ಬಿಗ್ ಬಾಸ್ (Big Boss) ಮನೆಯಿಂದ ಬಂದಿರುವ ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಹವಾ ಕ್ರಿಯೇಟ್ ಮಾಡುತ್ತಿರುವ ವರ್ತೂರ್ ಸಂತೋಷ್ (Varthur Santhosh) ಅವರನ್ನು ನಿನ್ನೆ ಅವರ ಮನೆಯಲ್ಲಿ ಸನ್ಮಾನ ಮಾಡಿದ್ದ ವರ್ತೂರು ಠಾಣೆಯ ಎಸ್.ಐ ತಿಮ್ಮರಾಯಪ್ಪ (Thimmarayappa) ಅವರನ್ನು ಎತ್ತಂಗಡಿ ಮಾಡಲಾಗಿದೆ.
ವರ್ತೂರು ಠಾಣೆಯಿಂದ ತಿಮ್ಮರಾಯಪ್ಪ ಅವರನ್ನು ಆಡುಗೋಡಿ ಠಾಣೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ನಿನ್ನ ವರ್ತೂರು ಮನೆಗೆ ತೆರಳಿದ್ದ ತಿಮ್ಮರಾಯಪ್ಪ, ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಸನ್ಮಾನ ಮಾಡಿದ್ದರು. ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ಕೇವಲ ವರ್ತೂರು ಪೊಲೀಸ್ ಠಾಣೆಯ ಎಸ್ಐ ತಿಮ್ಮರಾಯಪ್ಪ ಮಾತ್ರವಲ್ಲ, ಠಾಣೆಯ ಸಿಬ್ಬಂದಿ ಕೂಡ ಈ ಸನ್ಮಾನ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ನಡೆ ಆಕ್ರೋಶಕ್ಕೆ ಕಾರಣವಾಗಿತ್ತು. ಇತ್ತೀಚಿಗೆ ಕೆಲ ತಿಂಗಳ ಹಿಂದೆ ವರ್ತೂರು ಸಂತೋಷ್ ಹುಲಿ ಉಗುರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿಗೆ ಹೋಗಿ ಬಂದಿದ್ದ.
ವರ್ತೂರು ಸಂತೋಷ್ ಜೈಲಿಗೆ ಹೋಗಿ ಬಂದಿರೋ ವಿಚಾರ ಗೊತ್ತಿದ್ದರು ಸಹ ಸನ್ಮಾನ ಮಾಡಿರುವ ಪೊಲೀಸರ ನಡೆಗೆ ಆಕ್ರೋಶ ವ್ಯಕ್ತವಾಗಿತ್ತು. ಸ್ವತಃ ಹಿರಿಯ ಅಧಿಕಾರಿಗಳು ಕೂಡ ಅಸಮಾಧಾನ ವ್ಯಕ್ತ ಪಡಿಸಿದ್ದರು. ಅದರಲ್ಲೂ ಯೂನಿಫಾರ್ಮ್ ನಲ್ಲಿಯೇ, ಸಿಬ್ಬಂದಿ ಗಳ ಜೊತೆಗೆ ಹೋಗಿ ಅಧಿಕಾರಿ ಸನ್ಮಾನ ಮಾಡಿದ್ದು ಬೇಸರಕ್ಕೂ ಕಾರಣವಾಗಿತ್ತು.
ಕಳೆದ ವಾರದ ವೀಕೆಂಡ್ ಎಪಿಸೋಡ್‌ನ ಎಲಿಮಿನೇಷನ್ ಟೈಮಲ್ಲಿ ವರ್ತೂರ್ ಸಂತೋಷ್ (Varthur Santhosh), ಸುದೀಪ್ (Sudeep) ಅವರಿಗೆ, ಬಿಗ್‌ಬಾಸ್ (Bigg Boss Kannada) ಮನೆಯ ಸದಸ್ಯರಿಗೆ, ತಮಗೆ ಓಟ್ ಹಾಕಿದ ಹದಿಮೂರು ಲಕ್ಷಕ್ಕಿಂತ ಅಧಿಕ ಜನರಿಗೆ ಒಂದು ಬಿಗ್ ಶಾಕ್ ನೀಡಿದ್ದರು. ‘ನನಗೆ ಹೊರಗೆ ನಡೆದ ಘಟನೆಯನ್ನು ಮರೆತು ಆಡಬೇಕು ಎಂದು ಇಲ್ಲಿಗೆ ಬಂದೆ. ಆದರೆ ನನಗೆ ಅದರಿಂದ ಹೊರಗೆ ಬರಲು ಸಾಧ್ಯಾಗುತ್ತಿಲ್ಲ. ಹಾಗಾಗಿ ನಾನು ಷೋದಿಂದ ಹೊರಗೆ ಹೋಗಲು ಬಯಸುತ್ತೇನೆ’ ಎಂದು ಹೇಳಿದರು. ಇದರಿಂದ ಎಲ್ಲರಿಗೂ ಶಾಕ್ ಆಯಿತು.
ಕಿಚ್ಚಕೂಡ, ‘ನೀವು ಜನರ ಪ್ರೀತಿಯ ವಿರುದ್ಧ ಹೋಗ್ತಿದ್ದೀರಾ’ ಎಚ್ಚರಿಸಿದರು. ಕೊನೆಯಲ್ಲಿ, ‘ಮನೆಯೊಳಗೆ ಇರ್ತೀರೋ ಬಿಡ್ತೀರೋ ನಿಮಗೆ ಬಿಟ್ಟಿದ್ದು. ಆದರೆ ನನಗಂತೂ ಡಿಸಪಾಯಿಂಟ್ ಆಗಿದೆ’ ಎಂದು ಹೇಳಿ ಬೇಸರದಿಂದಲೇ ವೇದಿಕೆ ಬಿಟ್ಟು ಹೊರನಡೆದರು. ಇದೀಗ ವರ್ತೂರು ಸಂತೋಷ್ ಅವರನ್ನು ಮನೆಯೊಳಗೆ ಉಳಿದುಕೊಳ್ಳುವಂತೆ ಮನವೊಲಿಸಲು ಇಡೀ ಮನೆಯ ಸದಸ್ಯರೆಲ್ಲರೂ ಪ್ರಯತ್ನಿಸುತ್ತಿದ್ದಾರೆ.
ಇದೇ ಹೊತ್ತಿನಲ್ಲಿ ಬಿಗ್‌ಬಾಸ್ ಮನೆಗೆ ಮತ್ತೊಬ್ಬರು ಗೆಸ್ಟ್ ಎಂಟ್ರಿ ಕೊಟ್ಟಿದ್ದಾರೆ. ಬಿಗ್‌ಬಾಸ್ ಮನೆಯ ಬಾಗಿಲು ತೆರೆಯುತ್ತಿದ್ದ ಹಾಗೆಯೇ ಜನಪ್ರಿಯ ಧಾರಾವಾಹಿ ನಟಿ, ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ, ‘ಭಾಗ್ಯಲಕ್ಷ್ಮಿ’ಯ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ ಸುಷ್ಮಾ ಕೆ ರಾವ್ (Sushma K Rao) ಬಿಗ್‌ಬಾಸ್ ಮನೆಯೊಳಗೆ ಪ್ರವೇಶಿಸಿದ್ದಾರೆ.
