Tag: ವಾಡ್ಲಿಮಿರ್ ಪುಟೀನ್

  • ಯುದ್ಧ ನಿಲ್ಲಿಸುವಂತೆ ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯಾಲಯ ಆದೇಶ – ಬ್ರೆಡ್ ಪಡೆಯಲು ಸಾಲುಗಟ್ಟಿದ್ದವರ ಮೇಲೆ ರಷ್ಯಾ ದಾಳಿ

    ಯುದ್ಧ ನಿಲ್ಲಿಸುವಂತೆ ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯಾಲಯ ಆದೇಶ – ಬ್ರೆಡ್ ಪಡೆಯಲು ಸಾಲುಗಟ್ಟಿದ್ದವರ ಮೇಲೆ ರಷ್ಯಾ ದಾಳಿ

    ಕೀವ್: ಉಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತ ವಾಡ್ಲಿಮಿರ್ ಪುಟಿನ್ ನಾಯಕತ್ವದ ಪರ ಇದೆ ಎಂದು ನಿನ್ನೆಯಷ್ಟೇ ಅಮೆರಿಕ ಬಹಿರಂಗವಾಗಿ ಅಸಮಾಧಾನ ಹೊರಹಾಕಿತ್ತು. ಈ ಬೆಳವಣಿಗೆ ನಡುವೆ ರಷ್ಯಾ ಈ ಕೂಡ್ಲೇ ಯುದ್ಧ ನಿಲ್ಲಿಸಬೇಕು ಎಂದು ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯಾಲಯ ಆದೇಶ ನೀಡಿದೆ.

    15 ನ್ಯಾಯಮೂರ್ತಿಗಳ ಪೀಠ 13-2ರ ಅಂತರದಿಂದ ಈ ಆದೇಶ ನೀಡಿದೆ. ಈ ಆದೇಶವನ್ನು ಸಮರ್ಥಿಸಿ ರಷ್ಯಾ ವಿರುದ್ಧ ಭಾರತದ ನ್ಯಾಯಮೂರ್ತಿ ದಲ್ವೀರ್ ಭಂಡಾರಿ ಮತ ಹಾಕಿರುವುದು ವಿಶೇಷ. ಇದು ಚರ್ಚೆಗೆ ಗ್ರಾಸವಾಗಿದೆ. ಆದರೆ ಚೀನಾ ಮಾತ್ರ ಐಸಿಜೆಯಲ್ಲೂ ರಷ್ಯಾ ಪರವಾಗಿ ನಿಂತಿದೆ.  ಇದನ್ನೂ ಓದಿ: ವಿಶ್ವಸಂಸ್ಥೆ ಕೋರ್ಟ್‌ನಲ್ಲಿ ರಷ್ಯಾ ವಿರುದ್ಧ ಮತ ಚಲಾಯಿಸಿದ ಭಾರತದ ನ್ಯಾಯಾಧೀಶ

    ರಷ್ಯಾ-ಉಕ್ರೇನ್ ಯುದ್ಧ ಶುರುವಾಗಿ ಇಂದಿಗೆ 22ನೇ ದಿನ. ಆದರೂ ರಷ್ಯಾಗೆ ಈವರೆಗೂ ಮೇಲುಗೈ ಸಾಧಿಸಲು ಆಗ್ತಿಲ್ಲ. ಉಕ್ರೇನ್ ಸೈನಿಕರ ಸಮರ್ಥ ದಾಳಿಗಳಿಂದ ಕಂಗಟ್ಟಿರುವ ರಷ್ಯಾ ಪಡೆಗಳು ಹೆಚ್ಚುಕಡಿಮೆ ಮುಂದಕ್ಕೆ ಚಲಿಸಲಾಗದ ಚಕ್ರವ್ಯೂಹದಲ್ಲಿ ಸಿಲುಕಿವೆ. ಭೂಮಿ, ಸಮುದ್ರ, ಆಕಾಶ ಮಾರ್ಗವನ್ನು ಹಿಡಿತಕ್ಕೆ ತೆಗೆದುಕೊಳ್ಳಲು ರಷ್ಯಾ ಸೇನೆಗೆ ಆಗ್ತಿಲ್ಲ. ಬದಲಾಗಿ ಭಾರಿ ನಷ್ಟ ವಾಗುತ್ತಿದೆ ಎಂದು ಬ್ರಿಟನ್ ರಕ್ಷಣಾ ಸಚಿವಾಲಯ ತಿಳಿಸಿದೆ. ಈ ನಡುವೆ ಚೆರ್ನಿಹೀವ್‍ನಲ್ಲಿ ಬ್ರೆಡ್ ಪಡೆಯಲು ಸಾಲುಗಟ್ಟಿದ್ದವರ ಮೇಲೆ ರಷ್ಯಾ ದಾಳಿ ನಡೆಸಿದ್ದು, 13 ಮಂದಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಪುಟಿನ್‍ನನ್ನು ‘ಯುದ್ಧಾಪರಾಧಿ’ ಎಂದ ಬೈಡನ್

    ಒಂದು ಹಂತದಲ್ಲಿ ತೀವ್ರ ಒತ್ತಡದಲ್ಲಿರುವ ರಷ್ಯಾ ಪಡೆಗಳು, ಜನವಸತಿ ಪ್ರದೇಶಗಳನ್ನು ಟಾರ್ಗೆಟ್ ಮಾಡ್ತಿವೆ ಎಂದು ಉಕ್ರೇನ್ ಆರೋಪಿಸಿದೆ. ಇದಕ್ಕೆ ಪೂರಕವಾಗಿ ಇಂದು ಮರಿಯುಪೋಲ್‍ನ ರಂಗಮಂದಿರದ ಮೇಲೆ ರಷ್ಯಾ ಬಾಂಬ್ ಹಾಕಿದ್ದು, ರಕ್ತದೋಕುಳಿಯೇ ಹರಿದಿದೆ. ಇಲ್ಲಿ ಮಕ್ಕಳು ಸೇರಿ, 1,200ಕ್ಕೂ ಹೆಚ್ಚು ಮಂದಿ ಆಶ್ರಯ ಪಡೆದಿದ್ದರು. ಇವರೆಲ್ಲಾ ಸತ್ತು ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಕಿಡ್ನಾಪ್ ಆಗಿದ್ದ ಮೆಲಿಟಪೋಲ್ ಮೇಯರ್‍ರನ್ನು ರಷ್ಯಾ ರಿಲೀಸ್ ಮಾಡಿದೆ. ಇದಕ್ಕೆ ಪ್ರತಿಯಾಗಿ ರಷ್ಯಾದ 9 ಸೈನಿಕರನ್ನು ಉಕ್ರೇನ್ ಬಿಡುಗಡೆ ಮಾಡಿದೆ. ಈ ಮಧ್ಯೆ, ಪುಟಿನ್‍ರನ್ನು ಯುದ್ಧಾಪರಾಧಿ ಎಂದು ಬೈಡನ್ ಕರೆದಿರುವುದು ಕ್ರೆಮ್ಲಿನ್ ಸಿಟ್ಟಿಗೆ ಕಾರಣವಾಗಿದೆ.

  • ರಷ್ಯಾದಿಂದ ಶೆಲ್, ರಾಕೆಟ್ ದಾಳಿ – ಉಕ್ರೇನ್‍ನಿಂದ 4 ಲಕ್ಷ ಮಂದಿ ಮಹಾವಲಸೆ?

    ರಷ್ಯಾದಿಂದ ಶೆಲ್, ರಾಕೆಟ್ ದಾಳಿ – ಉಕ್ರೇನ್‍ನಿಂದ 4 ಲಕ್ಷ ಮಂದಿ ಮಹಾವಲಸೆ?

    ಕೀವ್: ರಷ್ಯಾ ಮೂರೂ ವಿಭಾಗಗಳಲ್ಲಿ ಶೆಲ್, ರಾಕೆಟ್, ಬಾಂಬ್ ದಾಳಿ ಮಾಡುತ್ತಿರುವ ಕಾರಣ ಉಕ್ರೇನ್‍ನಲ್ಲಿ ಮಹಾವಲಸೆ 5ನೇ ದಿನ ಇಂದು ಕೂಡ ಮುಂದುವರಿದಿದೆ.

