Tag: ವಾಟ್ಸಾಪ್ ಸಂದೇಶ

  • ನನ್ನನ್ನು ವೇಶ್ಯಾವಾಟಿಕೆಗೆ ಒತ್ತಾಯಿಸ್ತಿದ್ರು- ಅಂಕಿತಾ ಭಂಡಾರಿ ವಾಟ್ಸಾಪ್ ಸಂದೇಶ ವೈರಲ್

    ನನ್ನನ್ನು ವೇಶ್ಯಾವಾಟಿಕೆಗೆ ಒತ್ತಾಯಿಸ್ತಿದ್ರು- ಅಂಕಿತಾ ಭಂಡಾರಿ ವಾಟ್ಸಾಪ್ ಸಂದೇಶ ವೈರಲ್

    ಡೆಹ್ರಾಡೂನ್: ಇತ್ತೀಚೆಗಷ್ಟೇ ನಾಪತ್ತೆಯಾಗಿ ತಾನು ಕೆಲಸ ಮಾಡುತ್ತಿದ್ದ ರೆಸಾರ್ಟ್‌ನಲ್ಲಿಯೇ (Resort) ಶವವಾಗಿ ಪತ್ತೆಯಾಗಿದ್ದ ಉತ್ತರಾಖಂಡದ (Uttarakhand) ಯುವತಿ (Young Women) ಅಂಕಿತಾ ಭಂಡಾರಿ ಸಾವಿಗೂ ಮುನ್ನ ತನ್ನ ಸ್ನೇಹಿತರಿಗೆ ಕಳುಹಿಸಿದ್ದ ವಾಟ್ಸಾಪ್ ಸಂದೇಶಗಳು (WhatsApp Message) ಬಹಿರಂಗಗೊಂಡಿವೆ.

    ಹೌದು.. ಹತ್ಯೆಗೀಡಾದ ಉತ್ತರಾಖಂಡದ (Uttarakhand Murder) ಯುವತಿ `ನನ್ನನ್ನು ವೇಶ್ಯಾವಾಟಿಕೆ (Prostitute) ಮಾಡುವಂತೆ ಒತ್ತಾಯಿಸುತ್ತಿದ್ದಾರೆ, ಎಲ್ಲರೂ ನನ್ನನ್ನು ವೇಶ್ಯೆಯಾಗಿ ಮಾಡಲು ಪ್ರಯತ್ನಿಸುತ್ತಿದ್ದಾರೆ’ ಎಂದು ಸಾಯುವ ಮುನ್ನ ಸ್ನೇಹಿತರಿಗೆ ಕಳುಹಿಸಿದ್ದ ಸಂದೇಶಗಳು ಬೆಳಕಿಗೆ ಬಂದಿವೆ. ಈ ಸಂದೇಶಗಳು ಆರೋಪವನ್ನು ಬಲವಾಗಿ ದೃಢಪಡಿಸುವಂತೆ ಸೂಚಿಸುತ್ತಿವೆ.

    ಯುವತಿ ಸಂದೇಶ ಏನಿತ್ತು?
    ಸಾಯವ ಮುನ್ನ ಯುವತಿ `10 ಸಾವಿರ ಹಣ ನೀಡಿ ನನ್ನನ್ನು ವೇಶ್ಯಾವಾಟಿಕೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ, ವ್ಯಕ್ತಿಯೊಬ್ಬ ಅನುಚಿತವಾಗಿ ಸ್ಪರ್ಶಿಸುತ್ತಿದ್ದಾನೆ ಎಂಬುದಾಗಿ ವಾಟ್ಸಾಪ್ (WhatsApp Message) ಮಾಡಿದ್ದಾಳೆ. ಸಂತ್ರಸ್ತೆಯ ವಾಟ್ಸಾಪ್‌ ಸಂದೇಶದ ಸ್ಕ್ರೀನ್‌ಶಾಟ್‌ಗಳು ಜಾಲತಾಣದಲ್ಲಿ ಹರಿದಾಡುತ್ತಿವೆ. ಈ ಸಂದೇಶಗಳು ಸಾಯುವ ಮುನ್ನ ಮೃತ ಯುವತಿಯಿಂದಲೇ ಬಂದಿವೆ ಎಂಬುದನ್ನು ಪ್ರಾಥಮಿಕ ತನಿಖೆ ದೃಢಪಡಿಸಿದೆ. ಅದರ ಹೊರತಾಗಿಯೂ ವಿಧಿ ವಿಜ್ಞಾನ (Forensic Investigation) ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು (Police) ತಿಳಿಸಿದ್ದಾರೆ.

    ಸಂತ್ರಸ್ತ ಮಹಿಳೆಯಿಂದ ರೆಸಾರ್ಟ್ ಉದ್ಯೋಗಿಯೊಬ್ಬರಿಗೆ ಕರೆ ಮಾಡಿದ ಕಾಲ್ ರೆಕಾರ್ಡ್ ಕ್ಲಿಪ್ ಸಹ ಪೊಲೀಸರಿಗೆ ಲಭ್ಯವಾಗಿದೆ. ರೆಸಾರ್ಟ್ ಅತಿಥಿಗಳಿಗೆ ವಿಶೇಷ ಲೈಂಗಿಕ ಸೇವೆ ಒದಗಿಸುವಂತೆ ರೆಸಾರ್ಟ್ ಮಾಲೀಕ ಒತ್ತಡ ಹೇರುತ್ತಿದ್ದರು ಎಂಬ ಸ್ಫೋಟಕ ಸತ್ಯ ಆಡಿಯೋನಲ್ಲಿ ಕೇಳಿಬಂದಿದೆ ಎಂದು ಉತ್ತರಾಖಂಡದ ಉನ್ನತ ಪೊಲೀಸ್ ಅಶೋಕ್ ಕುಮಾರ್ ಹೇಳಿದ್ದಾರೆ.

    ಏನಿದು ಪ್ರಕರಣ?
    ಇತ್ತೀಚೆಗೆ ಉತ್ತರಾಖಂಡದ ಬಿಜೆಪಿ ಮುಖಂಡನ ಮಾಲೀಕತ್ವದಲ್ಲಿದ್ದ ರೆಸಾರ್ಟ್‌ನಲ್ಲಿ ಅಂಕಿತಾ ಭಂಡಾರಿ (19) ಯುವತಿ ಶವವಾಗಿ ಪತ್ತೆಯಾಗಿದ್ದಳು. ಈ ಕುರಿತು ತನಿಖೆ ಕೈಗೊಂಡಿರುವ ಪೊಲೀಸರು ಬಿಜೆಪಿ ಮುಖಂಡ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಮೊದಲ ದಲಿತ, ಮುಸ್ಲಿಂ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡಿದ್ದು ಬಿಜೆಪಿ- ಟ್ವೀಟ್ ಮಾಡಿ ಮುಜುಗರಕ್ಕೀಡಾದ ಕೋಟಾ

    ಮೊದಲ ದಲಿತ, ಮುಸ್ಲಿಂ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡಿದ್ದು ಬಿಜೆಪಿ- ಟ್ವೀಟ್ ಮಾಡಿ ಮುಜುಗರಕ್ಕೀಡಾದ ಕೋಟಾ

    ಬೆಂಗಳೂರು: ವಾಟ್ಸಾಪ್‌ನಲ್ಲಿ ಬಂದ ಸುಳ್ಳು ಸುದ್ದಿಗಳನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತೀವ್ರ ಮುಜುಗರಕ್ಕೀಡಾಗಿದ್ದಾರೆ. ಬಳಿಕ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ.

    ಯಾವ್ಯಾವ ಸಮುದಾಯದವರನ್ನು ಬಿಜೆಪಿ ರಾಷ್ಟ್ರಪತಿ ಮಾಡಿದೆ ಎಂಬ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಟ್ವೀಟ್ ಮಾಡಿದ್ದಾರೆ. ಮೊದಲ ಮುಸ್ಲಿಂ ರಾಷ್ಟ್ರಪತಿಯನ್ನು ಮಾಡಿದ್ದು ನಾವೇ.. ಮೊದಲ ದಲಿತ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡಿದ್ದು ನಾವೇ.. ಮೊದಲ ಮಹಿಳೆಯನ್ನು ರಾಷ್ಟ್ರಪತಿ ಮಾಡಿದ್ದು ನಾವೇ.. ನಾವು ಜಾತಿವಾದಿಗಳಲ್ಲ.. ರಾಷ್ಟ್ರವಾದಿಗಳು.. ವಾಟ್ಸಾಪ್‌ನಲ್ಲಿ ಬಂದ ಸಂದೇಶ ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ. ಇದಕ್ಕೆ ಸಾರ್ವಜನಿಕ ವಲಯದಲ್ಲೂ ಸಾಕಷ್ಟು ಆಕ್ಷೇಪ, ಟೀಕೆಗಳು ವ್ಯಕ್ತವಾಗಿವೆ. ಇದನ್ನೂ ಓದಿ: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 15 ವರ್ಷ ಪೂರೈಸಿದ ಹಿಟ್‌ಮ್ಯಾನ್ – ಭಾವುಕ ಪತ್ರ ಬರೆದ ರೋಹಿತ್ ಶರ್ಮಾ

