Tag: ವಸ್ತು

  • ಮಿಲ್ಕಿ ವೇಯಲ್ಲಿ 18 ನಿಮಿಷಗಳಿಗೊಮ್ಮೆ ಸ್ಫೋಟವಾಗುವ ವಸ್ತು ಪತ್ತೆ

    ಕ್ಯಾನ್‌ಬೆರಾ: ಆಕಾಶದಲ್ಲಿ ಇಲ್ಲಿಯವರೆಗೆ ಎಂದಿಗೂ ಕಾಣಿಸಿಕೊಳ್ಳದ ವಿಚಿತ್ರ ವಸ್ತುವೊಂದನ್ನು ಮಿಲ್ಕಿ ವೇ(ಕ್ಷೀರಪಥ) ಗ್ಯಾಲಕ್ಸಿಯಲ್ಲಿ  ಪತ್ತೆ ಹಚ್ಚಲಾಗಿದೆ. 18.18 ನಿಮಿಷಗಳಿಗೊಮ್ಮೆ ಸ್ಫೋಟಿಸುವ ಈ ಹೊಸ ವಸ್ತು ವಿಜ್ಞಾನ ಲೋಕಕ್ಕೆ ಹೊಸ ಸವಾಲಾಗಿದೆ.

    ಪಶ್ಚಿಮ ಆಸ್ಟ್ರೇಲಿಯಾದ ಹೊರವಲಯದಲ್ಲಿರುವ ಮರ್ಚಿಸನ್ ವೈಡ್‌ಫೀಲ್ಡ್ ಅರೇ ಪ್ರಾಜೆಕ್ಟ್ ಅಡಿ ತಯಾರಾದ ದೂರದರ್ಶಕವನ್ನು ಬಳಸಿಕೊಂಡು ವಿದ್ಯಾರ್ಥಿಗಳು ಮೊದಲ ಬಾರಿಗೆ ಈ ವಿಚಿತ್ರ ವಸ್ತುವನ್ನು ಕಂಡುಹಿಡಿದಿದ್ದರು. ಈಗ ಪ್ರತಿ ಗಂಟೆಗೆ 3 ಬಾರಿ ದೊಡ್ಡ ಮಟ್ಟದ ಸ್ಫೋಟವನ್ನು ಬಿಡುಗಡೆ ಮಾಡುವ ವಸ್ತುವಿನ ಬಗ್ಗೆ ಖಗೋಳಶಾಸ್ತ್ರಜ್ಞರು ಕುತೂಹಲ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಚಂದ್ರನಿಗೆ ಅಪ್ಪಳಿಸಲಿದೆ SpaceX ರಾಕೆಟ್

    ಈ ವಿಚಿತ್ರ ವಸ್ತು ಭೂಮಿಯಿಂದ 4 ಸಾವಿರ ಬೆಳಕಿನ ವರ್ಷಗಳಷ್ಟು ದೂರದಲ್ಲಿದೆ ಎಂದು ಊಹಿಸಲಾಗಿದೆ. ಅತ್ಯಂತ ಪ್ರಕಾಶಮಾನವಾಗಿರುವ ವಸ್ತು ಅತ್ಯಂತ ಬಲವಾದ ಕಾಂತೀಯ ಕ್ಷೇತ್ರವನ್ನು ಹೊಂದಿದೆ. ಇದರ ಬಗ್ಗೆ ಇನ್ನೂ ಹಲವು ರಹಸ್ಯವನ್ನು ಬಯಲು ಮಾಡುವುದು ಬಾಕಿ ಇದೆ ಎಂದು ಖಗೋಳಶಾಸ್ತ್ರಜ್ಞ ನತಾಶಾ ಹರ್ಲಿ-ವಾಕರ್ ತಿಳಿಸಿದ್ದಾರೆ. ಇದನ್ನೂ ಓದಿ: ಕಚ್ಚಾತೈಲ ಬೆಲೆ ಭಾರೀ ಏರಿಕೆ – ಮತ್ತೆ ಪೆಟ್ರೋಲ್ ಬೆಲೆ ದುಬಾರಿ?

