Tag: ವಾತಾವರಣ

  • ಬೆಂಗಳೂರಿನಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆ

    ಬೆಂಗಳೂರಿನಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆ

    ಬೆಂಗಳೂರು: ಬೆಂಗಳೂರಿನಲ್ಲಿ ಮುಂದಿನ 2 ದಿನ ಮೋಡ ಕವಿದ ವಾತಾವರಣ ಇದ್ದು, ಗುಡುಗು ಸಹಿತ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಮುಂದಿನ ಐದು ದಿನ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಮೋಡ ಕವಿದ ವಾತಾವರಣ ಹಾಗೂ ಗುಡುಗು ಸಹಿತ ಮಳೆ ಸಾಧ್ಯತೆ. ರಭಸವಾಗಿ ಮೇಲ್ಮೈ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇದನ್ನೂ ಓದಿ: ಗೆಳೆಯನ ಜೊತೆಯೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ತೇಜಸ್ವಿನಿ ಪ್ರಕಾಶ್

    ಮುಂದಿನ ಎರಡು ದಿನ ಕರಾವಳಿ ಭಾಗದ ಕೆಲ ಕಡೆ ಗುಡುಗು ಸಹಿತ ಮಳೆ ಸಾಧ್ಯತೆ ಇದ್ದು, ಮೂರು ಮತ್ತು ನಾಲ್ಕನೇ ದಿನ ಕರಾವಳಿಯ ಹಲವು ಕಡೆ ಮಳೆ ಸಾಧ್ಯತೆ. ಮುಂದಿನ ನಾಲ್ಕು ದಿನ ಕರಾವಳಿ ಯಲ್ಲಿ ಸಿಡಿಲು ಗುಡುಗಿನ ಎಚ್ಚರಿಕೆ ನೀಡಲಾಗಿದೆ. ಇಂದು ನಾಳೆ ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ. ಇದನ್ನೂ ಓದಿ: ಹೆಬ್ಬಾಳದಲ್ಲಿ ಸರಣಿ ಅಪಘಾತ – ಬಿಬಿಎಂಪಿ ಕಸದ ಲಾರಿಗೆ ಬಾಲಕಿ ಬಲಿ

    23,24,25 ನೇ ತಾರೀಖು ಉತ್ತರ ಒಳನಾಡಿನ ಕಲಬುರಗಿ, ಹಾವೇರಿ, ಬೆಳಗಾವಿ, ಧಾರವಾಡ ಸೇರಿದಂತೆ ಹಲವೆಡೆ ಮಳೆ ಸಾಧ್ಯತೆ. ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತು ನಾಳೆ ಬಹುತೇಕ ಜಿಲ್ಲೆಯ ಕೆಲವು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ. 23,24 ನೇ ತಾರೀಖು ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆ ಸಾಧ್ಯತೆ ಇದೆ.

  • ರಾಜ್ಯದ ಹವಾಮಾನ ವರದಿ: 1-12-2021

    ರಾಜ್ಯದ ಹವಾಮಾನ ವರದಿ: 1-12-2021

    ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಳಿ ಇದ್ದು, ಮೋಡ ಮುಸುಕಿದ ವಾತಾವರಣದ ಜೊತೆಗೆ ತುಂತುರು. ಹಲವೆಡೆ ಜಿಡಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಎಚ್ಚರಿಸಿದ್ದಾರೆ.

    ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಬೆಳಗ್ಗೆಯ ಇಬ್ಬನಿಗೆ ಸಿಲಿಕಾನ್ ಸಿಟಿ ಜನರು ಚಳಿಯಿಂದ ಗಢ ಗಢ ನಡಗುವಂತಾಗಿದೆ. ದಿನದಿಂದ ದಿನಕ್ಕೆ ಚಳಿ ಸಹ ಹೆಚ್ಚಾಗುತ್ತಿದೆ.

    weather

    ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 3೧ ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಇಂದಿನ ಹವಾಮಾನ ವರದಿ:
    ಬೆಂಗಳೂರು: 26-18
    ಮಂಗಳೂರು: 31-24
    ಶಿವಮೊಗ್ಗ: 29-21
    ಬೆಳಗಾವಿ: 27-20
    ಮೈಸೂರು: 29-29

    ಮಂಡ್ಯ: 28-20
    ರಾಮನಗರ: 28-29
    ಮಡಿಕೇರಿ: 26-27
    ಹಾಸನ: 27-19
    ಚಾಮರಾಜನಗರ: 29-29

    ಚಿಕ್ಕಬಳ್ಳಾಪುರ: 26-18
    ಕೋಲಾರ: 25-19
    ತುಮಕೂರು: 27-19
    ಉಡುಪಿ: 32-24
    ಕಾರವಾರ: 31-25

    ಚಿಕ್ಕಮಗಳೂರು: 26-18
    ದಾವಣಗೆರೆ: 29-19
    ಚಿತ್ರದುರ್ಗ: 27-20
    ಹಾವೇರಿ: 29-21
    ಬಳ್ಳಾರಿ: 28-21

