Tag: ವಾಯುಸೇನೆ

  • ಚೀನಿ ಏರ್‌ ಡಿಫೆನ್ಸ್‌ ಜಾಮ್‌ ಮಾಡಿ 23 ನಿಮಿಷದಲ್ಲಿ ಮುಗಿಯಿತು ಕಾರ್ಯಾಚರಣೆ – ಭಾರತದ ದಾಳಿಯ ರೋಚಕ ಕಥೆ ಓದಿ

    ಚೀನಿ ಏರ್‌ ಡಿಫೆನ್ಸ್‌ ಜಾಮ್‌ ಮಾಡಿ 23 ನಿಮಿಷದಲ್ಲಿ ಮುಗಿಯಿತು ಕಾರ್ಯಾಚರಣೆ – ಭಾರತದ ದಾಳಿಯ ರೋಚಕ ಕಥೆ ಓದಿ

    ನವದೆಹಲಿ: ಭಾರತೀಯ ವಾಯು ಸೇನೆ (IAF) ಕೇವಲ 23 ನಿಮಿಷದಲ್ಲಿ ಚೀನಾದ ವಾಯು ರಕ್ಷಣಾ ವ್ಯವಸ್ಥೆಯನ್ನು (Pakistan’s Chinese-Supplied Air Defence Systems) ಬೈಪಾಸ್‌, ಜಾಮ್‌ ಮಾಡಿ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿದ್ದ ವಿಚಾರ ಈಗ ಬಳಕಿಗೆ ಬಂದಿದೆ.

    ಹೌದು. ಭಾರತ  ಮೇ 7ರ ಬುಧವಾರ ನಸುಕಿನ ಜಾವ ಆಪರೇಷನ್‌ ಸಿಂಧೂರ (Operation Sindoor) ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿ 9 ಸ್ಥಳಗಳಲ್ಲಿದ್ದ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ, ಡ್ರೋನ್‌ ದಾಳಿ ನಡೆಸಿತ್ತು. ಈ ದಾಳಿಯನ್ನು ಹೇಗೆ ವ್ಯವಸ್ಥಿತವಾಗಿ ನಡೆಸಲಾಯಿತು ಎಂಬುದರ ಬಗ್ಗೆ ಭಾರತ ಸರ್ಕಾರವೇ ಅಧಿಕೃತವಾಗಿ ಮಾಧ್ಯಮಗಳಿಗೆ ತಿಳಿಸಿದೆ.

     

    ದಾಳಿ ನಡೆಸಿದ್ದು ಹೇಗೆ?
    ಭಾರತೀಯ ವಾಯು ಸೇನೆ ಈ ಬಾರಿ ಪಾಕ್‌ ಆಕ್ರಮಿತ ಕಾಶ್ಮೀರದ (POK) ಒಳಗೆ ನುಗ್ಗಿರಲಿಲ್ಲ. ಭಾರತದ ಒಳಗಡೆಯಿಂದಲೇ ದಾಳಿ ನಡೆಸಿತ್ತು. ಈ ದಾಳಿ ಯಶಸ್ವಿಯಾಗಬೇಕಾದರೆ ಹಲವಾರು ಸವಾಲುಗಳಿತ್ತು. ಇದನ್ನೂ ಓದಿ: ಡ್ರೋನ್‌ಗಳನ್ನು ಧ್ವಂಸ ಮಾಡೋ ಭಾರ್ಗವಾಸ್ತ್ರ ಪ್ರಯೋಗ ಯಶಸ್ವಿ!

    ತನ್ನ ಆಪ್ತ ದೇಶವಾದ ಪಾಕಿಸ್ತಾನಕ್ಕೆ ಚೀನಾ HQ-9 ವಾಯು ರಕ್ಷಣಾ ವ್ಯವಸ್ಥೆಯನ್ನು ನೀಡಿತ್ತು. ಈ ವಾಯು ರಕ್ಷಣಾ ವ್ಯವಸ್ಥೆಯ ಬೇಧಿಸಿ ಭಾರತದ ಕ್ಷಿಪಣಿಗಳು ನಿಗದಿತ ಗುರಿಯನ್ನು ತಲುಪಬೇಕಿತ್ತು. ಸುಮಾರು 300 ಕಿ.ಮೀ ದೂರದಿಂದಲೇ ಬರುತ್ತಿರುವ ಕ್ಷಿಪಣಿ, ಡ್ರೋನ್‌, ಯುದ್ಧ ವಿಮಾನಗಳನ್ನು ಪತ್ತೆ ಹಚ್ಚುವ ಸಾಮರ್ಥ್ಯ HQ-9 ಹೊಂದಿತ್ತು.

    ಪಾಕಿಸ್ತಾನ ಲಾಹೋರ್ ಮತ್ತು ಇತರ ಸ್ಥಳಗಳಲ್ಲಿ ವಾಯು ರಕ್ಷಣಾ ವ್ಯವಸ್ಥೆಗಳನ್ನು ನಿಯೋಜಿಸಿತ್ತು. ಹೀಗಾಗಿ ದಾಳಿ ನಡೆಸುವ ಮೊದಲು ವಾಯು ಸೇನೆ ಮಾಡಿದ ಕೆಲಸ ಏನೆಂದರೆ ಬಹುಕೋಟಿ ವೆಚ್ಚದ ವಾಯು ರಕ್ಷಣಾ ವ್ಯವಸ್ಥೆಯನ್ನು ಬೈಪಾಸ್ ಮಾಡಿ ಜಾಮ್‌ ಮಾಡಿತ್ತು.

    ವಾಯು ರಕ್ಷಣಾ ವ್ಯವಸ್ಥೆಯನ್ನು ಜಾಮ್‌ ಮಾಡಿದ ನಂತರ ಭಾರತ ಪಾಕಿಸ್ತಾನದ ಒಳಗಡೆ ಪ್ರವೇಶ ಮಾಡದೇ ಭಾರತದ ಒಳಗಡೆದಿಂದಲೇ ದಾಳಿ ನಡೆಸಿತು. ರಫೇಲ್‌ ಯುದ್ಧ ವಿಮಾನದ ಮೂಲಕ ಪಾಕ್‌ನಲ್ಲಿರುವ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದರೆ, ಪಾಕ್‌ ಆಕ್ರಮಿತ ಕಾಶ್ಮೀರದ ಒಳಗಡೆ ಇರುವ ಉಗ್ರರ ನೆಲೆಗಳ ಮೇಲೆ ಡ್ರೋನ್‌ ದಾಳಿ ನಡೆಸಿ ಧ್ವಂಸ ಮಾಡಿತು.

    ಈ ದಾಳಿಯ ಸಮಯದಲ್ಲಿ ಭಾರತ ತನ್ನ ಯಾವುದೇ ಸ್ವತ್ತುಗಳನ್ನು ನಷ್ಟವಾಗಿಲ್ಲ. ನಿಖರವಾಗಿ ಕಾರ್ಯಾಚರಣೆ ಮಾಡಿ ಉಗ್ರರ ನೆಲೆಗಳನ್ನು ಧ್ವಂಸ ಮಾಡಿದೆ ಎಂದು ಸರ್ಕಾರ ತಿಳಿಸಿದೆ.