    ಇಲ್ಲಿವರೆಗೆ 4 ಲಕ್ಷ ಜನ ಉಕ್ರೇನ್ ತೊರೆದಿದ್ದು, ಪರಿಸ್ಥಿತಿ 7 ಲಕ್ಷದವರೆಗೆ ಮುಂದುವರಿಯಲಿದೆ ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಹೈಕಮಿಷನರ್ ಆತಂಕ ವ್ಯಕ್ತಪಡಿಸಿದ್ದಾರೆ. ಈಗಾಗಲೇ, ಪೋಲೆಂಡ್ -2,81,000, ಹಂಗೇರಿ – 84,586, ಮಾಲ್ಡೋವಾ – 36,398, ಯೂರೋಪ್ – 34,600, ರೊಮೇನಿಯಾ – 32,517, ಸ್ಲೋವಾಕಿಯಾ – 30,000, ಬೆಲಾರಸ್ – 311, ಲ್ಯಾಟಿವಿಯಾ – 163 ಜನ ವಲಸೆ ಹೋಗಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ಉಕ್ರೇನ್‍ಗೆ ಭಾರತದಿಂದ ವೈದ್ಯಕೀಯ ನೆರವು: ಅರಿಂದಮ್ ಬಾಗ್ಚಿ

    ಅಧಃಪತನ ತಲುಪಿದ ರಷ್ಯಾದ ಆರ್ಥಿಕತೆ:
    ಉಕ್ರೇನ್ ಮೇಲೆ ಯುದ್ಧ ಮಾಡುತ್ತಿರುವ ರಷ್ಯಾದ ಆರ್ಥಿಕತೆ ಅಧಃಪತನ ತಲುಪುತ್ತಿದೆ. ರಷ್ಯಾದ ಯುದ್ಧ ನಡೆ ಖಂಡಿಸಿ ಅಮೆರಿಕ, ಇಂಗ್ಲೆಂಡ್, ಜರ್ಮನಿ, ಜಪಾನ್, ಯೂರೋಪಿಯನ್ ಒಕ್ಕೂಟ ಸೇರಿದಂತೆ ಹಲವು ದೇಶಗಳು ವಿವಿಧ ಧಿಗ್ಬಂಧನ ವಿಧಿಸಿರೋದ್ರಿಂದ ರಷ್ಯಾಗೆ ಹೊಡೆತ ಬಿದ್ದಿದೆ. ರುಬೆಲ್ ಮೌಲ್ಯ ದಾಖಲೆಯ ಶೇ.30ರಷ್ಟು ಕುಸಿತಕಂಡಿದ್ದು, ರಫ್ತು ಕಂಪನಿಗಳಿಗೆ ವಿದೇಶಿ ಹಣ ಮಾರಾಟಕ್ಕೆ ಸಿದ್ಧವಾಗುವಂತೆ ಸೂಚನೆ ನೀಡಲಾಗಿದೆ. ಹಣದುಬ್ಬರದ ಏಕಾಏಕಿ ಜಿಗಿತ ಕಂಡಿದ್ದು, ರಷ್ಯಾ ಸೆಂಟ್ರಲ್ ಬ್ಯಾಂಕ್‍ನ ಬಡ್ಡಿದರ ದಿಢೀರ್ ಏರಿಕೆ ಆಗಿದೆ. ಶೇ. 9.5 ರಿಂದ ಶೇ.20 ರಷ್ಟು ಏರಿಕೆ (ಕೀ ಇಂಟರೆಸ್ಟ್ ರೇಟ್) ಏರಿಕೆ ಕಂಡಿದೆ.ಇದನ್ನೂ ಓದಿ: ದಿಢೀರ್‌ ಭಾರೀ ಪ್ರಮಾಣದಲ್ಲಿ ಬಡ್ಡಿದರ ಏರಿಸಿದ ರಷ್ಯನ್‌ ಬ್ಯಾಕ್‌