    ಗದಗ: 28-21
    ಕೊಪ್ಪಳ: 28-21
    ರಾಯಚೂರು: 29-21
    ಯಾದಗಿರಿ: 30-21

    ವಿಜಯಪುರ: 26-18
    ಬೀದರ್: 29-18
    ಕಲಬುರಗಿ: 30-21
    ಬಾಗಲಕೋಟೆ: 29-21

  • ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ತಾಪಮಾನದಲ್ಲಿ ಧಿಡೀರ್ ಏರಿಕೆ

    ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ತಾಪಮಾನದಲ್ಲಿ ಧಿಡೀರ್ ಏರಿಕೆ

    ಬೆಂಗಳೂರು: ಕಳೆದ ಎರಡು, ಮೂರು ದಿನಗಳಿಂದ ಬೆಂಗಳೂರು ಸೇರಿದಂತೆ ನಾನಾ ನಗರಗಳಲ್ಲಿ ತಾಪಮಾನ ವಾಡಿಕೆಗಿಂತ ಹೆಚ್ಚಾಗಿದೆ. ಮಳೆಗಾಲದಲ್ಲಿ ಸೆಖೆಯ ವಾತಾವರಣ ಸೃಷ್ಟಿಯಾಗಿದೆ.

    ಸಾಮಾನ್ಯವಾಗಿ ಗೌರಿ, ಗಣೇಶ ಹಬ್ಬದ ಸಮಯದಲ್ಲಿ ಜಿಡಿ ಮಳೆಯಿರುತ್ತದೆ. ಬಿಸಿಲಿನ ತಾಪ ಕಡಿಮೆಯಿರುತ್ತದೆ. ಆದರೆ ರಾಜ್ಯದಲ್ಲಿ ಬೇಸಿಗೆಯ ವಾತಾವರಣ ಉಂಟಾಗಿದೆ. ಬೆಂಗಳೂರಿನಲ್ಲಿ ತಾಪಮಾನ ದಿಢೀರ್ 30 ಡಿಗ್ರಿಗೆ ಏರಿಕೆಯಾಗಿದೆ. ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಭೇಟಿ ನೀಡಬಹುದು – ಜಿಲ್ಲಾಡಳಿತದಿಂದ ನಿರ್ಬಂಧ ತೆರವು

    ಬೆಂಗಳೂರಿನಲ್ಲಿ ಶುಕ್ರವಾರ ಸಂಜೆ ಮಳೆಯಾದರೂ ಸೆಖೆಯ ವಾತಾವರಣ ಇತ್ತು. ಶನಿವಾರ ಕೂಡ ಹಬೆ ಹೆಚ್ಚಾಗಿತ್ತು. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಬಹುದು. ಇದು ವಾಡಿಕೆಗಿಂತ ಅಧಿಕ ತಾಪಮಾನ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ದಾರಿ ಮಧ್ಯೆ ಹೋಟೆಲ್‍ನಲ್ಲಿ ಸಾರ್ವಜನಿಕರಂತೆ ಟೀ ಕುಡಿದ ಸಿಎಂ

    ಈ ಬಾರಿ ಮಳೆಗಾಲದಲ್ಲಿ ಕೂಡ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಅದರಲ್ಲೂ ಮೈಸೂರು ಭಾಗದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕೆರೆ-ಕಟ್ಟೆಗಳು ಬಣಗುಡುತ್ತಿವೆ. ಇದರ ನಡುವೆ ಸೆಪ್ಟೆಂಬರ್‌ನಲ್ಲಿ ತಾಪಮಾನ ಹೆಚ್ಚಾಗಿದ್ದು, ಸಾಕಷ್ಟು ಕಳವಳಕ್ಕೆ ಕಾರಣವಾಗಿದೆ.

  • ಕೊಡಗಿನಲ್ಲಿ ವರುಣಾರ್ಭಟ – ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

    ಕೊಡಗಿನಲ್ಲಿ ವರುಣಾರ್ಭಟ – ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

    ಮಡಿಕೇರಿ: ಕೊಡಗಿನಲ್ಲಿ ಸೋಮವಾರ ರಾತ್ರಿಯಿಂದ ಮಳೆ ಎಡೆಬಿಡದೆ ಸುರಿಯುತ್ತಿದ್ದು, ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳವಾಗಿದೆ.

    ಆಗಸ್ಟ್ ತಿಂಗಳಲ್ಲಿ ಕೊಂಚ ಮಳೆ ಇಳಿಮುಖಗೊಂಡಿತ್ತು. ಆದರೆ ಸೆಪ್ಟೆಂಬರ್ ತಿಂಗಳಲ್ಲಿ ಆಗಸ್ಟ್‍ನಲ್ಲಿ ಸುರಿಯುವ ಮಳೆಯಂತೆ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜಿಲ್ಲೆಯಲ್ಲಿ ಸುರಿದ ಮಳೆಯ ಪ್ರಮಾಣ ಕಡಿಮೆಯಾಗಿರುವುದು ಗೋಚರಿಸುತ್ತಿದೆ. ಸಾಮಾನ್ಯವಾಗಿ ಸೆಪ್ಟೆಂಬರ್‍ನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಬಿಸಿಲು ಕಾಣಿಸುತ್ತಿತ್ತು. ಆದರೆ ಈ ಬಾರಿ ಜಿಲ್ಲೆಯಾದ್ಯಂತ ಇನ್ನೂ ಮಳೆ ಸುರಿಯುತ್ತಿರುವುದು ಆತಂಕಕಾರಿಯಾಗಿದೆ. ಇದನ್ನೂ ಓದಿ:  ಉತ್ತರ ಕನ್ನಡದಲ್ಲಿ ವರುಣನ ಅಬ್ಬರ- ಹೊನ್ನಾವರದಲ್ಲಿ ದಾಖಲೆ ಮಳೆ

