ಮೈಸೂರಿನಲ್ಲಿ ಮಾತನಾಡಿದ ಯದುವೀರ್ ಒಡೆಯರ್, ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲೂ ಇದ್ದೇನೆ. ಧಾರ್ಮಿಕ ಕ್ಷೇತ್ರಗಳಿಗೆ ಬಂದಾಗ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು. ಅದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ಚಾಮುಂಡಿ ಬೆಟ್ಟದಲ್ಲೂ ವಸ್ತ್ರ ಸಂಹಿತೆ ಜಾರಿಯಾಗಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ:
ತಿರುಪತಿ ಮಾದರಿ ಚಾಮುಂಡಿ ಬೆಟ್ಟದಲ್ಲೂ ಮೊಬೈಲ್ ನಿರ್ಬಂಧ ಮಾಡಬೇಕು. ಇತ್ತೀಚಿಗೆ ಕೆಲವರು ಗೊತ್ತಿದ್ದೋ ಗೊತ್ತಿಲ್ಲದೋ ದೇವಿಯ ಮೂಲ ವಿಗ್ರಹದ ವೀಡಿಯೋ ಮಾಡುತ್ತಿದ್ದಾರೆ. ಇದು ಧಾರ್ಮಿಕ ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ತರುತ್ತದೆ. ಈ ನಿಟ್ಟಿನಲ್ಲಿ ಸೂಕ್ತ ಕಾನೂನನ್ನು ಜಾರಿ ಮಾಡಬೇಕು ಎಂದು ತಿಳಿಸಿದ್ದಾರೆ.
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಲ್ಲಿ ವಸ್ತ್ರ ಸಂಹಿತೆಯನ್ನು ಕಡ್ಡಾಯಗೊಳಿಸಲಾಗುತ್ತಿದೆ. ಜಿಲ್ಲೆಯ ಪುರಾಣ ಪ್ರಸಿದ್ಧ ಸ್ಥಳವಾದ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ಈಗಾಗಲೇ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಭಟ್ಕಳ ತಾಲೂಕಿನ ಪ್ರಸಿದ್ಧ ಶಿವ ಕ್ಷೇತ್ರವಾದ ಮುರುಡೇಶ್ವರ ಶಿವಾಲಯದಲ್ಲೂ ವಸ್ತ್ರ ಸಂಹಿತೆ ಜಾರಿಗೆ ತಂದಿದೆ ಇಲ್ಲಿನ ಆಡಳಿತ ಮಂಡಳಿ.
ಮುರುಡೇಶ್ವರ ಪ್ರಸಿದ್ಧ ಪ್ರವಾಸಿ ಸ್ಥಳವಾಗಿದ್ದು, ಲಕ್ಷಾಂತರ ಜನ ಪ್ರವಾಸಿಗರು ಮುರುಡೇಶ್ವರಕ್ಕೆ ಭೇಟಿ ನೀಡುತ್ತಾರೆ. ಇಲ್ಲಿನ ಜಲಸಾಹಸ ಕ್ರೀಡೆ, ಸ್ಕೂಬಾ ಡೈವ್‌ಗಳು ಪ್ರಸಿದ್ಧವಾಗಿದ್ದು, ಬೃಹತ್ ಶಿವನ ಮೂರ್ತಿ ವಿಶ್ವ ಪ್ರಸಿದ್ಧಿ ಪಡೆದಿದೆ.
ಇಲ್ಲಿಗೆ ಬರುವ ಪ್ರವಾಸಿಗರು ಕಡಲ ತೀರಕ್ಕೆ ಭೇಟಿ ನೀಡಿದ ನಂತರ ಶಿವನ ದೇವಾಲಯಕ್ಕೂ ಭೇಟಿ ಕೊಡುತ್ತಾರೆ. ಈ ವೇಳೆ ಪುರುಷರು ಚಡ್ಡಿ, ಬನಿಯನ್‌ನಲ್ಲಿ ಬಂದರೆ, ಮಹಿಳೆಯರು ಸಹ ಧಾರ್ಮಿಕ ಸ್ಥಳದಲ್ಲಿ ಧರಿಸಬೇಕಾದ ವಸ್ತ್ರ ಧರಿಸದೇ ಆಕ್ಷೇಪಾರ್ಹ ರೀತಿಯಲ್ಲಿ ದೇವರ ದರ್ಶನಕ್ಕೆ ಬರುತಿದ್ದರು. ಆಸ್ತಿಕ ಭಕ್ತರು ಈ ಬಗ್ಗೆ ಆಡಳಿತ ಮಂಡಳಿಗೆ ವಸ್ತ್ರ ಸಂಹಿತೆ ಜಾರಿ ತರುವಂತೆ ಮನವಿ ಮಾಡಿದ್ದರು.
ಈಗ ಆಡಳಿತ ಮಂಡಳಿ ಈ ಬಗ್ಗೆ ನಿರ್ಧಾರ ಕೈಗೊಂಡಿದ್ದು, ಪುರುಷರಿಗೆ ಪಂಚೆ ಮತ್ತು ಮಹಿಳೆಯರಿಗೆ ಸೀರೆ, ಚೂಡಿದಾರ ಧರಿಸಿದರೆ ಮಾತ್ರ ದೇವಾಲಯಕ್ಕೆ ಪ್ರವೇಶ ಕಲ್ಪಿಸಲಿದೆ. ದೇವಾಲಯದ ಎದುರುಭಾಗ ಸೂಚನ ಫಲಕ ಹಾಕಲಾಗಿದ್ದು, ಯಾವ ವಸ್ತ್ರ ಧರಿಸಬೇಕು ಎಂದು ಫಲಕದಲ್ಲಿ ನಮೂದಿಸಲಾಗಿದೆ. ಈ ದೇವಸ್ಥಾನ ಖಾಸಗಿ ಆಡಳಿತ ಮಂಡಳಿ ಹೊಂದಿದ್ದು, ಉದ್ಯಮಿ ಆರ್.ಎನ್.ಶೆಟ್ಟಿ ಅವರ ಕುಟುಂಬ ಈ ದೇವಸ್ಥಾನದ ನಿರ್ವಹಣೆ ಮಾಡುತ್ತಿದೆ.
ಬೆಂಗಳೂರು: ರಾಜ್ಯದ್ಯಾಂತ ನಾಳೆಯಿಂದ ಸಿಇಟಿ (CET) ಪರೀಕ್ಷೆ ನಡೆಯಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಡ್ರೆಸ್‌ಕೋಡ್ ಬಿಡುಗಡೆ ಮಾಡಿದೆ.
ಸಿಇಟಿ ಎಕ್ಸಾಂ ರೂಲ್ಸ್
* ವೆಬ್ ಕಾಸ್ಟಿಂಗ್ ಮೂಲಕ ಎಲ್ಲ 775 ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ ಇಡುವ ವ್ಯವಸ್ಥೆ.
* ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮೇಲುಸ್ತುವಾರಿ.
* ಪರೀಕ್ಷೆಗೆ ಒಂದೂವರೆ ಗಂಟೆ ಮುಂಚೆ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಹಾಜರಾಗಬೇಕು.
* ಪೊಲೀಸ್/ ಗೃಹ ರಕ್ಷಕ ದಳದ ಸಿಬ್ಬಂದಿ ಅಭ್ಯರ್ಥಿಗಳ ತಪಾಸಣೆ ಬಳಿಕವೇ ಪರೀಕ್ಷಾ ಕೇಂದ್ರಕ್ಕೆ ತೆರಳಲು ಅವಕಾಶ.
* ಕನಿಷ್ಠ ಒಂದೂವರೆ ಗಂಟೆ ಮುಂಚೆಯೇ ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿಗಳು ಬಂದು ತಪಾಸಣೆಗೆ ಒಳಗಾಗಬೇಕು.
* ಅಭ್ಯರ್ಥಿಯ ಮುಖ ಚಹರೆ ಮತ್ತು ಕ್ಯೂಆರ್ ಕೋಡ್ ವ್ಯವಸ್ಥೆ ಮೂಲಕ ಅಭ್ಯರ್ಥಿಯ ನೈಜತೆ ಪರಿಶೀಲನೆ ಮಾಡಲಾಗುತ್ತದೆ.
* ಯಾರದ್ದೋ ಪರೀಕ್ಷೆಯನ್ನು ಇನ್ಯಾರೋ ಬರೆಯುವುದನ್ನು ತಡೆಯುವ ಸಲುವಾಗಿ ವ್ಯವಸ್ಥೆ ಜಾರಿ. ಇದನ್ನೂ ಓದಿ: ಇಂದು ಮಧ್ಯರಾತ್ರಿಯಿಂದಲೇ ಅನಿರ್ದಿಷ್ಟಾವಧಿ ಲಾರಿ ಮುಷ್ಕರ – ರಸ್ತೆಗಿಳಿಯಲ್ಲ 6 ಲಕ್ಷ ಲಾರಿಗಳು
ಡ್ರೆಸ್ ಕೋಡ್‌ನಲ್ಲೇನಿದೆ?
* ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ವಸ್ತ್ರ ಸಂಹಿತೆ.
* ಪುರುಷ/ಮಹಿಳಾ ಅಭ್ಯರ್ಥಿಗಳು ಅರ್ಧ ತೋಳಿನ ಬಟ್ಟೆ ಧರಿಸಬೇಕು.
* ಸಾಧ್ಯವಾದಷ್ಟು ಕಾಲರ್ ಇಲ್ಲದಿರುವುದನ್ನು ಹಾಕಿಕೊಂಡು ಬಂದರೆ ಉತ್ತಮ.
* ಪುರುಷರು, ಜೇಬು ಇಲ್ಲದ/ಕಡಿಮೆ ಜೇಬುಗಳಿರುವ ಸರಳ ಪ್ಯಾಂಟ್ ಧರಿಸಬೇಕು.
* ಕುರ್ತಾ ಪೈಜಾಮ/ಜೀನ್ಸ್ ಪ್ಯಾಂಟ್‌ಗೆ ಅವಕಾಶ ಇಲ್ಲ.
* ಶೂ ಕೂಡ ನಿಷೇಧ.
* ಮೊಬೈಲ್, ಪೆನ್‌ಡ್ರೈವ್, ಇಯರ್ ಫೋನ್, ಮೈಕ್ರೋ ಫೋನ್ ಇತ್ಯಾದಿ ಎಲೆಕ್ಟ್ರಾನಿಕ್ ವಸ್ತುಗಳನ್ನು ಸಂಪೂರ್ಣ ನಿಷೇಧ.
ಬೆಂಗಳೂರು: ಜನವರಿ 13ರಂದು ನಡೆಯುವ ಕೆ-ಸೆಟ್ (KSET) ಪರೀಕ್ಷೆಗೆ (Exam) ಹಾಜರಾಗುವ ಅಭ್ಯರ್ಥಿಗಳು http://kea.kar.nic.in ಜಾಲತಾಣದಲ್ಲಿ ಪ್ರವೇಶ ಪತ್ರವನ್ನು (Admission Letter) ಡೌನ್ಲೋಡ್ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ (S Ramya) ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಭ್ಯರ್ಥಿಗಳು ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವ ಮುನ್ನ ಪ್ರವೇಶಪತ್ರ ಮತ್ತು ಸರ್ಕಾರದಿಂದ ಮಾನ್ಯವಾಗಿರುವ ನಿಗದಿತ ಬಗೆಯ ಗುರುತಿನ ಪತ್ರವನ್ನು ತೋರಿಸುವುದು ಕಡ್ಡಾಯವಾಗಿದೆ. ಜೊತೆಗೆ ಪ್ರವೇಶಪತ್ರದಲ್ಲಿ ನಮೂದಿಸಿರುವ ಪರೀಕ್ಷಾ ಕೇಂದ್ರದಲ್ಲಷ್ಟೇ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಬೇಕು. ಅಲ್ಲದೇ ಇತ್ತೀಚಿನ ಎರಡು ಭಾವಚಿತ್ರಗಳನ್ನು ತರಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮ ದೇಶ ಹಿಂದೂ ರಾಷ್ಟ್ರವಾದರೆ ದೇಶಕ್ಕೇ ತೊಂದರೆ: ಯತೀಂದ್ರ ಸಿದ್ದರಾಮಯ್ಯ
ಪರೀಕ್ಷೆಯು ಜನವರಿ 13ರ ಬೆಳಗ್ಗೆ 10ರಿಂದ 11 ಮತ್ತು ಮಧ್ಯಾಹ್ನ 12ರಿಂದ 2 ಗಂಟೆಯವರೆಗೆ ನಡೆಯಲಿದೆ. ಇದರ ನಡುವೆ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಿಂದ ಹೊರಹೋಗಲು ಅವಕಾಶ ಕೊಡಲಾಗುವುದಿಲ್ಲ. ಓಎಂಆರ್ ಶೀಟ್ ಮೇಲೆ ಅಭ್ಯರ್ಥಿಗಳೇನಾದರೂ ತಮ್ಮ ನೋಂದಣಿ ಸಂಖ್ಯೆ, ವಿಷಯದ ಕೋಡ್ ಮತ್ತು ಪರೀಕ್ಷಾ ಕೇಂದ್ರದ ಕೋಡ್ ಅನ್ನು ತಪ್ಪಾಗಿ ನಮೂದಿಸಿದಲ್ಲಿ ಅಂಥವರ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಲಾಗುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ ನಂತರ ಕೋಟ್ಯಂತರ ಭಕ್ತರಿಗೆ ಅವಕಾಶ: ಪೇಜಾವರ ಶ್ರೀ
ವಸ್ತ್ರಸಂಹಿತೆ ಕಡ್ಡಾಯ:
ಕೆ-ಸೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಪರೀಕ್ಷಾ ಪ್ರಾಧಿಕಾರವು ಕಟ್ಟುನಿಟ್ಟಿನ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಿದೆ. ಯಾವುದೇ ಅಕ್ರಮಗಳಿಗೆ ಅವಕಾಶ ನೀಡದಿರಲು ಈ ಕ್ರಮ ಅನುಸರಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ತುಘಲಕ್ ಸರ್ಕಾರ ನಡೆಯುತ್ತಿದೆ: ರೇಣುಕಾಚಾರ್ಯ ಕಿಡಿ
ಇದರಂತೆ, ಪುರುಷ ಅಭ್ಯರ್ಥಿಗಳು ಅರೆತೋಳಿನ ಅಂಗಿ, ಹೆಚ್ಚಿನ ಜೇಬುಗಳಿಲ್ಲದ ಸರಳ ಪ್ಯಾಂಟ್ ಕಡ್ಡಾಯವಾಗಿದೆ. ಇದರ ಭಾಗವಾಗಿ ಜಿಪ್ ಪಾಕೆಟ್, ದೊಡ್ಡ ಬಟನ್ಸ್ ಮತ್ತು ವಿಸ್ತಾರ ಕಸೂತಿ ಇರುವ ಉಡುಪು ಮತ್ತು ಶೂಗಳನ್ನು ನಿಷೇಧಿಸಲಾಗಿದೆ. ಜೊತೆಗೆ, ಅಭ್ಯರ್ಥಿಗಳು ಯಾವುದೇ ಕಂಠಾಭರಣ, ಕಿವಿಯೋಲೆ, ಉಂಗುರ ಮತ್ತು ಕಡಗಗಳನ್ನು ಧರಿಸಿಕೊಂಡು ಬರಬಾರದು ಎಂದು ಪ್ರಾಧಿಕಾರ ಮಾಹಿತಿ ನೀಡಿದೆ. ಇದನ್ನೂ ಓದಿ: INDIA ಒಕ್ಕೂಟಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್ ಸಂಚಾಲಕ?
