Tag: ವಲಸೆ ಕಾರ್ಮಿಕರು

  • ವಲಸೆ ಕಾರ್ಮಿಕರು ಬಿಟ್ಟು ಹೋದ ಸೈಕಲ್‌ಗಳಿಂದ ಬಂತು ಲಕ್ಷ – ಲಕ್ಷ ಆದಾಯ

    ವಲಸೆ ಕಾರ್ಮಿಕರು ಬಿಟ್ಟು ಹೋದ ಸೈಕಲ್‌ಗಳಿಂದ ಬಂತು ಲಕ್ಷ – ಲಕ್ಷ ಆದಾಯ

    ಲಕ್ನೋ: ಕೊರೊನಾ ತೀವ್ರವಾಗಿ ವ್ಯಾಪಿಸಿದ್ದ 2020ರ ವೇಳೆ ದೇಶಾದ್ಯಂತ ಲಾಕ್‌ಡೌನ್‌ ಘೋಷಿಸಲಾಗಿ, ಬಹುತೇಕ ವಲಸೆ ಕಾರ್ಮಿಕರು ಅನಿವಾರ್ಯವಾಗಿ ತಮ್ಮ ರಾಜ್ಯಗಳಿಗೆ ಹೋಗಲೇಬೇಕಿತ್ತು.

    ಬಹುತೇಕರು ತಾವು ತಲುಪುವುದೇ ಕಷ್ಟವಾಗಿದ್ದರಿಂದ ತಮ್ಮ ವಸ್ತುಗಳನ್ನು ತಾವಿದ್ದ ಸ್ಥಳಗಳಲ್ಲೇ ಬಿಟ್ಟು ಹೋಗಿದ್ದರು. ಇನ್ನೂ ದಿನಗೂಲಿ ಕಾರ್ಮಿಕರು ಹೆಚ್ಚಾಗಿ ಬಳಸುತ್ತಿದ್ದ ಸೈಕಲ್ ಪಾಡಂತೂ ಕೇಳೋರೇ ಇಲ್ಲದಂತಾಗಿತ್ತು. ಇದರಿಂದ ಸಾವಿರಾರು ಮಂದಿ ತಮ್ಮ ಬೈಸಿಕಲ್‌ಗಳನ್ನು ಇಲ್ಲಿಯೇ ಬಿಟ್ಟುಹೋದರು. ಇಂತಹ ಬಿಟ್ಟು ಹೋಗಿದ್ದ ಸೈಕಲ್‌ಗಳು ಇದೀಗ ಲಕ್ಷಾಂತರ ರೂಪಾಯಿ ಆದಾಯ ತಂದುಕೊಟ್ಟಿವೆ. ಇದನ್ನೂ ಓದಿ: ಬಿಜೆಪಿ ಎಚ್ಚೆತ್ತುಕೊಂಡಿರುವುದು ಮುಸ್ಲಿಮರ ಭಾವನೆಗೆ ಧಕ್ಕೆಯುಂಟಾಗಿದೆ ಎಂದಲ್ಲ: ಒಮರ್ ಅಬ್ದುಲ್ಲಾ

    UP

    ರಾಶಿ-ರಾಶಿ ಸೈಕಲ್‌ಗಳು: ಕೋವಿಡ್ ಮೊದಲ ಅಲೆಯಲ್ಲಿ ಉಂಟಾದ ಲಾಕ್‌ಡೌನ್ ವೇಳೆ ಉತ್ತರ ಪ್ರದೇಶ ಮತ್ತು ಬಿಹಾರದ ವಲಸೆ ಕಾರ್ಮಿಕರು ಬಿಟ್ಟು ಹೋಗಿದ್ದ 5,400 ಬೈಸಿಕಲ್‌ಗಳನ್ನು ಸಹರಾನ್‌ಪುರ ಜಿಲ್ಲಾಡಳಿತವು 2 ವರ್ಷಗಳ ನಂತರ ಹರಾಜು ಮಾಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಎಚ್ಚೆತ್ತುಕೊಂಡಿರುವುದು ಮುಸ್ಲಿಮರ ಭಾವನೆಗೆ ಧಕ್ಕೆಯುಂಟಾಗಿದೆ ಎಂದಲ್ಲ: ಒಮರ್ ಅಬ್ದುಲ್ಲಾ

    21.2 ಲಕ್ಷ ಸಂಗ್ರಹ: 5,400 ಬೈಸಿಕಲ್‌ಗಳನ್ನು ಹರಾಜು ಮಾಡಲಾಗಿದ್ದು ಇದರಿಂದ 21.2 ಲಕ್ಷ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ಹರಿದು ಬಂದಿದೆ ಎಂದು ಸದರ್‌ನ ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ (SDM) ಕಿನ್‌ಶುಕ್ ಶ್ರೀವಾಸ್ತವ ತಿಳಿಸಿದ್ದಾರೆ.

  • ವಲಸೆ ಕಾರ್ಮಿಕರ ಅನುಕೂಲಕ್ಕಾಗಿ 7 ಕಡೆ ವಸತಿ ರಹಿತರ ಆಶ್ರಯ ಕೇಂದ್ರ ನಿರ್ಮಾಣ: ಪ್ರಹ್ಲಾದ್ ಜೋಶಿ

    ವಲಸೆ ಕಾರ್ಮಿಕರ ಅನುಕೂಲಕ್ಕಾಗಿ 7 ಕಡೆ ವಸತಿ ರಹಿತರ ಆಶ್ರಯ ಕೇಂದ್ರ ನಿರ್ಮಾಣ: ಪ್ರಹ್ಲಾದ್ ಜೋಶಿ

    ಹುಬ್ಬಳ್ಳಿ: ವಲಸೆ ಕಾರ್ಮಿಕರ ಅನುಕೂಲಕ್ಕಾಗಿ ಅವಳಿ ನಗರದಲ್ಲಿ ದೀನದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಅಡಿ 7 ನಗರ ವಸತಿ ರಹಿತರ ಆಶ್ರಯ ಕೇಂದ್ರಗಳನ್ನು ನಿರ್ಮಿಸಲಾಗುವುದು ಎಂದು ಕೇಂದ್ರ ಸರ್ಕಾರದ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

    ನಗರದ ಹೊಸೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ನಗರ ವಸತಿ ರಹಿತರ ಆಶ್ರಯ ಕೇಂದ್ರವನ್ನು ಇಂದು ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ ಉಂಟಾದ ವಲಸೆ ಕಾರ್ಮಿಕ ಸಮಸ್ಯೆಯನ್ನು ನಿವಾರಿಸಲು ಆಶ್ರಯ ಕೇಂದ್ರಗಳು ಅನುಕೂಲವಾಗಲಿವೆ. ಆಶ್ರಯ ಕೇಂದ್ರದಲ್ಲಿ ಗರಿಷ್ಠ 6 ತಿಂಗಳವರೆಗೆ ವಲಸೆ ಕಾರ್ಮಿಕರಿಗೆ ಊಟದೊಂದಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಹುಲಿ ಹುಡುಕೋ ಕಾರ್ಯಾಚರಣೆ ವೇಳೆ ಸಿಕ್ತು ಕಾಡುಕೋಣ..!

    ನಗರದಲ್ಲಿ ಕೈಗೊಳ್ಳಲಾದ ಸಮೀಕ್ಷೆಯಲ್ಲಿ ಕಾರ್ಮಿಕರು ಆಶ್ರಯ ಕೇಂದ್ರದಲ್ಲಿ ಉಳಿದುಕೊಳ್ಳಲು ಒಲವು ತೋರಿಸಿದ್ದಾರೆ. ಈಗ ಉದ್ಘಾಟಿಸಿದ ಆಶ್ರಯ ಕೇಂದ್ರ ನಿರ್ವಹಣೆ ಹೊಣೆಯನ್ನು ಖಾಸಗಿಯವರಿಗೆ ನೀಡಲಾಗಿದೆ. ಈ ಕೇಂದ್ರದಲ್ಲಿ ಒಬ್ಬ ವ್ಯವಸ್ಥಾಪಕರು, 3 ಜನ ಆರೈಕೆ ಸಿಬ್ಬಂದಿ ಕರ್ತವ್ಯ ನಿರ್ವಹಿಸುವರು. ಇದು 23 ಜನ ಪುರುಷರು ಹಾಗೂ ಮಹಿಳೆಯರಿಗೆ ಆಶ್ರಯ ನೀಡಲಾಗುವುದು ಎಂದರು. ಇದನ್ನೂ ಓದಿ: ಹೆಚ್ಚಾದ ಭೀಮಾ ನದಿ ಒಳಹರಿವು – ಯಾದಗಿರಿ ವೀರಾಂಜನೇಯ, ಕಂಗಳೇಶ್ವರ ದೇಗುಲ ಜಲಾವೃತ

    ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ ಶೆಟ್ಟರ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್, ಜಿಲ್ಲಾ ಕೌಶ್ಯಲ್ಯ ಅಭಿವೃದ್ಧಿ ಅಧಿಕಾರಿ ಡಾ.ಚಂದ್ರಪ್ಪ, ಅಬ್ದುಲ್ ರಜಾಕ್ ಗಡವಾಲೆ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

  • ವಲಸೆ ಕಾರ್ಮಿಕರಿಗೆ ಫುಡ್ ಕಿಟ್ ವಿತರಿಸಿದ ಸಚಿವ ಹೆಬ್ಬಾರ್

    ವಲಸೆ ಕಾರ್ಮಿಕರಿಗೆ ಫುಡ್ ಕಿಟ್ ವಿತರಿಸಿದ ಸಚಿವ ಹೆಬ್ಬಾರ್

    ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯ ಡೈರಿ ಸರ್ಕಲ್ ಬಳಿಯಲ್ಲಿ ಮೆಟ್ರೋ ಹಾಗೂ ಇತರೆ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಲಸೆ ಕಾರ್ಮಿಕರಿಗೆ ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ರಾಜ್ಯ ಕಟ್ಟಡದ ಕಾರ್ಮಿಕ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೀಡುತ್ತಿರುವ ದಿನಸಿ ಸಾಮಗ್ರಿಗಳ ಕಿಟ್ ಹಾಗೂ ಸುರಕ್ಷತಾ ಕಿಟ್ ಗಳನ್ನು ವಿತರಿಸಿ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದರು.

    ಕೋವಿಡ್ ಸಂದರ್ಭದಲ್ಲಿ ರಾಜ್ಯ ಸರ್ಕಾರ ವಲಸೆ ಕಾರ್ಮಿಕರ ಸುರಕ್ಷತೆಗಾಗಿ ಕೈಗೊಂಡ ಕ್ರಮಗಳ ಕುರಿತು ಕುರಿತು ಕಾರ್ಮಿಕರಿಗೆ ಮಾಹಿತಿ ನೀಡಿ, ಪ್ರತಿಯೊಬ್ಬ ಕಾರ್ಮಿಕರೊಂದಿಗೆ ಮಾತನಾಡಿ ಅವರ ಸಮಸ್ಯೆಗಳನ್ನು ಆಲಿಸಿದರು. ಮಾನ್ಯ ಸಚಿವರು ಆಗಮಿಸಿ ಕಿಟ್ ನೀಡಿ ತಮ್ಮ ಸಮಸ್ಯೆಗಳನ್ನು ಆಲಿಸಿದಕ್ಕೆ ವಲಸೆ ಕಾರ್ಮಿಕರು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಹೊನ್ನಾವರ ಖಾಸಗಿ ಬಂದರು ವಿವಾದ, ಶೀಘ್ರ ಅಧಿಕಾರಿಗಳ ತಂಡದೊಂದಿಗೆ ಸ್ಥಳಕ್ಕೆ ಭೇಟಿ: ಹೆಬ್ಬಾರ್

    ಈ ಕಾರ್ಯಕ್ರಮದಲ್ಲಿ ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ.ಜಿ.ಕಲ್ಪನಾ ಹಾಗೂ ಕಾರ್ಮಿಕ ಆಯುಕ್ತರಾದ ಅಕ್ರಂ ಪಾಷಾ ಕಾರ್ಮಿಕ ಕಲ್ಯಾಣ ಮಂಡಳಿ ನಿರ್ದೇಶಕರಾದ ನಾಗನಾಥ್, ಪ್ರಕಾಶ್ ಎಂ, ನಾಡಗೇರ್ ಹಾಗೂ ಶಿವಾನಿ ಭಟ್ಕಳ ಮತ್ತು ಸ್ಥಳೀಯ ಕಾರ್ಮಿಕ ಸಂಘಟನೆಗಳ ಪ್ರಮುಖರು ಹಾಜರಿದ್ದರು.

  • 10 ಸಾವಿರ ಕಾರ್ಮಿಕರಿಗೆ ಅನ್ನ ನೀಡಿದ ನಟಿ ಸನ್ನಿಲಿಯೋನ್

    10 ಸಾವಿರ ಕಾರ್ಮಿಕರಿಗೆ ಅನ್ನ ನೀಡಿದ ನಟಿ ಸನ್ನಿಲಿಯೋನ್

    ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ನಿಂದ ಭಾರತ ನಲುಗುತ್ತಿದೆ. ಇದರ ಹರಡುವಿಕೆ ತಡೆಗಟ್ಟುವ ಉದ್ದೇಶದಿಂದ ಕೆಲವೆಡೆ ಲಾಕ್ ಡೌನ್ ಮಾಡಿರುವ ಪರಿಣಾಮ ಅನೇಕ ಮಂದಿ ವಲಸೆ ಕಾರ್ಮಿಕರು ಅನ್ನಕ್ಕಾಗಿ ಪರದಾಡುತ್ತಿದ್ದಾರೆ. ಇಂತವರಿಗೆ ಅನೇಕ ಮಂದಿ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ. ಅಂತೆಯೇ ಇದೀಗ ಬಾಲಿವುಡ್ ನಟಿ ಸನ್ನಿಲಿಯೋನ್ ಕೂಡ ವಲಸೆ ಕಾರ್ಮಿಕರ ನೆರವಿಗೆ ನಿಂತಿದ್ದಾರೆ.

    ಬಾಲಿವುಡ್ ನಟಿ ಸನ್ನಿಲಿಯೋನ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುತ್ತಾರೆ. ಸದಾ ಕಷ್ಟಕ್ಕೆ ಮಿಡಿಯುವ ಸನ್ನಿ ಮನ ಕೋವಿಡ್ ಸಂಕಷ್ಟದಲ್ಲಿರುವವರ ಪಾಲಿಗೂ ನೆರವಾಗುವ ಮೂಲಕ ಮಾನವೀಯ ಕಾರ್ಯ ಮಾಡಿದ್ದಾರೆ.

    ಪೇಟಾದ ಜೊತೆ ಕೈ ಜೋಡಿಸಿರುವ ಸನ್ನಿ, ರಾಷ್ಟ್ರ ರಾಜಧಾನಿಯಲ್ಲಿ ಹಸಿದಿರುವ ಸುಮಾರು 10 ಸಾವಿರ ಮಂದಿಗೆ ಅನ್ನ ನೀಡುವ ಕೆಲಸ ಮಾಡಿದ್ದಾರೆ. ಸನ್ನಿ ಅವರ ಈ ಕಾರ್ಯವನ್ನು ಉದಯ್ ಫೌಂಡೇಶನ್ ಎಂಬ ಎನ್‍ಜಿಒ ಕೂಡ ಬೆಂಬಲಿಸಿದೆ. ಕಾರ್ಮಿಕರಿಗೆ ಆಹಾರದ ಜೊತೆ ಹಣ್ಣು ಕೂಡ ನೀಡಿದ್ದಾರೆ.

    ಈ ಸಂಬಂಧ ಮಾತನಾಡಿರುವ ಸನ್ನಿಲಿಯೋನ್, ಸದ್ಯ ನಾವು ಬಿಕ್ಕಟ್ಟನ್ನು ಎದುರಿಸುತ್ತಿದ್ದೇವೆ. ಆದರೆ ಸಹಾನುಭೂತಿ ಮತ್ತು ಒಗ್ಗಟ್ಟಿನೊಂದಿಗೆ ನಾವು ಮುಂದೆ ಬರುತ್ತೇವೆ. ಪೆಟಾ ಇಂಡಿಯಾದೊಂದಿಗೆ ಮತ್ತೆ ಕೈಜೋಡಿಸಲು ನನಗೆ ಸಂತೋಷವಾಗಿದೆ. ಈ ಸಮಯದಲ್ಲಿ ಅಗತ್ಯವಿರುವ ಸಾವಿರಾರು ಜನರಿಗೆ ಪ್ರೋಟೀನ್ ತುಂಬಿದ ಸಸ್ಯಾಹಾರಿ ಆಹಾರ ನೀಡಲು ಮುಂದಾಗಿರುವುದಾಗಿ ತಿಳಿಸಿದ್ದಾರೆ.