    ಕ್ಷೀರ ಪಥದಲ್ಲಿ ಕಂಡುಹಿಡಿಯಲಾದ ಈ ವಿಚಿತ್ರ ವಸ್ತು ಸದ್ಯ ಅಸ್ತಿತ್ವದಲ್ಲಿ ಇದೆಯೋ ಇಲ್ಲವೋ ಎಂಬುದರ ಬಗ್ಗೆ ಖಚಿತವಾಗಿಲ್ಲ. ಇದು ನಕ್ಷತ್ರದ ಅವಶೇಷವೂ ಅಗಿರುವ ಸಾಧ್ಯತೆಯಿದೆ. ಆದರೆ ಇದು ಇಲ್ಲಿಯವರೆಗೆ ಆಕಾಶದಲ್ಲಿ ಕಂಡುಹಿಡಿಯಲಾದ ಎಲ್ಲಾ ವಸ್ತುಗಳಿಗಿಂತಲೂ ಭಿನ್ನವಾಗಿದೆ ಎಂದು ತಿಳಿಸಿದ್ದಾರೆ.

  • ಆಕಸ್ಮಿಕ ಬೆಂಕಿ ಅವಘಡ – ಆಟೋಮೊಬೈಲ್ ಅಂಗಡಿ ಅಗ್ನಿಗಾಹುತಿ

    ಆಕಸ್ಮಿಕ ಬೆಂಕಿ ಅವಘಡ – ಆಟೋಮೊಬೈಲ್ ಅಂಗಡಿ ಅಗ್ನಿಗಾಹುತಿ

    ರಾಯಚೂರು: ನಗರದ ಗೋಶಾಲೆ ರಸ್ತೆಯಲ್ಲಿರುವ ಜನತಾ ಆಟೋಮೊಬೈಲ್ಸ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.  ಇದನ್ನೂ ಓದಿ: ಬೀದರ್‌ನಲ್ಲಿ ಖಾಸಗಿ ಅಂಬುಲೆನ್ಸ್‌ಗಳದ್ದೇ ಕಾರ್‌ಬಾರ್ – ಬ್ರಿಮ್ಸ್ ಆಸ್ಪತ್ರೆ ಎದುರೇ ಖಾಸಗಿ ಸುಲಿಗೆ

    Automobile Store

    ವಿಕ್ರಮ ಸಿಂಗ್‍ರವರಿಗೆ ಸೇರಿದ ಆಟೋಮೊಬೈಲ್ಸ್ ಅಂಗಡಿ ಬೆಂಕಿ ಅವಘಡಕ್ಕೆ ತುತ್ತಾಗಿದ್ದು, ಅಂಗಡಿಯಲ್ಲಿನ 60 ರಿಂದ 70 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ಶಂಕಿಸಲಾಗಿದೆ.  ಇದನ್ನೂ ಓದಿ: ಸೋಲೂರಿನಲ್ಲಿ ದೇಶದಲ್ಲಿಯೇ ಪ್ರಥಮ ಬಾರಿಗೆ ಹುಲ್ಲನ್ನು ಬಳಸಿ ಬಯೋ ಗ್ಯಾಸ್ ತಯಾರು – ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಪ್ರಶಂಸೆ

    Automobile Store

    ಅಗ್ನಿಶಾಮಕ ದಳದ ಎರಡು ವಾಹನಗಳನ್ನು ಸಂಪೂರ್ಣ ಬೆಂಕಿ ನಾಂದಿಸಲು ಬಳಸಲಾಗಿದೆ. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಬರುವುದರೊಳಗೆ ಎಲ್ಲೆಡೆ ಬೆಂಕಿ ಹರಡಿದ್ದರಿಂದ ಅಪಾರ ಪ್ರಮಾಣದ ಹಾನಿ ಉಂಟಾಗಿದೆ.  ಇದನ್ನೂ ಓದಿ: ಸಾರಿಗೆ ಸಚಿವರ ಸ್ವಕ್ಷೇತ್ರದಲ್ಲೇ ಬಸ್‍ಗಾಗಿ ವಿದ್ಯಾರ್ಥಿಗಳ ಪರದಾಟ- ಡಿಸಿ ವಾಸ್ತವ್ಯ ಹೂಡಿದ್ರೂ ಬಗೆಹರಿಯದ ಸಮಸ್ಯೆ

