Tag: ವಾಯಮಾಲಿನ್ಯ

  • ಮಾಲಿನ್ಯ ತಡೆಗೆ ಕಠಿಣ ಕ್ರಮ ಕೈಗೊಂಡ ದೆಹಲಿ

    ಮಾಲಿನ್ಯ ತಡೆಗೆ ಕಠಿಣ ಕ್ರಮ ಕೈಗೊಂಡ ದೆಹಲಿ

    ನವದೆಹಲಿ: ವಾಯು ಮಾಲಿನ್ಯವು ದೆಹಲಿಯಲ್ಲಿ ಮಿತಿ ಮಿರುತ್ತಿದ್ದ ಹಿನ್ನೆಲೆಯಲ್ಲಿ ಮಾಲಿನ್ಯ ತಡೆಗೆ ದೆಹಲಿ ಕಠಿಣ ಕ್ರಮ ಕೈಗೊಂಡಿದೆ.

    ವಾಯುಮಾಲಿನ್ಯ ತಡೆಗೆ ಕಠಿಣ ಕ್ರಮ ಜರುಗಿಸಬೇಕು ಎಂದು ಸುಪ್ರೀಂಕೋರ್ಟ್ ನೀಡಿದ 1 ದಿನ ಗಡುವಿನ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ನೇತೃತ್ವದಲ್ಲಿ ನಡೆದ ದೆಹಲಿ ಸುತ್ತಮುತ್ತಲಿನ 4 ರಾಜ್ಯಗಳ ಸಭೆಯಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ.

    ದೆಹಲಿ, ರಾಜಸ್ತಾನ, ಹರಿಯಾಣ, ಉತ್ರರಪ್ರದೇಶ ಹಾಗೂ ಪಂಜಾಬ್ ರಾಜ್ಯಗಳ ಸಭೆ ನಡೆದಿದೆ. ಬಳಿಕ ತಡರಾತ್ರಿ ವಾಯು ಗುಣಮಟ್ಟ ಆಯೋಗವು ಮುಂದಿನ ಕೆಲವು ದಿನಗಳ ಮಟ್ಟಿಗೆ ಅನ್ವಯ ಆಗುವಂತೆ ಕೆಲವು ಕ್ರಮ ಪ್ರಕಟಿಸಿದೆ.


    ಕೈಗೊಂಡ ನಿರ್ಣಯಗಳು:
    * ದೆಹಲಿ ಹಾಗೂ ಸುತ್ತಮುತ್ತಲಿನ ವಲಯದಲ್ಲಿ ಮಾಲಿನ್ಯಕಾರಕ ಇಂಧನ ಬಳಕೆ ಉದ್ದಿಮೆಗಳು ಕಾರ್ಯ ನಿರ್ವಹಿಸಕೂಡದು
    * 11 ಉಷ್ಣವಿದ್ಯುತ್ ಸ್ಥಾವರಗಳ ಪೈಕಿ 5 ಮಾತ್ರ ನವೆಂಬರ್ 30ರವರೆಗೆ ಕೆಲಸ ಮಾಡಬೇಕು. ಇದನ್ನೂ ಓದಿ: ದೆಹಲಿಯಲ್ಲಿ ಮಿತಿ ಮೀರಿದ ವಾಯು ಮಾಲಿನ್ಯ

    * ನವೆಂಬರ್ 31ರವರೆಗೆ ಅಗತ್ಯವಸ್ತು ಸಾಗಾಣೆ ಟ್ರಕ್ ಹೊರತುಪಡಿಸಿ ಉಳಿದ ಟ್ರಕ್‍ಗಳ ಪ್ರವೇಶ ನಿಷೇಧ.
    * 10 ವರ್ಷಕ್ಕಿಂತ ಹಳೆಯ ಪೆಡ್ರೋಲ್, 15 ವರ್ಷಕ್ಕಿಂತ ಹಳೆ ಡಿಸೇಲ್‍ವಾಹನ ನವೆಂಬರ್ 21ರವರೆಗೆ ಸಂಚಾರ ಮಾಡಬಾರದು.

    * ನವೆಂಬರ್ 21ರವರೆಗೆ ವರ್ಕ್ ಫ್ರಂ ಹೋಮ್‍ಗೆ ಆದ್ಯತೆ. ಕಚೇರಿಗಳಲ್ಲಿ ಶೇ.50ರಷ್ಟು ಸಿಬ್ಬಂದಿಗೆ ಮಾತ್ರ ಅವಕಾಶವಿರುತ್ತದೆ.
    * ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಮುಂದಿನ ಆದೇಶದವರೆಗೆ ರಜೆ ಇರುತ್ತದೆ.

  • ಸೂಪರ್‌ ಟೆಕ್ನಾಲಜಿ ಅಭಿವೃದ್ಧಿ ಪಡಿಸಿದವರಿಗೆ 729 ಕೋಟಿ ಬಹುಮಾನ ಘೋಷಿಸಿದ ಮಸ್ಕ್‌

    ಸೂಪರ್‌ ಟೆಕ್ನಾಲಜಿ ಅಭಿವೃದ್ಧಿ ಪಡಿಸಿದವರಿಗೆ 729 ಕೋಟಿ ಬಹುಮಾನ ಘೋಷಿಸಿದ ಮಸ್ಕ್‌

    ವಾಷಿಂಗ್ಟನ್‌: ಶತಕೋಟ್ಯಧಿಪತಿ, ವಿಶ್ವದ ನಂಬರ್‌ 2 ಶ್ರೀಮಂತ ಉದ್ಯಮಿ, ಟೆಸ್ಲಾ ಮತ್ತು ಸ್ಪೇಸ್‌ ಎಕ್ಸ್‌ ಕಂಪನಿಯ ಸ್ಥಾಪಕ ಎಲೋನ್‌ ಮಸ್ಕ್‌ ಸೂಪರ್‌ ಪವರ್‌ ಟೆಕ್ನಾಲಜಿಯನ್ನು ಅಭಿವೃದ್ಧಿ ಪಡಿಸಿದವರಿಗೆ 100 ದಶಲಕ್ಷ ಅಮೆರಿಕನ್‌ ಡಾಲರ್‌(ಅಂದಾಜು 729 ಕೋಟಿ ರೂ.) ಬಹುಮಾನ ನೀಡುವುದಾಗಿ ಪ್ರಕಟಿಸಿದ್ದಾರೆ.

    ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆಯನ್ನು ಸೆರೆಹಿಡಿಯುವ ಅತ್ಯುತ್ತಮ ತಂತ್ರಜ್ಞಾನವನ್ನು ಕಂಡುಹಿಡಿದವರಿಗೆ 100 ದಶಲಕ್ಷ ಡಾಲರ್‌ ಹಣವನ್ನು ನೀಡುತ್ತೇನೆ ಎಂದು ಮಸ್ಕ್‌ ಟ್ವೀಟ್‌ ಮಾಡಿದ್ದಾರೆ. ಇನ್ನೊಂದು ಟ್ವೀಟ್‌ನಲ್ಲಿ ಮುಂದಿನ ವಾರ ವಿವರ ನೀಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಟೆಸ್ಲಾ ಘಟಕ – ಯಾವ ಕಾರು ಬಿಡುಗಡೆಯಾಗಬಹುದು? ಬೆಲೆ ಎಷ್ಟು? 

    ಎಲೆಕ್ಟ್ರಿಕ್‌ ಕಾರು ತಯಾರಿಸುವ ಟೆಸ್ಲಾ ಕಂಪನಿಯ ಷೇರುಗಳ ಬೆಲೆ ಏರಿಕೆಯಾಗಿದ್ದ ಕಾರಣ ಕೆಲ ದಿನಗಳ ಹಿಂದೆ ಮಾಸ್ಕ್‌ ವಿಶ್ವದ ನಂಬರ್‌ 1 ಶತಕೋಟಿ ಉದ್ಯಮಿಯಾಗಿ ಹೊರ ಹೊಮ್ಮಿದ್ದರು.

    2020ರ ಜನವರಿಯಲ್ಲಿ ಶ್ರೀಮಂತರ ಪಟ್ಟಿಯಲ್ಲಿ ಎಲೋನ್‌ ಮಸ್ಕ್‌ ಈ ಜಾಗತಿಕ ಪಟ್ಟಿಯಲ್ಲಿ 35ನೇ ಸ್ಥಾನದಲ್ಲಿದ್ದರು. ಕಳೆದ ಒಂದು ವರ್ಷದಲ್ಲಿ ಮಸ್ಕ್‌ ಸಂಪತ್ತು 150 ಶತಕೋಟಿ ಡಾಲರ್‌ ಹೆಚ್ಚಳವಾಗಿದೆ. ಈ ಮೂಲಕ ಅತಿ ಕಡಿಮೆ ಅವಧಿಯಲ್ಲಿ ಅತಿ ಹೆಚ್ಚು ಸಂಪತ್ತು ಹೆಚ್ಚಿಸಿಕೊಂಡ ವಿಶ್ವದ ಮೊದಲ ಉದ್ಯಮಿ ಎಂಬ ಹೆಗ್ಗಳಿಕೆಗೆ ಮಸ್ಕ್‌ ಪಾತ್ರವಾಗಿದ್ದಾರೆ. ಕಳೆದ ಒಂದು ವರ್ಷದಲ್ಲಿ ಪ್ರತಿ ಗಂಟೆಗೆ 17.36 ದಶಲಕ್ಷ ಡಾಲರ್‌(ಅಂದಾಜು 127 ಕೋಟಿ ರೂ.) ಸಂಪತ್ತು ಗಳಿಸಿದ್ದರಿಂದ ಮಸ್ಕ್‌ ವಿಶ್ವದ ನಂಬರ್‌ 1 ಶ್ರೀಮಂತರಾಗಿ ಹೊರಹೊಮ್ಮಿದ್ದರು. ಕಳೆದ ಒಂದು ವರ್ಷದಲ್ಲಿ ಎಲೆಕ್ಟ್ರಿಕ್‌ ಕಾರು ಕಂಪನಿ ಟೆಸ್ಲಾದ ಷೇರು ಬೆಲೆ ಭಾರೀ ಏರಿಕೆ ಕಂಡಿದೆ. ಪ್ರಸ್ತುತ ಟೆಸ್ಲಾ ಕಂಪನಿಯಲ್ಲಿ ಮಸ್ಕ್‌ ಶೇ.20 ರಷ್ಟು ಷೇರುಗಳನ್ನು ಹೊಂದಿದ್ದಾರೆ.

    ಟೆಸ್ಲಾ ಕಂಪನಿಯ ಷೇರುಗಳು ಒಂದೇ ವರ್ಷದ ಅವಧಿಯಲ್ಲಿ ಶೇ. 743ರಷ್ಟು ಮೇಲೇರಿವೆ. ವಿಶೇಷ ಏನೆಂದರೆ ಟೆಸ್ಲಾ ಕಂಪನಿ 2020ರಲ್ಲಿ ಒಟ್ಟು 4,99,550 ಕಾರನ್ನು ಉತ್ಪಾದಿಸಿತ್ತು. ಹಾಗೆ ಲೆಕ್ಕ ಹಾಕಿದರೆ ಜಗತ್ತಿನ ಅತಿ ದೊಡ್ಡ ಕಾರು ಉತ್ಪಾದನಾ ಕಂಪನಿಗಳಾದ ಜನರಲ್‌ ಮೋಟರ್ಸ್‌, ಫೋರ್ಡ್‌, ಟೊಯೋಟಾ, ಹೋಂಡಾ ಕಂಪನಿಗಳು ಒಂದೇ ತಿಂಗಳಿನಲ್ಲಿ ಈ ಪ್ರಮಾಣದ ಕಾರುಗಳನ್ನು ಉತ್ಪಾದಿಸುತ್ತಿವೆ. ಟೆಸ್ಲಾ ಕಂಪನಿಯ ಎಲೆಕ್ಟ್ರಿಕ್‌ ಕಾರು ದುಬಾರಿಯಾಗಿದ್ದರೂ ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್‌ ಕಾರು ಮಾರುಕಟ್ಟೆ ಬೇಡಿಕೆ ಹೆಚ್ಚಾಗಲಿದೆ. ಈ ಕಾರಣಕ್ಕೆ ಟೆಸ್ಲಾ ಷೇರುಗಳ ಬೆಲೆ ಏರಿಕೆಯಾಗುತ್ತಿದೆ.