ಮಹಿಳಾ ಅಭ್ಯರ್ಥಿಗಳಿಗೆ ವಿಪರೀತ ಕಸೂತಿ, ಹೂಗಳು, ಬ್ರೂಚ್, ಬಟನ್, ಪೂರ್ಣ ತೋಳಿನ ರವಿಕೆ/ವಸ್ತ್ರ ಇರುವ ಉಡುಪು ಮತ್ತು ಜೀನ್ಸ್ ಪ್ಯಾಂಟ್ ಹಾಗೂ ದಪ್ಪನೆ ಅಡಿಭಾಗವಿರುವ ಚಪ್ಪಲಿ/ಶೂಗಳನ್ನು ಧರಿಸಿಕೊಂಡು ಬರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ, ಬೇರಾವುದೇ ಆಭರಣಗಳನ್ನು ಹಾಕಿಕೊಂಡು ಪರೀಕ್ಷಾ ಕೇಂದ್ರಕ್ಕೆ ಬರುವಂತಿಲ್ಲ ಎಂದು ರಮ್ಯಾ ತಿಳಿಸಿದ್ದಾರೆ. ಇದನ್ನೂ ಓದಿ: ಬಿ.ಕೆ ಹರಿಪ್ರಸಾದ್ ಹಿಂದೂವೇ ಅಲ್ಲ, ದೇಶದ್ರೋಹಿ: ಯಶ್‌ಪಾಲ್ ಸುವರ್ಣ
ನಿಷೇಧಿತ ವಸ್ತುಗಳ ಪಟ್ಟಿ:
ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಪಣ ತೊಟ್ಟಿರುವ ಪರೀಕ್ಷಾ ಪ್ರಾಧಿಕಾರವು, ಯಾವುದೇ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬ್ಲೂಟೂತ್, ಮೊಬೈಲ್ ಫೋನ್, ಎಲೆಕ್ಟ್ರಾನಿಕ್ ವಸ್ತುಗಳು, ಪೆನ್‌ಡ್ರೈವ್, ಇಯರ್ ಫೋನ್, ಕೈ ಗಡಿಯಾರ, ಮೈಕ್ರೋಫೋನ್, ಪೆನ್ಸಿಲ್, ಎರೇಸರ್, ಜಾಮೆಟ್ರಿ ಪೆಟ್ಟಿಗೆ ಮತ್ತು ಲಾಗ್ ಟೇಬಲ್ ಇತ್ಯಾದಿಗಳನ್ನು ತರುವಂತಿಲ್ಲ. ಜೊತೆಗೆ ಟೋಪಿ/ಮಾಸ್ಕ್ ಹಾಕಿಕೊಂಡು ಬರುವಂತಿಲ್ಲ ಎಂದು ಸೂಚನೆ ನೀಡಿದೆ. ಇದನ್ನೂ ಓದಿ: ಜ.6 ರಂದು ಎಕೆಬಿಎಂಎಸ್ ಮಹಿಳಾ ಸಮಾವೇಶ: ನಿರ್ಮಲಾ ಸೀತಾರಾಮನ್ ಉದ್ಘಾಟನೆ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನವೆಂಬರ್ 18 ಮತ್ತು 19 ರಂದು ನಡೆಸಲಿರುವ ನಿಗಮ-ಮಂಡಳಿಗಳ ಪರೀಕ್ಷೆಗೆ ಮತ್ತಷ್ಟು ಟಫ್ ರೂಲ್ಸ್ (Tough Rules) ಜಾರಿ ಮಾಡಿದೆ.
ನೇರ ನೇಮಕಾತಿ ಪರೀಕ್ಷೆ ನಡೆಯುತ್ತಿದ್ದು ಅಭ್ಯರ್ಥಿಗಳು ವಸ್ತ್ರ ಸಂಹಿತೆ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು. ಸೂಕ್ಷ್ಮ ಕೇಂದ್ರಗಳಲ್ಲಿ ಪೊಲೀಸರಿಂದ (Police ತಪಾಸಣೆ ನಡೆಸಲಾಗುತ್ತದೆ. ಅಷ್ಟೇ ಅಲ್ಲದೇ ಪರೀಕ್ಷಾ ಕೇಂದ್ರಗಳಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಿದೆ.
ಏನೇನು ರೂಲ್ಸ್?
– ಡ್ರೆಸ್ ಕೋಡ್ (Dress Code) ಜಾರಿಯಾಗಿದ್ದು, ಪರೀಕ್ಷೆಯ ದಿನದಂದು ತುಂಬುತೋಳಿನ ಶರ್ಟ್ ಧರಿಸುವಂತಿಲ್ಲ.
– ಅಭ್ಯರ್ಥಿಗಳಿಗೆ ಜೇಬು ಇಲ್ಲದ ಅಥವಾ ಕಡಿಮೆ ಜೇಬಿರುವ ಪ್ಯಾಂಟ್ ಧರಿಸಿ ಪರೀಕ್ಷೆಗೆ ಹಾಜರಾಗಲು ಸೂಚನೆ.
– ಕುರ್ತಾ, ಪೈಜಾಮ, ಜೀನ್ಸ್ ಪ್ಯಾಂಟ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ಇರುವುದಿಲ್ಲ.
– ಧರಿಸುವ ಬಟ್ಟೆಗಳು ಹಗುರವಾಗಿದ್ದು ದೊಡ್ಡ ಎಂಬ್ರಾಯಿಡರಿ, ಜಿಪ್ ಪಾಕೆಟ್‌ಗಳು, ದೊಡ್ಡ ಬಟನ್‌ಗಳು – ಇವುಗಳನ್ನು ಹೊಂದಿರಬಾರದು.
– ಅಭ್ಯರ್ಥಿಗಳು ಶೂ ಹಾಕಿಕೊಂಡು ಪರೀಕ್ಷೆಗೆ ಹಾಜರಾಗುವುದನ್ನು ನಿಷೇಧಿಸಲಾಗಿದ್ದು, ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸಬೇಕು.
– ಮಹಿಳಾ ಅಭ್ಯರ್ಥಿಗಳಿಗೆ ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಯಾವುದೇ ಅಭ್ಯರ್ಥಿಯು ಕುತ್ತಿಗೆಯ ಸುತ್ತ ಲೋಹದ ಆಭರಣ ಧರಿಸುವುದು ಅಥವಾ ಕಿವಿಯೋಲೆ, ಉಂಗುರ, ಕಡಗ ಧರಿಸುವುದನ್ನು ನಿರ್ಬಂಧಿಸಲಾಗಿದೆ.