  • ಮಾರ್ಕೆಟ್‍ಗೆ ಬೆಂಕಿ – ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳಿಗೆ ಹಾನಿ

    ಮಾರ್ಕೆಟ್‍ಗೆ ಬೆಂಕಿ – ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳಿಗೆ ಹಾನಿ

    ಹಾವೇರಿ: ಮಾರ್ಕೆಟ್‍ಗೆ ತಡರಾತ್ರಿ ಬೆಂಕಿ ಬಿದ್ದ ಪರಿಣಾಮ ತರಕಾರಿ, ಹಣ್ಣುಗಳು ಹಾಗೂ ದಿನಸಿ ಅಂಗಡಿಗಳಲ್ಲಿನ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಗರದ ದುರ್ಗಾ ಮಾರ್ಕೆಟ್‍ನಲ್ಲಿ ನಡೆದಿದೆ. ಇದನ್ನೂ ಓದಿ: ನಡುರಸ್ತೆಯಲ್ಲಿ ಹರಿಯಿತು ನೆತ್ತರು – ಸ್ನೇಹಿತರಿಂದಲೇ ಯುವಕನ ಲೈವ್ ಮರ್ಡರ್

    Durga Market

    ಮಾರುಕಟ್ಟೆಯಲ್ಲಿರುವ 200 ಅಧಿಕ ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ದುಷ್ಕರ್ಮಿಗಳು ತಡರಾತ್ರಿ ಅಂಗಡಿಗಳಿಗೆ ಬೆಂಕಿ ಹಚ್ಚಿ ಪರಾರಿ ಆಗಿದ್ದಾರೆ ಎಂಬ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಸಣ್ಣ ವ್ಯಾಪಾರಸ್ಥರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನೂ ಓದಿ: ಬಾಲಕಿಯರಿಗೂ ಶಾಲೆ ತೆರೆಯುವವರೆಗೂ ನಾವು ಹೋಗಲ್ಲ – ಅಫ್ಘಾನ್ ಬಾಲಕರ ಪಟ್ಟು

    Durga Market

    200ಕ್ಕೂ ಅಧಿಕ ವ್ಯಾಪಾರಸ್ಥರಿಂದ ಮಾರ್ಕೆಟ್‍ನಲ್ಲಿ ತರಕಾರಿ, ಹಣ್ಣು ಮತ್ತು ದಿನಸಿ ವಸ್ತುಗಳ ಮಾರಾಟ ಮಾಡಲಾಗುತ್ತಿತ್ತು. ಆದರೆ ಈಗ ಅಂಗಡಿ ಮುಗ್ಗಟ್ಟುಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಹಾನಿಯಾಗಿವೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಣೆಬೆನ್ನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಕೊಡಗಿನ ಮಾರ್ಗಸೂಚಿಯಲ್ಲಿ ಮಂಗಳವಾರ, ಶುಕ್ರವಾರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

    ಕೊಡಗಿನ ಮಾರ್ಗಸೂಚಿಯಲ್ಲಿ ಮಂಗಳವಾರ, ಶುಕ್ರವಾರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