ಹಾಗಾದರೆ ಈ ಎಂಟ್ರಿ ದೀಪಾವಳಿ ಸಂಭ್ರಮದ ಭಾಗವೇ? ಸುಷ್ಮಾ ದಿರಿಸೇನೋ ಹಬ್ಬದ ಸಂಭ್ರಮವನ್ನು ಪ್ರತಿನಿಧಿಸುವ ಹಾಗೆಯೇ ಇದೆ. ಆದರೆ ಅವರು ಮನೆಯೊಳಗೆ ತೆರಳಿ ಹೋಗಿದ್ದು ನೇರವಾಗಿ ವರ್ತೂರ್ ಸಂತೋಷ್ ಬಳಿಗೆ. ‘ನಾನು ನಿಮ್ಮ ಅಕ್ಕ ಆಗಿ ಹೇಳ್ತಿದೀನಿ. ನನ್ನಿಂದ ಆಗಲ್ಲ ಅನ್ನೋದನ್ನು ಮನಸಿಂದ ತೆಗೆದುಬಿಡಿ’ ಎಂದು ಪಕ್ಕಕೂತು ಕನ್ವಿನ್ಸ್ ಮಾಡುತ್ತಿರುವುದು JioCinema ಬಿಡುಗಡೆ ಮಾಡಿರುವ ಬೆಳಗಿನ ಪ್ರೊಮೊದಲ್ಲಿ ಜಾಹೀರಾಗಿದೆ.
ಹಾಗಾದ್ರೆ ಸುಷ್ಮಾ ವಿವೇಕದ ಮಾತುಗಳಿಗೆ ವರ್ತೂರ್ ತಲೆಬಾಗುತ್ತಾರಾ? ಮನೆಯೊಳಗೇ ಉಳಿದುಕೊಳ್ಳಲು ನಿರ್ಧರಿಸುತ್ತಾರಾ? ತಮಗೆ ವೋಟ್ ಮಾಡಿದ ಮೂವತ್ನಾಲ್ಕು ಲಕ್ಷಕ್ಕಿಂತ ಅಧಿಕ ಜನರ ಮನಸ್ಸಿಗೆ ನೆಮ್ಮದಿ ತರುತ್ತಾರಾ? ಕಾದು ನೋಡಬೇಕು.
ಹುಲಿ ಉಗುರು ಲಾಕೆಟ್ ಕೇಸ್‌ನಿಂದ (Tiger Claw Pendant) ವರ್ತೂರು ಸಂತೋಷ್‌ಗೆ (Varhtur Santhosh) ಈಗಾಗಲೇ ಜಾಮೀನು ಸಿಕ್ಕಿದೆ. ಆದರೂ ದೊಡ್ಮನೆಗೆ ಸಂತೋಷ್ ಎಂಟ್ರಿ ಕೊಟ್ಟಿಲ್ಲ. ಅಂದುಕೊಂಡಂತೆ ಆಗಿದ್ದರೆ ನಿನ್ನೆಯೇ ವರ್ತೂರು ಸಂತೋಷ್ ಬಿಗ್ ಬಾಸ್ ಮನೆ ಪ್ರವೇಶ ಮಾಡಬೇಕಿತ್ತು. ಜೈಲಿನಿಂದ ಬಿಡುಗಡೆಯಾಗಿ 24 ಗಂಟೆ ಕಳೆದರೂ ಇನ್ನೂ ಸಂತೋಷ್ ದೊಡ್ಮನೆಗೆ ಎಂಟ್ರಿಕೊಟ್ಟಿಲ್ಲ. ಮಾದ್ಯಮದವರಿಂದ ತಪ್ಪಿಸಿಕೊಂಡು ರಾತ್ರೋರಾತ್ರಿ ಹೋದವರು ಯಾಕೆ ಬಿಗ್ ಬಾಸ್ ಮನೆಗೆ (Bigg Boss Kannada 10) ಎಂಟ್ರಿ ಕೊಟ್ಟಿಲ್ಲ ಎನ್ನುವ ಪ್ರಶ್ನೆ ಎಲ್ಲರದ್ದು.
ಹಾಗಾದರೆ, ಸಂತೋಷ್ ಬಿಗ್ ಬಾಸ್ ಮನೆ(Bigg Boss House) ಪ್ರವೇಶ ಮಾಡೋದಿಲ್ಲವಾ?? ತಡ ಯಾಕೆ ಆಗುತ್ತಿದೆ? ಕಾನೂನು ಸಮಸ್ಯೆ ಏನಾದರು ಎದುರಾಗಿದ್ಯಾ? ಮತ್ತೆ ಮನೆ ಪ್ರವೇಶ ಮಾಡೋಕೆ ಅವರ ಮನಸ್ಥಿತಿ ಚೆನ್ನಾಗಿಲ್ಲವಾ? ಹೀಗೆ ಹತ್ತಾರು ಪ್ರಶ್ನೆಗಳು ಎದುರಾಗಿವೆ. ಯಾವುದೇ ಸಮಸ್ಯೆ ಇಲ್ಲದೇ ಇದ್ದರೆ ಇನ್ನೂ ಯಾಕೆ ಅವರನ್ನು ಮನೆ ಒಳಗೆ ಕಳುಹಿಸಿಲ್ಲ ಎನ್ನುವ ಪ್ರಶ್ನೆ ಮೂಡಿದೆ.
ಶುಕ್ರವಾರ (ಅ.27) ರಾತ್ರಿಯೇ ಬಿಗ್ ಬಾಸ್ ಟೀಮ್ ಸಂತೋಷ್ ಅವರನ್ನ ತಮ್ಮ ವಶಕ್ಕೆ ಪಡೆದಿದ್ದಾರೆ. ಮೆಡಿಕಲ್ ಟೆಸ್ಟ್ ಕೂಡ ಮಾಡಿಸಲಾಗಿದೆ. ಮತ್ತೆ ಬಿಗ್ ಬಾಸ್ ಮನೆಗೆ ಕಳುಹಿಸುತ್ತಿರುವ ಕುರಿತು ಅವರ ಕುಟುಂಬಕ್ಕೂ ಮಾಹಿತಿ ನೀಡಿದೆ. ಆದರೆ, ಜಾಮೀನಿನಲ್ಲಿರುವ ಅಂಶಗಳ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲಾಗುತ್ತಿದೆ ಎನ್ನುವ ಮಾಹಿತಿ ಸಿಕ್ಕಿದೆ. ಜಾಮೀನು ಮೇಲೆ ಸಂತೋಷ್ ಜೈಲಿನಿಂದ ಹೊರ ಬಂದಿರುವ ಕಾರಣದಿಂದಾಗಿ ಕಾನೂನು ತಜ್ಞರ ಸಲಹೆ ಪಡೆದುಕೊಳ್ಳಲಾಗುತ್ತಿದೆ.
ಸಿಕ್ಕಿರುವ ಮಾಹಿತಿ ಪ್ರಕಾರ, ಇಂದು ಸಂತೋಷ್ ಬಿಗ್ ಬಾಸ್ ಮನೆಯನ್ನು ಪ್ರವೇಶ ಮಾಡಲಿದ್ದಾರೆ. ಇಂದು ಸಂಜೆ ಅವರನ್ನು ಅಧಿಕೃತವಾಗಿ ಎಂಟ್ರಿ ಕೊಡಿಸಲು ಟೀಮ್ ಸಿದ್ಧತೆ ಮಾಡಿಕೊಂಡಿದೆ. ಮತ್ತೆ ಸಂತೋಷ್ ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹಳ್ಳಿಕಾರ್ ದುನಿಯಾ ಇಂದಿನಿಂದ ದೊಡ್ಮನೆಯಲ್ಲಿ ಶುರುವಾಗಲಿದೆ. ಮನೆಯಲ್ಲಿ ಅವರು ಹೇಗಿರಲಿದ್ದಾರೆ ಅನ್ನೋದೋ ಸದ್ಯಕ್ಕಿರೋ ಸಸ್ಪೆನ್ಸ್ ಆಗಿದೆ. ಇದನ್ನೂ ಓದಿ:ಖ್ಯಾತ ಕಬ್ಬಡಿ ಆಟಗಾರ ‘ಅರ್ಜುನ್ ಚಕ್ರವರ್ತಿ’ ಬಯೋಪಿಕ್ ಸಿನಿಮಾದ ಫಸ್ಟ್ ಲುಕ್ ಔಟ್
ಬಿಗ್ ಬಾಸ್ ರೂಲ್ಸ್ ಪ್ರಕಾರ ಹೊರಹೊಗುವಂತೆ ಇಲ್ಲ. ಇತರರ ಬಳಿ ಮಾತನಾಡುವಂತಿಲ್ಲ. ಒಂದ್ ವೇಳೆ ಬಿಗ್ ಬಾಸ್ ಮನೆಗೆ ಹೋದರೆ ಜಾಸ್ತಿ ದಿನಗಳ ಉಳಿಯೋದು ಡೌಟ್. ಈ ಎಲ್ಲಾ ಕುತೂಹಲಕ್ಕೂ ಬಿಗ್ ಬಾಸ್ ಶೋನಲ್ಲಿ ಉತ್ತರ ಸಿಗಲಿದೆ. ಅಲ್ಲಿಯವರೆಗೂ ಕಾದುನೋಡಬೇಕಿದೆ.