    ಪಾಕ್‌ನಿಂದ ಬರುತ್ತಿದ್ದ ಡ್ರೋನ್‌ ಮತ್ತು ಕ್ಷಿಪಣಿಗಳನ್ನು ತೊಡೆದು ಹಾಕಲು ಬರಾಕ್ -8 ಕ್ಷಿಪಣಿ ವ್ಯವಸ್ಥೆ, ಎಸ್ -400 ಟ್ರಯಂಫ್ ವಾಯು ರಕ್ಷಣಾ ವ್ಯವಸ್ಥೆಗಳು, ಆಕಾಶ್‌ ಕ್ಷಿಪಣಿ ವ್ಯವಸ್ಥೆ ಮತ್ತು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಡ್ರೋನ್ ವಿರೋಧಿ ಉಪಕರಣಗಳನ್ನು ನಿಯೋಜಿಸಲಾಗಿತ್ತು. ಇದರಿಂದಾಗಿ ಮೇ 7 ರ ರಾತ್ರಿ 15 ಭಾರತೀಯ ನಗರಗಳ ಮೇಲೆ ದಾಳಿಗೆ ಮುಂದಾಗಿದ್ದ ಪಾಕ್‌ ಪ್ರಯತ್ನಗಳನ್ನು ಯಶಸ್ವಿಯಾಗಿ ವಿಫಲಗೊಳಿಸಲಾಯಿತು ಎಂದು ಹೇಳಿದೆ. ಇದನ್ನೂ ಓದಿ: Boycott Turkey – ಸೇಬು, ಚೆರ‍್ರಿ, ಮಾರ್ಬಲ್‌ಗಳ ಆಮದು ಬ್ಯಾನ್‌ಗೆ ನಿರ್ಧಾರ

    ಅವಂತಿಪೋರಾ, ಶ್ರೀನಗರ, ಜಮ್ಮು, ಪಠಾಣ್‌ಕೋಟ್, ಅಮೃತಸರ, ಕಪುರ್ತಲಾ, ಜಲಂಧರ್, ಲುಧಿಯಾನ, ಆದಂಪುರ, ಭಟಿಂಡಾ, ಚಂಡೀಗಢ, ನಲಿಯಾ, ಫಲೋಡಿ, ಉತ್ತರಲೈ ಮತ್ತು ಭುಜ್ ಸೇರಿದಂತೆ ಉತ್ತರ ಮತ್ತು ಪಶ್ಚಿಮ ಭಾರತದ ಹಲವಾರು ಮಿಲಿಟರಿ ಗುರಿಗಳ ಮೇಲೆ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಬಳಸಿ ಪಾಕ್‌ ದಾಳಿ ಮಾಡಲು ಪ್ರಯತ್ನಿಸಿತು. ಇವುಗಳನ್ನು ಇಂಟಿಗ್ರೇಟೆಡ್ ಕೌಂಟರ್ ಯುಎಎಸ್ ಗ್ರಿಡ್ ಮತ್ತು ವಾಯು ರಕ್ಷಣಾ ವ್ಯವಸ್ಥೆಗಳಿಂದ ತಟಸ್ಥಗೊಳಿಸಲಾಯಿತು.

    ಮೇ 8 ರ ಬೆಳಗ್ಗೆ ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನದ ಹಲವಾರು ಸ್ಥಳಗಳಲ್ಲಿದ್ದ ವಾಯು ರಕ್ಷಣಾ ರೇಡಾರ್‌ಗಳು ಮತ್ತು ವ್ಯವಸ್ಥೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿತು. ಈ ದಾಳಿಯ ಪರಿಣಾಮ ಲಾಹೋರ್‌ನಲ್ಲಿದ್ದ ವಾಯು ರಕ್ಷಣಾ ವ್ಯವಸ್ಥೆಯನ್ನೇ ನಿಷ್ಕ್ರಿಯಗೊಳಿಸಿತ್ತು.

    ಆಪರೇಷನ್‌ ಸಿಂಧೂರದಲ್ಲಿ ಸ್ವದೇಶಿ ನಿರ್ಮಿತ ವ್ಯವಸ್ಥೆಗಳನ್ನು ಬಳಕೆ ಮಾಡಲಾಗಿದೆ. ಈ ಕಾರ್ಯಾಚರಣೆಯು ಮಿಲಿಟರಿ ಕಾರ್ಯಾಚರಣೆಗಳಲ್ಲಿ ತಾಂತ್ರಿಕ ಸ್ವಾವಲಂಬನೆಯತ್ತ ಸಾಗುತ್ತಿರುವ ಭಾರತದ ಪ್ರಯಾಣದಲ್ಲಿ ಒಂದು ದೊಡ್ಡ ಮೈಲಿಗಲ್ಲು ಎಂದು ಭಾರತ ಸರ್ಕಾರ ಬಣ್ಣಿಸಿದೆ.

  • ಭಾರತ ಡ್ರೋನ್‌ ದಾಳಿ – ನೂರಾರು ಕೋಟಿ ವೆಚ್ಚದಲ್ಲಿ ನವೀಕರಿಸಿದ್ದ ರಾವಲ್ಪಿಂಡಿ ಸ್ಟೇಡಿಯಂಗೆ ಭಾರಿ ಹಾನಿ

    ಭಾರತ ಡ್ರೋನ್‌ ದಾಳಿ – ನೂರಾರು ಕೋಟಿ ವೆಚ್ಚದಲ್ಲಿ ನವೀಕರಿಸಿದ್ದ ರಾವಲ್ಪಿಂಡಿ ಸ್ಟೇಡಿಯಂಗೆ ಭಾರಿ ಹಾನಿ

    – PSL ಪಂದ್ಯ ಆರಂಭಕ್ಕೂ ಮುನ್ನವೇ ಘಟನೆ, ಆದಾಯಕ್ಕೂ ಕುತ್ತು

    ಇಸ್ಲಾಮಾಬಾದ್‌ (ರಾವಲ್ಪಿಂಡಿ): ದೇಶದ 15 ಪ್ರಮುಖ ನಗರಗಳನ್ನು ಗುರಿಯಾಗಿಸಿದ್ದ ಪಾಕಿಸ್ತಾನ, ಭಾರತದ ಡ್ರೋನ್‌ ದಾಳಿಗೆ (Drone Attack) ತತ್ತರಿಸಿದೆ. ಭಾರತದ ಇಂದು ನಡೆಸಿದ ಡ್ರೋನ್‌ ಮತ್ತು ಕ್ಷಿಪಣಿ ದಾಳಿಗೆ ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂನ (Rawalpindi Cricket Stadium) ಒಂದು ಭಾಗವೇ ಛಿದ್ರ ಛಿದ್ರವಾಗಿದೆ.

    ಕೆಲ ದಿನಗಳ ಹಿಂದಷ್ಟೇ ಪಾಕಿಸ್ತಾನ ಚಾಂಪಿಯನ್ಸ್‌ ಟ್ರೋಫಿ (Champions Trophy) ಟೂರ್ನಿಗೆ ಆತಿಥ್ಯ ವಹಿಸಿತ್ತು. ಹೆಚ್ಚಿನ ಸಂಖ್ಯೆಯ ಕ್ರಿಕೆಟ್‌ಪ್ರಿಯರನ್ನು ಸೆಳೆದು ಆದಾಯ ಗಳಿಸಲು ನೂರಾರು ಕೋಟಿ ವೆಚ್ಚದಲ್ಲಿ ರಾವಲ್ಪಿಂಡಿ ಮೈದಾನವನ್ನು ನವೀಕರಿಸಿತ್ತು. ಆದ್ರೆ ಇಂದು ಭಾರತ ನಡೆಸಿದ ದಾಳಿಯಲ್ಲಿ ಸ್ಟೇಡಿಯಂನ ಒಂದು ಭಾಗವೇ ಛಿದ್ರವಾಗಿದೆ. ಕುರಿತ ವಿಡಿಯೋಗಳು ಸೋಷಿಯಲ್‌ ಮೀಡಿಯಾಗಳಲ್ಲಿ ಹರಿದಾಡುತ್ತಿವೆ. ಇದನ್ನೂ ಓದಿ: ಪಾಕ್‌ ಮಿಸೈಲ್‌ಗಳಿಂದ ಭಾರತ ರಕ್ಷಿಸಿದ S-400 ‘ಸುದರ್ಶನ ಚಕ್ರ’- ಏನಿದರ ವಿಶೇಷತೆ?

    PSL ಪಂದ್ಯಕ್ಕೂ ಮುನ್ನವೇ ಘಟನೆ:
    ಡ್ರೋನ್‌ ಅಪ್ಪಳಿಸಿದ ರಾವಲ್ಪಿಂಡಿ ಕ್ರೀಡಾಂಗಣದಲ್ಲಿಂದು ಪಾಕಿಸ್ತಾನ ಸೂಪರ್‌ ಲೀಗ್‌ ಪಂದ್ಯ ನಿಗದಿಯಾಗಿತ್ತು. ರಾತ್ರಿ 8 ಗಂಟೆಗೆ ಪೇಶಾವರ್ ಝಲ್ಮಿ ಮತ್ತು ಕರಾಚಿ ಕಿಂಗ್ಸ್ ತಂಡಗಳ ನಡುವೆ ಪಂದ್ಯ ಆರಂಭವಾಗಬೇಕಿತ್ತು. ಇದೀಗ ಡ್ರೋನ್‌ ಅಪ್ಪಳಿಸಿದ್ದು, ಭದ್ರತಾ ಕಳವಳ ಹೆಚ್ಚಿಸಿದೆ. ದಾಳಿಯ ಬಳಿಕ ಪಂದ್ಯವನ್ನು ಕರಾಚಿಗೆ ಸ್ಥಳಾಂತರಿಸಲು ಸಿದ್ಧತೆ ನಡೆಯುತ್ತಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಪಾಕಿಸ್ತಾನದ HQ-9 ವಾಯು ರಕ್ಷಣಾ ಕ್ಷಿಪಣಿ ಉಡಾವಣಾ ಕೇಂದ್ರಗಳೇ ಉಡೀಸ್‌

    ಇನ್ನೂ ಭಾರತದ ಡ್ರೋನ್‌ ದಾಳಿಯಿಂದ ಆತಂಕಗೊಂಡಿರುವ ಕ್ರಿಕೆಟ್‌ ಪ್ರಿಯರು ಪಂದ್ಯ ವೀಕ್ಷಣೆಗೆ ಹಿಂದೇಟು ಹಾಕಿದ್ದಾರೆ. ಇದು ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌ನ ಆರ್ಥಿಕತೆಗೂ ಪೆಟ್ಟು ನೀಡಿದಂತಾಗಿದೆ. ಇದನ್ನೂ ಓದಿ: India Strikes | ಯುಸ್‌ ನಾಗರಿಕರು ಪಾಕ್‌ ತೊರೆಯುವಂತೆ ಅಮೆರಿಕ ರಾಯಭಾರ ಕಚೇರಿ ಸೂಚನೆ

    ಲಾಹೋರ್‌ ರೆಡಾರ್‌ ಕೇಂದ್ರ ಧ್ವಂಸ
    ಭಾರತದ ನಗರಗಳ ಮೇಲೆ ದಾಳಿ ನಡೆಸಲು ಹೊಂಚು ಹಾಕಿದ್ದ ಪಾಕ್‌ಗೆ ಭಾರತ ದಿಟ್ಟ ಉತ್ತರ ನೀಡಿದೆ. ಭಾರತದ ವಾಯುಸೇನೆಯು ಲಾಹೋರ್‌ನಲ್ಲಿರುವ ರೆಡಾರ್‌ ಕೇಂದ್ರವನ್ನೇ ಧ್ವಂಸ ಮಾಡಿದೆ. ಶೇಖ್‌ಪುರ, ಸಿಯಾಲ್‌ ಕೋಟ್‌, ಗುಜರನ್‌ ವಾಲಾ ಮತ್ತು ನರೊವಾಲಾ ಮತ್ತ ಚಕ್ವಾಲ್‌ ಮೇಲೂ ಭಾರತದ ಕಾಮಕಾಜಿ ಡ್ರೋನ್‌ ದಾಳಿ (Kamikazi Drone Strike) ನಡೆಸಿದೆ. ಒಟ್ಟು 25 ಕ್ಷಿಪಣಿಗಳನ್ನು ಭಾರತ ಹಾರಿಸಿದೆ ಇದರಲ್ಲಿ 7 ಇಸ್ಲಾಮಾಬಾದ್‌ ಮತ್ತು ರಾವಲ್ಪಿಂಡಿಯನ್ನು ಗುರಿಯಾಗಿಸಿವೆ.

  • Kolara | ತಾಂತ್ರಿಕ ದೋಷದಿಂದ ತುರ್ತು ಭೂಸ್ಪರ್ಶ ಮಾಡಿದ್ದ ವಾಯುಪಡೆ ಹೆಲಿಕಾಪ್ಟರ್ ಸುರಕ್ಷಿತವಾಗಿ ಟೇಕಾಫ್

    Kolara | ತಾಂತ್ರಿಕ ದೋಷದಿಂದ ತುರ್ತು ಭೂಸ್ಪರ್ಶ ಮಾಡಿದ್ದ ವಾಯುಪಡೆ ಹೆಲಿಕಾಪ್ಟರ್ ಸುರಕ್ಷಿತವಾಗಿ ಟೇಕಾಫ್

    ಕೋಲಾರ: ತಾಂತ್ರಿಕ ದೋಷದಿಂದ ತುರ್ತು ಭೂಸ್ಪರ್ಶ ಮಾಡಲಾಗಿದ್ದ ಸೇನೆಯ ಹೆಲಿಕಾಪ್ಟರ್ (IAF Helicopter) ರಿಪೇರಿಯಾದ ಬಳಿಕ ಸುರಕ್ಷಿತವಾಗಿ ಟೇಕಾಫ್ ಆಗಿ ಚೆನ್ನೈ ಕಡೆಗೆ ತೆರಳಿದೆ.

    ಭಾನುವಾರ ಯಲಹಂಕದಿಂದ ಚೆನ್ನೈಗೆ ತೆರಳುತ್ತಿದ್ದ ವಾಯುಸೇನೆಯ (Indian Air Force) ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಬಳಿಕ ಕೋಲಾರ (Kolar) ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಕರಪನಹಳ್ಳಿ ಕೆರೆಯ ಬಳಿ ತುರ್ತು ಭೂಸ್ಪರ್ಶ ಮಾಡಲಾಗಿತ್ತು.

    ಈ ವಿಚಾರವನ್ನು ವಾಯುಪಡೆಯ ಅಧಿಕಾರಿಗಳಿಗೆ ತಿಳಿಸಲಾಗಿತ್ತು. ಬಳಿಕ ಸೇನೆಯ ಮತ್ತೊಂದು ಹೆಲಿಕಾಪ್ಟರ್ ಮೂಲಕ ಟೆಕ್ನಿಕಲ್ ತಂಡ ಸ್ಥಳಕ್ಕೆ ಆಗಮಿಸಿ, ಹೆಲಿಕಾಪ್ಟರ್‌ನ ತಾಂತ್ರಿಕ ದೋಷ ಸರಿಪಡಿಸಿದೆ. ಭದ್ರತೆಗಾಗಿ ವಾಯುಪಡೆ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರನ್ನು ಸ್ಥಳಕ್ಕೆ ಕರೆಸಲಾಗಿತ್ತು.

    ಹೆಲಿಕಾಪ್ಟರ್‌ನಲ್ಲಿ ಮೂವರು ವಾಯುಸೇನೆಯ ಪೈಲಟ್‍ಗಳು ತರಬೇತಿ ಪಡೆಯುತ್ತಿದ್ದರು ಎನ್ನಲಾಗಿದೆ. ಸುರಕ್ಷಿತವಾಗಿ ತುರ್ತು ಭೂಸ್ಪರ್ಶ ಮಾಡಿದ ಹಿನ್ನೆಲೆಯಲ್ಲಿ ಮೂವರು ಸೇಫ್ ಆಗಿದ್ದರು. ಇದೀಗ 18 ಗಂಟೆಗಳ ಬಳಿಕ ಹೆಲಿಕಾಪ್ಟರ್ ರಿಪೇರಿಯಾಗಿದ್ದು, ಟೇಕಾಫ್ ಆಗಿದೆ.

    ಹೆಲಿಕಾಪ್ಟರ್ ಲ್ಯಾಂಡ್ ಆಗಿದ್ದ ಸ್ಥಳದಲ್ಲಿ ಯಾವುದೇ ನಷ್ಟ ಇಲ್ಲ ಎಂದು ಪಂಚಾಯಿತಿ ವತಿಯಿಂದ ದೃಢಪಡಿಸಲಾಗಿದೆ.

  • ಅಮೆರಿಕ ಮಷಿನ್ ಕೈಕೊಟ್ಟ ನಂತರ 41 ಕಾರ್ಮಿಕರ ರಕ್ಷಣೆಗೆ ಧಾವಿಸಿದ ವಾಯುಸೇನೆ

    ಅಮೆರಿಕ ಮಷಿನ್ ಕೈಕೊಟ್ಟ ನಂತರ 41 ಕಾರ್ಮಿಕರ ರಕ್ಷಣೆಗೆ ಧಾವಿಸಿದ ವಾಯುಸೇನೆ

    ಡೆಹ್ರಾಡೂನ್: ಕಳೆದ 15 ದಿನಗಳಿಂದ ಉತ್ತರಕಾಶಿಯ (Uttarkashi) ನಿರ್ಮಾಣ ಹಂತದಲ್ಲಿರುವ ಸಿಲ್ಕ್ಯಾರಾ ಸುರಂಗದಲ್ಲಿ (Silkyara Tunnel) ಸಿಲುಕಿರುವ 41 ಕಾರ್ಮಿಕರ ರಕ್ಷಣೆಗೆ ಭಾರತೀಯ ಸೇನೆ ಕೈ ಜೋಡಿಸಿದೆ. ವಾಯುಪಡೆ (Indian Air Force) ಡಿಆರ್‌ಡಿಒ ಉಪಕರಣಗಳನ್ನು ತೆಗೆದುಕೊಂಡು ಘಟನಾ ಸ್ಥಳಕ್ಕೆ ತೆರಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಆಗರ್ ಯಂತ್ರದ ಬ್ಲೇಡ್‍ಗಳು ಅವಶೇಷಗಳ ಅಡಿ ಸಿಲುಕಿದ ಬಳಿಕ, ಸಿಕ್ಕಿಬಿದ್ದ 41 ಕಾರ್ಮಿಕರ ರಕ್ಷಣೆಗೆ ಕೊನೆಯ ಮಾರ್ಗವಾಗಿ ಕೈಯಿಂದ ಕೊರೆಯಲು ತಯಾರಿ ನಡೆಸಲಾಗಿದೆ. ಮಾನವ ಸಂಪನ್ಮೂಲ ಬಳಸಿ ಸುರಂಗದ 10-15 ಮೀಟರ್‍ಗಳನ್ನು ಕೊರೆಯಲು ಸುಮಾರು 18 ಗಂಟೆಗಳ ಕಾಲ ತೆಗೆದುಕೊಳ್ಳಲಿದೆ. ಇದಕ್ಕಾಗಿ ಭಾರತೀಯ ಸೇನೆ, ಕೇಂದ್ರ ಮತ್ತು ರಾಜ್ಯದ ಏಜೆನ್ಸಿಗಳು ಸೇರಿಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮುಂಬೈ ಭಯೋತ್ಪಾದಕ ದಾಳಿಗೆ 15 ವರ್ಷ – ನೆನೆಪಿದೆಯಾ ಆ ಕರಾಳ ದಿನಗಳು..?

    ಅವಶೇಷಗಳ ಅಡಿ ಸಿಲುಕಿರುವ ಆಗರ್ ಯಂತ್ರದ ಭಾಗಗಳನ್ನು ಕತ್ತರಿಸಿ ತೆಗೆಯಲು ಭಾನುವಾರ ಹೈದರಾಬಾದ್‍ನಿಂದ ಪ್ಲಾಸ್ಮಾ ಕಟ್ಟರ್ ತರಿಸಿ ಯತ್ನಿಸಲಾಗಿದೆ. ಅಲ್ಲದೇ ಯಂತ್ರದ ಮೂಲಕ ಕಾರ್ಯಾಚರಣೆ ಮಾಡುವುದನ್ನು ನಿಲ್ಲಿಸಿ, ಕಾರ್ಮಿಕರನ್ನು ಕರತರಲು ಪೈಪ್‍ನ್ನು ಕೈಯ್ಯಾರೆ ತಳ್ಳಲಾಗುತ್ತಿದೆ. ಇದರೊಂದಿಗೆ ಲಂಬವಾಗಿ ಕೊರೆಯಲು ಒಂದು ಯಂತ್ರ ಬಳಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಅವಶೇಷಗಳ ಅಡಿ ಸಿಲುಕಿರುವ ಕಾರ್ಮಿಕರಿಗೆ ಪೈಪ್‍ಗಳ ಮೂಲಕ ಆಹಾರ, ಔಷಧ ಹಾಗೂ ನೀರನ್ನು ಸರಬರಾಜು ಮಾಡಲಾಗುತ್ತಿದ್ದು, ಅವರು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ನ.12 ರಂದು ಉತ್ತರಕಾಶಿಯಲ್ಲಿ ಬೆ.5 ಗಂಟೆ ಸುಮಾರಿಗೆ ನಿರ್ಮಾಣ ಹಂತದಲ್ಲಿರುವ ಸಿಲ್ಕ್ಯಾರಾ-ಬರ್ಕೋಟ್ ಸುರಂಗದ ಒಂದು ಭಾಗವು ಕುಸಿದಿತ್ತು. ಇದರಿಂದಾಗಿ ಕೆಲಸ ಮಾಡುತ್ತಿದ್ದ 41 ಕಾರ್ಮಿಕರು ಅವಶೇಷಗಳೊಳಗೆ ಸಿಲುಕಿಕೊಂಡಿದ್ದಾರೆ. ಸಿಲುಕಿದವರ ರಕ್ಷಣೆಗೆ ಕಳೆದ 15 ದಿನಗಳಿಂದ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ. ಇದನ್ನೂ ಓದಿ: 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮತ್ತೆ ಸ್ಥಗಿತ

  • ಭಾರತಕ್ಕೆ ಸ್ಪೇನ್‌ನ C-295 ಮಿಲಿಟರಿ ವಿಮಾನ ಹಸ್ತಾಂತರ – ಏನಿದರ ವಿಶೇಷ?

