Tag: ವಾಯುವ್ಯ ಸಾರಿಗೆ ಸಂಸ್ಥೆ

  • ವಾಯುವ್ಯ ಸಾರಿಗೆ ಸಂಸ್ಥೆ ಅಧ್ಯಕ್ಷ ಸ್ಥಾನದಿಂದ ವಿ.ಎಸ್ ಪಾಟೀಲ್‍ರನ್ನು ಕಿತ್ತುಹಾಕಿದ ಸರ್ಕಾರ

    ವಾಯುವ್ಯ ಸಾರಿಗೆ ಸಂಸ್ಥೆ ಅಧ್ಯಕ್ಷ ಸ್ಥಾನದಿಂದ ವಿ.ಎಸ್ ಪಾಟೀಲ್‍ರನ್ನು ಕಿತ್ತುಹಾಕಿದ ಸರ್ಕಾರ

    ಕಾರವಾರ: ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರಾಗಿದ್ದ ವಿ.ಎಸ್ ಪಾಟೀಲ್‍ರನ್ನು ಸ್ಥಾನದಿಂದ ರದ್ದುಪಡಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಅವರು ಅಧಿಸೂಚನೆ ಹೊರಡಿಸಿದ್ದಾರೆ.

    ಬಿಜೆಪಿಯಲ್ಲಿ ಇದ್ದುಕ್ಕೊಂಡು ಈ ಹಿಂದೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿಯಾಗಿದ್ದ ವಿ.ಎಸ್.ಪಾಟೀಲ್ ಪಕ್ಷ ಬಿಡುವ ಇಂಗಿತ ವ್ಯಕ್ತಪಡಿಸಿದ್ದರು. ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಲ್ಲಿ ಹೊರಗಿನಿಂದ ಬಂದವರಿಂದ ನಿತ್ಯವೂ ಅಪಮಾನಿಸುವ ಕೆಲಸವಾಗುತ್ತಿದೆ. ಪಕ್ಷದಿಂದ ನನಗೆ ಅನ್ಯಾಯವಾಗಿಲ್ಲ ಎಂದು ಹೇಳಿಕೊಂಡಿರುವ ಅವರು ಯಲ್ಲಾಪುರ ಕ್ಷೇತ್ರದ ಶಾಸಕ ಹಾಗೂ ಕಾರ್ಮಿಕ ಸಚಿವ ಹೆಬ್ಬಾರ್ ವಿರುದ್ಧ ಪರೋಕ್ಷವಾಗಿ ಅಸಮಾಧಾನ ತೋಡಿಕೊಂಡಿದ್ದಾರೆ.

    ಶೀಘ್ರದಲ್ಲಿ ಕಾಂಗ್ರೆಸ್‍ಗೆ ಸೇರುವುದಾಗಿ ಅವರು ತಿಳಿಸಿದ್ದಾರೆ. ಈ ಹಿಂದೆ 2008 ರಲ್ಲಿ ಬಿಜೆಪಿಯಿಂದ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಅವರು ನಂತರ ಕಾಂಗ್ರೆಸ್ ನಲ್ಲಿ ಹಿಂದೆ ಇದ್ದ ಶಿವರಾಮ್ ಹೆಬ್ಬಾರ್ ವಿರುದ್ಧ ಸೋಲು ಕಂಡಿದ್ದರು. ಇದನ್ನೂ ಓದಿ: ಏಷ್ಯಾಕಪ್‍ನಲ್ಲಿ ಬದ್ಧ ವೈರಿಗಳ ಕಾದಾಟ – 14 ಬಾರಿ ಮುಖಾಮುಖಿ, ಯಾರಿಗೆ ಮೇಲುಗೈ?

    ಕಳೆದ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಬಿಜೆಪಿಗೆ ಬಂದ ಶಿವರಾಮ್ ಹೆಬ್ಬಾರ್ ಗೆ ಸ್ಥಾನ ಬಿಟ್ಟುಕೊಟ್ಟಿದ್ದರು. ಇದೀಗ ವಿ.ಎಸ್.ಪಾಟೀಲ್ ರವರು ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳುತ್ತಿರುವುದು ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಬಲ ಬಂದಂತಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಅಪಘಾತ ಪರಿಹಾರ ಹಣ ನೀಡದ ಸಾರಿಗೆ ಸಂಸ್ಥೆಯ ಬಸ್ ಜಪ್ತಿ!

    ಅಪಘಾತ ಪರಿಹಾರ ಹಣ ನೀಡದ ಸಾರಿಗೆ ಸಂಸ್ಥೆಯ ಬಸ್ ಜಪ್ತಿ!

    ಚಿಕ್ಕೋಡಿ: ಅಪಘಾತದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರಿಗೆ ಪರಿಹಾರದ ಹಣವನ್ನು ನೀಡದ ಕಾರಣ, ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಬಸ್‍ವೊಂದನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

    ಅಪಘಾತದಿಂದಾಗಿ ಮೃತಪಟ್ಟ ಕುಟುಂಬಕ್ಕೆ ಪರಿಹಾರದ ಹಣವನ್ನು ನೀಡದ ಕಾರಣ, ಹುಕ್ಕೇರಿ ಜೆಎಂಎಫ್‍ಸಿ ನ್ಯಾಯಾಲಯ ಬಸ್ ಜಪ್ತಿ ಮಾಡುವಂತೆ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ವಾಯುವ್ಯ ಸಾರಿಗೆ ಸಂಸ್ಥೆಗೆ ಸೇರಿದ್ದ ಬಸ್ ಅನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

    ಏನಿದು ಪ್ರಕರಣ?
    2003ರಲ್ಲಿ ಸವದತ್ತಿ ತಾಲೂಕಿನ ಹಲ್ಕಿ ಕ್ರಾಸ್ ಬಳಿ, ನಿಂತಿದ್ದ ಕ್ರೂಸರ್ ವಾಹನಕ್ಕೆ ವಾಯುವ್ಯ ಸಾರಿಗೆಯ ಬಸ್ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ವಿಜಯ್ ಉಮಾರಾಣಿ (30) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಬಗ್ಗೆ ಸಾರಿಗೆ ಸಂಸ್ಥೆಯ ವಿರುದ್ಧ ಮೃತ ಕುಟುಂಬದ ಸದಸ್ಯರು ದೂರು ನೀಡಿದ್ದರು. ದೂರು ನೀಡಿದ್ದರೂ ಸಹ ಪರಿಹಾರವನ್ನು ಮೃತ ಕುಟುಂಬಕ್ಕೆ ಸಾರಿಗೆ ಸಂಸ್ಥೆ ನೀಡಿರಲಿಲ್ಲ.

    ಪರಿಹಾರ ಮೊತ್ತ ನೀಡದ ಹಿನ್ನೆಲೆಯಲ್ಲಿ ಮೃತ ವಿಜಯ್ ಉಮಾರಾಣಿ ಪೋಷಕರು ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಹುಕ್ಕೇರಿಯ ಜೆಎಂಎಫ್‍ಸಿ ನ್ಯಾಯಾಲಯ ಪರಿಹಾರ ಮೊತ್ತ ನೀಡಿದ ವಾಯುವ್ಯ ಸಾರಿಗೆ ಸಂಸ್ಥೆ ವಿರುದ್ಧ ಬಸ್ ಜಪ್ತಿ ಮಾಡುವಂತೆ ಆದೇಶ ನೀಡಿತ್ತು. ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಯ ಬಸ್ ಅನ್ನು ಜಪ್ತಿ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv