Tag: ವಲಸೆ ಕಾರ್ಮಿಕರು

  • ಅಂತರ್ ಜಿಲ್ಲೆಯಿಂದ ಸ್ವ-ಜಿಲ್ಲೆಗೆ ಬಂದ ಕಾರ್ಮಿಕರ ಪರದಾಟ

    ಅಂತರ್ ಜಿಲ್ಲೆಯಿಂದ ಸ್ವ-ಜಿಲ್ಲೆಗೆ ಬಂದ ಕಾರ್ಮಿಕರ ಪರದಾಟ

    – ಜಿಲ್ಲಾಡಳಿತದ ವಿರುದ್ಧ ಆಕ್ರೋಶ

    ಗದಗ: ಅಂತ್ ಜಿಲ್ಲೆಯಿಂದ ಜಿಲ್ಲಾಕೇಂದ್ರಕ್ಕೆ ಬಂದಿಳಿದ ಕಾರ್ಮಿಕರು ತಮ್ಮ ಸ್ವ-ಗ್ರಾಮಕ್ಕೆ ತೆರಳಲು ವಾಹನ ಇಲ್ಲದೆ ಪರದಾಟ ಅನುಭವಿಸುತ್ತಿದ್ದಾರೆ.

    ಗದಗ ಬಸ್ ನಿಲ್ದಾಣದಲ್ಲಿ ಗರ್ಭಿಣಿ, ಮಕ್ಕಳು, ವೃದ್ಧರು ಹಾಗೂ ಮಹಿಳೆಯರು ತುಂತುರು ಮಳೆ ಹಾಗೂ ಚಳಿಯಲ್ಲಿ ನಡುಗುತ್ತಿದ್ದಾರೆ. ಅಂತರ್ ಜಿಲ್ಲೆಯಿಂದ ಬಂದಿರುವ ಈ ವಲಸೆ ಕಾರ್ಮಿಕರು, ಗಜೇಂದ್ರಗಡ, ರೋಣ, ಮುಂಡರಗಿ, ನರಗುಂದ, ಲಕ್ಷ್ಮೇಶ್ವರ, ಶಿರಹಟ್ಟಿ ಭಾಗಕ್ಕೆ ಹೋಗಲು ವಾಹನಗಳಿಲ್ಲದೇ ಪರದಾಡುತ್ತಿದ್ದಾರೆ.

    ಅಲ್ಲದೆ ಗದಗ ಬಸ್ ನಿಲ್ದಾಣದಲ್ಲಿ ಮೂಲಭೂತ ಸೌಕರ್ಯಗಳಾದ ಕನಿಷ್ಠ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆಯನ್ನೂ ಜಿಲ್ಲಾಡಳಿತ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಬಸ್ ನಿಲ್ದಾಣದಲ್ಲಿ ಶೌಚಾಲಯವು ಇಲ್ಲದೆ ಮಹಿಳೆಯರ ಪರದಾಡುತ್ತಿದ್ದು, ಜಿಲ್ಲಾಡಳಿತ ವಿರುದ್ಧ ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.

    ಕಾರ್ಮಿಕರು ಸ್ವ-ಗ್ರಾಮಕ್ಕೆ ಹೊಗಲು ಖಾಸಗಿ ವಾಹನಗಳ ದರಕ್ಕೆ ಬೆಚ್ಚಿಬಿದ್ದ ಜನರು, ಖಾಸಗಿ ವಾಹನಗಳು ಒಬ್ಬರಿಗೆ 1 ಸಾವಿರಕ್ಕೂ ಅಧಿಕ ಬೇಡಿಕೆ ಇಟ್ಟಿರುವುದಾಗಿ ಆರೋಪ ಕೇಳಿಬಂದಿದೆ.

  • ಇವತ್ತು ಒಂದೇ ದಿನ ಅವಕಾಶ- ಊರಿಗೆ ಹೋಗೋರು ಹೋಗ್ಬಹುದು

    ಇವತ್ತು ಒಂದೇ ದಿನ ಅವಕಾಶ- ಊರಿಗೆ ಹೋಗೋರು ಹೋಗ್ಬಹುದು

    -ಖಾಸಗಿ ವಾಹನಗಳಲ್ಲಿಯೂ ತೆರಳಲು ಅವಕಾಶ
    -ಆದೇಶದಲ್ಲಿ ಒಂದಷ್ಟೂ ಗೊಂದಲ

    ಬೆಂಗಳೂರು: ವಲಸೆ ಕಾರ್ಮಿಕರಿಗೆ ತಮ್ಮೂರಿಗೆ ತೆರಳಲು ಇವತ್ತು ಒಂದೇ ದಿನ ಅವಕಾಶ ಕಲ್ಪಿಸಲಾಗಿದೆ. ಇಂದು ಹೋಗುವವರು ಮಾತ್ರ ಹೋಗಬಹುದು. ಮಿಸ್ ಆದ್ರೆ ಲಾಕ್‍ಡೌನ್ ಸಂಪೂರ್ಣ ಸಡಿಲಿಕೆ ಆಗೋವರೆಗೆ ಕಾಯಬೇಕು.

    ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವವರು ಜಿಲ್ಲಾಧಿಕಾರಿಗಳು ಅಥವಾ ಜಿಲ್ಲಾ ವರಿಷ್ಠಾಧಿಕಾರಿಗಳಿಂದ ಅನುಮತಿ ಪಡೆದು ಖಾಸಗಿ ವಾಹನಗಳಲ್ಲಿಯೂ ಸಂಚರಿಸಬಹುದಾಗಿದೆ. ಕಾರ್ಮಿಕರು ಮತ್ತು ವಿದ್ಯಾರ್ಥಿಗಳಿಗೆ ಏಕಮುಖ ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗುತ್ತಿದೆ.

     

    ಇಂದು ಬೆಳಗ್ಗೆ 10 ಗಂಟೆಯಿಂದ ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಸಾರಿಗೆ ಬಸ್ ಗಳು ಪ್ರಯಾಣ ಆರಂಭಿಸಲಿವೆ. ಯಾರೇ ಊರಿಗೆ ಹೋಗಬೇಕಾದವರು ಮೆಜೆಸ್ಟಿಕ್ ನಿಲ್ದಾಣಕ್ಕೆ ಬರಬೇಕು. ಬೆಂಗಳೂರಿನ ವಿವಿಧ ಭಾಗಗಳಲ್ಲಿರುವ ಕಾರ್ಮಿಕರು ಮೆಜೆಸ್ಟಿಕ್ ಗೆ ಹೇಗೆ ಬರಬೇಕು ಎಂಬುದರ ಬಗ್ಗೆ ಗೊಂದಲವಿದೆ.

