Tag: ವರಮಹಾಲಕ್ಷ್ಮೀ ಹಬ್ಬ

  • ವರಮಹಾಲಕ್ಷ್ಮೀ ಪೂಜೆಗೆ ತಂದಿದ್ದ 3.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

    ವರಮಹಾಲಕ್ಷ್ಮೀ ಪೂಜೆಗೆ ತಂದಿದ್ದ 3.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

    – ಪೂಜೆ ಮಾಡಿ ಚಿನ್ನದ ಆಭರಣಗಳನ್ನು ದೇವರ ಮೇಲೆಯೇ ಬಿಟ್ಟಿದ್ರು

    ದಾವಣಗೆರೆ: ವರಮಹಾಲಕ್ಷ್ಮೀ ಪೂಜೆಗೆಂದು ಚಿನ್ನದ ಆಭರಣಗಳನ್ನು ಹೊರ ತೆಗೆದು, ಮಹಾಲಕ್ಷ್ಮೀಗೆ ತೊಡಿಸಿ ಪೂಜೆ ಮಾಡಿದ್ದಾರೆ. ಈ ವೇಳೆ ಕಳ್ಳರು ತಮ್ಮ ಕೈ ಚಳಕ ತೋರಿಸಿದ್ದು, 3.90 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣ ಎಗರಿಸಿದ್ದಾರೆ.

    ನಗರದ ಡಿಸಿಎಂ ಟೌನ್ ಶಿಪ್ ನಲ್ಲಿರುವ ಪ್ರಸನ್ನ ಅವರ ಮನೆಯಲ್ಲಿ ಕಳವು ಮಾಡಿದ್ದು, ಮನೆಯಲ್ಲಿದ್ದ 3.90 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ. ವರಮಹಾಲಕ್ಷ್ಮೀ ಪೂಜೆಗೆಂದು ಚಿನ್ನದ ಆಭರಣಗಳನ್ನು ತರಲಾಗಿತ್ತು. ಪೂಜೆ ಮಾಡಿದ ಬಳಿಕ ಮನೆಯವರು ದೇವರ ಮೇಲೆ ಆಭರಣಗಳನ್ನು ಹಾಗೇ ಬಿಟ್ಟಿದ್ದರು. ಈ ವೇಳೆ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಇದನ್ನೂ ಓದಿ: ಮಧ್ಯರಾತ್ರಿ ಆಪರೇಷನ್ ಇಂಡಿಯನ್ಸ್ – ಕಾಬೂಲ್‍ನಿಂದ ದೋಹಾ ಮೂಲಕ ದೆಹಲಿಗೆ ಭಾರತೀಯರು

    ಕಿಟಕಿ ತೆಗೆದು ದೇವರ ಮೇಲಿದ್ದ ಆಭರಣಗಳನ್ನು ಕಳವು ಮಾಡಿದ್ದಾರೆ. ಆರಂಭದಲ್ಲಿ ಚಿನ್ನಾಭರಣ ಕಳವಾಗಿರುವುದು ಯಾರಿಗೂ ತಿಳಿದಿಲ್ಲ. ಬಳಿಕ ಅರಿವಾಗಿದ್ದು, ತಕ್ಷಣ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಇದೀಗ ತನಿಖೆ ಕೈಗೊಂಡಿದ್ದಾರೆ.

  • ಪವರ್ ಸ್ಟಾರ್ ಪವರ್ ಫುಲ್ ವರ್ಕೌಟ್ – ಅಭಿಮಾನಿಗಳಿಗೆ ವಿಭಿನ್ನವಾಗಿ ವಿಶ್

    ಪವರ್ ಸ್ಟಾರ್ ಪವರ್ ಫುಲ್ ವರ್ಕೌಟ್ – ಅಭಿಮಾನಿಗಳಿಗೆ ವಿಭಿನ್ನವಾಗಿ ವಿಶ್

    ಬೆಂಗಳೂರು: ಇಂದು ಎಲ್ಲೆಡೆ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ. ಈ ವಿಶೇಷ ದಿನದಂದು ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್‌ರವರು ವರ್ಕೌಟ್ ಮಾಡುತ್ತಿರುವ ಪವರ್ ಫುಲ್ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ವಿಭಿನ್ನವಾಗಿ ಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ.