ನಟಿ ಅಮೂಲ್ಯ (Amulya) ಅವರ ಇಬ್ಬರು ಮಕ್ಕಳ ಕೊರಳಲ್ಲೂ ಹುಲಿ ಉಗುರಿನ (Tiger Claw) ಪೆಂಡೆಂಟ್ ಇದೆ. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಅನೇಕರು ಅಮೂಲ್ಯ ಅವರಿಗೆ ಪ್ರಶ್ನೆ ಮಾಡಿದ್ದರು. ಈ ಕುರಿತಂತೆ ಅಮೂಲ್ಯ ಸ್ಪಷ್ಟನೆ ನೀಡಿದ್ದಾರೆ. ಅವುಗಳು ಅಸಲಿ ಉಗುರುಗಳೇ ಅಲ್ಲ ಎಂದು ಹೇಳಿದ್ದಾರೆ.
ಮಕ್ಕಳ ನಾಮಕರಣದ ವೇಳೆ ಧರಿಸಿದ್ದ ಪೆಂಡೆಂಟ್ ನಲ್ಲಿಯ ಹುಲಿ ಉಗುರು ಅಸಲಿ ಅಲ್ಲ. ಸಿಂಥೆಟಿಕ್ ಹುಲಿ ಉಗುರು ಅವು. ಅಂತಹ ನಕಲಿ ಉಗುರುಗಳು 500-600ಗೆ ಸಿಗುತ್ತವೆ. ಅರಣ್ಯ ಅಧಿಕಾರಿಗಳು ಪರಿಶೀಲನೆಗೆ ಬಂದರೆ ಖಂಡಿತಾ ಅವುಗಳನ್ನು ನೀಡುತ್ತೇನೆ ಎಂದಿದ್ದಾರೆ ನಟಿ ಅಮೂಲ್ಯ. ಉಗುರುಗಳು ಅಸಲಿಯಲ್ಲ ಎನ್ನುವುದನ್ನು ಸ್ಪಷ್ಟ ಪಡಿಸಿದ್ದಾರೆ.
ವರ್ತೂರ್ ಸಂತೋಷ್ (Varthur Santhosh) ಬಂಧನವಾಗುತ್ತಿದ್ದಂತೆಯೇ ಹುಲಿ ಉಗುರಿನ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಅದರಲ್ಲೂ ಸೆಲೆಬ್ರಿಟಿಗಳ ಮೇಲೆ ಸಾಮಾನ್ಯ ಜನರು ಮುಗಿ ಬಿದ್ದಿದ್ದಾರೆ. ಸಿನಿಮಾ ನಟರು, ಸಂನ್ಯಾಸಿಗಳು, ರಾಜಕಾರಣಿಗಳು ಹೀಗೆ ಅನೇಕರು ಹುಲಿ ಉಗುರು ಧರಿಸಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಎಲ್ಲರೂ ತಮ್ಮದೇ ಆದ ರೀತಿಯಲ್ಲಿ ಸಮರ್ಥನೆಯನ್ನು ಮಾಡುತ್ತಿದ್ದಾರೆ.