    ಈ ಕುರಿತು ಕೆಎಸ್‍ಆರ್ ಟಿಸಿ ಪ್ರಧಾನ ವ್ಯವಸ್ಥಾಪಕ ಪ್ರಭಾಕರ್ ರೆಡ್ಡಿ ಮಾತನಾಡಿ, ವಲಸೆ ಕಾರ್ಮಿಕರಿಗೆಂದು ಬಸ್ ವ್ಯವಸ್ಥೆ ಮಾಡಲಾಗಿತ್ತು. ಆದರೆ ವಲಸೆ ಕಾರ್ಮಿಕರನ್ನು ಹೊರತುಪಡಿಸಿ ವಿದ್ಯಾರ್ಥಿಗಳು, ಬೇರೆ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದಾರೆ. ಸಾಮಾಜಿಕ ಅಂತರ ಇಲ್ಲದಂತಾಗಿದೆ. ಕೇವಲ 40 ಬಸ್ ಎಂದು ಮೊದಲು ಅಂದಾಜಿಸಿದ್ದೆವು. ಆದರೆ ಇದೀಗ 120 ಬಸ್‍ಗಳು ಹೊರಟಿವೆ ಎಂದು ಮಾಹಿತಿ ನೀಡಿದ್ದರು.

    ಬೆಳಗ್ಗೆ 10 ರಿಂದ ಸಂಜೆ 7 ಗಂಟೆವರೆಗೂ ಬಸ್ಸುಗಳ ವ್ಯವಸ್ಥೆ ಇದೆ. ಕೇವಲ ವಲಸೆ ಕಾರ್ಮಿಕರಷ್ಟೇ ಬರಬೇಕು, ಎಲ್ಲರೂ ಬಂದರೆ ಬಸ್ಸುಗಳ ವ್ಯವಸ್ಥೆ ಮಾಡಲು ಸಾಧ್ಯವಿಲ್ಲ. 100 ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಇಂದಿನಂತೆ ಕಾಂಟ್ರಾಕ್ಟ್ ಬೇಸ್ ಬಸ್ಸುಗಳನ್ನು ಇನ್ನು ಓಡಿಸುವುದಿಲ್ಲ. ಮೆಜೆಸ್ಟಿಕ್‍ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಜಿಲ್ಲಾವಾರು ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಸಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬದಲಿಸಲಾಗಿದೆ. 6 ಗಂಟೆಗೆ ಮುಗಿಯಬೇಕಿದ್ದ ಬಸ್ಸುಗಳ ಸಂಚಾರ ಹೆಚ್ಚು ಪ್ರಯಾಣಿಕರು ಇರುವುದರಿಂದ 10 ಗಂಟೆಯಾದರೂ ನಿಂತಿಲ್ಲ. ಇಂದು ಕಡೆ ದಿನ ವಲಸೆ ಕಾರ್ಮಿಕರಿಗೆ ಮಾತ್ರ ಪ್ರಯಾಣಿಸಲು ಅವಕಾಶ ಎಂದು ತಿಳಿಸಿದರು.

  • ವಲಸೆ ಕಾರ್ಮಿಕರಿಗೆ ಸಿಹಿ ಸುದ್ದಿ- ಬೆಳಗ್ಗೆ 10ರಿಂದ ಮೆಜೆಸ್ಟಿಕ್‍ನಿಂದ ಸಂಚರಿಸಲಿವೆ ಬಸ್

    ವಲಸೆ ಕಾರ್ಮಿಕರಿಗೆ ಸಿಹಿ ಸುದ್ದಿ- ಬೆಳಗ್ಗೆ 10ರಿಂದ ಮೆಜೆಸ್ಟಿಕ್‍ನಿಂದ ಸಂಚರಿಸಲಿವೆ ಬಸ್

    ಬೆಂಗಳೂರು: ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವರಿಗಾಗಿ ಮೆಜೆಸ್ಟಿಕ್‍ನಿಂದ ಬಸ್ ವ್ಯವಸ್ಥೆ ಮಾಡಲಾಗಿದೆ.

    ಕೆಂಪು ವಲಯದ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲ ಜಿಲ್ಲೆಗಳಿಗೆ ತೆರಳಬಹುದಾಗಿದೆ. ಭಾನುವಾರದಿಂದ ಬೆಳಗ್ಗೆ 10ರಿಂದ ಬಸ್ ಸಂಚಾರ ಆರಂಭವಾಗಲಿದ್ದು, ಸಂಜೆ 6ರ ವರೆಗೆ ಸಂಚರಿಸಲಿವೆ. ವೈದ್ಯಕೀಯ ಪರೀಕ್ಷೆ ನಡೆಸಿ ನಂತರ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ವಲಸೆ ಕಾರ್ಮಿಕರು ಹಾಗೂ ಇತರೆ ಪ್ರಯಾಣಿಕರಿಗಾಗಿ ಈ ಬಸ್ ವ್ಯವಸ್ಥೆ ಮಾಡಲಾಗಿದ್ದು, ವೈದ್ಯಕೀಯ ಪರೀಕ್ಷೆಗೊಳಪಟ್ಟು ತಮ್ಮ ಜಿಲ್ಲೆ ಹಾಗೂ ಊರುಗಳಿಗೆ ತೆರಳಬಹುದಾಗಿದೆ.

    ಲಾಕ್‍ಡೌನ್ ನಿಯಮಗಳನ್ನು ಸಡಿಲ ಮಾಡಿದ ಹಿನ್ನೆಲೆ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ತಮ್ಮ ಊರು ಹಾಗೂ ಜಿಲ್ಲೆಗಳಿಗೆ ತೆರಳುವ ವಲಸೆ ಕಾರ್ಮಿಕರಿಗಾಗಿ ಈ ವ್ಯವಸ್ಥೆ ಮಾಡಲಾಗಿದೆ. ಇದೆಲ್ಲದರ ಮಧ್ಯೆ ಬಸ್ ಪ್ರಯಾಣದ ದರದ ಕುರಿತು ಗೊಂದಲ ಉಂಟಾಗಿತ್ತು. ದುಪ್ಪಟ್ಟು ದರ ತೆಗೆದುಕೊಳ್ಳಲಾಗುತ್ತದೆ ಎಂಬ ವದಂತಿ ಹಬ್ಬಿತ್ತು. ಇದಕ್ಕೂ ಸಹ ಸಿಎಂ ಸ್ಪಷ್ಟನೆ ನೀಡಿದ್ದು, ಯಾವುದೇ ಕಾರಣಕ್ಕೂ ದುಪ್ಪಟ್ಟು ಹಣ ಪಡೆಯಬೇಡಿ ಎಂದು ತಿಳಿಸಿದ್ದಾರೆ.