    ಲಾಕ್ ಡೌನ್ ಸಂದರ್ಭದಲ್ಲಿ ಈ ಹಿಂದೆಯೂ ಅನೇಕ ಮಂದಿ ಕಾರ್ಮಿಕರಿಗೆ ಆಹಾರ ನೀಡಿದ್ದಾರೆ. ನಟ ಸಲ್ಮಾನ್ ಖಾನ್ ಕೂಡ ತಮ್ಮ ಟ್ರಕ್‍ಗಳ ಮೂಲಕ ಮುಂಬೈನಲ್ಲಿ ಸಿಲುಕಿರುವ ಕಾರ್ಮಿಕರಿಗೆ ಆಹಾರ ಕಿಟ್‍ಗಳನ್ನು ವಿತರಿಸುತ್ತಿದ್ದಾರೆ. ಸಲ್ಮಾನ್‍ರ ಆಹಾರ ಟ್ರಕ್‍ಗಳು ವರ್ಲಿ ಮತ್ತು ಜುಹು ಪ್ರದೇಶಗಳಲ್ಲಿ ಆಹಾರ ಕಿಟ್‍ಗಳನ್ನು ವಿತರಿಸುತ್ತಿವೆ. ಶಿಲ್ಪಾ ಶೆಟ್ಟಿ ಕೂಡ ತಮ್ಮ ಫೌಂಡೇಶನ್ ಮೂಲಕ ಆಹಾರ ಹಾಗೂ ದಿನಸಿ ಸಾಮಾಗ್ರಿಗಳನ್ನು ಒದಗಿಸುತ್ತಿದ್ದಾರೆ.

    ಸೋನು ಸೂದ್, ಭೂಮಿ ಪೆಡ್ನೆಕರ್, ಜಾಕ್ವೆಲಿನ್ ಫರ್ನಾಂಡೀಸ್, ಅಕ್ಷಯ್ ಕುಮಾರ್, ವಿಕ್ಕಿ ಕೌಶಲ್, ಪ್ರಿಯಾಂಕಾ ಚೋಪ್ರಾ ಸೇರಿದಂತೆ ಹಲವಾರು ಗಣ್ಯರು ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾವೈರಸ್ ಪ್ರಕರಣಗಳ ಮಧ್ಯೆ ನಾಗರಿಕರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ.

  • ಸಿಲಿಂಡರ್ ಸ್ಫೋಟ 13 ಜನ ವಲಸೆ ಕಾರ್ಮಿಕರಿಗೆ ಗಾಯ

    ಸಿಲಿಂಡರ್ ಸ್ಫೋಟ 13 ಜನ ವಲಸೆ ಕಾರ್ಮಿಕರಿಗೆ ಗಾಯ

    ಹೈದರಾಬಾದ್: ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 13 ಜನ ವಲಸೆ ಕಾರ್ಮಿಕರು ಗಾಯಗೊಂಡಿರುವ ಘಟನೆ ಪಾಥಾ ಬಸ್ತಿ ಬಳಿ ಸಂಭವಿಸಿದೆ.

    ಹೈದರಾಬಾದ್ ಸಮೀಪದ ಪಾಥಾ ಬಸ್ತಿ ಬಳಿ ಬಂಗಾಳದಿಂದ ವಲಸೆ ಬಂದ ಕಾರ್ಮಿಕರು ಚಿನ್ನ ತಯಾರಿ ಕೆಲಸದಲ್ಲಿ ತೊಡಗಿದ್ದರು. ರಾತ್ರಿ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 13 ಜನ ಗಾಯಗೊಂಡಿದ್ದು ಒಬ್ಬನ ಸ್ಥಿತಿ ಗಂಭೀರವಾಗಿದೆ.

    ಸ್ಥಳೀಯರ ಪ್ರಕಾರ ಮಧ್ಯರಾತ್ರಿ ಕೇಳಿಬಂದ ಶಬ್ಧಕ್ಕೆ ಎಚ್ಚರಗೊಂಡು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ನಂತರ ಪೊಲೀಸರಿಗೆ ಮತ್ತು ಅಗ್ನಿಶಾಮಕದಳಕ್ಕೆ ಕೂಡಲೇ ಮಾಹಿತಿ ನೀಡಿ ಗಾಯಾಳುಗಳನ್ನು ಹತ್ತಿರದ ಉಸ್ಮಾನಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಪಶ್ಚಿಮ ಬಂಗಾಳದಿಂದ ವಲಸೆ ಬಂದಿದ್ದ 13 ಮಂದಿ ಕಾರ್ಮಿಕರು ಒಂದೇ ಮನೆಯಲ್ಲಿ ವಾಸಿಸುತ್ತಿದ್ದರು. ಚಿನ್ನ ತಯಾರಿಕೆ ಕೆಲಸಕ್ಕಾಗಿ ಬಳಸಿದ್ದ ರಾಸಾಯನಿಕಗಳಿಂದ ಸ್ಫೋಟ ಸಂಭವಿಸಿದೆ ಎಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದು, ಪ್ರಕರಣ ದಾಖಲಿಸಿಕೊಂಡು ಹಚ್ಚಿನ ತನಿಖೆ ನಡೆಸುತ್ತಿದ್ದಾರೆ.

  • 400ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಕುಟುಂಬಗಳಿಗೆ ಸೋನು ಸೂದ್ ಆರ್ಥಿಕ ನೆರವು

    400ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಕುಟುಂಬಗಳಿಗೆ ಸೋನು ಸೂದ್ ಆರ್ಥಿಕ ನೆರವು

    ಮುಂಬೈ: ಬಾಲಿವುಡ್ ನಟ ಸೋನು ಸೂದ್ ಈಗಾಗಲೇ ಲಾಕ್‍ಡೌನ್ ವೇಳೆ ಸಂಕಷ್ಟದಲ್ಲಿದ್ದ ನೂರಾರು ಜನರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇದೀಗ ನಟ ಸೋನು ಸೂದ್ ಮತ್ತೊಮ್ಮೆ ಕೊರೊನಾ ಸಂಕಷ್ಟದಲ್ಲಿರುವ ಕುಟುಂಬದವರಿಗೆ ಸಹಾಯದ ಹಸ್ತ ಚಾಚಿದ್ದಾರೆ.