ವರ್ತೂರ್ ಸಂತೋಷ್ ಮತ್ತು ಅರಣ್ಯಾಧಿಕಾರಿ ದರ್ಶನ್ ಹಾಗೂ ಇಬ್ಬರು ಅರ್ಚಕರನ್ನು ಈವರೆಗೂ ಬಂಧಿಸಲಾಗಿದೆ. ಸಂತೋಷ್ ಗೆ ನಿನ್ನೆ ಜಾಮೀನು ಮಂಜೂರಾಗಿ ಜೈಲಿನಿಂದ ಹೊರ ಬಂದಿದ್ದಾರೆ. ಉಳಿದಂತೆ ಅರಣ್ಯಾಧಿಕಾರಿಗಳು ತನಿಖೆಯನ್ನು ಮುಂದುವರೆಸಿದ್ದಾರೆ.
ಬೆಂಗಳೂರು: ಹುಲಿ ಉಗುರು (Tiger Claws) ಲಾಕೆಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ವರ್ತೂರು ಸಂತೋಷ್‌ಗೆ (Varthur Santhosh) ಜಾಮೀನು ಮಂಜೂರಾಗಿದೆ.
2ನೇ ಎಸಿಜೆಎಂ ನ್ಯಾಯಾಲಯ 4 ಸಾವಿರ ನಗದು ಶ್ಯೂರಿಟಿ ಅಥವಾ ಒಬ್ಬ ವ್ಯಕ್ತಿಯ ಶ್ಯೂರಿಟಿ, ತನಿಖಾಧಿಕಾರಿಗಳು ಸೂಚಿಸಿದಾಗ ವಿಚಾರಣೆಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಿ ಜಮೀನು (Bail) ಮಂಜೂರು ಮಾಡಿದೆ.
ಜಾಮೀನು ಸಿಕ್ಕಿದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಸಂತೋಷ್ ಇಂದು ಸಂಜೆ 7 ಗಂಟೆ ಬಳಿಕ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಹುಲಿ ಉಗುರಿನ ಕಂಟಕ – ಅರಣ್ಯಾಧಿಕಾರಿ ಅಮಾನತು
ಹಳ್ಳಿಕಾರ್ ರಾಸುಗಳ (Hallikar Cow) ರಕ್ಷಣೆಯ ಮೂಲಕ ಗುರುತಿಸಿಕೊಂಡಿದ್ದ ಸಂತೋಷ್ ಅವರು 10ನೇ ಅವೃತ್ತಿಯ ಬಿಗ್ ಬಾಸ್ (Bigg Boss) ಮನೆಗೆ ಸ್ಪರ್ಧಿಯಾಗಿ ಪ್ರವೇಶ ಮಾಡಿದ್ದರು.
ಕುತ್ತಿಗೆಯಲ್ಲಿ ಸಂತೋಷ್ ಹುಲಿಯ ಉಗುರು ಇರುವ ಲಾಕೆಟ್ ಹಾಕಿಕೊಂಡಿದ್ದರು. ಈ ಕಾರಣಕ್ಕೆ ಬಿಗ್ ಬಾಸ್ ಮನೆಯಿಂದ ಹೊರ ಕರೆತಂದು ರಾಮೋಹಳ್ಳಿ ಅರಣ್ಯಾಧಿಕಾರಿಗಳು ಸಂತೋಷ್ ಅವರನ್ನು ಬಂಧಿಸಿದ್ದರು.
ವರ್ತೂರು ಸಂತೋಷ್ ಅವರು ಹಲವು ಪ್ರಾಣಿಗಳನ್ನು ಸಾಕಿದ್ದು, ಹಳ್ಳಿಕಾರ್ ರಾಸು ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದರು. ಅಷ್ಟೇ ಅಲ್ಲದೇ ಅಖಿಲ ಭಾರತ ಹಳ್ಳಿಕಾರ್ ತಳಿ ಸಂರಕ್ಷಣಾ ಸಮಿತಿಯ ಅಧ್ಯಕ್ಷರಾಗಿದ್ದಾರೆ.