    ಪುಟಿನ್ ನಡೆಗೆ ಕಿಡಿ:
    ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ನಡೆಗೆ ಪ್ರಪಂಚದ ಹಲವು ದೇಶಗಳು ಕೆಂಡಾಮಂಡಲವಾಗಿವೆ. ಝೆಕ್ ರಿಪಬ್ಲಿಕ್‍ನ ರಾಜಧಾನಿ ಪ್ರಾಗ್ಯುನಲ್ಲಿ ಬೃಹತ್ ಪ್ರತಿಭಟನೆ ನಡೀತು. ಲಕ್ಷಾಂತರ ಮಂದಿ ಕೂಡಲೇ ಯುದ್ಧವನ್ನು ನಿಲ್ಲಿಸಿ ಎಂದು ಒತ್ತಾಯಿಸಿದ್ರು. ಉಕ್ರೇನ್ ರಾಷ್ಟ್ರಧ್ವಜ ಹಿಡಿದು ಉಕ್ರೇನ್ ಪರ ಘೋಷಣೆ ಕೂಗಿದ್ರು. ಟೋಕಿಯೋದ ಶಿಬುಯಾದಲ್ಲೂ ಪ್ರತಿಭಟನೆ ನಡೆಸಿ ಪುಟಿನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಇತ್ತ ರಷ್ಯಾದ ಮಾಸ್ಕೋದಲ್ಲೂ ಪುಟಿನ್ ವಿರುದ್ಧ ಜನರು ಕಿಡಿಕಾರುತ್ತಿದ್ದಾರೆ. ಸಾವಿರಾರು ಮಂದಿ ರಷ್ಯನ್ನರು ಯುದ್ಧ ನಿಲ್ಲಿಸುವಂತೆ ಪುಟಿನ್‍ಗೆ ಒತ್ತಾಯಿಸುತ್ತಿದ್ದಾರೆ. ಬೆಲಾರಸ್‍ನ ಅಪಾರ್ಟ್‍ಮೆಂಟ್‍ಗಳನ್ನೂ ಉಕ್ರೇನ್ ಪರ ಘೋಷಣೆ ಕೇಳಿ ಬಂತು. ಯುದ್ಧವನ್ನು ಖಂಡಿಸಿ ಯುರೋಪಿಯನ್ ದೇಶಗಳಲ್ಲಿರುವ ರಷ್ಯನ್ನರು ತಮ್ಮ ಪಾಸ್‍ಪೋರ್ಟ್‍ಗಳನ್ನು ಸುಟ್ಟು ಆಕ್ರೋಶ ಹೊರಹಾಕಿದ್ರು. ನೆದರ್‌ಲೆಂಡ್ ರಾಜಧಾನಿ ಅಮ್‍ಸ್ಟರ್‍ಡ್ಯಾಮ್‍ನಲ್ಲೂ ಉಕ್ರೇನ್ ಬೆಂಬಲಿಸಿ ಬೃಹತ್ ಪ್ರತಿಭಟನೆ ನಡೀತು. ಯುದ್ಧ ನಿಲ್ಲಿಸುವಂತೆ ಪ್ರತಿಭಟನಾಕಾರರು ಘೋಷಣೆ ಕೂಗಿದ್ರು.

  • ಯುದ್ಧ ವಿಚಾರದಲ್ಲಿ ಇತರ ರಾಷ್ಟ್ರಗಳು ಮೂಗು ತೂರಿಸಬೇಡಿ – ಪುಟಿನ್ ನೇರ ಎಚ್ಚರಿಕೆ

    ಯುದ್ಧ ವಿಚಾರದಲ್ಲಿ ಇತರ ರಾಷ್ಟ್ರಗಳು ಮೂಗು ತೂರಿಸಬೇಡಿ – ಪುಟಿನ್ ನೇರ ಎಚ್ಚರಿಕೆ

    ಮಾಸ್ಕೋ: ರಷ್ಯಾ – ಉಕ್ರೇನ್ ಮೇಲೆ ಯುದ್ಧ ಘೋಷಿಸುತ್ತಿದ್ದಂತೆ ಮಾಸ್ಕೋ ಮತ್ತು ಉಕ್ರೇನ್ ನಡುವಿನ ರಾಜತಾಂತ್ರಿಕ ಸಂಬಂಧ ಮುರಿದು ಬಿದ್ದಿದೆ. ಇತ್ತ ರಷ್ಯಾ- ಉಕ್ರೇನ್ ಯುದ್ಧ ವಿಚಾರವಾಗಿ ಇತರ ರಾಷ್ಟ್ರಗಳು ಮೂಗುತೂರಿಸಬೇಡಿ ಎಂದು ಪುಟಿನ್ ನೇರವಾಗಿ ವಿರೋಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