– ಬ್ಲೂಟೂತ್ ಸಾಧನ ಬಳಕೆಗೆ ಆಸ್ಪದವಾಗಬಾರದೆಂದು ತಲೆಯ ಮೇಲೆ ಟೋಪಿ ಅಥವಾ ಯಾವುದೇ ವಸ್ತ್ರ ಧರಿಸುವಂತಿಲ್ಲ. ಬಾಯಿ, ಕಿವಿ ಹಾಗೂ ತಲೆ ಮುಚ್ಚುವ ರೀತಿಯಲ್ಲಿ ಯಾವುದೇ ವಸ್ತ್ರ/ ಸಾಧನ ಧರಿಸುವುದನ್ನು ನಿಷೇಧಿಸಲಾಗಿದೆ.
– ಯಾವುದೇ ರೀತಿಯ ಮಾಸ್ಕ್ ಸಹ ಧರಿಸುವಂತಿಲ್ಲ. ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋಫೋನ್ ಮತ್ತು ಕೈಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿ ಇಲ್ಲ
– ಪೆನ್ಸಿಲ್, ಪೇಪರ್, ರಬ್ಬರ್, ಜಾಮಿಟ್ರಿ ಬಾಕ್ಸ್ ಮತ್ತು ಲಾಗ್ ಟೇಬಲ್ ಗಳನ್ನು ಪರೀಕ್ಷಾ ಕೇಂದ್ರದೊಳಕ್ಕೆ ತೆಗೆದುಕೊಂಡು ಹೋಗುವಂತಿಲ್ಲ. ಇದನ್ನೂ ಓದಿ: ಓದು ಎಂದು ತಾಯಿ ಬುದ್ಧಿ ಹೇಳಿದ್ದಕ್ಕೆ ಮನನೊಂದು ಪುತ್ರ ನೇಣಿಗೆ ಶರಣು
– ಇತ್ತೀಚಿನ ಎರಡು ಪಾಸ್ ಪೋರ್ಟ್ ಅಳತೆಯ ಫೋಟೋ ಕೊಂಡೊಯ್ಯಬೇಕು. ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿ ಹೊಂದಿರುವುದು ಕೂಡ ಕಡ್ಡಾಯ.
– ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ.
ಒಂದು ಕೇಂದ್ರದಲ್ಲಿ ಮಾತ್ರ ಪರೀಕ್ಷೆ
– ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಈಗಾಗಲೇ ಲಿಂಕ್ ನೀಡಲಾಗಿದೆ. ಕೆಲವು ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ಸಲ್ಲಿಸಿರುವ ಕಾರಣ ಒಂದಕ್ಕಿಂತ ಹೆಚ್ಚು ಪ್ರವೇಶ ಪತ್ರಗಳು ಬಿಡುಗಡೆಯಾಗಿರುತ್ತದೆ.
– ಇಂತಹ ಅಭ್ಯರ್ಥಿಗಳು ಮಾತ್ರ ಯಾವುದಾದರೂ ಒಂದು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ಬರೆಯತಕ್ಕದ್ದು, ಪರೀಕ್ಷಾ ದಿನದಂದು ಎರಡೂ ಪ್ರವೇಶ ಪತ್ರಗಳನ್ನು ಕೊಠಡಿಯ ಮೇಲ್ವಿಚಾರಕರಿಗೆ ಸಲ್ಲಿಸಬೇಕು.
ಪೊಲೀಸ್ ಸಿಬ್ಬಂದಿ ನಿಯೋಜನೆ
– ಅಭ್ಯರ್ಥಿಗಳ ಸೂಕ್ತ ತಪಾಸಣೆಗಾಗಿ ಪ್ರತಿ ಪರೀಕ್ಷಾ ಕೇಂದ್ರದಲ್ಲೂ 25 ವಿದ್ಯಾರ್ಥಿಗಳ ಗುಂಪಿಗೆ ಒಬ್ಬರಂತೆ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು.
– ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಮೆಟಲ್ ಡಿಟೆಕ್ಟರ್ ಮತ್ತು ಪೊಲೀಸ್ ಇಲಾಖೆಗೆ ಸೂಕ್ತವೆನಿಸುವ ಇತರೆ ಉಪಕರಣಗಳನ್ನು ಬಳಸಿ ತಪಾಸಣೆಗೆ ಒಳಪಡಿಸಬೇಕು.
– ಪರೀಕ್ಷೆ ನಡೆಯುವ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ಯಾವುದೇ ಕಾರು, ಮಿನಿ ಬಸ್ ವಾಹನಗಳನ್ನು ನಿಲ್ಲಿಸದಂತೆ ನಿರ್ಬಂಧ ಹಾಕಬೇಕು.
– ಪರೀಕ್ಷಾ ಕೇಂದ್ರದ ಸುತ್ತ ಇರುವ ಹೋಟೆಲ್, ಪೇಯಿಂಗ್ ಗೆಸ್ಟ್, ವಸತಿ ನಿಲಯಗಳು ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿರುವ ವ್ಯಕ್ತಿಗಳನ್ನು ಪರಿಶೀಲಿಸಬೇಕು
– ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಕ್ರಮ ಕಂಡು ಬಂದಲ್ಲಿ ಆಯಾ ವ್ಯಾಪ್ತಿಯ ಪೊಲೀಸ್ ಕಮಿಷನರ್ ಅವರನ್ನು/ಪೊಲೀಸ್ ವರಿಷ್ಠಾಧಿಕಾರಿಯವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು.
– ದೇಹದ 80% ಭಾಗ ಮುಚ್ಚಿಕೊಂಡು ಭಾರತೀಯ ನಾರಿಯಂತೆ ಬನ್ನಿ ಅಂತ ಸೂಚನೆ
ಡೆಹ್ರಾಡೂನ್: ಉತ್ತರಾಖಂಡದ (Uttarakhand) ಪ್ರಮುಖ ಮೂರು ದೇವಾಲಯಗಳ ಪ್ರವೇಶಕ್ಕೆ ಮಹಿಳೆಯರು ಮತ್ತು ಹುಡುಗಿಯರಿಗೆ ವಸ್ತ್ರ ಸಂಹಿತೆಯನ್ನು (Dress Code) ಕಡ್ಡಾಯಗೊಳಿಸಲಾಗಿದೆ. ಮೈ ಕಾಣುವಂತೆ ಬಟ್ಟೆ ಹಾಕ್ಕೊಂಡು ಬಂದರೆ ದೇವಾಲಯಗಳಿಗೆ (Temples) ಪ್ರವೇಶ ನೀಡಲ್ಲ ಎಂದು ಸೂಚನೆ ನೀಡಲಾಗಿದೆ.
