Tag: ವಾಯು ಮಾಲಿನ್ಯ

  • ದೀಪಾವಳಿ ಸಮಯದಲ್ಲಿ ಮಾಲಿನ್ಯ ಭೀತಿ – ದೆಹಲಿಯಲ್ಲಿ ಪಟಾಕಿ ಮಾರಾಟ ನಿಷೇಧ

    ದೀಪಾವಳಿ ಸಮಯದಲ್ಲಿ ಮಾಲಿನ್ಯ ಭೀತಿ – ದೆಹಲಿಯಲ್ಲಿ ಪಟಾಕಿ ಮಾರಾಟ ನಿಷೇಧ

    ನವದೆಹಲಿ: ದೀಪಾವಳಿ (Deepavali) ಸನಿಹವಾಗುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಮತ್ತೆ ವಾಯು ಮಾಲಿನ್ಯದ (Pollution) ಆತಂಕ ಶುರುವಾಗಿದೆ. ಈ ನಡುವೆ ಈ ಬಗ್ಗೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದ್ದು, ದೆಹಲಿ – ಎನ್‌ಸಿಆರ್‌ನಲ್ಲಿ ಎಲ್ಲಾ ರೀತಿಯ ಪಟಾಕಿಗಳ (Firecrackers) ಮಾರಾಟವನ್ನು ನಿಷೇಧಿಸಿದೆ.

    ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ಪೀಠವು, ಕೇಂದ್ರ ಸರ್ಕಾರವು ರಾಷ್ಟ್ರವ್ಯಾಪಿ ಪಟಾಕಿಗಳ ಮಾರಾಟ ಮತ್ತು ತಯಾರಿಕೆಯ ಮೇಲೆ ಸಂಪೂರ್ಣ ನಿಷೇಧ ಹೇರಲು ಸಾಧ್ಯವಿಲ್ಲ ಎಂದು ಹೇಳಿತು. ಇದನ್ನೂ ಓದಿ: Andhra Pradesh | ಕುದಿಯುತ್ತಿದ್ದ ಹಾಲಿನ ಪಾತ್ರೆಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು

    ಸುಪ್ರೀಂಕೋರ್ಟ್ (Supreme Court) ದೆಹಲಿಯಲ್ಲಿ ಪಟಾಕಿ ತಯಾರಕರಿಗೆ ಹಸಿರು ಪಟಾಕಿಗಳನ್ನು ತಯಾರಿಸಲು ಅನುಮತಿ ನೀಡಿತು. ಆದಾಗ್ಯೂ, ಮುಂದಿನ ಆದೇಶದವರೆಗೆ ಈ ಪಟಾಕಿಗಳನ್ನು ದೆಹಲಿ-ಎನ್‌ಸಿಆರ್‌ನಲ್ಲಿ ಮಾರಾಟ ಮಾಡಬಾರದು ಎಂದು ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ. ಹಸಿರು ಪಟಾಕಿ ಪ್ರಮಾಣಪತ್ರ ಹೊಂದಿರುವ ತಯಾರಕರು ಮಾತ್ರ ಪಟಾಕಿಗಳನ್ನು ತಯಾರಿಸಬೇಕು ಎಂಬ ಷರತ್ತನ್ನು ನ್ಯಾಯಾಲಯ ವಿಧಿಸಿದೆ. ಈ ಪ್ರಮಾಣಪತ್ರವನ್ನು NEERI ಮತ್ತು PESOನಂತಹ ಅಧಿಕೃತ ಏಜೆನ್ಸಿಗಳು ನೀಡಬೇಕು ಎಂದು ಹೇಳಿದೆ. ಇದನ್ನೂ ಓದಿ: ಲಡಾಖ್‌ ಹಿಂಸಾಚಾರಕ್ಕೆ ಪ್ರಚೋದನೆ – ಪರಿಸರ ಕಾರ್ಯಕರ್ತ ಸೋನಮ್‌ ವಾಂಗ್‌ಚುಕ್‌ ಅರೆಸ್ಟ್‌

    ದೆಹಲಿ-ಎನ್‌ಸಿಆರ್‌ನಲ್ಲಿ ಯಾವುದೇ ಪಟಾಕಿಗಳನ್ನು ಮಾರಾಟ ಮಾಡುವುದಿಲ್ಲ ಎಂದು ಪಟಾಕಿ ತಯಾರಕರು ಲಿಖಿತ ಭರವಸೆ ನೀಡಬೇಕಾಗುತ್ತದೆ. ದೀಪಾವಳಿಯ ಸಮಯದಲ್ಲಿ ಈ ಪ್ರದೇಶದಲ್ಲಿ ಮಾಲಿನ್ಯದ ಮಟ್ಟವು ಗಮನಾರ್ಹವಾಗಿ ಹೆಚ್ಚಾಗುವುದರಿಂದ ನ್ಯಾಯಲಯ ಈ ಷರತ್ತು ವಿಧಿಸಿದೆ. ಈ ವಿಷಯದ ಕುರಿತು ಮುಂದಿನ ವಿಚಾರಣೆಯಲ್ಲಿ, ಮಾರಾಟವನ್ನು ತಡೆಯಲು ಮುಂದಿನ ಹಂತದಲ್ಲಿ ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ಸುಪ್ರೀಂಕೋರ್ಟ್ ನಿರ್ಧರಿಸಲಿದೆ.  ಇದನ್ನೂ ಓದಿ: ಮಿಗ್ -21 ತ್ರಿವರ್ಣ ಧ್ವಜದ ಗೌರವ ಹೆಚ್ಚಿಸಿದೆ: ರಾಜನಾಥ್ ಸಿಂಗ್

  • ಇಡೀ ದೇಶದಲ್ಲೇ ಅತ್ಯಂತ ಶುದ್ಧ ಗಾಳಿ ಇರೋದು ಮಡಿಕೇರಿಯಲ್ಲಿ!

    ಇಡೀ ದೇಶದಲ್ಲೇ ಅತ್ಯಂತ ಶುದ್ಧ ಗಾಳಿ ಇರೋದು ಮಡಿಕೇರಿಯಲ್ಲಿ!

    ಮಡಿಕೇರಿ: ಭಾರತದ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ (Delhi Air Pollution) ಜನರ ಉಸಿರುಗಟ್ಟಿಸುತ್ತಿದೆ. ಈಗಾಗಲೇ ಅಪಾಯ ಮಟ್ಟ ಮೀರಿರುವ ದೆಹಲಿಯಲ್ಲಿ ದಿನದಿಂದ ದಿನಕ್ಕೆ ಗುಣಮಟ್ಟ ಕಳಪೆಯಾಗುತ್ತಲೇ ಇದೆ. ಆದರೆ ಇತ್ತ ಕರ್ನಾಟಕ ಕಾಶ್ಮೀರ ಕೊಡಗು ಜಿಲ್ಲೆ ದೇಶದಲ್ಲೇ ಅತ್ಯಂತ ಶುದ್ಧ ಗಾಳಿ ಹೊಂದಿರುವ ಸ್ಥಳಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಗಿಟ್ಟಿಸಿಕೊಂಡಿದೆ. ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ (Pollution control Board) ಮಾಹಿತಿ ಪ್ರಕಾರ ಮಂಜಿನ ನಗರಿ ಮಡಿಕೇರಿ ಪ್ರಥಮ ಸ್ಥಾನದಲ್ಲಿದೆ. ಈ ವರದಿ ಸ್ಥಳೀಯ ನಿವಾಸಿಗಳಿಗೆ ಖುಷಿ ಕೊಟ್ಟಿದೆ.

    ಹೌದು. ಈಗಾಗಲೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಷಪೂರಿತ ಗಾಳಿ ಸೇವನೆಯಿಂದ ಅಲ್ಲಿನ ನಿವಾಸಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಪ್ರಾಥಮಿಕ ಶಾಲಾ ಮಕ್ಕಳಿಗೆ ಆನ್‌ಲೈನ್‌ ತರಗತಿಗಳಿಗೆ (Online Class) ವರ್ಗಾಯಿಸಲಾಗಿದೆ. 3ನೇ ಹಂತದ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ. ಇತ್ತ ದೇಶದಲ್ಲೇ ಅತ್ಯಂತ ಶುದ್ಧ ಗಾಳಿ ಹೊಂದಿರುವ ಸ್ಥಳಗಳ ಪಟ್ಟಿಯಲ್ಲಿ ಮಂಜಿನ ನಗರಿ ಮಡಿಕೇರಿಗೆ ನಂ.1 ಸ್ಥಾನ ಸಿಕ್ಕಿದೆ. ಕೇಂದ್ರ ಪರಿಸರ ಮಾಲಿನ್ಯ ಮಂಡಳಿಯ ಮಾಹಿತಿ ಪ್ರಕಾರ ಮಂಜಿನ ನಗರಿ  ಮಡಿಕೇರಿ (Madikeri) ಪ್ರಥಮ ಸ್ಥಾನದಲ್ಲಿದೆ. ಈ ಪಟ್ಟಿಯಲ್ಲಿ ರಾಜ್ಯದ ಗದಗ ಜಿಲ್ಲೆ ಕೂಡ ಸ್ಥಾನ ಪಡೆದುಕೊಂಡಿದ್ದು, 8ನೇ ಸ್ಥಾನ ಪಡೆದುಕೊಂಡಿದೆ. ಇದನ್ನೂ ಓದಿ: ದೆಹಲಿ ಮಾಲಿನ್ಯಕ್ಕೆ ಕೇಂದ್ರ ಸರ್ಕಾರವೇ ಹೊಣೆ – ರಾಜಕೀಯ ಬಿಟ್ಟು ಕ್ರಮ ತೆಗೆದುಕೊಳ್ಳಲಿ: ಅತಿಶಿ