    ಮಡಿಕೇರಿ: ರಾಜ್ಯದಲ್ಲಿ ಕೋವಿಡ್ ಸೋಂಕು ವ್ಯಾಪಿಸುವುದನ್ನು ನಿಯಂತ್ರಿಸುವುದಕ್ಕಾಗಿ ರಾಜ್ಯ ಸರ್ಕಾರ ಮೇ10 ರಿಂದ 24ರವರೆಗೆ ಲಾಕ್‍ಡೌನ್ ಘೋಷಿಸಿ ಮಾರ್ಗಸೂಚಿಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ ಆದೇಶಿಸಿತ್ತು. ಈ ಆದೇಶದಿಂದ ಜಿಲ್ಲೆಯ ಜನರಲ್ಲಿ ಕೊಂಚ ಗೊಂದಲ ಉಂಟಾಗಿತ್ತು. ಈ ನಿಟ್ಟಿನಲ್ಲಿ ಇದೀಗಾ ಜಿಲ್ಲಾಡಳಿತ ಜನ ಸಾಮಾನ್ಯರಿಗೆ ಗೊಂದಲ ಅಗಬರದು ಎಂದು ಕೊಡಗಿನಲ್ಲಿ ಈ ಹಿಂದೆ ಜಾರಿಯಲ್ಲಿದ್ದ ಕಠಿಣ ನಿಯಮಾವಳಿಗಳೇ ಮುಂದುವರೆಯಲಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

    ರಾಜ್ಯ ಸರ್ಕಾರದ ಆದೇಶದಂತೆ ರಾಜ್ಯ ವ್ಯಾಪಿ ಪ್ರತಿದಿನ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆಯಾದರೂ ಕೊಡಗು ಜಿಲ್ಲೆಯಲ್ಲಿ ಪ್ರತಿ ಮಂಗಳವಾರ ಮತ್ತು ಶುಕ್ರವಾರ ಬೆಳಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ವಸ್ತುಗಳ ಖರೀದಿಗೆ ಅವಕಾಶವಿದೆ. ಇತರ ದಿನಗಳಲ್ಲಿ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಹಾಲು ಮತ್ತು ಪತ್ರಿಕೆಗಳ ವಿತರಣೆಗೆ ಅವಕಾಶ ಕಲ್ಪಿಸಲಾಗಿದೆ.

    ಮಂಗಳವಾರ ಮತ್ತು ಶುಕ್ರವಾರ ಜನಜಂಗುಳಿಯಾಗದಂತೆ ಸಾರ್ವಜನಿಕರು ಸಹಕಾರ ನೀಡುವ ಮೂಲಕ ಮಾಸ್ಕ್ ಕಡ್ಡಾಯವಾಗಿ ಧರಿಸಿ ಅಂತರ ಕಾಯ್ದುಕೊಳ್ಳಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಸ್ಥಳೀಯವಾಗಿ ಇರುವ ಅಂಗಡಿಗಳಿಂದಲೇ ವಸ್ತುಗಳನ್ನು ಖರೀದಿ ಮಾಡಿ, ದೂರದ ಪ್ರದೇಶಕ್ಕೆ ಹೋಗಬೇಡಿ, ವಾಹನಗಳನ್ನು ಬಳಸಬೇಡಿ ಎಂದು ಸಲಹೆ ನೀಡಿದು ಕೊಡಗಿನ ಜನರ ಗೊಂದಲ ಕ್ಕೆ ಜಿಲ್ಲಾಡಳಿತ ತೇರೆ ಎಳೆದಿದೆ.

  • ಶಾರ್ಟ್ ಸರ್ಕ್ಯೂಟ್‌ನಿಂದ  ಮನೆಗೆ ಬೆಂಕಿ – ಲಕ್ಷಾಂತರ ಮೌಲ್ಯದ ವಸ್ತುಗಳು ಹಾನಿ

    ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ – ಲಕ್ಷಾಂತರ ಮೌಲ್ಯದ ವಸ್ತುಗಳು ಹಾನಿ

    ಹಾವೇರಿ: ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ಮನೆಗೆ ಬೆಂಕಿ ಬಿದ್ದ ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಕೂಸನೂರು ಗ್ರಾಮದಲ್ಲಿ ನಡೆದಿದೆ.