    ಚಂದನವನದಲ್ಲಿ ತಮ್ಮದೇ ಆದ ಅಭಿನಯ, ಡ್ಯಾನ್ಸ್ ಹಾಗೂ ಸ್ಟಂಟ್ಸ್ ಮೂಲಕವೇ ಕನ್ನಡ ಪ್ರೇಕ್ಷಕರ ಮನಗೆದ್ದಿರುವ ಪುನೀತ್ ಅಪಾರ ಅಭಿಮಾನಿ ಬಳಗ ಹೊಂದಿದ್ದಾರೆ. ಯಾವುದೇ ಕಷ್ಟಕರ ಪಾತ್ರ ಕೊಟ್ಟರೂ ಸುಲಭವಾಗಿ ನಟಿಸಿ ಸೈ ಎನಿಸಿಕೊಳ್ಳುವ ಪುನೀತ್ ಮೊದಲಿನಿಂದಲೂ ಸಖತ್ ಫಿಟ್ ಹಾಗೂ ಆ್ಯಕ್ಟೀವ್ ಆಗಿದ್ದಾರೆ. ಸದ್ಯ ಪುನೀತ್ ತಮ್ಮ ಮನೆಯಲ್ಲಿರುವ ಜಿಮ್‍ನಲ್ಲಿ ಸಖತ್ ವರ್ಕೌಟ್ ಮಾಡಿದ್ದು, ಈ ವೀಡಿಯೋವನ್ನು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ದ್ವಿತ್ವ ಸಿನಿಮಾಗೆ ಪುನೀತ್ ರಾಜ್‍ಕುಮಾರ್ ಜೋಡಿಯಾದ ತ್ರಿಷಾ ಕೃಷ್ಣ

    ವೀಡಿಯೋದಲ್ಲಿ ಪುನೀತ್ ಹಸಿರು ಕಲರ್ ಟಿ-ಶರ್ಟ್ ಹಾಗೂ ಶಾರ್ಟ್ಸ್ ಧರಿಸಿ ಕಿಕ್ ಬಾಕ್ಸಿಂಗ್ ಬ್ಯಾಗ್‍ಗೆ ಒದೆಯುತ್ತಿರುವುದನ್ನು ಕಾಣಬಹುದಾಗಿದೆ. ವೀಡಿಯೋ ಜೊತೆಗೆ ಆರೋಗ್ಯವೇ ನಿಜವಾದ ಸಂಪತ್ತು ಎಂಬುವುದನ್ನು ನಾವು ಅರಿತುಕೊಳ್ಳೋಣ. ಹ್ಯಾಪಿ ವರಮಹಾಲಕ್ಷ್ಮೀ ಎಂದು ಎಂದು ವಿಶ್ ಮಾಡಿದ್ದಾರೆ.

    ಇತ್ತೀಚೆಗಷ್ಟೇ ನಗರದ ಖಾಸಗಿ ಹೋಟೆಲ್‍ನಲ್ಲಿ ಡಾ. ರಾಜ್ ಕುಮಾರ್ ಅಕಾಡೆಮಿಯಿಂದ ಡಾ. ರಾಜ್‍ಕುಮಾರ್ ಲರ್ನಿಂಗ್ ಆ್ಯಪ್‍ನನ್ನು ಲೋಕಾರ್ಪಣೆ ಸಮಾರಂಭ ನಡೆಯಿತು. ಪುನೀತ್ ರಾಜ್‌ಕುಮಾರ್‌ರವರು ಈ ಆ್ಯಪ್‍ನ ಬ್ರಾಂಡ್ ಅಂಬಾಸಿಡರ್ ಆಗಿದ್ದು, ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿಯವರು ಅಪ್ಪು ನೀವು ಫಾರ್ಮಲ್ ಎಜುಕೇಶನ್ ಬಗ್ಗೆ ಕಲಿಯಲಿಲ್ಲ ಅಂದರೂ ಪರವಾಗಿಲ್ಲ. ಫಾರ್ಮಲ್ ಎಜುಕೇಶನ್ ಮುಖ್ಯವಲ್ಲ. ಜ್ಞಾನ ಬಹಳ ಮುಖ್ಯ. ಜ್ಞಾನದಿಂದಲೇ ವಿದ್ಯೆ. ನೀವೊಬ್ಬರು ಐಕಾನ್ ಎಂದು ಹಾಡಿ ಹೊಗಳಿದ್ದರು.  ಇದನ್ನೂ ಓದಿ:ಅಪ್ಪು ಡೋಂಟ್‍ವರಿ, ನೀವು ಓದಿಲ್ಲ ಆದ್ರೂ ನೀವೊಬ್ಬರು ಐಕಾನ್: ಬೊಮ್ಮಾಯಿ

