Tag: ವಶ

  • ಮುಡಾ ಕೇಸ್‌ನಲ್ಲಿ ಆರೋಪಿಗಳ ಪಾಸ್‌ಪೋರ್ಟ್ ವಶಪಡಿಸಿಕೊಳ್ಳಿ: ಇ.ಡಿಗೆ ಅಶೋಕ್ ಮನವಿ

    ಮುಡಾ ಕೇಸ್‌ನಲ್ಲಿ ಆರೋಪಿಗಳ ಪಾಸ್‌ಪೋರ್ಟ್ ವಶಪಡಿಸಿಕೊಳ್ಳಿ: ಇ.ಡಿಗೆ ಅಶೋಕ್ ಮನವಿ

    ಬೆಂಗಳೂರು: ಮುಡಾ ಕೇಸ್‌ನಲ್ಲಿ (MUDA Scam) ಎಲ್ಲಾ ಆರೋಪಿಗಳ ಪಾಸ್‌ಪೋರ್ಟ್ ವಶಕ್ಕೆ ಪಡೆಯುವಂತೆ ವಿಪಕ್ಷ ನಾಯಕ ಆರ್.ಅಶೋಕ್ (R.Ashoka) ಒತ್ತಾಯಿಸಿದ್ದಾರೆ.

    ಇದಕ್ಕೆ ಸಂಬಂಧಿಸಿದಂತೆ ತಮ್ಮ ಎಕ್ಸ್ (X) ಖಾತೆಯಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ. ಮುಡಾ ಕೇಸ್‌ನಲ್ಲಿ ಇಡಿ ಅಧಿಕಾರಿಗಳ ದಾಳಿ ಬೆನ್ನಲ್ಲೇ ಅಕ್ರಮಕ್ಕೆ ಸಂಬಂಧಿಸಿದ ಎಲ್ಲಾ ಆರೋಪಿಗಳು ಹಾಗೂ ಅಧಿಕಾರಿಗಳ ಪಾಸ್‌ಪೋರ್ಟ್ ವಶಕ್ಕೆ ಪಡೆಯುವಂತೆ ಒತ್ತಾಯಿಸಿದ್ದು, ಇಡಿ ನಿರ್ದೇಶಕರು, ಕರ್ನಾಟಕ ಪೊಲೀಸ್ ಡಿಜಿ-ಐಜಿಗೆ ಮನವಿ ಮಾಡಿದ್ದಾರೆ.

    ಟ್ವೀಟ್‌ನಲ್ಲಿ ಏನಿದೆ?
    ಮುಡಾದಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನು ಜಾರಿ ನಿರ್ದೇಶನಾಲಯ ತನಿಖೆ ಮಾಡುತ್ತಿದೆ. ಇಡಿ ಅಧಿಕಾರಿಗಳು ಮೈಸೂರಿನ ಮುಡಾ ಕಚೇರಿಗೆ, ತಾಲ್ಲೂಕು ಕಚೇರಿಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ.

    ಇಡಿ ತನಿಖೆ ಇಷ್ಟೊಂದು ಚುರುಕುಗೊಂಡಿರುವ ಪರಿಸ್ಥಿತಿಯಲ್ಲಿ ಇಡೀ ಪ್ರಕರಣ ಮತ್ತೊಂದು ಮಜಲು ತಲುಪಿದಂತಾಗಿದೆ. ಅಧಿಕಾರದ ಅತ್ಯುನ್ನತ ಸ್ಥಾನದಲ್ಲಿರುವವರು, ಅವರ ಕುಟುಂಬ ಸದಸ್ಯರು, ಹಿರಿಯ ಅಧಿಕಾರಿಗಳು ಈ ಪ್ರಕರಣದಲ್ಲಿ ಆರೋಪಿಗಳಾಗಿರುವುದರಿಂದ, ಈ ಪ್ರಕರಣ ಎಷ್ಟು ಗಂಭೀರವೋ ಅಷ್ಟೇ ಸೂಕ್ಷ್ಮವೂ ಆಗಿದೆ. ಈ ನಿಟ್ಟಿನಲ್ಲಿ ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಯ ದೃಷ್ಟಿಯಿಂದ ಈ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು, ಆರೋಪಿಗಳು ಹಾಗೂ ಸಂಭವನೀಯ ಸಾಕ್ಷಿದಾರರ ಪಾಸ್‌ಪೋರ್ಟ್‌ಗಳನ್ನು ಈ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಇಡಿ ನಿರ್ದೇಶಕರು ಮತ್ತು ಡಿಜಿ-ಐಜಿಗೆ ಮನವಿ ಮಾಡುತ್ತೇನೆ ಎಂದಿದ್ದಾರೆ.

  • ಗುಜರಾತ್‌ನಲ್ಲಿ 5,000 ಕೋಟಿ ಮೌಲ್ಯದ ಕೊಕೇನ್ ಸೀಜ್

    ಗುಜರಾತ್‌ನಲ್ಲಿ 5,000 ಕೋಟಿ ಮೌಲ್ಯದ ಕೊಕೇನ್ ಸೀಜ್

    – 2 ವಾರದಲ್ಲಿ ಒಟ್ಟು 13,000 ಕೋಟಿ ಮೌಲ್ಯದ ಕೊಕೇನ್ ಜಪ್ತಿ

    ಗುಜರಾತ್: 5,000 ಕೋಟಿ ರೂ. ಮೌಲ್ಯದ 514 ಕೆ.ಜಿ ಕೊಕೇನ್ (Cocaine) ವಶಕ್ಕೆ ಪಡೆಯಲಾಗಿದ್ದು, ದೆಹಲಿ ಹಾಗೂ ಗುಜರಾತ್ ಪೊಲೀಸರ ವಿಶೇಷ ತಂಡವು ಭರ್ಜರಿ ಬೇಟೆಯಾಡಿ, ಐವರನ್ನು ಬಂಧಿಸಿದ್ದಾರೆ.