    ಭಾರತಕ್ಕೆ ಸ್ಪೇನ್‌ನ C-295 ಮಿಲಿಟರಿ ವಿಮಾನ ಹಸ್ತಾಂತರ – ಏನಿದರ ವಿಶೇಷ?

    ನವದೆಹಲಿ: ಸ್ಪೇನ್‌ನಲ್ಲಿ (Spain) ನಿರ್ಮಾಣವಾದ C-295 ಮಿಲಿಟರಿ ವಿಮಾನವನ್ನು (Military Aircraft) ಭಾರತಕ್ಕೆ ಹಸ್ತಾಂತರಿಸಲಾಗಿದೆ. ಸ್ಪೇನ್‌ನಲ್ಲಿರುವ ವಾಯುಸೇನೆ ಮುಖ್ಯಸ್ಥ ವಿವೇಕ್ ರಾಮ್ ಚೌಧರಿ ವಿಮಾನವನ್ನು ಸ್ವೀಕರಿಸಿದ್ದಾರೆ. ಸೆಪ್ಟೆಂಬರ್ 25ರಂದು ಉತ್ತರ ಪ್ರದೇಶದಲ್ಲಿರುವ ಹಿಂಡನ್ ವಾಯುನೆಲೆಯಲ್ಲಿ ಹೊಸ ವಿಮಾನ ಲ್ಯಾಂಡಿಂಗ್ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

    ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ವಾಯುಸೇನೆಯ ಹಳೆಯದಾದ Avro-748 ವಿಮಾನಗಳನ್ನು ಬದಲಿಸಲು 56 C-295 ವಿಮಾನಗಳನ್ನು ಖರೀದಿಸಲು ಏರ್‌ಬಸ್ ಡಿಫೆನ್ಸ್ ಮತ್ತು ಸ್ಪೇನ್‌ನೊಂದಿಗೆ ಭಾರತವು 21,000 ಕೋಟಿ ರೂ.ಗಳ ಒಪ್ಪಂದವನ್ನು ಮಾಡಿಕೊಂಡಿತ್ತು. 56 ವಿಮಾನಗಳಿಗೆ ಎರಡು ದೇಶಗಳ ನಡುವೆ ಒಪ್ಪಂದ ನಡೆದಿದೆ. 16 ವಿಮಾನಗಳು ಸ್ಪೇನ್ ನಿರ್ಮಾಣ ಮಾಡಲಿದ್ದು, ಅದೇ ತಂತ್ರಜ್ಞಾನ ಬಳಸಿಕೊಂಡು 40 ವಿಮಾನಗಳನ್ನು ಗುಜರಾತ್ ವಡೋದರದಲ್ಲಿ ಉತ್ಪಾದನೆಯಾಗಲಿವೆ. ಇದನ್ನೂ ಓದಿ: ಉದಯನಿಧಿ ಸ್ಟಾಲಿನ್ ವಿರುದ್ಧ ಮುಂಬೈನಲ್ಲಿ ಎಫ್‌ಐಆರ್ ದಾಖಲು

    ಸಿ-295 ಒಂದು ಸಾರಿಗೆ ವಿಮಾನವಾಗಿದ್ದು ಕಡಿಮೆ ಸ್ಥಳದಲ್ಲಿ ಟೇಕಾಫ್ ಮತ್ತು ಲ್ಯಾಂಡಿಂಗ್ ಸಾಮರ್ಥ್ಯವನ್ನು ಹೊಂದಿದೆ, ಇದು ಒಂಬತ್ತು ಟನ್ ಪೇಲೋಡ್ ಅಥವಾ 71 ಸೈನಿಕರನ್ನು ಗರಿಷ್ಠ 260 ನಾಟ್ಸ್ (KTS) ವೇಗದಲ್ಲಿ ಸಾಗಿಸುವ ಸಾಮರ್ಥ್ಯ ಹೊಂದಿದೆ. ವಿಮಾನದ ಸ್ಥಿರ ರೆಕ್ಕೆಗಳ ಸಹಾಯದಿಂದ ಹೆಲಿಕಾಪ್ಟರ್‌ಗಳಿಗೆ ಗಾಳಿಯಲ್ಲಿ ಇಂಧನ ತುಂಬಬಹುದಾಗಿದೆ. ಇದು ಅತ್ಯುತ್ತಮ ಇಂಜಿನ್‌ಗಳನ್ನು ಹೊಂದಿದ್ದು, 13 ಗಂಟೆ ನಿರಂತರ ಹಾರಾಟ ನಡೆಸುವ ಸಾಮರ್ಥ್ಯ ಹೊಂದಿದೆ. ಇದನ್ನೂ ಓದಿ: ಇನ್ಮುಂದೆ ಚುನಾವಣಾ ಸಿಬ್ಬಂದಿಗೆ ಬೂತಲ್ಲೇ ಅಂಚೆ ಮತದಾನ ಕಡ್ಡಾಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೇನೆ ಸೇರಿದ ಭಾರತದ ಮೊದಲ ಲಘು ಯುದ್ಧ ಹೆಲಿಕಾಪ್ಟರ್ – ಏನಿದರ ವಿಶೇಷತೆ?

    ಸೇನೆ ಸೇರಿದ ಭಾರತದ ಮೊದಲ ಲಘು ಯುದ್ಧ ಹೆಲಿಕಾಪ್ಟರ್ – ಏನಿದರ ವಿಶೇಷತೆ?

    ಜೈಪುರ: ಭಾರತದ ರಕ್ಷಣಾ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಸ್ವದೇಶಿ ನಿರ್ಮಿತ ಮೊದಲ ಲಘು ಯುದ್ಧ ಹೆಲಿಕಾಪ್ಟರ್ (Light Combat Helicopter) ಅನ್ನು ಇಂದು ವಾಯುಸೇನೆಗೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಮತ್ತು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ (IAF chief Air Chief Marshal VR Chaudhari) ಅವರ ಉಪಸ್ಥಿತಿಯಲ್ಲಿ ಜೋಧಪುರದಲ್ಲಿ (Jodhpur) ನಡೆದ ಕಾರ್ಯಕ್ರಮದಲ್ಲಿ ಪ್ರಚಂಡ್‌(Prachand) ಸೇನೆಗೆ ಸೇರ್ಪಡೆ ಮಾಡಿಕೊಳ್ಳಲಾಯಿತು.

    ಬೆಂಗಳೂರಿನಲ್ಲಿರುವ ಹೆಚ್‍ಎಎಲ್ ಈ ಲಘು ಯುದ್ಧ ಹೆಲಿಕಾಪ್ಟರ್ ನಿರ್ಮಿಸಿದ್ದು ಇದು ಭಾರತೀಯ ವಾಯು ಮತ್ತು ಭೂ ಸೇನೆಗೆ ಹೆಚ್ಚು ಬಲ ತಂದು ಕೊಡಲಿದೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ. ಇದನ್ನೂ ಓದಿ: 30 ವರ್ಷದ ಹಳೆ ದ್ವೇಷ – ವೃದ್ಧದಂಪತಿ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಮಾಜಿ ಸೈನಿಕ

