Tag: ವಾಯುಭಾರ ಕುಸಿತ

  • ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ – ಆ.30ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ – ಆ.30ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

    ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಆ.30ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ  (IMD) ಮುನ್ಸೂಚನೆ ನೀಡಿದೆ.

    ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ ಆ.28ರವರೆಗೆ ಗುಡುಗು, ಗಾಳಿ ಸಹಿತ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.ಇದನ್ನೂ ಓದಿ: ಪ್ರವಾಹದಲ್ಲಿ ಸಿಲುಕಿದ್ದ 22 ಸಿಆರ್‌ಪಿಎಫ್‌ ಸಿಬ್ಬಂದಿ ರಕ್ಷಿಸಿದ ಸೇನಾ ಹೆಲಿಕಾಪ್ಟರ್‌

    ಬೀದರ್ ಜಿಲ್ಲೆಗೆ ಮುಂದಿನ 3 ದಿನ ಯೆಲ್ಲೋ ಅಲರ್ಟ್:
    ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಇಂದು ಕೂಡು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

    ಬೀದರ್, ಔರಾದ್, ಭಾಲ್ಕಿ, ಹುಮ್ನಾಬಾದ್, ಬಸವಕಲ್ಯಾಣ ಸೇರಿದಂತೆ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಅಬ್ಬರದ ಮಳೆಗೆ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಸತತ ಮಳೆಯಿಂದಾಗಿ ಜಮೀನುಗಳು ಜಲಾವೃತಗೊಂಡು, ರಾಶಿಗೆ ಬಂದಿದ್ದ ಬೆಳೆ ಹಾಳಾಗುವ ಭೀತಿಯಲ್ಲಿ ಅನ್ನದಾತರು ಪರದಾಡುವಂತಾಗಿದೆ.ಇದನ್ನೂ ಓದಿ: ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ – ನನಗೂ ಬೈರತಿ ಬಸವರಾಜ್‌ಗೂ ಸಂಬಂಧವಿಲ್ಲ ಎಂದ ಎ1 ಜಗ್ಗ

  • ಚಿಕ್ಕಬಳ್ಳಾಪುರ | ರಾಜ್ಯಕ್ಕೂ ತಟ್ಟಿದ ಸೈಕ್ಲೋನ್ ಎಫೆಕ್ಟ್ – ಚುಮುಚುಮು ಚಳಿಯೊಂದಿಗೆ ತುಂತುರು ಮಳೆ!

    ಚಿಕ್ಕಬಳ್ಳಾಪುರ | ರಾಜ್ಯಕ್ಕೂ ತಟ್ಟಿದ ಸೈಕ್ಲೋನ್ ಎಫೆಕ್ಟ್ – ಚುಮುಚುಮು ಚಳಿಯೊಂದಿಗೆ ತುಂತುರು ಮಳೆ!

    – ಪ್ರವಾಸಿಗರ ಮನಸೆಳೆದ ನಂದಿಬೆಟ್ಟದ ಮಂಜು

    ಚಿಕ್ಕಬಳ್ಳಾಪುರ: ಬಂಗಾಳಕೊಲ್ಲಿಯಲ್ಲಿ (Bay of Bengal) ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದಲ್ಲಿ ನಿನ್ನೆ ಹಲವೆಡೆ ಭಾರೀ ಮಳೆಯಾಗಿದ್ರೆ.. ಮತ್ತೆ ಕೆಲವೆಡೆ ತುಂತುರು ಮಳೆಯಾಗಿದೆ. ಇನ್ನು ನಿನ್ನೆ ಮುಂಜಾನೆಯಿಂದ ಮೋಡ ಕವಿದ ವಾತಾವರಣ ಉಂಟಾಗಿ, ಚಳಿಯ ಜೊತೆ ತುಂತುರ ಹನಿಯಲ್ಲಿ ಜನರು ಗಡಗಡ ನಡುಗಿದ್ದಾರೆ.

    ಅತ್ತ ನಂದಿ ಬೆಟ್ಟದಲ್ಲಿ ಮಂಜುಮುಸುಕಿದ ವಾತಾವರಣ ಪ್ರವಾಸಿಗರ ಚಿತ್ತಾಕರ್ಷಿಸಿದೆ. ಇತ್ತ ಕಾಫಿನಾಡು ಚಿಕ್ಕಮಗಳೂರಲ್ಲಿ ಚುಮುಚುಮು ಚಳಿಯ ನಡುವೆ ದತ್ತಪೀಠದಲ್ಲಿ ನಡೆಯುತ್ತಿರುವ ಉತ್ಸವದಲ್ಲಿ ಭಕ್ತರು ಪಾಲ್ಗೊಂಡು ಪೂಜೆ ಪುನಸ್ಕಾರ ನೆರವೇರಿಸಿದ್ರು. ಇದನ್ನೂ ಓದಿ: ರಾಜ್ಯದಲ್ಲಿ ಅಪರಾಧಿಗಳಿಗೆ ಜಾಗವಿಲ್ಲ – ಹರಿಯಾಣ ಸಿಎಂ ಖಡಕ್ ವಾರ್ನಿಂಗ್

    ಮಂಜಿನಿಂದ ಆವೃತವಾಗಿರುವ ವಿಶ್ವವಿಖ್ಯಾತ ನಂದಿಗಿರಿಧಾಮ, ಎದುರಗಡೆ ಇರೋ ವ್ಯಕ್ತಿಯೂ ಕಣ್ಣಿಗೆ ಕಾಣದಷ್ಟು ಮೈಗೆ ಹೊದ್ದುಕೊಂಡಿರೋ ಮಂಜು, ಮಂಜಿನ ನಡುವೆಯೇ ಪ್ರೇಮಿಗಳ ಕಲರವ, ಅರಳಿ ನಿಂತ ಹೂಗಳು, ಹಚ್ಚು ಹಸುರಾಗಿ ಸಂಭ್ರಮಿಸುತ್ತಿರೋ ಗಿಡ ಮರಗಳು, ತೊಟಕ್ ತೊಟಕ್ ಅಂತ ಮರ ಗಿಡಗಳಿಂದ ಜಾರಿ ಬೀಳುವ ಇಬ್ಬನಿಯ ಹನಿಗಳ ಸದ್ದು, ಇದರ ನಡುವೆಯೇ ಪ್ರೇಮಿಗಳ ಪಿಸುಮಾತು ಅಬ್ಬಬ್ಬಾ ನಂದಿಬೆಟ್ಟ ಕೇವಲ ಬೆಟ್ಟವಲ್ಲ ಅದೊಂದು ನಿಸರ್ಗದ ಗಣಿ, ಪ್ರಕೃತಿಯ ಸೌಂದರ್ಯಕ್ಕೆ ಸಾಟಿಯೇ ಇಲ್ಲ ಎನ್ನುವಂತ ಸ್ವರ್ಗಧಾಮ..

    ಹೌದು. ಚಳಿಗಾಲ ಆರಂಭವಾಗುತ್ತಿದ್ದಂತೆ ನಂದಿಬೆಟ್ಟಕ್ಕೆ ಮಂಜು ಆವೃತವಾಗಲು ಆರಂಭವಾಗುತ್ತದೆ, ಅದ್ರಲ್ಲೂ ಚಳಿಗಾಲದಲ್ಲಿ ಹೆಚ್ಚಾಗಿ ಪ್ರವಾಸಿಗರು, ಚಾರಣಿಗರು, ಪ್ರಕೃತಿ ಪ್ರಿಯರು ನಂದಿಬೆಟ್ಟಕ್ಕೆ ಆಗಮಿಸ್ತಾರೆ. ಅದ್ರಲ್ಲೂ ಈಗ ಸೈಕ್ಲೋನ್ ಬೇರೆ ಇದ್ರಿಂದ ವಿಶ್ವವಿವಿಖ್ಯಾತ ನಂದಿಗಿರಿಧಾಮ ಮಂಜನ್ನೇ ಹೊದ್ದುಕೊಂಡು ಮಲಗಿದಂತೆ ಭಾಸವಾಗುತ್ತಿದ್ದು, ಮಂಜಿನ ನಡುವೆಯೇ ಪ್ರವಾಸಿಗರು ಕುಣಿದು ಕುಪ್ಪಳಿಸುತ್ತಿದ್ದಾರೆ. ಪೋಟೋ, ಸೆಲ್ಫಿ ತಗೊಂಡು ಸಖತ್ ಎಂಜಾಯ್ ಮಾಡ್ತಿದ್ದು, ನಂದಿಬೆಟ್ಟದ ಸೌಂದರ್ಯಕ್ಕೆ ಮಾರು ಹೋಗಿದ್ದಾರೆ. ಇದನ್ನೂ ಓದಿ: ಚಾಮುಂಡಿ ದೇವಿಗೆ ಕೊಟ್ಟ ಹರಕೆ ಸೀರೆ ಕಾಳಸಂತೆಯಲ್ಲಿ ಮಾರಾಟ ಆರೋಪ – ಸ್ನೇಹಮಯಿ ಕಷ್ಣ ದೂರು

