮಿತಿ ಹೆಚ್ಚಿಸಿ – ಸಂವಿಧಾನಿಕ ತಿದ್ದುಪಡಿಗೆ ಬಾರ್ ಕೌನ್ಸಿಲ್ ಮನವಿ

    ನವದೆಹಲಿ: ನ್ಯಾಯಾಧೀಶರ ನಿವೃತ್ತಿ ವಯಸ್ಸಿಗೆ ತಿದ್ದುಪಡಿ(Raise Retirement Age) ತರುವಂತೆ ಭಾರತೀಯ ಬಾರ್ ಕೌನ್ಸಿಲ್(Bar Council) ಕೇಂದ್ರ ಸರ್ಕಾರಕ್ಕೆ(Central Government) ಒತ್ತಾಯಿಸಿದೆ.

    bar council

    ಬುಧವಾರ ನಡೆದ ಎಲ್ಲ ರಾಜ್ಯಗಳ ಬಾರ್ ಕೌನ್ಸಿಲ್‍ಗಳ ಜೊತೆಗಿನ ಸಭೆ ಬಳಿಕ ಒಮ್ಮತದ ನಿರ್ಧಾರ ಕೈಗೊಂಡಿದ್ದು ಸಾಂವಿಧಾನಿಕ ತಿದ್ದುಪಡಿ ತರಲು ಅದು ಸರ್ಕಾರಕ್ಕೆ ಮನವಿ ಮಾಡಿದೆ. ಇದನ್ನೂ ಓದಿ: ಉದ್ಘಾಟನೆಗೆ ರಾಷ್ಟ್ರಪತಿ; ಜಂಬೂಸವಾರಿ ಮೆರವಣಿಗೆಗೆ ಮೋದಿ! ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಮೈಸೂರು

    ನಿನ್ನೆ ನಡೆದ ಸಭೆಯಲ್ಲಿ ಹೈಕೋರ್ಟ್(High Court) ನ್ಯಾಯಾಧೀಶರ ನಿವೃತ್ತಿ ವಯಸ್ಸನ್ನು 62 ರಿಂದ 65 ವರ್ಷಕ್ಕೆ, ಸುಪ್ರೀಂ ಕೋರ್ಟ್‍ನ(Supreme Court )ನ್ಯಾಯಾಧೀಶರ ನಿವೃತ್ತಿಯ ವಯಸ್ಸು 67 ವರ್ಷಕ್ಕೆ ವಿಸ್ತರಿಸುವಂತೆ ಮನವಿ ಮಾಡಿದ್ದಾರೆ. ಈ ನಿರ್ಣಯದ ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ(Narendra Modi) ಮತ್ತು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರಿಗೆ ಕಳುಹಿಸಿದ್ದು, ಕ್ರಮಕ್ಕಾಗಿ ಮನವಿ ಮಾಡಿದೆ ಎಂದು ಬಿಸಿಸಿಐ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಇದು ಸರ್ಕಾರಿ ಪ್ರಾಯೋಜಿತ ಕೊಲೆ – ವಿಮ್ಸ್‌ ದುರಂತಕ್ಕೆ ಸಿದ್ದು ಕಿಡಿ

    ಇದರ ಜೊತೆಗೆ ಅನುಭವಿ ವಕೀಲರನ್ನು ವಿವಿಧ ಆಯೋಗಗಳು ಮತ್ತು ಇತರ ವೇದಿಕೆಗಳ ಅಧ್ಯಕ್ಷರನ್ನಾಗಿ ನೇಮಿಸಲು ಹಾಗೂ ಶಾಸನಗಳನ್ನು ತಿದ್ದುಪಡಿ ಮಾಡಲು ಪರಿಗಣಿಸಲು ಸಂಸತ್ತಿಗೆ ಪ್ರಸ್ತಾಪಿಸಲು ಜಂಟಿ ಸಭೆ ನಿರ್ಧರಿಸಿದೆ ಎಂದು ಬಾರ್ ಕೌನ್ಸಿಲ್ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಒಡಿಶಾದಲ್ಲಿ 53 ವರ್ಷದವರೂ ಸರ್ಕಾರಿ ಹುದ್ದೆಗೆ ಸೇರಬಹುದು

    ಒಡಿಶಾದಲ್ಲಿ 53 ವರ್ಷದವರೂ ಸರ್ಕಾರಿ ಹುದ್ದೆಗೆ ಸೇರಬಹುದು

    ಭುವನೇಶ್ವರ: ಒಡಿಶಾ ರಾಜ್ಯದ ಸರ್ಕಾರಿ ನೌಕರಿಗೆ ಸೇರುವ ವಿವಿಧ ವರ್ಗಗಳ ಗರಿಷ್ಠ ವಯೋಮಿತಿಯನ್ನು ಹೆಚ್ಚಿಸಿದೆ. ಇದರಲ್ಲಿ ಎಸ್‌ಸಿಬಿಸಿ, ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದ ಅಂಗವಿಕಲ ಅಭ್ಯರ್ಥಿಗಳು 53 ವರ್ಷಗಳ ವರೆಗೂ ಅರ್ಜಿ ಸಲ್ಲಿಸಬಹುದು ಎಂಬುದು ಗಮನಾರ್ಹ ವಿಚಾರ.

    ಒಡಿಶಾ ರಾಜ್ಯ ಸರ್ಕಾರ, ಸರ್ಕಾರಿ ನೌಕರಿಗೆ ಸೇರುವ ಅಭ್ಯರ್ಥಿಗಳ ವಯೋಮಿತಿಯನ್ನು ಏರಿಸುವ ಮೂಲಕ ಮಧ್ಯ ವಯಸ್ಕರಿಗೂ ಉತ್ತಮ ಅವಕಾಶ ದೊರಕುವಂತೆ ಮಾಡಿದೆ. ಇದರಲ್ಲಿ ಸಾಮಾನ್ಯ ವರ್ಗದ ಮಿತಿಯನ್ನು 32 ವರ್ಷದಿಂದ 38 ವರ್ಷಗಳಿಗೆ ಹೆಚ್ಚಿಸಿದೆ. ಇದನ್ನೂ ಓದಿ: ಮುಗಿಯದ ಕೇಸರಿ ಶಲ್ಯ ವಿವಾದ – ಠಾಣೆ ಮೆಟ್ಟಿಲೇರಿದ ವಿದ್ಯಾರ್ಥಿಗಳ ಗಲಾಟೆ

    ಎಸ್‌ಸಿಬಿಸಿ, ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯನ್ನು 43 ವರ್ಷಗಳಿಗೆ ಹೆಚ್ಚಿಸಲಾಗಿದೆ ಹಾಗೂ ಈ ಪ್ರವರ್ಗದ ಮಹಿಳಾ ಅಭ್ಯರ್ಥಿಗಳ ವಯೋಮಿತಿಯನ್ನೂ 43 ವರ್ಷಗಳಿಗೆ ಏರಿಸಲಾಗಿದೆ. ಉಳಿದೆಲ್ಲಾ ವರ್ಗಗಳ ಅಂಗವಿಕಲ ಅಭ್ಯರ್ಥಿಗಳ ವಯೋಮಿತಿಯನ್ನು 48 ವರ್ಷಗಳಿಗೆ ಹೆಚ್ಚಿಸಲಾಗಿದೆ. ಇದನ್ನೂ ಓದಿ: ಬಿಜೆಪಿ ಶಾಸಕರು, ಸಚಿವರು, ನಾಯಕರಿಗೆ ಹೈಕಮಾಂಡ್ ಕ್ಲಾಸ್

    ಈ ವಯೋಮಿತಿ 2021ರಲ್ಲಿ ಹೊರಡಿಸಲಾದ ಅಧಿಸೂಚನೆಗಳಿಗೆ ಹಾಗೂ 2022-23ರ ಅಧಿಸೂಚನೆಗಳಿಗೆ ಅನ್ವಯವಾಗುತ್ತದೆ ಎಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಿಳಿಸಿದ್ದಾರೆ. ಇಷ್ಟು ಮಾತ್ರವಲ್ಲದೇ ಒಡಿಶಾ ಉನ್ನತ ಶಿಕ್ಷಣ ಇಲಾಖೆ ತಾಯ್ತನದ ರಜೆಯನ್ನು ಗರಿಷ್ಠ 180 ದಿನಗಳ ವರೆಗೆ ಹೆಚ್ಚಿಸುವುದಾಗಿ ತಿಳಿಸಿದೆ.