    5.8 ಟನ್ ತೂಕದ ಅವಳಿ-ಎಂಜಿನ್ LCH ಶಕ್ತಿ ಅನ್ನು ಈ ಹೆಲಿಕಾಪ್ಟರ್ ಹೊಂದಿದ್ದು, ಇದನ್ನು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಫ್ರೆಂಚ್ ಎಂಜಿನ್ ತಯಾರಕ ಸಫ್ರಾನ್ ಸಹಯೋಗದೊಂದಿಗೆ ಅಭಿವೃದ್ಧಿಪಡಲಾಗಿದೆ. ಹೊಸ ತಂತ್ರಜ್ಞಾನದ ಅಗತ್ಯವಿರುವ ಚುರುಕುತನ ಇದರಲ್ಲಿದ್ದು, ಕುಶಲತೆ, ವಿಸ್ತೃತ ಶ್ರೇಣಿ, ಹೆಚ್ಚಿನ ಎತ್ತರದ ಕಾರ್ಯಕ್ಷಮತೆ ಮತ್ತು ಎಲ್ಲಾ ಹವಾಮಾನದಲ್ಲೂ ಯುದ್ಧ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಇದನ್ನೂ ಓದಿ: ವಿಮಾನಕ್ಕೆ ಬಾಂಬ್ ಬೆದರಿಕೆ- ಯುದ್ಧ ವಿಮಾನಗಳಿಂದ ಭದ್ರತೆ

    ಇದು ಅತ್ಯಂತ ಬಿಸಿ ವಾತಾವರಣದ ಮರುಭೂಮಿಯಲ್ಲಿ ಮತ್ತು ಸಿಯಾಚಿನ್‍ನಂತಹ ಅತಿ ತಣ್ಣನೆಯ ಪ್ರದೇಶದಲ್ಲಿ ಲ್ಯಾಂಡ್ ಮಾಡಬಹುದಾಗಿದ್ದು, ಸಮುದ್ರ ಮಟ್ಟದಿಂದ 5,000 ಮೀಟರ್ ಎತ್ತರ ಪ್ರದೇಶದಲ್ಲೂ ಸಮರ್ಥವಾಗಿ ಕಾರ್ಯ ನಿರ್ವಹಿಸಬಲ್ಲದು. ಶಸ್ತ್ರ ಸಜ್ಜಿತ ರಕ್ಷಣಾ ವ್ಯವಸ್ಥೆಗಳನ್ನು ಹೊಂದಿದ್ದು ಇದು ಸೇನೆಗೆ ಶಸ್ತ್ರಾಸ್ತ್ರಗಳನ್ನು ಪೂರೈಸಬಲ್ಲದು ಮತ್ತು ನಿಧಾನವಾಗಿ ಸಾಗುವ ಶತ್ರು ವಿಮಾನಗಳ ಮೇಲೆ ಪ್ರತಿದಾಳಿ ಮಾಡುವ ವಿಶಿಷ್ಟತೆಯನ್ನು ಹೊಂದಿದೆ.

    ಇದು ರಾತ್ರಿ ಹೊತ್ತಿನಲ್ಲೂ ಕಾರ್ಯಾಚರಣೆ ಮಾಡುವ ಶಕ್ತಿ ಹೊಂದಿದ್ದು, ಕಾಡು, ಮಳೆ, ಹಿಮಪಾತದಂತಹ ಪ್ರಕೃತಿ ವೈಪರೀತ್ಯಗಳ ನಡುವೆ ಕ್ಷಮತೆಯಿಂದ ಕೆಲಸ ಮಾಡಬಲ್ಲದು. ಇದು ಶತ್ರು ದೇಶಗಳ ರೇಡಾರ್ ಕಣ್ಣು ತಪ್ಪಿಸಿ ಕೆಲಸ ಮಾಡುವ ಸಾಮರ್ಥ್ಯ ಹೊಂದಿದೆ. ಈ ವಿಶಿಷ್ಟ ಹೆಲಿಕಾಪ್ಟರ್‌ಗೆ ಬೇಡಿಕೆ ಹೆಚ್ಚಿದ್ದು ಭಾರತೀಯ ವಾಯುಸೇನೆ 65 ಮತ್ತು ಭೂಸೇನೆ 95 ಹೆಲಿಕಾಪ್ಟರ್‌ಗಳಿಗೆ ಬೇಡಿಕೆ ಇಟ್ಟಿದೆ. ವರ್ಷಕ್ಕೆ 30 ಹೆಲಿಕಾಪ್ಟರ್ ನಿರ್ಮಿಸುವ ಸಾಮರ್ಥ್ಯವಿದ್ದು ಆರಂಭಿಕವಾಗಿ 15 ಹೆಲಿಕಾಪ್ಟರ್‌ಗಳನ್ನು ಸೇನೆಗೆ ಇಂದು ಹಸ್ತಾಂತರಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • 400 ಚಿನೂಕ್‌ ಹೆಲಿಕಾಪ್ಟರ್‌ಗಳ ಸೇವೆ ದಿಢೀರ್‌ ಬಂದ್‌ – ಅಮೆರಿಕದ ಶಾಕಿಂಗ್‌ ನಿರ್ಧಾರ, ಆತಂಕದಲ್ಲಿ ಭಾರತ

    400 ಚಿನೂಕ್‌ ಹೆಲಿಕಾಪ್ಟರ್‌ಗಳ ಸೇವೆ ದಿಢೀರ್‌ ಬಂದ್‌ – ಅಮೆರಿಕದ ಶಾಕಿಂಗ್‌ ನಿರ್ಧಾರ, ಆತಂಕದಲ್ಲಿ ಭಾರತ

    ನವದೆಹಲಿ: ಸೈನಿಕರ ರವಾನೆಯಲ್ಲಿ ಮಹತ್ವದ ಪಾತ್ರ ವಹಿಸುವ ಚಿನೂಕ್ ಹೆಲಿಕಾಪ್ಟರ್‌ಗಳ ಸೇವೆಯನ್ನು ಅಮೆರಿಕ ಸೇನೆ ದಿಢೀರ್ ಬಂದ್ ಮಾಡಿದೆ.

    ಬರೋಬ್ಬರಿ 400 ಚಿನೂಕ್ ಹೆಲಿಕಾಪ್ಟರ್‌ಗಳನ್ನು ಅಮೆರಿಕದ ಸೇನೆ ಹೊರಗಿಟ್ಟಿದೆ. ಎಂಜಿನ್‍ನಲ್ಲಿ ಕಂಡು ಬಂದಿರುವ ತಾಂತ್ರಿಕ ದೋಷದ ಕಾರಣ ಅಮೆರಿಕ ಸೇನೆಯ ಮೆಟಿರಿಯಲ್ ಕಮಾಂಡ್ ಈ ನಿರ್ಣಯ ತೆಗೆದುಕೊಂಡಿದೆ.

    ಈ ಬೆಳವಣಿಗೆ ಭಾರತೀಯ ವಾಯುಸೇನೆಯನ್ನು ಆತಂಕಕ್ಕೆ ತಳ್ಳಿದೆ. ಭಾರತ 15 ಚಿನೂಕ್ ಹೆಲಿಕಾಪ್ಟರ್‌ಗಳನ್ನು ಬಳಕೆ ಮಾಡುತ್ತಿರುವ ಕಾರಣ ವಿವರಣೆ ನೀಡುವಂತೆ ಕೋರಿ ಅಮೆರಿಕಗೆ ಪತ್ರ ಬರೆದಿದೆ. ಇದನ್ನೂ ಓದಿ: ನಿತೀಶ್‌ ಭೇಟಿ ಬೆನ್ನಲ್ಲೇ ಬಿಜೆಪಿ ಮುಕ್ತ ಭಾರತಕ್ಕೆ ಕರೆ ನೀಡಿದ ಕೆಸಿಆರ್‌

    ಈ ಬಗ್ಗೆ ಪ್ರತಿಕ್ರಿಯೆ ನೀಡಲು ಬೋಯಿಂಗ್ ಸಂಸ್ಥೆ ನಿರಾಕರಿಸಿದೆ. ಸಮಸ್ಯೆ ಇತ್ಯರ್ಥ ಮಾಡಲು ಅಮೆರಿಕ ಜೊತೆಗೂಡಿ ಕೆಲಸ ಮಾಡುತ್ತೇವೆ ಎಂದು ಚಿನೂಕ್‍ಗೆ ಎಂಜಿನ್ ಒದಗಿಸಿರುವ ಹನಿವೆಲ್ ಸಂಸ್ಥೆ ತಿಳಿಸಿದೆ. ಈ ಹಿಂದೆ ಹಲವು ಬಾರಿ ಚಿನೂಕ್ ಹೆಲಿಕಾಪ್ಟರ್‌ಗಳ ಎಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡು ಸಣ್ಣ ಸಣ್ಣ ಅವಘಡ ನಡೆದಿತ್ತು. ಆದರೆ ಈವರೆಗೂ ಯಾವುದೇ ಸಾವು ನೋವು ಸಂಭವಿಸಿರಲಿಲ್ಲ.