    ಅಲ್ಲದೆ ಈ ಕುರಿತು ಕೆಎಸ್‍ಆರ್ ಟಿಸಿ ಪ್ರಧಾನ ವ್ಯವಸ್ಥಾಪಕ ಪ್ರಭಾಕರ್ ರೆಡ್ಡಿ ಮಾತನಾಡಿ, ವಲಸೆ ಕಾರ್ಮಿಕರಿಗೆಂದು ಬಸ್ ವ್ಯವಸ್ಥೆ ಮಾಡಲಾಗಿತ್ತು. ಆದರೆ ವಲಸೆ ಕಾರ್ಮಿಕರನ್ನು ಹೊರತುಪಡಿಸಿ ವಿದ್ಯಾರ್ಥಿಗಳು, ಬೇರೆ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದಾರೆ. ಸಾಮಾಜಿಕ ಅಂತರ ಇಲ್ಲದಂತಾಗಿದೆ. ಕೇವಲ 40 ಬಸ್ ಎಂದು ಮೊದಲು ಅಂದಾಜಿಸಿದ್ದೆವು. ಆದರೆ ಇದೀಗ 120 ಬಸ್‍ಗಳು ಹೊರಟಿವೆ ಎಂದು ಮಾಹಿತಿ ನೀಡಿದರು.

    ಬೆಳಗ್ಗೆ 10 ರಿಂದ ಸಂಜೆ 7 ಗಂಟೆವರೆಗೂ ಬಸ್ಸುಗಳ ವ್ಯವಸ್ಥೆ ಇದೆ. ಕೇವಲ ವಲಸೆ ಕಾರ್ಮಿಕರಷ್ಟೇ ಬರಬೇಕು, ಎಲ್ಲರೂ ಬಂದರೆ ಬಸ್ಸುಗಳ ವ್ಯವಸ್ಥೆ ಮಾಡಲು ಸಾಧ್ಯವಿಲ್ಲ. ನಾಳೆ 100 ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಇಂದಿನಂತೆ ಕಾಂಟ್ರಾಕ್ಟ್ ಬೇಸ್ ಬಸ್ಸುಗಳನ್ನು ಇನ್ನು ಓಡಿಸುವುದಿಲ್ಲ. ಮೆಜೆಸ್ಟಿಕ್‍ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಜಿಲ್ಲಾವಾರು ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬದಲಿಸಲಾಗಿದೆ. 6 ಗಂಟೆಗೆ ಮುಗಿಯಬೇಕಿದ್ದ ಬಸ್ಸುಗಳ ಸಂಚಾರ ಹೆಚ್ಚುಪ್ರಯಾಣಿಕರು ಇರುವುದರಿಂದ 10 ಗಂಟೆಯಾದರೂ ನಿಂತಿಲ್ಲ. ನಾಳೆ ಕಡೆ ದಿನ ವಲಸೆ ಕಾರ್ಮಿಕರಿಗೆ ಮಾತ್ರ ಪ್ರಯಾಣಿಸಲು ಅವಕಾಶ ಎಂದು ತಿಳಿಸಿದರು.

  • ರೆಡ್‍ಝೋನ್ ಅಲ್ಲದ ತಾಲೂಕುಗಳಲ್ಲಿ ಮೇ 4ರಿಂದ ಬಸ್ ಸಂಚಾರ: ಲಕ್ಷ್ಮಣ ಸವದಿ

    ರೆಡ್‍ಝೋನ್ ಅಲ್ಲದ ತಾಲೂಕುಗಳಲ್ಲಿ ಮೇ 4ರಿಂದ ಬಸ್ ಸಂಚಾರ: ಲಕ್ಷ್ಮಣ ಸವದಿ

    ಬೆಳಗಾವಿ: ರೆಡ್ ಝೋನ್ ಅಲ್ಲದ ತಾಲೂಕುಗಳಲ್ಲಿ ಮೇ 4ರಿಂದ ಬಸ್ ಸಂಚಾರಕ್ಕೆ ಅನುಮತಿ ನೀಡುತ್ತೇವೆ ಎಂದು ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

    ಇಂದು ನಗರದಲ್ಲಿ ಮಾತನಾಡಿದ ಅವರು, ತಾಲೂಕುವಾರು ಕೊರೊನಾ ಹಾಟ್‍ಸ್ಟಾಟ್‍ಗಳನ್ನು ಗುರುತಿಸಲಾಗಿದೆ. ಕೊರೊನಾ ಸೋಂಕು ಇರುವ ತಾಲೂಕುಗಳಲ್ಲಿ ಸಾರಿಗೆ ಸಂಚಾರ ಇರುವುದಿಲ್ಲ. ಅವುಗಳನ್ನು ಬಿಟ್ಟು ಉಳಿದ ತಾಲೂಕುಗಳಲ್ಲಿ ಗ್ರಾಮೀಣ ಭಾಗಕ್ಕೂ ಸೇರಿ ಸಾರಿಗೆ ವ್ಯವಸ್ಥೆಯನ್ನು ಮೇ 4ರಿಂದ ಮಾಡುತ್ತೇವೆ ಎಂದು ಹೇಳಿದರು.

    ಇದೇ ವೇಳೆ ವಲಸೆ ಕಾರ್ಮಿಕರಿಂದ ಕೆ.ಎಸ್.ಆರ್.ಟಿ.ಸಿ ಬಸ್‍ಗಳಲ್ಲಿ ದುಪ್ಪಟ್ಟು ದರ ವಸೂಲಿ ವಿಚಾರವಾಗಿ ಮಾತನಾಡಿದ ಅವರು, ಇದು ತಪ್ಪು ಕಲ್ಪನೆಯಿಂದ ಆಗಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಸಿಂಗಲ್ ಫೇರ್ ತಗೆದುಕೊಂಡು ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬಸ್‍ನಲ್ಲಿ ಕಡಿಮೆ ಜನರನ್ನು ಕಳಿಸಬೇಕಾಗುತ್ತೆ. ಕಾರ್ಮಿಕರನ್ನು ಅವರ ಊರಿಗೆ ಬಿಟ್ಟು ವಾಪಸ್ ಬರುವಾಗ ಖಾಲಿ ಬರಬೇಕಾಗುತ್ತೆ. ಆದರೂ ಈ ಹೊರೆ ಸಹಿಸಿಕೊಂಡು ನಿಗದಿತ ದರವನ್ನು ಪಡೆಯಲಾಗುತ್ತೆ ಎಂದರು.

    ವಲಸೆ ಕಾರ್ಮಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕೆಂಬ ಬೇಡಿಕೆ ವಿಚಾರವಾಗಿ ಮಾತನಾಡಿದ ಸವದಿ, ಈಗಾಗಲೇ ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ಸಹಾಯ ಮಾಡಿದ್ದೇವೆ. ಕೊರೊನಾದಿಂದ ಇಡೀ ವಿಶ್ವಕ್ಕೆ ಕಂಟಕವಾಗಿದೆ. ಇದು ಎಲ್ಲರೂ ಕೂಡ ಹೊರಬೇಕಾಗಿರುವ ಭಾರ, ಸ್ವಲ್ಪ ಸಹಿಸಿಕೊಳ್ಳಬೇಕಾಗುತ್ತೆ ಎಂದು ಹೇಳುವ ಮೂಲಕ ಕಾರ್ಮಿಕರಿಗೆ ಉಚಿತ ಪ್ರಯಾಣ ಅಸಾಧ್ಯ ಎಂದು ಪರೋಕ್ಷವಾಗಿ ಲಕ್ಷ್ಮಣ ಸವದಿ ತಿಳಿಸಿದರು.

  • ಪಬ್ಲಿಕ್ ಟಿವಿ ವರದಿಯಿಂದ ಎಚ್ಚೆತ್ತ ಸರ್ಕಾರ- ದುಪ್ಪಟ್ಟು ದರ ವಸೂಲಿ ಮಾಡದಂತೆ ಸಿಎಂ ಆದೇಶ

    ಪಬ್ಲಿಕ್ ಟಿವಿ ವರದಿಯಿಂದ ಎಚ್ಚೆತ್ತ ಸರ್ಕಾರ- ದುಪ್ಪಟ್ಟು ದರ ವಸೂಲಿ ಮಾಡದಂತೆ ಸಿಎಂ ಆದೇಶ

    – ನಿಟ್ಟುಸಿರು ಬಿಟ್ಟ ಕಾರ್ಮಿಕರು

    ಬೆಂಗಳೂರು: ತಮ್ಮ ಊರುಗಳಿಗೆ ಹೋಗಲು ಮುಂದಾಗಿದ್ದ ವಲಸೆ ಕಾರ್ಮಿಕರಿಂದ ದುಪ್ಪಟ್ಟು ಬಸ್ ಟಿಕೆಟ್ ದರವನ್ನು ಪಡೆಯಲಾಗುತ್ತಿರುವ ಕುರಿತು ಪಬ್ಲಿಕ್ ಟಿವಿ ವರದಿ ಮಾಡಿತ್ತು. ಈ ಬೆನ್ನಲ್ಲೇ ಎಚ್ಚೆತ್ತುಕೊಂಡ ಸರ್ಕಾರ, ದುಪ್ಪಟ್ಟು ದರ ವಸೂಲಿ ಮಾಡದಂತೆ ಆದೇಶ ಹೊರಡಿಸಿದೆ.

    ವಲಸೆ ಕಾರ್ಮಿಕರಿಂದ ದುಪಟ್ಟು ಹಣ ಪಡೆಯಬೇಡಿ. ಒನ್ ಸೈಡ್ ಬಸ್ ಟಿಕೆಟ್ ದರವನ್ನು ಮಾತ್ರ ತೆಗೆದುಕೊಳ್ಳಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರಿಂದಾಗಿ ಸಂಕಷ್ಟದಲ್ಲಿ ಸಿಲುಕಿದ್ದ ಕಾರ್ಮಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಇದನ್ನೂ ಓದಿ: ವಲಸೆ ಕಾರ್ಮಿಕರಿಗೆ ಬಿಗ್ ಶಾಕ್- ಬೆಂಗ್ಳೂರಿನಿಂದ ಹೊರಟವ್ರಿಗೆ ಡಬಲ್ ದರದ ಬಿಸಿ

    ಈ ಕುರಿತು ಟ್ವೀಟ್ ಮಾಡಿರುವ ಸಚಿವ ಸುರೇಶ್ ಕುಮಾರ್, ಕೆಎಸ್ಆರ್‌ಟಿಸಿ ಬಸ್‍ಗಳ ಮೂಲಕ ತಮ್ಮ-ತಮ್ಮ ಸ್ಥಳಗಳಿಗೆ ಹೋಗಲು ಬೆಂಗಳೂರಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಕಾದಿರುವ ಕಾರ್ಮಿಕರಿಗೆ ಹಳೇ ದರದಲ್ಲಿ ಹೋಗಲು ಅನುವು ಮಾಡಿಕೊಡಲು ಮುಖ್ಯಮಂತ್ರಿಗಳು ಹಸಿರು ನಿಶಾನೆ ತೋರಿದ್ದಾರೆ ಎಂದು ತಿಳಿಸಿದ್ದಾರೆ.

    ಇದಕ್ಕೂ ಮುನ್ನ ಮಾತನಾಡಿದ್ದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೂಲಿ ಕಾರ್ಮಿಕರಿಗೆ ಕೆಲಸ ಇಲ್ಲದೇ ಕೈಯಲ್ಲಿ ಹಣ ಇಲ್ಲದಂತೆ ಆಗಿದೆ. ಅವರ ಬಳಿ ಟಿಕೆಟ್‍ಗೆ ಹಣ ಕೇಳುವುದು ಬೇಡ. ಉಚಿತವಾಗಿ ಅವರವರ ಊರುಗಳಿಗೆ ಕಳಿಸಿಕೊಡುವ ಕೆಲಸ ಸರ್ಕಾರ ಮಾಡಲಿ. ನಾನು ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ ಎಂದು ಹೇಳಿದ್ದರು.

    ಈ ಮೊದಲು ಎಲ್ಲಿಗೆ, ಎಷ್ಟು ದರ ಇತ್ತು?
    ಬಾಗಲಕೋಟೆಗೆ ಈ ಹಿಂದೆ ನಿಗದಿಯಾಗಿದ್ದ 700 ರೂ. ಬದಲು 1,311 ರೂ. ಪಡೆಯಲಾಗುತ್ತಿದೆ. ಅಂತೆಯೇ ಬಳ್ಳಾರಿಗೆ ತೆರಳಲು 450 ರೂ. ಬದಲು 884 ರೂ., ಬೆಳಗಾವಿಗೆ ಹೋಗಲು 800 ರೂ. ಬದಲು 1,478 ರೂ., ವಸೂಲಿ ಮಾಡಲಾಗುತ್ತಿದೆ. ಬೆಳಗಾವಿಗೆ ಹೋಗಲು 800 ರೂ. ಬದಲು 1,478 ರೂ., ಚಿತ್ರದುರ್ಗಕ್ಕೆ ತೆರಳಲು 300 ರೂ. ಬದಲು 602 ರೂ., ಕೊಪ್ಪಳಕ್ಕೆ ತೆರಳಲು 600 ರೂಪಾಯಿ ಬದಲು 1,000 ರೂ., ಕಲಬುರಗಿಗೆ ತೆರಳಲು 900 ರೂಪಾಯಿ ಬದಲು 1,619 ರೂ. ಪಡೆಯಲಾಗುತ್ತಿದೆ. ಹೀಗೆ ವಿವಿಧ ಪ್ರದೇಶಗಳಿಗೆ ಹೋಗಲು ಸಿದ್ಧರಾದ ವಲಸೆ ಕಾರ್ಮಿಕರಿಗೆ ಬಸ್ ಟಿಕೆಟ್ ದರ ಆಘಾತ ನೀಡಿದೆ.

  • ವಲಸೆ ಕಾರ್ಮಿಕರಿಗೆ ಬಿಗ್ ಶಾಕ್- ಬೆಂಗ್ಳೂರಿನಿಂದ ಹೊರಟವ್ರಿಗೆ ಡಬಲ್ ದರದ ಬಿಸಿ

    ವಲಸೆ ಕಾರ್ಮಿಕರಿಗೆ ಬಿಗ್ ಶಾಕ್- ಬೆಂಗ್ಳೂರಿನಿಂದ ಹೊರಟವ್ರಿಗೆ ಡಬಲ್ ದರದ ಬಿಸಿ

    – ಬೇಕಾಬಿಟ್ಟಿ ಹಣ ವಸೂಲಿಗೆ ಕಾರ್ಮಿಕರ ಆಕ್ರೋಶ
    – ಎಲ್ಲಿಗೆ ಎಷ್ಟು ದರ..?

    ಬೆಂಗಳೂರು: ಲಾಕ್‍ಡೌನ್ ಘೋಷಣೆಯಿಂದ ಇಕ್ಕಟ್ಟಿಗೆ ಸಿಲುಕಿದ್ದ ವಲಸೆ ಕಾರ್ಮಿಕರು ಹಾಗೂ ಇತರರಿಗೆ ಗುಡ್‍ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ ಜೊತೆಗೆ ಶಾಕ್ ಕೂಡ ನೀಡಿದೆ.

    ಹೌದು. ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಪ್ರಯಾಣ ಆರಂಭಿಸಿದ ಬಸ್ಸುಗಳಿಗೆ ಡಬಲ್ ದರವನ್ನು ಪಡೆಯಲಾಗುತ್ತಿದೆ. ಒಂದೂವರೆ ತಿಂಗಳಿಂದ ಸಂಬಳವೂ ಇಲ್ಲದೆ, ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿರುವ ಕಾರ್ಮಿಕರಿಗೆ ಬಸ್ಸುಗಳ ಟಿಕೆಟ್ ದರ ಗಾಯದ ಮೇಲೆ ಬರೆ ಹಾಕಿದಂತಾಗಿದೆ.

    ಬಸ್ ಸಂಚಾರ ಆರಂಭದ ಸುದ್ದಿ ಕೇಳುತ್ತಿದ್ದಂತೆಯೇ ನೂರಾರು ವಲಸೆ ಕಾರ್ಮಿಕರು ಮೆಜೆಸ್ಟಿಕ್‍ನ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಜಮಾಯಿಸಿದರು. ಹೀಗಾಗಿ ಅಲ್ಲಿಯೇ ವಲಸೆ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಕೂಡ ಮಾಡಲಾಗುತ್ತಿದೆ. ಪ್ರತಿಯೊಬ್ಬರನ್ನೂ ಥರ್ಮಲ್ ಸ್ಕ್ರೀನಿಂಗ್ ಮಾಡಿ ನಂತರ ಬಸ್ ಹತ್ತಲು ಸೂಚನೆ ನೀಡಲಾಗುತ್ತಿದೆ. ಆದರೆ ಯಾವುದೇ ಮಾಹಿತಿ ನೀಡದೆ ಬಸ್ ಟಿಕೆಟ್ ದರವನ್ನು ದುಪ್ಪಟ್ಟು ಮಾಡಿರುವುದು ಪ್ರಯಾಣಿಕರಿಗೆ ಬಿಗ್ ಶಾಕ್ ನೀಡಿದಂತಾಗಿದೆ.

    ರಾಯಚೂರು, ಬೆಳಗಾವಿ, ಬಾಗಲಕೋಟೆ, ಕಲಬುರಗಿ, ಶಿವಮೊಗ್ಗ, ಮೈಸೂರು ಸೇರಿದಂತೆ 28 ಜಿಲ್ಲೆಗಳಿಗೆ ಬಸ್ ಸಂಚಾರ ಆರಂಭವಾಗಲಿದೆ. 55 ಸೀಟ್‍ಗಳುಳ್ಳ ಬಸ್ಸಿನಲ್ಲಿ ಕೇವಲ 30 ಜನರಿಗೆ ಮಾತ್ರ ಪ್ರಯಾಣ ಮಾಡಲು ಅವಕಾಶವನ್ನ ನೀಡಲಾಗಿದೆ. ಟಿಕೆಟ್ ದರ ನಿಗದಿತ ಬೆಲೆಗಿಂತ ಒಂದು ಪಟ್ಟು ಹೆಚ್ಚು ಮಾಡಲಾಗಿದ್ದು, ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಕಡ್ಡಾಯ ಮಾಡಲಾಗಿದೆ.

    ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಒಂದು ಬಸ್ಸಿನಲ್ಲಿ ಕೇವಲ 30 ಜನ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಅಷ್ಟೇ ಅಲ್ಲದೆ ಬೆಂಗಳೂರಿನಿಂದ ಬೇರೆ ಜಿಲ್ಲೆಗಳಿಗೆ ಹೊರಟ ಬಸ್ಸುಗಳು ವಾಪಸ್ ಬರುವಾಗ ಖಾಲಿ ಬರುತ್ತವೆ. ಹೀಗಾಗಿ ಟಿಕೆಟ್ ಏರಿಕೆ ಮಾಡಲಾಗಿದೆ ಎಂದು ಸಿಬ್ಬಂದಿ ಹೇಳುತ್ತಾರೆ. ಈ ಸಂಬಂಧ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರನ್ನು ಸಂಪರ್ಕಿಸಲು ಯತ್ನಿಸಿದರೆ ಮೊಬೈಲ್ ಸ್ವಿಚ್ ಆಫ್ ಬರುತ್ತಿದೆ.

    ಎಲ್ಲಿಗೆ, ಎಷ್ಟು ದರ..?
    ಬಾಗಲಕೋಟೆಗೆ ಈ ಹಿಂದೆ ನಿಗದಿಯಾಗಿದ್ದ 700 ರೂ. ಬದಲು 1,311 ರೂ. ಪಡೆಯಲಾಗುತ್ತಿದೆ. ಅಂತೆಯೇ ಬಳ್ಳಾರಿಗೆ ತೆರಳಲು 450 ರೂ. ಬದಲು 884 ರೂ., ಬೆಳಗಾವಿಗೆ ಹೋಗಲು 800 ರೂ. ಬದಲು 1,478 ರೂ., ವಸೂಲಿ ಮಾಡಲಾಗುತ್ತಿದೆ. ಬೆಳಗಾವಿಗೆ ಹೋಗಲು 800 ರೂ. ಬದಲು 1,478 ರೂ., ಚಿತ್ರದುರ್ಗಕ್ಕೆ ತೆರಳಲು 300 ರೂ. ಬದಲು 602 ರೂ., ಕೊಪ್ಪಳಕ್ಕೆ ತೆರಳಲು 600 ರೂಪಾಯಿ ಬದಲು 1,000 ರೂ., ಕಲಬುರಗಿಗೆ ತೆರಳಲು 900 ರೂಪಾಯಿ ಬದಲು 1,619 ರೂ. ಪಡೆಯಲಾಗುತ್ತಿದೆ. ಹೀಗೆ ವಿವಿಧ ಪ್ರದೇಶಗಳಿಗೆ ಹೋಗಲು ಸಿದ್ಧರಾದ ವಲಸೆ ಕಾರ್ಮಿಕರಿಗೆ ಬಸ್ ಟಿಕೆಟ್ ದರ ಆಘಾತ ನೀಡಿದೆ.

  • ವಲಸೆ ಕಾರ್ಮಿಕರ ಸ್ಥಳಾಂತರಕ್ಕೆ ಕೇಂದ್ರ ಗ್ರೀನ್ ಸಿಗ್ನಲ್

    ವಲಸೆ ಕಾರ್ಮಿಕರ ಸ್ಥಳಾಂತರಕ್ಕೆ ಕೇಂದ್ರ ಗ್ರೀನ್ ಸಿಗ್ನಲ್

    ನವದೆಹಲಿ: ಲಾಕ್‍ಡೌನ್‍ನಿಂದಾಗಿ ಬೇರೆ ಬೇರೆ ರಾಜ್ಯಗಳಲ್ಲಿ ಸಿಲುಕಿರುವ ಕಾರ್ಮಿಕರನ್ನು ಸ್ಥಳಾಂತರಿಸಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

    ಕೊರೊನಾ ಲಾಕ್‍ಡೌನ್ ಅವಧಿ ಮುಗಿಯಲು ಕೇವಲ ನಾಲ್ಕು ದಿನಗಳಷ್ಟೇ ಬಾಕಿ ಇದ್ದು, ದಿನ ಕಳೆದಂತೆ ಲಾಕ್‍ಡೌನ್ ನಿಯಮಗಳ ಸಡಿಲಿಕೆ ಮುಂದುವರೆದಿದೆ. ಈ ಮೊದಲು ಬೇರೆ ಬೇರೆ ಜಿಲ್ಲೆಗಳಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರನ್ನು, ಅವರ ತವರು ಜಿಲ್ಲೆಗಳಿಗೆ ಕಳುಹಿಸಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿತ್ತು. ಇವತ್ತು ಇನ್ನೂ ಒಂದು ಹೆಜ್ಜೆ ಮುಂದೆ ಹೋದ ಕೇಂದ್ರ ಸರ್ಕಾರ, ಲಾಕ್‍ಡೌನ್‍ನಲ್ಲಿ ಸಿಲುಕಿದ್ದವರಿಗೆ ಮತ್ತಷ್ಟು ರಿಲೀಫ್ ನೀಡಿದೆ.

    ಲಾಕ್‍ಡೌನ್‍ನಿಂದ ಬೇರೆ ಬೇರೆ ಸ್ಥಳಗಳಲ್ಲಿ ಸಿಲುಕಿದ್ದ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರವಾಸಿಗರನ್ನು ಅವರ ಸ್ವಸ್ಥಳಗಳಿಗೆ ಕಳುಹಿಸಲು ಇವತ್ತು ಕೇಂದ್ರ ಗೃಹ ಸಚಿವಾಲಯ ಷರತ್ತುಬದ್ಧ ಒಪ್ಪಿಗೆ ನೀಡಿದೆ.

    ಮಾರ್ಗ ಸೂಚಿ: ಬೇರೆ ರಾಜ್ಯಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರವಾಸಿಗರಿಗೆ ತವರು ರಾಜ್ಯಗಳಿಗೆ ಕಳುಹಿಸಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ತಮ್ಮ ರಾಜ್ಯಗಳಿಗೆ ತೆರಳುವವರು ನೋಡಲ್ ಅಥವಾ ಸಂಬಂಧಿಸಿದ ಅಧಿಕಾರಿಯ ಅನುಮತಿ ಕಡ್ಡಾಯವಾಗಿ ಪಡೆಯಬೇಕು. ಅಂತರ್ ರಾಜ್ಯಗಳ ಪರಸ್ಪರ ಅನುಮತಿಯ ಮೇಲೆ ಈ ಪ್ರಕ್ರಿಯೆ ನಡೆಯಬೇಕು. ಸ್ಥಳಾಂತರಕ್ಕೂ ಮುನ್ನ ಎಲ್ಲರ ಆರೋಗ್ಯ ತಪಾಸಣೆ ನಡೆಸಬೇಕು. ಸರ್ಕಾರ ನಿಗದಿ ಮಾಡಿದ ವಾಹನಗಳಲ್ಲೇ ಕಾರ್ಮಿಕರು ತಮ್ಮ ಊರುಗಳಿಗೆ ಪ್ರಯಾಣಿಸಬೇಕು. ಖಾಸಗಿ ವಾಹನಗ ಬಳಕೆ ಮಾಡುವಂತಿಲ್ಲ.

    ಬಸ್ ಸ್ಯಾನಿಟೈಸ್ ಮಾಡಿ ನಿಯಮಗಳಿಗನುಸಾರವಾಗಿ ಪ್ರಯಾಣಿಕರನ್ನು ಸಾಗಿಸಬೇಕು. ಪ್ರಯಾಣದ ವೇಳೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವದರ ಜೊತೆಯಲ್ಲಿ ಮಾಸ್ಕ್ ಧರಿಸಬೇಕು. ಇನ್ನು ತಮ್ಮೂರಗಳಿಗೆ ತೆರಳಿದ್ರೆ ಸ್ಥಳೀಯ ಆರೋಗ್ಯಾಧಿಕಾರಿಗಳ ಸಲಹೆ ಪಡೆದುಕೊಳ್ಳಬೇಕು. ಕ್ವಾರಂಟೈನ್ ಗೆ ಸೂಚಿಸಿದ್ರೆ ಕಡ್ಡಾಯವಾಗಿ ಪಾಲಿಸಬೇಕು.

  • ವದಂತಿ ನಂಬಿ ಮಂಗ್ಳೂರು ಟೌನ್‍ಹಾಲ್ ಎದುರು ಜಮಾಯಿಸಿದ ವಲಸೆ ಕಾರ್ಮಿಕರು

    ವದಂತಿ ನಂಬಿ ಮಂಗ್ಳೂರು ಟೌನ್‍ಹಾಲ್ ಎದುರು ಜಮಾಯಿಸಿದ ವಲಸೆ ಕಾರ್ಮಿಕರು

    ಮಂಗಳೂರು: ಎರಡು ವಾರಗಳ ಹಿಂದೆ ವದಂತಿ ನಂಬಿ ಮುಂಬೈನಲ್ಲಿ ಸಾವಿರಾರು ವಲಸೆ ಕಾರ್ಮಿಕರು ರೈಲ್ವೇ ಸ್ಟೇಷನ್‍ಗೆ ಬಂದಿದ್ದರು. ಆ ವೇಳೆ ಪರಿಸ್ಥಿತಿ ನಿಭಾಯಿಸಲು ಪೊಲೀಸರು ಹೆಣಗಾಡಿದರು. ಇಂತದ್ದೆ ಸನ್ನಿವೇಶ ಇಂದು ಮಂಗಳೂರಿನಲ್ಲಿ ಕಂಡು ಬಂತು.

    ಜಿಲ್ಲಾಡಳಿತ ತಮ್ಮನ್ನು ಸ್ವಗ್ರಾಮಗಳಿಗೆ ಕಳಿಸಲಿದೆ ಎಂಬ ವದಂತಿ ನಂಬಿದ ಸಾವಿರಕ್ಕೂ ಹೆಚ್ಚು ವಲಸೆ ಕಾರ್ಮಿಕರು ಮಂಗಳೂರಿನ ಟೌನ್‍ಹಾಲ್‍ನಲ್ಲಿ ಕಾಣಿಸಿಕೊಂಡರು. ಸಾಮಾಜಿಕ ಅಂತರಪಾಲಿಸದೆ ಗುಂಪು ಸೇರಿದ್ದರು. ಇದು ವದಂತಿ ಹೋಗಿ ಎಂದರೂ ಯಾರೂ ಕೇಳಲಿಲ್ಲ.

    ಕಾರ್ಮಿಕರು ಊರಿಗೆ ಹೋಗಲು ಜಿಲ್ಲಾಡಳಿತ ವ್ಯವಸ್ಥೆ ಮಾಡಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬೇರೆ ಬೇರೆ ಕಡೆಗಳಲ್ಲಿ ದುಡಿಯುತ್ತಿದ್ದ ಸುಮಾರು 1 ಸಾವಿರಕ್ಕೂ ಅಧಿಕ ಕೂಲಿ ಕಾರ್ಮಿಕರು ಬಂದು ಸೇರಿದ್ದರು. ಕೆಲ ಕಾರ್ಮಿಕರು ಊರಿಗೆ ಹೋಗಲು ಜಿಲ್ಲಾಡಳಿತ ವ್ಯವಸ್ಥೆ ಮಾಡಬೇಕೆಂದು ಮನವಿ ಮಾಡಿದರು.

    ಬಹುತೇಕರು ಉತ್ತರ ಕರ್ನಾಟಕ ಮೂಲದ ಕೂಲಿ ಕಾರ್ಮಿಕರಾಗಿದ್ದು, ಕಳೆದ ಎರಡು ದಿನಗಳಲ್ಲಿ 60 ಬಸ್ ಗಳಲ್ಲಿ 780 ಕಾರ್ಮಿಕರನ್ನು ಕಳುಹಿಸಲಾಗಿತ್ತು. ಹೀಗಾಗಿ ಇನ್ನುಳಿದ ಕಾರ್ಮಿಕರು ತಮ್ಮ ತಮ್ಮ ಊರಿಗೆ ಹೋಗಲೆಂದು ಜಿಲ್ಲಾಡಳಿತದ ನೆರವಿಗಾಗಿ ಕಾಯುತ್ತಿದ್ದಾರೆ. ಬಳಿಕ ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ಕೊನೆಗೂ ಕಾರ್ಮಿಕರ ಮನವಿಗೆ ಸ್ಪಂಧಿಸಿದ ಜಿಲ್ಲಾಡಳಿತ ಕಾರ್ಮಿಕರನ್ನು ಊರಿಗೆ ಕಳುಹಿಸಲು ಸಿದ್ಧತೆ ನಡೆಸುತ್ತಿದೆ.

  • ವಲಸೆ, ಕೂಲಿ ಕಾರ್ಮಿಕರು ಸ್ಥಳಾಂತರಕ್ಕೆ ಅವಕಾಶ – ಷರತ್ತುಗಳು ಅನ್ವಯ

    ವಲಸೆ, ಕೂಲಿ ಕಾರ್ಮಿಕರು ಸ್ಥಳಾಂತರಕ್ಕೆ ಅವಕಾಶ – ಷರತ್ತುಗಳು ಅನ್ವಯ

    ಬೆಂಗಳೂರು: ವಲಸೆ ಮತ್ತು ಕೂಲಿ ಕಾರ್ಮಿಕರ ಸ್ಥಳಾಂತರಕ್ಕೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ.