    ಇತ್ತೀಚಿಗೆ ದೆಹಲಿ ಪೊಲೀಸರು 5,000 ಸಾವಿರ ಕೋಟಿ ರೂ.ಗೂ ಹೆಚ್ಚಿನ ಮೌಲ್ಯದ ಕೊಕೇನ್ ವಶಪಡಿಸಿಕೊಂಡಿದ್ದರು. ಅದರ ಬೆನ್ನಲ್ಲೇ ಭಾನುವಾರ ಗುಜರಾತ್‌ನಲ್ಲಿ 5,000 ಕೋಟಿ ರೂ. ಮೂಲ್ಯದ 518 ಕೆ.ಜಿ ಮೌಲ್ಯದ ಕೊಕೇನ್ ವಶಪಡಿಸಿಕೊಂಡಿದೆ. ಗುಜರಾತ್ ಹಾಗೂ ದೆಹಲಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಅಂಕಲೇಶ್ವರ ಔಷಧ ಕೇಂದ್ರದಲ್ಲಿ ಮಾದಕ ವಸ್ತು ಪತ್ತೆಯಾಗಿದೆ.ಇದನ್ನೂ ಓದಿ:ಟ್ರಂಪ್‌ಗಿಂತಲೂ ಕಮಲಾ ಹ್ಯಾರಿಸ್‌ಗೆ ಹೆಚ್ಚಿನ ಕೋಟ್ಯಧಿಪತಿಗಳ ಬೆಂಬಲ – ಇಲ್ಲಿದೆ ಬಿಲಿಯನೇರ್ಸ್‌ ಲಿಸ್ಟ್‌

    ಈ ಮೂಲಕ ಒಟ್ಟು 2 ವಾರದಲ್ಲಿ ಗುಜರಾತ್ ಹಾಗೂ ದೆಹಲಿಯಲ್ಲಿ ಜಾರಿ ನಿದೇಶನಾಯಲಯ (ED-Enforcement Directorate) ಒಟ್ಟು 13,000 ಕೋಟಿ ರೂ.ಮೌಲ್ಯದ 1289 ಕೆ.ಜಿ ಕೊಕೇನ್ ಹಾಗೂ 40 ಕೆ.ಜಿಯಷ್ಟು ಥಾಯ್ಲೆಂಡ್‌ನ ಹೈಡ್ರೋಪೋನಿಕ್ ಎಂಬ ಮಾದಕ ವಸುವನ್ನು ವಶಕ್ಕೆ ಪಡೆದುಕೊಂಡಿವೆ.

    ಇದಕ್ಕೂ ಮುನ್ನವೇ ಅ.1 ರಂದು ದೆಹಲಿ ಪೊಲೀಸರ ವಿಶೇಷ ತಂಡವು ಮಹಿಪಾಲ್‌ಪುರದಲ್ಲಿರುವ ತುಷಾರ್ ಗೋಯಲ್ ಅವರ ಗೋದಾಮಿನ ಮೇಲೆ ದಾಳಿ ನಡೆಸಿತ್ತು. ಆ ವೇಳೆ 562 ಕೆ.ಜಿ. ಕೊಕೇನ್ ಮತ್ತು 40 ಕೆ.ಜಿ. ಹೈಡ್ರೋಪೋನಿಕ್ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದರು. ಅದಾದ ಬಳಿಕ ಹಿಚ್ಚಿನ ತನಿಖೆಗಾಗಿ ಅ.11ರಂದು ದೆಹಲಿಯ ರಮೇಶ್ ನಗರದಲ್ಲಿ 208 ಕೆ.ಜಿ. ಕೊಕೇನ್‌ನ್ನು ವಶಪಡಿಸಿಕೊಳ್ಳಲಾಗಿದ್ದು, ನಮಕೀನ್ ಪ್ಯಾಕೆಟ್‌ನಲ್ಲಿ ಮಾದಕವಸ್ತು ಲಭ್ಯವಾಗಿತ್ತು.

    ಈ ಪ್ರಕರಣಗಳ ಬೆನ್ನಲ್ಲೇ ದೆಹಲಿ ಹಾಗೂ ಗುಜರಾತ್ ಪೊಲೀಸರ ವಿಶೇಷ ತಂಡವು ಭರ್ಜರಿ ದಾಳಿ ನಡೆಸಿದ್ದು, 5000 ಕೋಟಿ ರೂ. ಮೌಲ್ಯದ 514 ಕೆ.ಜಿ ಕೊಕೇನ್ ವಶಕ್ಕೆ ಪಡೆದು ಐವರನ್ನು ಬಂಧಿಸಿದ್ದಾರೆ. ಸದ್ಯ ಈ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ.ಇದನ್ನೂ ಓದಿ: ಬಾಬಾ ಸಿದ್ದಿಕಿ ಹತ್ಯೆ ಕೇಸ್‌ – ಕೃತ್ಯದ ಬಳಿಕ ಭದ್ರತಾ ಸಿಬ್ಬಂದಿ ಮೇಲೆ ಖಾರದ ಪುಡಿ ಎರಚಿ ಪರಾರಿಯಾಗಿದ್ದ ಆರೋಪಿಗಳು