    ರಷ್ಯಾ ಈಗಾಗಲೇ ಉಕ್ರೇನ್ ಮೇಲೆ ದಾಳಿ ಆರಂಭಿಸಿದೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಉಕ್ರೇನ್‍ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಇಂದು ಬೆಳಗ್ಗೆ 6 ಗಂಟೆಗೆ ಉಕ್ರೇನ್‍ನಲ್ಲಿ ರಷ್ಯಾ ಮಿಲಿಟರಿ ಕಾರ್ಯಾಚರಣೆ ಆರಂಭಿಸಿದೆ. ಈ ವಿಚಾರದಲ್ಲಿ ಯಾವುದೇ ರಾಷ್ಟ್ರಗಳು ಮೂಗುತೂರಿಸದಂತೆ ಇತರ ರಾಷ್ಟ್ರಗಳಿಗೆ ವಾಡ್ಲಿಮಿರ್ ಪುಟೀನ್ ಎಚ್ಚರಿಕೆ ನೀಡಿದ್ದಾರೆ. ರಷ್ಯಾದ ಇತ್ತೀಚಿನ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡುವ ರಾಷ್ಟ್ರಗಳಿಗೆ ಎಚ್ಚರಿಕೆ ನೀಡಿದ್ದು, ಹಸ್ತಕ್ಷೇಪ ಮಾಡುವ ಇತರ ರಾಷ್ಟ್ರಗಳು ಪರಿಣಾಮ ಎದುರಿಸಬೇಕಾದಿತು. ಈ ಹಿಂದೆ ಎಂದೂ ನೋಡಿರದ ತೀವ್ರ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ಪುಟೀನ್ ವಾರ್ನಿಂಗ್ ನೀಡಿದ್ದಾರೆ. ಇದನ್ನೂ ಓದಿ: ರಷ್ಯಾದ 6 ಮಿಲಿಟರಿ ವಿಮಾನ ಪತನ – 50 ಸೈನಿಕರನ್ನು ಹತ್ಯೆಗೈದ ಉಕ್ರೇನ್‌

    ಈ ಬಗ್ಗೆ ಉಕ್ರೇನ್ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಪ್ರತಿಕ್ರಿಯಿಸಿ, ಪುಟಿನ್ ಉಕ್ರೇನ್ ವಿರುದ್ಧ ಪೂರ್ಣ ಪ್ರಮಾಣದ ಆಕ್ರಮಣವನ್ನು ಪ್ರಾರಂಭಿಸಿದ್ದಾರೆ. ಉಕ್ರೇನ್ ತನ್ನನ್ನು ತಾನು ರಕ್ಷಿಸಿಕೊಳ್ಳುತ್ತದೆ ಮತ್ತು ಗೆಲ್ಲುತ್ತದೆ. ಇದೊಂದು ಆಕ್ರಮಣಕಾರಿ ಯುದ್ಧ ಜಗತ್ತು ಪುಟೀನ್ ಅವರನ್ನು ತಡೆಯಬಹುದು ಮತ್ತು ತಡೆಯಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: Russia-Ukraine crisis: ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಉಕ್ರೇನ್ ಮನವಿ