  • ಕಾನ್‍ಸ್ಟೇಬಲ್ ಹುದ್ದೆಗೆ ಅರ್ಜಿ- ವಯೋಮಿತಿ ಹೆಚ್ಚಿಸಲು ಆಗ್ರಹ

    ಕಾನ್‍ಸ್ಟೇಬಲ್ ಹುದ್ದೆಗೆ ಅರ್ಜಿ- ವಯೋಮಿತಿ ಹೆಚ್ಚಿಸಲು ಆಗ್ರಹ

    ಧಾರವಾಡ: ಸರ್ಕಾರ ಕೊವಿಡ್ ನಿಯಂತ್ರಣಕ್ಕೆ ನಿರಂತರ ಲಾಕ್‍ಡೌನ್ ಜಾರಿಗೊಳಿಸಿ, ಪೊಲೀಸ್ ನೇಮಕಾತಿಗಳನ್ನು ವಿಳಂಬ ಮಾಡಿದ್ದರಿಂದ ಕೆಲವು ವಿದ್ಯಾರ್ಥಿಗಳಿಗೆ ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗೆ ಅರ್ಜಿ ಹಾಕುವ ವಯೋಮಿತಿ ಮೀರಿ ಹೋಗಿದೆ. ಹೀಗಾಗಿ ಸರ್ಕಾರ ವಯೋಮಿತಿಯನ್ನು ಹೆಚ್ಚಿಸಬೇಕು ಎಂದು ವಿದ್ಯಾಕಾಶಿ ಕರಿಯರ್ ಅಕಾಡೆಮಿ ಸಿಬ್ಬಂದಿ ಆಗ್ರಹಿಸಿದ್ದಾರೆ.

    ವಯೋಮಿತಿ ಹೆಚ್ಚಿಸುವಂತೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು. ವಯೋಮಿತಿ ಹೆಚ್ಚಿಸದಿದ್ದರೆ, ಪೊಲೀಸ್ ಹುದ್ದೆಯನ್ನು ನೆಚ್ಚಿಕೊಂಡು ಕುಳಿತ ಸಾವಿರಾರು ವಿದ್ಯಾರ್ಥಿಗಳ ಕನಸಿಗೆ ಅಡ್ಡಿಯಾಗಲಿದೆ. ಕೆಲವು ರಾಜ್ಯಗಳಲ್ಲಿ ಪೊಲೀಸ್ ಕಾನ್‍ಸ್ಟೆಬಲ್ ಹುದ್ದೆಯ ವಯೋಮಿತಿ ಹೆಚ್ಚಾಗಿದೆ. ಅದೇ ರೀತಿ ರಾಜ್ಯದಲ್ಲೂ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

    ರಾಜ್ಯದಲ್ಲಿ ಎಸ್‍ಸಿ, ಎಸ್‍ಟಿ ವಿದ್ಯಾರ್ಥಿಗಳಿಗೆ 27, ಸಾಮಾನ್ಯ ವರ್ಗದವರಿಗೆ 25 ವಯಸ್ಸಿನ ಮಿತಿ ಇದೆ. ಇದರಿಂದ ಸಾವಿರಾರು ಬಡ ವಿದ್ಯಾರ್ಥಿಗಳ ಸರ್ಕಾರಿ ಕೆಲಸದ ಕನಸಿಗೆ ಅಡ್ಡಿಯಾಗಿದೆ. ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ ವಯೋಮಿತಿ ಸಡಿಲಿಕೆಗೆ ಅವಕಾಶ ಕಲ್ಪಿಸಬೇಕು ಆಗ್ರಹಿಸಿದರು.