  • ಬರೋಬ್ಬರಿ 5 ಕೋಟಿ ಮೌಲ್ಯದ ದಾಖಲೆ ಇಲ್ಲದ ಚಿನ್ನಾಭರಣ ವಶಕ್ಕೆ

    ಬರೋಬ್ಬರಿ 5 ಕೋಟಿ ಮೌಲ್ಯದ ದಾಖಲೆ ಇಲ್ಲದ ಚಿನ್ನಾಭರಣ ವಶಕ್ಕೆ

    ಧಾರವಾಡ: ಸೂಕ್ತ ದಾಖಲೆಗಳಿಲ್ಲದೇ ಸಾಗಿಸಲಾಗುತ್ತಿದ್ದ ಬರೋಬ್ಬರಿ 5 ಕೋಟಿ ರೂ. ಮೌಲ್ಯದ 7 ಕೆಜಿ 700 ಗ್ರಾಂ ತೂಕದ ಚಿನ್ನಾಭರಣಗಳನ್ನು (Gold Jewellery) ಧಾರವಾಡ (Dharwad) ಹೊರವಲಯದ ತೇಗೂರು ಚೆಕ್ ಪೋಸ್ಟ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ರಮ ಹಣ ವರ್ಗಾವಣೆ ಸೇರಿದಂತೆ ಇತ್ಯಾದಿ ಚಟುವಟಿಕೆಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿರಿಸಿ ಚೆಕ್ ಪೋಸ್ಟ್ ತೆರೆದಿದ್ದಾರೆ. ಧಾರವಾಡ-ಬೆಳಗಾವಿ ರಸ್ತೆಯ ತೇಗೂರು ಚೆಕ್ ಪೋಸ್ಟ್‌ನಲ್ಲಿ ಇದೀಗ ದಾಖಲೆ ಇಲ್ಲದೇ ಸಾಗಿಸಲಾಗುತ್ತಿದ್ದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಇದು ನನ್ನ ಕೊನೇ ಚುನಾವಣೆ, 1 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ – ನಾಮಪತ್ರ ಸಲ್ಲಿಸಿ ಸಿದ್ದು ಮನವಿ

    ಬೆಳಗಾವಿ ಕಡೆಯಿಂದ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಬಿವಿಸಿ ಎಂಬ ಲಾಜಿಸ್ಟಿಕ್ ವಾಹನದಲ್ಲಿ ಈ ಚಿನ್ನಾಭಾರಣ ಸಾಗಿಸಲಾಗುತ್ತಿತ್ತು. ಮಲಬಾರ್, ಜೋಯಾಲುಕಾಸ್, ಕಲ್ಯಾಣ್ ಜ್ಯುವೆಲರ್ಸ್ ಸೇರಿದಂತೆ ಇತರ ಚಿನ್ನಾಭರಣಗಳನ್ನು ಗರಗ ಠಾಣೆ ಪೊಲೀಸರು ವಶಪಡಿಸಿಕೊಂಡು ಆದಾಯ ಮತ್ತು ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಮಾಮಾನನ್ನು ಮತ್ತೊಮ್ಮೆ ಗೆಲ್ಲಿಸಿ: ಜನರಲ್ಲಿ ಸುದೀಪ್‌ ಮನವಿ

  • ನೂರು ಕೋಟಿ ಕ್ಲಬ್ ಸೇರಿದ ಚುನಾವಣೆ ಅಕ್ರಮ- ಹಣಕ್ಕಿಂತ ಕುಕ್ಕರ್, ತವಾಗಳದ್ದೇ ಮೇಲುಗೈ

    ನೂರು ಕೋಟಿ ಕ್ಲಬ್ ಸೇರಿದ ಚುನಾವಣೆ ಅಕ್ರಮ- ಹಣಕ್ಕಿಂತ ಕುಕ್ಕರ್, ತವಾಗಳದ್ದೇ ಮೇಲುಗೈ

    ಬೆಂಗಳೂರು: ಕಳೆದ ಹನ್ನೆರಡು ದಿನಗಳಲ್ಲಿ ಚುನಾವಣೆ ಅಧಿಕಾರಿಗಳು (Election Officer) ಹಾಗೂ ಪೊಲೀಸರು ಚುನಾವಣಾ (Election) ಅಕ್ರಮಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ ನೂರು ಕೋಟಿಯಷ್ಟು ಹಣ, ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಅಚ್ಚರಿಯ ವಿಚಾರ ಎಂದರೆ ಇದರಲ್ಲಿ ಹಣಕ್ಕಿಂತ ಕುಕ್ಕರ್, ತವಾ ಮತ್ತು ಸೀರೆಗಳೇ ಮೇಲುಗೈ ಸಾಧಿಸಿದೆ.

    ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ (Congress), ಬಿಜೆಪಿ (BJP), ಜೆಡಿಎಸ್ (JDS) ಪಕ್ಷಗಳು ಇನ್ನಿಲ್ಲದಂತೆ ಕಸರತ್ತು ನಡೆಸಿದ್ದಾರೆ. ಒಂದು ಕಡೆ ಟಿಕೆಟ್ ಗೊಂದಲ, ಮತ್ತೊಂದು ಕಡೆ ಮತದಾರರನ್ನು ಓಲೈಸಿಕೊಳ್ಳಲು ಆಮಿಷಗಳು. ಇದನ್ನು ಮನಗಂಡ ಚುನಾವಣಾ ಆಯೋಗ ಮಾರ್ಚ್ 29 ರಂದು ನೀತಿ ಸಂಹಿತೆ (Code Of Conduct) ಜಾರಿ ಮಾಡಿ ಆದೇಶ ಹೊರಡಿಸಿತ್ತು. ಅಂದಿನಿಂದಲೇ ಅಲರ್ಟ್ ಆದ ಚುನಾವಣಾಧಿಕಾರಿಗಳು ಹಾಗೂ ಸ್ಥಳೀಯ ಪೊಲೀಸರು ಆಯಾ ವಿಭಾಗದಲ್ಲಿ ಚೆಕ್ ಪೋಸ್ಟ್‌ಗಳನ್ನು (Check Post) ಹಾಕಿ ವಾಹನಗಳ ಪರಿಶೀಲನೆ ಶುರುಮಾಡಿದರು. ಇದನ್ನೂ ಓದಿ: ನಂದಿನಿ ಬೇಕು; ಅಮುಲ್ ಬೇಡ- ಕನ್ನಡ ಪರ ಸಂಘಟನೆಗಳಿಂದ ಭುಗಿಲೆದ್ದ ಆಕ್ರೋಶ 