    ಕಳೆದ ವರ್ಷ ಇದೇ ಸಮಯದಲ್ಲಿ ಮಡಿಕೇರಿ 5ನೇ ಸ್ಥಾನದಲ್ಲಿತ್ತು. ಇದೀಗ ಕೊಡಗಿನ ಹಸಿರು ಪರಿಸರ, ಪರಿಶುದ್ಧ ಗಾಳಿ, ಝುಳು ಝುಳು ನೀರು ಪ್ರವಾಸಿಗರಿಗೆ ಅಚ್ಚುಮೆಚ್ಚಿನ ತಾಣವಾಗಿದೆ ಮಂಜಿನ ನಗರಿ ಮಡಿಕೇರಿ. ಅಲ್ಲದೇ ನಗರ ಪ್ರದೇಶ, ಪ್ರವಾಸಿತಾಣಗಳಲ್ಲಿ ದಿನಕಳೆದಂತೆ ಪರಿಸ್ಥಿತಿ ಬದಲಾಗುತ್ತಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ವಾಯು ಗುಣಮಟ್ಟ (AQI) ಸೂಚ್ಯಂಕ ಪ್ರಮಾಣ ಪ್ರಕಾರ ಕೊಡಗಿನಲ್ಲಿ ಗಾಳಿಯ ಗುಣಮಟ್ಟ ವರ್ಷದ ಬಹುತೇಕ ದಿನಗಳಲ್ಲಿ ಉತ್ತಮ ಎಂದೇ ದಾಖಲಾಗುತ್ತಿದೆ. ಇದೀಗ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾಹಿತಿ ಪ್ರಕಾರ, ದೇಶದ 10 ಪರಿಶುದ್ಧ ಗಾಳಿ ಇರುವ ಪ್ರದೇಶದಲ್ಲಿ ಮಡಿಕೇರಿ ಮೊದಲ ಸ್ಥಾನ ಪಡೆದುಕೊಂಡಿರುವುದು ಸ್ಥಳೀಯರಿಗೆ ಖುಷಿ ಕೊಟ್ಟಿದೆ.‌

    ಇನ್ನೂ ಶುದ್ಧಗಾಳಿ ಹೊಂದಿರುವ ದೇಶದ ಪ್ರಥಮ ಹತ್ತು ಸ್ಥಳಗಳಲ್ಲಿ ಮಡಿಕೇರಿ ಮೊದಲ ಸ್ಥಾನದಲ್ಲಿದ್ದರೆ, ನಂತರ ಸ್ಥಾನಗಳನ್ನು ಕ್ರಮವಾಗಿ ಪಾಲ್ಕಲೈಪೆರೂರ್, ಕರೂರು, ತಿರುನಲ್ವೇಲಿ, ತಿರುಪತಿ, ಊಟಿ, ವೆಲ್ಲೂರ್, ರಾಣಿಪೇಟ್, ಗದಗ, ತೂತುಕುಡಿ ಹಾಗೂ ಪುದುಚೆರಿ ಪಡೆದುಕೊಂಡಿವೆ. ಮಡಿಕೇರಿಯಲ್ಲಿ ಗಾಳಿಯ ಮಾಲಿನ್ಯದ ಪ್ರಮಾಣ ಎಕ್ಯೂಐ ಸೂಚ್ಯಂಕದ ಪ್ರಕಾರ 10 ಆಗಿದ್ದರೆ, ಪಾಲ್ಕಲೈಪೆರೂರ್ 17, ಕರೂರು 22, ತಿರುನಲ್ವೇಲಿ 23, ತಿರುಪತಿ 24, ಊಟಿ 26, ವೆಲ್ಲೂರ್ 26, ರಾಣಿಪೇಟ್ 26, ಗದಗ 32, ತೂತುಕುಡಿ 32 ಹಾಗೂ ಪುದುಚೆರಿಯಲ್ಲಿ 34 ಆಗಿದೆ. ಇದನ್ನೂ ಓದಿ: `ಏಕ್ ಹೈ ತೊ ಸೇಫ್ ಹೈ’ ಪ್ರಧಾನಿ ಘೋಷಣೆಗೆ ಟೀಕೆ – ಮೋದಿ, ಅದಾನಿ ಫೋಟೋ ತೋರಿಸಿ ರಾಗಾ ವ್ಯಂಗ್ಯ

    ಅತಿ ಹೆಚ್ಚು ವಾಯು ಮಾಲಿನ್ಯದಿಂದ ಸಮಸ್ಯೆ ಎದುರಿಸುತ್ತಿರುವ ದೆಹಲಿಯಲ್ಲಿ ಎಕ್ಯೂಐ ಸೂಚ್ಯಂಕ ಭಾನುವಾರ 457 ದಾಟಿದೆ. ಹೀಗಾಗಿ ಮಡಿಕೇರಿ ಶಾಸಕ ಮಂಥರ್ ಗೌಡ ಪಬ್ಲಿಕ್ ಟಿವಿಯೊಂದಿಗೆ ಮಾತಾನಾಡಿ, ಕೊಡಗು ಜಿಲ್ಲೆಯ ಪರಿಸರವನ್ನು ರಕ್ಷಣೆ ಮಾಡಿರುವುದರಿಂದ ಈ ಜಿಲ್ಲೆಗೆ ಅಗ್ರಸ್ಥಾನ ದೊರಕಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪರಿಸರ ಪೂರಕವಾದ ಯೋಜನೆಗಳನ್ನು ಹಮ್ಮಿಕೊಂಡು ಮುಂದಿನ‌ ಪೀಳಿಗೆಗೂ ಉತ್ತಮ ಗಾಳಿ ಸಿಕ್ಕುವಂತೆ ಮಾಡುವುದು ಎಲ್ಲರ ಕರ್ತವ್ಯ ಎಂದು ಹೇಳಿದ್ದಾರೆ.

    ಒಟ್ಟಿನಲ್ಲಿ ಮಂಜಿನ ನಗರಿ ಮಡಿಕೇರಿ ಭೂಲೋಕದ ಸ್ವರ್ಗ ಎಂಬುದು ಈ ಮೂಲಕ ಸಾಬೀತಾದಂತಿದೆ. ಉತ್ತಮ ಆರೋಗ್ಯಕ್ಕೆ ಶುದ್ಧಗಾಳಿ, ಶುದ್ಧ ನೀರು, ನಿರ್ಮಲ ವಾತಾವರಣ ಎಂಬುದನ್ನು ಚಿಕ್ಕ ಜಿಲ್ಲೆ ಕೊಡಗು ತನ್ನದಾಗಿಸಿಕೊಂಡಿರುವುದು ನಿಜಕ್ಕೂ ಸಂತಸದ ವಿಚಾರವೇ ಸರಿ. ಇದನ್ನೂ ಓದಿ: ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಣಕ್ಕೆ GRAP-III ಜಾರಿ – ನಿಯಮ ಉಲ್ಲಂಘಿಸಿದವರಿಂದ 5 ಕೋಟಿಗೂ ಅಧಿಕ ದಂಡ ವಸೂಲಿ

  • ಪಾಕಿಸ್ತಾನದ ಲಾಹೋರ್ ವಿಶ್ವದ ಅತ್ಯಂತ ಕಲುಷಿತ ನಗರ – 1,600ಕ್ಕೆ ತಲುಪಿದ AQI

    ಪಾಕಿಸ್ತಾನದ ಲಾಹೋರ್ ವಿಶ್ವದ ಅತ್ಯಂತ ಕಲುಷಿತ ನಗರ – 1,600ಕ್ಕೆ ತಲುಪಿದ AQI

    – ಸರ್ಕಾರದ ಯಾವ್ದೇ ಕ್ರಮಗಳೂ ಮಾಲಿನ್ಯ ಕಡಿಮೆ ಮಾಡಲಾಗುತ್ತಿಲ್ಲ
    – ಇನ್ನೂ ಮೂರು ತಿಂಗಳು ಮದುವೆ ಆಗುವಂತಿಲ್ಲ

    ಇಸ್ಲಾಮಾಬಾದ್‌: ಆರ್ಥಿಕ ಸಂಕಷ್ಟದಿಂದ ನಲುಗಿರುವ ಪಾಕ್‌ ಈಗ ವಾಯು ಮಾಲಿನ್ಯ (Pakistan Air Pollution) ಕಂಟಕಕ್ಕೆ ತುತ್ತಾಗಿದೆ. ಪಾಕಿಸ್ತಾನದ ಲಾಹೋರ್ ವಿಶ್ವದ ಅತ್ಯಂತ ಕಲುಷಿತ ನಗರವಾಗಿ ಮಾರ್ಪಟ್ಟಿದೆ. ಇಂದಿನ ವಾಯು ಗುಣಮಟ್ಟ ಸೂಚ್ಯಂಕ 1,600ಕ್ಕೆ ತಲುಪಿದೆ. ಎಲ್ಲೆಂದರಲ್ಲಿ ವಿಷಪೂರಿತ ಹೊಗೆಯಿಂದ ಜನರು ಉಸಿರಾಡುವುದಕ್ಕೂ ಕಷ್ಟಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಸ್ವಿಸ್ ಮಾನಿಟರ್ IQAir ಪ್ರಕಾರ, ಶುಕ್ರವಾರ ಬೆಳಿಗ್ಗೆ ಲಾಹೋರ್‌ (Lahore) ವಾಯು ಗುಣಮಟ್ಟ ಸೂಚ್ಯಂಕ 1,587 ನಷ್ಟಿತ್ತು.

    ಅಪಾಯಮಟ್ಟ ಮೀರಿದ ವಾಯು ಮಾಲಿನ್ಯದಿಂದ ಉಸಿರಾಟದ ತೊಂದರೆ, ಅಸ್ತಮಾ ರೋಗಗಳಿಗೆ ಜನ ತುತ್ತಾಗುತ್ತಿದ್ದು, ಈವರೆಗೆ 15,000ಕ್ಕೂ ಹೆಚ್ಚು ರೋಗಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಂದು ಕಾಲದಲ್ಲಿ ಹಸಿರು ಉದ್ಯಾನಗಳಿಗೆ ಹೆಸರುವಾಸಿಯಾಗಿದ್ದ ಲಾಹೋರ್‌ ಈಗ ವಿಶ್ವದ ಕಲುಷಿತ ನಗರ (Worldʼs Most Polluted City) ಎಂಬ ಹಣೆಪಟ್ಟಿ ಕಟ್ಟಿಕೊಂಡಿದೆ. ವಾಹನಗಳ ಹೊರಸೂಸುವಿಕೆ, ಕಟ್ಟಡ ನಿರ್ಮಾಣಗಳಿಂದ ಬರುವ ಧೂಳು ಹಾಗೂ ಕೈಗಾರಿಕಾ ಮಾಲಿನ್ಯ ಇದಕ್ಕೆ ಕಾರಣ ಎಂದು ವರದಿಗಳು ಉಲ್ಲೇಖಿಸಿವೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ವಾಯುಮಾಲಿನ್ಯ ಕಂಟಕ – ಜನರ ಓಡಾಟಕ್ಕೆ ನಿಷೇಧ, ಅಂಗಡಿ-ಮಾರ್ಕೆಟ್‌ ತೆರೆಯಲು ಮಿತಿ

    ಆರೋಗ್ಯ ತಜ್ಞರ ಎಚ್ಚರಿಕೆ ಏನು?
    ವಾಯು ಗುಣಮಟ್ಟ ಅಪಾಯಮಟ್ಟ ಮೀರಿದ ಹಿನ್ನೆಲೆ ಪಾಕ್‌ ಸರ್ಕಾರವು ಈ ವಾರದ ಅಂತ್ಯದವರೆಗೆ ಶಾಲೆಗಳು, ಉದ್ಯಾನವನ ಮತ್ತು ವಸ್ತುಸಂಗ್ರಹಾಲಯಗಳನ್ನು ಮುಚ್ಚಲು ಸ್ಥಳೀಯ ಸರ್ಕಾರಗಳಿಗೆ ಸೂಚನೆ ಕೊಟ್ಟಿದೆ. ಜೊತೆಗೆ ಮಾಸ್ಕ್‌ ಕಡ್ಡಾಯಗೊಳಿಸಿದ್ದು, ಕಚೇರಿ ಕೆಲಸದ ಸಮಯವನ್ನು ಕಡಿತಗೊಳಿಸಿದೆ. ಮೂರು ತಿಂಗಳು ಮದುವೆ ಕಾರ್ಯಕ್ರಮಗಳಿಗೆ ನಿಷೇಧ ಹೇರಿದೆ. ಆದಾಗ್ಯೂ ಸರ್ಕಾರದ ಯಾವುದೇ ಕ್ರಮಗಳೂ ಮಾಲಿನ್ಯ ಕಡಿಮೆ ಮಾಡಲು ಸಹಾಯಕವಾಗುತ್ತಿಲ್ಲ. ಹಾಗಾಗಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. ಇದನ್ನೂ ಓದಿ: ನ್ಯೂಜಿಲೆಂಡ್‌ ಸಂಸತ್‌ನಲ್ಲಿ ಹೈಡ್ರಾಮಾ – ಸಾಂಪ್ರದಾಯಿಕ ನೃತ್ಯ ಮಾಡಿ ವಿವಾದಿತ ಬಿಲ್‌ ಪ್ರತಿ ಹರಿದು ಹಾಕಿದ ಸಂಸದೆ

    ಸರ್ಕಾರ ಮಾಲಿನ್ಯದ ಮೂಲಗಳನ್ನು ಗುರುತಿಸಿ ನಿಯಂತ್ರಿಸುವ ಕೆಲಸವನ್ನು ತ್ವರಿತವಾಗಿ ಮಾಡಬೇಕು. ಜೊತೆಗೆ ಖಾಸಗಿ ವಾಹನಗಳ ಬಳಕೆಯನ್ನು ಕಡಿಮೆ ಮಾಡಬೇಕು. ಏರ್ ಪ್ಯೂರಿಫೈಯರ್‌ಗಳನ್ನು ಬಳಸುವಂತೆ ಸರ್ಕಾರ ಕಟ್ಟುನಿಟ್ಟಿನ ನಿಯಮಗಳನ್ನು ವಿಧಿಸಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ.

    ಹೆಚ್ಚಿದ ರೋಗಿಗಳ ಸಂಖ್ಯೆ:
    ವರದಿಗಳ ಪ್ರಕಾರ, ಲಾಹೋರ್‌ನ ಆಸ್ಪತ್ರೆಗಳು ಕೆಮ್ಮು, ಉಸಿರಾಟದ ತೊಂದರೆ, ನ್ಯುಮೋನಿಯಾ ಮತ್ತು ಎದೆಯ ಸೋಂಕಿನಿಂದ ಬಳಲುತ್ತಿರುವ ರೋಗಿಗಳಿಂದ ತುಂಬಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಮೇಯೊ ಆಸ್ಪತ್ರೆಯಲ್ಲಿ 4,000ಕ್ಕೂ ಹೆಚ್ಚು ರೋಗಿಗಳು, ಜಿನ್ನಾ ಆಸ್ಪತ್ರೆಯಲ್ಲಿ 3,500 ರೋಗಿಗಳು, ಗಂಗಾರಾಮ್ ಆಸ್ಪತ್ರೆಯಲ್ಲಿ 3,000 ರೋಗಿಗಳು ಮತ್ತು ಮಕ್ಕಳ ಆಸ್ಪತ್ರೆಯಲ್ಲಿ 2,000ಕ್ಕೂ ಹೆಚ್ಚು ರೋಗಿಗಳು ದಾಖಲಾಗಿದ್ದಾರೆ. ಅಸ್ತಮಾ ಮತ್ತು ಹೃದ್ರೋಗದಿಂದ ಬಳಲುತ್ತಿರುವ ಮಕ್ಕಳು ಮತ್ತು ರೋಗಿಗಳು ಮಾಲಿನ್ಯ ಪ್ರದೇಶದಿಂದ ದೂರ ಉಳಿಯುವಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ, ಪ್ರಾಣಾಪಾಯಕ್ಕೆ ತುತ್ತಾಗುವ ಸಾಧ್ಯತೆಯಿದೆ ಎಂದು ಪಾಕಿಸ್ತಾನದ ವೈದ್ಯಕೀಯ ತಜ್ಞ ಅಶ್ರಫ್ ಜಿಯಾ ಎಚ್ಚರಿಸಿದ್ದಾರೆ.

    ನವೆಂಬರ್ 10 ರಂದು ಪಾಕಿಸ್ತಾನದ ಪಂಜಾಬ್ ಪ್ರದೇಶದ ಕೆಲವು ಭಾಗಗಳಲ್ಲಿ ವಾಯು ಗುಣಮಟ್ಟದ ಸೂಚ್ಯಂಕವು 1,900 ಕ್ಕಿಂತ ಹೆಚ್ಚು ದಾಖಲಾಗಿತ್ತು. ಬಳಿಕ ಕೊಂಚ ಇಳಿಕೆಯಾಗಿದೆ ಎಂದು ವರದಿಗಳು ಉಲ್ಲೇಖಿಸಿವೆ. ಇದನ್ನೂ ಓದಿ: ಉಸಿರುಗಟ್ಟಿಸುತ್ತಿದೆ ದೆಹಲಿ – ಮಾಲಿನ್ಯ ನಿಯಂತ್ರಣಕ್ಕೆ ಶುಕ್ರವಾರದಿಂದ GRAP-III ನಿರ್ಬಂಧ ಜಾರಿ

  • ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಳ – ಪ್ರಾಥಮಿಕ ಶಾಲೆಗಳಲ್ಲಿ ಆನ್‌ಲೈನ್ ಕ್ಲಾಸ್

    ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಳ – ಪ್ರಾಥಮಿಕ ಶಾಲೆಗಳಲ್ಲಿ ಆನ್‌ಲೈನ್ ಕ್ಲಾಸ್

    ನವದೆಹಲಿ: ಚಳಿಗಾಲ ಆರಂಭವಾಗುತ್ತಿದ್ದಂತೆಯೇ ರಾಷ್ಟ್ರ ರಾಜಧಾನಿ ದೆಹಲಿ (Delhi) ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಮಂಜಿನ ಹೊದಿಕೆ, ಗ್ಯಾಸ್‌ ಚೇಂಬರ್‌ ಆಗಿ ಬದಲಾಗಿವೆ. ಉಸಿರಾಡಲು ಶುದ್ಧ ಗಾಳಿ, ಉತ್ತಮ ವಾತಾವರಣ ಇಲ್ಲದೇ ಜನಸಾಮಾನ್ಯರು ಪರದಾಡುವ ಪರಿಸ್ಥಿತಿ ಮತ್ತೆ ಮರುಕಳಿಸಿದೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಶಾಲೆಯಿಂದ ವಿನಾಯಿತಿ ನೀಡಲಾಗಿದೆ.

    ಈ ಕುರಿತು ದೆಹಲಿ ಸಿಎಂ ಅತಿಶಿ (Atishi) ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ವಾಯು ಮಾಲಿನ್ಯ ಮಿತಿಮೀರಿದ ಹಿನ್ನೆಲೆಯುಲ್ಲಿ ದೆಹಲಿಯ ಎಲ್ಲಾ ಪ್ರಾಥಮಿಕ ಶಾಲೆಗಳು ಮುಂದಿನ ಆದೇಶದ ವರೆಗೆ ಆನ್‌ಲೈನ್‌ ತರಗತಿಗಳಿಗೆ ಬಲಾಗುವಂತೆ ಆದೇಶಿಸಿದ್ದಾರೆ.

    ಗುರುವಾರ (ನ.14) ಬೆಳಿಗ್ಗೆ ದಟ್ಟನೆಯ ಮಂಜು ಆವರಿಸಿದ್ದನ್ನು ಕಂಡು ದಿಲ್ಲಿಗರು ಕಂಗಾಲಾಗಿದ್ದಾರೆ. ವಾಯು ಗುಣಮಟ್ಟ ಸೂಚ್ಯಂಕದಲ್ಲಿ (AIQ) ಮಟ್ಟ ಅಪಾಯಕಾರಿ ಹಂತದತ್ತ ತಲುಪುತ್ತಿದೆ. ಮುಂಜಾನೆ AQI 452ರ ಗಡಿ ದಾಟಿದೆ. ಇದರಿಂದ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Delhi Airport) ಗೋಚರತೆ ಕಡಿಮೆಯಾಗಿದ್ದು, 300 ಅಧಿಕ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಫ್ಲೈಟ್‌ರಾಡಾರ್ ತಿಳಿಸಿದೆ.

    ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಪ್ರಕಾರ, ರಾಜಧಾನಿ ಭಾಗದ ಹಲವು ಪ್ರದೇಶಗಳಲ್ಲಿ ಎಕ್ಯೂಐ ಪ್ರಮಾಣ 450 ದಾಟಿದೆ. ಆನಂದ ವಿಹಾರ್, ಅಶೋಕ್ ವಿಹಾರ್, ಬವಾನಾ, ದ್ವಾರಕಾ, ಜಹಾಂಗೀರ್‌ಪುರಿ, ಮುಂಡ್ಕ, ನಜಾಫ್‌ಗಡ, ಲಾಜ್‌ಪತ್ ನಗರ್, ಪತ್ಪರ್‌ಗಂಜ್, ಪಂಜಾಬಿ ಬಾಗ್, ಆರ್‌ಕೆ ಪುರಂ, ರೋಹಿಣಿ, ವಿವೇಕ್ ವಿಹಾರ್ ಮತ್ತು ವಾಜಿರ್‌ಪುರ ಪ್ರದೇಶಗಳನ್ನು ಎಕ್ಯೂಐ ಸರಾಸರಿ ‘ತೀವ್ರ’ ಸ್ವರೂಪದ ವರ್ಗದಲ್ಲಿ ಗುರುತಿಸಲಾಗಿದ್ದು, ಬೆಳಿಗ್ಗೆ 6 ಗಂಟೆ ಸುಮಾರಿಗೆ 450ಕ್ಕಿಂತ ಅಧಿಕವಿತ್ತು.