    ರಷ್ಯಾ ಈಗಾಗಲೇ ಉಕ್ರೇನ್ ಮೇಲೆ ಯುದ್ಧ ಸಾರಿದ್ದು, ಉಕ್ರೇನ್‍ನಿಂದ ಜನ ಮಹಾವಲಸೆ ಆರಂಭಿಸಿದ್ದಾರೆ. ರಷ್ಯಾ ಮತ್ತು ಭಾರತದ ನಡುವೆ ಉತ್ತಮ ಸಂಬಂಧವಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿ ರಷ್ಯಾದ ಅಧ್ಯಕ್ಷರಾದ ವಾಡ್ಲಿಮಿರ್ ಪುಟೀನ್ ಜೊತೆ ಮಾತುಕತೆ ನಡೆಸಬೇಕಾಗಿದೆ ಎಂದು ಉಕ್ರೇನ್ ರಾಯಭಾರಿ ಕೇಳಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಉಕ್ರೇನ್ ರಾಯಭಾರಿ ಇಗೂರ್ ಪೋಲಿಖಾ, ಮೋದಿಯವರು ರಷ್ಯಾ ಅಧ್ಯಕ್ಷರಾದ ಪುಟೀನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆ ಮಾತುಕತೆ ನಡೆಸಬೇಕು. ಈಗಾಗಲೇ ಯುದ್ಧ ಆರಂಭವಾಗಿದೆ. ಇದರಿಂದ ಉಕ್ರೇನ್ ನಾಗರೀಕರು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಕಳವಳ ವ್ಯಕ್ತ ಪಡಿಸಿದ್ದಾರೆ.

    ರಷ್ಯಾದ 5 ಯುದ್ಧ ವಿಮಾನ, 2 ಹೆಲಿಕಾಪ್ಟರ್, ಟ್ಯಾಂಕ್ ಮತ್ತು ಟ್ರಕ್‍ಗಳನ್ನು ಈಗಾಗಲೇ ಉಕ್ರೇನ್ ಮಿಲಿಟರಿ ಪಡೆ ಹೊಡೆದುರುಳಿಸಿದೆ. ನಾವು ಈ ಮೊದಲು ರಷ್ಯಾದ ಮಿಲಿಟರಿ ಪಡೆ ನಮ್ಮ ಗಡಿ ಪ್ರದೇಶದಿಂದ ಒಳಬರದಂತೆ ತಿಳಿಸಿದ್ದೇವು ಆದರೂ ಬಂದಿದ್ದಾರೆ ಹಾಗಾಗಿ ಉಕ್ರೇನ್, ರಷ್ಯಾದ ಮಿಲಿಟರಿ ಪಡೆಗಳನ್ನು ಹೊಡೆದುರುಳಿಸಿದೆ. ಈಗಾಗಲೇ ಪರಿಸ್ಥಿತಿ ಕೈಮೀರುತ್ತಿದ್ದು, ಭಾರತ ಕೂಡಲೇ ಮಧ್ಯಪ್ರವೇಶಿಸಿ ಮಾತುಕತೆಗೆ ಮುಂದಾಗಿ ಎಂದು ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ರಷ್ಯಾ ದಾಳಿಯಿಂದ ಉಕ್ರೇನ್‍ನಲ್ಲಿ ನಾಶವಾಗಿದ್ದು ಏನೇನು? ಇಲ್ಲಿದೆ ವಿವರ

    ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಘೋಷಿಸಿದ ಹಿನ್ನೆಲೆ ರಷ್ಯಾ ದೇಶದ ನಡೆಯನ್ನು ಬ್ರಿಟನ್ ಮತ್ತು ಮಿತ್ರರಾಷ್ಟ್ರಗಳು ನಿರ್ಣಾಯಕವಾಗಿ ಪ್ರತಿಕ್ರಿಯಿಸಲಿವೆ ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿಕೆ ನಿಡಿದ್ದಾರೆ. ಇತ್ತ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ನಾಳೆ ಜಿ 7 ರಾಷ್ಟ್ರಗಳ ಸಭೆ ಕರೆದಿದ್ದಾರೆ. ಅಮೇರಿಕಾ, ಕೆನಡಾ, ಫ್ರಾನ್ಸ್, ಜರ್ಮನಿ, ಯುಕೆ, ಜಪಾನ್, ಇಟಲಿ ನಡುವೆ ನಾಳೆ ಜಿ7 ಸಭೆ ನಡೆಯಲಿದೆ.