    2015ರ ಸೆಪ್ಟೆಂಬರ್‌ನಲ್ಲಿ ಭಾರತ 8,048 ಕೋಟಿ ರೂ. ಒಪ್ಪಂದ ಮಾಡಿಕೊಂಡಿತ್ತು. 2019-20 ರಲ್ಲಿ 15 ಚಿನೂಕ್‌ ಹೆಲಿಕಾಪ್ಟರ್‌ಗಳು ಸೇನೆಗೆ ಸೇರಿತ್ತು. ಚಿನೂಕ್‌ ಹೆಲಿಕಾಪ್ಟರ್‌ಗಳು ಕಳೆದ ಮೂರು ವರ್ಷಗಳಿಂದ ಲಡಾಖ್‌ ಎಲ್‌ಎಸಿ ಬಳಿ ಹಾರಾಡುತ್ತಿವೆ.

    Live Tv
    [brid partner=56869869 player=32851 video=960834 autoplay=true]

  • ಅತ್ಯಾಚಾರದ ಆರೋಪ- ವಾಯುಸೇನೆ ಅಧಿಕಾರಿ ಅರೆಸ್ಟ್

    ಅತ್ಯಾಚಾರದ ಆರೋಪ- ವಾಯುಸೇನೆ ಅಧಿಕಾರಿ ಅರೆಸ್ಟ್

    ಚೆನ್ನೈ: ಭಾರತೀಯ ವಾಯುಪಡೆ(ಐಎಎಫ್) ಅಧಿಕಾರಿಯನ್ನು ಅತ್ಯಾಚಾರದ ಆರೋಪದ ಮೇಲೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ಅರೆಸ್ಟ್ ಮಾಡಲಾಗಿದೆ.

    ಫ್ಲೈಟ್ ಲೆಫ್ಟಿನೆಂಟ್ ಅಮಿತೇಶ್(29) ಅವರನ್ನು ಕೊಯಂಬತ್ತೂರಿನ ರೇಸ್ ಕೋರ್ಸ್‍ನ ಸಹೋದ್ಯೋಗಿಯ ಆರೋಪದ ಮೇಲೆ ಐಎಎಫ್ ಕ್ಯಾಂಪಸ್ ನಲ್ಲಿ ನಿನ್ನೆ ಬಂಧಿಸಲಾಗಿದೆ. ಅಮಿತೇಶ್ ಅವರು ಇಲ್ಲಿ ತರಬೇತಿ ಪಡೆಯುತ್ತಿದ್ದರು. ಇದನ್ನೂ ಓದಿ: ಹೆತ್ತ ಮಗಳನ್ನೇ ಕೊಂದ ತಂದೆ, ತಾಯಿ, ದೊಡ್ಡಪ್ಪ – ಮರ್ಯಾದಾ ಹತ್ಯಾ ಪ್ರಕರಣ ಬಯಲು

    ಈ ಕುರಿತು ಸಂತ್ರಸ್ತೆ ಮಾತನಾಡಿದ್ದು, ಸೆ.10ರಂದು ತರಬೇತಿ ಸಮಯದಲ್ಲಿ ನನಗೆ ಗಾಯವಾಯಿತು. ಅದಕ್ಕೆ ನಾನು ಔಷಧಿ ಸೇವಿಸಿ ಮಲಗಿಕೊಂಡೆ. ಆದರೆ ನಂತರ ಎಚ್ಚರವಾಗಿ ನೋಡಿದರೆ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿತ್ತು. ಯಾರು ಎಂದು ತಿಳಿದು ಅದನ್ನು ಐಎಎಫ್ ಅಧಿಕಾರಿಗಳಿಗೆ ದೂರು ನೀಡಿದೆ. ಆದರೂ ಸಹ ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಅದಕ್ಕೆ ಕೊಯಮತ್ತೂರಿನ ಮಹಿಳಾ ಪೆÇಲೀಸ್ ಠಾಣೆಯನ್ನು ಸಂಪರ್ಕಿಸಿ ಅವರಿಗೆ ದೂರು ನೀಡಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿಎಂ ಜಿಲ್ಲೆಯಲ್ಲಿ ಮರಳು ಸಾಗಾಣಿಕೆಗೆ ಮಕ್ಕಳ ಬಳಕೆ – ಕಣ್ಣುಮುಚ್ಚಿ ಕುಳಿತ ಪೊಲೀಸ್ ಇಲಾಖೆ

    ಈ ಹಿನ್ನೆಲೆ ಅಮಿತೇಶ್‍ನನ್ನು ಕೊಯಮತ್ತೂರಿನ ಪೊಲೀಸರು ಅರೆಸ್ಟ್ ಮಾಡಿದ್ದು ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಈಗ ಅಮಿತೇಶ್ ಅವರನ್ನು ಉಡುಮಲ್ ಪೇಟೆ ಜೈಲಿಗೆ ಕಳಹಿಸಲಾಗಿದೆ.

  • ವಾಯು ಸೇನೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ವಿ.ಆರ್ ಚೌಧರಿ ನೇಮಕ

    ವಾಯು ಸೇನೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ವಿ.ಆರ್ ಚೌಧರಿ ನೇಮಕ

    ನವದೆಹಲಿ: ಭಾರತೀಯ ವಾಯುಸೇನೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ವಿವೇಕ್ ರಾಮ್ ಚೌಧರಿ ಅವರು ನೇಮಕಗೊಂಡಿದ್ದಾರೆ.

    ಪ್ರಸ್ತುತ ಏರ್ ಚೀಫ್ ಮಾರ್ಷಲ್ ಆಗಿರುವ ಆರ್‌ಕೆಎಸ್ ಭದೌರಿಯಾ ಅವರು ಸೆಪ್ಟೆಂಬರ್ 30 ರಂದು ನಿವೃತ್ತರಾಗಲಿದ್ದಾರೆ. ಇವರ ನಿವೃತ್ತಿ ಬಳಿಕ ಭಾರತೀಯ ವಾಯುಸೇನೆಯ ಮುಖ್ಯಸ್ಥರಾಗಿ ವಿ.ಆರ್ ಚೌಧರಿ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ರಕ್ಷಣಾ ಸಚಿವಾಲಯ ಮಾಹಿತಿ ಹೊರಹಾಕಿದೆ. ಇದನ್ನೂ ಓದಿ: ಇಂದಿನಿಂದ ಪ್ರಧಾನಿ ಮೋದಿ ನಾಲ್ಕು ದಿನ ಅಮೆರಿಕ ಪ್ರವಾಸ

    ಏರ್ ಮಾರ್ಷಲ್ ಚೌಧರಿ ಪ್ರಸ್ತುತ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದು, ಸೆಪ್ಟೆಂಬರ್ 30 ರಂದು ಆರ್‌ಕೆಎಸ್ ಭದೌರಿಯಾ ಅವರು ನಿವೃತ್ತಿ ಬಳಿಕ ವಾಯುಪಡೆಯ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಹಿಂದೆ ಏರ್ ಮಾರ್ಷಲ್ ಚೌಧರಿ ಅವರು 1982ರ ಡಿಸೆಂಬರ್ 29ರಂದು ಭಾರತೀಯ ವಾಯುಪಡೆಯ ಫೈಟರ್ ಸ್ಟ್ರೀಮ್‍ಗೆ ನಿಯೋಜನೆಗೊಂಡಿದ್ದರು. ಅದಲ್ಲದೆ ಆಪರೇಷನ್ ಮೇಘದೂತ್, ಸಫೇದ್ ಸಾಗರ್ ಸೇರಿ ಹಲವು ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದರು.