    ದತ್ತಪೀಠದಲ್ಲಿ ಮಂಜು.. ತುಂತುರು ಮಳೆ:
    ಅತ್ತ, ಕಾಫಿನಾಡು ಚಿಕ್ಕಮಗಳೂರಿಗೂ ಚಂಡಮಾರುತದ ಎಫೆಕ್ಟ್ ತಟ್ಟಿದೆ. ದಟ್ಟ ಮಂಜಿನ ನಡುವೆ ತುಂತುರು ಮಳೆ ದತ್ತಭಕ್ತರನ್ನು ಗಢಗಢ ನಡುಗುವಂತೆ ಮಾಡಿದೆ. ದತ್ತಜಯಂತಿ ಅಂಗವಾಗಿ ಅನುಸೂಯ ದೇವಿ ದರ್ಶನ ಪಡೆಯಲು ಆಗಮಿಸಿದ ಸಾವಿರಾರು ಮಹಿಳೆಯರು.. ಚಳಿ ಮಳೆಯಲ್ಲಿ ನಡುಗುತ್ತಲೇ ದೇವಿ ದರ್ಶನ ಪಡೆದಿದ್ದಾರೆ. ಇದನ್ನೂ ಓದಿ: ಇಂದಿನಿಂದ ಮಹಾಕುಂಭ ಮೇಳ – 5,500 ಕೋಟಿ ಮೊತ್ತದ ಯೋಜನೆಗಳಿಗೆ ಪ್ರಧಾನಿ ಮೋದಿಯಿಂದ ಚಾಲನೆ

  • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯದ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯದ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ (Bay of Bengal) ವಾಯುಭಾರ ಕುಸಿತದ ಪರಿಣಾಮ ಇಂದು (ಡಿ.12) ರಾಜ್ಯದ 9 ಜಿಲ್ಲೆಗಳಿಗೆ ಹವಾಮಾನ ಇಲಾಖೆ (Indian Meteorological Department) ಯಲ್ಲೋ ಅಲರ್ಟ್ ಘೋಷಿಸಿದೆ.ಇದನ್ನೂ ಓದಿ:ಆತ್ಮಾಹುತಿ ಬಾಂಬ್‌ ದಾಳಿ – ತಾಲಿಬಾನ್‌ ಪ್ರಭಾವಿ ಸಚಿವ ಸಾವು

    ಬೆಂಗಳೂರು (Bengaluru) ನಗರ ಸೇರಿದಂತೆ ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ರಾಮನಗರ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

    ದಕ್ಷಿಣ ಒಳನಾಡಿನ ಜಿಲ್ಲೆಗಳ ಅನೇಕ ಕಡೆ ಸಾಧಾರಣ ಮಳೆಯಾಗುವ ಸಾಧೆತೆಯಿದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆ ಮಳೆಯಾಗಲಿದೆ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ.

    ಬೆಂಗಳೂರಲ್ಲಿ ಎಲ್ಲೆಲ್ಲಿ ಮಳೆ?
    ಕೆ ಆರ್ ಸರ್ಕಲ್, ವಿಧಾನಸೌಧ, ಚಾಲುಕ್ಯ ಸರ್ಕಲ್, ಮೆಜೆಸ್ಟಿಕ್, ಕಾರ್ಪೊರೇಷನ್, ಎಂ.ಜಿ ರೋಡ್, ಹಲಸೂರು, ಶೇಷಾದ್ರಿಪುರಂ, ಮಲ್ಲೇಶ್ವರಂ, ರಾಜಾಜಿನಗರ ಸೇರಿದಂತೆ ಹಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ.ಇದನ್ನೂ ಓದಿ: ಜೈಲಿಂದ ಹೊರಬಂದು ಅತ್ಯಾಚಾರ ಸಂತ್ರಸ್ತೆಯ ಹತ್ಯೆ – ಮೃತದೇಹ ಕತ್ತರಿಸಿ ನದಿಗೆಸೆದ ಹಂತಕ

  • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಚೆನ್ನೈನಲ್ಲಿ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಚೆನ್ನೈನಲ್ಲಿ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ

    – ಐಟಿ ಉದ್ಯೋಗಿಗಳಿಗೆ ವರ್ಕ್‌ ಫ್ರಮ್‌ ಹೋಮ್‌ಗೆ ಸೂಚನೆ

    ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡಿನಲ್ಲಿ (Tamil Nadu) ಧಾರಾಕಾರ (Rain) ಮಳೆಯಾಗುತ್ತಿದೆ. ಮಳೆಯ ಪರಿಣಾಮ ಚೆನ್ನೈ (Chennai) ಸೇರಿದಂತೆ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಇಂದು (ಮಂಗಳವಾರ) ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ರಜೆ ಘೋಷಿಸಿದ್ದಾರೆ.

    ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಿಗೆ ಈ ಆದೇಶ ಅನ್ವಯಿಸುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮುಂದಿನ ಕೆಲವು ದಿನಗಳ ಕಾಲ ತಮಿಳುನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯನ್ನೂ ನೀಡಿದೆ. ಈ ಜಿಲ್ಲೆಗಳ ಐಟಿ ಕಂಪನಿಗಳ ಉದ್ಯೋಗಿಗಳಿಗೆ ಅಕ್ಟೋಬರ್ 15 ರಿಂದ 18ರವರೆಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವ ಸಲಹೆಯನ್ನು ನೀಡುವಂತೆ ಅಧಿಕಾರಿಗಳಿಗೆ ಸ್ಟಾಲಿನ್ ಸೂಚನೆ ನೀಡಿದ್ದಾರೆ.

    ಮಳೆಯಾಗುತ್ತಿರುವ ಭಾಗಗಳಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಹಾಯವಾಣಿ ಆರಂಭಿಸಿದೆ. ಸಹಯಾಕ್ಕಾಗಿ 1070, ಜಿಲ್ಲಾ ಸಹಾಯವಾಣಿ 1077, ವಾಟ್ಸಪ್‌ ಸಂಖ್ಯೆ 9445869848ಕ್ಕೆ ಸಂಪರ್ಕಿಸಲು ಕೋರಲಾಗಿದೆ.

    ಅ.14ರ ರಾತ್ರಿ ತಿರುವಳ್ಳೂರಿನಲ್ಲಿ ಭಾರೀ ಮಳೆ ದಾಖಲಾಗಿದ್ದು, ಪೊನ್ನೇರಿ ರೈಲ್ವೆ ಸುರಂಗಮಾರ್ಗ ಸೇರಿದಂತೆ ನಗರದ ಹಲವು ಭಾಗಗಳು ಜಲಾವೃತವಾಗಿದೆ. ಇದರ ಬೆನ್ನಲ್ಲೇ ಸಿಎಂ ಸ್ಟಾಲಿನ್ ಅವರು ತೀವ್ರ ಮಳೆಯಿಂದ ಉಂಟಾದ ಹಾನಿಯ ಪರಿಶೀಲನೆಗೆ ತಿರುವಳ್ಳೂರಿನ ಕೆಲವು ಭಾಗಗಳಿಗೆ ಭೇಟಿ ನೀಡಿದರು. ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರು ರೆಡ್ ಅಲರ್ಟ್‌ನಲ್ಲಿರುವ ಚೆನ್ನೈನ ಕೆಲವು ಭಾಗಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.

    ಭಾರೀ ಮಳೆಯ ಅವಧಿಯಲ್ಲಿ ನಾಗರಿಕರ ಸಂಚಾರಕ್ಕೆ ಹೆಚ್ಚಿನ ಮೆಟ್ರೋ ರೈಲು ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಚೆನ್ನೈ ಮೆಟ್ರೋ ರೈಲು ಸೇವೆ ಘೋಷಿಸಿದೆ.

    ಭಾರೀ ಮಳೆಯ ಹಿನ್ನೆಲೆಯಲ್ಲಿ ತಮಿಳುನಾಡಿನ 10 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಧರ್ಮಪುರಿ, ಸೇಲಂ, ನೀಲಗಿರಿ, ಈರೋಡ್, ನಾಮಕ್ಕಲ್, ಅರಿಯಲೂರ್, ಪೆರಂಬಲೂರ್, ತಿರುಚಿರಾಪಳ್ಳಿ, ಕರೂರ್, ತಿರುಪ್ಪೂರ್, ಕೊಯಮತ್ತೂರು, ದಿಂಡಿಗಲ್, ಪುದುಕ್ಕೊಟ್ಟೈ, ನಾಗಪಟ್ಟಣಂ, ಶಿವಗಂಗೈ ಮತ್ತು ರಾಮನಾಥಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಅ.15-17ರವರೆಗೆ ತಮಿಳುನಾಡು ಕರಾವಳಿಯ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

  • ಬೆಂಗಳೂರಿನಲ್ಲಿ ರಾತ್ರಿ ಭಾರೀ ಮಳೆ

    ಬೆಂಗಳೂರಿನಲ್ಲಿ ರಾತ್ರಿ ಭಾರೀ ಮಳೆ

    ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಬೆಂಗಳೂರಿನಲ್ಲಿ (Bengaluru Rain) ರಾತ್ರಿ ಭಾರೀ ಮಳೆ (Heavy Rain) ಸುರಿದಿದೆ.

    ಮಲ್ಲೇಶ್ವರಂ, ರಾಜಾಜಿನಗರ, ಚಂದ್ರ ಲೇಔಟ್, ಯಶವಂತಪುರ, ಕಾರ್ಪೋರೇಶನ್, ಚಾಮರಾಜಪೇಟೆ, ಪ್ಯಾಲೇಸ್ ಗುಟ್ಟಹಳ್ಳಿ, ಮಹಾಲಕ್ಷ್ಮೀ ಲೇಔಟ್, ಗೊರಗುಂಟೆಪಾಳ್ಯ,ಪೀಣ್ಯ, ಮತ್ತಿಕೇರೆ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಇದನ್ನೂ ಓದಿ: ಬದ್ಲಾಪುರ ಶಾಲೆಯಲ್ಲಿ ದೌರ್ಜನ್ಯ – ಕಾಮುಕನನ್ನು ಗುಂಡಿಕ್ಕಿ ಹತ್ಯೆಗೈದ ಪೊಲೀಸರು

     

    ಮಳೆಯಿಂದಾಗಿ ಹಲವೆಡೆ ಟ್ರಾಫಿಕ್ ಜಾಮ್ (Traffic Jam) ಉಂಟಾಗಿದ್ದು ಫ್ಲೈ ಓವರ್, ಅಂಡರ್ ಪಾಸ್ ಕೆಳಗೆ ದ್ವಿಚಕ್ರ ವಾಹನ ಸವಾರರು ನಿಂತಿದ್ದರು.

    ನಾಳೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಬೀದರ್ ಸೇರಿದಂತೆ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಅಲರ್ಟ್ ನೀಡಲಾಗಿದೆ.

     

  • ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ – ರಾಜ್ಯದಲ್ಲಿ ಮುಂದಿನ 3 ದಿನ ಮಳೆ

    ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ – ರಾಜ್ಯದಲ್ಲಿ ಮುಂದಿನ 3 ದಿನ ಮಳೆ

    ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಅರಬ್ಬೀ ಸಮುದ್ರದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಮೇಲ್ಮೈ ಸುಳಿಗಾಳಿ ಹಿನ್ನೆಲೆ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇದನ್ನೂ ಓದಿ: ಅಮರನಾಥ ಯಾತ್ರೆಗೆ ಕೆಲವೇ ದಿನ – ಗಡಿಯಲ್ಲಿ ಶೋಧ ಕಾರ್ಯ ಚುರುಕು

    RAIN IN BENGALURU

    ಬೆಂಗಳೂರಿನಲ್ಲಿ ಶನಿವಾರವೇ ಮಳೆ ಪ್ರಾರಂಭವಾಗಿದ್ದು, ಯಶವಂತಪುರ, ಮಲ್ಲೇಶ್ವರಂ, ರಾಜಾಜಿನಗರ, ಮಹಾಲಕ್ಷ್ಮೀ ಲೇಔಟ್ ಹಾಗೂ ಗೊರಗುಂಟೆ ಪಾಳ್ಯದ ಸುತ್ತಮುತ್ತ ಮಳೆಯಾಗಿದೆ. ವಾತಾವರಣ ಇದೇ ರೀತಿ 3 ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮುಂಬೈಯಲ್ಲಿ ಜೂನ್ 30ರವರೆಗೂ 144 ಸೆಕ್ಷನ್ ಜಾರಿ

    Live Tv

  • ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಗುಡುಗು ಸಹಿತ ಮಳೆ

    ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಗುಡುಗು ಸಹಿತ ಮಳೆ

    ಬೆಂಗಳೂರು: ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

    ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. 24 ರಿಂದ 28 ರವರೆಗೆ ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:  ಕದ್ದುಮುಚ್ಚಿ ಮದುವೆ ಆಗಿಲ್ಲ, ಬಾಡಿಗೆ ತಾಯಿ ಸುಳ್ಳು : ನಯನತಾರಾ 

    ಈ ಭಾಗದಲ್ಲಿ 24, 25 ರಂದು ಗುಡುಗು ಸಿಡಿಲಿನ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂ.ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯಲ್ಲಿ 24 ರಿಂದ 26 ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಲ್ಲೇಶ್ವರಂ 18ನೇ ಅಡ್ಡರಸ್ತೆ ಮೈದಾನದಲ್ಲಿ ವಾಕಿಂಗ್ ಪಥ ನಿರ್ಮಾಣ ಇಲ್ಲ: ಅಶ್ವತ್ಥನಾರಾಯಣ

    27, 28ರಂದು ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಗದಗ, ಹಾವೇರಿ, ಬಾಗಲಕೋಟೆ, ಜಿಲ್ಲೆಗಳಲ್ಲಿ 24 ರಿಂದ 28ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

  • ಬೆಂಗಳೂರು ಸಹಿತ ರಾಜ್ಯದ ವಿವಿಧೆಡೆ ವರುಣನ ಸಿಂಚನ

    ಬೆಂಗಳೂರು ಸಹಿತ ರಾಜ್ಯದ ವಿವಿಧೆಡೆ ವರುಣನ ಸಿಂಚನ

    ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ನಗರ ಸಹಿತ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿದಿದೆ.

    ಬೆಂಗಳೂರು ನಗರದ ವಿಜಯನಗರ, ಸುಂಕದಕಟ್ಟೆ, ಕಾಮಾಕ್ಷಿ ಪಾಳ್ಯ, ಕೆಂಗೇರಿ, ಯಶವಂತಪುರ, ಮೈಸೂರು ರೋಡ್ ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗಿದೆ. ಇತ್ತ ಹಾಸನ, ಹಾವೇರಿ, ಚಿಕ್ಕೋಡಿ, ಮಡಿಕೇರಿ ಸೇರಿದಂತೆ ಕೆಲ ಜಿಲ್ಲೆಗಳಲ್ಲೂ ವರುಣ ತಂಪೆರೆದಿದ್ದಾನೆ. ಇದನ್ನೂ ಓದಿ: ಖಾಸಗಿ ಬಸ್‍ಗಳ ಲೈಸನ್ಸ್ ರದ್ದು ಮಾಡುತ್ತೇವೆ: ಶ್ರೀರಾಮುಲು

    ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಕೆಲವು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಇದು ಚಂಡಮಾರುತವಾಗಿ ಬದಲಾವಣೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳನ್ನ ಹೊರತುಪಡಿಸಿ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ. ಮಾರ್ಚ್ 20 ರಂದು ದಾವಣಗೆರೆ, ಚಿತ್ರದುರ್ಗ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. 20, 21 ರಂದು ಕರಾವಳಿ ಭಾಗದಲ್ಲಿ, ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿಯಲ್ಲಿ 20, 21 ರಂದು ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ. ಇದನ್ನೂ ಓದಿ: ವಾಯುಭಾರ ಕುಸಿತದಿಂದ ಬಂಗಾಳಕೊಲ್ಲಿಯಲ್ಲಿ ‘ಅಸನಿ’ ಚಂಡಮಾರುತ

    ಇಂದಿನಿಂದ ಮೂರು ದಿನ ರಾಜ್ಯದ ಬಹುತೇಕ ಕಡೆ ಮಳೆ ಸಾಧ್ಯತೆ ಇದ್ದು, ಇಂದು ಮತ್ತು ನಾಳೆ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ.

  • ವಾಯುಭಾರ ಕುಸಿತದಿಂದ ಬಂಗಾಳಕೊಲ್ಲಿಯಲ್ಲಿ ‘ಅಸನಿ’ ಚಂಡಮಾರುತ

    ವಾಯುಭಾರ ಕುಸಿತದಿಂದ ಬಂಗಾಳಕೊಲ್ಲಿಯಲ್ಲಿ ‘ಅಸನಿ’ ಚಂಡಮಾರುತ

    ಟುಟಿಕೋರಿನ್: ವಾಯುಭಾರ ಕುಸಿತದಿಂದ ಬಂಗಾಳಕೊಲ್ಲಿಯಲ್ಲಿ ಭಾನುವಾರ ‘ಅಸನಿ’ ಚಂಡಮಾರುತವಾಗಲಿದೆ ಎಂದು ತಜ್ಞರು ಸೂಚನೆ ಕೊಟ್ಟಿದ್ದಾರೆ.

    ಮಾರ್ಚ್ 21ಕ್ಕೆ ಅಂಡಮಾನ್ ಮತ್ತು ನಿಕೋಬರ್ ದ್ವೀಪಕ್ಕೆ ‘ಅಸನಿ’ ಚಂಡಮಾರುತ ಅಪ್ಪಳಿಸುತ್ತೆ ಎಂದು ಭಾರತೀಯ ಹವಾಮಾನ ಇಲಾಖೆ(ಐಂಡಿ) ಮುನ್ಸೂಚನೆಯನ್ನು ಕೊಟ್ಟಿದೆ. ಇದನ್ನೂ ಓದಿ: ಭಗವದ್ಗೀತೆ ಯಾವುದೇ ಧಾರ್ಮಿಕ ಗ್ರಂಥವಲ್ಲ: ಪ್ರತಾಪ್ ಸಿಂಹ

    ʼಅಸನಿ’ ಚಂಡಮಾರುತ ಮೊದಲು ಅಂಡಮಾನ್ ಮತ್ತು ನಿಕೋಬರ್‌ ನಲ್ಲಿ ಪ್ರಾರಂಭವಾಗಿ ಉತ್ತರಾಭಿಮುಖವಾಗಿ ಸಾಗಲಿದ್ದು, ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ ಉತ್ತರ ಕರಾವಳಿಯತ್ತ ಬರುತ್ತೆ ಎಂದು ಸೂಚನೆ ಕೊಟ್ಟಿದೆ.

    Cyclone Asani, First In 2022, To Form Over Bay Of Bengal Next Week; All You Need To Know

    ಈ ಹಿನ್ನೆಲೆ ಬಂಗಾಳಕೊಲ್ಲಿ ಮತ್ತು ಅಂಡಮಾನ್ ಸಮುದ್ರದಲ್ಲಿ ಮೀನುಗಾರರು ಮಾರ್ಚ್ 20 ರಿಂದ ಮೂರು ದಿನಗಳ ಕಾಲ ಮೀನುಗಾರಿಕೆ ಮಾಡಬಾರದು ಎಂದು ಎಚ್ಚರಿಕೆ ಕೊಟ್ಟಿದೆ. ಅದರಲ್ಲಿಯೂ ಅಂಡಮಾನ್ ಮತ್ತು ನಿಕೋಬರ್ ದ್ವೀಪದ ತೀರ ಪ್ರದೇಶಗಳಲ್ಲಿ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಘೋಷಣೆ ಮಾಡಬೇಕು. ಆಯಕಟ್ಟಿನ ಪ್ರದೇಶದಲ್ಲಿ ವಿಪತ್ತು ನಿರ್ವಹಣಾ ತಂಡಗಳನ್ನು ನಿಯೋಜಿಸಬೇಕು ಎಂದು ಸಂಸದ ಕುಲದೀಪ್ ರೈ ಅಗ್ರಹಿಸಿದ್ದಾರೆ. ಇದನ್ನೂ ಓದಿ: ಭಗವದ್ಗೀತೆ ಅಳವಡಿಸುವುದು ಕೊರೊನಾ ಮಹಾಮಾರಿಗಿಂತ ಮಾರಕ: ತನ್ವೀರ್ ಸೇಠ್

    ಮಾರ್ಚ್ 19(ಇಂದು) ಮತ್ತು 21ರಂದು ಶಾಲಾ ಕಾಲೇಜಯಗಳಿಗೆ ರಜೆ ಫೋಷಿಸುವಂತೆ ಲೆಫ್ಟಿನೆಂಟ್ ಗವರ್ನರ್ ನಿವೃತ್ತ ಅಡ್ಮಿರಲ್ ಡಿ.ಕೆ.ಜೋಶಿಗೆ ಪತ್ರ ಬರೆದಿದ್ದಾರೆ.

  • ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಸಾಧ್ಯತೆ

    ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಸಾಧ್ಯತೆ

    ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

    ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಮತ್ತು ವಾಯುಭಾರ ಕುಸಿತ ಕಾಣಿಸಿಕೊಂಡಿರುವ ಹಿನ್ನೆಲೆ ಮುಂದಿನ ಮೂರು ದಿನ ಮಳೆಯ ಆರ್ಭಟ ಇರಲಿದೆ. ಜೊತೆಗೆ ಬೆಂಗಳೂರಿನಲ್ಲಿಯೂ ವ್ಯಾಪಾಕವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಬೆಂಗ್ಳೂರಿನ ಹಲವೆಡೆ ಧಾರಾಕಾರ ಮಳೆ- ವಾಹನ ಸವಾರರ ಪರದಾಟ

    ಕಳೆದ ಒಂದು ವಾರದಿಂದ ಬಿಡುವು ನೀಡಿದ್ದ ಮಳೆರಾಯ ಇದೀಗ ಮತ್ತೆ ಅಬ್ಬರಿಸಲು ಶುರು ಮಾಡಿದ್ದಾನೆ. ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಇಡೀ ಬೆಂಗಳೂರು ಅಕ್ಷರಶಃ ತತ್ತರಿಸಿ ಹೋಗಿದೆ. ಅಲ್ಲದೇ ನಗರದ ಹಲವಾರು ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದು, ಅನೇಕ ವಾಹನಗಳು ನೀರಿನಲ್ಲಿ ಮುಳುಗಿ ಹೋಗಿದೆ.

    ನಗರದ ಹಲವಾರು ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ಮಳೆಯ ನೀರು ನುಗ್ಗಿದ್ದು, ರಾತ್ರಿ ಎಲ್ಲ ಜನ ನೀರನ್ನು ಮನೆಯಿಂದ ಹೊರಹಾಕಲು ಜಾಗರಣೆ ಮಾಡಿದ್ದಾರೆ. ಮಾಗಡಿ ರಸ್ತೆಯ ಟೋಲ್‍ಗೇಟ್, ಕಸ್ತೂರಬಾ ನಗರ, ಅಶೋಕ ಪಿಲ್ಲರ್, ಜೆ.ಸಿ ರಸ್ತೆ, ಊರ್ವಶಿ ಥಿಯೇಟರ್ ರಸ್ತೆ, ಕೆ.ಆರ್.ಮಾರ್ಕೆಟ್, ಕಾರ್ಪೊರೇಷನ್, ಶಾಂತಿನಗರ, ಲಾಲ್‍ಬಾಗ್, ಸುಧಾಮನಗರ, ಟೌನ್‍ಹಾಲ್, ಮೆಜೆಸ್ಟಿಕ್, ರಾಜಾಜಿನಗರ, ಶಾಂತಿನಗರದಲ್ಲಿ ಭಾರೀ ಮಳೆಯಾಗಿದೆ. ಇದನ್ನೂ ಓದಿ: ವರುಣನ ಆರ್ಭಟಕ್ಕೆ ತತ್ತರಿಸಿದ ಬೆಂಗಳೂರು – ಹಲವು ರಸ್ತೆಗಳು ಜಲಾವೃತ