Tag: ವಾನಿಂದು ಹಸರಂಗ

  • ಲಂಕಾಗೆ ಆಘಾತ – ವಿಶ್ವಕಪ್‌ ಟೂರ್ನಿಯಿಂದ ಸ್ಪಿನ್‌ ಮಾಂತ್ರಿಕ ಹಸರಂಗ ಔಟ್‌?

    ಲಂಕಾಗೆ ಆಘಾತ – ವಿಶ್ವಕಪ್‌ ಟೂರ್ನಿಯಿಂದ ಸ್ಪಿನ್‌ ಮಾಂತ್ರಿಕ ಹಸರಂಗ ಔಟ್‌?

    ಕೊಲಂಬೊ: ಅಕ್ಟೋಬರ್‌ 5 ರಿಂದ ಭಾರತದಲ್ಲಿ ಆರಂಭವಾಗಲಿರುವ ಏಕದಿನ ವಿಶ್ವಕಪ್‌ (World Cup 2023) ಟೂರ್ನಿಗೂ ಮುನ್ನವೇ ಶ್ರೀಲಂಕಾ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಲಂಕಾ ತಂಡದ ಸ್ಪಿನ್‌ ಮಾಂತ್ರಿಕ ವಾನಿಂದು ಹಸರಂಗ ಗಾಯದ ಸಮಸ್ಯೆಗೆ (Wanindu Hasaranga Injury) ತುತ್ತಾಗಿದ್ದು, ವಿಶ್ವಕಪ್‌ ಟೂರ್ನಿಯಿಂದ ಬಹುತೇಕ ಹೊರಬೀಳುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

    ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಹಸರಂಗ ಅವರಿಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆಯೇ ಇಲ್ಲವೇ ಎಂಬುದನ್ನ ಪರಿಶೀಲಿಸಲು ಶ್ರೀಲಂಕಾ (Sri Lanka) ವಿದೇಶಿ ವೈದ್ಯರೊಂದಿಗೆ (Doctors) ಸಮಾಲೋಚನೆ ನಡೆಸುತ್ತಿದೆ. ಒಂದು ವೇಳೆ ಶಸ್ತ್ರಚಿಕಿತ್ಸೆ ಅಗತ್ಯವಿದ್ದರೇ ಅವರು ವಿಶ್ವಕಪ್‌ ಟೂರ್ನಿಯಿಂದ ಹೊರಗುಳಿಯಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಬಾಬರ್‌ ಆಜಂ ಬಳಿಕ ನವೀನ್ ಉಲ್ ಹಕ್‌ನನ್ನ ಹೊಗಳಿದ ಗಂಭೀರ್‌ – ಕಾಲೆಳೆದ ಕೊಹ್ಲಿ ಫ್ಯಾನ್ಸ್‌

    ಕಳೆದ ಆಗಸ್ಟ್‌ ತಿಂಗಳಲ್ಲಿ ಲಂಕಾ ಪ್ರೀಮಿಯರ್‌ ಲೀಗ್‌ ವೇಳೆ ಹಸರಂಗ ಮಂಡಿರಜ್ಜು ಗಾಯದ ಸಮಸ್ಯೆಗೆ ತುತ್ತಾಗಿದ್ದರು. ಆದ್ದರಿಂದ ಏಷ್ಯಾಕಪ್‌ ವೇಳೆಯೂ ತಂಡದಿಂದ ಹೊರಗುಳಿದಿದ್ದರು. ಇದೀಗ 2023ರ ವಿಶ್ವಕಪ್‌ ಟೂರ್ನಿಗೆ ಸಿದ್ಧತೆ ನಡೆಸುತ್ತಿರುವ ಶ್ರೀಲಂಕಾ ತಂಡ ಅ.7 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕಣಕ್ಕಿಳಿಯುವ ಮೂಲಕ ತನ್ನ ವಿಶ್ವಕಪ್‌ ಅಭಿಯಾನ ಆರಂಭಿಸಲಿದೆ. ಇದನ್ನೂ ಓದಿ: Asian Games 2023: ಕ್ರಿಕೆಟ್‌ನಲ್ಲಿ ಚಿನ್ನ – ಇತಿಹಾಸ ನಿರ್ಮಿಸಿದ ಭಾರತದ ಮಹಿಳೆಯರು

    ಈ ಪಂದ್ಯದಲ್ಲಿ ಪಾಲ್ಗೊಳ್ಳಲು ಹಸರಂಗ ಫಿಟ್‌ನೆಸ್‌ ಸಾಬೀತು ಮಾಡಬೇಕಿದೆ. ಆದ್ದರಿಂದ ಅವರಿಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆಯೇ ಇಲ್ಲವೇ ಎಂಬುದನ್ನ ತಿಳಿಯಲು ವಿದೇಶಿ ವೈದ್ಯರನ್ನ ಸಂಪರ್ಕಿಸಲಾಗುತ್ತಿದೆ. ಒಂದು ವೇಳೆ ಅವರಿಗೆ ಶಸ್ತ್ರ ಚಿಕಿತ್ಸೆ ಅಗತ್ಯವಿದ್ದರೆ ಕನಿಷ್ಠ 3 ತಿಂಗಳು ವಿಶ್ರಾಂತಿ ಪಡೆಯಬೇಕಾಗುತ್ತದೆ. ಜೊತೆಗೆ ವಿಶ್ವಕಪ್‌ ಟೂರ್ನಿಯಿಂದಲೂ ಹೊರಗುಳಿಯಬೇಕಾಗುತ್ತದೆ ಎಂದು ಶ್ರೀಲಂಕಾ ವೈದ್ಯಕೀಯ ಸಮಿತಿಯ ಮುಖ್ಯಸ್ಥ ಅರ್ಜುನ ಡಿ ಸಿಲ್ವಾ ತಿಳಿಸಿದ್ದಾರೆ. ಇದನ್ನೂ ಓದಿ: Asian Games : ಶೂಟಿಂಗ್‌ನಲ್ಲಿ ವಿಶ್ವದಾಖಲೆ – ಚಿನ್ನ ಗೆದ್ದ ಭಾರತದ ಪುರುಷರು

    ಇದೇ ಅಕ್ಟೋಬರ್‌ 5 ರಿಂದ ನವೆಂಬರ್‌ 19ರ ವರೆಗೆ ಭಾರತದ ವಿವಿಧ ಸ್ಥಳಗಳಲ್ಲಿ ಏಕದಿನ ವಿಶ್ವಕಪ್‌ ಟೂರ್ನಿ ನಡೆಯಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • IPL 2023: ಅಬ್ಬರಿಸಲು ನಾವ್‌ ರೆಡಿ ಎಂದ ಹಸರಂಗ – ಈ ಸಲ ಕಪ್‌ ನಮ್ದೆ ಅಂದ್ರು ಫ್ಯಾನ್ಸ್‌

    IPL 2023: ಅಬ್ಬರಿಸಲು ನಾವ್‌ ರೆಡಿ ಎಂದ ಹಸರಂಗ – ಈ ಸಲ ಕಪ್‌ ನಮ್ದೆ ಅಂದ್ರು ಫ್ಯಾನ್ಸ್‌

    – ಆರ್‌ಸಿಬಿಗೆ ಎಂಟ್ರಿಕೊಟ್ಟ ಸ್ಪಿನ್‌ ಮಾಂತ್ರಿಕ

    ಮುಂಬೈ: ಶ್ರೀಲಂಕಾ ತಂಡದ ಸ್ಪಿನ್‌ ಮಾಂತ್ರಿಕ ವಾನಿಂದು ಹಸರಂಗ (Wanindu Hasaranga) ಆರ್‌ಸಿಬಿಗೆ (RCB) ತಂಡಕ್ಕೆ ಮರಳಿದ್ದು, 2023ರ ಐಪಿಎಲ್‌ನಲ್ಲಿ (IPL 2023) ಮೊದಲ ಪಂದ್ಯವನ್ನಾಡಲು ಉತ್ಸುಕರಾಗಿದ್ದಾರೆ.

    ಇತ್ತೀಚೆಗೆ ನ್ಯೂಜಿಲೆಂಡ್‌ ಜೊತೆಗಿನ ದ್ವಿಪಕ್ಷಿಯ ಸರಣಿ ಹಿನ್ನೆಲೆಯಲ್ಲಿ ಹಸರಂಗ ಶ್ರೀಲಂಕಾ (SriLanka) ರಾಷ್ಟ್ರೀಯ ತಂಡದಲ್ಲಿ ಆಡುತ್ತಿದ್ದರು. ಹಾಗಾಗಿ ಆರ್‌ಸಿಬಿ ತಂಡದಿಂದ ಹೊರಗುಳಿದಿದ್ದರು. ಆದರೀಗ ಆರ್‌ಸಿಬಿ ತಂಡವನ್ನ ಕೂಡಿಕೊಂಡಿದ್ದು, ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಅಬ್ಬರಿಸಲು ನಾವ್‌ ರೆಡಿ ಎಂಬ ಖಡಕ್‌ ಸಂದೇಶವನ್ನ ಎದುರಾಳಿಗಳಿಗೆ ರವಾನಿಸಿದ್ದಾರೆ. ಇದನ್ನೂ ಓದಿ: ಮ್ಯಾಜಿಕ್‌ ಮಹಿಗೆ 200ರ ಸಂಭ್ರಮ – ಕೊನೆಯ IPLನಲ್ಲಿ ವಿಶೇಷ ಸಾಧನೆ ಮಾಡಿದ ಧೋನಿ!

    ವಾನಿಂದು ಹಸರಂಗ ಕಳೆದ ವರ್ಷದ ಐಪಿಎಲ್ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. 16 ಪಂದ್ಯಗಳಲ್ಲಿ ಅವರು 26 ವಿಕೆಟ್‌ ಉರುಳಿಸಿ, 7.54ರ ಸರಾಸರಿಯಲ್ಲಿ ಬೌಲಿಂಗ್ ನಡೆಸಿದ್ದರು ಈ ಮೂಲಕ 2022ರ ಐಪಿಎಲ್‌ನಲ್ಲಿ 2ನೇ ಅತಿ ಹೆಚ್ಚು ವಿಕೆಟ್ ಪಡೆದ ಹೆಗ್ಗಳಿಕೆಯನ್ನೂ ಹಸರಂಗ ಮಾಡಿದ್ದರು. ಇತ್ತೀಚೆಗಷ್ಟೇ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡ ಸೇರಿಕೊಂಡ ಹಸರಂಗ ತಂಡದೊಂದಿಗೆ ಅಭ್ಯಾಸ ನಡೆಸುತ್ತಿದ್ದಾರೆ. ಇದನ್ನೂ ಓದಿ: IPL 2023: ಕೊನೆಯವರೆಗೂ ಹೋರಾಡಿ ಸೋತ ಚೆನ್ನೈ – ರಾಜಸ್ಥಾನ್‌ ರಾಯಲ್ಸ್‌ಗೆ 3 ರನ್‌ಗಳ ರೋಚಕ ಜಯ

    ಈ ಸಂದರ್ಭದಲ್ಲಿ ಆರ್‌ಸಿಬಿ ತಂಡದ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿರುವ ವಾನಿಂದು ಹಸರಂಗ, ಆರ್‌ಸಿಬಿ ತಂಡವನ್ನು ಕೂಡಿಕೊಳ್ಳಲು ಹರ್ಷವಾಗುತ್ತಿದೆ. ಆರ್‌ಸಿಬಿ ತಂಡವನ್ನು ಸೇರಿಕೊಳ್ಳಲು ಉತ್ಸಾಹದಿಂದ ಕಾಯುತ್ತಿದ್ದೆ. ತಂಡದ ಆಟಗಾರರು ಅತ್ಯುತ್ತಮವಾಗಿ ಸಿದ್ಧತೆ ನಡೆಸುತ್ತಿದ್ದು ಹರ್ಷ ಮೂಡಿಸಿದೆ. ಈ ಬಾರಿ ಆರ್‌ಸಿಬಿ ತಂಡದ ಪರವಾಗಿ ಮೊದಲ ಬಾರಿಗೆ ಬೌಲಿಂಗ್ ಮಾಡಲಿದ್ದೇನೆ. ವೈಯಕ್ತಿಕವಾಗಿ ಈ ಸವಾಲನ್ನು ಎದುರಿಸಲು ಸಜ್ಜಾಗಿದ್ದೇನೆ ಎಂದು ಹೇಳಿದ್ದಾರೆ.

    ಏಪ್ರಿಲ್‌ 15ರಂದು ದೆಹಲಿಯ ಅರುಣ್‌ ಜೇಟ್ಲಿ ಮೈದಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಆರ್‌ಸಿಬಿ ಸೆಣಸಲಿದೆ. ಈಗಾಗಲೇ ಸತತ 4 ಪಂದ್ಯಗಳನ್ನು ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್‌ ಮೊದಲ ಖಾತೆ ತೆರೆಯುವ ತವಕದಲ್ಲಿದ್ದರೆ, ಸತತ ಎರಡು ಸೋಲು ಅನುಭವಿಸಿರುವ ಆರ್‌ಸಿಬಿ ತಂಡ ಹ್ಯಾಟ್ರಿಕ್‌ ಸೋಲಿನಿಂದ ತಪ್ಪಿಸಿಕೊಳ್ಳಲು ಭರ್ಜರಿ ತಯಾರಿ ನಡೆಸುತ್ತಿದೆ. ಆರ್‌ಸಿಬಿ ಉತ್ತಮ ಕಮ್‌ಬ್ಯಾಕ್‌ ಆಗುವ ನಿರೀಕ್ಷೆಯೊಂದಿಗೆ ಅಭಿಮಾನಿಗಳು ಈ ಸಲ ಕಪ್‌ ನಮ್ದೆ ಎಂದು ಮತ್ತೆ – ಮತ್ತೆ ಹೇಳ್ತಿದ್ದಾರೆ.

  • ಬಹುಕಾಲದ ಗೆಳತಿಯನ್ನ ವರಿಸಿದ ಲಂಕಾ ಕ್ರಿಕೆಟಿಗ ಹಸರಂಗ

    ಬಹುಕಾಲದ ಗೆಳತಿಯನ್ನ ವರಿಸಿದ ಲಂಕಾ ಕ್ರಿಕೆಟಿಗ ಹಸರಂಗ

    ಕೊಲೊಂಬೊ: ಶ್ರೀಲಂಕಾ ತಂಡದಲ್ಲಿ ಸ್ಪಿನ್ ಮಾಂತ್ರಿಕ ಎಂದೇ ಖ್ಯಾತಿಯಾಗಿರುವ ಕ್ರಿಕೆಟಿಗ ವಾನಿಂದು ಹಸರಂಗ (Wanindu Hasaranga) ತನ್ನ ಬಹುಕಾಲದ ಗೆಳತಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಆರ್‌ಸಿಬಿ (RCB) ತಂಡದ ಆಲ್‌ರೌಂಡರ್ ಸಹ ಆಗಿರುವ ವಾನಿಂದು ಹಸರಂಗ, ಗೆಳತಿ ವಿಂದ್ಯಾ (Vindya) ವಿವಾಹದ ಫೋಟೋಗಳು ಜಾಲತಾಣದಲ್ಲಿ ಹರಿದಾಡುತ್ತಿವೆ. ಇದನ್ನೂ ಓದಿ: WPL 2023: ಆರ್‌ಸಿಬಿಗೆ ಹ್ಯಾಟ್ರಿಕ್ ಸೋಲು – ಗುಜರಾತ್ ಜೈಂಟ್ಸ್‌ಗೆ 11 ರನ್ ರೋಚಕ ಜಯ

    ಶ್ರೀಲಂಕಾ (SriLanka) ತಂಡದಲ್ಲಿ ತನ್ನ ಸ್ಪಿನ್ ಬೌಲಿಂಗ್ ಹಾಗೂ ಸ್ಫೋಟಕ ಆಟದಿಂದ ಕ್ರಿಕೆಟ್ ಲೋಕದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಹಸರಂಗ. ಆರ್‌ಸಿಬಿ ತಂಡದಲ್ಲಿ ಆಲ್‌ರೌಂಡರ್ ಆಗಿಯೂ ಮಿಂಚಿದ್ದಾರೆ. ಇದನ್ನೂ ಓದಿ: Ind Vs Aus: ಆಸ್ಟ್ರೇಲಿಯಾದ ಪ್ರಧಾನಿ‌ ಜೊತೆ ಮೋದಿ ಮ್ಯಾಚ್ ವೀಕ್ಷಣೆ

    ಮಾರ್ಚ್ 9 ರಂದು ಆತ್ಮೀಯರ ಸಮ್ಮುಖದಲ್ಲಿ ಹಸರಂಗ-ವಿಂದ್ಯಾ ಜೋಡಿಯ ವಿವಾಹ (Marriage) ಮಹೋತ್ಸವ ಜರುಗಿದೆ. ನವ ಜೋಡಿಯ ಫೋಟೋಗಳು ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳು ಶುಭಕೋರಿದ್ದಾರೆ. ಇತ್ತ ಆರ್‌ಸಿಬಿ ತಂಡ ಕೂಡ ತನ್ನ ಟ್ವಿಟ್ಟರ್ ಖಾತೆಯಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ನವದಂಪತಿಗೆ ಶುಭ ಹಾರೈಸಿದೆ. ಇದನ್ನೂ ಓದಿ: ಜೊನಾಸೆನ್‌ ಆಲ್‌ರೌಂಡರ್‌ ಆಟ, ತಾಲಿಯಾ ಏಕಾಂಗಿ ಹೋರಾಟ – ಡೆಲ್ಲಿ ಕ್ಯಾಪಿಟಲ್ಸ್‌ಗೆ 42 ರನ್‌ಗಳ ಭರ್ಜರಿ ಜಯ

    2022ರ ಏಷ್ಯಾಕಪ್ (AisaCup 2022) ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡದ ವಿರುದ್ಧ ಆಲ್‌ರೌಂಡರ್ ಪ್ರದರ್ಶನ ನೀಡಿದ್ದ ಹಸರಂಗ ತಂಡದ ಗೆಲುವಿಗೆ ಕಾರಣರಾಗಿದ್ದರು. ಇದರೊಂದಿಗೆ 2022ರ ಟಿ20 ವಿಶ್ವಕಪ್‌ನಲ್ಲಿ (T20 WorldCup) 15 ವಿಕೆಟ್ ಪಡೆಯುವ ಮೂಲಕ ಅತಿಹೆಚ್ಚು ವಿಕೆಟ್ ಪಡೆದ ಸಾಧನೆ ಮಾಡಿದ್ದರು.