    ಇದಕ್ಕೆ ವಾಟ್ಸಾಪ್ ವಿಶ್ವವಿದ್ಯಾನಿಲಯದವರ ಜ್ಞಾನದ ಮಟ್ಟ ಇದು ಎಂದು ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ. ಕೋಟಾ ಶ್ರೀನಿವಾಸ ಪೂಜಾರಿ ಸಚಿವರಾಗಿದ್ದುಕೊಂಡು ವಾಟ್ಸಾಪ್‌ನಲ್ಲಿ ಬಂದಿದ್ದನ್ನು ಯಥಾವತ್ತಾಗಿ ಪೋಸ್ಟ್ ಮಾಡುತ್ತಾರೆ ಎಂದರೆ ಅವರ ಬುದ್ದಿಗೆ ಎಷ್ಟು ಮಂಕು ಕವಿದಿರಬಹುದು? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಬಿಕ್ಕಟ್ಟು; ಡೀಸೆಲ್‌ಗಾಗಿ ಬಂಕ್‌ನಲ್ಲಿ 5 ದಿನ ಕ್ಯೂನಲ್ಲಿ ನಿಂತಿದ್ದ ಟ್ರಕ್‌ ಡ್ರೈವರ್‌ ಸಾವು

    ಪೂಜಾರಿಯವರೇ ವಾಟ್ಸ್ಅಪ್‌ನಲ್ಲಿ ಬಂದಿರುವುದನ್ನು ಪೋಸ್ಟ್ ಮಾಡುವ ಮುನ್ನ ಇತಿಹಾಸ ಓದಿಕೊಳ್ಳಿ. ಮೊದಲ ಮುಸ್ಲಿಂ ರಾಷ್ಟ್ರಪತಿ ಕಾಂಗ್ರೆಸ್‌ನ ಕೊಡುಗೆ, ಮೊದಲ ಸಿಖ್ಖ್ ರಾಷ್ಟ್ರಪತಿ ಕಾಂಗ್ರೆಸ್‌ನ ಕೊಡುಗೆ, ಮೊದಲ ದಲಿತ ರಾಷ್ಟ್ರಪತಿಯೂ ಕಾಂಗ್ರೆಸ್‌ನ ಕೊಡುಗೆ, ಅಷ್ಟೆ ಏಕೆ? ಮೊದಲ ಮಹಿಳಾ ರಾಷ್ಟ್ರಪತಿಯ ಕೊಡುಗೆಯೂ ಕಾಂಗ್ರೆಸ್‌ನದ್ದೆ ಎಂದು ಸ್ಪಷ್ಟಪಡಿಸಿದ್ದಾರೆ.

    ನೀವು ರಾಷ್ಟ್ರವ್ಯಾದಿಗಳು: ಕಾಂಗ್ರೆಸ್ ಯಾವತ್ತೂ ರಾಷ್ಟ್ರಪತಿ ಮಾಡಿದ್ದನ್ನು ಪ್ರಚಾರಕ್ಕೆ ಬಳಸಲಿಲ್ಲ. ಇದೇ ಕಾಂಗ್ರೆಸ್‌ಗೂ ಬಿಜೆಪಿಗೂ ಇರುವ ವ್ಯತ್ಯಾಸ. ನೀವು ರಾಷ್ಟ್ರವಾದಿಗಳಲ್ಲ. ರಾಷ್ಟ್ರವ್ಯಾದಿಗಳು ಎಂದು ದಿನೇಶ್ ಗುಂಡೂರಾವ್ ಕುಟುಕಿದ್ದಾರೆ.

    Live Tv