    ಈ ಸಮಯದಲ್ಲಿ ಮಳೆ ಸುರಿದು ಶೀತದ ವಾತಾವರಣ ನಿರ್ಮಾಣವಾದರೆ, ಈಗಾಗಲೇ ಮಿಡಿಗಚ್ಚಿರುವ ಕಾಫಿ ಮತ್ತು ಕರಿಮೆಣಸು ಫಸಲು ಉದುರುವ ಸಾಧ್ಯತೆ ಜೊತೆಗೆ ಕೊಳೆ ರೋಗದ ಭಯವೂ ಇಲ್ಲಿನ ಬೆಳೆಗಾರರನ್ನು ಕಾಡತೊಡಗಿದೆ. ಹಾರಂಗಿ ಜಲಾಶಯದ ಒಳ ಹರಿವು 4,294 ಕ್ಯೂಸೆಕ್ ಇದ್ದರೆ ಹೊರ ಹರಿವು 2,899 ಕ್ಯೂಸೆಕ್ ಇದೆ. ಇದನ್ನೂ ಓದಿ: ರಾತ್ರೋ ರಾತ್ರಿ ಡಿಸಿ ಭೇಟಿಯಾದ ಸೋತ MES ಅಭ್ಯರ್ಥಿಗಳು

  • ಉಡುಪಿಯ ರೈತರಿಗೆ ನೆಮ್ಮದಿ ತಂದ ಮಳೆರಾಯ

    ಉಡುಪಿಯ ರೈತರಿಗೆ ನೆಮ್ಮದಿ ತಂದ ಮಳೆರಾಯ

    ಉಡುಪಿ: ಜಿಲ್ಲೆಯಲ್ಲಿ ಎರಡು ದಿನದಿಂದ ಧಾರಕಾರ ಮಳೆಯಾಗುತ್ತಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಇನ್ನೆರಡು ದಿನ ವರ್ಷಧಾರೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ರವಾನಿಸಿದೆ.

    rain

    ಉಡುಪಿ ಜಿಲ್ಲೆಯಲ್ಲಿ ಸತತ ಎರಡು ದಿನಗಳಿಂದ ಮತ್ತೆ ಮಳೆಯಾಗುತ್ತಿದೆ. ಕೆಲ ದಿನಗಳ ಬ್ರೇಕ್ ನ ನಂತರ ಮತ್ತೆ ಧಾರಾಕಾರ ಮಳೆ ಸುರಿಯುತ್ತಿದೆ. ಶನಿವಾರ ದಿನಪೂರ್ತಿ ಮಳೆ ಬಿದ್ದಿದ್ದು, ಕಳೆದ ರಾತ್ರಿಯಿಂದ ನಿರಂತರವಾಗಿ ತುಂತುರು ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಭಾನುವಾರ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಸೋಮವಾರ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಇರಲಿದೆ. ಇದನ್ನೂ ಓದಿ:ಕೆಂಗೇರಿ ಮೆಟ್ರೋ ವೇದಿಕೆ ಕಾರ್ಯಕ್ರಮದ ಬ್ಯಾನರ್‌ನಲ್ಲಿ ಕನ್ನಡ ಮಾಯ

    rain

    ಭಾರೀ ಕಾರ್ಮೋಡ ಕವಿದ ವಾತಾವರಣವಿದ್ದು, ಮತ್ತೆ ಮುಂಗಾರಿನ ಅನುಭವವಾಗುತ್ತಿದೆ. ಕಳೆದ ಹತ್ತು ಹದಿನೈದು ದಿನಗಳಿಂದ ಮುಂಗಾರು ಕೊಂಚ ವಿರಾಮ ಕೊಟ್ಟಿತ್ತು. ಬಿಸಿಲಿನ ವಾತಾವರಣ ಕಂಡು ಬಂದಿತ್ತು. ಭತ್ತದ ಬೇಸಾಯ ಮಾಡಿದವರಿಗೆ ಮಳೆ ಇಲ್ಲವೆಂಬ ಆತಂಕ ಎದುರಾಗಿತ್ತು. ಇದೀಗ ಎರಡು ದಿನದಿಂದ ಮಳೆ ಸುರಿಯುತ್ತಿದ್ದು, ರೈತರಿಗೆ ಜೀವಕಳೆ ಬಂದಂತಾಗಿದೆ. ಸೆಪ್ಟೆಂಬರ್ 2ರವರೆಗೆ ಉಡುಪಿ ಜಿಲ್ಲೆಯಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇದನ್ನೂ ಓದಿ:ಹುಬ್ಬಳ್ಳಿ-ಧಾರವಾಡ ಗುಂಡಿಗಳ ನಗರ ಬಿಜೆಪಿ ವಿರುದ್ಧ ಡಿಕೆಶಿ ಕಿಡಿ

  • ಮಳೆ ಮುನ್ಸೂಚನೆ- ರಾಜ್ಯದ 7 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್

    ಮಳೆ ಮುನ್ಸೂಚನೆ- ರಾಜ್ಯದ 7 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್

    ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯ ಅರ್ಭಟ ಮುಂದುವರೆದಿದ್ದು, ಮಲೆನಾಡು, ಕರಾವಳಿ ಭಾಗದಲ್ಲಿ ಗುರುವಾರ ವ್ಯಾಪಕ ಮಳೆಯಾಗಲಿದೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ರಾಜ್ಯದ ಏಳು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಇಂದಿನಿಂದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಉತ್ತರ ಕನ್ನಡ , ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದ್ದು, ಬಹುತೇಕ ಪ್ರದೇಶಗಳಲ್ಲಿ ಗುಡುಗು, ಗಾಳಿ ಸಹಿತ ಭಾರಿ ಮಳೆ ನಿರೀಕ್ಷೆಯಿರುವುದರಿಂದ ನಾಳೆ ಮತ್ತು ನಾಡಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಒಳನಾಡಿನಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಮಲೆನಾಡು ಭಾಗವಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

    ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಕಳೆದೊಂದು ದಿನದಲ್ಲಿ ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ಅತಿ ಹೆಚ್ಚು ಮಳೆ ಸುರಿದಿದೆ. ಇಂದು ಕೂಡಾ ಈ ಪ್ರದೇಶಗಳಲ್ಲಿ ಬೆಳಗ್ಗೆಯಿಂದಲೇ ದಟ್ಟ ಮೋಡ ಕವಿದ ವಾತಾವರಣವಿದ್ದು, ಮಳೆ ಆಗುತ್ತಿದೆ. ಆಗಸ್ಟ್ 6 ರಿಂದ ಆಗಸ್ಟ್ 8ರ ವರೆಗೆ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯೂ ಮುನ್ನೆಚ್ಚರಿಕೆ ನೀಡಿದ್ದು, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಯಲ್ಲೋ ಅಲರ್ಟ್ ಘೊಷಿಸಲಾಗಿದೆ.

    ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಮತ್ತು ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ರಾಜ್ಯದ ಕರಾವಳಿ ಭಾಗದಲ್ಲಿ ಅ.8ರ ತನಕ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಉತ್ತರ ಒಳನಾಡಿನ ಕೆಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

    ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು ಅ.5 ಮತ್ತು ಅ.6ರಂದು ಯಲ್ಲೋ ಆಲರ್ಟ್ ನೀಡಲಾಗಿದೆ. ಉತ್ತರ ಕರ್ನಾಟಕ ಜಿಲ್ಲೆಗಳಾದ ಧಾರವಾಡ, ಹಾವೇರಿ, ಗದಗ, ಬಿಜಾಪುರ, ಕಲಬುರಗಿ, ಬೆಳಗಾವಿ, ರಾಯಚೂರು, ಯಾದಗಿರಿ, ಬೀದರ್ ಹಾಗೂ ಚಿತ್ರದುರ್ಗ ಜಿಲ್ಲೆಗಳ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ.

    ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‍ಎಎಲ್‍ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‍ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

  • ಡಂಗುರ ಸಾರಿ ನದಿ ಪಾತ್ರದ ಗ್ರಾಮಗಳ ಜನರಿಗೆ ಎಚ್ಚರಿಕೆ

    ಡಂಗುರ ಸಾರಿ ನದಿ ಪಾತ್ರದ ಗ್ರಾಮಗಳ ಜನರಿಗೆ ಎಚ್ಚರಿಕೆ

    ಹಾವೇರಿ: ಮಳೆ ಹೆಚ್ಚಾಗಿರುವ ಕಾರಣದಿಂದಾಗಿ ನದಿ ಪಾತ್ರದ ಗ್ರಾಮಗಳ ಜನರಿಗೆ ಡಂಗುರ ಸಾರುವ ಮೂಲಕವಾಗಿ ಎಚ್ಚರಿಕೆಯನ್ನು ನೀಡಲಾಗಿದೆ.

    ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರ ಮಳೆ ಬೀಳುತ್ತಿರೋ ಹಿನ್ನೆಲೆಯಲ್ಲಿ ನದಿ ಪಾತ್ರದ ಗ್ರಾಮಗಳ ಜನರು ಎಚ್ಚರಿಕೆಯಿಂದ ಇರುವಂತೆ ಡಂಗುರ ಸಾರಲಾಗಿದೆ. ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸುತ್ತಮುತ್ತಲಿನ ಗ್ರಾಮಗಳ ಜನರು ಎಚ್ಚರಿಕೆಯಿಂದ ಇರುವಂತೆ ರಟ್ಟಿಹಳ್ಳಿ ತಾಲೂಕು ಆಡಳಿತ ಸೂಚನೆ ನೀಡಿದೆ. ಇದನ್ನೂ ಓದಿ:  ಉಕ್ಕಿ ಹರಿಯುವ ವೇದಗಂಗಾ ನದಿಯಲ್ಲಿ ಯುವಕರ ಹುಚ್ಚಾಟ

    ಕುಮುದ್ವತಿ ನದಿಗೆ ಭರಪೂರ ನೀರು ಬರುತ್ತಿದೆ. ನದಿಗೆ ನೀರು ಬರುತ್ತಿರೋದರಿಂದ ನದಿ ಪಾತ್ರದ ಗ್ರಾಮಗಳ ಜನರು ಎಚ್ಚರಿಕೆಯಿಂದ ಇರಬೇಕು. ನದಿ ಹತ್ತಿರ ಹೋಗಬೇಡಿ ಎಂದು ರಟ್ಟೀಹಳ್ಳಿ ತಾಲೂಕು ಆಡಳಿತದಿಂದ ವಿವಿಧ ಗ್ರಾಮಗಳಲ್ಲಿ ಡಂಗುರ ಸಾರಿಸಿ, ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಮಳೆಯ ಅಬ್ಬರ ಎಲ್ಲಡೆ ಹೆಚ್ಚಾಗಿದೆ. ಜನರು ಆದಷ್ಟು ಮುನ್ನೆಚ್ಚರಿಕೆಯಿಂದ ಇರಬೇಕಾಗಿದೆ.