    ಹದಗೆಡುತ್ತಿರುವ ಗಾಳಿಯ ಗುಣಮಟ್ಟದ ಕುರಿತು ಮಾತನಾಡಿದ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರು ಅತಿಶಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು, ನಾವು ಕರ್ತವ್ಯ ಪಥದಲ್ಲಿ ನಿಂತಿದ್ದೇವೆ ಇಲ್ಲಿ AQI 474 ತಲುಪಿದೆ. ನಮಗೆ ಇಂಡಿಯಾ ಗೇಟ್ ಅನ್ನು ಸಹ ನೋಡಲಾಗುತ್ತಿಲ್ಲ, ಎಎಪಿ ಸರ್ಕಾರದ ಅಸಮರ್ಥತೆ ಇದಕ್ಕೆ ಕಾರಣ ಎಂದು ವಾಗ್ದಾಳಿ ನಡೆಸಿದರು.

  • ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ದೆಹಲಿಗೆ ಮೊದಲ ಸ್ಥಾನ

    ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ದೆಹಲಿಗೆ ಮೊದಲ ಸ್ಥಾನ

    – ಮುಂಬೈ, ಕೊಲ್ಕತ್ತಾದಲ್ಲೂ ಹೆಚ್ಚಿನ ಮಾಲಿನ್ಯ

    ನವದೆಹಲಿ: ವಿಶ್ವದ 121 ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಭಾರತದ ಮೂರು ನಗರಗಳು ಸ್ಥಾನ ಪಡೆದುಕೊಂಡಿದೆ. ರಾಷ್ಟ್ರ ರಾಜಧಾನಿ ದೆಹಲಿ (Delhi) ಮಾಲಿನ್ಯಕ್ಕೆ ಪ್ರಪಂಚದಲ್ಲೇ ಮೊದಲ ಸ್ಥಾನ ಪಡೆದುಕೊಂಡರೆ, ಮುಂಬೈ (Mumbai) ಮತ್ತು ಕೋಲ್ಕತ್ತಾ (Kolkata) ಅತಿ ಮಾಲಿನ್ಯಯುತ ನಗರಗಳ ಪಟ್ಟಿಯಲ್ಲಿವೆ.

    ಸ್ವಿಸ್ ಸಂಸ್ಥೆ IQAirನ ಲೈವ್ ಪಟ್ಟಿಯಲ್ಲಿ, ರಾಜಧಾನಿ ದೆಹಲಿಯು 515 ವಾಯು ಗುಣಮಟ್ಟ ಸೂಚ್ಯಂಕ (AQI) ಯೊಂದಿಗೆ ಇಡೀ ಪ್ರಪಂಚದಲ್ಲಿ ಅತ್ಯಂತ ಕಲುಷಿತ ನಗರವಾಗಿದೆ. ಪಾಕಿಸ್ತಾನದ ಲಾಹೋರ್ ಎಕ್ಯೂಐ 432ನೊಂದಿಗೆ ಎರಡನೇ ಸ್ಥಾನದಲ್ಲಿದೆ. ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯದ ಕಿನ್ಶಾಸಾ ನಗರ ಎಕ್ಯೂಐ 193ನೊಂದಿಗೆ ಕಲುಷಿತ ನಗರಗಳಲ್ಲಿ ಮೂರನೇ ಸ್ಥಾನದಲ್ಲಿದೆ. ಇದನ್ನೂ ಓದಿ: ಬಿಹಾರದ ಕಾರ್ಯಕ್ರಮದಲ್ಲಿ ಮೋದಿ ಪಾದಸ್ಪರ್ಶಕ್ಕೆ ನಿತೀಶ್ ಯತ್ನ – ವೀಡಿಯೋ ವೈರಲ್

    ಈಜಿಪ್ಟ್ನ ಕೈರೋ (AQI 184) ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ. ವಿಯೆಟ್ನಾಂನ ರಾಜಧಾನಿ ಹನೋಯಿ (AQI 168) ಐದನೇ ಸ್ಥಾನದಲ್ಲಿದೆ. ಕತಾರ್‌ನ ದೋಹಾ ನಗರವು (AQI 166) ಆರನೇ ಸ್ಥಾನದಲ್ಲಿದೆ. ಇದಲ್ಲದೆ ಸೌದಿ ಅರೇಬಿಯಾದ ರಿಯಾದ್ ಏಳನೇ ಸ್ಥಾನದಲ್ಲಿದೆ. ನೇಪಾಳದ ರಾಜಧಾನಿ ಕಠ್ಮಂಡು, ಮಂಗೋಲಿಯಾದ ಉಲಾನ್‌ಬಾತರ್, ಬಾಂಗ್ಲಾದೇಶದ ರಾಜಧಾನಿ ಢಾಕಾ ನಂತರದ ಸ್ಥಾನಗಳಲ್ಲಿದೆ. ಇದನ್ನೂ ಓದಿ: MUDA Scam | ಬ್ಲ್ಯಾಕ್‌ಮೇಲ್‌ ಆರೋಪ – ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ಐಆರ್‌

    ದೆಹಲಿಯಲ್ಲಿ ದೀಪಾವಳಿ ಹಬ್ಬದ ಮುನ್ನ ಮಾಲಿನ್ಯದ ಪ್ರಮಾಣ ತೀವ್ರವಾಗುತ್ತದೆ. ಪಟಾಕಿ, ವಾಹನಗಳ ಮಾಲಿನ್ಯ, ಕಟ್ಟಡ ತಾಜ್ಯದ ಧೂಳು ಹಾಗೂ ನೆರೆಯ ರಾಜ್ಯಗಳಲ್ಲಿ ಕೃಷಿ ರಾಜ್ಯ ಸುಡುವುದು ಮಾಲಿನ್ಯಕ್ಕೆ ಪ್ರಮುಖ ಕಾರಣವಾಗಿದೆ. ಇತ್ತಿಚಿಗೆ ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ವರ್ಷವಿಡೀ ಪಟಾಕಿ ನಿಷೇಧಿಸುವ ಬಗ್ಗೆ ನಿರ್ಧರಿಸಲು ಸೂಚಿಸಿದೆ. ಇದನ್ನೂ ಓದಿ: Chitradurga| ಮನೆ ಕಾಂಪೌಂಡ್ ಒಳಗೆ ನುಗ್ಗಿ ಮಹಿಳೆಯ ಕೊರಳಲ್ಲಿದ್ದ ಸರ ಕದ್ದು ಆರೋಪಿ ಪರಾರಿ

  • ಪಟಾಕಿ ಸಿಡಿಸುವುದು ಮೂಲಭೂತ ಹಕ್ಕು ಎನ್ನುವವರು ಕೋರ್ಟ್‌ಗೆ ಬರಲಿ – ಶಾಶ್ವತ ಪಟಾಕಿ ನಿಷೇಧದ ಬಗ್ಗೆ ಪ್ರಸ್ತಾಪಿಸಿದ ಸುಪ್ರೀಂ

    ಪಟಾಕಿ ಸಿಡಿಸುವುದು ಮೂಲಭೂತ ಹಕ್ಕು ಎನ್ನುವವರು ಕೋರ್ಟ್‌ಗೆ ಬರಲಿ – ಶಾಶ್ವತ ಪಟಾಕಿ ನಿಷೇಧದ ಬಗ್ಗೆ ಪ್ರಸ್ತಾಪಿಸಿದ ಸುಪ್ರೀಂ

    – ಯಾವುದೇ ಧರ್ಮ ವಾಯುಮಾಲಿನ್ಯ ಉಂಟುಮಾಡುವ ಚಟುವಟಿಕೆ ಪ್ರೋತ್ಸಾಹಿಸಲ್ಲ ಎಂದ ಕೋರ್ಟ್‌

    ನವದೆಹಲಿ: ಯಾವುದೇ ಧರ್ಮವು ವಾಯುಮಾಲಿನ್ಯವನ್ನು ಉಂಟುಮಾಡುವ ಚಟುವಟಿಕೆಯನ್ನು ಪ್ರೋತ್ಸಾಹಿಸುವುದಿಲ್ಲ. ದೀಪಾವಳಿ ಹೆಸರಿನಲ್ಲಿ ಈ ಪ್ರಮಾಣದಲ್ಲಿ ಪಟಾಕಿಗಳನ್ನು (Fire Crackers) ಸುಟ್ಟರೆ, ಅದು ನಾಗರಿಕರ ಆರೋಗ್ಯದ ಮೂಲಭೂತ ಹಕ್ಕಿನ ಮೇಲೂ ಪರಿಣಾಮ ಬೀರುತ್ತದೆ ಎಂದು ಸುಪ್ರೀಂ ಕೋರ್ಟ್ (Supreme Court) ಅಸಮಾಧಾನ ವ್ಯಕ್ತಪಡಿಸಿದೆ.

    ದೆಹಲಿಯಲ್ಲಿನ ಮಾಲಿನ್ಯದ ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಅಭಯ್ ಎಸ್ ಓಕಾ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠ, ಹಬ್ಬದ ಸಮಯದಲ್ಲಿ ಪಟಾಕಿ ನಿಷೇಧವನ್ನು ಜಾರಿಗೊಳಿಸಲು ವಿಫಲವಾಗಿರುವ ದೆಹಲಿ ಸರ್ಕಾರ ಮತ್ತು ಪೊಲೀಸರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು. ಸೀಮಿತ ತಿಂಗಳಿಗೆ ಮಾತ್ರ ಪಟಾಕಿ ನಿಷೇಧ ಯಾಕೆ? ವರ್ಷವಿಡಿ ಮಾಡಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿತು. ಅಕ್ಟೋಬರ್ 14 ರಂದು ಜಾರಿಗೊಳಿಸಿದ ದೆಹಲಿ ಸರ್ಕಾರದ ಆದೇಶವನ್ನು ನ್ಯಾಯಾಲಯವು ಪರಿಶೀಲಿಸಿತು. ಇದು ಪಟಾಕಿಗಳ ತಯಾರಿಕೆ ಮತ್ತು ಮಾರಾಟವನ್ನು ನಿಷೇಧಿಸಿತು, ಆದರೆ ಚುನಾವಣೆಗಳು ಮತ್ತು ಮದುವೆಗಳಂತಹ ಕಾರ್ಯಕ್ರಮಗಳಿಗೆ ವಿನಾಯಿತಿಗಳನ್ನು ನೀಡಿದೆ. ನಿಮ್ಮ ಆದೇಶದಲ್ಲಿ ಚುನಾವಣೆ, ಮದುವೆ ಇತ್ಯಾದಿಗಳಿಗೆ ಪಟಾಕಿಗಳನ್ನು ಸುಡಬಹುದು ಎಂದು ಹೇಳಿದೆಯೇ? ನಿಮ್ಮ ಪ್ರಕಾರ ಮಾಲಿನ್ಯಕ್ಕೆ (Air Pollution) ಪಾಲುದಾರರು ಯಾರು? ಎಂದು ಕೋರ್ಟ್ ಕೇಳಿತು. ಇದನ್ನೂ ಓದಿ: Bengaluru| ಬೈಕ್ ಡಿಕ್ಕಿ ಹೊಡೆದು 8ರ ಬಾಲಕ ಸಾವು

    ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ, ಪ್ರಸ್ತುತ ಆದೇಶವು ಹಬ್ಬ ಹರಿದಿನಗಳಲ್ಲಿ ಮತ್ತು ದೆಹಲಿಯಲ್ಲಿ ವಾಯು ಮಾಲಿನ್ಯವನ್ನು ಉಲ್ಬಣಗೊಳಿಸುವ ತಿಂಗಳುಗಳಲ್ಲಿ ಮಾತ್ರ ವಾಯುಮಾಲಿನ್ಯದ ನಿಯಂತ್ರಣದ ಮೇಲೆ ಕೇಂದ್ರೀಕರಿಸಿದೆ ಎಂದು ವಿವರಿಸಿದರು. ಪೀಠವು ಇದನ್ನು ಒಪ್ಪಿಕೊಳ್ಳಲಿಲ್ಲ. ಶಾಶ್ವತ ನಿಷೇಧವನ್ನು ಪರಿಗಣಿಸಬೇಕು ಎಂದು ಸೂಚಿಸಿತು. ನಿಷೇಧ ಆದೇಶದ ಬಗ್ಗೆ ಸಂಬಂಧಪಟ್ಟ ಎಲ್ಲಾ ಮಧ್ಯಸ್ಥಗಾರರಿಗೆ ತಕ್ಷಣವೇ ತಿಳಿಸುವಂತೆ ಮತ್ತು ಪಟಾಕಿಗಳ ಮಾರಾಟ ಮತ್ತು ತಯಾರಿಕೆ ನಿಷೇಧವನ್ನು ಖಚಿತಪಡಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ದೆಹಲಿ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿತು. ಇದನ್ನೂ ಓದಿ: ನಿಮ್ಮ ಜೊತೆ ಯೋಗ್ಯನಾಗಿ ಕೆಲಸ ಮಾಡಲು ಇದೊಂದು ಬಾರಿ ಅವಕಾಶ ಮಾಡಿಕೊಡಿ: ನಿಖಿಲ್‌

    ನವೆಂಬರ್ 25ರ ಮೊದಲು ನಗರದಲ್ಲಿ ಪಟಾಕಿಗಳ ಮೇಲೆ ‘ಶಾಶ್ವತ ನಿಷೇಧ’ವನ್ನು ಪರಿಗಣಿಸುವಂತೆ ದೆಹಲಿ ಸರ್ಕಾರಕ್ಕೆ ಸೂಚಿಸಿದೆ. ಪಟಾಕಿ ನಿಷೇಧ ನಿರ್ದಿಷ್ಟ ಅವಧಿಗೆ ಸೀಮಿತವಾಗಿರದೆ ಒಂದು ವರ್ಷದ ಅವಧಿಯ ನಿಷೇಧದ ಅಗತ್ಯವಿದೆ ಎಂದು ನ್ಯಾಯಾಲಯ ಒತ್ತಿಹೇಳಿತು. ಯಾರಾದರೂ ಪಟಾಕಿ ಸಿಡಿಸುವುದು ಮೂಲಭೂತ ಹಕ್ಕು ಎಂದು ಪ್ರತಿಪಾದಿಸಲು ಬಯಸಿದರೆ, ಅವರು ನ್ಯಾಯಾಲಯಕ್ಕೆ ಬರಲಿ. ದೀಪಾವಳಿ ಮಾತ್ರವಲ್ಲದೆ ವರ್ಷಪೂರ್ತಿ ಪಟಾಕಿಗಳನ್ನು ನಿಷೇಧಿಸಬೇಕು ಎಂದು ನ್ಯಾಯಾಲಯ ಟೀಕಿಸಿದೆ. ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸಿದ ನಂತರ ದೆಹಲಿಯು ವಿಶ್ವದ ಅತ್ಯಂತ ಕಲುಷಿತ ನಗರ ಎಂಬ ಕುಖ್ಯಾತಿಗೆ ಪಾತ್ರವಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆಗೆ 5,000 ಕೋಟಿ ಅಕ್ರಮವಾಗಿ ಕಳಿಸಿದ್ದಾರೆ: ಮೋದಿ ಬಳಿಕ ಹೆಚ್‌ಡಿಡಿ ಬಾಂಬ್‌

  • ಭಾರತದಲ್ಲಿ ವಾಯು ಮಾಲಿನ್ಯದಿಂದ ವರ್ಷಕ್ಕೆ 33,000 ಸಾವು – ಬೆಂಗ್ಳೂರಿನ ಸ್ಥಿತಿ ಏನು? 

    ಭಾರತದಲ್ಲಿ ವಾಯು ಮಾಲಿನ್ಯದಿಂದ ವರ್ಷಕ್ಕೆ 33,000 ಸಾವು – ಬೆಂಗ್ಳೂರಿನ ಸ್ಥಿತಿ ಏನು? 

    ರಾಜ್ಯ ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ಭಾರತದ 10 ಪ್ರಮುಖ ಮಹಾನಗರಗಳಲ್ಲಿ ವರ್ಷಕ್ಕೆ ಸುಮಾರು 33,000 ಮಂದಿ ವಾಯು ಮಾಲಿನ್ಯದ (Air pollution) ಕಾರಣಕ್ಕೆ ಸಾವಿಗೀಡಾಗುತ್ತಿದ್ದಾರೆಂದು ಲ್ಯಾನ್ಸೆಟ್ ಪ್ಲಾನೆಟರಿ ಹೆಲ್ತ್ ಜರ್ನಲ್ ನಡೆಸಿದ ಅಧ್ಯಯನದಿಂದ ತಿಳಿದು ಬಂದಿದೆ. ಇದಕ್ಕೆ ರಾಜ್ಯ ರಾಜಧಾನಿ ಬೆಂಗಳೂರಿನ ಕೊಡುಗೆ ಸಹ ಇರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ.  

    ವಿಶ್ವ ಆರೋಗ್ಯ ಸಂಸ್ಥೆ (World Health Organisation- WHO) ಮಾರ್ಗಸೂಚಿಯಲ್ಲಿ ನಿಗದಿಪಡಿಸಿರುವ ಪ್ರತಿ ಕ್ಯುಬಿಕ್ ಮೀಟರ್‌ನಲ್ಲಿ 15 ಮೈಕ್ರೋಗ್ರಾಮ್ ಗಿಂತಲೂ ಉತ್ತಮವಾಗಿದೆ. ಆದರೆ ಭಾರತದ ನಗರಗಳಲ್ಲಿ ವಿಪರೀತ ವಾಯುಮಾಲಿನ್ಯ ಆಗುತ್ತಿದ್ದು ಇಲ್ಲಿನ ಜನರನ್ನು ವಾಯುಮಾಲಿನ್ಯದ ಅಪಾಯದಿಂದ ಪಾರು ಮಾಡಲು ಭಾರತ ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಯನ್ನು ಪಾಲಿಸಲೇ ಬೇಕಾದ ಅನಿವಾರ್ಯತೆ ಇದೆ ಎಂದು ವರದಿ ತಿಳಿಸಿದೆ.

    ಯಾವೆಲ್ಲಾ ನಗರಗಳಲ್ಲಿ ಅಧ್ಯಯನ ನಡೆಸಲಾಗಿದೆ?

    ಬೆಂಗಳೂರು, ಅಹಮದಾಬಾದ್, ಚೆನ್ನೈ, ದೆಹಲಿ, ಹೈದರಾಬಾದ್, ಕೋಲ್ಕತಾ, ಮುಂಬೈ ಪುಣೆ, ಶಿಮ್ಲಾ ಮತ್ತು ವಾರಾಣಸಿ ಮಹಾನಗರಗಳಲ್ಲಿ ಈ ಅಧ್ಯಯನ ನಡೆಸಲಾಗಿದೆ. ಇಷ್ಟೂ ನಗರಗಳಲ್ಲಿ ಪ್ರತಿವರ್ಷ 33 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಪ್ರತಿವರ್ಷವೂ ವಿಶ್ವ ಆರೋಗ್ಯ ಸಂಸ್ಥೆಯು ನಿಗದಿಪಡಿಸಿದ ವಾಯುಮಾಲಿನ್ಯ ಗುಣಮಟ್ಟದ ಮಾರ್ಗಸೂಚಿಗಿಂತಲೂ ಈ ಮಹಾನಗರಗಳು ಕೆಳಮಟ್ಟದಲ್ಲಿಯೇ ಮುಂದುವರಿದಿವೆ.

    ಭಾರತದ 10 ನಗರಗಳು ವಾಯುಮಾಲಿನ್ಯದಿಂದ ಭಾರೀ ಸಮಸ್ಯೆ ಎದುರಿಸುತ್ತಿವೆ. ರಾಷ್ಟ್ರರಾಜಧಾನಿ ದಿಲ್ಲಿಯಲ್ಲೇ ವಾಯುಮಾಲಿನ್ಯಕ್ಕೆ ಅತಿ ಹೆಚ್ಚು ಸಾವುನೋವುಗಳಾಗುತ್ತಿವೆ. ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಗಿಂತ ಇಲ್ಲಿನ ವಾಯುವಿನ ಗುಣಮಟ್ಟ ಅತ್ಯಂತ ಕೆಳಸ್ತರದಲ್ಲಿದ್ದು ವರ್ಷಕ್ಕೆ 11 ಸಾವಿರ ಮಂದಿ ಸಾವಿಗೀಡಾಗುತ್ತಿದ್ದಾರೆ. 2ನೇ ಸ್ಥಾನದಲ್ಲಿರುವುದು ದೇಶದ ವಾಣಿಜ್ಯ ನಗರಿಯಾಗಿರುವ ಮುಂಬೈನಲ್ಲಿ, ಇಲ್ಲಿ ವರ್ಷಕ್ಕೆ ಸುಮಾರು 5,100 ಮಂದಿ ವಾಯುಮಾಲಿನ್ಯ ಸಂಬಂಧಿ ಕಾಯಿಲೆಗಳಿಂದಾಗಿ ಕೊನೆಯುಸಿರೆಳೆಯುತ್ತಿದ್ದಾರೆ. ಕೋಲ್ಕತಾದಲ್ಲಿ 4,700 ಮಂದಿ, ಚೆನ್ನೈನಲ್ಲಿ 2900 ಮಂದಿ ಸಾವಿಗೀಡಾಗುತ್ತಿದ್ದಾರೆ. 5ನೇ ಸ್ಥಾನದಲ್ಲಿ ಉದ್ಯಾನ ನಗರಿ ಬೆಂಗಳೂರು ಇದೆ. ಇಲ್ಲಿ ವರ್ಷಕ್ಕೆ 2100 ಮಂದಿ ಸಾವಿಗೀಡಾಗುತ್ತಿದ್ದಾರೆ ಎಂದು ಲ್ಯಾನ್ಸೆಟ್ ಪ್ಲಾನೆಟರಿ ಹೆಲ್ತ್ ಜರ್ನಲ್ ಅಧ್ಯಯನ ವರದಿಯಲ್ಲಿ ಉಲ್ಲೇಖಿಸಲಾಗಿದೆ. 

    ಬೆಂಗಳೂರಲ್ಲಿ ಕಳೆದ 3 ತಿಂಗಳಿಂದ ನಿರಂತರ ಮಳೆ, ದೊಡ್ಡ ಕಾಮಗಾರಿ ನಡೆಯದೇ ಇರುವುದು, ಮೆಟ್ರೋ ಪ್ರಯಾಣಕ್ಕೆ ಆದ್ಯತೆ ನೀಡುತ್ತಿರುವುದರಿಂದ ವಾಯುಮಾಲಿನ್ಯ ಸಾಕಷ್ಟು ಕಡಿಮೆಯಾಗಿದೆ.

    ಬೆಂಗ್ಳೂರಲ್ಲಿ 50% ವಾಯುಮಾಲಿನ್ಯಕ್ಕೆ ವಾಹನಗಳೇ ಕಾರಣ. ಕಳೆದ 15 ವರ್ಷಗಳಿಂದೀಚೆಗೆ ವಾಹನಗಳ ಸಂಖ್ಯೆ ಹೆಚ್ಚಳದಿಂದ ಸಂಚಾರ ದಟ್ಟಣೆಯೂ ಅಧಿಕವಾಗಿದೆ. ಹಳೆಯ ವಾಹನಗಳಿಂದ ಹೆಚ್ಚು ತೊಂದರೆ ಉಂಟಾಗುತ್ತಿದೆ. ನಗರದಲ್ಲಿ ವಾಯುಮಾಲಿನ್ಯ ಕಡಿಮೆ ಮಾಡುವಲ್ಲಿ ಮೆಟ್ರೋ ದೊಡ್ಡ ಪಾತ್ರ ವಹಿಸಿದೆ. ಸದ್ಯ ನಮ್ಮ ಮೆಟ್ರೋ 74 ಕಿ.ಮೀ. ದೂರ ಸಂಚಾರ ನಡೆಸುತ್ತಿದ್ದು, ಪ್ರತಿ ದಿನ ಸರಾಸರಿ 8 ಲಕ್ಷ ಜನರು ಪ್ರಯಾಣ ಮಾಡುತ್ತಾರೆ. ಮೆಟ್ರೋ ಮಾರ್ಗದಲ್ಲಿ ವಾಹನ ಬಳಕೆ ಕೂಡ ಸಾಕಷ್ಟು ತಗ್ಗಿದ್ದು, ಮಾಲಿನ್ಯ ಪ್ರಮಾಣ ಕಡಿಮೆ ಇದೆ.

    ಗಾಳಿಯ ಗುಣಮಟ್ಟ ಎಷ್ಟಿದ್ದರೆ ಉತ್ತಮ?

    ಗಾಳಿಯ ಗುಣಮಟ್ಟ ಸೂಚ್ಯಂಕವು (ಎಕ್ಯುಐ) 0-50 ಇದ್ದರೆ ಉತ್ತಮ. 51-100 ಇದ್ದರೆ ಸಮಾಧಾನಕರ, 100-200 ಮಧ್ಯಮ, 201-300 ಕಳಪೆ, 301-400 ಇದ್ದರೆ ತುಂಬಾ ಕಳಪೆ ಹಾಗೂ ಎಕ್ಯುಐ ಪ್ರಮಾಣ 401-500 ಇದ್ದರೆ ತೀವ್ರ ಕಳಪೆ ಎಂದು ಪರಿಗಣಿಸಲಾಗುತ್ತದೆ.

    ವಾಯುಮಾಲಿನ್ಯದಿಂದ ಉಂಟಾಗುವ ಸಮಸ್ಯೆಗಳು

    ವಾಯುಮಾಲಿನ್ಯದಿಂದ ಆಸ್ತಮಾ, ಕ್ಯಾನ್ಸರ್, ಪಾರ್ಶ್ವವಾಯು ಮತ್ತು ಶ್ವಾಸಕೋಶದ ಕಾಯಿಲೆ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು. ಇದು ಮಕ್ಕಳಲ್ಲಿ ಕಲಿಕೆಯ ಬೆಳವಣಿಗೆಯನ್ನು ತಡೆಯುತ್ತದೆ, ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಮಧುಮೇಹದಂತಹ ಅಸ್ತಿತ್ವದಲ್ಲಿರುವ ಆರೋಗ್ಯ ಸಮಸ್ಯೆಯನ್ನು ಇನ್ನಷ್ಟು ಹದಗೆಡಿಸುತ್ತದೆ.

    ಬೆಂಗಳೂರಿನ ಗಾಳಿ ಗುಣಮಟ್ಟ ದೆಹಲಿಯಡೆಗೆ? 

    ದೆಹಲಿಯಲ್ಲಿ ಮಾಲಿನ್ಯದ ಪ್ರಮಾಣ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಮುಂದಿನ ಆರು ದಿನಗಳಲ್ಲಿ ಈ ಪ್ರಮಾಣ ಇನ್ನೂ ಏರುವ ನಿರೀಕ್ಷೆ ಇದೆ. ಇದರಿಂದಾಗಿ ಮಕ್ಕಳು ಮತ್ತು ವೃದ್ಧರು ತೀವ್ರ ಸಮಸ್ಯೆ ಎದುರಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ದೆಹಲಿಯ ಆನಂದ್ ವಿಹಾರ್ ಸುತ್ತಮುತ್ತಲಿನ ವಾಯು ಗುಣಮಟ್ಟ ಸೂಚ್ಯಂಕವು (Air Quality Index) 405 ರಷ್ಟಿದ್ದು, ಅಪಾಯದ ಮಟ್ಟ ದಾಟಿದೆ. ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ (Central Pollution Control Board) ಇದನ್ನು ಗಂಭೀರ ವರ್ಗದಲ್ಲಿ ಇರಿಸಿದೆ. ಇದೇ ಸಮಯದಲ್ಲಿ, CPCB ಪ್ರಕಾರ, ಅಕ್ಷರಧಾಮ ದೇವಾಲಯದ ಸುತ್ತಮುತ್ತ AQI 361 ನಲ್ಲಿ ದಾಖಲಾಗಿದೆ. ಬವಾನಾದಲ್ಲಿ AQI 392, ರೋಹಿಣಿ 380, ITO 357, ದ್ವಾರಕಾ ಸೆಕ್ಟರ್-8 335 ಹಾಗೂ ಮುಂಡ್ಕಾದಲ್ಲಿ AQI 356 ದಾಖಲಾಗಿದೆ.

    ಇದೇ ಪರಿಸ್ಥಿತಿ ಮುಂದಿನ 10 ವರ್ಷಗಳಲ್ಲಿ ಬೆಂಗಳೂರಿಗೂ ಸಹ ಎದುರಾಗಬಹುದು ಎಂಬ ಆತಂಕ ಇದೆ. ಕಳೆದ 15 ವರ್ಷಗಳಿಂದ ಏರಿಕೆಯಾದ ವಾಹನಗಳ ಸಂಖ್ಯೆ ಗಮನಿಸಿದರೆ, ಮುಂದಿನ 5-10 ವರ್ಷಗಳಲ್ಲಿ ಇನ್ನೂ ಹೆಚ್ಚಿನ ವಾಹನಗಳು ಬೆಂಗಳೂರಿನ ರಸ್ತೆಗಳಿಗೆ ಇಳಿಯಲಿವೆ. ಈಗಾಗಲೇ 50% ವಾಯುಮಾಲಿನ್ಯಕ್ಕೆ ವಾಹನಗಳೇ ಕಾರಣ ಎಂಬುದು ಗೊತ್ತಾಗಿದೆ. ಇನ್ನೂ ಮುಂದಿನ ದಿನಗಳಲ್ಲಿ ಇದು ಯಾವ ಮಟ್ಟ ತಲುಪುತ್ತದೆಯೋ ಎಂಬುದನ್ನು ಕಾದು ನೋಡಬೇಕಿದೆ.

  • ದೀಪಾವಳಿ, ಛತ್ ಪೂಜೆಗೂ ಮುನ್ನವೇ ದೆಹಲಿಯಲ್ಲಿ ಮಾಲಿನ್ಯ – ಯಮುನಾ ನದಿಯಲ್ಲಿ ದಪ್ಪ ನೊರೆ, ಆತಂಕದಲ್ಲಿ ಜನರು

    ದೀಪಾವಳಿ, ಛತ್ ಪೂಜೆಗೂ ಮುನ್ನವೇ ದೆಹಲಿಯಲ್ಲಿ ಮಾಲಿನ್ಯ – ಯಮುನಾ ನದಿಯಲ್ಲಿ ದಪ್ಪ ನೊರೆ, ಆತಂಕದಲ್ಲಿ ಜನರು

    – ವಿರೋಧ ಪಕ್ಷಗಳ ಟೀಕೆಗೆ ದೆಹಲಿ ಸರ್ಕಾರದಿಂದ ಸ್ಪಷ್ಟನೆ

    ನವದೆಹಲಿ: ಮಾನ್ಸೂನ್ ಅಂತ್ಯವಾದ ಬೆನ್ನಲ್ಲೇ ದೆಹಲಿಯಲ್ಲಿ ಮಾಲಿನ್ಯದ (Delhi Pollution) ಪ್ರಮಾಣ ಹೆಚ್ಚುತ್ತಿದ್ದು ವಾಯು ಮಾಲಿನ್ಯದ ಜೊತೆಗೆ ಜಲ ಮಾಲಿನ್ಯವೂ ಅಧಿಕವಾಗಿದೆ. ದೆಹಲಿಯಲ್ಲಿ ವಾಯು ಮಾಲಿನ್ಯ ಸೂಚ್ಯಂಕ AQI 300ರ ಗಡಿ ದಾಟಿದರೆ ಮತ್ತೊಂದು ಕಡೆ ಯಮುನಾ ನದಿಯಲ್ಲಿ (Yamuna River) ಭಾರಿ ಪ್ರಮಾಣದ ನೊರೆ (Foam) ಉತ್ಪತಿಯಾಗಿದೆ.

    ಛತ್ ಪೂಜೆಗೂ ಮುನ್ನವೇ ಓಖಲಾ ಬ್ಯಾರೇಜ್ ಬಳಿ ಯಮುನಾ ನದಿ ನೀರು ದುಸ್ತರವಾಗಿದೆ. ಯಮುನಾ ನದಿಯಲ್ಲಿ ಮಾಲಿನ್ಯದ ಪ್ರಮಾಣ ಹೆಚ್ಚಾದ ಕಾರಣ ವಿಷಪೂರಿತ ನೊರೆ ನದಿಯಲ್ಲಿ ತೇಲುತ್ತಿರುವುದು ಕಂಡುಬಂದಿದೆ. ಹಿಂದಿನ ವರ್ಷಗಳಿಗಿಂತ ಹೆಚ್ಚು ಪ್ರಮಾಣದ ಮಾಲಿನ್ಯ ಈ ಬಾರಿ ಕಂಡು ಬರುತ್ತಿದೆ. ಇದನ್ನೂ ಓದಿ: ಇಸ್ರೇಲ್‌ ಅಧ್ಯಕ್ಷ ನೆತನ್ಯಾಹು ನಿವಾಸದ ಮೇಲೆ ಹಿಜ್ಬುಲ್ಲಾ ಡ್ರೋನ್‌ ದಾಳಿ

    ಇನ್ನು ದೆಹಲಿಯ ನಗರದಲ್ಲಿ ದೀಪಾವಳಿಗೂ ಮುನ್ನ ಮಾಲಿನ್ಯ ಪ್ರಮಾಣದಲ್ಲಿ ಹೆಚ್ಚಳ ಕಂಡು ಬಂದಿದೆ. ದೆಹಲಿಯ ಪ್ರಮುಖ ಪ್ರದೇಶದಲ್ಲಿ AQI 300 ದಾಟಿದೆ. ಇಂಡಿಯಾ ಗೇಟ್ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಬೆಳಗ್ಗೆ ಉಸಿರುಗಟ್ಟುವ ವಾತಾವರಣ ನಿರ್ಮಿಸಿತ್ತು. ದೆಹಲಿ ಹೊರ ಭಾಗದಲ್ಲಿ ಗೌತಮ್ ಬುಧ್ ನಗರವು 11.4%, ಬುಲಂದ್‌ಶಹರ್ 7.8%, ಗಾಜಿಯಾಬಾದ್ 6.6% ಮತ್ತು ಫರಿದಾಬಾದ್ 4.8% ಮಾಲಿನ್ಯಕ್ಕೆ ಕೊಡುಗೆ ನೀಡಿವೆ. ಇದನ್ನೂ ಓದಿ: ಮುಡಾ ಫೈಲ್‌ಗಳನ್ನು ಸುಟ್ಟು ಹಾಕಿರುವ ಬೈರತಿ ಸುರೇಶ್‌ರನ್ನು ಕೂಡಲೇ ಬಂಧಿಸಿ – ಶೋಭಾ ಕರಂದ್ಲಾಜೆ

    ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಮಾತನಾಡಿ, ಆಪ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಯಮುನಾ ನದಿಯ ನೀರು ವಿಷಪೂರಿತವಾಗಿದೆ. ಅರವಿಂದ್ ಕೇಜ್ರಿವಾಲ್ ಅವರು 2025ರ ವೇಳೆಗೆ ಯಮುನಾ ನದಿಯನ್ನು ಸ್ವಚ್ಛಗೊಳಿಸುವುದಾಗಿ ಹೇಳಿದ್ದರು. ಈವರೆಗೂ ಏನು ಮಾಡಿದ್ದಾರೆ? ಎಂದು ಹರಿಹಾಯ್ದರು. ಇದನ್ನೂ ಓದಿ: ನಾಗಸಂಧ್ರ to ಮಾದಾವರ ಮೆಟ್ರೋ ಉದ್ಘಾಟನೆ ಸಿದ್ಧತೆಗೆ ಬಿಬಿಎಂಪಿಗೆ ಪತ್ರ

    ಜನರು ಯಮುನಾ ನದಿಯಲ್ಲಿ ಛತ್ ಪೂಜೆಯ ಹಬ್ಬವನ್ನು ಆಚರಿಸುತ್ತಾರೆ. ಅವರು ಯಾವ ರೋಗಗಳನ್ನು ಎದುರಿಸಬೇಕಾಗುತ್ತದೆ ಎಂದು ನೀವು ಊಹಿಸಬಲ್ಲಿರಾ? ಎಎಪಿ ನೇತೃತ್ವದ ದೆಹಲಿ ಸರ್ಕಾರವು ಯಮುನಾ ನದಿಯನ್ನು ಸ್ವಚ್ಛಗೊಳಿಸಲು ಪಡೆದ ಎಲ್ಲಾ ಹಣವನ್ನು ಜಾಹೀರಾತುಗಳಿಗಾಗಿ ಖರ್ಚು ಮಾಡಿತು. ಈ ಪರಿಸ್ಥಿತಿಗೆ ಉತ್ತರ ಪ್ರದೇಶ ಮತ್ತು ಹರಿಯಾಣವನ್ನು ದೂರುತ್ತಾರೆ. ದೆಹಲಿಯಲ್ಲಿ ವಿಷಪೂರಿತ ಗಾಳಿ ಮತ್ತು ನೀರಿಗೆ ವಿಷಕಾರಿ ರಾಜಕಾರಣವೇ ಕಾರಣ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮುಡಾ ಕೇಸ್‌ನಲ್ಲಿ ಆರೋಪಿಗಳ ಪಾಸ್‌ಪೋರ್ಟ್ ವಶಪಡಿಸಿಕೊಳ್ಳಿ: ಇ.ಡಿಗೆ ಅಶೋಕ್ ಮನವಿ

    ದೆಹಲಿಯಲ್ಲಿ ಹದಗೆಡುತ್ತಿರುವ ಗಾಳಿಯ ಗುಣಮಟ್ಟ ಕುರಿತು ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ ಮಾತನಾಡಿ, ಎಎಪಿ ನೇತೃತ್ವದ ದೆಹಲಿ ಸರ್ಕಾರ ದೆಹಲಿಯಲ್ಲಿ ಮಾಲಿನ್ಯವನ್ನು ನಿಯಂತ್ರಿಸಲು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ. ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಕಳಪೆಯಾಗಿದೆ. ದೆಹಲಿಯ ಜನರ ಆರೋಗ್ಯದ ಜೊತೆ ಆಟವಾಡುವುದು ಎಎಪಿ ಸರ್ಕಾರದ ಉದ್ದೇಶವಾಗಿದೆ. ಎಎಪಿ ಸರ್ಕಾರಕ್ಕೆ ದೆಹಲಿ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಉತ್ತರ ಕುಮಾರ ಇದ್ದಂತೆ: ಈಶ್ವರಪ್ಪ ಲೇವಡಿ

    ಇನ್ನು ವಿರೋಧ ಪಕ್ಷಗಳ ಟೀಕೆಗೆ ದೆಹಲಿ ಸರ್ಕಾರ ಸ್ಪಷ್ಟನೆ ನೀಡಿದೆ. ಅಕ್ಟೋಬರ್ 7 ರಿಂದ ಧೂಳಿನ ಮಾಲಿನ್ಯದ ವಿರುದ್ಧ ದೆಹಲಿ ಸರ್ಕಾರವು ಧೂಳು ವಿರೋಧಿ ಅಭಿಯಾನವನ್ನು ನಡೆಸುತ್ತಿದೆ. ಇದರ ಅಡಿಯಲ್ಲಿ ಇದುವರೆಗೆ 523 ತಂಡಗಳು 2764 ನಿರ್ಮಾಣ ಸ್ಥಳಗಳನ್ನು ಪರಿಶೀಲಿಸಿದೆ. 17.40 ಲಕ್ಷ ರೂಪಾಯಿ ದಂಡವನ್ನು ವಿಧಿಸಲಾಗಿದೆ. ಧೂಳು ವಿರೋಧಿ ಅಭಿಯಾನವನ್ನು ಗ್ರೀನ್ ವಾರ್ ರೂಮ್‌ನಿಂದ ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಧೂಳು ತಡೆಗೆ ಸಂಬಂಧಿಸಿದ 14 ನಿಯಮಗಳನ್ನು ಜಾರಿಗೊಳಿಸುವುದು ಅಗತ್ಯ. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪರಿಸರ ಸಚಿವ ಗೋಪಾಲ್ ರೈ ಕಚೇರಿ ಮಾಹಿತಿ ನೀಡಿದೆ. ಇದನ್ನೂ ಓದಿ: ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ನೂತನ ಅತಿಥಿಗಳ ಆಗಮನ

  • ದೆಹಲಿ ವಾಯು ಮಾಲಿನ್ಯ – ವಾಯು ಗುಣಮಟ್ಟ ನಿರ್ವಹಣಾ ಆಯೋಗಕ್ಕೆ ಸುಪ್ರೀಂ ಛೀಮಾರಿ

    ದೆಹಲಿ ವಾಯು ಮಾಲಿನ್ಯ – ವಾಯು ಗುಣಮಟ್ಟ ನಿರ್ವಹಣಾ ಆಯೋಗಕ್ಕೆ ಸುಪ್ರೀಂ ಛೀಮಾರಿ

    ನವದೆಹಲಿ: ಒಣಹುಲ್ಲು ಸುಡುವುದು ತಡೆಯಲು, ದೆಹಲಿಯಲ್ಲಿ (Delhi) ಮಾಲಿನ್ಯ ನಿಯಂತ್ರಣ (Air Pollution) ಸಲುವಾಗಿ ಈವರೆಗೂ ಒಂದೇ ಒಂದು ಕ್ರವವನ್ನು ವಾಯು ಗುಣಮಟ್ಟ ನಿರ್ವಹಣಾ ಆಯೋಗ (Air Quality Management Commission) ತೆಗೆದುಕೊಂಡಿಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ಛೀಮಾರಿ ಹಾಕಿದೆ.

    ಪ್ರಕಣದ ವಿಚಾರಣೆ ನಡೆಸಿದ ಅಭಯ್ ಎಸ್ ಓಕಾ ಮತ್ತು ಅಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠವು ರಾಷ್ಟ್ರ ರಾಜಧಾನಿ ಪ್ರದೇಶ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಲ್ಲು ಸುಡುವ ಘಟನೆಗಳ ವಿರುದ್ಧ ಸಿಎಕ್ಯೂಎಂ ಒಂದೇ ಒಂದು ಪ್ರಕರಣವನ್ನು ಸಹ ದಾಖಲಿಸಿಲ್ಲ ಎಂದು ಹೇಳಿತು. ಇದನ್ನೂ ಓದಿ: Delhi| ಕೋಟ್ಯಂತರ ಮೌಲ್ಯದ ಕೊಕೇನ್‌ ಪ್ರಕರಣದ ಹಿಂದೆ ಮಾಜಿ ಕಾಂಗ್ರೆಸ್‌ ನಾಯಕ

    ಹುಲ್ಲು ಸುಡುವ ವಿಚಾರವಾಗಿ ಸಿಎಕ್ಯೂಎಂ ಆಗಸ್ಟ್ 29ರಂದು ಸಭೆ ನಡೆಸಿದೆ. ಈ ಸಭೆಯಲ್ಲಿ 11 ಸದಸ್ಯರ ಪೈಕಿ ಐವರು ಮಾತ್ರ ಹಾಜರಿದ್ದರು. ಅವರು ಯಾವುದೇ ಸೂಚನೆಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಚರ್ಚೆ ಮಾಡಿಲ್ಲ. ಇದರ ಜೊತೆಗೆ ಪಂಜಾಬ್ ಮತ್ತು ಹರಿಯಾಣ ಸರ್ಕಾರಗಳಿಗೆ ಹುಲ್ಲು ಸುಡುವ ವಿರುದ್ಧ ಯಾವುದೇ ವಿಶೇಷ ಕ್ರಮ ಕೈಗೊಂಡಿಲ್ಲ ಮತ್ತು ಕಡಿಮೆ ದಂಡವನ್ನು ಸಂಗ್ರಹಿಸಲಾಗಿದೆ ಎಂದು ಹೇಳಿ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಇದನ್ನೂ ಓದಿ: ಮಲಗಿದ್ದವನ ಮೇಲೆ ಮೀನು ತುಂಬಿದ ವಾಹನ ಹರಿದು ಕಾರ್ಮಿಕ ಸಾವು

    ಈ ವಿಚಾರಕ್ಕೆ ಸಂಬಂಧಿಸಿದಂತೆ ಒಂದು ವಾರದೊಳಗೆ ಅಫಿಡವಿಟ್ ಸಲ್ಲಿಸುವಂತೆ ಕೇಂದ್ರ ಮತ್ತು ಸಿಎಕ್ಯೂಎಂಗೆ ನ್ಯಾಯಾಲಯ ಸೂಚಿಸಿದೆ. ಇದೀಗ ನ್ಯಾಯಾಲಯವು ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 16 ರಂದು ನಡೆಸಲಿದೆ. ಇದನ್ನೂ ಓದಿ: ವಿಜಯೇಂದ್ರ ವಿರುದ್ಧ ಯತ್ನಾಳ್ ಮಾತಾಡೋದು ನಿಲ್ಲಿಸಲಿ, ಇಲ್ಲವೇ ಹೈಕಮಾಂಡ್ ಕ್ರಮ ತೆಗೆದುಕೊಳ್ಳಲಿ: ಹರತಾಳು ಹಾಲಪ್ಪ

  • ರಸ್ತೆ ಧೂಳು, ಕಟ್ಟಡ ನಿರ್ಮಾಣದಿಂದ ಬೆಂಗಳೂರಲ್ಲಿ ಹೆಚ್ಚು ವಾಯು ಮಾಲಿನ್ಯ: ಬೋಸರಾಜು

    ರಸ್ತೆ ಧೂಳು, ಕಟ್ಟಡ ನಿರ್ಮಾಣದಿಂದ ಬೆಂಗಳೂರಲ್ಲಿ ಹೆಚ್ಚು ವಾಯು ಮಾಲಿನ್ಯ: ಬೋಸರಾಜು

    ಬೆಂಗಳೂರು: ರಸ್ತೆ ಧೂಳು, ಕಟ್ಟಡ ನಿರ್ಮಾಣದಿಂದ ಬೆಂಗಳೂರಿನಲ್ಲಿ (Bengaluru) ವಾಯು ಮಾಲಿನ್ಯ (Air Pollution) ಹೆಚ್ಚಾಗುತ್ತಿದೆ ಎಂದು ಸರ್ಕಾರ ಮಾಹಿತಿ ನೀಡಿದ್ದು, ಬೆಂಗಳೂರು ನಗರದಲ್ಲಿ ವಾಯು ಮಾಲಿನ್ಯ ವಿವಿಧ ಕಾರಣಗಳಿಂದ ಹೆಚ್ಚಾಗುತ್ತಿದೆ ಎಂದು ತಿಳಿಸಿದೆ ಎಂದು ಸಚಿವ ಬೋಸರಾಜು (NS Boseraju) ಹೇಳಿದ್ದಾರೆ.

    ಸದನದಲ್ಲಿ ಜೆಡಿಎಸ್‌ನ ಗೋವಿಂದರಾಜು ಪ್ರಶ್ನೆಗೆ ಈಶ್ವರ್ ಖಂಡ್ರೆ ಬದಲಾಗಿ ಸಚಿವ ಬೋಸರಾಜು ಉತ್ತರ ನೀಡಿದರು. ವಾಹನಗಳ ಸಂಚಾರ, ಹೊರಸೂಸುವಿಕೆ, ರಸ್ತೆ ಧೂಳಿನ ಮರು ತೇಲಾಡುವಿಕೆ, ಹೆಚ್ಚಾದ ಕಟ್ಟಡ ಕಾಮಗಾರಿಯಿಂದ ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಉಂಟಾಗಿದೆ. 2022-23ನೇ ಸಾಲಿನಲ್ಲಿ 7 ನಿರಂತರ ಪರಿವೇಷ್ಠಕ ವಾಯು ಮಾಪನ ಕೇಂದ್ರದ ವರದಿ ಪ್ರಕಾರ ಪಿಎಂ10 ಮತ್ತು ಪಿಎಂ2.5 ಗಳನ್ನ ಹೊರತುಪಡಿಸಿ ಉಳಿದ ಮಾನಕಗಳು ರಾಷ್ಟ್ರೀಯ ಮಿತಿಯನ್ನು ಮೀರಿರುವುದಿಲ್ಲ. ಬೆಂಗಳೂರು ನಗರದ ಸ್ಥಳಗಳಲ್ಲಿ ಗಂಧಕದ ಡೈಆಕ್ಸೈಡ್, ಸಾರಜನಕದ ಡೈಆಕ್ಸೈಡ್, ಅಮೋನಿಯಾ ಮೌಲ್ಯಗಳು ರಾಷ್ಟ್ರೀಯ ಮಿತಿಗಿಂತ ಮತ್ತು ಸಾಕಷ್ಟು ಕಡಿಮೆ ಇದೆ ಎಂದರು. ಇದನ್ನೂ ಓದಿ: NDA ಸೇರುತ್ತಾರಾ ನವನಿರ್ಮಾಣ ಸೇನೆಯ ರಾಜ್‌ ಠಾಕ್ರೆ?

    ಬೆಂಗಳೂರು ನಗರದ ವಾಯು ಮಾಲಿನ್ಯ ಮೂಲ ತಿಳಿಯಲು ಕರ್ನಾಟಕ ರಾಜ್ಯ ವಾಯುಮಾಲಿನ್ಯ ನಿಯಂತ್ರಣ ಮಂಡಳಿಯು ಸೆಂಟರ್ ಫಾರ್ ಸ್ಟಡಿ ಫಾರ್ ಸೈನ್ಸ್, ಟೆಕ್ನಾಲಜಿ ಮತ್ತು ಪಾಲಿಸಿ (ಸಿಎಸ್‌ಟಿಇಪಿ) ಬೆಂಗಳೂರು ಇವರಿಂದ ಅಧ್ಯಯನ ಮಾಡಲಾಗಿದೆ. ಇದರಲ್ಲಿ ಪಿಎಂ10 ವಾಯು ಮಾಲಿನ್ಯ ಪ್ರಮಾಣ ರಸ್ತೆ ಧೂಳು- 51.1%, ಸಾರಿಗೆ- 18.6%, ಕಟ್ಟಡ ನಿರ್ಮಾಣ-6.0%, ತ್ಯಾಜ್ಯ ಸುಡುವುದು- 7.8%, ಸೆಕೆಂಡರಿ ಸಲ್ಫೇಟ್ -5.2%, ಸೆಕೆಂಡರಿ ನೈಟ್ರೇಟ್- 2.3%, ಡಿ.ಜಿ.ಸೆಟ್- 0.6%, ಇತರೆ- 8.2% ಇದೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದ ಎಲ್ಲಾ ವಿವಿಗಳಲ್ಲಿ ಏಕರೂಪದ ಅಂಕ ಮತ್ತು ಗ್ರೇಡಿಂಗ್ ವ್ಯವಸ್ಥೆ ಜಾರಿ: ಸುಧಾಕರ್

    ಇನ್ನು ಪಿಎಂ 2.5 ವಾಯು ಮಾಲಿನ್ಯದ ಪ್ರಮಾಣ, ರಸ್ತೆ ಧೂಳು- 25.3%, ಸಾರಿಗೆ- 39.9, ಕಟ್ಟಡ ನಿರ್ಮಾಣ-0.4, ತ್ಯಾಜ್ಯ ಸುಡುವುದು-10.3, ಸೆಕೆಂಡರಿ ಸಲ್ಫೇಟ್ -13.2, ಸೆಕೆಂಡರಿ ನೈಟ್ರೇಟ್- 0.3, ಡಿ.ಜಿ.ಸೆಟ್- 0.3%, ಇತರೆ- 7.6% ಇದೆ ಎಂದು ಸರ್ಕಾರ ಮಾಹಿತಿ ನೀಡಿದೆ ಎಂದು ಹೇಳಿದರು. ಇದನ್ನೂ ಓದಿ: ಪಬ್ಲಿಕ್‌ ಟಿವಿ ಇಂಪ್ಯಾಕ್ಟ್- ವಸತಿ ಶಾಲೆಯ ಘೋಷವಾಕ್ಯ ಯಥಾಸ್ಥಿತಿ