    ಕೊರೊನಾ ಪ್ರೇರಿತ ರಾಷ್ಟ್ರವ್ಯಾಪಿ ಲಾಕ್‍ಡೌನ್‍ನಿಂದಾಗಿ ಮೃತ ಮತ್ತು ಗಾಯಗೊಂಡಿರುವ ವಲಸೆ ಕಾರ್ಮಿಕರ 400ಕ್ಕೂ ಹೆಚ್ಚು ಕುಟುಂಬಗಳಿಗೆ ಆರ್ಥಿಕ ನೆರವು ನೀಡುವುದಾಗಿ ನಟ ಸೋನು ಸೂದ್ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಸಿಲುಕಿದ್ದ ನೂರಾರು ಕನ್ನಡಿಗರಿಗೆ ಬಸ್ ವ್ಯವಸ್ಥೆ ಕಲ್ಪಿಸಿದ ಸೋನು ಸೂದ್

    ನಟ ಸೋನು ಸೂದ್ ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಸೇರಿದಂತೆ ವಿವಿಧ ರಾಜ್ಯಗಳ ಅಧಿಕಾರಿಗಳನ್ನು ಸಂಪರ್ಕಿಸಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಕೊರೊನಾದಿಂದ ಮೃತ ವಲಸಿಗರ ಸಂಬಂಧಿತ ಮಾಹಿತಿ, ವಿಳಾಸ ಮತ್ತು ಬ್ಯಾಂಕ್ ವಿವರಗಳನ್ನು ಪಡೆದುಕೊಂಡಿದ್ದಾರೆ.

    “ಮೃತ ಅಥವಾ ಗಾಯಗೊಂಡಿರುವ ವಲಸಿಗರ ಕುಟುಂಬಗಳಿಗೆ ಸುರಕ್ಷಿತ ಭವಿಷ್ಯವನ್ನು ಹೊಂದಲು ನಾನು ಅವರಿಗೆ ಸಹಾಯ ಮಾಡಲು ನಿರ್ಧರಿಸಿದ್ದೇನೆ. ಅವರನ್ನು ಬೆಂಬಲಿಸುವುದು ನನ್ನ ವೈಯಕ್ತಿಕ ಜವಾಬ್ದಾರಿ ಎಂದು ನಾನು ಭಾವಿಸುತ್ತೇನೆ” ಎಂದು ಸೋನು ಸೂದ್ ಹೇಳಿದರು.

    177 ಯುವತಿಯರಿಗೆ ಸಹಾಯ:
    ಕೊರೊನಾ ಹಿನ್ನೆಲೆಯಲ್ಲಿ ಲಾಕ್‍ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯರ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು.

    ತಕ್ಷಣ ಯುವತಿಯರಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದರು. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ ಒಡಿಶಾಕ್ಕೆ ಕಳುಹಿಸಿದ್ದರು.

    ಈ ಹಿಂದೆ ಸೋನು ಸೂದ್ ಅವರು ಕರ್ನಾಟಕ ಮತ್ತು ಮಹಾರಾಷ್ಟ್ರ ಸರ್ಕಾರಗಳ ಜೊತೆಗೆ ಚರ್ಚಿಸಿ ಕಲಬುರಗಿಯಿಂದ ಮಹಾರಾಷ್ಟ್ರದ ಥಾಣೆಗೆ ಬಂದಿದ್ದ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಲು ಅನುಮತಿ ಪಡೆದಿದ್ದರು. ಈ ಮೂಲಕ ತಮ್ಮ ಸ್ವಂತ ಖರ್ಚಿನಲ್ಲಿ ಒಟ್ಟು ಹತ್ತು ಬಸ್‍ಗಳ ವ್ಯವಸ್ಥೆ ಮಾಡಿ ಥಾಣೆಯಿಂದ ಕಲಬುರಗಿಗೆ ತಾವೇ ಮುಂದೆ ನಿಂತು ಕಳುಹಿಸಿಕೊಟ್ಟಿದ್ದ. ಅಷ್ಟೇ ಅಲ್ಲದೆ ವಲಸೆ ಕಾರ್ಮಿಕರಿಗೆ ಊಟದ ಕಿಟ್‍ಗಳನ್ನು ನೀಡಿ ಕನ್ನಡಿಗರ ಬಗ್ಗೆ ಕಾಳಜಿ ತೋರಿದ್ದರು.

  • “ಫ್ಯಾಕ್ಟರಿ ಕ್ಲೋಸ್ ಆಯ್ತು, ಸರ್ಕಾರದಿಂದ ಏನೂ ಸಿಗ್ತಿಲ್ಲ”- ಗುಳೆ ಹೊರಟ ಜನ

    “ಫ್ಯಾಕ್ಟರಿ ಕ್ಲೋಸ್ ಆಯ್ತು, ಸರ್ಕಾರದಿಂದ ಏನೂ ಸಿಗ್ತಿಲ್ಲ”- ಗುಳೆ ಹೊರಟ ಜನ

    – ಈ ಸರ್ಕಾರ ಹೋದ್ಮೇಲೆ ಮತ್ತೆ ಬರ್ತಿವಿ

    ಬೆಂಗಳೂರು: ಕೊರೊನಾ ಆತಂಕ ಮತ್ತು ನಿರುದ್ಯೋಗದಿಂದಾಗಿ ಸಿಲಿಕಾನ್ ಸಿಟಿಯಲ್ಲಿ ವಾಸವಾಗಿದ್ದ ಜನರು ತಮ್ಮ ಸ್ವಂತ ಊರುಗಳತ್ತ ಪಯಣ ಬೆಳೆಸಿದ್ದಾರೆ. ಶುಕ್ರವಾರದಿಂದ ಜನರು ಊರುಗಳತ್ತ ಗಂಟು ಮೂಟೆ ಕಟ್ಟಿಕೊಂಡು ಪ್ರಯಾಣ ಬೆಳೆಸುತ್ತಿದ್ದಾರೆ.