  • ಚಾಮುಂಡಿ ಬೆಟ್ಟದಲ್ಲಿ ಜನಸ್ತೋಮ – ಇಂದು ಸೇರಿದಂತೆ 3 ದಿನ ಭಕ್ತರ ಪ್ರವೇಶಕ್ಕೆ ನಿರ್ಬಂಧ

    ಚಾಮುಂಡಿ ಬೆಟ್ಟದಲ್ಲಿ ಜನಸ್ತೋಮ – ಇಂದು ಸೇರಿದಂತೆ 3 ದಿನ ಭಕ್ತರ ಪ್ರವೇಶಕ್ಕೆ ನಿರ್ಬಂಧ

    ಮೈಸೂರು: ಶ್ರಾವಣ ಮಾಸದ ಎರಡನೇ ಶುಕ್ರವಾರ ದಿನವಾದ ಇಂದು ವರಮಹಾಲಕ್ಷ್ಮೀ ಹಬ್ಬವನ್ನು ರಾಜ್ಯದೆಲ್ಲೆಡೆ ಬಹಳ ಸಡಗರದಿಂದ ಜನರು ಆಚರಿಸುತ್ತಿದ್ದಾರೆ. ಹಬ್ಬದ ವಿಶೇಷ ದಿನವಾದ ಇಂದು ಮೈಸೂರು ಜಿಲ್ಲೆಯ ಚಾಮುಂಡಿ ಬೆಟ್ಟಕ್ಕೆ ಭಕ್ತಸಾಗರವೇ ಹರಿದು ಬರುತ್ತಿರುವುದರಿಂದ ಮೂರು ದಿನ ಚಾಮುಂಡಿ ಬೆಟ್ಟಕ್ಕೆ ಪ್ರವೇಶವನ್ನು ನಿಷೇಧಿಸಲಾಗಿದೆ.

    ವರಮಹಾಲಕ್ಷ್ಮೀ ಹಬ್ಬದ ದಿನ ಸಾಮಾನ್ಯವಾಗಿ ದೇವಿಯ ದರ್ಶನಕ್ಕಾಗಿ ಹೆಚ್ಚಾಗಿ ಭಕ್ತರು ಮುಗಿಬೀಳುತ್ತಾರೆ. ಈ ವಿಶೇಷ ದಿನದಂದು ನಾಡದೇವತೆ ತಾಯಿ ಚಾಮುಂಡೇಶ್ವರಿ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವ ಕಾರಣ ಕೊರೊನಾ ಮುನ್ನೆಚ್ಚರಿಕಾ ಕ್ರಮವಾಗಿ ಮೈಸೂರು ಜಿಲ್ಲಾಡಳಿತ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಿದೆ. ಇದನ್ನೂ ಓದಿ: ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ ಶಿವಣ್ಣ

    ಈಗಾಗಲೇ ಕೊರೊನಾದಿಂದ ವೀಕೆಂಡ್ ಕರ್ಫ್ಯೂ ಹಾಗೂ ಭಾನುವಾರ ಬೆಟ್ಟಕ್ಕೆ ನಿರ್ಬಂಧ ಹೇರಲಾಗಿದೆ. ಜೊತೆಗೆ ಶ್ರಾವಣ ಶನಿವಾರ ಹಿನ್ನಲೆ ಚಿಕ್ಕ ತಿರುಪತಿ ಎಂದೇ ಪ್ರಸಿದ್ಧಿಯಾಗಿರುವ ವಿವಿಪುರಂನ ವೆಂಕಟೇಶ್ವರ ಸ್ವಾಮಿ ದೇಗುಲಕ್ಕೂ ಪ್ರವೇಶವನ್ನು ನಿಷೇಧಿಸಲಾಗಿದೆ. ಇದನ್ನೂ ಓದಿ:ಚಾಮುಂಡಿ ಬೆಟ್ಟಕ್ಕೆ ಡಿ ಬಾಸ್ ಭೇಟಿ- ಮುಗಿಬಿದ್ದ ಅಭಿಮಾನಿಗಳು

  • ನೋಟಿನ ಕಂತೆಗಳ ಮೇಲೆ ವರಮಹಾಲಕ್ಷ್ಮಿ ಪೂಜಿಸಿದ ಬಿಡಿಎ ಬ್ರೋಕರ್

    ನೋಟಿನ ಕಂತೆಗಳ ಮೇಲೆ ವರಮಹಾಲಕ್ಷ್ಮಿ ಪೂಜಿಸಿದ ಬಿಡಿಎ ಬ್ರೋಕರ್

    ಬೆಂಗಳೂರು: ಬಿಡಿಎ ಬ್ರೋಕರ್‍ವೊಬ್ಬರ ಮನೆಯಲ್ಲಿ ವರಮಹಾಲಕ್ಷ್ಮಿ ಪೂಜೆಗೆ ಕಂತೆ ಕಂತೆ ನೋಟುಗಳು ಹಾಗೂ ಕೆಜಿಗಟ್ಟಲೆ ಚಿನ್ನದ ಆಭರಣಗಳನ್ನ ಇಟ್ಟಿರೋ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಬಿಡಿಎ ಬ್ರೋಕರ್ ಸುರೇಶ್ ಅಲಿಯಾಸ್ ಸೂರಿ ಮನೆಯಲ್ಲಿ ಗರಿಗರಿ ನೋಟುಗಳ ಕಂತೆ ಮೇಲೆ ಲಕ್ಷ್ಮೀ ವಿಗ್ರಹವಿಟ್ಟು ಪೂಜೆ ಮಾಡಲಾಗಿದೆ. ಸೂರಿ ಎಚ್‍ಎಸ್‍ಆರ್ ಲೇಔಟ್ ಬಿಡಿಎ ವಿಭಾಗದಲ್ಲಿ ಬ್ರೋಕರ್ ಕೆಲಸ ಮಾಡುತ್ತಿದ್ದು, ಇವರಿಗೆ ಕಾರ್ನರ್ ಕಟ್ಟಿಂಗ್ ಸೂರಿ ಎನ್ನುವ ಅಡ್ಡ ಹೆಸರಿದೆ. ಇದೀಗ ವರಮಹಾಲಕ್ಷ್ಮಿ ಹಬ್ಬದಂದು ಲಕ್ಷ್ಮಿ ಪೂಜೆಗೆ ಸಾಲಾಗಿ ಜೋಡಿಸಿರುವ ಹಣದ ಮುಂದೆ ರಾಜಾರೋಷವಾಗಿ ಫೋಸ್ ಕೊಟ್ಟು ಪೀಕಲಾಟಕ್ಕೆ ಸಿಲುಕಿದಂತಾಗಿದೆ.

    ಕಾರ್ನರ್ ಕಟಿಂಗ್ ಸೈಟ್, ಬದಲಿ ಸೈಟ್ ಹೆಸರಿನಲ್ಲಿ ಸೂರಿ ಕೋಟ್ಯಾಂತರ ರುಪಾಯಿ ಹಣ ಗಳಿಕೆ ಮಾಡಿದ್ದಾರೆ ಎನ್ನುವ ಆರೋಪ ಈಗ ಬಲವಾಗಿ ಕೇಳಿಬಂದಿದೆ. ಪಾರ್ಕ್ ಗೆ ಅಂತ ಮೀಸಲಿಟ್ಟಿದ್ದ ಜಾಗದಲ್ಲಿ ನಕಲಿ ಪತ್ರ ಸೃಷ್ಟಿಸಿ ಸೈಟ್‍ಗಳಾಗಿ ಕನ್ವರ್ಟ್ ಮಾಡಿ ಮಾರಿದ್ದ ಆರೋಪ ಇವರ ಮೇಲಿದೆ.