    ಮತ್ತೊಂದು ಕಡೆ ರಾಜಕೀಯ ನಾಯಕರು ಮತ್ತು ಬೆಂಬಲಿಗರ ಮನೆಗಳಲ್ಲಿ ಅಕ್ರಮವಾಗಿ ಮತದಾರರಿಗೆ ಹಂಚಲು ಹಣ, ದಿನಸಿ ವಸ್ತುಗಳು, ಗಿಫ್ಟ್‌ಗಳ ಶೇಖರಣೆ ಬಗ್ಗೆ ಕಣ್ಣಿಟ್ಟು ದಾಳಿ ನಡೆಸಿ ವಶಕ್ಕೆ ಪಡೆದು ಕೇಸ್ ದಾಖಲಿಸುತ್ತಿದ್ದಾರೆ. ಬಹುತೇಕ ಪತ್ತೆಯಾದ ಕಡೆಗಳಲ್ಲೆಲ್ಲಾ ಸಾವಿರಾರು ಸಂಖ್ಯೆಯಲ್ಲಿ ಕುಕ್ಕರ್‌ಗಳು ಮತ್ತು ತವಾಗಳು ಪತ್ತೆಯಾಗುತ್ತಿವೆ. ಇದನ್ನೂ ಓದಿ: ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೂ ಮೊದಲೇ ಬಿಜೆಪಿ ಕಚೇರಿಗೆ ಬಿಗಿ ಭದ್ರತೆ 

    ನಾಮಿನೇಷನ್ ಹಾಕಿದ ನಂತರವಷ್ಟೇ ಹಣ, ಮದ್ಯ, ಗೃಹಬಳಕೆ ವಸ್ತುಗಳು ಹೆಚ್ಚಾಗಿ ಸಿಗುತ್ತವೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಕೂಡ ಸೂಕ್ತ ತಯಾರಿ ನಡೆಸಿದ್ದಾರೆ. ಆದರೆ ನಾಮೀನೇಷನ್ ಹಾಕುವ ಮುನ್ನವೇ ರಾಜ್ಯಾದ್ಯಂತ ಮೂರು ಪಕ್ಷಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಸೇರಿದ ಬರೋಬ್ಬರಿ ನೂರು ಕೋಟಿ ಅಕ್ರಮ ಹಣ, ವಸ್ತುಗಳು ಪತ್ತೆಯಾಗಿದ್ದು, ಸ್ವತಃ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಇದನ್ನೂ ಓದಿ: 20ಕ್ಕೂ ಹೆಚ್ಚು ಬಿಜೆಪಿ ಶಾಸಕರಿಗೆ ಕೊಕ್‌ – ಲಿಸ್ಟ್‌ನಲ್ಲಿ ಯಾರಿದ್ದಾರೆ?

  • ಯುವಕನ ಕೊಲೆ ಪ್ರಕರಣ- ಓರ್ವ ಆರೋಪಿ ವಶಕ್ಕೆ, ನಾಲ್ವರಿಗಾಗಿ ಹುಡುಕಾಟ

    ಯುವಕನ ಕೊಲೆ ಪ್ರಕರಣ- ಓರ್ವ ಆರೋಪಿ ವಶಕ್ಕೆ, ನಾಲ್ವರಿಗಾಗಿ ಹುಡುಕಾಟ

    ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣವಾಗಿ ಐದು ಮಂದಿ ಕೃತ್ಯ ಎಸಗಿರುವುದು ಸಾಬೀತಾಗಿದ್ದು, ಅವರಲ್ಲಿ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಆರೋಪಿಯು ಶಿವಮೊಗ್ಗದ ಕ್ಲಾರ್ಕ್ ಪೇಟೆ ಮೂಲದ ಆರೋಪಿಯಾಗಿದ್ದಾನೆ. ದೊಡ್ಡಪೇಟೆ ಪೊಲೀಸರಿಂದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ವೇಳೆ ಆರೋಪಿಯು ಹಳೆಯ ವೈಷ್ಯಮದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದ್ದು, ಐದು ಮಂದಿ ಮಚ್ಚು ಲಾಂಗುಗಳಿಂದ ಹರ್ಷನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಉಳಿದ ನಾಲ್ವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

    ಘಟನೆಯೇನು?: ಹರ್ಷ ಎಂಬಾತ ಕ್ಯಾಂಟೀನ್ ಬಳಿ ಟೀ ಕುಡಿಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಯುವಕರ ಗುಂಪು ಏಕಾಏಕಿ ಹರ್ಷನ ಮೇಲೆ ದಾಳಿ ನಡೆಸಿದೆ. ನಂತರ ದಾಳಿ ನಡೆಸಿದ ತಂಡ ಸ್ಥಳದಿಂದ ಪರಾರಿಯಾಗಿದೆ. ಇದನ್ನೂ ಓದಿ: ಯುವಕನ ಬರ್ಬರ ಹತ್ಯೆ – ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿ

    ಈ ವೇಳೆ ದಾಳಿಗೆ ಒಳಗಾದ ಹರ್ಷ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ನಂತರ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಹರ್ಷ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಈ ವಿಷಯ ತಿಳಿಯುತ್ತಿದ್ದಂತೆ ಎರಡು ಕೋಮಿನ ಯುವಕರ ಗುಂಪು ಮೆಗ್ಗಾನ್ ಆಸ್ಪತ್ರೆ ಬಳಿ ಜಮಾಯಿಸಿತು. ಹೀಗಾಗಿ ಮೆಗ್ಗಾನ್ ಆಸ್ಪತ್ರೆ ಬಳಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.

    ಪರಿಸ್ಥಿತಿ ನಿಯಂತ್ರಿಸಲು ಗುಂಪುಗೂಡಿದ್ದ ಯುವಕರನ್ನು ಪೊಲೀಸರು ಮನೆಯತ್ತ ವಾಪಸ್ ಕಳುಹಿಸಿದ್ದಾರೆ ಮತ್ತು ಮುಂಜಾಗ್ರತಾ ಕ್ರಮವಾಗಿ ತಕ್ಷಣದಿಂದಲೇ ಶಿವಮೊಗ್ಗ ಜಿಲ್ಲೆಯಾದ್ಯಂತ 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇದನ್ನೂ ಓದಿ: ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿದೆ, ಶೀಘ್ರವೇ ಬಂಧನ: ಆರಗ ಜ್ಞಾನೇಂದ್ರ

  • 10 ಲಕ್ಷ ಮೌಲ್ಯದ MDMA ಡ್ರಗ್ಸ್ ವಶ-ಮೂವರ ಬಂಧನ

    10 ಲಕ್ಷ ಮೌಲ್ಯದ MDMA ಡ್ರಗ್ಸ್ ವಶ-ಮೂವರ ಬಂಧನ

    ಮಂಗಳೂರು: ನಿಷೇಧಿತ ಮಾದಕವಸ್ತು ಎಂ.ಡಿ.ಎಂ.ಎಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ರೆಡ್ ಹ್ಯಾಂಡ್ ಆಗಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

    ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಉಪ್ಪಳ ಗೇಟ್ ನಿವಾಸಿಗಳಾದ ಮಹಮ್ಮದ್ ಮುನಾಫ್, ಮಹಮ್ಮದ್ ಮುಝಾಂಬಿಲ್, ಅಹಮ್ಮದ್ ಮಸೂಕ್ ಬಂಧಿತ ಆರೋಪಿಗಳಾಗಿದ್ದಾರೆ. ಮಂಗಳೂರು ಮೂಲಕ ಕೇರಳ ರಾಜ್ಯಕ್ಕೆ ಸಾಗಾಟ ಮಾಡುವ ಸಂದರ್ಭ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಕೋಣಾಜೆ ಪೊಲೀಸರು ಕೊಣಾಜೆ ಬಳಿಯ ಗಣೇಶ್ ಮಹಲ್ ಎಂಬಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ್ದರು. ಇದನ್ನೂ ಓದಿ: ಡೊನಾಲ್ಡ್ ಟ್ರಂಪ್ ಫೇಸ್‍ಬುಕ್ ಖಾತೆ 2 ವರ್ಷ ಬ್ಯಾನ್

    ಕಾರಿನಲ್ಲಿ ಡ್ರಗ್ಸ್ ಸಾಗಾಟ ಮಾಡುತ್ತಿರೋದು ಪತ್ತೆಯಾಗಿದೆ. ಆರೋಪಿಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು 10 ಲಕ್ಷದ 20 ಸಾವಿರ ಮೌಲ್ಯದ 170 ಗ್ರಾಂ ಎಂ.ಡಿ.ಎಂ.ಎ ಸಿಂಥೆಟಿಕ್ ಡ್ರಗ್, ಸಾಗಾಟಕ್ಕೆ ಉಪಯೋಗಿಸಿದ ಕಾರು, ನಾಲ್ಕು ಮೊಬೈಲ್ ಸೇರಿದಂತೆ ಒಟ್ಟು 17 ಲಕ್ಷ, 37 ಸಾವಿರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಬೆಂಗಳೂರಿಗರಿಗೆ ಸಿಹಿಸುದ್ದಿ ಶೇ.4ಕ್ಕೆ ಇಳಿದ ಪಾಸಿಟಿವಿಟಿ ರೇಟ್

    ಮಂಗಳೂರು ನಗರದಲ್ಲಿ ಇದೇ ಪ್ರಥಮ ಬಾರಿಗೆ ದೊಡ್ಡ ಮೊತ್ತದ ಎಂ.ಡಿ.ಎಂ.ಎ ವಶಪಡಿಸಿಕೊಳ್ಳಲಾಗಿದ್ದು, ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • 5 ಲಕ್ಷ ಮೌಲ್ಯದ ಮಾದಕ ದ್ರವ್ಯ ಅಫೀಮು ವಶ

    5 ಲಕ್ಷ ಮೌಲ್ಯದ ಮಾದಕ ದ್ರವ್ಯ ಅಫೀಮು ವಶ

    ವಿಜಯಪುರ: ಜಿಲ್ಲೆಯ ಅಬಕಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐದು ಲಕ್ಷ ಮೌಲ್ಯದ ಮಾದಕ ದ್ರವ್ಯ ಅಫೀಮನ್ನ ವಶಕ್ಕೆ ಪಡೆದಿದ್ದಾರೆ.

    ಕರ್ನಾಟಕ-ಮಹಾರಾಷ್ಟ್ರದ ವಿಜಯಪುರ ಜಿಲ್ಲೆಯ ಗಡಿ ಶಿರಾಡೋಣ ಗ್ರಾಮದ ಹತ್ತಿರ ರಾಜಸ್ಥಾನಕ್ಕೆ ಸೇರಿದ ಲಾರಿಯಲ್ಲಿ ಸಾಗಿಸಲಾಗುತ್ತಿದ್ದ ಅಫೀಮನ್ನ ವಶಕ್ಕೆ ಪಡೆಯಲಾಗಿದೆ. ಇನ್ನೂ 12.50 ಕೆಜೆ ಅಫೀಮು ಪುಡಿ ಸಿಕ್ಕಿದ್ದು, ರಾಜಸ್ಥಾನ ಮೂಲದ ಲಾರಿ ಚಾಲಕ ಸತೀಶ್ ಚೌಧರಿಯನ್ನ ಬಂಧಿಸಲಾಗಿದೆ. ಜೊತೆಗೆ ಐದು ಲಕ್ಷ ಮೌಲ್ಯದ ಅಫೀಮು ಮತ್ತು 25 ಲಕ್ಷ ಮೌಲ್ಯದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.

    ವಿಜಯಪುರದ ಮೂಲಕ ಬೆಂಗಳೂರಿಗೆ ಅಫೀಮನ್ನು ಸಾಗಿಸುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ರಾಜಸ್ಥಾನ-ಮಧ್ಯಪ್ರದೇಶದ ಅಧಿಕಾರಿಗಳಿಗೆ ಈ ಬಗ್ಗೆ ಪತ್ರ ಬರೆಯಲಾಗುವುದು. ಅಲ್ಲಿಯೂ ತನಿಖೆ ನಡೆಸುವಂತೆ ಕೋರಲಾಗುವುದು. ಜೊತೆಗೆ ಬೆಂಗಳೂರಿನಲ್ಲಿಯೂ ತನಿಖೆ ನಡೆಸಲು ಶಿಫಾರಸು ಮಾಡಲಾಗುವುದು ಎಂದು ವಿಜಯಪುರ ಅಬಕಾರಿ ಡಿಸಿ ಕೆ.ಅರುಣ್‍ಕುಮಾರ್ ಹೇಳಿದ್ದಾರೆ.

  • ಗೋದಾಮಿನಲ್ಲಿ ಬಳಸಿದ್ದ ಬರೋಬ್ಬರಿ 3 ಲಕ್ಷಕ್ಕೂ ಅಧಿಕ ಕಾಂಡೋಮ್ ವಶ

    ಗೋದಾಮಿನಲ್ಲಿ ಬಳಸಿದ್ದ ಬರೋಬ್ಬರಿ 3 ಲಕ್ಷಕ್ಕೂ ಅಧಿಕ ಕಾಂಡೋಮ್ ವಶ

    – ಮರು ತಯಾರಿಕೆಗಾಗಿ ದಿನಗೂಲಿ ಕಾರ್ಮಿಕರ ನೇಮಕ
    – ಮಾಹಿತಿ ಮೇರೆಗೆ ದಾಳಿ, ಮಾಲಕಿ ಅರೆಸ್ಟ್

    ಹನೋಯಿ: ಉಪಯೋಗಿಸಿ ಬಿಸಾಡಿದ್ದ ಬರೋಬ್ಬರಿ ಮೂರು ಲಕ್ಷಕ್ಕೂ ಅಧಿಕ ಕಾಂಡೋಮ್‍ಗಳನ್ನು ಮರುಬಳಕೆ ಮಾಡಲು ಸಂಗ್ರಹಿಸಿಟ್ಟಿದ್ದ ಗೋದಾಮಿನ ಮೇಲೆ ವಿಯೆಟ್ನಾ ಪೊಲೀಸರು ದಾಳಿ ಮಾಡಿದ್ದಾರೆ. ಅಲ್ಲದೇ ಕಾಂಡೋಮ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

    ಮರುಬಳಕೆ ಮಾಡಲಾಗುತ್ತಿದ್ದ 3,24,000 ಉಪಯೋಗಿಸಿದ ಕಾಂಡೋಮ್‍ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೊದಲಿಗೆ ಉಪಯೋಗಿಸಿದ್ದ ಕಾಂಡೋಮ್‍ಗಳನ್ನು ಸಂಗ್ರಹಿಸಿ ರಾಸಾಯನಿಕಯುಕ್ತ ನೀರಿನಿಂದ ಶುಚಿಗೊಳಿಸಲಾಗುತ್ತಿತ್ತು. ನಂತರ ಅದನ್ನು ಮರದ ಕೋಲಿನಿಂದ ಮರು ರೂಪಿಸಲಾಗುತ್ತಿತ್ತು. ಈ ಕೆಲಸವನ್ನು ಮಾಡಲು ದಿನಗೂಲಿ ಕಾರ್ಮಿಕರನ್ನು ನೇಮಿಸಿಕೊಳ್ಳಲಾಗಿತ್ತು.

    ಇದು ದಕ್ಷಿಣ ವಿಯೆಟ್ನಾಂನ ಭಾಗದಲ್ಲಿರುವ ಬಿನ್ಹ್ ಡುವಾಂಗ್ ಪ್ರಾಂತ್ಯದ ಗೋದಾಮಿನಲ್ಲಿ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಪೊಲೀಸರು ಗೋದಾಮಿನ ಮೇಲೆ ದಾಳಿ ನಡೆಸಿದ್ದಾರೆ. ಆಗ ಬಳಸಿದ ಕಾಂಡೋಮ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಮರು ಪ್ಯಾಕೇಜ್ ಮಾಡಿ ಸುರಕ್ಷಿತವಲ್ಲದ ಕಾಂಡೋಮ್‍ಗಳನ್ನು ಮತ್ತೆ ಸಾರ್ವಜನಿಕರಿಗೆ ಮಾರಾಟ ಮಾಡಲಾಗುತ್ತಿತ್ತು. ಈಗಾಗಲೇ ಸಾವಿರಾರು ಸಾರ್ವಜನಿಕರಿಗೆ ಮಾರಾಟ ಮಾಡಲಾಗಿದೆ ಎಂದು ತಿಳಿದುಬಂದಿದೆ.

    ಗೋದಾಮಿನ ಮಾಲಕಿ ಫಾಮ್ ಥಿ ಥನ್ ನ್ಗೋಕ್ (33)ಳನ್ನು ಪೊಲೀಸರು ಬಂಧಿಸಿದ್ದಾರೆ. ಅಪರಿಚಿತ ವ್ಯಕ್ತಿಯಿಂದ ಒಂದು ತಿಂಗಳ ಹಿಂದೆ ಕಾಂಡೋಮ್ ಸ್ವೀಕರಿಸಿದ್ದೇನೆ ಎಂದು ಪೊಲೀಸರಿಗೆ ತಿಳಿಸಿದ್ದಾಳೆ. ಕಾಂಡೋಮ್‍ಗಳನ್ನು ಸಾಕ್ಷಿ ಸಮೇತ ವಶಪಡಿಸಿಕೊಳ್ಳಲಾಗಿದೆ. ಆದರೆ ಅವುಗಳನ್ನು ಅಪಾಯಕಾರಿ ವೈದ್ಯಕೀಯ ತ್ಯಾಜ್ಯವೆಂದು ಪರಿಗಣಿಸಲಾಗಿರುವುದರಿಂದ ತಕ್ಷಣ ವಿಲೇವಾರಿ ಮಾಡಲಾಗಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

    ಈಗಾಗಲೇ ಎಷ್ಟು ಕಾಂಡೋಮ್‍ಗಳನ್ನು ಮಾರಾಟ ಮಾಡಲಾಗಿದೆ ಎಂದು ತಿಳಿದಿಲ್ಲ. ಆದರೆ ಪೊಲೀಸರು 360 ಕೆ.ಜಿ. ಕಾಂಡೋಮ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಅವುಗಳನ್ನು ಗೋದಾಮಿನ ಸಮೀಪವಿರುವ ಹೋಟೆಲ್‍ಗಳು ಮತ್ತು ಮಾರುಕಟ್ಟೆ ಮಳಿಗೆಗಳಿಗೆ ಸರಬರಾಜು ಮಾಡಲಾಗುತ್ತಿದೆ ಎಂದು ಸ್ಥಳೀಯ ವರದಿಗಳು ಹೇಳಿವೆ.

  • ಗಾಂಜಾ ಪೆಡ್ಲರ್ಸ್ ಅರೆಸ್ಟ್ – 10 ಲಕ್ಷ ಮೌಲ್ಯದ 32 ಕೆಜಿ ಗಾಂಜಾ ವಶ

    ಗಾಂಜಾ ಪೆಡ್ಲರ್ಸ್ ಅರೆಸ್ಟ್ – 10 ಲಕ್ಷ ಮೌಲ್ಯದ 32 ಕೆಜಿ ಗಾಂಜಾ ವಶ

    ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ, ಗಾಂಜಾ ಸಾಗಾಟ ಮಾಡುತ್ತಿದ್ದ ಗಾಂಜಾ ಪೆಡ್ಲರ್‌ಗಳನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

    ಚಿಂತಾಮಣಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಕುಂಟೆ ಬಳಿ ದಾಳಿ ನಡೆಸಿದ ಪೊಲೀಸರು ಇಂಡಿಕಾ ಕಾರನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿದ್ದ ಬರೋಬ್ಬರಿ 10 ಲಕ್ಷ ಮೌಲ್ಯದ 32 ಕೆಜಿ ಗಾಂಜಾ ಪತ್ತೆಯಾಗಿದ್ದು, ಪೊಲೀಸರು ಅದನ್ನು ವಶಪಡಿಸಿಕೊಂಡಿದ್ದಾರೆ. ಕಾರಿನಲ್ಲಿದ್ದ ಆಂಧ್ರಪ್ರದೇಶದ ಚಿತ್ತೂರು ಮೂಲದ ಶಂಕರ್ ಹಾಗೂ ಶಿಡ್ಲಘಟ್ಟ ಮೂಲದ ಶಭಾಜ್‍ನನ್ನ ಬಂಧಿಸಲಾಗಿದೆ.

    ಈ ಕೃತ್ಯಕ್ಕೆ ಬಳಸಿದ ಇಂಡಿಕಾ ಕಾರನ್ನ ಸಹ ವಶಪಡಿಸಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಆಂಧ್ರದ ಗಡಿಗೆ ಹೊಂದಿಕೊಂಡಿರೋದರಿಂದ ಜಿಲ್ಲೆಯ ಪೊಲೀಸರು ಗಡಿಭಾಗದಲ್ಲಿ ಶ್ವಾನದಳದೊಂದಿಗೆ ತಪಾಸಣೆ ನಡೆಸುತ್ತಿದ್ದು, ಗಾಂಜಾ ಸಾಗಾಟಗಾರರ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಬಂಧಿತ ಆರೋಪಿಗಳು ನೆರೆಯ ರಾಜ್ಯದ ವಿಶಾಖಪಟ್ಟಣಂ, ರಾಜಮಂಡ್ರಿ, ಅನಂತಪುರ ಸೇರಿದಂತೆ ಮತ್ತಿತರ ಭಾಗಗಳಿಂದ ಈ ಗಾಂಜಾವನ್ನ ತರುತ್ತಿದ್ದೀವಿ ಎಂಬ ಮಾಹಿತಿಯನ್ನು ನೀಡಿದ್ದಾರೆ.