    ಬೆಂಗಳೂರು ಹೊರವಲಯದ ನೆಲಮಂಗಲ ಟೋಲ್‍ಗೇಟ್ ಬಳಿ ಇಂದು ಸಹ ಮನೆಯ ಸಾಮಾನುಗಳನ್ನು ವಾಹನಗಳಲ್ಲಿ ತುಂಬಿಕೊಂಡು ಹೋಗುತ್ತಿರುವ ದೃಶ್ಯಗಳು ಕಂಡು ಬಂದವು. ಈ ವೇಳೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ವ್ಯಕ್ತಿ, ಕೆಲಸ ಮಾಡುತ್ತಿದ್ದ ಫ್ಯಾಕ್ಟರಿ ಮುಚ್ಚಿದ್ದರಿಂದ ಕೆಲಸವೂ ಇಲ್ಲ. ಬಾಡಿಗೆ ಕಟ್ಟಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮನೆ ಖಾಲಿ ಮಾಡಿಕೊಂಡು ಸ್ವಂತ ಊರಿನತ್ತ ಹೊರಟ್ಟಿದ್ದೇವೆ. ಈ ಸರ್ಕಾರ ಹೋದ್ಮೇಲೆ ಮತ್ತೆ ಬೆಂಗಳೂರಿಗೆ ಬರುತ್ತೇವೆ ಎಂದು ಹೇಳಿದರು.

    ಶುಕ್ರವಾರ ಈ ಮಹಾ ವಲಸೆ ಆರಂಭವಾಗಿದ್ದು, ಜನರು ಸಿಕ್ಕ ಸಿಕ್ಕ ವಾಹನಗಳಲ್ಲಿ ಊರು ಸೇರಿಕೊಳ್ಳುತ್ತಿದ್ದಾರೆ. ಈ ಮಹಾ ವಲಸೆಯಿಂದ ಗ್ರಾಮೀಣ ಭಾಗಗಳಲ್ಲಿಯೂ ಕೊರೊನಾ ಹಬ್ಬುವ ಆತಂಕ ಮನೆ ಮಾಡಿದೆ.

  • ಕೇಂದ್ರದ ಪಡಿತರ ವಲಸೆ ಕಾರ್ಮಿಕರಿಗೆ ತಲುಪಿಸಲು ರಾಜ್ಯ ಸರ್ಕಾರಗಳು ಫೇಲ್!

    ಕೇಂದ್ರದ ಪಡಿತರ ವಲಸೆ ಕಾರ್ಮಿಕರಿಗೆ ತಲುಪಿಸಲು ರಾಜ್ಯ ಸರ್ಕಾರಗಳು ಫೇಲ್!

    ನವದೆಹಲಿ: ಲಾಕ್‍ಡೌನ್‍ನಿಂದ ಅತಿ ಹೆಚ್ಚು ಹೊಡೆತ ತಿಂದವರು ವಲಸೆ ಕಾರ್ಮಿಕರು. ಇವರ ಹಸಿವು ನೀಗಿಸಲೆಂದೇ ಕೇಂದ್ರ ಸರ್ಕಾರವೇನೋ ಉಚಿತ ಪಡಿತರ ಯೋಜನೆ ಜಾರಿಗೆ ತಂದಿತು. ಆದರೆ ಕೇಂದ್ರ ಕೊಟ್ಟಿದ್ದನ್ನ ಫಲಾನುಭವಿಗಳಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರಗಳು ಫೇಲ್ ಆಗಿವೆ. ಈ ಮಾತನ್ನ ನಾವು ಹೇಳ್ತಾ ಇಲ್ಲ, ಕೇಂದ್ರ ಸರ್ಕಾರವೇ ಈ ಬಗ್ಗೆ ವರದಿ ಬಿಡುಗಡೆ ಮಾಡಿದ್ದು ಅದರಲ್ಲಿ ರಾಜ್ಯಗಳ ಬೇಜವಾಬ್ದಾರಿ ಅನಾವರಣವಾಗಿದೆ.

    ಹೌದು. ಲಾಕ್‍ಡೌನ್ ಅವಧಿಯಲ್ಲಿ ಕೊರೊನಾ ಬಿಕ್ಕಟ್ಟಿನ ಹೆಚ್ಚು ಹೊಡೆತ ತಿಂದವರು ವಲಸೆ ಕಾರ್ಮಿಕರು. ರಾತ್ರೋರಾತ್ರಿ ಘೋಷಣೆಯಾದ ಲಾಕ್‍ಡೌನ್‍ನಿಂದ ದಿಕ್ಕು ಕಾಣದಾದ ಕೋಟ್ಯಂತರ ವಲಸೆ ಕಾರ್ಮಿಕರ ಬದುಕು ಒಂದು ಕ್ಷಣದಲ್ಲಿ ಅತಂತ್ರವಾಗಿ ಬಿಡ್ತು. ಮಹಾನಗರಗಳಿಂದ ತಮ್ಮ ತಮ್ಮ ಊರು ತಲುಪಲು ನೂರಾರು ಕಿಲೋಮೀಟರ್ ನಡೆದುಕೊಂಡೆ ಹೋದರು. ಎಷ್ಟೋ ಮಂದಿ ನಡೆಯುತ್ತಲೇ ಪ್ರಾಣಬಿಟ್ಟರು. ಈ ಸಮಸ್ಯೆ ಬಗೆಹರಿಸಲೆಂದೇ ಕೇಂದ್ರ ಸರ್ಕಾರ ಉಚಿತ ಪಡಿತರ ಯೋಜನೆ ಜಾರಿ ಮಾಡಿತು. ಆದ್ರೆ ಅದನ್ನು ತಲುಪಿಸುವಲ್ಲಿ ರಾಜ್ಯ ಸರ್ಕಾರಗಳು ವಿಫಲವಾಗಿವೆ.

    ಉಚಿತ ಪಡಿತರ ಸಿಕ್ಕಿದ್ದು ಬರೀ ಶೇ.13 ವಲಸಿಗರಿಗೆ ಮಾತ್ರ:
    ವಲಸೆ ಕಾರ್ಮಿಕರು ಹಸಿನಿಂದ ಇರಬಾರದು ಎಂದು ಕೇಂದ್ರ ಸರ್ಕಾರ 8 ಲಕ್ಷ ಟನ್ ಉಚಿತ ಆಹಾರ ಧಾನ್ಯ ನೀಡುವ ಯೋಜನೆ ಜಾರಿ ಮಾಡಿತ್ತು. ಎಲ್ಲಾ ರಾಜ್ಯಗಳಿಗೂ ಆಹಾರ ಧಾನ್ಯ ಹಂಚಿಕೆ ಮಾಡಿ ವಲಸೆ ಕಾರ್ಮಿಕರಿಗಾಗಿ ಬಳಸಿಕೊಳ್ಳುವಂತೆ ಸೂಚನೆ ನೀಡಿತ್ತು. ಆದರೆ ರಾಜ್ಯ ಸರ್ಕಾರಗಳು ಮಾಡಿದ್ದೇ ಬೇರೆ. ಕೇಂದ್ರ ಕೊಟ್ಟ ಆಹಾರ ಧಾನ್ಯದಲ್ಲಿ ಕೇವಲ ಶೇ.13ರಷ್ಟು ಕಾರ್ಮಿಕರಿಗೆ ಕೊಟ್ಟ ಹಾಗೆ ಮಾಡಿ ಉಳಿದ ಆಹಾರವನ್ನು ಕೊಳೆಯುವಂತೆ ಮಾಡಿವೆ. ಈ ಅಂಕಿ ಅಂಶವನ್ನು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವಾಲಯವೇ ಹೊರಹಾಕಿದೆ.

    ಕೇಂದ್ರದ ಅಂಕಿ ಅಂಶಗಳಲ್ಲಿ ಏನಿದೆ.?:
    ವಲಸೆ ಕಾರ್ಮಿಕರಿಗಾಗಿ 8 ಲಕ್ಷ ಮೆಟ್ರಿಕ್ ಟನ್ ಉಚಿತ ಪಡಿತರವನ್ನು 8 ಕೋಟಿ ವಲಸೆ ಕಾರ್ಮಿಕರಿಗೆ ನೀಡುವ ಯೋಜನೆಯಾಗಿತ್ತು. ಆದ್ರೆ ಶೇ.13ರಷ್ಟು ಮಾತ್ರ ವಲಸೆ ಕಾರ್ಮಿಕರಿಗೆ ತಲುಪಿದೆ. ರಾಜ್ಯಗಳಿಗೆ ಕೇಂದ್ರ 6.38 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯ ವಿತರಿಸಿತ್ತು. ಆದರೆ ರಾಜ್ಯಗಳು ಕೇವಲ 1.07 ಮೆಟ್ರಿಕ್ ಟನ್ ಮಾತ್ರ ಕಾರ್ಮಿಕರಿಗೆ ವಿತರಿಸಿದೆ. 11 ರಾಜ್ಯಗಳು ಕೇವಲ ಶೇ.1 ನಷ್ಟೂ ಪಡಿತರ ವಿತರಣೆ ಮಾಡಿಲ್ಲ. ಗುಜರಾತ್, ಆಂಧ್ರ, ಗೋವಾ, ಮಹಾರಾಷ್ಟ್ರ, ಜಾರ್ಖಂಡ್, ಲಡಾಕ್, ಒರಿಸ್ಸಾ, ತಮಿಳುನಾಡು, ತೆಲಂಗಾಣ ರಾಜ್ಯಗಳು ಶೇ.1 ನಷ್ಟೂ ವಿತರಣೆ ಮಾಡಿಲ್ಲ. ಹರಿಯಾಣ, ಕರ್ನಾಟಕ, ಹಿಮಾಚಲ ಪ್ರದೇಶ, ಅಸ್ಸಾಂ ರಾಜ್ಯಗಳ ಕಾರ್ಯಕ್ಕೆ ಕೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದೆ.

    ಒಟ್ಟಿನಲ್ಲಿ ಕೇಂದ್ರ ಸರ್ಕಾರ ನೀಡಿರುವ ಪಡಿತರವನ್ನು ರಾಜ್ಯಗಳು ಸರಿಯಾಗಿ ವಲಸೆ ಕಾರ್ಮಿಕರಿಗೆ ವಿತರಿಸಿಲ್ಲ. ಇನ್ನು ಕೇಂದ್ರ ನವೆಂಬರ್‍ವರೆಗೂ ಉಚಿತ ಪಡಿತರ ಘೋಷಣೆ ಮಾಡಿದ್ದು, ಅದನ್ನಾದರೂ ಸರಿಯಾಗಿ ವಿತರಿಸಿ ಕಾರ್ಮಿಕರ ಹಸಿವು ನೀಗುವಂತೆ ಮಾಡಬೇಕಿದೆ.

  • ವಲಸೆ ಕಾರ್ಮಿಕರಿಗಾಗಿ ಜೂ.24ರಂದು ಅಂತಿಮ ಶ್ರಮಿಕ್ ರೈಲು: ಕೆ.ಬಿ ಶಿವಕುಮಾರ್

    ವಲಸೆ ಕಾರ್ಮಿಕರಿಗಾಗಿ ಜೂ.24ರಂದು ಅಂತಿಮ ಶ್ರಮಿಕ್ ರೈಲು: ಕೆ.ಬಿ ಶಿವಕುಮಾರ್

    ಶಿವಮೊಗ್ಗ: ತಮ್ಮ ರಾಜ್ಯಗಳಿಗೆ ತೆರಳ ಬಯಸುವ ವಲಸೆ ಕಾರ್ಮಿಕರಿಗಾಗಿ ಜೂನ್ 24ರಂದು ಬೆಂಗಳೂರಿನಿಂದ ಅಂತಿಮ ಶ್ರಮಿಕ್ ರೈಲುಗಳು ತೆರಳಲಿವೆ ಎಂದು ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಹೇಳಿದ್ದಾರೆ.