ಉತ್ತರಾಖಂಡದ ಮಹಾನಿರ್ವಾಣಿ ಅಖಾರದ ಅಧೀನದಲ್ಲಿ ಬರುವ ದೇವಾಲಯಗಳಲ್ಲಿ ಈ ವಸ್ತ್ರ ಸಂಹಿತೆ ಕಡ್ಡಾಯ ಎನ್ನಲಾಗಿದೆ. ಮಹಾನಿರ್ವಾಣಿ ಅಖಾರದ ಕಾರ್ಯದರ್ಶಿ ಮತ್ತು ಅಖಿಲ ಭಾರತೀಯ ಅಖಾರ ಪರಿಷತ್ತಿನ ಅಧ್ಯಕ್ಷ ಶ್ರೀಮಹಾಂತ್ ರವೀಂದ್ರ ಪುರಿ ಅವರು, “ಮಹಿಳೆಯರು ಮತ್ತು ಹುಡುಗಿಯರು ತುಂಡುಡುಗೆ ಧರಿಸಿ ದೇವಾಲಯಗಳಿಗೆ ಪ್ರವೇಶಿಸುವಂತಿಲ್ಲ” ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳನ್ನೇ ಕತ್ತರಿಸಿದ ದುರುಳರು
ಹರಿದ್ವಾರದ ಕಂಖಾಲ್‌ನಲ್ಲಿರುವ ದಕ್ಷ ಪ್ರಜಾಪತಿ ದೇವಾಲಯ, ಪೌರಿ ಜಿಲ್ಲೆಯ ನೀಲಕಂಠ ಮಹಾದೇವ ದೇವಾಲಯ ಮತ್ತು ಡೆಹ್ರಾಡೂನ್‌ನ ತಪಕೇಶ್ವರ ಮಹಾದೇವ ದೇವಾಲಯಗಳಲ್ಲಿ ಈ ನಿಯಮ ಜಾರಿಗೊಳಿಸಲಾಗಿದೆ. ದೇವಾಲಯವು ಆತ್ಮಾವಲೋಕನಕ್ಕೆ ಸ್ಥಳವಾಗಿದೆಯೇ ಹೊರತು ಮನರಂಜನೆಗಾಗಿ ಅಲ್ಲ. ಹೀಗಾಗಿ ದೇವಾಲಯಕ್ಕೆ ಭೇಟಿ ನೀಡುವ ಭಕ್ತರಲ್ಲಿ ನಿಯಮ ಪಾಲಿಸುವಂತೆ ಮನವಿ ಮಾಡಲಾಗಿದೆ ಎಂದು ರವೀಂದ್ರ ಅವರು ಹೇಳಿದ್ದಾರೆ.
ಮಹಿಳೆಯರು ಮತ್ತು ಹುಡುಗಿಯರು ದೇವಾಲಯದ ಪೂಜೆಗೆ ಆಗಮಿಸುವುದಿದ್ದರೆ, ಭಾರತೀಯ ಸಂಪ್ರದಾಯದ ಪ್ರಕಾರ ಬಟ್ಟೆಗಳನ್ನು ಧರಿಸಬೇಕು. ಆಗ ಮಾತ್ರ ಅವರಿಗೆ ದೇವಾಲಯಕ್ಕೆ ಪ್ರವೇಶ ಸಿಗುತ್ತದೆ. ದೇಹದ 80% ನಷ್ಟು ಭಾಗವನ್ನು ಮುಚ್ಚಿಕೊಂಡು ಬಂದರೆ ದೇವಾಲಯಗಳಿಗೆ ಬರಬಹುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಚಾಕ್ಲೇಟ್, ಆಟಿಕೆ ಬೇಕೆಂದು ಹಠ ಹಿಡಿದ ಮಗಳನ್ನು ಕಲ್ಲು ಎತ್ತಿ ಹಾಕಿ ಕೊಂದೇ ಬಿಟ್ಟ ಪಾಪಿ ತಂದೆ
ದಕ್ಷಿಣ ಭಾರತ ಮತ್ತು ಮಹಾರಾಷ್ಟ್ರದ ದೇವಾಲಯಗಳಲ್ಲಿ ಈ ವ್ಯವಸ್ಥೆ ಈಗಾಗಲೇ ಜಾರಿಯಲ್ಲಿದೆ. ಈಗ ಇಲ್ಲಿಯೂ ಈ ವ್ಯವಸ್ಥೆ ಜಾರಿಯಾಗುತ್ತಿದ್ದು, ದೇವಸ್ಥಾನಕ್ಕೆ ಬರುವ ಭಕ್ತರಿಗೆ ಯಾವುದೇ ಅಹಿತಕರ ಪರಿಸ್ಥಿತಿ ಎದುರಾಗಬಾರದು ಎಂದು ಅವರು ಹೇಳಿದ್ದಾರೆ.
ಕಾರವಾರ: (Karwar) ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ (Gokarna) ರಥ ಬೀದಿಯಲ್ಲಿ ಸಂಚರಿಸಬೇಕು ಎಂದರೆ ಇನ್ಮುಂದೆ ರಸ್ತೆಯಲ್ಲಿ ಅರೆಬರೆ ಬಟ್ಟೆ ಧರಿಸುವಂತಿಲ್ಲ.
ಹೌದು, ಹೀಗೆಂದು ದೇವಸ್ಥಾನದ ಪಕ್ಕದಲ್ಲಿ ಇರುವ ರಥ ಬೀದಿಯಿಂದ ಪಶ್ಚಿಮ ದ್ವಾರದವರೆಗೆ ಅರೆಬರೆ ಉಡುಪು ಧರಿಸಿ ಸಾರ್ವಜನಿಕರು ಸಂಚರಿಸಲು ನಿಷೇಧ ವಿಧಿಸಿ ಮಹಾಬಲೇಶ್ವರ ದೇವಸ್ಥಾನದ (Mahabaleshwara Temple) ಆಡಳಿತ ಕಮಿಟಿ ಸೂಚನಾ ಫಲಕ ಅಳವಡಿಸಿದೆ. ಕಮಿಟಿಯಿಂದ ಸೂಚನಾ ಫಲಕದ ಬ್ಯಾನರ್ ಅಳವಡಿಕೆಗೆ ಜನರಿಂದ ವಿರೋಧ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಶಿಕ್ಷಕನಿಗೆ ಬಿತ್ತು ಧರ್ಮದೇಟು
ರಥ ಬೀದಿಯಿಂದ ಕಡಲ ತೀರ ಹಾಗೂ ಇತರೆ ಸ್ಥಳಗಳಿಗೆ ಸಾರ್ವಜನಿಕರು ತೆರಳುವ ಪ್ರದೇಶ ಇದಾಗಿದ್ದು, ಗೋಕರ್ಣ ಕೇವಲ ಧಾರ್ಮಿಕ ಕ್ಷೇತ್ರ ಮಾತ್ರ ಆಗಿರದೇ ಪ್ರವಾಸಿ ಸ್ಥಳವೂ ಸಹ ಆಗಿದೆ. ಹೀಗಿರುವಾಗ ದೇವಸ್ಥಾನದ ಒಳಗೆ ಮಾತ್ರ ಸೀಮಿತವಾಗಿದ್ದ ವಸ್ತ್ರ ಸಂಹಿತೆ (Dress Code) ಇದೀಗ ಸಾರ್ವಜನಿಕ ಪ್ರದೇಶಕ್ಕೂ ಅಳವಡಿಸಿರುವುದು ವಿವಾದ ಹುಟ್ಟುಹಾಕಿದೆ.