     

     

     

    ಗ್ರಾಮದ ಚಂದ್ರಪ್ಪ ಬೂದಿಹಳ್ಳಿ ಮತ್ತು ನಿಂಗಪ್ಪ ಬೂದಿಹಳ್ಳಿ ಅವರ ಮನೆ ಹಾನಿಗೊಳಗಾಗಿದೆ. ಮನೆಯಲ್ಲಿದ್ದ ಲಕ್ಷಾಂತರ ರುಪಾಯಿ ಮೌಲ್ಯದ ವಸ್ತುಗಳು ಹಾಗೂ ಮನೆಯ ಮೇಲ್ಛಾವಣಿ ಸಂಪೂರ್ಣ ಸುಟ್ಟು ಹಾನಿಯಾಗಿದೆ. ಬೆಂಕಿ ಕಾಣಿಸಿಕೊಳ್ತಿದ್ದಂತೆ ಮನೆಯಿಂದ ಹೊರಗೆ ಬಂದಿದ್ದರಿಂದ ಮನೆಯವರು ಅದೃಷ್ಟವಶಾತ್ ಪಾರಾಗಿದ್ದಾರೆ.

    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಗ್ರಾಮಸ್ಥರು ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ಮಾಡಿದ್ದಾರೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

  • ಗೋದಾಮಿನಲ್ಲಿ ಕೊಳೆಯುತ್ತಿವೆ ಕೊಡಗು, ಕೇರಳ ಸಂತ್ರಸ್ತರಿಗೆ ನೀಡಿದ ದವಸ ಧಾನ್ಯಗಳು

    ಗೋದಾಮಿನಲ್ಲಿ ಕೊಳೆಯುತ್ತಿವೆ ಕೊಡಗು, ಕೇರಳ ಸಂತ್ರಸ್ತರಿಗೆ ನೀಡಿದ ದವಸ ಧಾನ್ಯಗಳು

    ಬಳ್ಳಾರಿ: ಕೊಡಗು, ಕೇರಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ಪರಿಸ್ಥಿತಿಗೆ ನಾಡಿನ ಜನರು ಸಾಕಷ್ಟು ನೆರವು ನೀಡಿದ್ದಾರೆ. ಸಂತ್ರಸ್ತರಿಗಾಗಿ ಸಾವಿರಾರು ಜನರು ಆಹಾರ ಧಾನ್ಯ, ದವಸ, ಬಟ್ಟೆ ಬರೆ, ಔಷಧಿಗಳನ್ನು ಸಂತ್ರಸ್ತರಿಗಾಗಿ ನೀಡಿದ್ದಾರೆ. ಆದರೆ ಸಂತ್ರಸ್ತರಿಗೆ ತಲುಪಬೇಕಾಗಿದ್ದ ರಾಶಿ ರಾಶಿ ವಸ್ತುಗಳು ಇದೀಗ ಬಳ್ಳಾರಿಯ ಗೋದಾಮವೊಂದರಲ್ಲಿ ಕೊಳೆಯುತ್ತಿವೆ.

    ಕೊಡಗು ಹಾಗೂ ಕೇರಳ ಸಂತ್ರಸ್ತರಿಗೆ ವಸ್ತುಗಳನ್ನು ತಲುಪಿಸಲು ಲಾರಿ ಸಿಗಲಿಲ್ಲ ಅಂತಾ ಬಳ್ಳಾರಿ ಜಿಲ್ಲಾಡಳಿತ ಕೈ ಚೆಲ್ಲಿ ಕುಳಿತಿದೆ. ಬಳ್ಳಾರಿ ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಇದೀಗ ರಾಜ್ಯದ ಜನರು ಹಿಡಿಶಾಪ ಹಾಕುವಂತಾಗಿದೆ. ಏಕೆಂದರೆ ಕೊಡಗು ಹಾಗೂ ಕೇರಳದಲ್ಲಿ ಸಂಭವಿಸಿದ ಪ್ರವಾಹ ಪರಿಸ್ಥಿತಿಯಿಂದ ನಲುಗಿದ ಸಂತ್ರಸ್ತರಿಗಾಗಿ ಬಳ್ಳಾರಿಯ ಸಾವಿರಾರು ಜನರು ಸಾಕಷ್ಟು ದವಸ, ಧಾನ್ಯ, ಬಟ್ಟೆ, ಬರೆ, ಔಷಧಿ ಸೇರಿದಂತೆ ದಿನನಿತ್ಯ ಬಳಕೆಯ ವಸ್ತುಗಳನ್ನು ನೀಡಿದ್ದರು. ಆದರೆ ಬಳ್ಳಾರಿ ಜಿಲ್ಲಾಡಳಿತ ಸಂತ್ರಸ್ತರಿಗಾಗಿ ತಲುಪಿಸಬೇಕಾದ ಸಾಮಾಗ್ರಿಗಳನ್ನು ಗೊದಾಮಿನಲ್ಲಿಟ್ಟು ನಿರ್ಲಕ್ಷ್ಯ ವಹಿಸಿದ ಪರಿಣಾಮ ಸಂತ್ರಸ್ತರಿಗೆ ತಲುಪಬೇಕಿದ್ದ ಸಾಮಾಗ್ರಿಗಳು ಗೋದಾಮಿನಲ್ಲೆ ಕೊಳೆಯುವಂತಾಗಿದೆ.