    ಅಲ್ಲದೆ ಇದರ ಪ್ರಯೋಜನ ಪಡೆದುಕೊಳ್ಳ ಬಯಸುವವರು ತಮ್ಮ ಹೆಸರು ನೊಂದಾಯಿಸಿಕೊಳ್ಳಬೇಕು. ತಮ್ಮ ರಾಜ್ಯಗಳಿಗೆ ತೆರಳ ಬಯಸುವ ಅನ್ಯ ರಾಜ್ಯಗಳ ಕಾರ್ಮಿಕರರು ಸೇವಾ ಸಿಂಧು ಆ್ಯಪ್‍ನಲ್ಲಿ ತಮ್ಮ ವಿವರಗಳನ್ನು ನೊಂದಾಯಿಸಿಕೊಳ್ಳಬೇಕು ಡಿಸಿ ಮನವಿ ಮಾಡಿದ್ದಾರೆ.

    ಸೇವಾ ಸಿಂಧುವಿನಲ್ಲಿ ನೊಂದಾಯಿಸಿಕೊಂಡಿರುವ ಕುರಿತಾದ ದಾಖಲೆಗಳನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ತೆರೆಯಲಾಗಿರುವ ಸೇವಾ ಕೌಂಟರಿನಲ್ಲಿ ಜೂನ್ 23 ರ ಮಧ್ಯಾಹ್ನ 3.30ಗಂಟೆಯ ಒಳಗಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಜಿಲ್ಲಾ ಕಾರ್ಮಿಕ ಅಧಿಕಾರಿ ವಿಶ್ವನಾಥ್ ಮೊಬೈಲ್ ಸಂಖ್ಯೆ 9845184795 ಅವರನ್ನು ಸಂಪರ್ಕಿಸಬಹುದಾಗಿದೆ.

  • ವಲಸೆ ಕಾರ್ಮಿಕರಿಗೆ ಕೇಂದ್ರದ ನೆರವು- ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ರೋಜ್‍ಗಾರ್ ಯೋಜನೆ ಜಾರಿ

    ವಲಸೆ ಕಾರ್ಮಿಕರಿಗೆ ಕೇಂದ್ರದ ನೆರವು- ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ರೋಜ್‍ಗಾರ್ ಯೋಜನೆ ಜಾರಿ

    ನವದೆಹಲಿ: ಲಾಕ್‍ಡೌನ್‍ನಿಂದಾಗಿ ತವರಿಗೆ ಮರಳಿರುವ ವಲಸೆ ಕಾರ್ಮಿಕರ ನೆರವಿಗಾಗಿ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ರೋಜ್‍ಗಾರ್ ಯೋಜನೆ ಜಾರಿಗೆ ತಂದಿದೆ.

    ಜೂನ್ 20ರಂದು ಬಿಹಾರದ ಖಗರಿಯಾ ಜಿಲ್ಲೆಯ ಬೆಲ್ದೌರ್ ತಾಲೂಕಿನ ತೆಲಿಹಾರ್ ಗ್ರಾಮದಲ್ಲಿ ಈ ಯೋಜನೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್‍ಕುಮಾರ್ ಹಾಗೂ ಉಪಮುಖ್ಯಮಂತ್ರಿ ಸುಶೀಲ್ ಮೋದಿ ಸೇರಿದಂತೆ ಐದು ರಾಜ್ಯಗಳ ಮುಖ್ಯಮಂತ್ರಿಗಳು, ಕೆಲವು ಕೇಂದ್ರ ಸಚಿವರು ಸಹ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

    ಇಂದು ಸುದ್ದಿಗೋಷ್ಠಿ ನಡೆಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಯೋಜನೆ ವೈಶಿಷ್ಟ್ಯಗಳನ್ನು ವಿವರಿಸಿದರು. ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ, ಒಡಿಶಾ, ರಾಜಸ್ಥಾನ, ಜಾರ್ಖಂಡ್ ನ 116 ಜಿಲ್ಲೆಗಳಲ್ಲಿ ತವರಿಗೆ ಮರಳಿದ 25 ಸಾವಿರ ಕಾರ್ಮಿಕರಿಗೆ ಉದ್ಯೋಗ ಒದಗಿಸುವುದು ಈ ಯೋಜನೆಯ ಗುರಿಯಾಗಿದೆ ಎಂದರು.

    ಈ ಯೋಜನೆಯಡಿ ಕೈಗೊಳ್ಳುವ ಕಾಮಗಾರಿಯ ಅವಧಿ 125 ದಿನ ಇರಲಿದೆ. ಕಾರ್ಮಿಕರು ಹೊಂದಿರುವ ಕೌಶಲ ಆಧಾರದ ಮೇಲೆ 25 ಬಗೆಯ ಉದ್ಯೋಗ ಒದಗಿಸಲಾಗುತ್ತಿದ್ದು, ಈ ಯೋಜನೆಗೆ 50,000 ಕೋಟಿ ತೆಗೆದಿರಿಸಲಾಗಿದೆ. ರೈಲ್ವೆ, ಗ್ರಾಮೀಣಾಭಿವೃದ್ಧಿ, ಪಂಚಾಯತ್‍ರಾಜ್, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸೇರಿದಂತೆ ಒಟ್ಟು 12 ಸಚಿವಾಲಯಗಳ ಸಮನ್ವಯದೊಂದಿಗೆ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ವಿವರಿಸಿದರು.