    ಚೌಧರಿಯ 2021ರ ಜುಲೈ 1ರಂದು ಏರ್ ಮಾರ್ಷಲ್ ಎಚ್‍ಎಸ್ ಅರೋರಾ ನಿವೃತ್ತಿಯ ಬಳಿಕ ವಾಯಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಚೌಧರಿಯ ಈಗಾಗಲೇ ಫೈಟರ್ ಮತ್ತು ಟ್ರೈನರ್ ವಿಮಾನಗಳಲ್ಲಿ 3,800 ಗಂಟೆಗೂ ಹೆಚ್ಚು ಹಾರಾಟ ಮಾಡಿದ ಅನುಭವವನ್ನು ಹೊಂದಿದ್ದಾರೆ. ಇದನ್ನೂ ಓದಿ: ಬೆಂಕಿ ಹೊತ್ತಿಕೊಂಡಿದ್ದು ಸಿಲಿಂಡರಿನಿಂದಲ್ಲ- ಯುಪಿಎಸ್, ಮೊಬೈಲ್ ಚಾರ್ಜರ್ ಬಗ್ಗೆ ಶಂಕೆ

  • ಜಮ್ಮು ವಾಯು ನೆಲೆ ಮೇಲೆ ಡ್ರೋನ್ ದಾಳಿ – 2 ಸ್ಫೋಟ, ಇಬ್ಬರಿಗೆ ಗಾಯ

    ಜಮ್ಮು ವಾಯು ನೆಲೆ ಮೇಲೆ ಡ್ರೋನ್ ದಾಳಿ – 2 ಸ್ಫೋಟ, ಇಬ್ಬರಿಗೆ ಗಾಯ

    ಜಮ್ಮು:  ಭಾರತದ ಸೇನೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಡ್ರೋನ್ ದಾಳಿ ನಡೆದಿದೆ.   ಭಾನುವಾರ ನಸುಕಿನ ವೇಳೆಯಲ್ಲಿ ಜಮ್ಮು ವಾಯು ನೆಲೆಯ ಮೇಲೆ ಎರಡು ಡ್ರೋನ್ ಮೂಲಕ ಸ್ಫೋಟಕವನ್ನು ಸ್ಫೋಟಿಸಲಾಗಿದೆ.

    ಟೆಕ್ನಿಕಲ್ ಪ್ರದೇಶದಲ್ಲಿರುವ ಕಟ್ಟಡದ ಮೇಲ್ಭಾಗದಲ್ಲಿ ಬೆಳಗ್ಗೆ 1:45ಕ್ಕೆ ಮೊದಲ ಸ್ಫೋಟ ಸಂಭವಿಸಿದೆ. ಈ ಸ್ಫೋಟ ಸಂಭವಿಸಿದ 5 ನಿಮಿಷದಲ್ಲಿ ತೆರೆದ ಪ್ರದೇಶದಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಮೇಲ್ಭಾಗ ಒಡೆದು ಹೋಗಿದೆ.

    ಈ ಸ್ಫೋಟದಲ್ಲಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ವರದಿಯಾಗಿದೆ. ವಿಮಾನ ನಿಲ್ದಾಣದ ಮೇಲೆ ಡ್ರೋನ್ ಮೂಲಕ ಸುಧಾರಿತ ಸ್ಫೋಟಕ ಸಾಧನ(ಐಇಡಿ) ಬಳಸಿ ಸ್ಫೋಟ ನಡೆಸಿರಬಹುದು ಎಂದು ಶಂಕಿಸಲಾಗಿದೆ.

    ರಾಷ್ಟ್ರೀಯ ಬಾಂಬ್ ದತ್ತಾಂಶ ಕೇಂದ್ರದ ತಜ್ಞರು ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.  ಇದನ್ನೂ ಓದಿ: ವಿಶ್ವದ ಅತಿ ದೊಡ್ಡ ತೈಲ ಉತ್ಪಾದನಾ ಕಂಪನಿಯ ಮೇಲೆ ಡ್ರೋನ್ ದಾಳಿ – ಹೊತ್ತಿ ಉರಿದ ಘಟಕಗಳು

    ಜಮ್ಮು ವಿಮಾನ ನಿಲ್ದಾಣಕ್ಕೆ ಸತ್ವಾರಿ ವಿಮಾನ ನಿಲ್ದಾಣ ಎಂದು ಕರೆಯಲಾಗುತ್ತದೆ. ಇಲ್ಲಿ ನಾಗರಿಕ ವಿಮಾನಗಳು ಲ್ಯಾಂಡ್ ಆದರೂ ಏರ್ ಟ್ರಾಫಿಕ್ ಕಟ್ರೋಲ್(ಎಟಿಸಿ) ಭಾರತೀಯ ವಾಯುಪಡೆಯ ನಿಯಂತ್ರಣದಲ್ಲಿದೆ.

    ಈ ವಿಮಾನ ನಿಲ್ದಾಣ ಜಮ್ಮು ತಾವಿ ರೈಲು ನಿಲ್ದಾಣದಿಂದ 6 ಕಿ.ಮೀ, ಪಂಜಾಬ್‍ನ ಪಠಾಣ್‍ಕೋಟ್ ವಿಮಾನ ನಿಲ್ದಾಣದಿಂದ 110 ಕಿ.ಮೀ ಮತ್ತು ರಾಷ್ಟ್ರೀಯ ಹೆದ್ದಾರಿ 1 ರಿಂದ 1 ಕಿ.ಮೀ ದೂರದಲ್ಲಿದೆ.

    ಭಾರತದ ಗಡಿಯಲ್ಲಿ ಪಾಕಿಸ್ತಾನ ಕಡಿಮೆ ಬೆಲೆ ಚೀನಿ ಡ್ರೋನ್ ಮೂಲಕ ಶಸ್ತ್ರಾಸ್ತ್ರವನ್ನು ಮೇಲಿನಿಂದ ಕೆಳಗಡೆ ಉದುರಿಸುತ್ತಿದ್ದ ಪ್ರಕರಣಗಳು ವರದಿಯಾಗಿದ್ದವು. ಈ ವೇಳೆ ಹಲವು ಡ್ರೋನ್‍ಗಳನ್ನು ಹೊಡೆದು ಉರುಳಿಸುವ ಮೂಲಕ ಭಾರತದ ಸೇನಾಪಡೆಗಳು ಪಾಕಿಸ್ತಾನಕ್ಕೆ ತಿರುಗೇಟು ನೀಡಿದ್ದವು.