    ಸಂತ್ರಸ್ತರಿಗಾಗಿ ಸಾವಿರಾರು ಜನರು ತಮ್ಮ ದುಡಿದ ದುಡಿಮೆಯಲ್ಲೇ ಸಾಕಷ್ಟು ಸಾಮಾಗ್ರಿಗಳನ್ನು ನೀಡಿದ್ದರು. ಇನ್ನೂ ಕೆಲವರು ಅಲ್ಪ ಸ್ವಲ್ಪ ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೆರವು ನೀಡಿದ್ದರು. ಅಲ್ಲದೇ ಸಿಎಂ ಪರಿಹಾರ ನಿಧಿಗೆ ನೀಡಿದ ಸುಮಾರು 7 ಲಕ್ಷ ರೂ. ಗೂ ಅಧಿಕ ಮೊತ್ತದ ಚೆಕ್‍ಗಳನ್ನು ಸಹ ಮುಖ್ಯಮಂತ್ರಿಗಳ ಪರಿಹಾರ ನಿಧಿ ಅಕೌಂಟ್‍ಗೆ ತಲುಪಿಸದೇ ನಿರ್ಲಕ್ಷ್ಯ ವಹಿಸಿರುವುದು ನಿಜಕ್ಕೂ ದುರಂತಮಯವಾಗಿದೆ. ಈ ಕುರಿತು ಗೃಹರಕ್ಷಕ ದಳದ ಅಧಿಕಾರಿಯನ್ನು ಪ್ರಶ್ನೆ ಮಾಡಿದರೆ ಸಾಮಾಗ್ರಿಗಳನ್ನು ಸಾಗಿಸಲು ಲಾರಿ ಸಿಗಲಿಲ್ಲ. ನಾಳೆ ನಾಡಿದು ಕಳುಹಿಸುತ್ತೇವೆ ಅಂತಾ ನಿರ್ಲಕ್ಷ್ಯತನದ ಉತ್ತರ ನೀಡುತ್ತಾರೆ.

    ಬಳ್ಳಾರಿ ಜಿಲ್ಲೆಯಲ್ಲಿ ಸಾವಿರಾರು ಲಾರಿಗಳಿದ್ದರೂ ಜಿಲ್ಲಾಡಳಿತಕ್ಕೆ ಮಾತ್ರ ಸಂತ್ರಸ್ತರ ಸಾಮಾಗ್ರಿಗಳನ್ನು ಸಾಗಿಸಲು ಒಂದು ಲಾರಿಯೂ ಸಹ ಸಿಗಲಿಲ್ಲ ಅನ್ನೋದು ನಿಜಕ್ಕೂ ದುರಂತಮಯವಾಗಿದೆ. ಹೀಗಾಗಿ ಬಳ್ಳಾರಿ ಜಿಲ್ಲೆಯ ಜನರು ಇದೆಂಥ ಜಿಲ್ಲಾಡಳಿತ. ಇವರೆಂಥಾ ಜಿಲ್ಲಾಧಿಕಾರಿ ಅಂತಾ ಹಿಡಿಶಾಪ ಹಾಕುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv