Tag: ವರದಾ

  • ವರದಾ, ತುಂಗಭದ್ರಾ ನದಿಯಲ್ಲಿ ಹೆಚ್ಚಿದ ನೀರು – ಮೆಕ್ಕೆಜೋಳ ಸೇರಿ ವಿವಿಧ ಬೆಳೆ ಜಲಾವೃತ

    ವರದಾ, ತುಂಗಭದ್ರಾ ನದಿಯಲ್ಲಿ ಹೆಚ್ಚಿದ ನೀರು – ಮೆಕ್ಕೆಜೋಳ ಸೇರಿ ವಿವಿಧ ಬೆಳೆ ಜಲಾವೃತ

    ಹಾವೇರಿ: ರಾಜ್ಯಾದ್ಯಂತ ಮಳೆರಾಯನ ಅರ್ಭಟ ಮುಂದುವರಿದಿದೆ. ಅದರಲ್ಲೂ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆ ಹಾವೇರಿ ಜಿಲ್ಲೆಯ ವರದಾ, ತುಂಗಭದ್ರಾ ನದಿ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ.

    ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಕುಣಿಮೆಳ್ಳಿಹಳ್ಳಿ, ಹಲಸೂರು, ಹಾನಗಲ್ ತಾಲೂಕಿನ ಹರವಿ, ಕೂಡಲ, ಹಾವೇರಿ ತಾಲೂಕಿನ ವರದಹಳ್ಳಿ, ನಾಗನೂರು ಸೇರಿದಂತೆ ಹಲವು ಗ್ರಾಮಗಳ ರೈತರ ಜಮೀನುಗಳು ಜಲಾವೃತಗೊಂಡಿವೆ. ಜಮೀನಿನಲ್ಲಿ ಬೆಳೆದಿದ್ದ ಸುಗಂಧಿ ಹೂವು, ಗಲಾಟೆ ಹೂವು, ಮೆಕ್ಕೆಜೋಳ, ಕಬ್ಬು, ಹೂಕೋಸು ಸೇರಿದಂತೆ ಹಲವು ಬೆಳೆಗಳು ಸಂಪೂರ್ಣ ಜಲಾವೃತಗೊಂಡಿವೆ. ಇದನ್ನೂ ಓದಿ:  ಎಸಿಬಿ ವಿರುದ್ಧ ನ್ಯಾ. ಸಂದೇಶ್ ಮಾಡಿದ್ದ ಆರೋಪಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್

    ನೀರಿನಲ್ಲಿ ನಿಂತು ಎಲ್ಲ ಬೆಳೆಗಳು ಕೊಳೆತು ಹಾಳಾಗುತ್ತಿದ್ದು, ಬೋರವೇಲ್, ಪಂಪ್‍ಸೇಟ್ ಹಾಗೂ ಪೈಪ್ ಮುಳುಗಡೆಯಾಗಿವೆ. ಇದರಿಂದ ಅನ್ನದಾತರು ದಿಕ್ಕು ತೋಚದಂತಾಗಿದೆ. ನದಿ ಪಾತ್ರಗಳ ಸಾವಿರಾರು ಎಕರೆ ಪ್ರದೇಶದಲ್ಲಿನ ಬೆಳೆಗಳು ಹಾಳಾಗಿವೆ. ಸರ್ಕಾರ ರೈತರಿಗೆ ಸೂಕ್ತವಾದ ಪರಿಹಾರ ಘೋಷಣೆ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]