    ಕಳೆದ ಒಂದು ವಾರದಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 5 ಗಾಂಜಾ ಪ್ರಕರಣಗಳು ಪತ್ತೆಯಾಗಿದ್ದು, ಅಕ್ರಮ ಗಾಂಜಾಗೆ ಕಡಿವಾಣ ಹಾಕಲು ಜಿಲ್ಲಾ ಪೊಲೀಸ್ ಇಲಾಖೆ ಸನ್ನದ್ಧವಾಗಿದೆ. ಆಂಧ್ರ ಪ್ರದೇಶದ ಗಡಿಯಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಿ, ಕಾನೂನು ಬಾಹಿರ ಚಟುವಟಿಕೆಗಳ ಮೇಲೆ ಸೂಕ್ಷ್ಮ ನಿಗಾವಹಿಸಿ ತಪಾಸಣೆ ಕಾರ್ಯ ನಡೆಸುತ್ತಿದ್ದೇವೆ. ಅಲ್ಲದೇ ನೆರೆಯ ಆಂಧ್ರ ಪ್ರದೇಶದ ಅನಂತಪುರ, ಚಿತ್ತೂರು ಪೊಲೀಸರ ಜೊತೆ ನಿಕಟ ಸಂಪರ್ಕ ಹೊಂದಿದ್ದು, ಗಾಂಜಾ ಸಾಗಾಟಕ್ಕೆ ಬ್ರೇಕ್ ಹಾಕುತ್ತಿದ್ದೇವೆ ಎಂದು ಚಿಕ್ಕಬಳ್ಳಾಪುರ ಎಸ್‍ಪಿ ಮಿಥುನ್ ಕುಮಾರ್ ಹೇಳಿದ್ದಾರೆ.

  • ಇಬ್ಬರು ಅಧಿಕಾರಿಗಳ ಬಳಿ 4.47 ಕೋಟಿ ಹಣ ವಶ

    ಇಬ್ಬರು ಅಧಿಕಾರಿಗಳ ಬಳಿ 4.47 ಕೋಟಿ ಹಣ ವಶ

    – ರಿಯಲ್ ಎಸ್ಟೇಟ್ ಕಂಪನಿಯಲ್ಲಿ ಹೂಡಿಕೆ

    ಹೈದರಾಬಾದ್: ಮಾಜಿ ವಿಮಾ ವೈದ್ಯಕೀಯ ಸೇವೆಗಳ ನಿರ್ದೇಶಕಿ (ಐಎಂಎಸ್) ಮತ್ತು ಇನ್ನೊಬ್ಬ ಅಧಿಕಾರಿಗೆ ಸೇರಿದ ಸೂಕ್ತ ದಾಖಲೆ ಇಲ್ಲದ ಬರೋಬ್ಬರಿ 4.47 ಕೋಟಿ ಹಣವನ್ನು ತೆಲಂಗಾಣದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ವಶಪಡಿಸಿಕೊಂಡಿದೆ.

    ಐಎಂಎಸ್ ಮಾಜಿ ನಿರ್ದೇಶಕಿ ದೇವಿಕಾ ರಾಣಿಯ ಬಳಿ ಸೂಕ್ತ ದಾಖಲೆ ಇಲ್ಲದ 3.75 ಕೋಟಿ ರೂ. ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ವಾಣಿಜ್ಯ ಮತ್ತು ವಸತಿ ಜಾಗವನ್ನು ಖರೀದಿಸಲು ಹೈದರಾಬಾದ್‍ನ ಸೈಬರಾಬಾದ್ ಪ್ರದೇಶದಲ್ಲಿ ರಿಯಲ್ ಎಸ್ಟೇಟ್ ಕಂಪನಿಯೊಂದರಲ್ಲಿ ಹೂಡಿಕೆ ಮಾಡಿದ್ದ ಇಎಸ್‍ಐ ಫಾರ್ಮಸಿಸ್ಟ್ ನಾಗಲಕ್ಷ್ಮಿಗೆ ಸೇರಿದ್ದ 72 ಲಕ್ಷ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸಿಬಿ ತಿಳಿಸಿದೆ.

    ಇಬ್ಬರು ಅಧಿಕಾರಿಗಳು ಸೂಕ್ತ ದಾಖಲೆ ಇಲ್ಲದ ಹಣವನ್ನು ಆರು ವಸತಿ ಫ್ಲ್ಯಾಟ್‍ಗಳ ಖರೀದಿಗಾಗಿ ಹೂಡಿಕೆ ಮಾಡಿದ್ದರು. ಇದರಿಂದ ಸುಮಾರು 15,000 ಚದರ ಅಡಿ ವಾಣಿಜ್ಯ ಜಾಗವನ್ನು ತಮ್ಮ ಕುಟುಂಬದ ಹೆಸರಿನಲ್ಲಿ ಖರೀದಿ ಮಾಡಲು ಹೂಡಿಕೆ ಮಾಡಿದ್ದರು. ದೇವಿಕಾ ರಾಣಿ ಸಹ 22 ಲಕ್ಷ ಹೂಡಿಕೆ ಮಾಡಿದ್ದರು ಎಂದು ತಿಳಿದುಬಂದಿದೆ.

    ಆಸ್ತಿಯನ್ನು ಖರೀದಿಸಲು ಚೆಕ್ ಮತ್ತು ಆನ್‍ಲೈನ್ ವರ್ಗಾವಣೆಯ ಮೂಲಕ ಪಾವತಿಸಲಾಗಿದ್ದ 2.29 ಕೋಟಿ ಮೊತ್ತವನ್ನು ಸಹ ಗುರುತಿಸಲಾಗಿದೆ. ಈಗಾಗಲೇ ಇಬ್ಬರೂ ಅಧಿಕಾರಿಗಳನ್ನು ಬಂಧಿಸಲಾಗಿತ್ತು. ಆದರೆ ವಿಶೇಷ ನ್ಯಾಯಾಲಯ ಜಾಮೀನಿನ ಮೇಲೆ ಇಬ್ಬರನ್ನು ಬಿಡುಗಡೆ ಮಾಡಲಾಗಿದೆ ಎಂದು ಎಸಿಬಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.