    ಕೆಎಸ್‍ಆರ್‍ ಟಿಸಿ ಬಸ್ ಗಳ ಮೂಲಕ ಕಾರ್ಮಿಕರನ್ನು ಸ್ಥಳಾಂತರ ಮಾಡಬಹುದಾಗಿದೆ. ಸ್ಥಳಾಂತರ ಮಾಡುವಾದ ಶೇ.40ರಷ್ಟು ಜನರನ್ನು ಮಾತ್ರ ಬಸ್ ನಲ್ಲಿ ಕರೆದುಕೊಂಡ ಹೋಗವುದರ ಜೊತೆಗೆ ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಕಾರ್ಮಿಕರನ್ನು ಹೊರ ರಾಜ್ಯಗಳಿಗೆ ಸ್ಥಳಾಂತರ ಮಾಡುವಂತಿಲ್ಲ. ರಾಜ್ಯದ ಜಿಲ್ಲೆಗಳಲ್ಲಿ ಮಾತ್ರ ಸ್ಥಳಾಂತರ ಅವಕಾಶ ನೀಡಲಾಗಿದೆ. ಕೂಲಿ ಕಾರ್ಮಿಕರನ್ನು ತಮ್ಮ ತಮ್ಮ ಗ್ರಾಮಗಳಿಗೆ ಮತ್ತು ಕಾಮಗಾರಿ ನಡೆಯುವ ಸ್ಥಳಗಳಿಗೆ ಶಿಫ್ಟ್ ಮಾಡಬಹುದು. ಸರ್ಕಾರ ಈಗಾಗಲೇ ಗುರುತಿಸಿರುವ ಕೊರೊನಾ ಕೆಂಪು ವಲಯಗಳಿಗೆ ಕಳುಹಿಸುವಂತಿಲ್ಲ ಎಂದು ರಾಜ್ಯ ಸರ್ಕಾರ ಖಡಕ್ ಆಗಿ ಸೂಚಿಸಿದೆ.

  • ರಾತ್ರೋರಾತ್ರಿ ಕಲ್ಲು ತೂರಾಟ ಮಾಡಿ, ವಾಹನಗಳಿಗೆ ಬೆಂಕಿ ಹಚ್ಚಿದ ಕಾರ್ಮಿಕರು

    ರಾತ್ರೋರಾತ್ರಿ ಕಲ್ಲು ತೂರಾಟ ಮಾಡಿ, ವಾಹನಗಳಿಗೆ ಬೆಂಕಿ ಹಚ್ಚಿದ ಕಾರ್ಮಿಕರು

    – ಸ್ವ ಗ್ರಾಮಗಳಿಗೆ ಹೋಗಲು ಅವಕಾಶ ಮಾಡಿಕೊಡುವಂತೆ ಒತ್ತಾಯ

    ಗಾಂಧಿನಗರ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೇಶವೇ ಲಾಕ್‍ಡೌನ್ ಆಗಿದೆ. ಇದರಿಂದ ನೂರಾರು ವಲಸೆ ಕಾರ್ಮಿಕರು, ದಿನಗೂಲಿ ಕಾರ್ಮಿಕರು ಪರದಾಡುತ್ತಿದ್ದಾರೆ. ಅಲ್ಲದೇ ತಾವು ಕೆಲಸ ಮಾಡುತ್ತಿದ್ದ ಸ್ಥಳದಿಂದ ತಮ್ಮ ಸ್ವಂತ ಊರಿಗೆ ಹೋಗಲು ಸಾಧ್ಯವಾಗಿಲ್ಲ ಎಂದು ಶುಕ್ರವಾರ ರಾತ್ರಿ ಅನೇಕ ವಾಹನಗಳಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ಮಾಡಿರುವ ಘಟನೆ ಗುಜರಾತ್‍ನಲ್ಲಿ ನಡೆದಿದೆ.

    ನೂರಾರು ವಲಸೆ ಕಾರ್ಮಿಕರು ಗುಜರಾತ್‍ನ ಸೂರತ್‍ನಲ್ಲಿ ಸಿಲುಕಿಕೊಂಡಿದ್ದಾರೆ. ಲಾಕ್‍ಡೌನ್ ಆದ ಪರಿಣಾಮದಿಂದ ಕಾರ್ಮಿಕರು ತಮ್ಮ ಸ್ವಂತ ಗ್ರಾಮಗಳಿಗೆ ಹೋಗಲು ಯಾವುದೇ ವಾಹನವೂ ಸಿಗಲಿಲ್ಲ. ಹೀಗಾಗಿ ಅಂದಿನಿಂದ ಮಾಡಲು ಕೆಲಸವಿಲ್ಲದೆ ಸೂರತ್‍ನಲ್ಲೇ ಸಿಲುಕಿಕೊಂಡಿದ್ದಾರೆ. ಆದ್ದರಿಂದ ತಮ್ಮ ಗ್ರಾಮಕ್ಕೆ ಮರಳಲು ವ್ಯವಸ್ಥೆಗಳನ್ನು ಮಾಡಿಕೊಡಬೇಕು ಎಂದು ಒತ್ತಾಯಿಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಅಲ್ಲದೇ ಲಾಕ್‍ಡೌನ್ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂಬ ಸುದ್ದಿ ಕೇಳುತ್ತಿದ್ದಂತೆ ಹಲವಾರು ವಲಸೆ ಕಾರ್ಮಿಕರು ಹತಾಶರಾಗಿ ರಸ್ತೆಗಿಳಿದು ಗುಂಪುಕಟ್ಟಿದ್ದಾರೆ. ನಂತರ ಕಲ್ಲು ತೂರಾಟ ಮಾಡಿ, ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಅಷ್ಟೇ ಅಲ್ಲದೇ ಲಾಕ್‍ಡೌನ್ ಆಗಿದ್ದರಿಂದ ಶೀಘ್ರವೇ ತಮ್ಮ ಗ್ರಾಮಗಳಿಗೆ ವಾಪಸ್ ಹೋಗಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸದ್ಯಕ್ಕೆ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣ ಮಾಡಿದ್ದು, ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಹಲವಾರು ವಲಸೆ ಕಾರ್ಮಿಕರನ್ನು ವಶಕ್ಕೆಪಡೆದಿದ್ದಾರೆ. ಇದುವರೆಗೂ ಗುಜರಾತ್‍ನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 378ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.