ನವದೆಹಲಿ: ದೀಪಾವಳಿ ಹಬ್ಬದ ವೇಳೆ ದೆಹಲಿಯ ವಾಯು ಗುಣಮಟ್ಟ ಅತ್ಯಂತ ಕಳಪೆ ಸ್ಥಿತಿಗೆ ತಲುಪಿದೆ. ಇಂದು ಬೆಳಗ್ಗೆ 5:30ಕ್ಕೆ ದೆಹಲಿಯ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ 346 ದಾಖಲಾಗಿದೆ.
ಹೆಚ್ಚಿನ ಪ್ರದೇಶಗಳು ಇಂದು ರೆಡ್‌ಝೋನ್‌ನಲ್ಲಿದೆ. ಸುಪ್ರೀಂ ಕೋರ್ಟ್ ನಿಷೇಧವನ್ನು ತೆರವುಗೊಳಿಸಿದ ನಂತರ ರಾಷ್ಟ್ರ ರಾಜಧಾನಿಯಲ್ಲಿ ಹಸಿರು ಪಟಾಕಿಗಳೊಂದಿಗೆ ದೀಪಾವಳಿ ಹಬ್ಬವನ್ನು ಆಚರಿಸಲಾಗಿತ್ತು. ಆದರೂ, ದೆಹಲಿಯ ವಾಯು ಗುಣಮಟ್ಟ ಅತ್ಯಂತ ಕಳಪೆ ವಿಭಾಗಕ್ಕೆ ಕುಸಿದಿದೆ.
ನಿನ್ನೆ ರಾತ್ರಿ 10 ಗಂಟೆಗೆ, 38 ಮಾನಿಟರಿಂಗ್ ಕೇಂದ್ರಗಳ ಪೈಕಿ 36 ಕೇಂದ್ರಗಳಲ್ಲಿ ಮಾಲಿನ್ಯ ಮಟ್ಟವು ಕೆಂಪು ವಲಯದಲ್ಲಿ ದಾಖಲಾಗಿದೆ. ಇದು ದೆಹಲಿಯಾದ್ಯಂತ ಅತ್ಯಂತ ಕಳಪೆಯಿಂದ ಭಯಾನಕ ವಾಯು ಗುಣಮಟ್ಟವನ್ನು ಸೂಚಿಸುತ್ತದೆ.
ಮುಂಬೈ: ವಾಣಿಜ್ಯ ನಗರಿಯಾದ ಮುಂಬೈ ಮತ್ತು ದೆಹಲಿಯಲ್ಲಿ ವಾಯುಗುಣಮಟ್ಟ ಕುಸಿತದ ಬಗ್ಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೇಸರ ವ್ಯಕ್ತಪಡಿಸಿದ್ದಾರೆ.
Rohit Sharma said, “I’ll always talk and educate about air pollution because we have to think about our future generations”. pic.twitter.com/5KZcr3d76u
ಬಾಂಬೆ ಹೈಕೋರ್ಟ್ ಮುಂಬೈನ (Mumbai) ವಾಯು ಗುಣಮಟ್ಟವನ್ನು (Air Quality) ಗಮನಿಸಿ ಸ್ವಯಂಪ್ರೇರಿತವಾಗಿ ವಿಚಾರಣೆ ಪ್ರಾರಂಭಿಸಿದೆ. ಈ ಬೆನ್ನಲ್ಲೇ ಮುಂಬೈನ ವಾಂಖೆಡೆ (Mumbai Wankhede Stadium) ಮತ್ತು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ (ನ.2) ಮತ್ತು ಸೋಮವಾರ (ನ.6) ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಗಳಲ್ಲಿ ಗೆಲುವಿನ ಸಂಭ್ರಮಾಚರಣೆಗೆ ಪಟಾಕಿ ಬಳಸುವುದನ್ನು ಬಿಸಿಸಿಐ (BCCI) ನಿಷೇಧಿಸಿದೆ.
ಮುಂಬೈ ಮತ್ತು ದೆಹಲಿಯಲ್ಲಿ (New Delhi) ವಾಯು ಗುಣಮಟ್ಟ ತೀವ್ರವಾಗಿ ಕುಸಿದಿರುವ ಹಿನ್ನೆಲೆಯಲ್ಲಿ, ಈ ನಗರಗಳಲ್ಲಿ ನಡೆಯಲಿರುವ ಪಂದ್ಯಗಳ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ದೂರವುಳಿಯಲು ಬಿಸಿಸಿಐ ನಿರ್ಧರಿಸಿದೆ ಎಂದು ಕಾರ್ಯದರ್ಶಿ ಜಯ್ ಶಾ ಬುಧವಾರ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಗುರುವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ (Team India), ಶ್ರೀಲಂಕಾ ವಿರುದ್ಧ, ಸೋಮವಾರ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಬಾಂಗ್ಲಾದೇಶ ಮತ್ತು ಶ್ರೀಲಂಕಾ (Sri Lanka) ತಂಡಗಳು ಮುಖಾಮುಖಿಯಾಗಲಿವೆ. ಮುಂಬೈನಲ್ಲಿ ನವೆಂಬರ್ 7 ರಂದು ಆಸೀಸ್ ಮತ್ತು ಅಫ್ಘಾನಿಸ್ತಾನ ನಡುವೆ ಮತ್ತು ನವೆಂಬರ್ 15ರಂದು ಸೆಮಿಫೈನಲ್ ಪಂದ್ಯಗಳು ನಡೆಯಲಿದೆ.
ಈ ವಿಷಯವನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ತಿಳಿಸಲಾಗಿದೆ. ಮುಂಬೈ ಮತ್ತು ದೆಹಲಿಯಲ್ಲಿ ಯಾವುದೇ ಪಟಾಕಿ ಪ್ರದರ್ಶನ ಇರುವುದಿಲ್ಲ. ಪಟಾಕಿ ಸಿಡಿಸುವುದರಿಂದ ಮಾಲಿನ್ಯದ ಮಟ್ಟ ಹೆಚ್ಚಾಗಬಹುದು. ಆದ್ದರಿಂದ ಮಂಡಳಿಯು ಪರಿಸರ ಮಾಲಿನ್ಯದ ಸಮಸ್ಯೆಗಳ ಬಗ್ಗೆ ಸೂಕ್ಷ್ಮತೆ ಹೊಂದಿದೆ ಎಂದು ಜಯ್ ಶಾ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತಕ್ಕಿಂದು ಸಿಂಹಳಿಯರ ಸವಾಲ್ – ಸೆಮೀಸ್‌ಗೆ ಲಗ್ಗೆಯಿಡಲು ತವಕ; ಲಂಕಾ ಪಂದ್ಯಕ್ಕೂ ಪಾಂಡ್ಯ ಔಟ್?
ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ದತ್ತಾಂಶದ ಪ್ರಕಾರ, ಮಂಗಳವಾರ ಮುಂಬೈನಲ್ಲಿ ಗಾಳಿಯ ಗುಣಮಟ್ಟದ ಎಕ್ಯೂಐ (AQI) ರೀಡಿಂಗ್ 172 (ಮಧ್ಯಮ) ಆಗಿದ್ದು, ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ 260ರ ಆತಂಕಕಾರಿ ಮಟ್ಟವನ್ನು ಮುಟ್ಟಿತ್ತು. ದೆಹಲಿಯಲ್ಲಿ, ಈ ಅಕ್ಟೋಬರ್‌ನಲ್ಲಿ ವಾಯು ಗುಣಮಟ್ಟವು 2020ರಿಂದ ಅತ್ಯಂತ ಕೆಟ್ಟ ಹಂತಕ್ಕೆ ತಲುಪಿದೆ ಎಂದು ಹೇಳಲಾಗಿತ್ತು.
ನವದೆಹಲಿ: ಮುಂಬೈನ ವಾಂಖೆಡೆ (Mumbai Wankhede Stadium) ಮತ್ತು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ (ನ.2) ಮತ್ತು ಸೋಮವಾರ (ನ.6) ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಗಳಲ್ಲಿ ಗೆಲುವಿನ ಸಂಭ್ರಮಾಚರಣೆಗೆ ಪಟಾಕಿ ಬಳಸುವುದನ್ನು ಬಿಸಿಸಿಐ (BCCI) ನಿಷೇಧಿಸಿದೆ.
ಬಾಂಬೆ ಹೈಕೋರ್ಟ್ ಮುಂಬೈನ (Mumbai) ವಾಯು ಗುಣಮಟ್ಟವನ್ನು (Air Quality) ಗಮನಿಸಿ ಸ್ವಯಂಪ್ರೇರಿತವಾಗಿ ವಿಚಾರಣೆ ಪ್ರಾರಂಭಿಸಿದ ಬಳಿಕ ಬಿಸಿಸಿಐ (BCCI) ಈ ನಿರ್ಧಾರ ಪ್ರಕಟಿಸಿದೆ. ಮುಂಬೈ ಮತ್ತು ದೆಹಲಿಯಲ್ಲಿ (New Delhi) ವಾಯು ಗುಣಮಟ್ಟ ತೀವ್ರವಾಗಿ ಕುಸಿದಿರುವ ಹಿನ್ನೆಲೆಯಲ್ಲಿ, ಈ ನಗರಗಳಲ್ಲಿ ನಡೆಯಲಿರುವ ಪಂದ್ಯಗಳ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ದೂರವುಳಿಯಲು ಬಿಸಿಸಿಐ ನಿರ್ಧರಿಸಿದೆ ಎಂದು ಕಾರ್ಯದರ್ಶಿ ಜಯ್ ಶಾ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಗುರುವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ (Team India), ಶ್ರೀಲಂಕಾ ವಿರುದ್ಧ, ಸೋಮವಾರ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಬಾಂಗ್ಲಾದೇಶ ಮತ್ತು ಶ್ರೀಲಂಕಾ (Sri Lanka) ತಂಡಗಳು ಮುಖಾಮುಖಿಯಾಗಲಿವೆ. ಮುಂಬೈನಲ್ಲಿ ನವೆಂಬರ್ 7 ರಂದು ಆಸೀಸ್ ಮತ್ತು ಅಫ್ಘಾನಿಸ್ತಾನ ನಡುವೆ ಮತ್ತು ನವೆಂಬರ್ 15ರಂದು ಸೆಮಿಫೈನಲ್ ಪಂದ್ಯಗಳು ನಡೆಯಲಿದೆ.
ಈ ವಿಷಯವನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ತಿಳಿಸಲಾಗಿದೆ. ಮುಂಬೈ ಮತ್ತು ದೆಹಲಿಯಲ್ಲಿ ಯಾವುದೇ ಪಟಾಕಿ ಪ್ರದರ್ಶನ ಇರುವುದಿಲ್ಲ. ಪಟಾಕಿ ಸಿಡಿಸುವುದರಿಂದ ಮಾಲಿನ್ಯದ ಮಟ್ಟ ಹೆಚ್ಚಾಗಬಹುದು. ಆದ್ದರಿಂದ ಮಂಡಳಿಯು ಪರಿಸರ ಮಾಲಿನ್ಯದ ಸಮಸ್ಯೆಗಳ ಬಗ್ಗೆ ಸೂಕ್ಷ್ಮತೆ ಹೊಂದಿದೆ ಎಂದು ಜಯ್ ಶಾ ತಿಳಿಸಿದ್ದಾರೆ. ಇದನ್ನೂ ಓದಿ: ಪಿಸಿಬಿಗೆ ಪಾಕಿಸ್ತಾನ ವಿಶ್ವಕಪ್ ಗೆಲ್ಲುವುದು ಬೇಕಿಲ್ಲ: ಪಾಕ್ ಆಟಗಾರನ ಆರೋಪ
ಮುಂಬೈ ಮತ್ತು ನವದೆಹಲಿ ಎರಡೂ ಕಡೆ ಗಾಳಿಯ ಗುಣಮಟ್ಟದ ಬಗೆಗೆ ಬಿಸಿಸಿಐ ಕಾಳಜಿ ವ್ಯಕ್ತಪಡಿಸಿದೆ. ಕ್ರಿಕೆಟ್‌ನ ಸಂಭ್ರಮಾಚರಣೆಗೆ ಸೂಕ್ತವಾದ ರೀತಿಯಲ್ಲಿ ಐಸಿಸಿ ವಿಶ್ವಕಪ್ (ICC World) ಆಯೋಜಿಸಲು ನಾವು ಶ್ರಮಿಸುತ್ತೇವೆ. ಹಾಗೆಯೇ ಆರೋಗ್ಯ ಮತ್ತು ಸುರಕ್ಷತೆಗೆ ಆದ್ಯತೆ ನೀಡಲು ನಾವು ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ. ಇದಕ್ಕೆ ಸಾರ್ವಜನಿಕರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನನ್ನ ಫೇವ್ರೆಟ್ ಕ್ರಿಕೆಟರ್ ಕೆ.ಎಲ್ ರಾಹುಲ್ ಅಲ್ಲ ಎಂದ ಸುನೀಲ್ ಶೆಟ್ಟಿ
ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ದತ್ತಾಂಶದ ಪ್ರಕಾರ, ಮಂಗಳವಾರ ಮುಂಬೈನಲ್ಲಿ ಗಾಳಿಯ ಗುಣಮಟ್ಟದ ಎಕ್ಯೂಐ (AQI) ರೀಡಿಂಗ್ 172 (ಮಧ್ಯಮ) ಆಗಿದ್ದು, ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ 260ರ ಆತಂಕಕಾರಿ ಮಟ್ಟವನ್ನು ಮುಟ್ಟಿದೆ. ದೆಹಲಿಯಲ್ಲಿ, ಈ ಅಕ್ಟೋಬರ್‌ನ ಗಾಳಿಯ ಗುಣಮಟ್ಟವು 2020ರಿಂದ ಕೆಟ್ಟದ್ದಾಗಿದೆ. ಮುಂಬೈ ಮತ್ತು ದೆಹಲಿಯನ್ನು ಪಟಾಕಿ ಮುಕ್ತ ಮಾಡುವ ಮೂಲಕ ಕ್ರಿಕೆಟ್ ಮಂಡಳಿಯು ಉತ್ತಮ ಸಂದೇಶ ನೀಡುತ್ತಿದೆ ಎಂದು ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಏಕದಿನ ವಿಶ್ವಕಪ್ ಪಂದ್ಯಗಳ ವೇಳೆ ಪಟಾಕಿ ಸಿಡಿಸುವುದು ಸಂಭ್ರಮದ ಒಂದು ಭಾಗವಾಗಿದೆ. ಲೈಟ್ ಶೋ, ಸಿಡಿಮದ್ದಿನ ಪ್ರದರ್ಶನ ಸಾಕಷ್ಟು ಗಮನ ಸೆಳೆಯುತ್ತದೆ. ಆದ್ರೆ ಬಾಂಬೆ ಹೈಕೋರ್ಟ್ ಮಂಗಳವಾರ ಮುಂಬೈನಲ್ಲಿ ಹದಗೆಡುತ್ತಿರುವ ವಾಯು ಗುಣಮಟ್ಟ ಸೂಚ್ಯಂಕದ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು. ಈ ಸಮಸ್ಯೆಯ ಬಗ್ಗೆ ಸ್ವಯಂಪ್ರೇರಿತವಾಗಿ (ಸ್ವತಃ) ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು. ಈ ಬೆನ್ನಲ್ಲೇ ಬಿಸಿಸಿಐ ಪಟಾಕಿ ಸಿಡಿಸುವುದನ್ನು ಬ್ಯಾನ್ ಮಾಡಿದೆ. ಇದನ್ನೂ ಓದಿ: ಕಿಂಗ್ ಕೊಹ್ಲಿ, ರೋಹಿತ್ ಬಯೋಪಿಕ್‌ನಲ್ಲಿ ನಟಿಸುತ್ತಾರಾ ಶಾಹಿದ್ ಕಪೂರ್?