  • ವಾತಾವರಣದಲ್ಲಿ ದಿಢೀರ್ ಬದಲಾವಣೆ- ಹತ್ತಿ, ಮೆಣಸಿನಕಾಯಿ ಬೆಳೆದ ರೈತರಿಗೆ ದಿಗಿಲು

    ವಾತಾವರಣದಲ್ಲಿ ದಿಢೀರ್ ಬದಲಾವಣೆ- ಹತ್ತಿ, ಮೆಣಸಿನಕಾಯಿ ಬೆಳೆದ ರೈತರಿಗೆ ದಿಗಿಲು

    ರಾಯಚೂರು: ರಾಜ್ಯದ ಕೆಲವೆಡೆ ವಾತಾವರಣ ಏಕಾಏಕಿ ದ್ವಂದ್ವ ನಿಲುವು ತಳೆದಿದ್ದು, ರೈತರನ್ನು ಆತಂಕಕ್ಕೆ ಎಡೆಮಾಡಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಬಿಸಿಲು ಹೆಚ್ಚಾಗುತ್ತಿದ್ದಂತೆ ವಾತಾವರಣವೂ ಬದಲಾಗಿದೆ. ಬೆಳಗ್ಗೆ ಒಂದು ರೀತಿ ಮಧ್ಯಾಹ್ನ ಇನ್ನೊಂದು ರೀತಿ ರಾತ್ರಿ ಮತ್ತೊಂದು ರೀತಿಯಂತೆ ವಾತಾವರಣ ಬದಲಾಗುತ್ತಿದೆ.

    ಬಿಸಿಲನಾಡು ಎಂದೇ ಕರೆಸಿಕೊಳ್ಳುವ ರಾಯಚೂರು ಈಗ ಬೆಳಗ್ಗೆಯಾದ್ರೆ ಸಾಕು ಮೋಡಗಳಿಂದ ತುಂಬಿ, ಜಿಟಿ ಜಿಟಿ ಮಳೆಗೆ ಸಾಕ್ಷಿಯಾಗುತ್ತಿದೆ. ಗುಮ್ಮಟ ನಗರಿ ವಿಜಯಪುರದಲ್ಲಿಯೂ ಬಿರುಬೇಸಿಗೆಯಲ್ಲಿ ಮಳೆರಾಯ ಬೆಳ್ಳಂಬೆಳಗ್ಗೆ ದರ್ಶನ ಕೊಡುತ್ತಿದ್ದಾನೆ. ಆದರೆ ಮಧ್ಯಾಹ್ನವಾದರೆ ಮತ್ತೆ ಎಂದಿನಂತೆ ಬಿರುಬಿಸಿಲು ಮುಂದುವರಿಯುತ್ತದೆ. ರಾಯಚೂರು ಜಿಲ್ಲೆಯಲ್ಲಿ ಈಗಾಗಲೇ 36 ಡಿಗ್ರಿ ಸೆಲ್ಸಿಯಸ್‍ಗಿಂತಲೂ ಅಧಿಕ ಉಷ್ಣಾಂಶ ದಾಖಲಾಗುತ್ತಿದೆ. ಬೆಳಗ್ಗೆ ಮಾತ್ರ ಮೋಡ, ಜಿಟಿ ಜಿಟಿ ಮಳೆ ಪ್ರಾರಂಭವಾಗುತ್ತದೆ. ಮಧ್ಯಾಹ್ನ ಬಿಸಿಲು, ಮತ್ತೆ ರಾತ್ರಿ ಆದ್ರ್ರತೆಯಿಂದ ಶೆಕೆ ಶಕೆ ಎನ್ನುವಂತಾಗಿದೆ.

    ಇದಕ್ಕೆಲ್ಲ ವಾತಾವರಣದ ವೈಪರಿತ್ಯವೇ ಕಾರಣ ಎನ್ನಲಾಗುತ್ತಿದೆ. ವಾತಾವರಣದಲ್ಲಿ ತಾಪಾಮಾನ ಹೆಚ್ಚಾಗಿರುವುದರಿಂದ ಆವಿ ಪ್ರಮಾಣ ಹೆಚ್ಚಾಗಿ ಬಿಸಿಲು ಹೆಚ್ಚು ಇರುವ ಪ್ರದೇಶದಲ್ಲಿ ದಟ್ಟ ಮೋಡ ಆವರಿಸಿ ಅಲ್ಪ ಪ್ರಮಾಣದ ಮಳೆ ಬರುತ್ತಿದೆ. ಇದು ತಾತ್ಕಾಲಿಕ ವಾತಾವರಣ ಬದಲಾವಣೆ ಎಂದು ಹವಾಮಾನ ತಜ್ಞರು ಹೇಳುತ್ತಿದ್ದಾರೆ. ಈ ವಾತಾವರಣ ಸೂರ್ಯಕಾಂತಿ, ಭತ್ತ ಬೆಳೆಗೆ ಉತ್ತಮ ಸಹ ಹೌದಾಗಿದೆ.

    ಆದರೆ ವಾತಾವರಣದ ಧಿಡೀರ್ ಬದಲಾವಣೆ ಹತ್ತಿ ಹಾಗೂ ಮೆಣಸಿನಕಾಯಿ ಬೆಳೆಗಾರರಲ್ಲಿ ಭಾರೀ ಆತಂಕ ಸೃಷ್ಠಿ ಮಾಡಿದೆ. ಕಟಾವಿಗೆ ಬಂದ ಮೆಣಸಿನಕಾಯಿ, ಮಳೆ ಬಂದರೆ ಸಂಪೂರ್ಣ ಹಾನಿಯಾಗುವ ಭೀತಿಯಿದೆ. ಈಗಾಗಲೇ ಕಟಾವು ಮಾಡಿ ಜಮೀನುಗಳಲ್ಲಿ ಮೆಣಸಿನಕಾಯಿ ಒಣಗಲು ಬಿಟ್ಟ ರೈತರಿಗೂ ವಾತಾವರಣದ ಭಯ ಶುರುವಾಗಿದೆ. ಮಳೆಯಿಂದಾಗಿ ಹತ್ತಿ ಬೆಳೆ ಸಹ ಗುಣಮಟ್ಟ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಹೀಗಾಗಿ ಸರ್ಕಾರ ಖರೀದಿ ಪ್ರಕ್ರಿಯೆ ಚುರುಕುಗೊಳಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

    ಉತ್ತಮ ಬೆಳೆಯಿಂದ ಲಾಭದ ನಿರೀಕ್ಷೆಯಲ್ಲಿರುವ ರೈತರನ್ನು ಬದಲಾಗುತ್ತಿರುವ ವಾತಾವರಣ ಆತಂಕಕ್ಕೀಡು ಮಾಡಿದೆ. ಫಸಲು ಕೈಗೆ ಬಂದು ಮಾರಾಟವಾಗುವವರೆಗೆ ಮಳೆ ಬಾರದಿದ್ದರೆ ಸಾಕು ಎಂದು ರೈತರು ಉಸಿರು ಬಿಗಿಹಿಡಿದಿದ್ದಾರೆ. ಸರ್ಕಾರ ಸಹ ಖರೀದಿ ಕೇಂದ್ರಗಳಲ್ಲಿ ಚುರುಕಾಗಿ ರೈತರ ಬೆಳೆಗಳನ್ನು ಖರೀದಿಸಬೇಕಿದೆ.

  • ಬೆಂಗ್ಳೂರು ಸೇರಿದಂತೆ ರಾಜ್ಯದ ವಾತಾವರಣದಲ್ಲಿ ಭಾರೀ ಬದಲಾವಣೆ

    ಬೆಂಗ್ಳೂರು ಸೇರಿದಂತೆ ರಾಜ್ಯದ ವಾತಾವರಣದಲ್ಲಿ ಭಾರೀ ಬದಲಾವಣೆ

    – ಎಚ್ಚರ ವಹಿಸದಿದ್ರೆ ಆರೋಗ್ಯದಲ್ಲಿ ಏರುಪೇರು

    ಬೆಂಗಳೂರು: ಚಂದ್ರಗ್ರಹಣದ ಬಳಿಕ ರಾಜ್ಯದ ವಾತಾವರಣದಲ್ಲಿ ಭಾರೀ ಏರುಪೇರು ಉಂಟಾಗಿದೆ. ತೋಳ ಚಂದ್ರ ಗ್ರಹಣ ವಾತಾವರಣದಲ್ಲಿ ಆಪತ್ತು ತಂದೊಡ್ಡುತ್ತಿದೆ. ಶೀತ ಗಾಳಿ, ಮಂಜು, ಚಳಿ, ಉರಿ ಬಿಸಿಲು ಇದು ಯಾವುದು ವಾತಾವರಣದಿಂದ ಆದ ಬದಲಾವಣೆಯಲ್ಲ, ಬದಲಾಗಿ ತೋಳ ಗ್ರಹಣದಿಂದ ಆದ ಬದಲಾವಣೆಯಾಗಿದೆ. ಹೀಗಾಗಿ ಆರೋಗ್ಯದ ಕಡೆ ಗಮನ ಕೊಡದಿದರೆ ತೊಂದರೆ ಕಟ್ಟಿಟ್ಟ ಬುತ್ತಿ ಎಂದು ಹೇಳಲಾಗುತ್ತಿದೆ.

    2019ರ ವರ್ಷಾಂತ್ಯದಲ್ಲಿ ಸೂರ್ಯಗ್ರಹಣ 2020ರ ವರ್ಷದ ಆರಂಭದಲ್ಲಿ ಚಂದ್ರಗ್ರಹಣ ಈ ಎರಡು ಗ್ರಹಣಗಳಿಂದ ವಾತಾವರಣದಲ್ಲಿ ಭಾರೀ ಏರುಪೇರಾಗಿದೆ. ಈಗ ತೋಳ ಚಂದ್ರಗ್ರಹಣ ಮುಗಿದ ಬಳಿಕ ಬೆಂಗಳೂರು ಸೇರಿದಂತೆ ರಾಜ್ಯದ ವಾತಾವರಣದಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಗ್ರಹಣದ ಬಳಿಕ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಯಾವ ಸಮಯದಲ್ಲಿ ಯಾವ ರೀತಿ ವಾತಾವರಣ ಇರುತ್ತೆ ಎಂದು ಹೇಳಲು ಸಾಧ್ಯವಿಲ್ಲ. ಮುಂಜಾನೆ ಶೀತ ಗಾಳಿ ಇದ್ದರೆ, ಬೆಳಗ್ಗೆ 10 ಗಂಟೆ ಸುಮಾರಿಗೆ ಸೆಕೆ, ಬಿಸಿಲು, ಚಳಿ ಮತ್ತೆ ಸಂಜೆ ಆಗುತ್ತಿದ್ದಂತೆ ತಣ್ಣನೆ ಗಾಳಿ ಬೀಸುತ್ತಿದೆ. ಇದು ವಾತಾವರಣದಲ್ಲಿ ಆದ ಬದಲಾವಣೆಯಲ್ಲಿ ತೋಳ ಚಂದ್ರ ಗ್ರಹಣದಿಂದ ವಾತಾವರಣದಲ್ಲಿ ಆದ ಗಂಡಾಂತರ ಎಂಬ ಮಾತುಗಳು ಕೇಳಿ ಬರುತ್ತಿದೆ. ಜೀವ ಸಂಕುಲಕ್ಕೆ ವಾತಾವರಣದಲ್ಲಿ ಆದ ಬದಲಾವಣೆಯಿಂದಾಗಿ ಆಪತ್ತು ಕಾದಿದೆ ಎನ್ನಲಾಗುತ್ತಿದೆ.

    ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು, ಉತ್ತರ ಒಳನಾಡು ನಲ್ಲಿ ವರ್ಷ ಆರಂಭದ ತೋಳ ಚಂದ್ರಗ್ರಹಣದಿಂದ ಹವಾಮಾನದಲ್ಲಿ ಮಹತ್ತರವಾದ ಬದಲಾವಣೆಯಾಗಲಿದ್ದು ಆಪತ್ತು ಕಾದಿದೆ ಎನ್ನಲಾಗುತ್ತಿದೆ. ಜ್ವಾಲಾಮುಖಿಗಳು ಕಾಣಿಸಿಕೊಳ್ಳುತ್ತಾ ಇರೋದು ವಾತಾವರಣದ ಬದಲಾವಣೆಗೆ ಮುಖ್ಯ ಕಾರಣವಾಗಿದೆ. ಇದರಿಂದ ರಾಜ್ಯದ ದಕ್ಷಿಣ ಕರಾವಳಿ, ಉತ್ತರ ಕರಾವಳಿ ಭಾಗ ಸೇರಿದಂತೆ ನಾನಾಕಡೆ ವಾತಾವರಣದಲ್ಲಿ ಬದಲಾವಣೆ ಆಗಿ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಳ್ಳುತ್ತವೆ ಅಂತ ಭೂ ವಿಜ್ಞಾನಿಗಳು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

    ಚಂದ್ರಗ್ರಹಣದ ಬಳಿಕ ವಾತಾವರಣದಲ್ಲಿ ಆಗುತ್ತಿರುವ ಬದಲಾವಣೆಗೆ ಜ್ಯೋತಿಷಿಗಳು ಆತಂಕ ವ್ಯಕ್ತಪಡಿಸಿದ್ದು, ಗ್ರಹಣದಿಂದ ಬೆಂಗಳೂರು ಮತ್ತು ರಾಜ್ಯದಾದ್ಯಂತ ಭಾರೀ ಬದಲಾವಣೆ ಆಗಲಿದೆ. ಈ ಹಿಂದೆ ಸೂರ್ಯ ಗ್ರಹಣದಿಂದಾಗಿ ಆಸ್ಟ್ರೇಲಿಯಾದಲ್ಲಿ ಕಾಡ್ಗಿಚ್ಚು ಆಯ್ತು, ಈಗ ಚಂದ್ರಗ್ರಹಣದಿಂದ ಜಲ ಸಂಕಷ್ಟ ಕಾದಿದ್ದು ಜಲಪ್ರವಾಹ ಆಗುವ ಸಾಧ್ಯತೆ ಇದೆ ಎಂದು ಆನಂದ್ ಗುರೂಜಿ ಗ್ರಹಣದಿಂದ ಆಗುವ ಆಪತ್ತನ್ನ ಬಿಚ್ಚಿಟ್ಟಿದ್ದಾರೆ.

    ಈ ಹಿಂದೆ ಉತ್ತರ ಕರ್ನಾಟಕದಲ್ಲಿ ಆದ ಪ್ರವಾಹ, ಮಡಿಕೇರಿ ಮತ್ತು ಕೊಡಗಿನಲ್ಲಿ ಆದ ಪ್ರಾಕೃತಿ ವಿಕೋಪ ಮತ್ತೆ ಮರುಕಳಿಸುಬಹುದು. ಅಷ್ಟೇ ಅಲ್ಲದೇ ವಾತಾವರಣ ಬದಲಾವಣೆಯಿಂದ ಸಾಂಕ್ರಾಮಿಕ ರೋಗಗಳು ಹರಡಬಹುದು ಎಂದು ಚಂದ್ರಗ್ರಹಣದ ಬಳಿಕ ವಾತಾವರಣದಲ್ಲಿ ಆದ ಬದಲಾವಣೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

    ಗವಿಗಂಗಾಧರೇಶ್ವ ದೇವಾಲಯದ ಸೋಮ್ ಸುಂದರ್ ದೀಕ್ಷಿತ್ ಸ್ವಾಮೀಜಿಗಳು ಕೂಡ ಚಂದ್ರ ಗ್ರಹಣದ ನಂತರದ ವಾತಾವರಣದಲ್ಲಿ ಆಗುವ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿದ್ದು, ವರ್ಷದ ಆರಂಭದ ಚಂದ್ರಗ್ರಹಣ ಎಫೆಕ್ಟ್ ಖಂಡಿತಾ ಇದೆ. ಚಂದ್ರ ಆಂದರೆ ಜಲ ಗಂಡಾಂತರ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ಜಲ ಪ್ರವಾಹ ಆಗಬಹುದು ಮತ್ತು ಜನರಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂಬ ಮಾತನ್ನ ಹೇಳಿದ್ದಾರೆ.

    ಒಟ್ಟಾರೆ ವರ್ಷದ ಆರಂಭದ ತೋಳ ಚಂದ್ರಗ್ರಹಣದಿಂದ ರಾಜ್ಯದ ವಾತಾವರಣದಲ್ಲಿ ಭಾರೀ ಏರುಪೇರಾಗುತ್ತಿದೆ. ಈ ಬದಲಾವಣೆಯಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಪ್ರಾಕೃತಿಕ ವಿಕೋಪ ಮತ್ತು ಜನರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ವಾತಾವರಣದಿಂದ ಆಗುವ ಆಪತ್ತನ್ನ ಪತ್ತೆ ಹಚ್ಚಿ ಸರ್ಕಾರ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡರೆ ಜೀವ ಸಂಕುಲ ಆಪತ್ತಿಂದ ಪಾರಾಗಬಹುದು.

  • ತೋಳ ಚಂದ್ರಗ್ರಹಣದ ಎಫೆಕ್ಟ್- ವಾತಾವರಣದಲ್ಲಿ ಭಾರೀ ಬದಲಾವಣೆ

    ತೋಳ ಚಂದ್ರಗ್ರಹಣದ ಎಫೆಕ್ಟ್- ವಾತಾವರಣದಲ್ಲಿ ಭಾರೀ ಬದಲಾವಣೆ

    ಬೆಂಗಳೂರು: ಕಳೆದ ವರ್ಷದ ಕೊನೆಯಲ್ಲಿ ಸೂರ್ಯಗ್ರಹಣ ಈ ವರ್ಷದ ಆರಂಭದಲ್ಲಿ ಚಂದ್ರಗ್ರಹಣ. ಹದಿನೈದು ದಿನಗಳ ಅಂತರದಲ್ಲಿ ಬಂದ ಈ ಎರಡು ಗ್ರಹಣಗಳು ವಾತಾವರಣದಲ್ಲಿ ಭಾರೀ ಬದಲಾವಣೆಗೆ ಕಾರಣವಾಗಿವೆ.

    ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮೈ ಕೊರೆವ ಚಳಿಯಿಂದ ಜನರು ಹೊರಗಡೆ ಬರುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಬೆಳಗ್ಗೆ ಮೈಕೊರೆವ ಚಳಿ ಇದ್ದರೆ, ಮಧ್ಯಾಹ್ನದ ವೇಳೆ ಸೆಕೆ ಫೀಲ್ ಆಗುತ್ತೆ. ಸಂಜೆ ಹೊತ್ತಿಗೆ ಮತ್ತದೇ ರಣಭೀಕರ ಚಳಿ. ಹೀಗಾಗಿ ತೋಳ ಚಂದ್ರಗ್ರಹಣದಿಂದ ಹವಾಮಾನದಲ್ಲಿ ಮಹತ್ತರವಾದ ಬದಲಾವಣೆಯಾಗಿದೆ ಎನ್ನಲಾಗುತ್ತಿದೆ.

    ಚಂದ್ರಗ್ರಹಣದ ಬಳಿಕ ವಾತಾವರಣದಲ್ಲಿ ಆಗುತ್ತಿರುವ ಬದಲಾವಣೆಗೆ ಜ್ಯೋತಿಷಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಆಸ್ಟ್ರೇಲಿಯಾ ಕಾಡ್ಗಿಚ್ಚಿಗೆ ಸೂರ್ಯಗ್ರಹಣವೇ ಕಾರಣ ಎನ್ನಲಾಗಿದೆ. ಈಗ ಚಂದ್ರಗ್ರಹಣದಿಂದ ಜಲ ಗಂಡಾಂತರ, ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇವೆ ಎಂದು ಹೇಳಲಾಗುತ್ತಿದೆ.

    ವಿಜ್ಞಾನಿಗಳ ಪ್ರಕಾರ, ರಾಜ್ಯದ ದಕ್ಷಿಣ ಕರಾವಳಿ, ಉತ್ತರ ಕರಾವಳಿ ಭಾಗ ಸೇರಿದಂತೆ ನಾನಾಕಡೆ ವಾತಾವರಣದಲ್ಲಿ ತೀವ್ರ ಬದಲಾವಣೆಗೆ ಕಾರಣವಾಗಿದ್ದು, ಸಂಕ್ರಾಮಿಕ ರೋಗಗಳು ಹೆಚ್ಚಾಗುವ ಸಾಧ್ಯತೆ ಇದೆ. ದಿನೇ ದಿನೇ ಚಳಿಯ ತೀವ್ರತೆ ಹೆಚ್ಚಾಗುತ್ತಿದ್ದು, ಮಕ್ಕಳು, ಮಹಿಳೆಯರು, ವಯಸ್ಸಾದವರು ಹೆಚ್ಚರ ವಹಿಸಿದರೆ ಒಳ್ಳೆಯದು ಎಂದು ತಿಳಿಸಿದ್ದಾರೆ.