ಉಸ್ತುವಾರಿ ಸಮಿತಿಯಲ್ಲಿ ನಿವೃತ್ತ ನ್ಯಾಯಮೂರ್ತಿ ಬಿ.ಎನ್. ಕೃಷ್ಣ ನೇತೃತ್ವದ ಎಂಟು ಜನರಿರುವ ಸಮಿತಿ ಇದಾಗಿದ್ದು, ಕುಮಟಾ ಎಸಿ, ಎಸ್‌ಪಿ ,ಡಿಸಿಗಳು ಸಹ ಕಮಿಟಿಯಲ್ಲಿದ್ದಾರೆ. ಆದರೆ ಜಿಲ್ಲಾಧಿಕಾರಿಗಳಿಗೆ ಖುದ್ದು ಕರೆಮಾಡಿ ಕೇಳಿದಾಗ ಅವರಿಗೂ ಸಹ ಮಾಹಿತಿ ಇರಲಿಲ್ಲ. ಇದಲ್ಲದೆ ಯಾವುದೇ ಆದೇಶ ಹೊರಡಿಸಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ದೇಶ ಕಾಯುವ ಯೋಧರಿಂದ್ಲೇ ನಾವು ಸುರಕ್ಷಿತ- ಮೃತ ಸೈನಿಕರ ಕುಟುಂಬಗಳಿಗೆ ಜೊಲ್ಲೆ ಸಾಂತ್ವನ
ಈ ಹಿಂದೆ ದೇವಸ್ಥಾನದಲ್ಲಿ ಮಾತ್ರ ವಸ್ತ್ರ ಸಂಹಿತೆ ಜಾರಿ ಮಾಡಿದ್ದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಆದರೆ ಇದೀಗ ದೇವಸ್ಥಾನದ ಒಳಭಾಗದ ಜೊತೆ ಸಾರ್ವಜನಿಕ ಪ್ರದೇಶಕ್ಕೂ ಈ ರೀತಿ ಆದೇಶದ ಸೂಚನಾ ಫಲಕ ಅಳವಡಿಸಿದ್ದು, ಜನರ ತೀವ್ರ ವಿವಾದಕ್ಕೆ ಕಾರಣವಾಗಿದೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ರಾಜ್ಯದಲ್ಲಿ ವಿವಾದಕ್ಕೆ ಎಡೆ ಮಾಡಿಕೊಟ್ಟಿರುವ ಹಿಜಬ್ – ಕೇಸರಿ ಸಂಘರ್ಷಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಇಷ್ಟು ದಿನ ಶಾಲೆಗಳಲ್ಲಿ ಮಾತ್ರವಿದ್ದ ವಸ್ತ್ರಸಂಹಿತೆಯನ್ನು ಪದವಿಪೂರ್ವ ಕಾಲೇಜುಗಳಿಗೂ ಸರ್ಕಾರ ವಿಸ್ತರಿಸಿದೆ.
ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಏಕರೂಪದ ವಸ್ತ್ರಸಂಹಿತೆಯನ್ನು ಜಾರಿ ಮಾಡಿದೆ. ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಕಲಂ 133ರ ಅನ್ವಯ ರಾಜ್ಯ ಸರ್ಕಾರದ ಎಲ್ಲಾ ಶಾಲೆ ಕಾಲೇಜುಗಳಲ್ಲಿ ಸರ್ಕಾರ ನಿಗದಿ ಮಾಡಿರುವ ಸಮವಸ್ತ್ರವನ್ನು ವಿದ್ಯಾರ್ಥಿಗಳು ಕಡ್ಡಾಯವಾಗಿ ಧರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೆಲ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ತಮ್ಮ ಧರ್ಮದ ಅನುಸಾರ ಆಚರಣೆಗಳನ್ನು ಪಾಲಿಸುತ್ತಿರುವುದು ಕಂಡುಬಂದಿದ್ದು, ಇದರಿಂದ ಸಮಾನತೆ ಮತ್ತು ಏಕತೆಗೆ ಧಕ್ಕೆ ಬರುತ್ತಿರುವುದನ್ನು ಮನಗಂಡು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಇದನ್ನೂ ಓದಿ: ಕೇಂದ್ರದ ಬೇಟಿ ಬಚಾವೋ, ಬೇಟಿ ಪಡಾವೋ ಈಗ ಬೇಟಿ ಹಠಾವೋ ಆಗಿ ಬದಲಾಗುತ್ತಿದೆ: ಹೆಚ್‍ಡಿಕೆ
ಸರ್ಕಾರ ತಮ್ಮ ಆದೇಶವನ್ನು ಸಮರ್ಥಿಸಲು 2018ರಲ್ಲಿ ಕೇರಳ ಹೈಕೋರ್ಟ್ ನೀಡಿದ್ದ ಆದೇಶವನ್ನು, ಕಾರ್ತಿಕ್ ಇಂಗ್ಲೀಷ್ ಸ್ಕೂಲ್‍ಗೆ ಸಂಬಂಧಿಸಿ ಬಾಂಬೇ ಹೈಕೋರ್ಟ್ ನೀಡಿದ್ದ ತೀರ್ಪನ್ನು, ತಮಿಳುನಾಡಿನ ಎಂಜಿಆರ್ ಮೆಡಿಕಲ್ ಕಾಲೇಜಿಗೆ ಸಂಬಂಧಿಸಿದ ಸುಪ್ರೀಂಕೋರ್ಟ್ ಆದೇಶವನ್ನು ಉಲ್ಲೇಖಿಸಿದೆ. ಇದನ್ನೂ ಓದಿ: ಮನಸ್ಸಿಗೆ ಬಂದಂತೆ ಮಾಡಲು ಇದು ಪಾಕಿಸ್ತಾನ ಅಲ್ಲ: ಆರ್. ಅಶೋಕ್
ವಸ್ತ್ರಸಂಹಿತೆ ಬಗ್ಗೆ ಸರ್ಕಾರದ ಆದೇಶ ಏನು?
ಸ್ಕಾರ್ಫ್ ಧರಿಸಿದವರಿಗೆ ಶಾಲೆಗೆ ಬರದಂತೆ ನಿರ್ದೇಶಿಸಬಹುದು, ಇದು ಸಂವಿಧಾನದ 25ನೇ ಅನುಚ್ಛೇದದ ಉಲ್ಲಂಘನೆ ಅಲ್ಲ (ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ). ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಸರ್ಕಾರ ನಿಗದಿಪಡಿಸಿದ ಸಮವಸ್ತ್ರ ಕಡ್ಡಾಯ. ಪದವಿ ಪೂರ್ವ ಕಾಲೇಜುಗಳು CDC ಸೂಚಿಸಿದ ಸಮವಸ್ತ್ರ ಧರಿಸಬೇಕು. ಖಾಸಗಿ ಶಾಲೆ-ಕಾಲೇಜುಗಳಲ್ಲಿ ಆಡಳಿತ ಮಂಡಳಿ ನಿರ್ದೇಶಿಸಿದ ಸಮವಸ್ತ್ರ ಕಡ್ಡಾಯ. ಆಡಳಿತ ಮಂಡಳಿ ಸಮವಸ್ತ್ರ ನಿಗದಿಪಡಿಸದಿದ್ದಲ್ಲಿ ಸಮಾನತೆ ಐಕ್ಯತೆ ಕಾಪಾಡಿಕೊಂಡು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದಂತೆ ಇರುವ ಉಡುಪು ಧರಿಸಬೇಕು ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಬೆಂಗಳೂರು: ಮುಜುರಾಯಿ ಇಲಾಖೆಯ ವ್ಯಾಪ್ತಿಯ ಅಡಿಯಲ್ಲಿ ಬರುವ ದೇವಾಲಯವನ್ನು ಇನ್ನು ಮುಂದೆ ಜೀನ್ಸ್, ಶಾಟ್ಸ್, ಟೀ ಶರ್ಟ್ ಗಳು ಧರಿಸಿ ಭಕ್ತಾಧಿಗಳು ಪ್ರವೇಶುವಂತಿಲ್ಲ.
ಹೌದು, ಸರ್ಕಾರ ನೇಮಿಸಿದ್ದ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ದೇವಾಲಯಗಳಿಗೆ ಭೇಟಿ ನೀಡುವವರಿಗೆ ಸೂಕ್ತ ವಸ್ತ್ರ ಸಂಹಿತೆಯನ್ನು ಜಾರಿಗೆ ತರಲು ನಿರ್ಧರಿಸಿದೆ. ದೇವಾಲಯಕ್ಕೆ ಬರುವ ಇಂದಿನ ಯುವ ಜನಾಂಗದವರು ಪಾಶ್ಚಿಮಾತ್ಯ ಶೈಲಿಯ ಬಟ್ಟೆಗಳನ್ನು ಧರಿಸಿ ದೇವಾಲಕ್ಕೆ ಆಗಮಿಸುತ್ತಿದ್ದು, ಇದರಿಂದಾಗಿ ದೇವಾಲಯಕ್ಕೆ ಆಗಮಿಸುವ ಸಂಪ್ರದಾಯಿಕ ಭಕ್ತರ ಭಾವನೆಗಳಿಗೆ ತೊಂದರೆ ಉಂಟಾಗುತ್ತಿದೆ. ಹೀಗಾಗಿ ವಸ್ತ್ರ ಸಂಹಿತೆಯನ್ನು ಜಾರಿಗೆ ತರಲು ಮುಂದಾಗುತ್ತಿದೆ ಎಂದು ಹೇಳಿದೆ.
ಯಾವುದಕ್ಕೆ ನಿಷೇಧ?
ವಸ್ತ್ರ ಸಂಹಿತೆ ನಿಯಮಗಳ ಪ್ರಕಾರ ದೇವಾಲಯಕ್ಕೆ ಬರುವ ಭಕ್ತರು ಜೀನ್ಸ್, ಶಾಟ್ಸ್, ಅರ್ಧ ಪ್ಯಾಂಟ್ ಮತ್ತು ಟಿ-ಶರ್ಟ್ ಗಳನ್ನು ಧರಿಸಿಬರುವಂತಿಲ್ಲ. ಬದಲಾಗಿ ಮಹಿಳೆಯರು ಸೀರೆ ಹಾಗೂ ಸಲ್ವಾರ್ ಕಮಿಜ್‍ಗಳನ್ನು ಹಾಗೂ ಪುರುಷರ ಪಂಚೆ, ಪ್ಯಾಟ್ ಮತ್ತು ಶರ್ಟ್‍ಗಳನ್ನು ಧರಿಸಿಬರಲು ಅವಕಾಶವನ್ನು ನೀಡಲಾಗಿದೆ. ಅಕ್ಟೋಬರ್ 3 ರಂದು ನಡೆಯುವ ಪರಿಷತ್‍ನ ಸಭೆಯಲ್ಲಿ ಈ ಕುರಿತು ಪ್ರಸ್ತಾಪ ಮಾಡಿ ರಾಜ್ಯಾದ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ವಸ್ತ್ರ ಸಂಹಿತೆಯನ್ನು ಅನುಸರಿಸಲು ಸೂಚಿಸಲಾಗುವುದು. ಈ ಕುರಿತಂತೆ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆಗಳನ್ನು ಕಳುಹಿಸಲಾಗುವುದು ಎಂದು ರಾಜ್ಯ ಧಾರ್ಮಿಕ ಪರಿಷತ್‍ನ ಸದಸ್ಯರಾದ ಪದ್ಮನಾಭ ಕೋಟ್ಯಾನ್ ತಿಳಿಸಿದ್ದಾರೆ.
ಪರಿಷತ್ ಧಾರ್ಮಿಕ ಅಚರಣೆಗಳು ಮತ್ತು ಸಂಪ್ರಾದಾಯಗಳ ಅಂಶಗಳಿಗೆ ಸಂಬಂಧಿಸಿದಂತೆ ಉಂಟಾಗುವ ಗೊಂದಲಗಳು ಹಾಗೂ ಸಮಸ್ಯೆಗಳಿಗೆ ಪರಿಹಾರವನ್ನು ಸೂಚಿಸುವ ಕಾರ್ಯವನ್ನು ಮಾಡುತ್ತದೆ. ವಸ್ತ್ರ ಸಂಹಿತೆ ಕುರಿತು ಈ ಹಿಂದಿನ ಸಭೆಯಲ್ಲಿ ಚರ್ಚೆಯನ್ನು ನಡೆಸಲಾಗಿದೆ. ಈ ಕುರಿತು ವರದಿ ನೀಡುವಂತೆ ಸಮಿತಿಯನ್ನು ರಚಿಸಿ ಅದರ ಸಲಹೆಗಳ ಮೇರೆಗೆ ನಿಯಮಗಳನ್ನು ಸಿದ್ಧಪಡಿಸಲಾಗಿದೆ. ವಸ್ತ್ರ ಸಂಹಿತೆಯನ್ನು ಜಾರಿಗೆ ತರುತ್ತಿರುವುದು ಕರ್ನಾಟಕ ಮಾತ್ರ ಅಲ್ಲ. ಈಗಾಗಲೇ ತಮಿಳುನಾಡು, ಕೇರಳ ಮತ್ತು ಆಂಧ್ರ ಪ್ರದೇಶಗಳಲ್ಲಿ ಈ ಕುರಿತು ನಿಯಮಗಳನ್ನು ರೂಪಿಸಲಾಗಿದೆ ಎಂದರು.
ತಮಿಳುನಾಡು ಮತ್ತು ಕೇರಳ ರಾಜ್ಯದ ಎಲ್ಲಾ ದೇವಾಲಯಗಲ್ಲಿಯು ಈ ನಿಯಮ ಜಾರಿಗೆ ಬಂದಿಲ್ಲ. ಗುರುವಾಯೂರ್ ಶ್ರೀ ಕೃಷ್ಣ ದೇವಾಲಯ ಹಾಗೂ ತಿರುವನಂತಪುರ ಪದ್ಮನಾಭಸ್ವಾಮಿ ದೇವಾಲಯಗಳಲ್ಲಿ ಮಾತ್ರ ವಸ್ತ್ರ ಸಂಹಿತೆ ನಿಯಮವನ್ನು ಜಾರಿಗೆ ಮಾಡಲಾಗಿದೆ. ಈ ವೇಳೆಯಲ್ಲಿಯೂ ಸಹ ವಸ್ತ್ರ ಸಂಹಿತೆ ಜಾರಿಗೆ ಕುರಿತು ಹಲವು ವಾದ ವಿವಾದಗಳು ನಡೆದವು.
ಕೇವಲ ದೇವಾಲಯಾದ ಭಕ್ತರಿಗೆ ಮಾತ್ರ ವಸ್ತ್ರ ಸಂಹಿತೆಯನ್ನು ಜಾರಿಗೆಗೊಳಿಸಿಲ್ಲ. ಆರ್ಚಕರಿಗೂ ಈ ಕುರಿತು ಪ್ರತ್ಯೇಕ ನಿಯಮಗಳನ್ನು ರಚಿಸಲಾಗಿದೆ. ದೇವಾಲಯದಲ್ಲಿ ಆರ್ಚಕರನ್ನು ಗುರುತಿಸಲು ಸುಲಭವಾಗುವಂತೆ ಈ ನಿಯಮಗಳನ್ನು ಜಾರಿಗೆ ಮಾಡಲಾಗಿದೆ. ಈ ಕುರಿತು ದೇವಾಲಯದ ಆಡಳಿತ ಮಂಡಳಿ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಎಂದು ತಿಳಿದ್ದಾರೆ.
ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ಸಂಸ್ಥೆಗಳ ತಿದ್ದುಪಡಿ ಅಧಿನಿಯಮದ ಪ್ರಕಾರ ಸರ್ಕಾರ `ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್~ ರಚಿಸಿದ್ದು ಇದರಲ್ಲಿ ಎಂಟು ಸದಸ್ಯರು ಇರುತ್ತಾರೆ. ಧಾರ್ಮಿಕ ಪರಿಷತ್ ಅಧಕ್ಷರಾಗಿ ಮುಜರಾಯಿ ಸಚಿವರು ಕಾರ್ಯನಿರ್ವಹಿಸಿದರೆ, ಇತರೆ ಏಳು ಜನ ಸದಸ್ಯರನ್ನು ಹೊಂದಿರುತ್ತದೆ. ಧಾರ್ಮಿಕ ಇಲಾಖೆ ಅಡಿಯಲ್ಲಿ ರಾಜ್ಯದ್ಯಾಂತ ಸುಮಾರು 34 ಸಾವಿರ ದೇವಾಲಯಗಳು ಬರುತ್ತವೆ. ಇದರಲ್ಲಿ 160 `ಎ’ ಗ್ರೇಡ್ ದೇವಾಲಯಗಳಿವೆ. ಇವುಗಳಿಂದ ವಾರ್ಷಿಕವಾಗಿ ಒಂದೊಂದು ದೇವಾಲಯಗಳಿಂದ 25 ಲಕ್ಷ ರೂ.ಗಿಂತಲೂ ಹೆಚ್ಚು ಆದಾಯ ಸರ್ಕಾರಕ್ಕೆ ಲಭಿಸುತ್ತದೆ.
– ದುಬೈನಿಂದ ಸಂದೇಶ ಕಳಿಸಿದವರಿಗೆ ಲುಕ್ ಔಟ್ ನೋಟಿಸ್
– ಸ್ಥಳೀಯ ಯುವಕ ನಾಪತ್ತೆ, ಪೊಲೀಸರಿಂದ ತನಿಖೆ ಮುಂದುವರಿಕೆ
ಶಿವಮೊಗ್ಗ: ಇಲ್ಲಿನ ಸಹ್ಯಾದ್ರಿ ಕಾಲೇಜಿನಲ್ಲಿ ಆರಂಭಗೊಂಡ ವಸ್ತ್ರ ಸಂಹಿತೆ ವಿವಾದ ಸದ್ಯಕ್ಕೆ ಶಮನಗೊಳ್ಳುವ ಲಕ್ಷಣಗಳು ಕಾಣಿಸುತ್ತಿಲ್ಲ. ಇದುವರೆಗೂ ಕ್ಯಾಂಪಸ್‍ನ ಒಳಗಿದ್ದ ವಿವಾದ ಈ ಹೊರಗೂ ವ್ಯಾಪಿಸಿದೆ. ಪರ-ವಿರೋಧ ಚರ್ಚೆ, ವಾಗ್ವಾದ ಆರಂಭಗೊಂಡಿವೆ. ಬೆಂಕಿಗೆ ತುಪ್ಪ ಹಾಕುವಂತೆ ಎರಡು ವಾಟ್ಸಪ್ ವಿಡಿಯೋಗಳು ವಾಟ್ಸಪ್‍ಗಳಲ್ಲಿ ವ್ಯಾಪಕವಾಗಿ ಹರಡುತ್ತಿವೆ.
ಶಿವಮೊಗ್ಗ ಮೂಲದ ದುಬೈನಲ್ಲಿ ಇರುವ ಇಬ್ಬರು ಯುವಕರು ಅತ್ಯಂತ ಅಶ್ಲೀಲವಾಗಿ ಒಂದು ಧರ್ಮದವರ ಅವಹೇಳನ ಮಾಡಿ ವಾಟ್ಸಪ್ ವಿಡಿಯೋ ಕಳಿಸಿದ್ದಾರೆ. ಇದು ವ್ಯಾಪಕವಾಗಿ ಹರಡುತ್ತಿದ್ದಂತೆ, ಇದಕ್ಕೆ ಪ್ರತಿಯಾಗಿ ಶಿವಮೊಗ್ಗದ ಯುವಕ ಅತ್ಯಂತ ಕೀಳು ಭಾಷೆಯಲ್ಲಿ ಇನ್ನೊಂದು ವಿಡಿಯೋ ಮಾಡಿ ಹಂಚಿದ್ದಾನೆ. ಈ ಎರಡೂ ವಿಡಿಯೋಗಳು ವ್ಯಾಪಕವಾಗಿ ಹರಡುತ್ತಿದ್ದು, ಪೆÇಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಕೋಟೆ ಠಾಣೆಯಲ್ಲಿ ಸ್ವಯಂದೂರು ದಾಖಲಿಸಿಕೊಂಡಿದ್ದಾರೆ. ಇಂತಹ ವೀಡಿಯೋ ಹರಡಿ ಸಾಮಾಜಿಕ ನೆಮ್ಮದಿಗೆ ಭಂಗ ತರುವ ವ್ಯಕ್ತಿಗಳ ವಿರುದ್ದ ಕ್ರಮಕೈಗೊಳ್ಳುವ ವ್ಯಕ್ತಿಗಳ ವಿರುದ್ದ ಕ್ರಮಕೈಗೊಳ್ಳುವ ಎಚ್ಚರಿಕೆ ನೀಡಿದೆ.
ಈ ವಿವಾದದ ಹಿನ್ನೆಲೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಸಂದೇಶವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಶಿವಮೊಗ್ಗ ಎಸ್ಪಿ ಅಭಿನವ್ ಖರೆ ತಿಳಿಸಿದ್ದಾರೆ.
ವಾಟ್ಸಪ್ ಗ್ರೂಪ್‍ಗಳಲ್ಲಿ ಇಂಥ ಸಂದೇಶ ಹಾಕಿದರೆ ಅಡ್ಮಿನ್ ಮೇಲೆ ಹೊಣೆ ಹೊರಿಸಿ, ಕ್ರಮ ಜರುಗಿಸುತ್ತೇವೆ. ಈಗಾಗಲೇ ವಾಟ್ಸಪ್ ವಿಡಿಯೋ ಮೆಸೇಜ್‍ಗೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಆರೋಪಿ ಪತ್ತೆಗೆ ಬಲೆ ಬೀಸಲಾಗಿದೆ. ದುಬೈನಿಂದ ಧಮ್ಕಿ ಹಾಕಿದ ಯುವಕರಿಗೆ ಲುಕೌಟ್ ನೋಟಿಸ್ ಜಾರಿಯಾಗಿದೆ. ಸ್ಥಳೀಯ ಯುವಕ ನಾಪತ್ತೆ ಅಗಿದ್ದು, ಆತನ ಪತ್ತೆಗಾಗಿ ಬಲೆ ಬೀಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.