Tag: ವರಲಕ್ಷ್ಮಿ ಗುಂಡೂರಾವ್

  • ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ತಾಯಿ ನಿಧನ

    ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ತಾಯಿ ನಿಧನ

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ. ಗುಂಡೂರಾವ್ ಪತ್ನಿ ಹಾಗೂ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಅವರ ತಾಯಿ ವರಲಕ್ಷ್ಮಿ ಗುಂಡೂರಾವ್ ಅವರು ವಿಧಿವಶರಾಗಿದ್ದಾರೆ.

    ಕೋವಿಡ್ ಸಂಬಂಧಿ ಸಮಸ್ಯೆಗಳಿಂದ ವರಲಕ್ಷ್ಮಿ ಅವರು ಬಳಲುತ್ತಿದ್ದರು ಎನ್ನಲಾಗಿದೆ. ಮೃತರ ಅಂತ್ಯಕ್ರಿಯೆ ಇಂದು ದೇವನಹಳ್ಳಿ ತೋಟದಲ್ಲಿ ನಡೆಯಲಿದೆ.

    ವರಲಕ್ಷ್ಮಿ ಸಾವಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ದಿವಂಗತ ಗುಂಡೂರಾವ್ ಅವರ ಪತ್ನಿ ವರಲಕ್ಷ್ಮಿ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ದಿನೇಶ್ ಗುಂಡೂರಾವ್ ಹಾಗೂ ಅವರ ಕುಟುಂಬಕ್ಕೆ ದುಃಖಭರಿಸುವ ಶಕ್ತಿಯನ್ನು ಆ ದೇವರು ನೀಡಲು ಎಂದು ತಿಳಿಸಿದ್ದಾರೆ.

    ನನ್ನ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ. ಅವರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಪುತ್ರ ದಿನೇಶ್ ಗುಂಡೂರಾವ್ ಮತ್ತು ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ದೊರಕಲಿ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.