ಹುಲಿ ಉಗುರಿನ ಪೆಂಡೆಂಟ್ ಹಾಕಿದ್ದರು ಎನ್ನುವ ಕಾರಣಕ್ಕಾಗಿ ‘ಬಿಗ್ ಬಾಸ್’ (Bigg Boss Kannada) ಸ್ಪರ್ಧಿ ವರ್ತೂರ್ ಸಂತೋಷ್ (Varthur santhosh) ಮೊನ್ನೆಯಷ್ಟೇ ಅರೆಸ್ಟ್ ಆಗಿದ್ದಾರೆ. ಈ ಬೆನ್ನಲ್ಲೇ ದರ್ಶನ್ ಅವರಿಗೂ ಹುಲಿ ಉಗುರಿನ ಸಂಕಷ್ಟ ಎದುರಾಗಿದೆ. ಆರ್‌ಆರ್ ನಗರದ ದರ್ಶನ್ (Darshan) ನಿವಾಸಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ. ಇದನ್ನೂ ಓದಿ:ಇಸ್ರೇಲ್ ರಾಯಭಾರಿ ನೌರ್ ಗಿಲೋನ್ ಭೇಟಿಯಾದ ನಟಿ ಕಂಗನಾ ರಣಾವತ್
ವರ್ತೂರ್ ಸಂತೋಷ್ ಬಂಧನವಾಗ್ತಿದ್ದಂತೆ ಸ್ಯಾಂಡಲ್‌ವುಡ್ ಸೆಲೆಬ್ರಿಟಿಗಳಿಗೂ ಹುಲಿ ಉಗುರಿನ ಕಂಟಕ ಎದುರಾಗಿದೆ. ದರ್ಶನ್ ಕೂಡ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಫೋಟೋ ವೈರಲ್ ಆಗಿತ್ತು. ಈ ನಿಮಿತ್ತ ನಟನ ಮನೆಗೆ ಮೂವರು ಅಧಿಕಾರಿಗಳಿಂದ ಹುಲಿ ಉಗುರಿಗಾಗಿ ಭೇಟಿ ನೀಡಿದ್ದಾರೆ. ಸದ್ಯ ದರ್ಶನ್ ಮೈಸೂರಿನಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ. ದರ್ಶನ್‌ಗೆ ಅರಣ್ಯಾಧಿಕಾರಿಗಳು ನೋಟಿಸ್ ನೀಡಿದ್ದಾರೆ.
ದರ್ಶನ್ ಬಳಿಕ ರಾಜ್ಯಸಭಾ ಸದಸ್ಯ ಜಗ್ಗೇಶ್ ನಿವಾಸಕ್ಕೆ ಅರಣ್ಯಾಧಿಕಾರಿಗಳ ಭೇಟಿ ನೀಡಿದ್ದಾರೆ. ಸದ್ಯ ಜಗ್ಗೇಶ್ ಹುಟ್ಟುರಿನಲ್ಲಿದ್ದಾರೆ. ಈ ಹಿನ್ನೆಲೆ ಅವರ ಪತ್ನಿ ಪರಿಮಳರಿಗೆ ನೋಟೀಸ್ ಕೊಡುವ ಸಾಧ್ಯತೆಯಿದೆ. ಇನ್ನೂ ಹುಲಿಯುಗುರಿನ ಪೆಂಡೆಂಟ್ ಮನೆಯಲ್ಲಿದ್ದರೆ ವಶಕ್ಕೆ ಪಡೆಯುತ್ತಾರೆ. ಒಂದು ವೇಳೆ ಮನೆಯಲ್ಲಿ ಪೆಂಡೆಂಟ್ ಇಲ್ಲ ಅಂದ್ರೆ ಆ ಬಗ್ಗೆ ಮಾಹಿತಿ ಕಲೆಹಾಕಲಿದ್ದಾರೆ. ಅಧಿಕಾರಿಗಳು.
ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವ ವರ್ತೂರ್ ಸಂತೋಷ್ (Varthur Santhosh) ಹೇಳಿದ್ದಾರೆ ಎನ್ನಲಾದ ಮಾಹಿತಿಯನ್ನು ಸಖತ್ ಸೌಂಡ್ ಮಾಡುತ್ತಿದೆ. ತಾವು ಧರಿಸಿದ್ದ ಹುಲಿ ಉಗುರನ್ನು (Tiger Claw) ಅವರು 20 ಸಾವಿರ ರೂಪಾಯಿ ಕೊಟ್ಟು ಖರೀದಿಸಿದ್ದರಂತೆ. ಹಾಗಂತ ಅರಣ್ಯಾಧಿಕಾರಿಗಳಿಗೆ ಸಂತೋಷ್ ಹೇಳಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ.
ಇಕ್ಕಟ್ಟಿನಲ್ಲಿ ಸೆಲೆಬ್ರಿಟಿಗಳು
ನಟ, ಯುವರಾಜಕಾರಣಿ ನಿಖಿಲ್ ಕುಮಾರ್ ಸ್ವಾಮಿ (Nikhil) ಅವರು ಕೂಡ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದಾರೆ ಎನ್ನಲಾದ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್ ಮಾಡಿದ್ದರು. ಸೆಲೆಬ್ರಿಟಿಗಳ ಮೇಲೆ ದೂರು ನೀಡಲು ಕೆಲವರು ಮುಂದಾಗಿದ್ದಾರೆ. ಮಾಧ್ಯಮಗಳಲ್ಲಿ ಈ ಕುರಿತು ಸಾಕಷ್ಟು ಸದ್ದು ಆಗುತ್ತಿದ್ದಂತೆಯೇ ನಿಖಿಲ್ ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸ್ಪಷ್ಟನೆ ನೀಡಿದ್ದಾರೆ.
‘ನನ್ನ ಮದುವೆ ಸಮಯದಲ್ಲಿ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ. ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೊರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆ’ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಸ್ಯಾಂಡಲ್ ವುಡ್ ಸಿಲೆಬ್ರಿಟಿಗಳು ಅಲ್ಲದೇ, ವಿನಯ್ ಗುರೂಜಿ ಹುಲಿ ಚರ್ಮದ ಮೇಲೆ ಕೂತಿರುವ ಮತ್ತು ಅರ್ಚಕರೊಬ್ಬರು ಹುಲಿ ಉಗುರಿನ ಸರ ಹಾಕಿರುವ ಕುರಿತಾಗಿಯೂ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಹೀಗಾಗಿ ಅರಣ್ಯಾಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಎಲ್ಲರಿಗೂ ನೋಟಿಸ್ ಕೊಡುವುದಾಗಿ ಉನ್ನತ ಮಟ್ಟದ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಈ ಕುರಿತಂತೆ ಅರಣ್ಯಾ ಇಲಾಖೆಯ ಅಧಿಕಾರಿಗಳ ಕಚೇರಿಗೆ ಸಾಲು ಸಾಲು ದೂರುಗಳು ಬರುತ್ತಿವೆ. ಜನತಾ ಪಕ್ಷದ ನಾಗೇಶ್ ಅವರು ಜಗ್ಗೇಶ್ ಮತ್ತು ದರ್ಶನ್ ಅವರ ಮೇಲೆ ದೂರು ನೀಡಿದ್ದು, ‘ಬಿಜೆಪಿ ಮುಖಂಡ ಜಗ್ಗೇಶ್ ಅವರು ಹುಲಿ ಉಗುರಿನ ಬಗ್ಗೆ ಮಾತನಾಡಿದ್ದಾರೆ. ಆದರೂ, ಅರಣ್ಯಾಧಿಕಾರಿಗಳು ಮೌನವಾಗಿದ್ದಾರೆ. ಬಡವರು, ರೈತರು, ವನ್ಯ ಜೀವಿಗಳನ್ನು ಕೊಂದು ಕೇಸ್ ಹಾಕ್ತಾರೆ. ಜಗ್ಗೇಶ್, ದರ್ಶನ್, ವಿನಯ್ ಗುರೂಜಿ ಮೇಲೆ ಕ್ರಮ ಯಾಕೆ ತಗೆದುಕೊಂಡಿಲ್ಲ’ ಎಂದು ಕೇಳಿದ್ದಾರೆ.